ರಾಜ್ಯ ರೈತ ಸಂಘದಿಂದ ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದ ರೈತರು ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಬಂದ್.. ಚಳ್ಳಕೆರೆ, ಮಾ.10 : ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡುವಂತೆ ಆಗ್ರಹಿಸಿ ಡಿಸಿ ಕಚೇರಿ ಬಳಿ ಉಪವಾಸ ಕೈಗೊಂಡಿದ್ದ ರೈತನಾಯಕ ತಿಪ್ಪೇಸ್ವಾಮಿ ತೀವ್ರ ಅಸ್ವಸ್ಥರಾಗಲು ಜಿಲ್ಲಾಧಿಕಾರಿ ಅವರೇ ನೇರ ಹೊಣೆ ಎಂದು ಆರೋಪಿಸಿ ರೈತಸಂಘದ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿದರು. ತಾಲ್ಲೂಕಿನ ಗರಣಿ ಕ್ರಾಸ್ ಬಳಿ ಮಂಗಳವಾರ ಗಂಟೆಗೂ ಹೆಚ್ಚು ಕಾಲ ಹೆದ್ದಾರಿ ತಡೆ ನಡೆಸಿದ ರೈತರು ಜಿಲ್ಲಾಧಿಕಾರಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಕೂದಲೆಳೆ ಅಂತರದಲ್ಲಿಯೇ ರೈತಸಂಘದ ಕಾರ್ಯಕರ್ತರು ಮಾ.2ರಂದು ಉಪವಾಸ ಆರಂಭಿಸಿ ಐದು ದಿನಗಳ ಕಾಲ ಮುಂದುವರಿಸಿದ್ದರೂ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿ, ಮನವೊಲಿಸುವ ಸಣ್ಣ ಪ್ರಯತ್ನವನ್ನೇ ಮಾಡಲಿಲ್ಲ ಎಂದು ದೂರಿದರು. ಪ್ರತಿದಿನ ವಿವಿಧ ಸಂಘಟನೆಗಳು ಆಗಮಿಸಿ ಬೆಂಬಲ ವ್ಯಕ್ತಪಡಿಸಿ ಜಿಲ್ಲಾಧಿಕಾರಿ ಆಗಮಿಸಿ ಮನವಿ ಸ್ವೀಕರಿಸಬೇಕೆಂದು ಆಗ್ರಹಿಸಿದರು ಸರ್ವಾಧಿಕಾರಿ ರೀತಿ ವರ್ತಿಸಿದ್ದಾರೆ. ಪರಿಣಾಮ ರೈತನಾಯಕ ಉಪವಾಸ ಸತ್ಯಾಗ್ರಹದಿಂದ ಕುಸಿದುಬಿದ್ದು ಬೆಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಸ್ತçಚಿಕಿತ್ಸೆಗೆ 15 ಲಕ್ಷ ರೂ. ವೆಚ್ಚವಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ತಿಪ್ಪೇಸ್ವಾಮಿ ಅವರ ಆರೋಗ್ಯ ವಿಚಾರಿಸುವ ಮಾನವೀಯತೆಯನ್ನು ಜಿಲ್ಲಾಡಳಿತ, ಜನಪ್ರತಿನಿಧಿಗಳು ಮಾಡಿಲ್ಲದಿರುವುದು ಹೋರಾಟಗಾರರಿಗೆ ಅಪಮಾನ ಮಾಡುವ ನಡೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರೈತಂಘದ ರಾಜ್ಯ ಕಾರ್ಯಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಮಾತನಾಡಿ, ಸಾರ್ವಜನಿಕರ ಸಂಕಷ್ಟ, ಹೋರಾಟಗಾರರ ಕೂಗಿಗೆ ಸ್ಪಂದಿಸುವುದು ಅಧಿಕಾರಿಗಳ ಕರ್ತವ್ಯ. ಆದರೆ, ಐದು ದಿನಗಳಿಂದ ಉಪವಾಸ ನಿರತರಾಗಿದ್ದ ತಿಪ್ಪೇಸ್ವಾಮಿ ಅವರನ್ನು ಅತ್ಯಂತ ಅಪಮಾನಕರವಾಗಿ ಜಿಲ್ಲಾಧಿಕಾರಿ ನಡೆಸಿಕೊಂಡಿದ್ದಾರೆ. ಧರಣಿ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸದ ಪರಿಣಾಮ ಉಪವಾಸ ಮುಂದುವರಿಸಿದ್ದೇ ಅನಾರೋಗ್ಯಕ್ಕೆ ಒಳಗಾಗಲು ಮುಖ್ಯ ಕಾರಣ ಎಂದರು. ರೈತನಾಯಕ ಅನಾರೋಗ್ಯಕ್ಕೆ ಒಳಗಾಗಲಿ ಎಂಬ ಉದ್ದೇಶದಿಂದಲೇ ಅವರು ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿಲ್ಲವೆಂಬ ಸಂಶಯ ಮೂಡುತ್ತದೆ. ಇದೊಂದು ಸರ್ಕಾರಿ ವ್ಯವಸ್ಥೆ ಪರೋಕ್ಷವಾಗಿ ಕೊಲೆ ಯತ್ನ ನಡೆಸಿದೆ ಎಂದು ದೂರಿದರು. ಆಸ್ಪತ್ರೆಗೆ ಸೇರಿ ಐದು ದಿನಗಳಾಗಿದ್ದರೂ ಇಲ್ಲಿಯವರೆಗೂ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಆತ್ಮಸ್ಥೆöÊರ್ಯ ತುಂಬುವ ಕೆಲಸ ಅಧಿಕಾರಿಗಳು ಮಾಡಿಲ್ಲ. ಅಧಿಕಾರಿಗಳ ನಡೆ ಉದ್ಧಟನದಿಂದ ಕೂಡಿದೆ. ಇಂತಹ ಡಿಸಿಯನ್ನು ಯಾವುದೇ ಕಾರಣಕ್ಕೂ ಚಿತ್ರದುರ್ಗದಲ್ಲಿ ಇರಲು ಬಿಡಬಾರದು ಎಂದರು. ಟಿ.ವೆAಕಟೇಶ್ ಜಿಲ್ಲೆಗೆ ಆಗಮಿಸಿ ಎರಡೂವರೆ ವರ್ಷ ಆಗಿದ್ದರೂ ಇಲ್ಲಿಯವರೆಗೂ ಯಾವ ಕಾರಣಕ್ಕೆ ಅವರನ್ನೇ ಮುಂದುವರಿಸಲಾಗುತ್ತಿದೆ ಎಂದು ಪ್ರಶ್ನೀಸಿದ ಬಸವರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಎಟಿಎಂ ರೀತಿ ಬೆಂಬಲವಾಗಿ ನಿಂತಿದ್ದಾರೆ. ಈ ಕಾರಣಕ್ಕೆ ವೆಂಕಟೇಶ್ ಅವರನ್ನು ಉಳಿಸಿಕೊಳ್ಳಲಾಗಿದೆ ಎಂದು ಆರೋಪಿಸಿದರು. ಭ್ರಷ್ಟಾಚಾರದಲ್ಲಿ ಮುಳುಗಿರುವ ಅಧಿಕಾರಿಗಳು, ಜನಪ್ರತಿನಿಧಿಗಳು ಕೊನೇ ಪಕ್ಷ ಹೋರಾಟಗಾರರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಲಿ. ಜಿಲ್ಲೆಯ ಜನರ ಹಿತಕ್ಕಾಗಿ ಯಾವುದೇ ವ್ಯಕ್ತಿ ಚಳವಳಿ ಕೈಗೊಂಡರೇ ಅವರ ಮನವಿ ಆಲಿಸುವ ಬದ್ಧತೆ ಪ್ರದರ್ಶಿಸಲಿ ಎಂದು ಆಗ್ರಹಿಸಿದರು. ಜಿಲ್ಲಾಧ್ಯಕ್ಷ ಮರ್ಲಹಳ್ಳಿ ರವಿಕುಮಾರ್ ಮಾತನಾಡಿ, ದೇಶಕ್ಕೆ ಅನ್ನ ಕೊಡುವ ರೈತ ಉಪವಾಸ ಕುಳಿತ ತಕ್ಷಣವೇ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಬೇಕಾಗಿತ್ತು. ಆದರೆ, ಅವರು ನಿರ್ಲಕ್ಷö್ಯ ತೋರಿದ್ದರ ಪರಿಣಾಮ ರೈತನಾಯಕ ಕೆ.ಟಿ.ತಿಪ್ಪೇಸ್ವಾಮಿ ಕುಸಿದುಬಿದ್ದು ಆಸ್ಪತ್ರೆ ಸೇರುವಂತಾಗಿದೆ. ಈಗಲಾದರೂ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುವ ಮಾನವೀಯತೆ ಪ್ರದರ್ಶಿಸಲಿ ಎಂದು ತಿಳಿಸಿದರು. ತಾಲ್ಲೂಕಾಧ್ಯಕ್ಷ ಮಲ್ಲಸಮುದ್ರ ಗಂಗಾಧರ್, ಮುಖಂಡರಾದ ಸೂರಮ್ಮನಹಳ್ಳಿ ರಾಜಣ್ಣ, ಪ್ರಶಾಂತ್‌ರೆಡ್ಡಿ, ಮಿಠ್ಯಾನಾಯ್ಕ, ಓಬನಾಯ್ಕ್, ಚಂದ್ರಶೇಖರ ನಾಯಕ, ಹೀರೇಹಳ್ಳಿ ತಿಪ್ಪೇಸ್ವಾಮಿ, ಎದ್ದಲು ತಿಪ್ಪೇಸ್ವಾಮಿ, ಪಾಪಯ್ಯ, ಬಸವರಾಜ್, ರಾಜಣ್ಣ ಇತರರಿದ್ದರು. .

