Shuru
Apke Nagar Ki App…
ರೌಡಿ ಮಂಜುನಾಥ್ ಎಂಬಾತ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಘಟನೆಯಲ್ಲಿ ಆತ ದಾಂದಲೆ ಸೃಷ್ಟಿಸಿದ್ದು, ಇದರ ಜೊತೆಗೆ ಪೊಲೀಸರಿಗೂ ಅವಾಜ್ ಹಾಕಿರುವ ಸಂಗತಿ ತಿಳಿದುಬಂದಿದೆ.
Veega News Kannada
ರೌಡಿ ಮಂಜುನಾಥ್ ಎಂಬಾತ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಘಟನೆಯಲ್ಲಿ ಆತ ದಾಂದಲೆ ಸೃಷ್ಟಿಸಿದ್ದು, ಇದರ ಜೊತೆಗೆ ಪೊಲೀಸರಿಗೂ ಅವಾಜ್ ಹಾಕಿರುವ ಸಂಗತಿ ತಿಳಿದುಬಂದಿದೆ.
More news from ಕರ್ನಾಟಕ and nearby areas
- ರಾಜ್ಯದ ರೈತರಿಗೆ ಸಂಕಷ್ಟ ಉಂಟುಮಾಡುವ ವಿದ್ಯುತ್ ಖಾಸಗೀಕರಣಕ್ಕೆ ಟಾಟಾ ಕಂಪನಿ ಅರ್ಜಿ ಸಲ್ಲಿಸಿದೆ ಎಂದು ಮಂಡ್ಯದಲ್ಲಿ ನಡೆದ ಸಭೆಯಲ್ಲಿ ಆಗ್ರಹಿಸಲಾಗಿದೆ. ಈ ಖಾಸಗೀಕರಣದಿಂದ 'ಭಾಗ್ಯ ಲಕ್ಷ್ಮಿ', 'ಗೃಹಜ್ಯೋತಿ' ಯೋಜನೆಗಳು ಹಾಗೂ ರೈತರ ಪಂಪ್‌ಸೆಟ್‌ಗಳಿಗೆ ಸರ್ಕಾರ ನೀಡುವ ವಿದ್ಯುತ್ ಕಡಿತಗೊಳ್ಳಲಿದೆ ಎಂದು ರೈತ ಸಂಘಟನೆಗಳು ಆತಂಕ ವ್ಯಕ್ತಪಡಿಸಿವೆ. ಈ ಸಂಬಂಧ ರಾಜ್ಯ ಸರ್ಕಾರವು ಟಾಟಾ ಕಂಪನಿಯ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ಒತ್ತಾಯಿಸಲಾಗಿದೆ. ಈ ಸಭೆಯಲ್ಲಿ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಇಂಡುವಾಳು ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಮಂಜೇಶ್ ಗೌಡ, ಕನ್ನಡ ಸೇನೆ ಅಧ್ಯಕ್ಷ ಮಂಜುನಾಥ್, ಡಿಎಸ್‌ಎಸ್ ಜಿಲ್ಲಾ ಸಂಚಾಲಕ ರವಿಚಂದ್ರ ಗಂಜಾಂ, ಹತ್ತಳ್ಳಿ ದೇವರಾಜ್ ಮತ್ತು ಮಿಲಿಟರಿ ಕುಮಾರ ಮುಂತಾದವರು ಉಪಸ್ಥಿತರಿದ್ದರು. ರೈತರಿಗೆ ತೀವ್ರ ಸಂಕಷ್ಟ ತಂದೊಡ್ಡುವ ವಿದ್ಯುತ್ ಖಾಸಗೀಕರಣದ ಹಿಂದಿನ ಟಾಟಾ ಕಂಪನಿಯ ಹುನ್ನಾರವನ್ನು ಖಂಡಿಸಲಾಯಿತು.1
- ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಡಿ. ಹಲಸಹಳ್ಳಿ ಗ್ರಾಮದ ಬಳಿ ಇರುವ ಗವಿಮಠಕ್ಕೆ ಮಠಾಧ್ಯಕ್ಷರಾದ ಷಡಕ್ಷರ ಸ್ವಾಮೀಜಿಯವರು ಹೊಸ ರೂಪ ನೀಡಿ ಇತಿಹಾಸ ಸೃಷ್ಟಿಸಿದ್ದಾರೆ ಎಂದು ತುಮಕೂರಿನ ಸಿದ್ದಗಂಗಾ ಮಠದ ಮಠಾಧೀಶರಾದ ಸಿದ್ದಲಿಂಗ ಮಹಾಸ್ವಾಮೀಜಿಯವರು ಅತೀವ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಭಕ್ತರೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಂಡು, ಭಕ್ತರು ನೀಡಿದ ಸಹಕಾರದಿಂದ ಮಠದ ಅಭಿವೃದ್ಧಿಗಾಗಿ ಷಡಕ್ಷರ ಸ್ವಾಮೀಜಿಯವರು ನಿರಂತರವಾಗಿ ಶ್ರಮಿಸಿದ್ದಾರೆ. ಗವಿಮಠದಲ್ಲಿ ಮೇ ಒಂದರಂದು ನಡೆದ ಕಳಶಾರೋಹಣ, ರಾಜಗೋಪುರ, ಬಸವ ವಿಗ್ರಹ, ಶ್ರೀ ಷಡಕ್ಷರ ಮಂಗಳ ಮಂಟಪ, ಹಾಗೂ ಅನ್ನದಾಸೋಹ ಕಟ್ಟಡದ ಉದ್ಘಾಟನೆ ಮತ್ತು ಧಾರ್ಮಿಕ ಸಭೆಗಳಿಗೆ ಇಂದಿಗೆ 48 ದಿನಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಬಸವೇಶ್ವರ ಸ್ವಾಮಿಗೆ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಿದ್ದಗಂಗಾ ಶ್ರೀಗಳು, ಹಲಸಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತರ ಬೆಂಬಲದಿಂದ ಷಡಕ್ಷರ ಸ್ವಾಮಿಗಳು ಕಳೆದ ಮೇ ಒಂದರಂದು ಅದ್ದೂರಿಯಾಗಿ ಕಾರ್ಯಕ್ರಮವನ್ನು ನಡೆಸಿದ್ದಾರೆ ಎಂದು ಹೇಳಿದರು. ಕಳೆದ ಕೆಲವು ವರ್ಷಗಳಿಂದ ಅವರು ತುಂಬಾ ಶ್ರಮಪಟ್ಟು, ಹಿಂದೆ ಬಂಡೆಗಳಿಂದ ತುಂಬಿ, ಸಾರ್ವಜನಿಕ ಸಂಪರ್ಕ ಸೌಲಭ್ಯಗಳಿಲ್ಲದ ಗವಿಮಠಕ್ಕೆ ಹೊಸ ರೂಪವನ್ನು ತಂದುಕೊಟ್ಟಿದ್ದಾರೆ. ಈಗ ಭಕ್ತರಿಗೆ ಶುಭ ಕಾರ್ಯಗಳನ್ನು ಮಾಡಲು ಅನುಕೂಲವಾಗುವಂತೆ ಕಲ್ಯಾಣ ಮಂಟಪ, ಅನ್ನದಾಸೋಹ ಗೃಹ ನಿರ್ಮಿಸಿರುವುದಲ್ಲದೆ, ರಾಜಗೋಪುರ ನಿರ್ಮಾಣ, ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ, ಗಿಡಮರಗಳನ್ನು ಬೆಳೆಸಿ ಸುಂದರವಾದ ವಾತಾವರಣ ನಿರ್ಮಿಸಿ ಹಲವಾರು ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುತ್ತಾ ಮಠದ ಶೋಭೆಯನ್ನು ಹೆಚ್ಚಿಸಿದ್ದಾರೆ. ತಾನು ಚಿಕ್ಕವನಿದ್ದಾಗ ಈ ಮಠಕ್ಕೆ ಬಂದಾಗ ಜಡೆ ಸ್ವಾಮಿಗಳು ಈ ಮಠದಲ್ಲಿದ್ದರು ಎಂಬುದನ್ನು ಸ್ಮರಿಸಿದ ಸಿದ್ದಗಂಗಾ ಶ್ರೀಗಳು, ಆಗಿನಿಂದಲೂ ಕನಕಪುರದ ದೇಗುಲ ಮಠಕ್ಕೂ, ಈ ಮಠಕ್ಕೂ ಅವಿನಾಭಾವ ಸಂಬಂಧವಿದೆ. ಈಗಲೂ ಆ ಬಾಂಧವ್ಯ ಮುಂದುವರೆದಿರುವುದು ತುಂಬಾ ಸಂತೋಷದ ವಿಷಯ ಎಂದು ಹೇಳಿದರು. ಈ ಸ್ಥಳವು ಷಡಕ್ಷರ ದೇವನ ತಪೋನಿಷ್ಠ ಸ್ಥಳವಾಗಿದ್ದು, ರಾಜಶೇಖರ ವಿಲಾಸ ಎಂಬ ಗ್ರಂಥವನ್ನು ಬರೆದ ಸ್ಥಳವೆಂದು ತಿಳಿದುಬಂದಿದೆ. ಹಲವಾರು ಪುಣ್ಯ ಪುರುಷರ ತಪೋಭೂಮಿಯಾಗಿದ್ದ ಈ ಮಠವನ್ನು ಇನ್ನಷ್ಟು ಅಭಿವೃದ್ಧಿಪಡಿಸುವಲ್ಲಿ ಷಡಕ್ಷರ ಸ್ವಾಮೀಜಿಗೆ ನಿಮ್ಮ ಬೆಂಬಲ ಮತ್ತು ಸಹಕಾರ ಹೀಗೆ ಇರಲಿ ಎಂದು ಭಕ್ತಾದಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಗವಿಮಠದ ಷಡಕ್ಷರ ಸ್ವಾಮೀಜಿಯವರು ಸಿದ್ದಗಂಗಾ ಶ್ರೀಗಳಿಗೆ ಪಾದಪೂಜೆಯನ್ನು ನೆರವೇರಿಸಿ ಆಶೀರ್ವಾದ ಪಡೆದರು. ಈ ಸಮಯದಲ್ಲಿ ಅಪಾರ ಭಕ್ತಾದಿಗಳು ಆಗಮಿಸಿ ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆದ ನಂತರ ಬಂದ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕನಕಪುರ ದೇಗುಲ ಮಠದ ಮುಮ್ಮಡಿ ನಿರ್ವಾಣ ಸ್ವಾಮಿಗಳು, ಡಾ. ಚನ್ನಬಸವಸ್ವಾಮಿಗಳು, ಆಂಗ್ರಾಪುರದ ಬಸವಲಿಂಗ ದೇಶಿ ಕೇಂದ್ರಸ್ವಾಮೀಜಿಗಳು, ಹೊಸಹಳ್ಳಿ ಮಠದ ಓಂಕಾರ ಸ್ವಾಮಿಗಳು, ಮೇದಿನಿ ಗ್ರಾಮ ಮಠದ ಶಿವಲಿಂಗ ಸ್ವಾಮಿಗಳು, ಪುರಿಗಾಲಿ ಮಠದ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಸೇರಿದಂತೆ ಹರಚರ ಮೂರ್ತಿಗಳು ಹಾಗೂ ಡಿ. ಹಲಸಳ್ಳಿ ಗ್ರಾಮಸ್ಥರು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.1
- ಕೊಳ್ಳೇಗಾಲದ ಮೈಸೂರು ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಮತ್ತು ಭಾರತೀಯ ಸ್ಟೇಟ್ ಬ್ಯಾಂಕ್ (SBI) ಎಟಿಎಂಗಳಲ್ಲಿ ಪದೇ ಪದೇ ನಗದು ಇಲ್ಲದಿರುವುದು ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ. ಈ ರಸ್ತೆಯು ಹೆಚ್ಚು ಜನದಟ್ಟಣೆ ಇರುವ ಪ್ರದೇಶವಾಗಿದ್ದು, ಇಲ್ಲಿಯ ಎಟಿಎಂಗಳನ್ನು ನಂಬಿ ಬರುವ ಸಾರ್ವಜನಿಕರಿಗೆ ನಿರಂತರವಾಗಿ ಈ ಸಮಸ್ಯೆ ಕಾಡುತ್ತಿದೆ. ಅಗತ್ಯ ಕೆಲಸಗಳಿಗಾಗಿ ಅಥವಾ ತುರ್ತು