logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ಮಂಗಳೂರು ದಕ್ಷಿಣ ಕನ್ನಡ* Mng Bjp Mlc Byte ವಿವಾದಿತ ಜಿ ರಾಮ್ ಜಿ ಕಾಯ್ದೆ: ಬಹಿರಂಗ ಚರ್ಚೆಗೆ ರೆಡಿ ಎಂದ ಬಿಜೆಪಿ ಎಂಎಲ್‌ಸಿ ಜಿ ರಾಮ್ ಜಿ ಕಾಯ್ದೆ ಕುರಿತು ಬಹಿರಂಗ ಚರ್ಚೆಗೆ ಬಿಜೆಪಿ ಸಿದ್ದವಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದ್ದಾರೆ. ಅವರು ಮಂಗಳವಾರ ಮಂಗಳೂರಿನ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ‌ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮನ್‌ರೇಗಾದ ನ್ಯೂನತೆಗಳನ್ನು ಸರಿಪಡಿಸಿ ಹೊಸ ಕಾಯ್ದೆ ತರಲಾಗಿದೆ. ಜಿ ರಾಮ್ ಜಿ ಕಾಯ್ದೆಯಲ್ಲಿ ಗಾಂಧೀಜಿಯವರ ಪ್ರೀತಿಯ ರಾಮನ ಹೆಸರನ್ನು ತರಲಾಗಿದೆ ಎಂದರು. ಜಿ ರಾಮ್ ಜಿ ಕಾಯ್ದೆ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ನಡೆಸುವ ಮಾತನ್ನಾಡುತ್ತಿದ್ದಾರೆ. ಆದರೆ, ಕೇಂದ್ರದ ಕಾಯ್ದೆ ವಿರುದ್ಧ ರಾಜ್ಯ ವಿಧಾನಸಭೆಯಲ್ಲಿ ಚರ್ಚಿಸುವುದು ಅಸಂವಿಧಾನಿಕ. ಈ ನಿರ್ಧಾರ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವಂತಿದೆ ಎಂದರು. ಸಿಎಂ ಸಿದ್ದರಾಮಮಯ್ಯ ಅವರು ಸುಳ್ಳು ಹೇಳಿಕೆಗಳನ್ನೇ ನೀಡುತ್ತಿದ್ದಾರೆ. ಕಳೆದ ಬಜೆಟ್‌ನ ಶೇ.50ರಷ್ಟು ಅನುದಾನವೂ ಖರ್ಚಾಗಿಲ್ಲ. ಇನ್ನು ಎರಡು ತಿಂಗಳಲ್ಲಿ ಮತ್ತೆ ಬಜೆಟ್ ಬರಲಿದೆ. ಗಾಳಿ ಹೊರತುಪಡಿಸಿ ಬೇರೆ ಎಲ್ಲದಕ್ಕೂ ರಾಜ್ಯ ಸರಕಾರ ತೆರಿಗೆ ಹಾಕುತ್ತಿದೆ ಅಥವಾ ತೆರಿಗೆ ಹೆಚ್ಚಳ ಮಾಡಿದೆ. ಆದರೆ, ಅಭಿವೃದ್ಧಿ ಕುಂಠಿತವಾಗಿದೆ. ರಸ್ತೆ ಹೊಂಡವನ್ನೂ ಮುಚ್ಚುತ್ತಿಲ್ಲ ಎಂದು ದೂರಿದರು. ಪ್ರೆಸ್ ಮೀಟ್ ನಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಡಾ. ಮಂಜುಳಾ ರಾವ್, ಜಿಲ್ಲಾ ವಕ್ತಾರರಾದ ಸತೀಶ್ ಪ್ರಭು, ಅರುಣ್ ಶೇಟ್, ರಾಜಗೋಪಾಲ ರೈ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಹರೀಶ್ ಮೂಡುಶೆಡ್ಡೆ, ಮಾಧ್ಯಮ ಪ್ರಮುಖ್ ಮನೋಹರ ಶೆಟ್ಟಿ ಹಾಜರಿದ್ದರು. ವರದಿ: ಶಂಶೀರ್ ಬುಡೋಳಿ

1 hr ago
user_Shamsheer Budoli
Shamsheer Budoli
Journalist Mangaluru, Dakshina Kannada•
1 hr ago

*ಮಂಗಳೂರು ದಕ್ಷಿಣ ಕನ್ನಡ* Mng Bjp Mlc Byte ವಿವಾದಿತ ಜಿ ರಾಮ್ ಜಿ ಕಾಯ್ದೆ: ಬಹಿರಂಗ ಚರ್ಚೆಗೆ ರೆಡಿ ಎಂದ ಬಿಜೆಪಿ ಎಂಎಲ್‌ಸಿ ಜಿ ರಾಮ್ ಜಿ ಕಾಯ್ದೆ ಕುರಿತು ಬಹಿರಂಗ ಚರ್ಚೆಗೆ ಬಿಜೆಪಿ ಸಿದ್ದವಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದ್ದಾರೆ. ಅವರು ಮಂಗಳವಾರ ಮಂಗಳೂರಿನ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ‌ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮನ್‌ರೇಗಾದ ನ್ಯೂನತೆಗಳನ್ನು ಸರಿಪಡಿಸಿ ಹೊಸ ಕಾಯ್ದೆ ತರಲಾಗಿದೆ. ಜಿ ರಾಮ್ ಜಿ ಕಾಯ್ದೆಯಲ್ಲಿ ಗಾಂಧೀಜಿಯವರ ಪ್ರೀತಿಯ ರಾಮನ ಹೆಸರನ್ನು ತರಲಾಗಿದೆ ಎಂದರು. ಜಿ ರಾಮ್ ಜಿ ಕಾಯ್ದೆ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ನಡೆಸುವ ಮಾತನ್ನಾಡುತ್ತಿದ್ದಾರೆ. ಆದರೆ, ಕೇಂದ್ರದ ಕಾಯ್ದೆ ವಿರುದ್ಧ ರಾಜ್ಯ ವಿಧಾನಸಭೆಯಲ್ಲಿ ಚರ್ಚಿಸುವುದು ಅಸಂವಿಧಾನಿಕ. ಈ ನಿರ್ಧಾರ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವಂತಿದೆ ಎಂದರು. ಸಿಎಂ ಸಿದ್ದರಾಮಮಯ್ಯ ಅವರು ಸುಳ್ಳು ಹೇಳಿಕೆಗಳನ್ನೇ ನೀಡುತ್ತಿದ್ದಾರೆ. ಕಳೆದ ಬಜೆಟ್‌ನ ಶೇ.50ರಷ್ಟು ಅನುದಾನವೂ ಖರ್ಚಾಗಿಲ್ಲ. ಇನ್ನು ಎರಡು ತಿಂಗಳಲ್ಲಿ ಮತ್ತೆ ಬಜೆಟ್ ಬರಲಿದೆ. ಗಾಳಿ ಹೊರತುಪಡಿಸಿ ಬೇರೆ ಎಲ್ಲದಕ್ಕೂ ರಾಜ್ಯ ಸರಕಾರ ತೆರಿಗೆ ಹಾಕುತ್ತಿದೆ ಅಥವಾ ತೆರಿಗೆ ಹೆಚ್ಚಳ ಮಾಡಿದೆ. ಆದರೆ, ಅಭಿವೃದ್ಧಿ ಕುಂಠಿತವಾಗಿದೆ. ರಸ್ತೆ ಹೊಂಡವನ್ನೂ ಮುಚ್ಚುತ್ತಿಲ್ಲ ಎಂದು ದೂರಿದರು. ಪ್ರೆಸ್ ಮೀಟ್ ನಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಡಾ. ಮಂಜುಳಾ ರಾವ್, ಜಿಲ್ಲಾ ವಕ್ತಾರರಾದ ಸತೀಶ್ ಪ್ರಭು, ಅರುಣ್ ಶೇಟ್, ರಾಜಗೋಪಾಲ ರೈ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಹರೀಶ್ ಮೂಡುಶೆಡ್ಡೆ, ಮಾಧ್ಯಮ ಪ್ರಮುಖ್ ಮನೋಹರ ಶೆಟ್ಟಿ ಹಾಜರಿದ್ದರು. ವರದಿ: ಶಂಶೀರ್ ಬುಡೋಳಿ

More news from Dakshina Kannada and nearby areas
  • 'ನೀ ಬಾಂಗ್ಲಾದೇಶದವನಾ' ಎಂದು ಹೇಳಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕರಿಗೆ ಹಲ್ಲೆ: ಜೈ ಶ್ರೀರಾಮ್ ಹೇಳುವಂತೆ ಒತ್ತಾಯ ಕಡಲನಗರಿ ಮಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಭಾರತೀಯನನ್ನೇ ಬಾಂಗ್ಲಾದೇಶದವನು ಎಂದು ಹೇಳಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ತಂಡವೊಂದು ಹಲ್ಲೆ ಮಾಡಿದೆ. ಅಂದಹಾಗೇ ಈ ಘಟನೆ ಮಂಗಳೂರಿನ ಕಾವೂರು ಠಾಣೆ ವ್ಯಾಪ್ತಿಯ ಕೂಳೂರು ಚರ್ಚ್ ಬಳಿ ನಡೆದಿದ್ದು ಘಟನೆ ಸಂಬಂಧಿಸಿ ನಾಲ್ವರು ಯುವಕರ ಮೇಲೆ ಕಾವೂರು ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಕೂಳೂರು ನಿವಾಸಿಗಳಾದ ಸಾಗರ್, ಧನುಷ್, ಲಾಲು ಯಾನೆ ರತೀಶ್ ದಾಸ್ ಎಂಬುವವರನ್ನು ಬಂಧಿಸಲಾಗಿದೆ. ಜಾರ್ಖಂಡ್ ಮೂಲದ ದಿಲ್‌ಜಾನ್ ಅನ್ಸಾರಿ ಎಂಬಾತ ಕಳೆದ 10-15 ವರ್ಷಗಳಿಂದ ಮಂಗಳೂರಿನಲ್ಲಿ ಗಾರೆ ಕೆಲಸ ಮಾಡುತ್ತಿದ್ದು ತನ್ನ ಇನ್ನೊಬ್ಬ ಗೆಳೆಯನ ಜೊತೆಗೆ ಕುಳೂರಿನಲ್ಲಿ ನೆಲೆಸಿದ್ದ. ಈತನಿಗೆ ಸ್ಥಳೀಯರಾದ ನಾಲ್ವರು ಆರೋಪಿಗಳು ಕಳೆದ 5-6 ತಿಂಗಳಿನಿಂದ “ನೀನು ಬಾಂಗ್ಲಾದೇಶದ ಪ್ರಜೆ" ಎಂದು ಹೇಳಿ ಹಲ್ಲೆ ನಡೆಸುತ್ತಿದ್ದರು. ಅಲ್ಲದೆ ಜೈ ಶ್ರೀರಾಮ್ ಕೂಗುವಂತೆ ಈ ನಾಲ್ವರು ಒತ್ತಾಯಿಸಿದರು ಎಂದು ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಾನೆ. ತಾನು ಜಾರ್ಖಂಡ್ ಮೂಲದವನೆಂದು ತಿಳಿಸಿದರೂ ಆರೋಪಿಗಳು ಕೇಳದೆ, ದಾಖಲೆಗಳನ್ನು ಒದಗಿಸುವಂತೆ ಒತ್ತಡ ಹೇರುತ್ತ ದೌರ್ಜನ್ಯ ಎಸಗಿದ್ದಾರೆ ಎಂದು ದೂರಲಾಗಿದೆ. ನಿನ್ನೆ ಭಾನುವಾರ ಸಂಜೆ ಮತ್ತೆ ದಿಲ್‌ಜಾನ್ ಅನ್ಸಾರಿ ಮೇಲೆ ಹಲ್ಲೆ ನಡೆಸಿದ್ದು ತಲೆಗೆ ಪೆಟ್ಟು ಬಿದ್ದು ರಕ್ತ ಬಂದಿದೆ. ಈ ವೇಳೆ, ಸ್ಥಳೀಯ ಹಿಂದೂ ಮಹಿಳೆಯರು ರಕ್ಷಿಸಿ ಹೊಡೆಯದಂತೆ ತಡೆದಿದ್ದಾರೆ. ಇನ್ನು ಈ ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕಾವೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ . 03/2026 600: 126(2), 352, 351(3), 353, 109, 118(1) 3(5) ಭಾರತೀಯ ನ್ಯಾಯ ಸಂಹಿತೆ 2023 ರಂತೆ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಮಂಗಳೂರು ಉತ್ತರ ಉಪವಿಭಾಗದ ಎ.ಸಿ.ಪಿ. ಶ್ರೀಕಾಂತ್ ಕೆ. ರವರ ಮಾರ್ಗದರ್ಶನದಂತೆ ಕಾವೂರು ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ರಾಘವೇಂದ್ರ ಎಂ. ಬೈಂದೂರು ರವರು, ಪೊಲೀಸ್ ಉಪ-ನಿರೀಕ್ಷಕರಾದ ಮಲ್ಲಿಕಾರ್ಜುನ ಬಿರಾದಾರ ಹಾಗೂ ಕಾವೂರು ಠಾಣಾ ಸಿಬ್ಬಂದಿಗಳಾದ ಎ.ಎಸ್.ಐ ಚಂದ್ರಹಾಸ್ ಸನೀಲ್ ಹೆಚ್.ಸಿ ಬಾಲಕೃಷ್ಣ ಹಾಗೂ ಸಿಬ್ಬಂದಿಗಳಾದ ರಾಘವೇಂದ್ರ, ರಿಯಾಜ್, ನಾಗರಾಜ್, ಹನುಮಂತ ರವರುಗಳೊಂದಿಗೆ ಆರೋಪಿತರನ್ನು ಪತ್ತೆಮಾಡಿ ದಸ್ತಗಿರಿ ಮಾಡಲಾಗಿದೆ.
    4
    'ನೀ ಬಾಂಗ್ಲಾದೇಶದವನಾ' ಎಂದು ಹೇಳಿ
ಜಾರ್ಖಂಡ್ ಮೂಲದ ವಲಸೆ ಕಾರ್ಮಿಕರಿಗೆ ಹಲ್ಲೆ: ಜೈ ಶ್ರೀರಾಮ್ ಹೇಳುವಂತೆ ಒತ್ತಾಯ
ಕಡಲನಗರಿ ಮಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಭಾರತೀಯನನ್ನೇ ಬಾಂಗ್ಲಾದೇಶದವನು ಎಂದು ಹೇಳಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ತಂಡವೊಂದು ಹಲ್ಲೆ ಮಾಡಿದೆ. ಅಂದಹಾಗೇ ಈ ಘಟನೆ ಮಂಗಳೂರಿನ ಕಾವೂರು ಠಾಣೆ ವ್ಯಾಪ್ತಿಯ ಕೂಳೂರು ಚರ್ಚ್ ಬಳಿ ನಡೆದಿದ್ದು ಘಟನೆ ಸಂಬಂಧಿಸಿ ನಾಲ್ವರು ಯುವಕರ ಮೇಲೆ ಕಾವೂರು ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಕೂಳೂರು ನಿವಾಸಿಗಳಾದ ಸಾಗರ್, ಧನುಷ್, ಲಾಲು ಯಾನೆ ರತೀಶ್ ದಾಸ್ ಎಂಬುವವರನ್ನು ಬಂಧಿಸಲಾಗಿದೆ.
ಜಾರ್ಖಂಡ್ ಮೂಲದ ದಿಲ್‌ಜಾನ್ ಅನ್ಸಾರಿ ಎಂಬಾತ ಕಳೆದ 10-15 ವರ್ಷಗಳಿಂದ ಮಂಗಳೂರಿನಲ್ಲಿ ಗಾರೆ ಕೆಲಸ ಮಾಡುತ್ತಿದ್ದು ತನ್ನ ಇನ್ನೊಬ್ಬ ಗೆಳೆಯನ ಜೊತೆಗೆ ಕುಳೂರಿನಲ್ಲಿ ನೆಲೆಸಿದ್ದ. ಈತನಿಗೆ ಸ್ಥಳೀಯರಾದ ನಾಲ್ವರು ಆರೋಪಿಗಳು ಕಳೆದ 5-6 ತಿಂಗಳಿನಿಂದ “ನೀನು ಬಾಂಗ್ಲಾದೇಶದ ಪ್ರಜೆ" ಎಂದು ಹೇಳಿ ಹಲ್ಲೆ ನಡೆಸುತ್ತಿದ್ದರು. ಅಲ್ಲದೆ ಜೈ ಶ್ರೀರಾಮ್ ಕೂಗುವಂತೆ ಈ ನಾಲ್ವರು  ಒತ್ತಾಯಿಸಿದರು ಎಂದು  ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಾನೆ.
ತಾನು ಜಾರ್ಖಂಡ್ ಮೂಲದವನೆಂದು ತಿಳಿಸಿದರೂ ಆರೋಪಿಗಳು ಕೇಳದೆ, ದಾಖಲೆಗಳನ್ನು ಒದಗಿಸುವಂತೆ ಒತ್ತಡ ಹೇರುತ್ತ ದೌರ್ಜನ್ಯ ಎಸಗಿದ್ದಾರೆ ಎಂದು ದೂರಲಾಗಿದೆ. ನಿನ್ನೆ ಭಾನುವಾರ ಸಂಜೆ ಮತ್ತೆ ದಿಲ್‌ಜಾನ್ ಅನ್ಸಾರಿ ಮೇಲೆ ಹಲ್ಲೆ ನಡೆಸಿದ್ದು ತಲೆಗೆ ಪೆಟ್ಟು ಬಿದ್ದು ರಕ್ತ ಬಂದಿದೆ. ಈ ವೇಳೆ, ಸ್ಥಳೀಯ ಹಿಂದೂ ಮಹಿಳೆಯರು ರಕ್ಷಿಸಿ ಹೊಡೆಯದಂತೆ ತಡೆದಿದ್ದಾರೆ. ಇನ್ನು ಈ ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಕಾವೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ . 03/2026 600: 126(2), 352, 351(3), 353, 109, 118(1) 3(5) ಭಾರತೀಯ ನ್ಯಾಯ ಸಂಹಿತೆ 2023 ರಂತೆ ಪ್ರಕರಣ ದಾಖಲಾಗಿದೆ.
ಆರೋಪಿಗಳನ್ನು ಮಂಗಳೂರು ಉತ್ತರ ಉಪವಿಭಾಗದ ಎ.ಸಿ.ಪಿ. ಶ್ರೀಕಾಂತ್ ಕೆ. ರವರ ಮಾರ್ಗದರ್ಶನದಂತೆ ಕಾವೂರು ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ  ರಾಘವೇಂದ್ರ ಎಂ. ಬೈಂದೂರು ರವರು, ಪೊಲೀಸ್ ಉಪ-ನಿರೀಕ್ಷಕರಾದ ಮಲ್ಲಿಕಾರ್ಜುನ ಬಿರಾದಾರ ಹಾಗೂ ಕಾವೂರು ಠಾಣಾ ಸಿಬ್ಬಂದಿಗಳಾದ ಎ.ಎಸ್.ಐ ಚಂದ್ರಹಾಸ್ ಸನೀಲ್ ಹೆಚ್.ಸಿ ಬಾಲಕೃಷ್ಣ ಹಾಗೂ ಸಿಬ್ಬಂದಿಗಳಾದ ರಾಘವೇಂದ್ರ, ರಿಯಾಜ್, ನಾಗರಾಜ್, ಹನುಮಂತ ರವರುಗಳೊಂದಿಗೆ ಆರೋಪಿತರನ್ನು ಪತ್ತೆಮಾಡಿ ದಸ್ತಗಿರಿ ಮಾಡಲಾಗಿದೆ.
    user_Shamsheer Budoli
    Shamsheer Budoli
    Journalist Mangaluru, Dakshina Kannada•
    1 hr ago
  • ಸೊರಬ: ತಾಲೂಕಿನ ಆನವಟ್ಟಿ ತಿಮ್ಮಾಪುರದಲ್ಲಿ ನೂತನವಾಗಿ ನಿರ್ಮಾಣಗೊಂಡ ಅಯ್ಯಪ್ಪ ಸ್ವಾಮಿಯ ದೇವಸ್ಥಾನಕ್ಕೆ ಲೋಕಸಭಾ ಸದಸ್ಯ ಬಿ ವೈ ರಾಘವೇಂದ್ರ ಮತ್ತು ಎಂಎಲ್ಸಿ ಭಾರತೀಯ ಶೆಟ್ಟಿ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದರು. ಅಯ್ಯಪ್ಪ ಭಕ್ತಾದಿಗಳು ಇಬ್ಬರನ್ನು ಸನ್ಮಾನಿಸಿದರು. ದೇವಸ್ಥಾನಕ್ಕೆ ತಮ್ಮ ಸಹಾಯವನ್ನು ನೀಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಉಮೇಶ್ ಉಡುಗಣಿ, ಪ್ರಕಾಶ್ ತಲಕಾಲಕೊಪ್ಪ, ಕೃಷ್ಣಮೂರ್ತಿ, ಶಿವಪ್ರಸಾದ್ ಮತ್ತಿತರರು ಇದ್ದರು.
    4
    ಸೊರಬ: ತಾಲೂಕಿನ ಆನವಟ್ಟಿ ತಿಮ್ಮಾಪುರದಲ್ಲಿ ನೂತನವಾಗಿ ನಿರ್ಮಾಣಗೊಂಡ ಅಯ್ಯಪ್ಪ ಸ್ವಾಮಿಯ ದೇವಸ್ಥಾನಕ್ಕೆ ಲೋಕಸಭಾ ಸದಸ್ಯ ಬಿ ವೈ ರಾಘವೇಂದ್ರ ಮತ್ತು ಎಂಎಲ್ಸಿ ಭಾರತೀಯ ಶೆಟ್ಟಿ ಭೇಟಿ ನೀಡಿ  ಸ್ವಾಮಿಯ ದರ್ಶನ ಪಡೆದರು. ಅಯ್ಯಪ್ಪ ಭಕ್ತಾದಿಗಳು ಇಬ್ಬರನ್ನು ಸನ್ಮಾನಿಸಿದರು. ದೇವಸ್ಥಾನಕ್ಕೆ ತಮ್ಮ ಸಹಾಯವನ್ನು ನೀಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಉಮೇಶ್ ಉಡುಗಣಿ, ಪ್ರಕಾಶ್ ತಲಕಾಲಕೊಪ್ಪ, ಕೃಷ್ಣಮೂರ್ತಿ, ಶಿವಪ್ರಸಾದ್ ಮತ್ತಿತರರು ಇದ್ದರು.
    user_SANDEEP U. L
    SANDEEP U. L
    Courier service ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    2 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    1 hr ago
  • ಚಿತ್ರದುರ್ಗ ಹೊರವಲಯದ ನಗರಸಭೆ ವ್ಯಾಪ್ತಿಯ ಕವಾಡಿಗರಹಟ್ಟಿ ಬಡಾವಣೆಯಲ್ಲಿ ರಸ್ತೆ ಅಗಲೀಕರಣಕ್ಕೆ ನಗರಸಭೆ ಅಧಿಕಾರಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾದೀಕಾರದ ಅಧಿಕಾರಿಗಳು ಬಂದು ಜೆಸಿಬಿ ಬಳಸಿ ಕಟ್ಟಡಗಳನ್ನ ತೆರವು ಮಾಡುತ್ತಿದ್ದು ಇದರಿಂದಾಗಿ ರೊಚ್ಚಿಗೆದ್ದ ಬಡಾವಣೆಯ ನಿವಾಸಿಗಳು ಆಕ್ರೋಷವನ್ನ ಹೊರ ಹಾಕಿದ್ದು ಅಧಿಕಾರಿಗಳ ಜೊತೆ ವಾಗ್ವಾದ ನಡೆಸಿದ್ದಾರೆ.
