ಬೈಕ್ ಕಳ್ಳರ ಜಾಲ ಬೇಧನೆ – 27 ಮೋಟಾರ್ ಸೈಕಲ್ ವಶ, ಮೂವರು ಬಂಧನ ಹುನಗುಂದ: ಮೋಟಾರ್ ಸೈಕಲ್ ಕಳ್ಳತನದ ಜಾಲವನ್ನು ಭೇದಿಸಿರುವ ಹುನಗುಂದ ಪೊಲೀಸರು, ಕಳ್ಳತನವಾಗಿದ್ದ 27 ಮೋಟಾರ್ ಸೈಕಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಕುರಿತು ಸೋಮವಾರ ಹುನಗುಂದ ಪೊಲೀಸ್ ಠಾಣೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಮಾಹಿತಿ ನೀಡಿದರು. ತಾಲ್ಲೂಕಿನ ಹಡಗಲಿ ಗ್ರಾಮದ ಸಂಗಪ್ಪ ಬಸಪ್ಪ ಅಂಗಡಿ ಅವರ ಬೈಕ್ ಕಳುವಿನ ದೂರಿನ ಮೇರೆಗೆ ಹುನಗುಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ತನಿಖೆ ಆರಂಭಿಸಿದ ಪೊಲೀಸರು ಕಳ್ಳರ ಜಾಲವನ್ನು ಪತ್ತೆಹಚ್ಚಿದ್ದಾರೆ. ಎಸ್ಪಿ ಸಿದ್ದಾರ್ಥ ಗೋಯಲ್, ಡಿವೈಎಸ್ಪಿ ಸಂತೋಷ ಬನ್ನಟ್ಟಿ ಹಾಗೂ ಸಿಪಿಐ ಎಸ್.ಬಿ. ಅಜೂರ ಅವರ ಮಾರ್ಗದರ್ಶನದಲ್ಲಿ ಪಿಎಸ್‌ಐ ಎಸ್.ಜಿ. ಆಲದಕಟ್ಟಿ ನೇತೃತ್ವದ ತಂಡ ತನಿಖೆ ನಡೆಸಿ ಆರೋಪಿತರನ್ನು ಬಂಧಿಸಿದೆ ಎಂದು ಅವರು ಹೇಳಿದರು. ಬಂಧಿತರನ್ನು ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಸತ್ಯಂಪೇಟೆ ಗ್ರಾಮದ ಹುಲಗಪ್ಪ ಹನಮಂತ ಮೋಡಕೇರ, ರಾಯಚೂರು ಜಿಲ್ಲೆ ದೇವದುರ್ಗ ಮೂಲದ ಹಣಮಂತ ರಾಮಣ್ಣ ಮೋಡಕೇರ ಹಾಗೂ ಹಣಮಂತರಾಯ ಗಾಲಿ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಟ್ಟು 27 ಮೋಟಾರ್ ಸೈಕಲ್‌ಗಳನ್ನು ವಶಪಡಿಸಿಕೊಂಡಿದ್ದು, ಅವುಗಳ ಅಂದಾಜು ಮೌಲ್ಯ ಸುಮಾರು ₹16 ಲಕ್ಷ ಎಂದು ತಿಳಿಸಿದರು. ಇದೇ ವೇಳೆ ಅಮೀನಗಡ ಠಾಣೆಯಲ್ಲಿ 30, ಇಳಕಲ್ ಠಾಣೆಯಲ್ಲಿ 5 ಹಾಗೂ ಹುನಗುಂದ ಠಾಣೆಯಲ್ಲಿ 27 ಸೇರಿ ಒಟ್ಟು 62 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಾಹನಗಳು ರಾಜ್ಯದ ಹೊರ ರಾಜ್ಯಗಳಿಗೂ ಸೇರಿದ್ದಾಗಿವೆ. ಇದು ವರ್ಷದ ದೊಡ್ಡ ಪ್ರಕರಣಗಳಲ್ಲಿ ಒಂದಾಗಿದೆ ಎಂದು ಎಸ್ಪಿ ಹೇಳಿದರು. ಪ್ರಕರಣವನ್ನು ಭೇದಿಸುವಲ್ಲಿ ಶ್ರಮಿಸಿದ ಸಿಪಿಐ ಎಸ್.ಬಿ. ಅಜೂರ, ಪಿಎಸ್‌ಐ ಎಸ್.ಜಿ. ಆಲದಕಟ್ಟಿ ಹಾಗೂ ಸಿಬ್ಬಂದಿಗಳಾದ ಎಸ್.ಬಿ. ಅಮಲಿಹಾಳ, ಸಿಮಾನಿ, ಆಯ್.ಎಸ್. ಮಂಟ್ವಾಳ, ಕೆ.ವೈ. ವಾಲಿಕಾರ, ಎಂ.ಎಸ್. ನಾರಗಲ್ಲ, ಸಿದ್ದಪ್ಪ ಕೌಲಗಿ, ಬಿ.ಎನ್. ಗೌಡರ, ಎ.ಬಿ. ಯರದಾಳ, ಯಲ್ಲಪ್ಪ ಅಂಬಿಗೇರ, ಗಣೇಶ ಪವಾರ, ಆನಂದ ಗೋಲಪ್ಪನವರ, ಚಂದ್ರು ಜಟ್ಟೆಪ್ಪಗೋಳ, ಬಸವರಾಜ ಜಗಲಿ ಅವರ ಕಾರ್ಯವನ್ನು ಎಸ್ಪಿ ಸಿದ್ದಾರ್ಥ ಗೋಯಲ್ ಶ್ಲಾಘಿಸಿದರು.

