ಬೆಂಗಳೂರಿನಿಂದ–ಬಳ್ಳಾರಿ ತೆರಳುವ ದಾರಿ ಮಧ್ಯೆ ಭೀಕರ ಅಪಘಾತ ಮೂವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವು, ಇಬ್ಬರ ಸ್ಥಿತಿಚಿಂತಾಜನಕ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಸಮೀಪ ಪ್ರಕಾಶ್ ಸ್ಪಾಂಜ್ ಐರನ್ ಕಂಪನಿ ಹತ್ತಿರ ಇಂದು ಬೆಳಗ್ಗೆ ಸುಮಾರು 7:00 ಗಂಟೆ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರುದಿಂದ ಬಳ್ಳಾರಿಯಲ್ಲಿ ನಡೆಯುವ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐದು ಮಂದಿ ಪೊಲೀಸ್ ಸಿಬ್ಬದಿ ಕಾರು ಲಾರಿಯ ಹಿಂದಿನ ಭಾಗಕ್ಕೆ ಡಿಕ್ಕಿ ಹೊಡೆದಿದೆ. ಚಾಲಕ ನಿದ್ದೆಯ ಮಂಪರಿನಲ್ಲಿ ಇದ್ದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿ ಹೋಗಿದ್ದು, ಸ್ಥಳದಲ್ಲೇ ಮೂವರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ತನಿಖೆ ನಂತರ ತಿಳಿಯಲಿದೆ.
ಬೆಂಗಳೂರಿನಿಂದ–ಬಳ್ಳಾರಿ ತೆರಳುವ ದಾರಿ ಮಧ್ಯೆ ಭೀಕರ ಅಪಘಾತ ಮೂವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವು, ಇಬ್ಬರ ಸ್ಥಿತಿಚಿಂತಾಜನಕ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಸಮೀಪ ಪ್ರಕಾಶ್ ಸ್ಪಾಂಜ್ ಐರನ್ ಕಂಪನಿ ಹತ್ತಿರ ಇಂದು ಬೆಳಗ್ಗೆ ಸುಮಾರು 7:00 ಗಂಟೆ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರುದಿಂದ ಬಳ್ಳಾರಿಯಲ್ಲಿ ನಡೆಯುವ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐದು ಮಂದಿ ಪೊಲೀಸ್ ಸಿಬ್ಬದಿ ಕಾರು ಲಾರಿಯ ಹಿಂದಿನ ಭಾಗಕ್ಕೆ ಡಿಕ್ಕಿ ಹೊಡೆದಿದೆ. ಚಾಲಕ ನಿದ್ದೆಯ ಮಂಪರಿನಲ್ಲಿ ಇದ್ದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿ ಹೋಗಿದ್ದು, ಸ್ಥಳದಲ್ಲೇ ಮೂವರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ತನಿಖೆ ನಂತರ ತಿಳಿಯಲಿದೆ.
- ಬೆಂಗಳೂರುದಿಂದ ಬಳ್ಳಾರಿಗೆ ಸ್ನೇಹಿತನ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಐವರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅಧಿಕಾರಿಗಳು ಭೀಕರ ರಸ್ತೆ ಅಪಘಾತಕ್ಕೀಡಾದ ದುರ್ಘಟನೆ ನಡೆದಿದೆ. ಈ ಅಪಘಾತದಲ್ಲಿ ಮೂವರು ಯುವ ಪೊಲೀಸ್ ಅಧಿಕಾರಿಗಳು ದುರ್ಮರಣ ಹೊಂದಿದ್ದಾರೆ. ಮೃತರಾದವರು ಕೊಪ್ಪಳ ಜಿಲ್ಲೆಯ ಗಂಗಾವತಿಯ ಮಂಜುನಾಥ್ (32), ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಸಚ್ಚಿನ್ (30) ಮತ್ತು ರಾಯಚೂರು ಜಿಲ್ಲೆಯ ಸಿಂಧನೂರಿನ ಅಮರೇಶ್ (29) ಎಂದು ಗುರುತಿಸಲಾಗಿದೆ. ಇನ್ನೂ ಬೆಳಗಾವಿ ಜಿಲ್ಲೆಯ ಮಹಾಂತೇಶ್ ಹಾಗೂ ಶಿವಮೊಗ್ಗ ಜಿಲ್ಲೆಯ ಸಾಗರದ ಈಶ್ವರ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಐವರು ಅಧಿಕಾರಿಗಳು ಬೆಂಗಳೂರಿನಲ್ಲಿ ಶಸ್ತ್ರಸಜ್ಜಿತ ಮೀಸಲು ಪೊಲೀಸ್ ಉಪನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು, ತಮ್ಮ ಬ್ಯಾಚಿನ ಸ್ನೇಹಿತನಾದ ವೀರೇಶ್ ಎಂಬ ಪೊಲೀಸ್ ಅಧಿಕಾರಿಯ ಮದುವೆ ಕಾರ್ಯಕ್ರಮಕ್ಕೆ ಬಳ್ಳಾರಿಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಕಷ್ಟಪಟ್ಟು ವ್ಯಾಸಂಗ ಮಾಡಿ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ಇತ್ತೀಚೆಗೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಸೇರಿದ್ದ ಈ ಯುವ ಅಧಿಕಾರಿಗಳು ತಮ್ಮ ಕರ್ತವ್ಯ ಜೀವನವನ್ನು ಆರಂಭಿಸಿದ್ದೇ ಕೆಲವು ದಿನಗಳಾಗಿತ್ತು. ಇದಲ್ಲದೆ ಮೃತರಾದ ಮಂಜುನಾಥ್ ಹಾಗೂ ಚೇತನ್ ಎಂಬ ಇಬ್ಬರು ಅಧಿಕಾರಿಗಳು ಶೀಘ್ರದಲ್ಲೇ ವಿವಾಹವಾಗಲು ನಿಶ್ಚಿತಾರ್ಥ ಮಾಡಿಕೊಂಡಿದ್ದು, ಪ್ರೀ-ವೆಡ್ಡಿಂಗ್ ಚಿತ್ರೀಕರಣವೂ ಮಾಡಿಸಿಕೊಂಡಿದ್ದರು ಎನ್ನಲಾಗಿದೆ. ಸ್ನೇಹಿತನ ಮದುವೆಗೆ ತೆರಳುತ್ತಿದ್ದ ವೇಳೆ ನಡೆದ ಈ ದುರ್ಘಟನೆ ಕುಟುಂಬಸ್ಥರು ಹಾಗೂ ಸಹೋದ್ಯೋಗಿಗಳನ್ನು ದುಃಖ ಸಾಗರದಲ್ಲಿ ಮುಳುಗಿಸಿದೆ. ಅಪಘಾತದ ಸುದ್ದಿ ತಿಳಿದ ತಕ್ಷಣ ಬಳ್ಳಾರಿಯ ಮದುವೆ ಮಂಟಪದಲ್ಲೂ ನೀರವ ಮೌನ ಆವರಿಸಿತು.1
- Post by Suresh Belagere1
- ವಿದ್ಯಾರ್ಥಿನಿ ಹಾಲಿನಲ್ಲಿದ್ದ ಹಾವಿನ ವಿಷ ತೆಗೆದಿದ್ದಾಗಿ ಹುಣಸೆಕಟ್ಟೆ ಗ್ರಾಮದ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ಪ್ರತಿಕ್ರಿಯೆ ನೀಡಿದ್ದಾರೆ. ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯಲ್ಲಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ಅವರು ಪ್ರತಿಕ್ರಿಯೆ ನೀಡಿ ಮಾತನಾಡಿದ್ದು ಮಕ್ಕಳು ಊಟ ಮಾಡಿ ಕುಳಿತಿದ್ದು ಈ ವೇಳೆ ಅಲ್ಲಿದ್ದ ನಾಗರಹಾವು ಮಗುವಿಗೆ ಕಚ್ಚಿದೆ ತಕ್ಷಣ ತಡನಾಡದೆ ಹಾವು ಕಚ್ವಿದ ಜಾಗಕ್ಕೆ ಬಾಯಿಯಿಂದ ವಿಷ ತೆಗೆದು ಕೂಡಲೇ ಮಗುವನ್ನ ಆಸ್ಪತ್ರೆಗೆ ಕರೆತಂದಿದ್ದು ಚಿಕಿತ್ಸೆ ಪಡೆಯುತ್ತಿದ್ದು ವಿಧ್ಯಾರ್ಥಿನಿ ಕೂಡ ಚಿಕಿತ್ಸೆ ಪಡೆಯುತ್ತಿದ್ದಾಗಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ಮಾಹಿತಿ ನೀಡಿದ್ದಾರೆ.1