ಸಂದರ್ಭದಲ್ಲಿ ಹಣ ಪಡೆಯಲು ಎಟಿಎಂಗಳಿಗೆ ಬರುವ ಗ್ರಾಹಕರು, ಹಣ ಸಿಗದೆ ಬರಿಗೈಯಲ್ಲಿ ಹಿಂತಿರುಗುವಂತಾಗಿದೆ. ಕಾರ್ಡ್ ಹಿಡಿದು ಎಟಿಎಂ ಕೇಂದ್ರಗಳಿಗೆ ಹೋದರೆ 'ನಗದು ಲಭ್ಯವಿಲ್ಲ' (Cash out of service) ಎಂಬ ಸಂದೇಶವೇ ಅವರನ್ನು ಸ್ವಾಗತಿಸುತ್ತದೆ. ಈ ನಿರಂತರ ಸಮಸ್ಯೆಯಿಂದ ಬೇಸತ್ತ ಸಾರ್ವಜನಿಕರು, ಸಂಬಂಧಪಟ್ಟ ಬ್ಯಾಂಕ್ ಅಧಿಕಾರಿಗಳು ಕೂಡಲೇ ಎಟಿಎಂಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿರಂತರವಾಗಿ ನಗದು ಲಭ್ಯವಿರುವಂತೆ ನೋಡಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.1
- ತುಮಕೂರು ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ರಾಜ್ಯ ಪೊಲೀಸ್ ಗೃಹಮಂಡಳಿಯಿಂದ ನಿರ್ಮಿಸಲಾಗುತ್ತಿರುವ ಪೊಲೀಸ್ ಸಿಬ್ಬಂದಿಗಳ ವಸತಿ ಗೃಹಗಳ ಕಾಮಗಾರಿ ತೀರಾ ಕಳಪೆಯಾಗಿದೆ ಎಂದು ರಾಜ್ಯ ರೈತಸಂಘ ಹಾಗೂ ಹಸಿರುಸೇನೆಯ ತಾಲ್ಲೂಕು ಅಧ್ಯಕ್ಷ ಕಣಕೂರು ಚಂದ್ರಶೇಖರ್ ಮತ್ತು ಡಿ.ಎಸ್.ಎಸ್ ತಾಲ್ಲೂಕು ಸಂಚಾಲಕ ಕೃಷ್ಣ ಮಾದಿಗ ಗಂಭೀರ ಆರೋಪ ಮಾಡಿದ್ದಾರೆ. ಕಾಮಗಾರಿಯನ್ನು ಪರಿಶೀಲಿಸಿದ ಕಣಕೂರು ಚಂದ್ರಶೇಖರ್ ಅವರು, ಕಟ್ಟಡದ ಎಸ್ಟಿಮೇಟ್ ಕೇಳಿದರೆ ಎಸ್.ಪಿ. ಕಚೇರಿಯಲ್ಲಿದೆ ಎಂದು ಸಬೂಬು ಹೇಳಲಾಗುತ್ತಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಇಡಬಹುದಾಗಿದ್ದ ದಾಖಲೆಗಳನ್ನು ಎಸ್.ಪಿ. ಕಚೇರಿಯಲ್ಲೇಕೆ ರಕ್ಷಣೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ. ಸೈಟ್ ಎಂಜಿನಿಯರ್ ಬಳಿ ಯಾವುದೇ ದಾಖಲಾತಿಗಳಿಲ್ಲ, ಇಲ್ಲಿ ಕೇಳುವವರಿಲ್ಲ ಹೇಳುವವರಿಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚರಂಡಿ ತೆಗೆದ ಮಣ್ಣನ್ನು ತಂದು ತುಂಬಿಸಲಾಗಿದೆ ಮತ್ತು ಕಲ್ಲಿನಿಂದ ಕಟ್ಟಬೇಕಾದ ಅಡಿಪಾಯವನ್ನು ಸಿಮೆಂಟ್ ಇಟ್ಟಿಗೆಗಳಿಂದ ಕಟ್ಟಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ನಮ್ಮ ಅಧಿಕಾರಿಗಳು ವಾಸಿಸುವ ಸ್ಥಳ ಸುರಕ್ಷಿತವಾಗಿರಬೇಕು ಎಂಬುದು ನಮ್ಮ ಕರ್ತವ್ಯ ಎಂದು ಅವರು ಒತ್ತಿಹೇಳಿದರು. ಡಿ.