- ಧಾರ್ಮಿಕ ಶ್ರದ್ಧಾಕೇಂದ್ರ ಸುಕ್ಷೇತ್ರ ಮದ್ವೀರಶೈವ ಶಿವಯೋಗ ಮಂದಿರದ 116 ನೇ ಕಾರಣಿಕ ಯುಗಪುರುಷ ಹಾನಗಲ್ ಕುಮಾರ ಶ್ರೀಗಳ 65 ಅಡಿ ಎತ್ತರದ ಮಾಹಾರಥೋತ್ಸವ ಸೋಮವಾರ ಸಂಜೆ 6 ಗಂಟೆಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದೊಂದಿಗೆ ಜರುಗಿತು. ಏಷ್ಯಾ ಖಂಡದಲ್ಲಿಯೇ ಅತಿ ಎತ್ತರದ (೬೫ಅಡಿ) ಮಾಹಾರಥೋತ್ಸವಕ್ಕೆ ಸಾಂಪ್ರದಾಯಕವಾಗಿ ಪೂಜೆ ಪುನಸ್ಕಾರ ನೆರೆವೇರಿಸಿದ ಸಂಸ್ಥೆಯ ಅಧ್ಯಕ್ಷ, ಮೂರು ಸಾವಿರಮಠದ ಶ್ರೀ ಗುರುಸಿದ್ದ ರಾಜಯೋಗೇಂದ್ರ ಮಹಾಸ್ವಾಮಿಗಳು ರಥೋತ್ಸವಕ್ಕೆ ಚಾಲನೆ ನೀಡಿದರು. ಶಿರಬಡಗಿ ಗ್ರಾಮದ ಭಕ್ತಾಧಿಗಳು ತಂದ ಹಗ್ಗದಿಂದ ಭಕ್ತಗಣ ರಥ ಎಳೆಯಲಾಯಿತು. ಮಾಹಾರಥೋತ್ಸವಕ್ಕೆ ಭಕ್ತರು ಹೂವು ಸಮರ್ಪಿಸುವ ಮೂಲಕ ಭಕ್ತಿಯ ಪರಾಕಾಷ್ಠೆ ಮೆರೆದರು. ಅಪಾರ ಭಕ್ತ ಸಮೂಹ ಶಿವನ ಹಾಗೂ ಶಿವಯೋಗಿಗಳ ಸ್ಮರಣೆ ಮೂಲಕ ರಥ ಎಳೆದರು. ಸಂಸ್ಥೆಯ ಅಧ್ಯಕ್ಷರೂ ಆಗಿರುವ ಮೂರು ಸಾವಿರಮಠದ ಶ್ರೀ ಗುರುಸಿದ್ದ ರಾಜಯೋಗೇಂದ್ರ ಮಹಾಸ್ವಾಮಿಗಳ ಉಪಾಧ್ಯಕ್ಷ ಹಾವೇರಿ ಹುಕ್ಕೇರಿ ಮಠದ ಸದಾಶಿವ ಶ್ರೀಗಳ ನೇತೃತ್ವದಲ್ಲಿ ಪೂಜೆ ಕೈಂಕರ್ಯಗಳು ಜರುಗಿದವು. ಮಾಹಾರಥೋತ್ಸವದಲ್ಲಿ ನಾಡಿನ ಮಹಾಸ್ವಾಮಿಗಳಾದ ಹೊಳೆಹುಚ್ಚೇಶ್ವರ ಶ್ರೀ, ಫಕೀರ ದಿಂಗಾಲೇಶ್ವರ ಸ್ವಾಮಿಜಿ ನೂರಾರು ಮಠಾಧೀಶರು, ಮಹಾಸ್ವಾಮಿಗಳು, ವಟುಸಾಧಕರು ಹಾಜರಿದ್ದರು. ಶಾಸಕ ಭೀಮಸೇನ ಚಿಮ್ಮನಕಟ್ಟಿ, ಮಾಜಿ ಶಾಸಕ ಎಂ.ಕೆ.,ಪಟ್ಟಣಶೆಟ್ಟಿ ಧರ್ಮದರ್ಶಿ ಎಂ.ಬಿ.ಹಂಗರಗಿ, ಶರಣಪ್ಪಗೌಡ ಪಾಟೀಲ, ಕುಮಾರಗೌಡ ಜನಾಲಿ,ಮಹಾಂತೇಶ ಮಮದಾಪೂರ, ಶಾಂತಗೌಡ ಪಾಟೀಲ, ಬಸವರಾಜ ಪಾಟೀಲ, ಸಿದ್ದನಗೌಡ ಪಾಟೀಲ, ಆರ್.ಬಿ.ಪಾಟೀಲ, ಮುಕ್ಕಣಗೌಡ ಜನಾಲಿ, ನಾಗರಾಜ ಕಾಚೆಟ್ಟಿ, ಡಾ.ಆರ್.ಸಿ.ಭಂಡಾರಿ, ಪಂಪಣ್ಣ ಕಾಚೆಟ್ಟಿ, ಸಿಪಿಐ. ಕರೆಪ್ಪ ಬನ್ನೆ, ಪಿ.ಎಸ್.ಐ ಹನಮಂತ ನರಳೆ, ಜಿಲ್ಲೆಯ ವಿವಿಧ ಭಾಗಗಳ ಸಹಸ್ರಾರು ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು. ತಾಲೂಕಿನ ಮಂಗಳೂರು ಗ್ರಾಮದ ಭಜನಾ ಮಂಡಳಿಯವರು ನಂದಿಕೋಲು ಮೆರವಣಿಗೆಯೊಂದಿಗೆ ಮಹಾರಥೋತ್ಸವದಲ್ಲಿ ಗಮನಾರ್ಹವಾಗಿತ್ತು.1
