Shuru
Apke Nagar Ki App…
ಕೆಎಸ್ಆರ್ಟಿಸಿ ಸಿಬ್ಬಂದಿಯಿಂದ ಅನುಚಿತವರ್ತನೆ ವಿದ್ಯಾರ್ಥಿಗಳ ಪ್ರತಿಭಟನೆ
ಖಡಕ್ ಕನ್ನಡ ನ್ಯೂಸ್
ಕೆಎಸ್ಆರ್ಟಿಸಿ ಸಿಬ್ಬಂದಿಯಿಂದ ಅನುಚಿತವರ್ತನೆ ವಿದ್ಯಾರ್ಥಿಗಳ ಪ್ರತಿಭಟನೆ
More news from Belagavi and nearby areas
- ಕೆಎಸ್ಆರ್ಟಿಸಿ ಸಿಬ್ಬಂದಿಯಿಂದ ಅನುಚಿತವರ್ತನೆ ವಿದ್ಯಾರ್ಥಿಗಳ ಪ್ರತಿಭಟನೆ1
- ಮುಧೋಳ : ಬಾಗಲಕೋಟೆ ಕಾನಿಪದಲ್ಲಿ ಮುಧೋಳ ಬಗರದ ಪತ್ರಕರ್ತನಿಗೆ ಸನಗಮಾಯ ಮಾಡಲಾಯಿತು ಮುಧೋಳ : ಬಾಗಲಕೋಟೆ ಕಾನಿಪದಲ್ಲಿ ಮುಧೋಳ ಬಗರದ ಪತ್ರಕರ್ತನಿಗೆ ಸನಗಮಾಯ ಮಾಡಲಾಯಿತು1
- ಯಡಹಳ್ಳಿ ಸರಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ಬುಕ್, ಲೇಖನಿ ವಿತರಣೆ ಬೀಳಗಿ: ತಾಲೂಕಿನ ಯಡಹಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಸಮಾಜಸೇವಕ ಉಮೇಶ್ ಚೆನ್ನಿ ಅವರು ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್‌ಬುಕ್ ಹಾಗೂ ಲೇಖನಿಗಳನ್ನು ವಿತರಿಸಿದರು,ನವಚೇತನ ಚಾರಿಟೇಬಲ್ ಟ್ರಸ್ಟ್ ಪಾರ್ ಡಿಸೆಬಲ್ಡಸ್ (ರಿ)ರಾಮನಗರ (ಬೆಂಗಳೂರು) ಶ್ರೀ ಬಸವೇಶ್ವರ ಗ್ರಾಮೀಣಾಭಿವೃದ್ಧಿ ಸಂಘ(ರಿ) ಅನಗವಾಡಿ (ಬೀಳಗಿ) ಇವರ ಸಂಯೋಗದಲ್ಲಿ ನಡೆದು ಕಾರ್ಯಕ್ರಮ.ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶ್ರದ್ಧೆ, ಶಿಸ್ತು ಮತ್ತು ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.4
- ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಬೀಳಗಿ-ಯಡಹಳ್ಳಿ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಉಚಿತ ನೋಟ್‌ಬುಕ್ ಹಾಗೂ ಲೇಖನಿ ವಿತರಣೆ : ವ್ಯಸನ ಮುಕ್ತ ದಿನಾಚರಣೆಯ ಅಂಗವಾಗಿ ಬೀಳಗಿ ತಾಲೂಕಿನ ಯಡಹಳ್ಳಿ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನವಚೇತನ ಚಾರಿಟೇಬಲ್ ಟ್ರಸ್ಟ್ (ರಿ), ರಾಮನಗರ (ಬೆಂಗಳೂರು) ಹಾಗೂ ಶ್ರೀ ಬಸವೇಶ್ವರ ವಿಕಲಚೇತನ ಗ್ರಾಮೀಣಾಭಿವೃದ್ಧಿ ಸಂಸ್ಥೆ (ರಿ), ಅನಗವಾಡಿ (ಬೀಳಗಿ) ಇವರ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್‌ಬುಕ್ ಹಾಗೂ ಲೇಖನಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಹನುಮಂತ ಅಶೋಕ್ ಹನಮರ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಸದಾಶಿವ ನಂದಗಾವಿ, ದೊಡ್ಡಣ್ಣ ದೇಸಾಯಿ, ಜಿತೇಂದ್ರ ಪಾಟೀಲ್, ಚಾಂದ್ ಸಾಬ್ ವಿರೋಜಿ, ಮೌಲಾಸಾಬ್ ಜೈನಾಪುರ ಹಾಗೂ ತಾಲೂಕು ವಿಕಲಚೇತನರ ಸಂಸ್ಥೆಯ ಮಾರ್ಗದರ್ಶಕರಾದ ಭೀಮಸಿ ದೇವನಾಳ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಬಸವೇಶ್ವರ ವಿಕಲಚೇತನ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಉಮೇಶ್ ಎಂ. ಚನ್ನಿ ಪ್ರಾಸ್ತಾವಿಕವಾಗಿ ಮಾತನಾಡಿ, "ಇಂದಿನ ಮಕ್ಕಳೇ ಮುಂದಿನ ದೇಶದ ಪ್ರಜೆಗಳು. ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವೂ ಅಗತ್ಯ. ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತಿರುವ ನೋಟ್‌ಬುಕ್‌ಗಳ ಮೇಲೆ ಮಹನೀಯರು ಹಾಗೂ ಇತಿಹಾಸಕಾರರ ಭಾವಚಿತ್ರ ಮತ್ತು ಅವರ ಪರಿಚಯವಿರುವುದರಿಂದ ಮಕ್ಕಳು ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವ್ಯಸನಗಳಿಂದ ದೂರವಿದ್ದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು," ಎಂದು ಕಿವಿಮಾತು ಹೇಳಿದರು. ಬಳಿಕ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್‌ಬುಕ್ ಹಾಗೂ ಲೇಖನಿಗಳನ್ನು ವಿತರಿಸಲಾಯಿತು. ಶಿಕ್ಷಣಕ್ಕೆ ಉತ್ತೇಜನ ನೀಡುವುದರ ಜೊತೆಗೆ ವ್ಯಸನಮುಕ್ತ ಸಮಾಜ ನಿರ್ಮಾಣದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಹ ಶಿಕ್ಷಕರಾದ ಆನಂದ ಬಿರಾದಾರ್ ಸ್ವಾಗತಿಸಿದರು. ಜಗದೀಶ ಮುಚ್ಛಂಡಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಇಂತಹ ಸಮಾಜಮುಖಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಆಸಕ್ತಿ ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸಲು ಸಹಕಾರಿಯಾಗಲಿವೆ ಎಂದು ಅಭಿಪ್ರಾಯ ವ್ಯಕ್ತವಾಯಿತು.4
- ಕಿಸಾನ್ ಕ್ರೆಡಿಟ್ ಕಾರ್ಡ್ ತಪ್ಪದೇ ಪಡೆದುಕೊಳ್ಳಿ: ಶಾಸಕ ಭೀಮಸೇನ ಚಿಮ್ಮನಕಟ್ಟಿ ಗುಳೇದಗುಡ್ಡ: ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಕಿಸಾನ್ ಕ್ರೆಡಿಟ್ ಕಾರ್ಡ್ ತಪ್ಪದೇ ಪಡೆಯಬೇಕು. ಈ ಕಾರ್ಡನಿಂದ ರೈತರು, ಮೀನುಗಾರರಿಗೆ ಅವಶ್ಯವಾದ ಸಾಲ ಸೌಲಭ್ಯ ಸೇರಿದಂತೆ ಅನೇಕ ಸೌಲಭ್ಯಗಳು ದೊರೆಯುತ್ತವೆ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು. ಅವರು ಗುರುವಾರ ಸಂಜೆ ಪಟ್ಟಣದ ಸಾಲೇಶ್ವರ ಕಲ್ಯಾಣಮಂಟಪದಲ್ಲಿ ಜಿಲ್ಲಾಪಂಚಾಯಿತಿ, ಜಿಲ್ಲಾಡಳಿತ ಹಾಗೂ ಮೀನುಗಾರಿಕಾ ಇಲಾಖೆ ಹಾಗೂ ಮೀನುಗಾರರ ಸಹಕಾರಿ ಸಂಘಗಳ ವತಿಯಿಂದ ಹಮ್ಮಿಕೊಂಡಿದ್ದ ಮೀನು ಕೃಷಿಕರ ದಿನಾಚರಣೆ ಹಾಗೂ ಮೀನುಗಾರರಿಗೆ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಅಲ್ಲದೇ ಮೀನು ಹಿಡಿಯಲು ಹೋದಾಗ ದುರ್ಘಟನೆಗಳು ಸಂಭವಿಸಿ ಮೃತಪಟ್ಟವರಿಗೆ ರಾಜ್ಯ ಸರ್ಕಾರದಿಂದ 10 ಲಕ್ಷ ಹಾಗೂ ಕೇಂದ್ರ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ದೊರೆಯುತ್ತದೆ ಎಂದರು. ಮೀನುಗಾರಿಕೆ ಉದ್ಯಮ ಅಭಿವೃದ್ಧಿಪಡಿಸಿಕೊಳ್ಳಲು ಸರ್ಕಾದಿಂದ ಸಾಕಷ್ಟು ಯೋಜನೆಗಳು ದೊರೆಯುವ ಯೋಜನೆಗಳು ಬಗ್ಗೆ ನಿಮಗೆ ಅರಿವು ಹೊಂದಿರಬೇಕು. ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಂಡು ಮೀನು ಸಾಗಾಣಿಕೆಯಲ್ಲಿ ಪ್ರಗತಿ ಸಾಧಿಸಬೇಕು. ಜೊತೆಗೆ ಮೀನುಗಾರರು ದುಶ್ಚಟದಿಂದ ದೂರವಿದ್ದು, ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಮೀನುಗಾರಿಕೆ ಉಪನಿರ್ದೇಶಕ ಮಹೇಶ ಪಿ, ಸಹಾಯಕ ನಿರ್ದೇಶಕ ಪ್ರಕಾಶ ಜಮಖಂಡಿ, ಕೃಷಿ ಅಧಿಕಾರಿ ಆನಂದ ಗೌಡರ, ವೈ.ಆರ್. ಹೆಬ್ಬಳ್ಳಿ, ರಜಾಕ ಕುದರಿ, ಶಿವನಯ್ಯ ಮಳ್ಳಿಮಠ, ಚಿದಾನಂದಸಾ ಕಾಟವಾ, ಇಬ್ರಾಹಿಂ ಹಳ್ಳಿ, ಮದ್ದಾನೆಪ್ಪ ಶಿಳ್ಳಿಕ್ಯಾತರ, ಸದಾಶಿವ ಮರಡಿ ಹಾಗೂ ಮೀನುಗಾರರ ಸಂಘದ ಸದಸ್ಯರು ಇದ್ದರು.3
- ನಾಳೆ ರಾಜ್ಯಾದ್ಯಂತ ಪೊಲೀಸ್ ನೇಮಕಾತಿ ಪರೀಕ್ಷೆ ಜಮಖಂಡಿಯಲ್ಲಿ ಪೊಲೀಸ್ ಪರೀಕ್ಷೆಗೆ ಸಕಲ ಸಿದ್ಧತೆ ಪರೀಕ್ಷಾ ಕೇಂದ್ರಗಳಿಗೆ ಎಸ್‌ಪಿ ಸಿದ್ದಾರ್ಥ ಗೋಯಲ್ ಭೇಟಿ1
- ತ್ಯಾಜ್ಯದಿಂದ ಅತ್ಯುತ್ತಮ ಸ್ಪರ್ಧೆ: ಮಕ್ಕಳ ಕೈಯಲ್ಲಿ ಹಸಿರು ಕ್ರಾಂತಿ ಅಥಣಿ : ಇಂದು ಮಕ್ಕಳು ತ್ಯಾಜ್ಯವನ್ನು ಸಂಪತ್ತಾಗಿ ಪರಿವರ್ತಿಸುವ ಮೂಲಕ ಪರಿಸರದ ಬಗ್ಗೆ ಜವಾಬ್ದಾರಿ ಹೊಂದಿದ್ದಾರೆ ಎಂಬುದನ್ನು ತೋರಿಸಿದ್ದಾರೆ. ಒಂದೊಂದು ಕುಂಡವು ಮಗುವಿನ ಶ್ರಮ ಮತ್ತು ಸೃಜನಶೀಲತೆಗೆ ಸಾಕ್ಷಿಯಾಗಿದೆ. ಇಂತಹ ಚಟುವಟಿಕೆಗಳಿಂದ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ ಮತ್ತು ಪರಿಸರ ಪ್ರಜ್ಞೆ ಬೆಳೆಯುತ್ತದೆ" ಎಂದು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಾಮಾಜಿಕ ಅರಣ್ಯ ಅಧಿಕಾರಿ ಮಲ್ಲಪ್ಪ ತೇಲಿ ಅವರು ಅಭಿಪ್ರಾಯಪಟ್ಟರು. ಅವರು ಪರಿಸರ ಸಂರಕ್ಷಣೆಯ ಮಹತ್ವವನ್ನು ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಲ್ಲಿ ಮೂಡಿಸುವ ಉದ್ದೇಶದಿಂದ ಸ್ಥಳೀಯ ನಿವೇದಿತಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ರಂದು "ತ್ಯಾಜ್ಯದಿಂದ ಅತ್ಯುತ್ತಮ - Best Out of Waste"_ಎಂಬ ವಿಶೇಷ ಸೃಜನಶೀಲ ಕುಂಡ ತಯಾರಿಕೆ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡುತ್ತಾ "ತ್ಯಾಜ್ಯವನ್ನು ಕಡಿಮೆ ಮಾಡೋಣ - ಭೂಮಿಯನ್ನು ಹಸಿರಾಗಿಸೋಣ" ಎಂಬ ಘೋಷವಾಕ್ಯದೊಂದಿಗೆ ನಡೆದ ಈ ಕಾರ್ಯಕ್ರಮಕ್ಕೆ 1 ರಿಂದ 5 ನೇ ತರಗತಿಯವರೆಗಿನ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದು ವಿಶೇಷ ಎಂದರು.1
- ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯ ವಿರೋಧಿಸಿ ಪ್ರತಿಭಟನೆ1