ಆರೋಗ್ಯಕ್ಕಾಗಿ ಪರಿಸರ ಸ್ವಚ್ಛತೆಗೆ ಆದ್ಯತೆ ನೀಡಿ: ವಿ. ಸೋಮಣ್ಣ ಮೋದಿ ಜನ್ಮದಿನ: ಅಭಿಮಾನಿಗಳಿಂದ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛತಾ ಸೇವೆ ತುಮಕೂರು: ಪ್ರಧಾನಿ ನರೇಂದ್ರ ಮೋದಿಯವರ ೨೫ ವರ್ಷಗಳ ಸಾರ್ವಜನಿಕ ಜೀವನ ಹಾಗೂ ಹುಟ್ಟುಹಬ್ಬದ ಅಂಗವಾಗಿ ಕೇಂದ್ರ ಸಚಿವ ವಿ. ಸೋಮಣ್ಣ ಅಭಿಮಾನಿಗಳು ಗುರುವಾರ ನಗರದ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛತೆ ಹಾಗೂ ಇತರೆ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಅಭಿಮಾನಿಗಳು, ವಿವಿಧ ಕಾಲೇಜುಗಳ ಎನ್‌ಸಿಸಿ ಕೆಡೆಟ್‌ಗಳು ಹಾಗೂ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು. ಬೆಂಗಳೂರಿನಿಂದ ವಿಶೇಷ ರೈಲಿನಿಲ್ಲಿ ಬಂದಿಳಿದ ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು, ಮೊದಲು ರೈಲ್ವೆ ನಿಲ್ದಾಣ ಆವರಣದ ನಾಗಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮೋದಿಯವರ ಜನ್ಮದಿನದ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿದರು. ನಂತರ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಪರಿಸರ ನೈರ್ಮಲ್ಯದ ಬಗ್ಗೆ ಜನಜಾಗೃತಿ ಮೂಡಿಸಿದರು. ಈ ವೇಳೆ ಮಾತನಾಡಿದ ಸಚಿವ ವಿ. ಸೋಮಣ್ಣ, ಭಾರತದ ಸಾರ್ವಭೌಮತೆಗೆ ಪ್ರಧಾನಿ ಮೋದಿಯವರು ದೊಡ್ಡ ಕೊಡುಗೆ ನೀಡಿದ್ದಾರೆ. ಪ್ರಧಾನಿ ಮಾತ್ರವಲ್ಲದೆ, ವಿಶ್ವನಾಯಕರಾಗಿ ಭಾರತದ ಘನತೆಯನ್ನು ವಿಶ್ವಮಟ್ಟದಲ್ಲಿ ಎತ್ತಿಹಿಡಿದ್ದಿದ್ದಾರೆ ಎಂದರು. ಪರಿಸರ ಸ್ವಚ್ಛತೆ ನಮ್ಮ ಆದ್ಯತೆ ಆಗಬೇಕು ಎಂಬುದು ಮೋದಿಯವರ ಆಶಯ. ಮನುಷ್ಯನಿಗೆ ಆರೋಗ್ಯಕ್ಕೆ ಸ್ವಚ್ಛ ಪರಿಸರವೂ ಮುಖ್ಯ. ಸ್ವಚ್ಛತೆ ಪ್ರತಿಯೊಬ್ಬರ ಆದ್ಯತೆ ಆಗಬೇಕು. ಇಂದು ರೈಲು ನಿಲ್ದಾಣದಲ್ಲಿ ಸ್ವಯಂಪ್ರೇರಿತವಾಗಿ ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ. ಇಂತಹ ಸೇವಾ ಕಾರ್ಯಗಳು ಮುಂದಿನ ಪೀಳಿಗೆಗೆ ಪ್ರೇರಣೆಯಾಗಬೇಕು ಎಂದು ಹೇಳಿದರು. ೧೫ನೇ ವಾರ್ಡಿನ ನಗರಪಾಲಿಕೆ ಮಾಜಿ ಸದಸ್ಯೆ ಗಿರಿಜಾ ಧನಿಯಾಕುಮಾರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು ೨೫ ವರ್ಷಗಳಸಾರ್ವಜನಿಕ ಜೀವನದ ಸಾರ್ಥಕ ಸೇವೆ ಗೌರವಾರ್ಥವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ೧೭ನೇ ಮದ್ರಾಸ್ ರೆಜಿಮೆಂಟ್ ಭಾರತೀಯ ಸೇನಾಧಿಕಾರಿ ಸುಬೇದಾರ್ ಯೋಗೀಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ನಂತರ ಹಾಜರಿದ್ದ ವಿವಿಧ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ವಿತರಿಸಲಾಯಿತು. ಸರ್ಕಾರಿ ವಿಜ್ಞಾನ, ಕಲಾ ಕಾಲೇಜು, ಸಿದ್ಧಗಂಗಾ ಕಾಲೇಜು, ಸರ್ವೋದಯ ಕಾಲೇಜಿನ ಎನ್‌ಸಿಸಿ ಕೆಡೆಟ್‌ಗಳು ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು. ಶಾಸಕರಾದ ಜಿ.ಬಿ. ಜ್ಯೋತಿಗಣೇಶ್, ಎಂ.ಟಿ. ಕೃಷ್ಣಪ್ಪ, ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕರಾದ ಎಂ.ಡಿ. ಲಕ್ಷ್ಮೀ ನಾರಾಯಣ, ಮಸಾಲ ಜಯರಾಮ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿಶಂಕರ್, ನಗರಪಾಲಿಕೆ ಮಾಜಿ ಸದಸ್ಯೆ ಗಿರಿಜಾ ಧನಿಯಾಕುಮಾರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ಧಲಿಂಗಪ್ಪ, ವಿ. ಸೋಮಣ್ಣ ಅಭಿಮಾನಿ ಬಳಗದ ಡಾ. ಧನಿಯಾಕುಮಾರ್, ಮಲ್ಲಸಂದ್ರ ಶಿವಣ್ಣ, ಡಿ.ಎಂ. ಸತೀಶ್, ಮುಖಂಡರಾದ ವೈ.ಹೆಚ್. ಹುಚ್ಚಯ್ಯ, ಬ್ಯಾಟರಂಗೇಗೌಡ, ಟಿ.ಆರ್. ಸದಾಶಿವಯ್ಯ, ವಿನಯ್‌ಕುಮಾರ್, ಸಾಗರನಹಳ್ಳಿ ವಿಜಯಕುಮಾರ್, ಡಾ.ದರ್ಶನ್ ಕೆ.ಎಲ್, ನಾಗರಾಜಪ್ಪ, ನಂದಿ ಪ್ರಭಾಕರ್, ಎನ್‌ಸಿಸಿ ಅಧಿಕಾರಿಗಳಾದ ಮೇಜರ್ ಅರುಣ್‌ಕುಮಾರ್, ಕ್ಯಾಪ್ಟನ್ ಪ್ರದೀಪ್‌ಕುಮಾರ್, ಕ್ಯಾಪ್ಟನ್ ರಾಮಲಿಂಗರೆಡ್ಡಿ ಮೊದಲಾದವರು ಭಾಗವಹಿಸಿದ್ದರು.

- ಹುಳಿಯಾರು ವಾರ್ಡ್ ನಂಬರ್ 10 ರಲ್ಲಿ ಕಾಮಶೇಟಿ ಪಾಳ್ಯ ಗ್ರಾಮದಲ್ಲಿ ಈ ಸ್ವರ್ಣ ಗೌರಿ ಹಬ್ಬದ ಪ್ರಯುಕ್ತ ಬನಶಂಕರಿ ಬಸವೇಶ್ವರ ದೇವಸ್ಥಾನದ ಮುಂದೆ ಲಿಂಗಪ್ಪನ ಪಾಳ್ಯ ಮತ್ತು ನಾಗಪ್ಪ ಕಟೆ ಯುವಕರಿಂದ ಕೋಲಾಟ ನಡೆಸಲಾಯಿತು. ನಡೆಸಿಕೊಟ್ಟ ಯುವಕರಿಗೆ ಗ್ರಾಮಸ್ಥರಿಂದ ಧನ್ಯವಾದಗಳು. ಹುಳಿಯಾರು ವಾರ್ಡ್ ನಂಬರ್ 10 ರಲ್ಲಿ ಕಾಮಶೇಟಿ ಪಾಳ್ಯ ಗ್ರಾಮದಲ್ಲಿ ಈ ಸ್ವರ್ಣ ಗೌರಿ ಹಬ್ಬದ ಪ್ರಯುಕ್ತ ಬನಶಂಕರಿ ಬಸವೇಶ್ವರ ದೇವಸ್ಥಾನದ ಮುಂದೆ ಲಿಂಗಪ್ಪನ ಪಾಳ್ಯ ಮತ್ತು ನಾಗಪ್ಪ ಕಟೆ ಯುವಕರಿಂದ ಕೋಲಾಟ ನಡೆಸಲಾಯಿತು. ನಡೆಸಿಕೊಟ್ಟ ಯುವಕರಿಗೆ ಗ್ರಾಮಸ್ಥರಿಂದ ಧನ್ಯವಾದಗಳು.1