- ಬಾಗಲಕೋಟೆ ತಹಶೀಲ್ದಾರ ಕಚೇರಿ ಆವರಣದಲ್ಲಿ ಸಾರ್ವಜನಿಕರ ಸೌಲಭ್ಯಕ್ಕಾಗಿ 2022ನೇ ಸಾಲಿನಲ್ಲಿ ಸುಮಾರು 8.40 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಶೌಚಾಲಯ, ಗ್ರಂಥಾಲಯ ಹಾಗೂ ವಾಚನಾಲಯ ಕಟ್ಟಡ ಉದ್ಘಾಟನೆ ಆಗದೇ ಬೀಗ ಹಾಕಿರುವುದು ವಿವಾದಕ್ಕೆ ಕಾರಣವಾಗಿದೆ. ಕಟ್ಟಡವನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸದೇ ಇರುವುದರಿಂದ ಸ್ಥಳೀಯರಲ್ಲಿ ಅಸಮಾಧಾನ ವ್ಯಕ್ತವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷರು ಕಟ್ಟಡವನ್ನು ಪರಿಶೀಲಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. “ಸಾರ್ವಜನಿಕರ ತೆರಿಗೆಯ ಹಣದಲ್ಲಿ ನಿರ್ಮಾಣವಾದ ಈ ಕಟ್ಟಡವನ್ನು ತಕ್ಷಣವೇ ಸಾರ್ವಜನಿಕರಿಗೆ ತೆರೆಯಬೇಕು. ಇಲ್ಲಿ ಗ್ರಂಥಾಲಯ ಎಂದು ಫಲಕದಲ್ಲಿ ಉಲ್ಲೇಖಿಸಿದ್ದರೆ, ಗ್ರಂಥಾಲಯದ ವ್ಯವಸ್ಥೆ ಎಲ್ಲಿದೆ ಎಂಬುದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಸಾರ್ವಜನಿಕರ ಮೂಲಭೂತ ಹಕ್ಕುಗಳಾದ ನೀರು, ಶೌಚಾಲಯ ಮುಂತಾದ ಸೌಲಭ್ಯಗಳನ್ನು ಒದಗಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ” ಎಂದು ಅವರು ಆಗ್ರಹಿಸಿದರು. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಕಟ್ಟಡವನ್ನು ಸಾರ್ವಜನಿಕ ಬಳಕೆಗೆ ನೀಡಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ. ಇದೀಗ ಅಧಿಕಾರಿಗಳು ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದು ಕಾದು ನೋಡಬೇಕಾಗಿದೆ.1
- ಮುಧೋಳ : ಸಮೀಪದ ಸೈದಾಪುರ ಕ್ರಾಸ್ ಬಳಿ ಎಥೆನಾಲ್ ತುಂಬಿದ್ದ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮುಂಜಾಗ್ರತಾ ಕ್ರಮ ಕೈಗೊಂಡು ಎಥೆನಾಲ್ ಸೋರಿಕೆಯನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. 16ಚಕ್ರದ ಬೃಹತ್ ಗಾತ್ರದ ಲಾರಿ ಸಮೀಪದ ಸಕ್ಕರೆ ಕಾರ್ಖಾನೆಯಿಂದ ಎಥೆನಾಲ್ ತುಂಬಿಕೊಂಡು ತಮಿಳುನಾಡು ಕಡೆಗೆ ಹೊರಟಿತ್ತು ಎಂಬ ಮಾಹಿತಿ ಇದೆ. ಸ್ಥಳಕ್ಕೆ ಮುಧೋಳ ಅಬಕಾರಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದಲ್ಲಿ ಯಾವುದೇ ರೀತಿಯ ಜೀವಹಾನಿ ಸಂಭವಿಸಿಲ್ಲ. ಮಹಾಲಿಂಗಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.4
- ರಾಮದುರ್ಗ : ಸುರೇಬಾನ ನಾಡಕಚೇರಿ ಮುಂಭಾಗದಲ್ಲಿ ಪಾನ್ ಮಸಾಲ ಹಾಗೂ ಗುಟ್ಕಾ ತಿಂದು ಉಗುಳಲು ಬಕೆಟ್ ಇಡುತ್ತಿರುವ ದೃಶ್ಯ ಕಂಡು ಬಂದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರತಿ ದಿನ ಸಾವಿರಾರು ಜನರು ವಿವಿಧ ಸರ್ಕಾರಿ ಕೆಲಸಗಳಿಗಾಗಿ ನಾಡಕಚೇರಿಗೆ ಭೇಟಿ ನೀಡುತ್ತಾರೆ. ಇಂತಹ ಸ್ಥಳದಲ್ಲಿ ಸ್ವಚ್ಛತೆ ಕಾಪಾಡಬೇಕಾದ ಜವಾಬ್ದಾರಿ ಅಧಿಕಾರಿಗಳದ್ದಾಗಿದ್ದರೂ, ಆವರಣದಲ್ಲಿ ಅಸ್ವಚ್ಛತೆ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ. ಇನ್ನೂ ಆತಂಕಕಾರಿ ವಿಷಯವೆಂದರೆ, ನಾಡಕಚೇರಿ ಆವರಣದಲ್ಲೇ ಪೂರ್ವ ಪ್ರಾಥಮಿಕ ಶಾಲೆ ಕಾರ್ಯನಿರ್ವಹಿಸುತ್ತಿದ್ದು, ದಿನನಿತ್ಯ ನೂರಾರು ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪಾನ್ ಮಸಾಲ ಹಾಗೂ ಗುಟ್ಕಾ ಉಗುಳುವಿಕೆ ಮಕ್ಕಳ ಆರೋಗ್ಯಕ್ಕೂ ಹಾನಿಕಾರಕವಾಗುವ ಸಾಧ್ಯತೆ ಇದೆ ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಸ್ಥಳೀಯರು ಮತ್ತು ಸಾರ್ವಜನಿಕರು ಅಧಿಕಾರಿಗಳ ನಿರ್ಲಕ್ಷ್ಯವೇ ಈ ಪರಿಸ್ಥಿತಿಗೆ ಕಾರಣ ಎಂದು ಆರೋಪಿಸಿದ್ದಾರೆ. ತಕ್ಷಣವೇ ಸ್ವಚ್ಛತಾ ಕ್ರಮ ಕೈಗೊಳ್ಳಬೇಕು, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವಿಕೆ ನಿಷೇಧಿಸಲು ಕಠಿಣ ಕ್ರಮ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.3