    1
    ಚಿತ್ರದುರ್ಗ ಹೊರವಲಯದ ನಗರಸಭೆ ವ್ಯಾಪ್ತಿಯ ಕವಾಡಿಗರಹಟ್ಟಿ ಬಡಾವಣೆಯಲ್ಲಿ ರಸ್ತೆ ಅಗಲೀಕರಣಕ್ಕೆ ನಗರಸಭೆ ಅಧಿಕಾರಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾದೀಕಾರದ ಅಧಿಕಾರಿಗಳು ಬಂದು ಜೆಸಿಬಿ ಬಳಸಿ ಕಟ್ಟಡಗಳನ್ನ ತೆರವು ಮಾಡುತ್ತಿದ್ದು ಇದರಿಂದಾಗಿ ರೊಚ್ಚಿಗೆದ್ದ ಬಡಾವಣೆಯ ನಿವಾಸಿಗಳು ಆಕ್ರೋಷವನ್ನ ಹೊರ ಹಾಕಿದ್ದು ಅಧಿಕಾರಿಗಳ ಜೊತೆ ವಾಗ್ವಾದ ನಡೆಸಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    5 hrs ago
  • ಗ್ರಾಮಕ್ಕೆ ಯಾರು ಬಾರದಂತೆ ಕಳ್ಳೆ ಮುಳ್ಳು ಬೇಲಿ ಹಾಕಿ ದಿಗ್ಭಂಧನ... ಕಾವಲುಗಾರರ ನೇಮಕ. ವಿಶಿಷ್ಟ ಆಚರಣೆಗೆ ಸಾಕ್ಷಿಯಾದ ನಗಂಗೆರೆ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಗರಂಗೆರೆ ಗ್ರಾಮದಲ್ಲಿ ಈ ವಿಶಿಷ್ಟ ಆಚರಣೆ ಮಾಡಲಾಗಿತ್ತಿದೆ.. ಈ ಗ್ರಾಮದ ಜನರು ಐದು ವರ್ಷಕ್ಕೊಮ್ಮೆ ಗ್ರಾಮ ದೇವತೆ ಶೂನ್ಯದ ಮಾರಮ್ಮ ಜಾತ್ರೆ ಮಾಡುತ್ತಿದ್ದಾರೆ. ಜನವರಿ 12ರಿಂದ 17ರವರೆಗೆ ಬುಡಕಟ್ಟು ಸಂಸ್ಕೃತಿಯ ಉತ್ಸವ ನಡೆಯಲಿದೆ. ಅದಕ್ಕೂ ಮುನ್ನ ಮೂರು ದಿನಗಳ ಕಾಲ ಗ್ರಾಮದ ಪ್ರತಿ ದಿಕ್ಕಿನ ಮಾರ್ಗಗಳಿಗೂ ಕಳ್ಳೆ ಮುಳ್ಳು ಬೇಲಿ ಹಾಕಿ ಗ್ರಾಮಕ್ಕೆ ಬೇರೆ ಯಾರು ಬಾರದಂತೆ ದಿಗ್ಭಂಧನ ಹಾಕುತ್ತಾರೆ. ಜನವರಿ 12ರವರೆಗೆ ಮಾರ್ಗಗಳು ಬಂದ್ ಆಗಿರುತ್ತವೆ. ಗ್ರಾಮದಿಂದ ಯಾವುದೇ ವಸ್ತುಗಳನ್ನು ಹೊರಕ್ಕೆ ತೆಗೆದುಕೊಂಡು ಹೋಗುವಂತಿಲ್ಲ. ವಾಹನಗಳು ಸಂಚರಿಸುವಂತಿಲ್ಲ ಎಂಬ ನಿಯಮಗಳಿವೆ. ಉತ್ಸವದ ಸಂದರ್ಭದಲ್ಲಿ ಆರೋಗ್ಯ, ಶಾಂತಿ, ಸುವ್ಯವಸ್ಥೆ ಮತ್ತು ದೈವ ಭಾವನೆ, ನೆಮ್ಮದಿಗಾಗಿ ಈ ಆಚರಣೆ ಜಾರಿಯಲ್ಲಿದೆ ಯಾರೂ ಹೊರಗೆ, ಒಳಗೆ ಬರುವಂತ್ತಿಲ್ಲ ನಗರಂಗೆರೆ ಗ್ರಾಮದ ಶೂನ್ಯದ ಮಾರಮ್ಮ ಉತ್ಸವವನ್ನು ಐದು ವರ್ಷಗಳಿಗೊಮ್ಮೆ ಆಚರಿಸಲಾಗುತ್ತದೆ. ಈ ವಿಶಿಷ್ಟ ಆಚರಣೆ ನೂರಾರು ವರ್ಷಗಳಿಂದ ಪೂರ್ವಿಕರು ಆಚರಿಸಿಕೊಂಡು ಬಂದಿದ್ದಾರೆ. ಪ್ರತಿ ರಸ್ತೆಗೆ ಸಾರು (ಮುಳ್ಳು ಬೇಲಿ) ಹಾಕಿ ಸರದಿ ಪ್ರಕಾರ ಕಾವಲುಗಾರರು ಇರುತ್ತಾರೆ. ಊರಿನಿಂದ ಯಾವುದೇ ವಸ್ತು ಹೊರಗೆ ಹೋಗುವಂತಿಲ್ಲ. ಹೊರಗಿನವರು ಊರೊಳಕ್ಕೆ ಬರುವಂತಿಲ್ಲ. ಪ್ರತಿಯೊಬ್ಬರನ್ನು ಸಹ ಚೆಕ್ ಮಾಡಿ ಬಿಡಲಾಗುತ್ತದೆ. ಜ.13ರಂದು ‌ನಾಳೆ ಮಂಗಳವಾರ ಮಾರಮ್ಮ ದೇವಿಯ ಪ್ರತಿಷ್ಠಾಪನೆ ಬಳಿಕ ಭಕ್ತರು ಬಂದು ದರ್ಶನ ಪಡಯಬಹುದಾಗಿದೆ. ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದ ನಗರಂಗೆರೆ ಗ್ರಾಮದಲ್ಲಿ ಕಾಲಾನುಕಾಲದಿಂದ ಐದು ವರ್ಷಕ್ಕೊಮ್ಮೆ ದೇವಿಯ ಉತ್ಸವ ನಡೆದುಕೊಂಡು ಬಂದಿದೆ. ಅಲ್ಲದೆ ಇಡೀ ಊರಿಗೆ ಮುಳ್ಳು ಬೇಲಿ ಹಾಕುವ ವಿಶಿಷ್ಟ ಆಚರಣೆಯನ್ನೂ ಆಚರಿಸಲಾಗುತ್ತಿದೆ. ಆ ಮೂಲಕ ಈ ವಿಶಿಷ್ಟ ಮಾರಿಕಾಂಬ ದೇವಿಯ ಉತ್ಸವ ನಾಡಿನ ಗಮನ ಸೆಳೆದಿದೆ... ಸುರೇಶಬೆಳಗೆರೆ
    1
    ಗ್ರಾಮಕ್ಕೆ ಯಾರು ಬಾರದಂತೆ  ಕಳ್ಳೆ ಮುಳ್ಳು ಬೇಲಿ ಹಾಕಿ ದಿಗ್ಭಂಧನ...
ಕಾವಲುಗಾರರ ನೇಮಕ.
ವಿಶಿಷ್ಟ ಆಚರಣೆಗೆ ಸಾಕ್ಷಿಯಾದ ನಗಂಗೆರೆ
ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಗರಂಗೆರೆ ಗ್ರಾಮದಲ್ಲಿ ಈ ವಿಶಿಷ್ಟ ಆಚರಣೆ ಮಾಡಲಾಗಿತ್ತಿದೆ.. ಈ ಗ್ರಾಮದ ಜನರು ಐದು ವರ್ಷಕ್ಕೊಮ್ಮೆ ಗ್ರಾಮ ದೇವತೆ ಶೂನ್ಯದ ಮಾರಮ್ಮ ಜಾತ್ರೆ ಮಾಡುತ್ತಿದ್ದಾರೆ. ಜನವರಿ 12ರಿಂದ 17ರವರೆಗೆ ಬುಡಕಟ್ಟು ಸಂಸ್ಕೃತಿಯ ಉತ್ಸವ ನಡೆಯಲಿದೆ. ಅದಕ್ಕೂ ಮುನ್ನ ಮೂರು ದಿನಗಳ ಕಾಲ ಗ್ರಾಮದ ಪ್ರತಿ ದಿಕ್ಕಿನ ಮಾರ್ಗಗಳಿಗೂ  ಕಳ್ಳೆ ಮುಳ್ಳು ಬೇಲಿ ಹಾಕಿ ಗ್ರಾಮಕ್ಕೆ ಬೇರೆ ಯಾರು ಬಾರದಂತೆ  ದಿಗ್ಭಂಧನ  ಹಾಕುತ್ತಾರೆ.
ಜನವರಿ 12ರವರೆಗೆ ಮಾರ್ಗಗಳು ಬಂದ್ ಆಗಿರುತ್ತವೆ. ಗ್ರಾಮದಿಂದ ಯಾವುದೇ ವಸ್ತುಗಳನ್ನು ಹೊರಕ್ಕೆ ತೆಗೆದುಕೊಂಡು ಹೋಗುವಂತಿಲ್ಲ. ವಾಹನಗಳು ಸಂಚರಿಸುವಂತಿಲ್ಲ ಎಂಬ ನಿಯಮಗಳಿವೆ. ಉತ್ಸವದ ಸಂದರ್ಭದಲ್ಲಿ ಆರೋಗ್ಯ, ಶಾಂತಿ, ಸುವ್ಯವಸ್ಥೆ ಮತ್ತು ದೈವ ಭಾವನೆ, ನೆಮ್ಮದಿಗಾಗಿ ಈ ಆಚರಣೆ ಜಾರಿಯಲ್ಲಿದೆ
ಯಾರೂ ಹೊರಗೆ, ಒಳಗೆ ಬರುವಂತ್ತಿಲ್ಲ
ನಗರಂಗೆರೆ ಗ್ರಾಮದ ಶೂನ್ಯದ ಮಾರಮ್ಮ ಉತ್ಸವವನ್ನು ಐದು ವರ್ಷಗಳಿಗೊಮ್ಮೆ ಆಚರಿಸಲಾಗುತ್ತದೆ. ಈ ವಿಶಿಷ್ಟ ಆಚರಣೆ ನೂರಾರು ವರ್ಷಗಳಿಂದ ಪೂರ್ವಿಕರು ಆಚರಿಸಿಕೊಂಡು ಬಂದಿದ್ದಾರೆ. ಪ್ರತಿ ರಸ್ತೆಗೆ ಸಾರು (ಮುಳ್ಳು ಬೇಲಿ) ಹಾಕಿ ಸರದಿ ಪ್ರಕಾರ ಕಾವಲುಗಾರರು ಇರುತ್ತಾರೆ. ಊರಿನಿಂದ ಯಾವುದೇ ವಸ್ತು ಹೊರಗೆ ಹೋಗುವಂತಿಲ್ಲ. ಹೊರಗಿನವರು ಊರೊಳಕ್ಕೆ ಬರುವಂತಿಲ್ಲ. ಪ್ರತಿಯೊಬ್ಬರನ್ನು ಸಹ ಚೆಕ್ ಮಾಡಿ ಬಿಡಲಾಗುತ್ತದೆ. ಜ.13ರಂದು ‌ನಾಳೆ ಮಂಗಳವಾರ ಮಾರಮ್ಮ ದೇವಿಯ ಪ್ರತಿಷ್ಠಾಪನೆ ಬಳಿಕ ಭಕ್ತರು ಬಂದು ದರ್ಶನ ಪಡಯಬಹುದಾಗಿದೆ.
ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದ ನಗರಂಗೆರೆ ಗ್ರಾಮದಲ್ಲಿ ಕಾಲಾನುಕಾಲದಿಂದ ಐದು ವರ್ಷಕ್ಕೊಮ್ಮೆ ದೇವಿಯ ಉತ್ಸವ ನಡೆದುಕೊಂಡು ಬಂದಿದೆ. ಅಲ್ಲದೆ ಇಡೀ ಊರಿಗೆ ಮುಳ್ಳು ಬೇಲಿ ಹಾಕುವ ವಿಶಿಷ್ಟ ಆಚರಣೆಯನ್ನೂ ಆಚರಿಸಲಾಗುತ್ತಿದೆ. ಆ ಮೂಲಕ ಈ ವಿಶಿಷ್ಟ ಮಾರಿಕಾಂಬ ದೇವಿಯ ಉತ್ಸವ ನಾಡಿನ ಗಮನ ಸೆಳೆದಿದೆ...
ಸುರೇಶಬೆಳಗೆರೆ
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 day ago
  • ಮಳವಳ್ಳಿ: 11 ವರ್ಷಗಳ ನಂತರ ಜ.15 ರಿಂದ ಜ. 23ರವರೆಗೆ ಕಲ್ಕುಣಿ ಗ್ರಾಮದ ಐತಿಹಾಸಿಕ ಸಪ್ತ ಮಾತೃಕಿಯರ ದೊಡ್ಡ ಜಾತ್ರಾ ಮಹೋತ್ಸವ ಮಳವಳ್ಳಿ :ತಾಲ್ಲೂಕಿನ ಕಲ್ಕುಣಿ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಮಹಾಶಕ್ತಿ ಮಂಚದ ಕಾಳಿಕಾಂಭ ಸಪ್ತ ಮಾತೃಕೆಯರ ದೊಡ್ಡ ಜಾತ್ರಾ ಮಹೋತ್ಸವ ಜ 15 ರಿಂದ ಜ.23 ರವರೆಗೆ ಲಕ್ಷಾಂತರ ಜನಸ್ತೋ ಮದ ನಡುವೆ ಬಹು ವಿಜೃಂಭಣೆ ಯಿಂದ ಜರುಗಲಿದೆ. ಈ ಸಂಬಂಧ ಕಲ್ಕುಣಿ ಗ್ರಾಮದ ಸೊಸೈಟಿ ಆವರಣದಲ್ಲಿ ಶ್ರೀ ಮಂಚದ ಕಾಳಿಕಾಂಭ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಎನ್ ನಂಜೇಗೌಡ ಮತ್ತು ಆಡಳಿತ ಮಂಡಳಿಯ ಸದಸ್ಯರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ ಹಬ್ಬದ ಆಚರಣೆ ಕುರಿತ ಪ್ರಮುಖ ಅಂಶಗ ಳನ್ನು ವಿವರಿಸಿದರು . ಈ ಸಂದರ್ಭದಲ್ಲಿ ಮಾಜಿ ಟಿಎಪಿಸಿ ಎಂಎಸ್ ಅಧ್ಯಕ್ಷರು ಆದ ಕೆ ಜೆ ದೇವರಾಜು ಅವರುಗಳು ಶ್ರೀ ಮಂಚದ ಕಾಳಿಕಾಂಭ, ಶ್ರೀ ವಿಜಯನಗರೇಶ್ವರಿ, ಶ್ರೀ ಹಿರಿಯ ಮಂಚದ ಕಾಳಿಕಾಂಭ, ಶ್ರೀ ಮನೆಯಮ್ಮ, ಶ್ರೀ ಬೆಟ್ಟದ ಅರಸಮ್ಮ, ಶ್ರೀ ಕನ್ನಕಡ್ಡಯ್ಯ, ಶ್ರೀ ಮುಖದ ದೇವರು, ಶ್ರೀ ಮೂಗದೇವಮ್ಮ, ಶ್ರೀ ಪಟ್ಟಲ ದಮ್ಮ ಸೇರಿದಂತೆ ಸಪ್ತ ಮಾತೃಕೆ ಯರ ಆರಾಧನೆಯ ಐತಿಹಾಸಿಕ ಹಬ್ಬ ಇದಾಗಿದೆ ಕಲ್ಕುಣಿ, ದೊಡ್ಡೇ ಗೌಡನ ಕೊಪ್ಪಲು, ಚಿಕ್ಕಮಾಳಿಗೆ ಕೊಪ್ಪಲು, ಪುಟ್ಟೇಗೌಡನ ಕೊಪ್ಪಲು, ಚಿಕ್ಕಕಲ್ಕುಣಿ ಹಾಗೂ ಇನ್ನಿತರ ಗ್ರಾಮಸ್ಥರು ಸೇರಿ ಆಚರಿಸುವ ಬಹು‌ಕಟ್ಟುಪಾಡು ಗಳನ್ನು