- ಪ್ರೇಮದ ಹೆಸರಲ್ಲಿ ಲಕ್ಷಾಂತರ ಹಣ ಕಳೆದುಕೊಂಡ ಟ್ಯಾಟೂ ಆರ್ಟಿಸ್ಟ್ ಮದುವೆ ವಿಚಾರಕ್ಕೆ ಗಲಾಟೆ; ಮಹಿಳೆಯಿಂದ ಹಲ್ಲೆ ಆರೋಪ ಪ್ರೇಮದ ಹೆಸರಲ್ಲಿ ಲಕ್ಷಾಂತರ ಹಣ ಕಳೆದುಕೊಂಡ ಟ್ಯಾಟೂ ಆರ್ಟಿಸ್ಟ್ ಮದುವೆ ವಿಚಾರಕ್ಕೆ ಗಲಾಟೆ; ಮಹಿಳೆಯಿಂದ ಹಲ್ಲೆ ಆರೋಪ1
- ನಿಮ್ಹಾನ್ಸ್ ಉತ್ತರ ಕ್ಯಾಂಪಸ್ ಕಾಮಗಾರಿ ವಿಚಾರವಾಗಿ ಧ್ವನಿ ಎತ್ತಿದ ಮಾಜಿ ಶಾಸಕ ನಂದೀಶ್ ರೆಡ್ಡಿ , ಬೆಂಗಳೂರು ಪೂರ್ವ ಜಿಲ್ಲಾಧ್ಯಕ್ಷ ಡಿಕೆ ಮೋಹನ್ ಬಾಬು ಟಾಂಗ್.!1
- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಕರೇನಹಳ್ಳಿಯಲ್ಲಿ ವಿಶೇಷವಾದ ಹೆಲ್ಮೆಟ್ ಗಣಪತಿ ಮೂರ್ತಿ ವಿಸರ್ಜನೆ ಬೆಂಗಳೂರು:ದೊಡ್ಡಬಳ್ಳಾಪುರ ನಗರದ ಕರೇನಹಳ್ಳಿಯಲ್ಲಿ ಇಟ್ಟಿದ್ದ ವಿಶೇಷ ಹೆಲ್ಮೆಟ್ ಗಣಪತಿಯನ್ನ ವಿಸರ್ಜನೆ ಮಾಡಲಾಗಿದೆ.ಇತ್ತಿಚೆಗೆ ರಸ್ತೆ ಅಪಘಾತ ಪ್ರಕರಣಗಳಲ್ಲಿ ಹೆಲ್ಮೆಟ್ ಧರಿಸದೆ ವಾಹನ ಸವಾರರ ಮರಣದ ಪ್ರಮಾಣ ಹೆಚ್ಚಳ ಹಿನ್ನೆಲೆ ವಾಹನ ಸವಾರರಲ್ಲಿ ಜಾಗೃತಿ ಮೂಡಿಸಲು ಹೆಲ್ಮೆಟ್ ಗಣಪತಿ ಯುವಕರು ಕೂರಿಸಿದ್ದರು.ಲಕ್ಕಿ ವಿನಾಯಕ ಗೆಳೆಯರ ಬಳಗದಿಂದ ತಾಯಿ ಗೌರಮ್ಮ ಮಗ ಗಣಪನಿಗೆ ಹೆಲ್ಮೆಟ್ ನೀಡುವ ಮಾದರಿ ಗಣೇಶನ ಕೂರಿಸಿ ಜಾಗೃತಿ ಮೂಡಿಸಲಾಗಿದ್ದು,ವಿಸರ್ಜನೆಗೆ ಮುನ್ನ ವಾಹನ ಸವಾರರು ಹೆಲ್ಮೆಟ್ ಧರಿಸುವಂತೆ ಘೋಷಣೆ ಕೂಗಿ ಯುವಕರು ಗಣೇಶನನ್ನ ವಿಸರ್ಜನೆ ಮಾಡಿದರು.1
- ಮುಂದಿನ ವಿಧಾನ ಸಭಾ ಚುನಾವಣೆಗೆ ರಾಮನಗರ ಕ್ಷೇತ್ರದಿಂದಲೇ ಸ್ಪರ್ದೆ - ನಿಖಿಲ್ ಕುಮಾರಸ್ವಾಮಿ ರಾಮನಗರ -- ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದಲೇ ಸ್ಪರ್ದೆ ಮಾಡುವುದಾಗಿ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಮ್ಮ ಮನದ ಇಂಗಿತ ವ್ಯಕ್ತಪಡಿಸಿದ್ದಾರೆ. ಅವರು ಇಂದು ನಗರದ ಜಿಲ್ಲಾ ಜೆಡಿಎಸ್ ಕಛೇರಿಗೆ ಬೇಟಿ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ರಾಮನಗರ ದಿಂದ ಸ್ಪರ್ಧೆ ವಿಚಾರವಾಗಿ ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೀನಿ, ಅದರಲ್ಲಿ ಅನುಮಾನ ಇಲ್ಲ. ಇಲ್ಲಿನ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಕಳೆದ ಚುನಾವಣೆಯ ಕಹಿ ನೆನಪುಗಳು ಕಾರ್ಯಕರ್ತರ ಮನಸ್ಸಿನಿಂದ ಮಾಸಿಲ್ಲ.