- ಬೆಳಗಾಂವ ಜಿಲ್ಲಾ ರಾಮದುರ್ಗ ತಾಲೂಕಿನ ಹೊಸಕೋಟೆ ಗ್ರಾಮದ ಸಾರ್ವಜನಿಕರು ರಾಮದುರ್ಗ ತಾಲೂಕಿಗೆ ಬಂದಂತ ಆರೋಗ್ಯ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿ ತಮ್ಮ ಅಳಿಲನ್ನು ಮಾಧ್ಯಮದವರ ಮುಂದೆ ಹೇಳಿಕೊಂಡರು. ಹೊಸಕೋಟೆ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಒಬ್ಬ ಡಾಕ್ಟರ್ ಇದ್ದು ಎರಡು ವರ್ಷದಿಂದ ಅವರ ಸೇವೆ ಒಳ್ಳೆ ತರಹ ಮಾಡುತ್ತಾ ಬಂದಿದ್ದು ಹೊಸಕೋಟೆ ಗ್ರಾಮದ ಸುತ್ತು ಮುತ್ತಿಲಿನ ಹಳ್ಳಿಗಳಿಗೆ ಇವರ ಸೇವೆ ಅಚ್ಚುಮೆಚ್ಚಿಗೆ ಪಾತ್ರರಾಗಿದ್ದಾರೆ. ಈಗ ಸರ್ಕಾರದವರು ಇವರನ್ನು ವರ್ಗಾವಣೆ ಮಾಡಿದ್ದಕ್ಕೆ ಹೊಸಕೋಟೆ ಗ್ರಾಮಸ್ಥರು ಅವರನ್ನು ವರ್ಗಾವಣೆ ಮಾಡದಂತೆ ಮನವಿ ಸಲ್ಲಿಸಿ ತಮ್ಮ ಅನಿಸಿಕೆಗಳನ್ನು ಮಾಧ್ಯಮದವರು ಮುಂದೆ ಹೇಳಿಕೊಂಡು ಅವರನ್ನು ವರ್ಗಾವಣೆ ಮಾಡಿದಲ್ಲಿ ಜಿಲ್ಲಾಮಟ್ಟದಲ್ಲಿ ಸತ್ಯಾಗ್ರಹ ಮಾಡಲಾಗುವುದೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.1
- ಬಾಗಲಕೋಟ ಜಿಲ್ಲೆಯ ಇಳಕಲ್‌ದ ಕೆಎಚ್‌ಡಿಸಿ ಕಾಲೋನಿ, ವಿದ್ಯಾಗಿರಿ ಕಾಲೋನಿಯಲ್ಲಿ ರ‍್ನಾಲ್ಕು ಮನೆಗಳ ಬೀಗ ಹೊಡೆದು ಕಳ್ಳತನ ಮಾಡಲು ಪ್ರಯತ್ನಪಟ್ಟಿದ್ದಾರೆ ಕಳ್ಳತನಗಳು ವಿಫಲಗೊಂಡಿವೆ. ಮೂರು ಮನೆಯಲ್ಲಿ ಏನು ಸಿಗದೇ ನಿರಾಸೆಗೊಂಡಿದ್ದ ಕಳ್ಳರು ಮತ್ತೊಂದು ಮನೆಗೆ ಕಳ್ಳತನ ಮಾಡಲು ಹೋದಾಗ ಬೀಗ ಹೊಡೆಯುವ ಸಮಯದಲ್ಲಿ ಮುಂದಿನ ಮನೆಯೊಬ್ಬರು ಎಚ್ಚರಗೊಂಡು ಹೋದ ನೋಡಲು ಹೋದಾಗ ನಾಲ್ಕು ಜನರ ಗುಂಪೋದನ್ನು ಕಂಡಿದ್ದ ಮಹಿಳೆ ಬಾಯಿ ಮಾಡಿದ ತಕ್ಷಣವೇ ಆ ಮಹಿಳೆಯ ಮನೆಗೆ ದೊಡ್ಡ ದೊಡ್ಡ ಕಲ್ಲುಗಳನ್ನು ಕಳ್ಳರು ಎಸೆದಿದ್ದರಿಂದ ಬಾಗಿಲು ಮತ್ತು ಕುರ್ಚಿಗಳನ್ನು ಮುರಿದಿರುವ ಘಟನೆ ಫೆ.