- ದಾವಣಗೆರೆ : ಬಿಸಿಲಿನ ಝಳಕ್ಕೆ ಸೌತೆಕಾಯಿ ಸಾಕಷ್ಟು ಉಪಯೋಗವಾಗಿದ್ದು, ಹೊಸದೊಂದು ರೆಸಿಪಿ ವಿಡಿಯೋದಲ್ಲಿದೆ ತಪ್ಪದೇ ನೋಡಿ1
- “ಸದನದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಸರ್ಕಾರವನ್ನು ತೀವ್ರವಾಗಿ ಪ್ರಶ್ನಿಸಿದರು… “ನನ್ನ ಪ್ರಾಥಮಿಕತೆ ಹಂಪಿ–ಬಳ್ಳಾರಿ ನಡುವೆ ಏರ್ಪೋರ್ಟ್ ಮಾಡುವುದು… ಬಿಜಾಪುರದಲ್ಲಿ ಮಾಡಿದಂತೆ ಬಳ್ಳಾರಿಯಲ್ಲೂ ವಿಮಾನ ನಿಲ್ದಾಣ ಮಾಡಿ ಋಣ ತೀರಿಸಿಕೊಳ್ಳಿ ಎಂದು ಸರ್ಕಾರಕ್ಕೆ ಆಗ್ರಹ!” “ಹಂಪಿಗೆ ಲಕ್ಷಾಂತರ ಪ್ರವಾಸಿಗರು ಬರುತ್ತಾರೆ… ಆದರೆ ಏರ್ಪೋರ್ಟ್ ಇಲ್ಲದೇ ಇನ್ನೂ ಎಷ್ಟು ದಿನ?” ಬಳ್ಳಾರಿಗೆ ಏರ್ಪೋರ್ಟ್ ಬೇಡವೇ? 🤔 ಸದನದಲ್ಲಿ ಜನಾರ್ದನ ರೆಡ್ಡಿ ಗಂಭೀರ ಒತ್ತಾಯ!1
- *ಸಾಮಾಜಿಕ ಹೋರಾಟದ ದಾರಿಯಲ್ಲಿ ನಿಂತ ನಾಯಕ – ಎಸ್. ದುರುಗೆಶ್ ಅವರಿಗೆ ಜನ್ಮದಿನದ ಶುಭಾಶಯಗಳು 🎂* ವಿಜಯನಗರ ಜಿಲ್ಲೆಯ ಕೂಡ್ಲಿಗಿ ನಗರದ ಹೆಮ್ಮೆಯ ವ್ಯಕ್ತಿತ್ವವಾಗಿರುವ *ಎಸ್. ದುರುಗೆಶ್* ಅವರು ಸಮಾಜದ ಹಿತಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ಹೋರಾಟಗಾರರಾಗಿದ್ದಾರೆ. ದಲಿತ ಸಮುದಾಯದ ಹಕ್ಕುಗಳಿಗಾಗಿ ಮತ್ತು ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಅವರು ಹಲವು ವರ್ಷಗಳಿಂದ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರಸ್ತುತ ಅವರು (DSS) ದಲಿತ ಸಂಘರ್ಷ ಸಮಿತಿಯ ವಿಜಯನಗರ ಜಿಲ್ಲೆಯ ಜಿಲ್ಲಾ ಸಂಚಾಲಕರಾಗಿ ನಾಲ್ಕನೇ ವರ್ಷವೂ ಯಶಸ್ವಿಯಾಗಿ ಸೇವೆ ಮುಂದುವರಿಸುತ್ತಿದ್ದಾರೆ. ತಮ್ಮ ಹೋರಾಟಮಯ ಜೀವನದಲ್ಲಿ ಅನೇಕ ಸವಾಲುಗಳು, ಏರು-ಇಳಿತಗಳು ಎದುರಾದರೂ, ಅವುಗಳನ್ನು ಧೈರ್ಯದಿಂದ ಎದುರಿಸಿ ಸಮಾಜದ ನಂಬಿಕೆಯನ್ನು ಗಳಿಸಿದ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ಸಂಘಟನೆಯ ಬಲವರ್ಧನೆ, ದಲಿತ ಸಮುದಾಯದ ಹಕ್ಕುಗಳ ರಕ್ಷಣೆ, ಅನ್ಯಾಯ-ಅತ್ಯಾಚಾರಗಳ ವಿರುದ್ಧ ಧ್ವನಿ ಎತ್ತುವಲ್ಲಿ *ಎಸ್. ದುರುಗೆಶ್* ಅವರ ಪಾತ್ರ ಮಹತ್ತರವಾಗಿದೆ. ಗ್ರಾಮದಿಂದ ನಗರವರೆಗೂ ಜನರ ಸಮಸ್ಯೆಗಳಿಗೆ ಸ್ಪಂದಿಸಿ, ನ್ಯಾಯಕ್ಕಾಗಿ ಹೋರಾಡುವ ನಾಯಕತ್ವವು