ಎಸ್.ಎಸ್ ತಾಲ್ಲೂಕು ಸಂಚಾಲಕ ಕೃಷ್ಣ ಮಾದಿಗ ಮಾತನಾಡಿ, ಕಾಮಗಾರಿಯ ಉಸ್ತುವಾರಿ ವಹಿಸಿಕೊಂಡವರು ಯಾವುದೇ ಎಸ್ಟಿಮೇಟ್ ನೋಡಲು ಅವಕಾಶ ನೀಡುತ್ತಿಲ್ಲ, ಇದು ಅನುಮಾನಕ್ಕೆ ಎಡೆಮಾಡಿಕೊಡುತ್ತದೆ ಎಂದರು. ಕಟ್ಟಡಕ್ಕೆ ತುಂಬಿರುವ ಮಣ್ಣು ಸಹ ಕಳಪೆಯಾಗಿದ್ದು, ಅದರಲ್ಲಿ ಕಸಕಡ್ಡಿ, ಪ್ಲಾಸ್ಟಿಕ್ ತ್ಯಾಜ್ಯ ಮತ್ತು ಬಟ್ಟೆಗಳ ತುಂಡುಗಳಿವೆ. ಇದರಿಂದ ಕಟ್ಟಡ ಯಾವುದೇ ಕಾರಣಕ್ಕೂ ಬಾಳಿಕೆ ಬರುವುದಿಲ್ಲ. ಇದರಲ್ಲಿ ಕೆಲವು ಅಧಿಕಾರಿಗಳು ಭ್ರಷ್ಟಾಚಾರ ಎಸಗಿರುವ ಅನುಮಾನಗಳೂ ಇವೆ ಎಂದು ಅವರು ದೂರಿದ್ದಾರೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಬಂದು ಪರಿಶೀಲಿಸುವವರೆಗೂ ಕಾಮಗಾರಿಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಲಾಗಿದ್ದು, ಸರ್ಕಾರದ ಅನುಮೋದನೆಯಂತೆ ಕಾಮಗಾರಿ ನಡೆಯಬೇಕು ಎಂದು ಆಗ್ರಹಿಸಲಾಗಿದೆ. ಅಧಿಕಾರಿಗಳು ಪರಿಶೀಲಿಸಿ ಕಾಮಗಾರಿ ಕಳಪೆಯಾಗಿದ್ದರೆ ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ. ಇದೇ ರೀತಿ ಅಕ್ರಮಗಳು ಮುಂದುವರಿದರೆ, ಮುಂದಿನ ದಿನಗಳಲ್ಲಿ ರಾಜ್ಯ ರೈತಸಂಘ, ದಲಿತ ಸಂಘರ್ಷ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳ ಜೊತೆಗೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.4
- ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಒಂದು ಅಚ್ಚರಿಯ ಘಟನೆ ಬೆಳಕಿಗೆ ಬಂದಿದೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬರು ತಮ್ಮ ಕಾರನ್ನು ನಡು ರಸ್ತೆಯಲ್ಲೇ ನಿಲ್ಲಿಸಿ, ಅರೆನಗ್ನ ಸ್ಥಿತಿಯಲ್ಲಿ ಮಲಗಿದ್ದಾರೆ. ಹಿಂದೆ ಬಂದ ವಾಹನ ಸವಾರರು ನಿರಂತರವಾಗಿ ಹಾರನ್ ಮಾಡಿದಾಗ, ಆ ವ್ಯಕ್ತಿ ಎದ್ದು ತೂರಾಡುತ್ತಾ ಕಾರಿನೊಳಗೆ ತೆರಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ದೃಶ್ಯವನ್ನು