ಒಳಗೊಂಡ ಬಹು ಸಾಂಪ್ರದಾಯಿಕ ‌ಹಬ್ಬ ಇದಾಗಿದೆ ಎಂದು ತಿಳಿಸಿದರು. ಪ್ರತೀ 5 ವರ್ಷ 7 ವರ್ಷ 9 ವರ್ಷಗಳಿಗೊಮ್ಮೆ ಈ ಹಬ್ಬ ನಡೆಯುತ್ತಿತ್ತಾದರೂ ಕರೋನದಿಂದಾಗಿ 11 ವರ್ಷದ ನಂತರ ಈ ಹಬ್ಬ ನಡೆಯುತ್ತಿದೆ. ಗ್ರಾಮದ ಹೊರವಲಯದ ವೀಳ್ಯದೆಲೆ ತೋಟವೊಂದರ ಭೂಮಾಂತ ಗರ್ಭದಲ್ಲಿ ನೆಲೆಗೊಂಡಿರುವ ಶ್ರೀ ಮಂಚದ ಕಾಳಿಕಾಂಭ ಮಹಾತಾ ಯಿಯ ವಿಗ್ರಹವನ್ನು ಜನವರಿ 15 ರಂದು ಮಧ್ಯರಾತ್ರಿ ಹೊರತೆಗೆದು ನಿಶ್ಯಬ್ದ ಸ್ಥಿತಿಯಲ್ಲಿ ಕರೆ ತಂದು ದೇವಾಲಯದಲ್ಲಿ ಪ್ರತಿಷ್ಠಾಪಿಸುವು ದರೊಂದಿಗೆ ಹಬ್ಬದ ಪ್ರಮುಖ ಘಟ್ಟ ಆರಂಭವಾಗಲಿದೆ ಎಂದು ಅವರು ವಿವರಿಸಿದರು. 8 ದಿನಗಳ ಕಾಲ ದೇವತೆಯರ ಉತ್ಸವ ಹೆಬ್ಬಾರೆಗಳ ಮೆರವಣಿಗೆ ಇನ್ನಿತರ ಧಾರ್ಮಿಕ ವಿಧಿ ವಿಧಾನಗಳು ಜರುಗಲಿವೆ ಎಂದು ತಿಳಿಸಿದ ಅವರು 20 ರಂದು ಮಂಗಳವಾರ ಬಲಿ ಬೀಳುವುದರೊಂದಿ ಹಬ್ಬದ ಪ್ರಮುಖ ಅತ್ಯಾಕರ್ಷಕ ಗಟ್ಟ ಜರುಗಲಿದೆ .ಅಂದು ರಾತ್ರಿ 11.30 ರ ಸುಮಾರಿಗೆ ಮನೆಯಮ್ಮ ಲಕ್ಷ್ಮಿ ದೇವಮ್ಮ ದೇವಸ್ಥಾನದಲ್ಲಿ ಅರ್ಚಕರು ಬಲಿ ಬೀಳಲಿದ್ದು ಬಲಿಯನ್ನು ಚಾವಡಿ ಮುಂಭಾಗ ಪವಡಿಸಿರುವ ಶ್ರೀ ಮಂಚದ ಕಾಳಿಕಾಂಭ ದೇವಿಯ ಮುಂದೆ ತಂದು ಇಟ್ಟು ಮುಖದ ದೇವರು ಅದರ ಸುತ್ತ ಕುಣಿಯು ವುದು ಹಬ್ಬದ ಪ್ರಮುಖ ಹಂತವಾ ಗಿದೆ ಎಂದು ವಿವರಿಸಿದರು. ಇದಲ್ಲದೆ ಜನವರಿ 23 ರಂದು ಬೆಳಿಗ್ಗೆ ಗ್ರಾಮದ ದೊಡ್ಡ ಕೆರೆಯಲ್ಲಿ ಸಪ್ತಮಾತೃಕೆಯರ ತೆಪ್ಪೋತ್ಸವ ನಡೆಯಲಿದ್ದು ಜನವರಿ 25 ರಂದು ಮದ್ಯ ರಾತ್ರಿ ಶ್ರೀ ಮಂಚದ ಕಾಳಿಕಾಂಭ ದೇವಿಯನ್ನು ಮತ್ತೆ ಭೂಮಾಂತ ರ್ಗಕ್ಕೆ ಸೇರಿಸುವುದರೊಂದಿಗೆ ಹಬ್ಬಕ್ಕೆ ತೆರೆ ಬೀಳಲಿದೆ ಎಂದು ವಿವರಿಸಿದರು. ನಾಡಿನ ಮೂಲೆ ಮೂಲೆಗಳಿಂದ ಲಕ್ಷಾಂತರ ಜನ ಈ ಹಬ್ಬಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ‌ತಾಲ್ಲೂಕು ಆಡಳಿತ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಯಾವುದೇ ಲೋಪವಾಗದಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕ ಪಿ ಎಂ ನರೇಂದ್ರಸ್ವಾಮಿ ಈಗಾಗಲೇ ಸೂಚಿಸಿದ್ದಾರೆ ಎಂದು ದೇವರಾಜು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಮಾದನಾಯಕ, ಪರಮೇಶ್, ಮಾದೇವು, ಸೋಮಶೇಖರ್, ಚಂದನ್, ಮಲ್ಲಯ್ಯಪ್ಪ ಹಾಜರಿದ್ದರು.
    1
    ಮಳವಳ್ಳಿ: 11 ವರ್ಷಗಳ ನಂತರ ಜ.15 ರಿಂದ ಜ. 23ರವರೆಗೆ ಕಲ್ಕುಣಿ ಗ್ರಾಮದ ಐತಿಹಾಸಿಕ ಸಪ್ತ ಮಾತೃಕಿಯರ ದೊಡ್ಡ ಜಾತ್ರಾ ಮಹೋತ್ಸವ
ಮಳವಳ್ಳಿ :ತಾಲ್ಲೂಕಿನ ಕಲ್ಕುಣಿ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಮಹಾಶಕ್ತಿ ಮಂಚದ ಕಾಳಿಕಾಂಭ ಸಪ್ತ ಮಾತೃಕೆಯರ ದೊಡ್ಡ  ಜಾತ್ರಾ ಮಹೋತ್ಸವ ಜ 15 ರಿಂದ ಜ.23 ರವರೆಗೆ ಲಕ್ಷಾಂತರ ಜನಸ್ತೋ ಮದ ನಡುವೆ ಬಹು ವಿಜೃಂಭಣೆ ಯಿಂದ ಜರುಗಲಿದೆ.
ಈ ಸಂಬಂಧ ಕಲ್ಕುಣಿ ಗ್ರಾಮದ ಸೊಸೈಟಿ ಆವರಣದಲ್ಲಿ ಶ್ರೀ ಮಂಚದ ಕಾಳಿಕಾಂಭ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಎನ್ ನಂಜೇಗೌಡ   ಮತ್ತು ಆಡಳಿತ ಮಂಡಳಿಯ ಸದಸ್ಯರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ ಹಬ್ಬದ ಆಚರಣೆ ಕುರಿತ ಪ್ರಮುಖ ಅಂಶಗ ಳನ್ನು ವಿವರಿಸಿದರು .