ಅವರನ್ನು ಸಮಾಜದಲ್ಲಿ ವಿಶೇಷ ವ್ಯಕ್ತಿಯನ್ನಾಗಿ ಮಾಡಿದೆ. ಅವರ ಸರಳತೆ, ಸೇವಾಭಾವ ಮತ್ತು ಸಂಘಟನೆಗೆ ನೀಡುತ್ತಿರುವ ಶ್ರಮ ಅನೇಕ ಯುವಕರಿಗೆ ಪ್ರೇರಣೆಯಾಗಿದೆ. ಇಂದು (14-03-1976) ಅವರ ಜನ್ಮದಿನದ ಸಂಭ್ರಮದ ದಿನವಾಗಿದೆ. ಈ ವಿಶೇಷ ಸಂದರ್ಭದಲ್ಲಿ ಅವರ ಸಮಾಜಮುಖಿ ಸೇವೆ ಇನ್ನಷ್ಟು ವಿಸ್ತಾರವಾಗಲಿ, ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಮತ್ತು ಇನ್ನಷ್ಟು ಶಕ್ತಿ ದೊರಕಲಿ ಎಂದು ಹಾರೈಸುತ್ತೇವೆ. ಶುಭಾಶಯ ಕೋರುವವರು: ದಲಿತ ಸಂಘರ್ಷ ಸಮಿತಿ (DSS) ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಹಗರಿಬೊಮ್ಮನಹಳ್ಳಿ ತಾಲ್ಲೂಕು ಘಟಕ 🌹 *ಎಸ್. ದುರುಗೆಶ್ ಅವರಿಗೆ ಹಾರ್ದಿಕ ಜನ್ಮದಿನದ ಶುಭಾಶಯಗಳು* . ಸಮಾಜ ಸೇವೆಯ ನಿಮ್ಮ ಪಯಣ ಇನ್ನಷ್ಟು ಉಜ್ವಲವಾಗಲಿ. ✨ *ನಾಗರಾಜ್ ಕಲ್ಲಹಳ್ಳಿ ✒️3
- ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಹನುಮನಹಳ್ಳಿ ಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಗೆ ಕ್ರಿಯೇಟಿವ್ ಅಸೋಸಿಯೇಷನ್ ಸದಸ್ಯ ಆಗಿರುವಂಥ ರಂಗನಾಥ್ ರವರು ತಮ್ಮ ಊರಿನ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಕಂಪ್ಯೂಟರ್ ಕಲಿಯಲು ಕಂಪ್ಯೂಟರ್ ನ್ನು ಕೊಡುಗೆ ನೀಡಿದ್ದಾರೆ.1
- ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಸಮೀಪದ ಪ್ರಕಾಶ್ ಸ್ಪಾಂಜ್ ಐರನ್ ಕಂಪನಿ ಹತ್ತಿರ ಇಂದು ಬೆಳಗ್ಗೆ ಸುಮಾರು 7 ಗಂಟೆ ಸುಮಾರಿಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೆಂಗಳೂರುದಿಂದ ಬಳ್ಳಾರಿಗೆ ತೆರಳುತ್ತಿದ್ದ ಕಾರು ಮುಂದೆ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಇನ್ನಿಬ್ಬರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ದುರ್ಘಟನೆ ವಿಷಯ ತಿಳಿದ ತಕ್ಷಣ ಗೃಹ ಸಚಿವ ಜಿ. ಪರಮೇಶ್ವರ್, ಜಿಲ್ಲಾ ಉಸ್ತುವರಿ ಸಚಿವ ಡಿ. ಸುಧಾಕರ್, ಹಾಗೂ ಶಾಸಕ ಟಿ. ರಘುಮೂರ್ತಿ ಸೇರಿದಂತೆ ಹಲವು ಪೊಲೀಸ್ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮೃತರ ಕುಟುಂಬಸ್ಥರಿಗೆ ಆತ್ಮಸಾಂತ್ವನ ಹೇಳಿದರು. ಮೃತರ ಗುರುತು ಹಾಗೂ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಗೃಹ ಸಚಿವ ಜಿ.ಪರವೇಶ್ವರ್ ಹೇನೇಳಿದ್ದಾರೆ ನೀವೆ ಕೇಳಿ1