Shuru
Apke Nagar Ki App…
ಕೊಪ್ಪಳ : ಸಂಭ್ರಮದಿಂದ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಆಚರಣೆ ಕೊಪ್ಪಳ: ಕೊಪ್ಪಳದಲ್ಲಿ ಸಂಭ್ರಮದಿಂದ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ನೇರವೇರಿಸಿದರು. ನಂತರ ವಿವಿಧ ಶಾಲಾ ಮಕ್ಕಳಿಂದ ಪಥ ಸಂಚಲನ ನಡೆಸಿದರು.
STAR OF KOPPAL
ಕೊಪ್ಪಳ : ಸಂಭ್ರಮದಿಂದ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಆಚರಣೆ ಕೊಪ್ಪಳ: ಕೊಪ್ಪಳದಲ್ಲಿ ಸಂಭ್ರಮದಿಂದ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ನೇರವೇರಿಸಿದರು. ನಂತರ ವಿವಿಧ ಶಾಲಾ ಮಕ್ಕಳಿಂದ ಪಥ ಸಂಚಲನ ನಡೆಸಿದರು.
More news from ಕರ್ನಾಟಕ and nearby areas
- ನಗರದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆ ಸ್ಥಾಪಿಸಿ: ಸರಕಾರಕ್ಕೆ ಸಿವಿಸಿ ಒತ್ತಾಯ ಕೊಪ್ಪಳ: ಹೈದರಾಬಾದ್ ಕರ್ನಾಟಕ (ಹೈ-ಕ) ವಿಮೋಚನೆಗೆ ನಿರ್ಣಾಯಕ ಪಾತ್ರ ವಹಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಕೊಡುಗೆಗಳನ್ನು ಶಾಶ್ವತವಾಗಿರಿಸಲು ಕೊಪ್ಪಳದಲ್ಲಿ ಅವರ ಪ್ರತಿಮೆಯನ್ನು ಸ್ಥಾಪಿಸಬೇಕೆಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಗುರುವಾರ ಸರಕಾರಕ್ಕೆ ಒತ್ತಾಯಿಸಿದರು. ಪಕ್ಷದ ಜಿಲ್ಲಾ ಕಛೇರಿಯಲ್ಲಿ ಹೈ-ಕ ವಿಮೋಚನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಹೈ-ಕ ವಿಮೋಚನೆಗೊಂಡು ಏಳು ದಶಕಗಳಾದರೂ ಪಟೇಲ್ ಅವರ ಕೊಡುಗೆಗಳನ್ನು ಸ್ಮರಿಸಲು ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಅಂದಿನ ಹೋರಾಟದ ಸಂದರ್ಭದಲ್ಲಿ ಕವಲೂರಿನಲ್ಲಿ ನಡೆದ ಹತ್ಯಾಕಾಂಡದಲ್ಲಿ ಮಡಿದ ವೀರಯೋಧರ ನೆನಪಿಗಾಗಿ ಸ್ಮಾರಕವನ್ನು ಆ ಗ್ರಾಮದಲ್ಲಿ ಸ್ಥಾಪಿಸಬೇಕು. ಒಂದು ವೇಳೆ ಸರಕಾರ ಇದನ್ನು ಮಾಡದಿದ್ದರೆ ಜೆಡಿಎಸ್ ಈ ಕೆಲಸ ಮಾಡಲಿದೆ," ಎಂದರು. "ವೈಜನಾಥ ಪಾಟೀಲ್ ಹೈ-ಕ ಪ್ರದೇಶಕ್ಕೆ ವಿಶೇಷ ಸೌಕರ್ಯಗಳು ಬೇಕೆಂದು ಕನಸು ಕಂಡು ತಮ್ಮ ಸರ್ವಸ್ವವನ್ನೇ ಧಾರೆಯಾದವರು. ತಮ್ಮ ಆಸ್ತಿಯನ್ನು ಮಾರಿ ಈ ಭಾಗದ ಸೌಕರ್ಯಗಳಿಗೆ ಹೋರಾಡಿದರು. ಆದರೆ ಸರಕಾರ ಅವರನ್ನು ಸಂಪೂರ್ಣವಾಗಿ ಮರೆತಿದೆ. ಸಂವಿಧಾನಾತ್ಮಕವಾಗಿ ಸಿಗಬೇಕಾದ ಸವಲತ್ತುಗಳು ಇಂದಿಗೂ ಮರೀಚಿಕೆಯಾಗಿವೆ. ಹೈ-ಕ ಭಾಗದ ಏಳು ಜಿಲ್ಲೆಗಳ ಎಲ್ಲಾ ಶಾಸಕರು ಸಭೆ ಸೇರಿ ಈ ಭಾಗದ ಅಭಿವೃದ್ಧಿ ಯೋಜನೆಗಳ ಕುರಿತು ನೀಲನಕ್ಷೆ ತಯಾರಿಸಬೇಕು," ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪ ಜಡಿ ಹೇಳಿದರು. ಸರಕಾರದ ನಿರ್ಧಾರಗಳಿಗೆ ಕಾಯದೆ ಈ ಭಾಗಕ್ಕೆ ಆಗಬೇಕಾಗಿರುವ ಕೆಲಸಗಳನ್ನು ಮಾಡಲು ನಾಯಕರು ಮುಂದೆ ಬರಬೇಕೆಂದು ಯುವ ಮುಖಂಡ ಬಸವರಾಜ್ ಹೇಳಿದರು. ಹೈ-ಕ ವಿಮೋಚನಾ ಅಂಗವಾಗಿ ಹೋರಾಟಗಾರರ ಕುರಿತು ಜಿಲ್ಲಾ ಸಂಸ್ಕೃತಿ ವಿಭಾಗದ ಅಧ್ಯಕ್ಷ ಮಂಜುನಾಥ ಸೊರಟೂರ ಮಾತನಾಡಿದರು. ಹೈ-ಕ ವಿಮೋಚನ ಸಂಘರ್ಷದ ಕುರಿತು ಎಸ್ ವಿ ಸಿ ಶಿಕ್ಷಣ ಸಂಸ್ಥೆಗಳ ಸಿಇಓ ಡಾ. ಜಗದೀಶ ಅಂಗಡಿ ಉಪನ್ಯಾಸ ನೀಡಿದರು. ಜಿಲ್ಲಾ ಒಬಿಸಿ ಅಧ್ಯಕ್ಷ ಕರಿಯಪ್ಪ ಹಾಲವರ್ತಿ, ಜಿಲ್ಲಾ ಎಸ್ ಟಿ ಘಟಕ ಅಧ್ಯಕ್ಷ ರಮೇಶ ಡಂಬ್ರಳ್ಳಿ ನಗರ ಘಟಕದ ಅಧ್ಯಕ್ಷ ಸೋಮನಗೌಡ ಹೊಗರನಾಳ, ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ ಏಣಿಗಿ, ನಗರ ಘಟಕದ ಮಹಿಳಾ ಅಧ್ಯಕ್ಷೆ ನಿರ್ಮಾಲಾ ಮೇದಾರ, ನಗರ ಮಹಿಳಾ ಘಟಕದ ಗೌರವ ಅಧ್ಯಕ್ಷೆ ರತ್ನಮ್ಮ ಹಿರೇಮಠ, ತಾಲೂಕು ಎಸ್ ಸಿ ಘಟಕ ಅಧ್ಯಕ್ಷ ಸುರೇಶ ದದಗಲ್, ಜಿಲ್ಲಾ ಕೈಗಾರಿಕಾ ಅಧ್ಯಕ್ಷ ಮಾರುತಿಗೌಡ ಪೊಲೀಸ್ ಪಾಟೀಲ್, ಜಿಲ್ಲಾ ಯುವ ಘಟಕ ಅಧ್ಯಕ್ಷ ಮಂಜುನಾಥ ಮಾಲಿಪಾಟೀಲ, ಮುಖಂಡರಾದ ಭಾಗ್ಯಲಕ್ಷ್ಮಿ, ಸಿದ್ದು ಪಾಟೀಲ್, ಭರತ ಕುಮಾರ ಗೊಂದಿಹೊಸಳ್ಳಿ, ಶ್ರೀನಿವಾಸ ಗೊಂದಳ್ಳಿ, ಸೇರಿದಂತೆ ಅನೇಕ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.2