ಈ ಸಂದರ್ಭದಲ್ಲಿ ಮಾಜಿ ಟಿಎಪಿಸಿ ಎಂಎಸ್ ಅಧ್ಯಕ್ಷರು ಆದ ಕೆ ಜೆ ದೇವರಾಜು ಅವರುಗಳು ಶ್ರೀ ಮಂಚದ ಕಾಳಿಕಾಂಭ, ಶ್ರೀ ವಿಜಯನಗರೇಶ್ವರಿ, ಶ್ರೀ ಹಿರಿಯ ಮಂಚದ ಕಾಳಿಕಾಂಭ, ಶ್ರೀ ಮನೆಯಮ್ಮ, ಶ್ರೀ ಬೆಟ್ಟದ ಅರಸಮ್ಮ, ಶ್ರೀ ಕನ್ನಕಡ್ಡಯ್ಯ, ಶ್ರೀ ಮುಖದ ದೇವರು, ಶ್ರೀ ಮೂಗದೇವಮ್ಮ, ಶ್ರೀ ಪಟ್ಟಲ ದಮ್ಮ ಸೇರಿದಂತೆ ಸಪ್ತ ಮಾತೃಕೆ ಯರ ಆರಾಧನೆಯ ಐತಿಹಾಸಿಕ ಹಬ್ಬ ಇದಾಗಿದೆ ಕಲ್ಕುಣಿ, ದೊಡ್ಡೇ ಗೌಡನ ಕೊಪ್ಪಲು, ಚಿಕ್ಕಮಾಳಿಗೆ ಕೊಪ್ಪಲು, ಪುಟ್ಟೇಗೌಡನ ಕೊಪ್ಪಲು, ಚಿಕ್ಕಕಲ್ಕುಣಿ ಹಾಗೂ ಇನ್ನಿತರ ಗ್ರಾಮಸ್ಥರು ಸೇರಿ ಆಚರಿಸುವ ಬಹು‌ಕಟ್ಟುಪಾಡು ಗಳನ್ನು ಒಳಗೊಂಡ ಬಹು ಸಾಂಪ್ರದಾಯಿಕ ‌ಹಬ್ಬ ಇದಾಗಿದೆ    ಎಂದು ತಿಳಿಸಿದರು.
ಪ್ರತೀ 5 ವರ್ಷ  7 ವರ್ಷ 9 ವರ್ಷಗಳಿಗೊಮ್ಮೆ ಈ ಹಬ್ಬ ನಡೆಯುತ್ತಿತ್ತಾದರೂ ಕರೋನದಿಂದಾಗಿ 11 ವರ್ಷದ ನಂತರ ಈ ಹಬ್ಬ ನಡೆಯುತ್ತಿದೆ.
ಗ್ರಾಮದ ಹೊರವಲಯದ ವೀಳ್ಯದೆಲೆ ತೋಟವೊಂದರ ಭೂಮಾಂತ ಗರ್ಭದಲ್ಲಿ ನೆಲೆಗೊಂಡಿರುವ ಶ್ರೀ ಮಂಚದ ಕಾಳಿಕಾಂಭ ಮಹಾತಾ ಯಿಯ ವಿಗ್ರಹವನ್ನು ಜನವರಿ 15 ರಂದು ಮಧ್ಯರಾತ್ರಿ ಹೊರತೆಗೆದು ನಿಶ್ಯಬ್ದ ಸ್ಥಿತಿಯಲ್ಲಿ ಕರೆ ತಂದು ದೇವಾಲಯದಲ್ಲಿ ಪ್ರತಿಷ್ಠಾಪಿಸುವು ದರೊಂದಿಗೆ ಹಬ್ಬದ ಪ್ರಮುಖ ಘಟ್ಟ ಆರಂಭವಾಗಲಿದೆ ಎಂದು ಅವರು ವಿವರಿಸಿದರು. 
8 ದಿನಗಳ ಕಾಲ ದೇವತೆಯರ ಉತ್ಸವ ಹೆಬ್ಬಾರೆಗಳ ಮೆರವಣಿಗೆ ಇನ್ನಿತರ ಧಾರ್ಮಿಕ ವಿಧಿ ವಿಧಾನಗಳು ಜರುಗಲಿವೆ ಎಂದು ತಿಳಿಸಿದ ಅವರು 20 ರಂದು ಮಂಗಳವಾರ ಬಲಿ ಬೀಳುವುದರೊಂದಿ  ಹಬ್ಬದ ಪ್ರಮುಖ ಅತ್ಯಾಕರ್ಷಕ  ಗಟ್ಟ ಜರುಗಲಿದೆ .ಅಂದು ರಾತ್ರಿ 11.30 ರ ಸುಮಾರಿಗೆ ಮನೆಯಮ್ಮ ಲಕ್ಷ್ಮಿ ದೇವಮ್ಮ ದೇವಸ್ಥಾನದಲ್ಲಿ ಅರ್ಚಕರು ಬಲಿ ಬೀಳಲಿದ್ದು  ಬಲಿಯನ್ನು ಚಾವಡಿ ಮುಂಭಾಗ ಪವಡಿಸಿರುವ ಶ್ರೀ ಮಂಚದ ಕಾಳಿಕಾಂಭ ದೇವಿಯ ಮುಂದೆ ತಂದು ಇಟ್ಟು ಮುಖದ ದೇವರು ಅದರ ಸುತ್ತ ಕುಣಿಯು ವುದು ಹಬ್ಬದ ಪ್ರಮುಖ ಹಂತವಾ ಗಿದೆ ಎಂದು ವಿವರಿಸಿದರು.
ಇದಲ್ಲದೆ ಜನವರಿ 23 ರಂದು ಬೆಳಿಗ್ಗೆ  ಗ್ರಾಮದ ದೊಡ್ಡ ಕೆರೆಯಲ್ಲಿ ಸಪ್ತಮಾತೃಕೆಯರ ತೆಪ್ಪೋತ್ಸವ ನಡೆಯಲಿದ್ದು ಜನವರಿ 25 ರಂದು ಮದ್ಯ ರಾತ್ರಿ ಶ್ರೀ ಮಂಚದ ಕಾಳಿಕಾಂಭ ದೇವಿಯನ್ನು ಮತ್ತೆ ಭೂಮಾಂತ ರ್ಗಕ್ಕೆ ಸೇರಿಸುವುದರೊಂದಿಗೆ ಹಬ್ಬಕ್ಕೆ ತೆರೆ ಬೀಳಲಿದೆ ಎಂದು ವಿವರಿಸಿದರು.
ನಾಡಿನ ಮೂಲೆ ಮೂಲೆಗಳಿಂದ ಲಕ್ಷಾಂತರ ಜನ ಈ ಹಬ್ಬಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ‌ತಾಲ್ಲೂಕು ಆಡಳಿತ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಯಾವುದೇ ಲೋಪವಾಗದಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ  ಶಾಸಕ ಪಿ ಎಂ ನರೇಂದ್ರಸ್ವಾಮಿ ಈಗಾಗಲೇ ಸೂಚಿಸಿದ್ದಾರೆ ಎಂದು ದೇವರಾಜು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಮಾದನಾಯಕ, ಪರಮೇಶ್, ಮಾದೇವು, ಸೋಮಶೇಖರ್, ಚಂದನ್, ಮಲ್ಲಯ್ಯಪ್ಪ ಹಾಜರಿದ್ದರು.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Journalist Malavalli, Mandya•
    9 min ago
  • ನೆನ್ನೆ ಮೈಸೂರಿನಲ್ಲಿ "ಬಾಯಲ್ಲಿ ಸೀಟಿ, ಕೈಯಲ್ಲಿ ಲಾಠಿ" ಹಿಡಿದು ಘರ್ಜಿಸಿದ "ಹುಲಿಯ ಹೃದಯದ ಕೆಆರ್‌ಎಸ್ ಸೈನಿಕರು..." #KRS #ಯುವಮಾವೇಶ 13-01-2026.
    1
    ನೆನ್ನೆ ಮೈಸೂರಿನಲ್ಲಿ "ಬಾಯಲ್ಲಿ ಸೀಟಿ, ಕೈಯಲ್ಲಿ ಲಾಠಿ" ಹಿಡಿದು ಘರ್ಜಿಸಿದ "ಹುಲಿಯ ಹೃದಯದ ಕೆಆರ್‌ಎಸ್ ಸೈನಿಕರು..." 