ಕೆಲವರು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಧಾರ್ಮಿಕ ಕ್ಷೇತ್ರಕ್ಕೆ ತೆರಳುವಂತಹ ಪ್ರಮುಖ ರಸ್ತೆಯಲ್ಲೇ ಇಂತಹ ಘಟನೆ ನಡೆದಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಹಾಗೂ ತಪಾಸಣೆ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.1
- ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಶಬರಿಮಲೆ ದರ್ಶನಕ್ಕೆ ತೆರಳುತ್ತಿದ್ದಾರೆ.1
- ರಾಜ್ಯ ಸರ್ಕಾರ ಕಬ್ಬು ಬೆಳೆಗಾರರಿಗೆ ಪ್ರತಿ ಟನ್ ಕಬ್ಬಿಗೆ ನಿಗದಿಪಡಿಸಿದ್ದ ಹೆಚ್ಚುವರಿ ಹಣವನ್ನು ನೀಡದೆ ದಕ್ಷಿಣ ಕರ್ನಾಟಕ ಭಾಗದ ಸಕ್ಕರೆ ಕಾರ್ಖಾನೆಗಳು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವುದಕ್ಕೆ ಕುರಬೂರು ಶಾಂತಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಬಾಕಿ ಹಣ ಪಾವತಿಸುವವರೆಗೂ ಯಾವುದೇ ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಲು ಜಿಲ್ಲಾಡಳಿತ ಅನುಮತಿ ನೀಡಬಾರದು ಎಂದು ಅವರು ಕರೆ ನೀಡಿದ್ದಾರೆ. ರೈತರು ಸಹ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡುವುದನ್ನು ನಿಲ್ಲಿಸಿ, ಬಾಕಿ ಹಣವನ್ನು ವಸೂಲಿ ಮಾಡಿಕೊಳ್ಳಬೇಕು ಎಂದು ಶಾಂತಕುಮಾರ್ ಒತ್ತಾಯಿಸಿದ್ದಾರೆ.1
- ಮಳವಳ್ಳಿ ತಾಲೂಕಿನ ಭೀಮನಹಳ್ಳಿ ಬಳಿ, ಭೀಮನಹಳ್ಳಿ ಮತ್ತು ಹಿಟ್ಟನಹಳ್ಳಿ ಕೊಪ್ಪಲು ಮಾರ್ಗಮಧ್ಯದಲ್ಲಿ 34 ವರ್ಷದ ಯುವಕ ಮಹೇಶ್ ಅವರನ್ನು ಕಿಡಿಗೇಡಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕಿರುಗವಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಬೆಳಕಿಗೆ ಬಂದಿದೆ. ಭೀಮನಹಳ್ಳಿ ಗ್ರಾಮದ ಮರಿಯಯ್ಯ ಮತ್ತು ಪುಟ್ಟ ಚೆನ್ನಮ್ಮ ದಂಪತಿಯ ಪುತ್ರರಾದ ಮಹೇಶ್ ಅವರೇ ಕೊಲೆಯಾದ ಯುವಕ. ಮಂಗಳವಾರ ರಾತ್ರಿ ಮನೆಯಲ್ಲಿ ಊಟ ಮಾಡುತ್ತಿದ್ದ ಇವರನ್ನು ಸ್ನೇಹಿತರು ಕರೆದುಕೊಂಡು ಹೋಗಿ ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದು ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಘಟನೆ ಬೆಳಕಿಗೆ ಬಂದಿದ್ದು, ಮಹೇಶ್ ಅವರನ್ನು ಬೈಕ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ, ದಾರಿಯಲ್ಲಿ ಬೈಕ್‌ನ ಪೆಟ್ರೋಲ್ ಖಾಲಿಯಾಗಿ ನಿಂತ ಸಂದರ್ಭದಲ್ಲಿ ಈ ಪ್ರಕರಣ ಬಹಿರಂಗಗೊಂಡಿದೆ. ಕೊಲೆಯಾದ ಮಹೇಶ್ ಅವರು ಮದುವೆಯಾಗಿದ್ದು, ಇಬ್ಬರು ಹೆಣ್ಣುಮಕ್ಕಳನ್ನು ಹೊಂದಿದ್ದರು. ಈ ಘಟನೆ ಕಾಡ್ಗಿಚ್ಚಿನಂತೆ ಹರಡಿದ್ದು, ಸುತ್ತಮುತ್ತಲಿನ ಗ್ರಾಮಗಳ ಜನರು ಬೆಚ್ಚಿಬಿದ್ದಿದ್ದಾರೆ. ಕಿರುಗಾವಲು ಪೊಲೀಸರ ತಂಡ ಈಗಾಗಲೇ ಆರೋಪಿಗಳನ್ನು ಬಂಧಿಸಿದ್ದು, ತನಿಖೆಯನ್ನು ಮುಂದುವರಿಸಿದೆ. ಕೊಲೆಯಾದ ಯುವಕನ ಮೃತದೇಹವನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಇಡಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.1
- ದೊಡ್ಡಬಳ್ಳಾಪುರ-ದೇವನಹಳ್ಳಿ ರಾಷ್ಟ್ರೀಯ ಹೆದ್ದಾರಿ 648ರ ಲಕ್ಷ್ಮೀಪುರ ಗೇಟ್ ಬಳಿ ಲಾರಿ ಚಾಲಕನ ಅಜಾಗರೂಕತೆಯಿಂದಾಗಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಈ ಭಯಾನಕ ಘಟನೆಯ ದೃಶ್ಯಗಳು ಹೆದ್ದಾರಿಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ದೊಡ್ಡಬಳ್ಳಾಪುರದಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದ ಲಾರಿ ಚಾಲಕ ನಿಯಂತ್ರಣ ಕಳೆದುಕೊಂಡು ಮೊದಲು ಮುಂದಿದ್ದ ಟ್ರಾಕ್ಟರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಟ್ರಾಕ್ಟರ್‌ಗೆ ಡಿಕ್ಕಿ ಹೊಡೆದ ನಂತರ ಲಾರಿ ಮತ್ತೊಂದು ರಸ್ತೆಗೆ ನುಗ್ಗಿ, ಎದುರುಗಡೆಯಿಂದ ಬರುತ್ತಿದ್ದ ಬೊಲೆರೊ ವಾಹನಕ್ಕೂ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್, ಟ್ರಾಕ್ಟರ್, ಲಾರಿ ಹಾಗೂ ಬೊಲೆರೊ ವಾಹನಗಳ ಚಾಲಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್‌ನಲ್ಲಿ ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.2