ಅದಕ್ಕೆ ಒಂದು ಒಳ್ಳೆ ಫಲಿತಾಂಶದ ಮೂಲಕ ಅವರಿಗೆ ಉತ್ಸಾಹ ತುಂಬುವ ಮೂಲ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲೂ ನಮ್ಮ ಶಾಸಕರ ಆಯ್ಕೆಯಾಗಬೇಕು ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಸದ್ಯ ಗ್ರಾಮ ಪಂಚಾಯತಿ, ಜಿಲ್ಲಾ ಪಂಚಾಯತ ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಕಾರ್ಯಕರ್ತರಿಗೆ ಶಕ್ತಿ ತುಂಬಬೇಕು. ಅವರಿಗೆ ಶಕ್ತಿ ತುಂಬಿದಾಗ ಮಾತ್ರ ವಿಧಾನಾಸಭೆ ಹಾಗೂ ಲೋಕಸಭೆ ಚುನಾವಣೆಗೆ ಅವರು ಪ್ರಾಮಾಣಿಕವಾಗಿ ಕೆಲಸ ಮಾಡ್ತಾರೆ. ಕೆಲವೊಂದು ಕಡೆ ಜೆಡಿಎಸ್ ಗೆ ಹಿನ್ನಲೆ ಆಗಿದೆ.ಆದ್ರೆ ಹಿನ್ನಡೆ-ಮುನ್ನಡೆ ಯಾವುದು ಶಾಶ್ವತ ಅಲ್ಲ. ಅದು ಕೇವಲ ತಾತ್ಕಾಲಿಕ, ಬದಲಾವಣೆ ಜೊತೆ ನಾವು ಮತ್ತೆ ಪ್ರಯತ್ನ ಮಾಡಬೇಕು. ರಾಜ್ಯದಲ್ಲಿ ಜೆಡಿಎಸ್ ಸಂಘಟನೆಗೆ ಒತ್ತು ನೀಡುವ ನಿಟ್ಟಿನಲ್ಲಿ ರಾಜ್ಯ ಪ್ರವಾಸ ಮಾಡುವ ತೀರ್ಮಾನ ತೆಗೆದುಕೊಂಡಿದ್ದೆನೆ ಶೀಘ್ರದಲ್ಲೇ ಈ ಬಗ್ಗೆ ತೀರ್ಮಾನ ಮಾಡ್ತೀನಿ. ಸರ್ಕಾರ ಬಂದು 3 ವರ್ಷ ಆಗಿದೆ. ರೈತರ ಸಮಸ್ಯೆಗಳಿಗೆ ಪರಿಹಾರ ಸಿಗ್ತಿಲ್ಲ. ಸಿಎಂ ಮತ್ತೆ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ಕರೆದಿದ್ದಾರೆ.ಅದರಲ್ಲಿ ರೈತರ ಸಮಸ್ಯೆ ಬಗ್ಗೆ ಚರ್ಚೆ ಮಾಡ್ತೀನಿ ಅಂತ ಹೇಳಿದ್ದಾರೆ. ಆದರೆ ರಾಜ್ಯದಲ್ಲಿ ಕೇವಲ 102 ತಾಲೂಕುಗಳನ್ನ ಮಾತ್ರ ಬರಪಿಡಿತ ಅಂತ ಘೋಷಣೆ ಮಾಡಿದ್ದಾರೆ. ಉಳಿದ ತಾಲೂಕುಗಳಲ್ಲಿ ಬರ ಇಲ್ವಾ.? ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣ ಹೆಚ್ಚಾಗಿದೆ. ಹಾಗಾಗಿ ಹಲವು ಜಿಲ್ಲೆಗಳಿಗೆ ಪ್ರವಾಸ ಮಾಡಿ ರೈತರ ಸಮಸ್ಯೆ ಆಲಿಸುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು1