- *ಕುಷ್ಟಗಿಯಲ್ಲಿ ಎತ್ತಿನ ಬಂಡಿಗಳ ಮೂಲಕ ಸಾವಿರಾರು ರೈತರ ಬೃಹತ್ ಪ್ರತಿಭಟನೆ: ಬರ ಘೋಷಣೆಗೆ ಆಗ್ರಹ* *ಇನ್ನೂ ಎರಡು ದಿನದಲ್ಲಿ ಘೋಷಿಸದಿದ್ದರೆ ಉಗ್ರ ಹೋರಾಟ: ಶಾಸಕ ದೊಡ್ಡನಗೌಡ ಪಾಟೀಲ, ಮಾಜಿ ಸಚಿವ ರಾಜುಗೌಡ ನಾಯಕ ಎಚ್ಚರಿಕೆ* *ಕುಷ್ಟಗಿ, ಸೆ.16:* ರಾಜ್ಯ ಸರ್ಕಾರ ಕುಷ್ಟಗಿ ತಾಲೂಕನ್ನು ಮೊದಲನೇ ಮತ್ತು ಎರಡನೇ ಬರ ಪೀಡಿತ ಪಟ್ಟಿಯಿಂದ ಕೈಬಿಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕುಷ್ಟಗಿಯಲ್ಲಿ ಸಾವಿರಾರು ರೈತರು ನೂರಾರು ಎತ್ತಿನ ಬಂಡಿಗಳ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು. ಭಾರತೀಯ ಜನತಾ ಪಾರ್ಟಿ, ಕುಷ್ಟಗಿ ಮಂಡಲ ಹಾಗೂ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಅವರ ನೇತೃತ್ವದಲ್ಲಿ ಮಲ್ಲಯ್ಯ ವೃತ್ತದಿಂದ ಹಿಡಿದು ಬಸ್ ನಿಲ್ದಾಣ, ಮಾರುತಿ ವೃತ್ತ, ಭಕ್ತ ಶ್ರೇಷ್ಠ ಕನಕದಾಸ ಸರ್ಕಲ್, ಪುರಸಭೆ, ವಾಲ್ಮೀಕಿ ವೃತ್ತದ ಮಾರ್ಗವಾಗಿ ಬಸವೇಶ್ವರ ಸರ್ಕಲ್ ವರೆಗೆ ಎತ್ತಿನ ಬಂಡಿಗಳ ಬೃಹತ್ ಮೆರವಣಿಗೆ ಹಾಗೂ ಮಾನವ ಸರಪಳಿ ನಿರ್ಮಿಸಿ, ಬಹಿರಂಗ ವೇದಿಕೆಯಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. *2-3 ತಾಸು ಪಟ್ಟಣ ಸ್ತಬ್ಧ:* ಈ ಬೃಹತ್ ಎತ್ತಿನ ಬಂಡಿ ಪ್ರತಿಭಟನೆಯಿಂದ ಸುಮಾರು ಎರಡು ಮೂರು ತಾಸುಗಳ ಕಾಲ ಕುಷ್ಟಗಿ ಪಟ್ಟಣ ಸಂಪೂರ್ಣ ಸ್ತಬ್ಧವಾಗಿತ್ತು. ಇದರಿಂದ ವಾಹನ ಸವಾರರು ಮತ್ತು ನಾಗರಿಕರು ತೀವ್ರ ಪರದಾಡಿದರು. ಬಹಿರಂಗ ಸಭೆಯಲ್ಲಿ ಮಾತನಾಡಿದ ಶಾಸಕ ದೊಡ್ಡನಗೌಡ ಪಾಟೀಲ ಅವರು, "ನಮ್ಮ ತಾಲೂಕಿಗೆ ಶೇ.1 ರಷ್ಟು ಕೂಡ ನೀರಾವರಿ ಇಲ್ಲ. ನಾವು ಕೇವಲ ಒಣ ಬೇಸಾಯ, ಮಳೆ ಆಧಾರಿತ ಬೆಳೆಯನ್ನೇ ನಂಬಿಕೊಂಡಿದ್ದೇವೆ. ರೈತರು ಸಾಲ-ಸೂಲ ಮಾಡಿ ಭೂಮಿಗೆ ಬೀಜ, ಗೊಬ್ಬರ ಹಾಕಿ ಲಕ್ಷಾಂತರ ರೂ. ಖರ್ಚು