೧೭ ಮಂಗಳವಾರ ನಸುಕಿನ ಜಾವ ೨ ಗಂಟೆಗೆ ಸಂದರ್ಭ ನಡೆದಿದೆ. ಸುದ್ದಿ ತಿಳಿದಿ ಶಹರ್ ಪೋಲಿಸ್ ಠಾಣೆಯ ಪೋಲಿಸರು ಭೇಟಿ ನೀಡಿ ಪರಿಶೀಲಿಸಿ ತನಿಖೆಯನ್ನು ನಡೆಸಿದ್ದಾರೆ. ಈ ಸುದ್ದಿ ತಿಳಿದ ಸ್ಥಳೀಯ ನಿವಾಸಿಗಳು ಕಳ್ಳರ ಹಾವಳಿಗೆ ಬೆಚ್ಚಿ ಬಿದ್ದಿದ್ದಾರೆ.2
- ತೆರದಾಳ ಪಟ್ಟಣದ ಲಾಡ್ಜ್ ಒಂದರಲ್ಲಿ ಇಬ್ಬರಿಗೆ ಅಗ್ನಿ ಅವಘಡ ಇಬ್ಬರೂ ಸ್ಥಿತಿ ಚಿಂತಾಜನಕ1
- ಬಾಗಲಕೋಟೆ: ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಸಾಲ ವಸೂಲಾತಿ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಮುಧೋಳ ಭಾಗದ ರೈತರು ಸೋಮವಾರ ಬಾಗಲಕೋಟೆ ಜಿಲ್ಲೆಯ ಸಂಸದ ಪಿ.ಸಿ. ಗದ್ದಿಗೌಡರ ಕಚೇರಿಗೆ ಆಗಮಿಸಿ ಮನವಿ ಸಲ್ಲಿಸಿದರು. ಬಾಗಲಕೋಟೆ ಡಿಸಿ ಭವನದಲ್ಲಿರುವ ಸಂಸದ ಕಚೇರಿಗೆ ಬಂದ ರೈತರು, ಬ್ಯಾಂಕ್‌ಗಳಿಂದ ಲಿಲಾವ್ ನೋಟಿಸ್‌ಗಳನ್ನು ನೀಡಲಾಗುತ್ತಿದ್ದು, ಸಾಲ ಮರುಪಾವತಿಸದಿದ್ದರೆ ಆಸ್ತಿ ಜಪ್ತಿ ಮಾಡುವುದಾಗಿ ಬೆದರಿಕೆ ಹಾಕಲಾಗುತ್ತಿದೆ ಎಂದು ದೂರಿದರು. ಇದರಿಂದ ರೈತರು ಆತಂಕಕ್ಕೊಳಗಾಗಿದ್ದಾರೆ ಎಂದು ತಿಳಿಸಿದರು. ರಾಷ್ಟ್ರೀಕೃತ ಬ್ಯಾಂಕ್‌ಗಳು ರೈತರಿಗೆ ಕಿರುಕುಳ ನೀಡದಂತೆ ಸೂಚನೆ ನೀಡಬೇಕು ಹಾಗೂ ಸಾಲ ಮರುಪಾವತಿಗೆ ಒನ್ ಟೈಮ್ ಸೆಟಲ್‌ಮೆಂಟ್ ವ್ಯವಸ್ಥೆ ಕಲ್ಪಿಸಬೇಕು ಎಂದು ರೈತರು ಆಗ್ರಹಿಸಿದರು. ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಈ ವೇಳೆ ಸಂಸದ ಪಿ.ಸಿ. ಗದ್ದಿಗೌಡರ ಅವರು ರೈತರು ಮತ್ತು ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಸಭೆಯಲ್ಲಿ ಬಾಗಲಕೋಟೆ ಜಿಲ್ಲಾ ಪಂಚಾಯತ್ ಸಿಇಒ ಶಶಿಧರ ಕುರೇರ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.3