- ರಾಮನಗರದ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ : ನಿಖಿಲ್ ಕುಮಾರಸ್ವಾಮಿ ರಾಮನಗರ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದಿಂದಲೇ ಸ್ಪರ್ದಿಸಲಿದ್ದೇನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾದ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸ್ಪಷ್ಟವಾಗಿ ಹೇಳಿದ್ದೇನೆ, ಅದರಲ್ಲಿ ಯಾವುದೇ ಅನುಮಾನವಿಲ್ಲ. ರಾಮನಗರದ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಕಳೆದ ಚುನಾವಣೆಯ ಕಹಿ ನೆನಪು ಕಾರ್ಯಕರ್ತರ ಮನಸ್ಸಿನಿಂದ ಇನ್ನೂ ಮಾಸಿಲ್ಲ. ಅದನ್ನು ಉತ್ತಮ ಫಲಿತಾಂಶದ ಮೂಲಕ ಹೋಗಲಾಡಿಸಿ ಕಾರ್ಯಕರ್ತರಲ್ಲಿ ನೂತನ ಉತ್ಸಾಹ ತುಂಬಬೇಕಿದೆ. ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲೂ ಜೆಡಿಎಸ್ ಶಾಸಕರನ್ನು ನೋಡುವ ಗುರಿ ನಮ್ಮದಾಗಿದೆ ಎಂದರು. ಕೆಲವು ಕಡೆ ಜೆಡಿಎಸ್‌ಗೆ ಹಿನ್ನಡೆಯಾಗಿದೆ ನಿಜ, ಆದರೆ ರಾಜಕೀಯದಲ್ಲಿ ಹಿನ್ನಡೆ-ಮುನ್ನಡೆ ಶಾಶ್ವತವಲ್ಲ, ಅದು ತಾತ್ಕಾಲಿಕ. ಬದಲಾವಣೆಯೊಂದಿಗೆ ನಾವು ಮತ್ತೆ ಸಂಘಟಿತ ಪ್ರಯತ್ನ ಮಾಡುತ್ತೇವೆ. ಸದ್ಯ ಸ್ಥಳೀಯ ಚುನಾವಣೆಗೆ ಕಾರ್ಯಕರ್ತರಿಗೆ ಶಕ್ತಿ ತುಂಬುವುದು ಮುಖ್ಯ, ಅವರಿಗೆ ಶಕ್ತಿ ತುಂಬಿದಾಗ ಮಾತ್ರ ಅವರು ಎಂಎಲ್‌ಎ, ಎಂಪಿ ಚುನಾವಣೆಗಳಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೆ ಎಂದರು.1
- ಹುಳಿಯಾರಿನ ವಾಸವಿ ವಿದ್ಯಾ ಸಂಸ್ಥೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ1
- ಮುಂದಿನ ಚುನಾವಣೆಗೆ ಬಿಜೆಪಿಯಿಂದ ಕೆಆರ್ ಪುರ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರಾ ಎಂಬ ಚರ್ಚೆ ವಿಚಾರ ಮಾಜಿ ಶಾಸಕ ನಂದೀಶ್ ರೆಡ್ಡಿ ಏನ್ ಹೇಳಿದ್ರು ಗೊತ್ತಾ!1
- ಭಟ್ಕಳದಲ್ಲಿ ಗಣೇಶ ವಿಸರ್ಜನೆ ವೇಳೆ ಮಸೀದಿ, ಮದರಸಾಗೆ ಕಲ್ಲು ತೂರಾಟ ಕಿಟಕಿ ಗಾಜುಗಳಿಗೆ ಹಾನಿ; ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಭಟ್ಕಳದಲ್ಲಿ ಗಣೇಶ ವಿಸರ್ಜನೆ ವೇಳೆ ಮಸೀದಿ, ಮದರಸಾಗೆ ಕಲ್ಲು ತೂರಾಟ ಕಿಟಕಿ ಗಾಜುಗಳಿಗೆ ಹಾನಿ; ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್1