ಮಾಡಿದರೂ ಸರಿಯಾದ ಸಮಯಕ್ಕೆ ಮಳೆಯಾಗದ ಕಾರಣ ಎರಡೆರಡು ಬಾರಿ ಬಿತ್ತನೆ ಮಾಡಿದ ಎಲ್ಲಾ ಬೆಳೆ ಸಂಪೂರ್ಣ ಹಾಳಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಮತ್ತು ಜಿಲ್ಲಾಧಿಕಾರಿಗಳು ಎಲ್ಲರೂ ಬಂದು ನೋಡಿ ಹೋದರೂ ಕುಷ್ಟಗಿಯನ್ನು ಪಟ್ಟಿಗೆ ಸೇರಿಸಿಲ್ಲ. ಕಾಂಗ್ರೆಸ್ ಸರ್ಕಾರ ಕೇಂದ್ರದ ಮೇಲೆ ಬೊಟ್ಟು ಮಾಡದೆ ಕೂಡಲೇ ಕುಷ್ಟಗಿಯನ್ನು ಬರ ಪೀಡಿತ ಎಂದು ಘೋಷಿಸಬೇಕು" ಎಂದು ಆಕ್ರೋಶ ವ್ಯಕ್ತಪಡಿಸಿದರು. *ಮಾಜಿ ಸಚಿವ ರಾಜುಗೌಡ ನಾಯಕ ಎಚ್ಚರಿಕೆ:* ಇನ್ನು ಎರಡು ದಿನದಲ್ಲಿ ಕುಷ್ಟಗಿ ಸೇರಿದಂತೆ ಉಳಿದ ತಾಲೂಕುಗಳನ್ನು ಬರ ಎಂದು ಘೋಷಿಸದಿದ್ದರೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸುವುದಾಗಿ ಸುರಪುರ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ರಾಜುಗೌಡ ನಾಯಕ ಎಚ್ಚರಿಕೆ ನೀಡಿದರು. "ಈ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿಯೇ ಇಲ್ಲ. ರಾಜ್ಯದಲ್ಲಿ ಕೇವಲ 101 ತಾಲೂಕನ್ನು ಮಾತ್ರ ಬರ ಪೀಡಿತ ಎಂದು ಘೋಷಣೆ ಮಾಡಿ, ಕಲ್ಯಾಣ ಕರ್ನಾಟಕದ ತಾಲೂಕುಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಬಿಜೆಪಿ ಕ್ಷೇತ್ರ ಮಾತ್ರವಲ್ಲ ಕಾಂಗ್ರೆಸ್ ಕ್ಷೇತ್ರದ ತಾಲೂಕುಗಳನ್ನೂ ಬರ ಪಟ್ಟಿಯಿಂದ ಕೈಬಿಟ್ಟಿದೆ. ಮುಂಬರುವ ಎರಡು ದಿನದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಉಳಿದ ತಾಲೂಕುಗಳನ್ನು ಬರ ಎಂದು ಘೋಷಿಸಬೇಕು" ಎಂದು ಆಗ್ರಹಿಸಿದರು. ಕೊನೆಯಲ್ಲಿ ತಹಶಿಲ್ದಾರರ ಮೂಲಕ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. *ಪ್ರತಿಭಟನೆಯಲ್ಲಿ ಇದ್ದವರು:* ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಿರೇಗೌಡ ಗೌಡ್ರ, ಬಿಜೆಪಿ ಮುಖಂಡರಾದ ಬಸವರಾಜ ಕ್ಯಾವಟರ್, ಬಸವರಾಜ ಹಳ್ಳೂರು, ದೇವೇಂದ್ರಪ್ಪ ಬಳೂಟಗಿ, ಪಕೀರಪ್ಪ ಚಳಗೇರಿ ವಕೀಲರು, ತಾಲೂಕು ಬಿಜೆಪಿ ಮಂಡಲದ ಅಧ್ಯಕ್ಷ ಮಾಹಾಂತೇಶ ಬದಾಮಿ, ರವಿಕುಮಾರ ಹಿರೇಮಠ, ಮಲ್ಲಣ್ಣ ಪಲ್ಲೇದ್, ಮಾಜಿ ಪುರಸಭೆ ಅಧ್ಯಕ್ಷ ಕಲ್ಲೇಶ ತಾಳದ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೆ.ಮಹೇಶ ಕ್ಯಾವಟರ್, ವಿನಯಕುಮಾರ ಮೇಲಿನಮನಿ, ಭರಮಗೌಡ ಬ್ಯಾಲಿಹಾಳ, ಈರಣ್ಣ ಗಜೇಂದ್ರಗಡ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ನೂರಾರು ರೈತರು ತಮ್ಮ ಎತ್ತಿನ ಬಂಡಿಗಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.1
- ನಾಳೆ ದೇಶದ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರ ಜನ್ಮದಿನ. ಕುಷ್ಟಗಿ : ದೇಶದ ಅಭಿವೃದ್ಧಿ, ಜನಸೇವೆ ಹಾಗೂ ರಾಷ್ಟ್ರ ನಿರ್ಮಾಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ದೇಶದ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರಿಗೆ ನಾಳೆ ಜನ್ಮದಿನವಾಗಿರುವುದರಿಂದ ಅವರಿಗೆ ಇಂದು ಮುಂಚಿತವಾಗಿ ಹೃತ್ಪೂರ್ವಕವಾದ ಹುಟ್ಟುಹಬ್ಬದ ಶುಭಾಶಯಗಳನ್ನು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಹಾಗೂ ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಅವರು ತಿಳಿಸಿದ್ದಾರೆ. ನಾಳೆ ಸೆಪ್ಟೆಂಬರ್ 17ರಂದು ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ದೀಪ ಬೆಳಗಿಸಿ, ಮೋದಿಜಿ ಅವರಿಗೆ ಇನ್ನಷ್ಟು ಹೆಚ್ಚು ದೇಶ ಸೇವೆ ಮಾಡುವ ಶಕ್ತಿ, ಆರೋಗ್ಯ, ಆಯುಷ್ಯ ಹಾಗೂ ಯಶಸ್ಸನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸೋಣ ಹಾಗೂ ಸೇವೆಯ ಸಂಕಲ್ಪದೊಂದಿಗೆ, ರಾಷ್ಟ್ರ ನಿರ್ಮಾಣದ ಪಯಣಕ್ಕೆ ನಮ್ಮ ನಿಮ್ಮೆಲ್ಲರ ಬೆಂಬಲ ಇರಲಿ ಎಂದು ಶಾಸಕರು ಹೇಳಿದ್ದಾರೆ.2