#KRS #ಯುವಮಾವೇಶ
13-01-2026.
    user_874792
    874792
    Farmer ಹಳಿಯಾಳ, ಉತ್ತರ ಕನ್ನಡ, ಕರ್ನಾಟಕ•
    2 hrs ago
  • *ಮಂಗಳೂರು ದಕ್ಷಿಣ ಕನ್ನಡ* Mng Bjp Mlc Byte ವಿವಾದಿತ ಜಿ ರಾಮ್ ಜಿ ಕಾಯ್ದೆ: ಬಹಿರಂಗ ಚರ್ಚೆಗೆ ರೆಡಿ ಎಂದ ಬಿಜೆಪಿ ಎಂಎಲ್‌ಸಿ ಜಿ ರಾಮ್ ಜಿ ಕಾಯ್ದೆ ಕುರಿತು ಬಹಿರಂಗ ಚರ್ಚೆಗೆ ಬಿಜೆಪಿ ಸಿದ್ದವಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದ್ದಾರೆ. ಅವರು ಮಂಗಳವಾರ ಮಂಗಳೂರಿನ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ‌ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮನ್‌ರೇಗಾದ ನ್ಯೂನತೆಗಳನ್ನು ಸರಿಪಡಿಸಿ ಹೊಸ ಕಾಯ್ದೆ ತರಲಾಗಿದೆ. ಜಿ ರಾಮ್ ಜಿ ಕಾಯ್ದೆಯಲ್ಲಿ ಗಾಂಧೀಜಿಯವರ ಪ್ರೀತಿಯ ರಾಮನ ಹೆಸರನ್ನು ತರಲಾಗಿದೆ ಎಂದರು. ಜಿ ರಾಮ್ ಜಿ ಕಾಯ್ದೆ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ನಡೆಸುವ ಮಾತನ್ನಾಡುತ್ತಿದ್ದಾರೆ. ಆದರೆ, ಕೇಂದ್ರದ ಕಾಯ್ದೆ ವಿರುದ್ಧ ರಾಜ್ಯ ವಿಧಾನಸಭೆಯಲ್ಲಿ ಚರ್ಚಿಸುವುದು ಅಸಂವಿಧಾನಿಕ. ಈ ನಿರ್ಧಾರ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವಂತಿದೆ ಎಂದರು. ಸಿಎಂ ಸಿದ್ದರಾಮಮಯ್ಯ ಅವರು ಸುಳ್ಳು ಹೇಳಿಕೆಗಳನ್ನೇ ನೀಡುತ್ತಿದ್ದಾರೆ. ಕಳೆದ ಬಜೆಟ್‌ನ ಶೇ.50ರಷ್ಟು ಅನುದಾನವೂ ಖರ್ಚಾಗಿಲ್ಲ. ಇನ್ನು ಎರಡು ತಿಂಗಳಲ್ಲಿ ಮತ್ತೆ ಬಜೆಟ್ ಬರಲಿದೆ. ಗಾಳಿ ಹೊರತುಪಡಿಸಿ ಬೇರೆ ಎಲ್ಲದಕ್ಕೂ ರಾಜ್ಯ ಸರಕಾರ ತೆರಿಗೆ ಹಾಕುತ್ತಿದೆ ಅಥವಾ ತೆರಿಗೆ ಹೆಚ್ಚಳ ಮಾಡಿದೆ. ಆದರೆ, ಅಭಿವೃದ್ಧಿ ಕುಂಠಿತವಾಗಿದೆ. ರಸ್ತೆ ಹೊಂಡವನ್ನೂ ಮುಚ್ಚುತ್ತಿಲ್ಲ ಎಂದು ದೂರಿದರು. ಪ್ರೆಸ್ ಮೀಟ್ ನಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಡಾ. ಮಂಜುಳಾ ರಾವ್, ಜಿಲ್ಲಾ ವಕ್ತಾರರಾದ ಸತೀಶ್ ಪ್ರಭು, ಅರುಣ್ ಶೇಟ್, ರಾಜಗೋಪಾಲ ರೈ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಹರೀಶ್ ಮೂಡುಶೆಡ್ಡೆ, ಮಾಧ್ಯಮ ಪ್ರಮುಖ್ ಮನೋಹರ ಶೆಟ್ಟಿ ಹಾಜರಿದ್ದರು. ವರದಿ: ಶಂಶೀರ್ ಬುಡೋಳಿ
    1
    *ಮಂಗಳೂರು ದಕ್ಷಿಣ ಕನ್ನಡ*
Mng Bjp Mlc Byte
ವಿವಾದಿತ ಜಿ ರಾಮ್ ಜಿ ಕಾಯ್ದೆ: ಬಹಿರಂಗ ಚರ್ಚೆಗೆ ರೆಡಿ ಎಂದ ಬಿಜೆಪಿ ಎಂಎಲ್‌ಸಿ
ಜಿ ರಾಮ್ ಜಿ ಕಾಯ್ದೆ ಕುರಿತು ಬಹಿರಂಗ ಚರ್ಚೆಗೆ ಬಿಜೆಪಿ ಸಿದ್ದವಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದ್ದಾರೆ. ಅವರು ಮಂಗಳವಾರ 
ಮಂಗಳೂರಿನ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ‌ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮನ್‌ರೇಗಾದ ನ್ಯೂನತೆಗಳನ್ನು ಸರಿಪಡಿಸಿ ಹೊಸ ಕಾಯ್ದೆ ತರಲಾಗಿದೆ. ಜಿ ರಾಮ್ ಜಿ ಕಾಯ್ದೆಯಲ್ಲಿ ಗಾಂಧೀಜಿಯವರ ಪ್ರೀತಿಯ ರಾಮನ ಹೆಸರನ್ನು ತರಲಾಗಿದೆ ಎಂದರು.
ಜಿ ರಾಮ್ ಜಿ ಕಾಯ್ದೆ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ನಡೆಸುವ ಮಾತನ್ನಾಡುತ್ತಿದ್ದಾರೆ. ಆದರೆ, ಕೇಂದ್ರದ ಕಾಯ್ದೆ ವಿರುದ್ಧ ರಾಜ್ಯ ವಿಧಾನಸಭೆಯಲ್ಲಿ ಚರ್ಚಿಸುವುದು ಅಸಂವಿಧಾನಿಕ. ಈ ನಿರ್ಧಾರ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವಂತಿದೆ ಎಂದರು.
ಸಿಎಂ ಸಿದ್ದರಾಮಮಯ್ಯ ಅವರು ಸುಳ್ಳು ಹೇಳಿಕೆಗಳನ್ನೇ ನೀಡುತ್ತಿದ್ದಾರೆ. ಕಳೆದ ಬಜೆಟ್‌ನ ಶೇ.50ರಷ್ಟು ಅನುದಾನವೂ ಖರ್ಚಾಗಿಲ್ಲ. ಇನ್ನು ಎರಡು ತಿಂಗಳಲ್ಲಿ ಮತ್ತೆ ಬಜೆಟ್ ಬರಲಿದೆ. ಗಾಳಿ ಹೊರತುಪಡಿಸಿ ಬೇರೆ ಎಲ್ಲದಕ್ಕೂ ರಾಜ್ಯ ಸರಕಾರ ತೆರಿಗೆ ಹಾಕುತ್ತಿದೆ ಅಥವಾ ತೆರಿಗೆ ಹೆಚ್ಚಳ ಮಾಡಿದೆ. ಆದರೆ, ಅಭಿವೃದ್ಧಿ ಕುಂಠಿತವಾಗಿದೆ. ರಸ್ತೆ ಹೊಂಡವನ್ನೂ ಮುಚ್ಚುತ್ತಿಲ್ಲ ಎಂದು ದೂರಿದರು.
ಪ್ರೆಸ್ ಮೀಟ್ ನಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಡಾ. ಮಂಜುಳಾ ರಾವ್, ಜಿಲ್ಲಾ ವಕ್ತಾರರಾದ ಸತೀಶ್ ಪ್ರಭು, ಅರುಣ್ ಶೇಟ್, ರಾಜಗೋಪಾಲ ರೈ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಹರೀಶ್ ಮೂಡುಶೆಡ್ಡೆ, ಮಾಧ್ಯಮ ಪ್ರಮುಖ್ ಮನೋಹರ ಶೆಟ್ಟಿ ಹಾಜರಿದ್ದರು.
ವರದಿ: ಶಂಶೀರ್ ಬುಡೋಳಿ
    user_Shamsheer Budoli
    Shamsheer Budoli
    Journalist Mangaluru, Dakshina Kannada•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.