- ಕೂಡ್ಲಿಗಿ : ಕೋಟೆ ಬಾಯ್ಸ್ ಯುವಕರ ಸಂಘದಿಂದ ಗಣೇಶೋತ್ಸವ ನಿಮ್ಮಿತ್ತ ಮಕ್ಕಳಿಗೆ ಸ್ಪರ್ಧೆಗಳು*- *ಕೂಡ್ಲಿಗಿ : ಕೋಟೆ ಬಾಯ್ಸ್ ಯುವಕರ ಸಂಘದಿಂದ ಗಣೇಶೋತ್ಸವ ನಿಮ್ಮಿತ್ತ ಮಕ್ಕಳಿಗೆ ಸ್ಪರ್ಧೆಗಳು*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ 10ನೇ ವಾರ್ಡ್ ನಲ್ಲಿ , ಶ್ರೀಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರತಿಷ್ಠಾಪಿತಗೊಳಿಸಿರುವ. ಶ್ರೀಗಣೇಶ ದೇವರ ವೇದಿಕೆ ಮುಂಭಾಗದಲ್ಲಿ , ಮಕ್ಕಳಿಗೆ ವಿವಿದ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕೋಟೆಯ ಹಾಗೂ 10ನೇ ವಾರ್ಡಿನ ಮಕ್ಕಳು , ಬಹು ಉತ್ಸುಕತೆಯಿಂದ ಸ್ಪರ್ಧೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಸಂಭ್ರಮಿಸಿದರು. ಅಂತಿಮವಾಗಿ ಸ್ಪರ್ಧೆಯಲ್ಲಿ ವಿಚೇತರಾದವರಿಗೆ , ವೇದಿಕೆಯಲ್ಲಿ ಬಹುಮಾನ ವಿತರಿಸಲಾಯಿತು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ಸಾರ್ವಜನಿಕ ಸ್ಪಂದನೆ ಕುರಿತು ದೂರು: ಪಟ್ಟಣ ಪಂಚಾಯತ್‌ಗೆ ಲೋಕಾಯುಕ್ತ ಭೇಟಿ ಕೂಡ್ಲಿಗಿ: ಪಟ್ಟಣ ಪಂಚಾಯತ್ ಕಚೇರಿಗೆ ಬುದುವಾರ ದಿಢೀರನೆ ವಿಜಯನಗರ–ಬಳ್ಳಾರಿ ವಿಭಾಗದ ಲೋಕಾಯುಕ್ತರು ಡಿವೈಎಸ್ಪಿ ಎಸ್.ಎಸ್.ಬೀಳಗಿ, ಚಿತ್ರದುರ್ಗ ಡಿವೈಎಸ್ಪಿ ಕಲಾವತಿ ನೇತೃತ್ವದಲ್ಲಿ ಚಿತ್ರದುರ್ಗದ ಸಿಪಿಐಗಳಾದ ಬಸವರಾಜ ಪಾಟೀಲ್, ಸುಮಾ ಗೊರೆಬಾಳ ಸೇರಿದಂತೆ ಒಟ್ಟು ೧೬ ಸಿಬ್ಬಂದಿಯು ದಿಢೀರ್ ಆಗಮಿಸಿದ್ದರು. ಕಛೇರಿಗೆ ಸಂಬಂಧಿಸಿದ ಕಡತಗಳನ್ನು ಮುಖ್ಯಾಧಿಕಾರಿ ದಾದಾಪೀರ್ ಮೂಲಕ ಕಚೇರಿಯ ಆಡಳಿತಾತ್ಮಕ ಕಾರ್ಯವೈಖರಿ ಹಾಗೂ ವಿವಿಧ ದಾಖಲೆಗಳನ್ನು ಪರಿಶೀಲಿಸಿದರು. ಪಟ್ಟಣ ಪಂಚಾಯತ್ ಕಚೇರಿಯ ಆಡಳಿತ ವ್ಯವಸ್ಥೆ ಸರಿಯಾಗಿಲ್ಲ ಹಾಗೂ ಸಾರ್ವಜನಿಕರ ಅಹವಾಲುಗಳಿಗೆ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಈ ಭೇಟಿ ನಡೆಸಿದ್ದಾರೆ ಎನ್ನಲಾಗಿದೆ. ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿ ದಿಢೀರ್ ಭೇಟಿ ನಂತರ ಮಾಹಿತಿ ಕೇಳಲು, ದಾಖಲೆ ಪರಿಶೀಲಿಸಲು ಮುಂದಾಗಿದ್ದರಿಂದ ಪಪಂ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಶಾಕ್ ನೀಡಿದಂತಾಗಿತ್ತು. ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಆಗಮಿಸಿದ್ದ ವೇಳೆ ಪಪಂ ಮುಖ್ಯಾಧಿಕಾರಿ ಎಚ್.ದಾದಾಪೀರ್ ಸೇರಿ ನಾನಾ ವಿಭಾಗದ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದು, ದಾಖಲೆ ಪರಿಶೀಲನೆಗೆ ಸಹಕರಿಸಿದರು. ಬೆಳಗ್ಗೆ 10 ಗಂಟೆಯಿಂದ ಸಂಜೆ 5ಗಂಟೆಯವರೆಗೆ ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದರು. ನಾನಾ ದೂರು ಆಧರಿಸಿ ಲೋಕಾಯುಕ್ತದಲ್ಲಿ ಸ್ವಯಂ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಇದಲ್ಲದೆ, ಕೊಟ್ಟೂರು ಪಪಂ ಕಚೇರಿಯಲ್ಲೂ ಸಹ ಲೋಕಾಯುಕ್ತ ಅಧಿಕಾರಿಗಳು, ಸಿಬ್ಬಂದಿ ದಾಖಲೆ ಪರಿಶೀಲನೆ ನಡೆಸಲಾಗಿದೆ ಎಂದು ಬಳ್ಳಾರಿ ಲೋಕಾಯುಕ್ತ ಡಿವೈಎಸ್ಪಿ ಎಸ್.ಎಸ್.ಬೀಳಗಿ ಅವರು ಮಾಹಿತಿ ತಿಳಿಸಿದರು.1
- ಮರ್ಲಾನಹಳ್ಳಿಯಲ್ಲಿ ಮಹಾತ್ಮ ಗಾಂಧಿ ಗ್ರಾಮ ಪಂಚಾಯತಿ ವತಿಯಿಂದ ಸ್ವಚ್ಛತಾ ಪ್ರತಿಜ್ಞಾವಿಧಿ1
- ಹಿರೇಓತಗೇರಿ ಗ್ರಾಮದಲ್ಲಿ ಭಕ್ತಿಭಾವದಿಂದ ವಿಘ್ನನಿವಾರಕನ ವಿಸಜ೯ನೆ ಇಳಕಲ್ ; ತಾಲೂಕಿನ ಹಿರೇಓತಗೇರಿ ಗ್ರಾಮದಲ್ಲಿಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಬಳಗದ ವತಿಯಿಂದ ಪ್ರತಿಷ್ಠಾಪನೆ ಮಾಡುದ್ದ ಗಣೇಶನನ್ನ ಇಂದು ಭಕ್ತಿ ಭಾವದಿಂದ ಪೂಜಿಸಿ ವಿಸಜ೯ನೆ ಮಾಡಿದರು.3
- ಕೊಪ್ಪಳ : ಸಂಭ್ರಮದಿಂದ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಆಚರಣೆ ಕೊಪ್ಪಳ: ಕೊಪ್ಪಳದಲ್ಲಿ ಸಂಭ್ರಮದಿಂದ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ನೇರವೇರಿಸಿದರು. ನಂತರ ವಿವಿಧ ಶಾಲಾ ಮಕ್ಕಳಿಂದ ಪಥ ಸಂಚಲನ ನಡೆಸಿದರು.1