- Post by Suresh Belagere1
- ಚಿತ್ರದುರ್ಗದ ಜಿಲ್ಲಾ ಬಜೆಪಿ ಕಚೇರಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ನಾರಿ ಶಕ್ತಿ ವಂದನ ಅಭಿಯಾನ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಶ್ರೀಮತಿ ಶ್ಯಾಮಲ ಶಿವಪ್ರಕಾಶ್ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದು ನಾರಿ ಶಕ್ತಿ ವಂದನ ಕಾಯ್ದೆ, 2023, ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಒಂದು ಮಹತ್ವದ ಕ್ಷಣವನ್ನು ಗುರುತಿಸುತ್ತದೆ ಎಂದು ತಿಳಿಸಿದರು.1
- ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ನಿಶ್ಚಿತ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 'ವಿಧಾನಪರಿಷತ್ ಹಾಗೂ ಬಾಗಲಕೋಟೆಯಲ್ಲಿ ಲಿಂಗಾಯತ ಸಮುದಾಯದ ಮುಖಂಡರಿಗೆ ಪಕ್ಷ ಟಿಕೆಟ್ ನೀಡಿತ್ತು. ಹೀಗಾಗಿ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಹಿಂದುಳಿದ ವರ್ಗಕ್ಕೆ ಅವಕಾಶ ಕಲ್ಪಿಸಿತು. ಇದನ್ನು ಎಲ್ಲರೂ ಒಪ್ಪಿ, ಒಗ್ಗೂಡಿ ಉಪಚುನಾವಣೆ ಎದುರಿಸಿದ್ದೇವೆ. ಎಲ್ಲ ವರ್ಗದ ಜನಬೆಂಬಲ ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ' ಎಂದರು 'ಸ್ವಾಭಿಮಾನಿ ಬಳಗದ ರಾಜ್ಯ ಘಟಕದ ಅಧ್ಯಕ್ಷ ಜಿ.ಬಿ. ವಿನಯ್‌ಕುಮಾರ್ ಅವರು ಬಿಜೆಪಿಗೆ ಬಾಹ್ಯ ಬೆಂಬಲ ಮಾತ್ರ ವ್ಯಕ್ತಪಡಿಸಿದ್ದರು. ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಪಕ್ಷದ ಕೆಲ ಮುಖಂಡರು ಗೊಂದಲ ಉಂಟಾಗುವಂತಹ ಹೇಳಿಕೆಗಳನ್ನು ನೀಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ವಿನಯ್‌ಕುಮಾರ್ ಅವರಿಗೆ ಜಿಲ್ಲೆಯಲ್ಲಿ ಯಾವ ಕ್ಷೇತ್ರವೂ ಖಾಲಿ ಇಲ್ಲ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು. 'ದಾವಣಗೆರೆ ಉತ್ತರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಲೋಕಿಕೆರೆ ನಾಗರಾಜ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇವರನ್ನು ಹೊರತುಪಡಿಸಿ ಇನ್ನೂ ಹಲವರು ಅವಕಾಶಕ್ಕಾಗಿ ಕಾದು ಪಕ್ಷದಲ್ಲಿ ದುಡಿಯುತ್ತಿದ್ದಾರೆ. ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ನಾನೇ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ವಿನಯ್‌ಕುಮಾರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಾಧ್ಯವಿಲ್ಲ. ಬೇಕಿದ್ದರೆ ಪಕ್ಷೇತರರಾಗಿ ಕಣಕ್ಕೆ ಇಳಿಯಲಿ' ಎಂದರು.1
- ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಎನ್ ಆರ್ ಪುರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿಲು ವಿಶೇಷ ವಿಮಾನದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಕ್ಕೆ ಆಗಮಿಸಿದರು ಅವರನ್ನು ಕೆ ಆರ್ ಐ ಡಿ ಎಲ್ ಅಧ್ಯಕ್ಷರು ಹಾಗೂ ಭದ್ರಾವತಿಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿಕೆ ಸಂಗಮೇಶ್ವರ ಹಾಗೂ ಪಂಚ ಗ್ಯಾರಂಟಿ ಅಧ್ಯಕ್ಷರಾದ ಬಿಎಸ್ ಗಣೇಶ್ ಅವರು ಸ್ವಾಗತಿಸಿದರು2
- ಬಳ್ಳಾರಿ ನಗರದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರಕಾರಿ ಬಸ್ ಮತ್ತು ಲಾರಿ ನಡುವೆ ಸಾಗುತ್ತಿದ್ದ ವೇಳೆ, ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸುಮಾರು 18–20 ವರ್ಷದ ಯುವಕ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರಸ್ತೆ ಸುರಕ್ಷತೆಗೆ ಹೆಚ್ಚು ಗಮನ ನೀಡುವುದು ಅತ್ಯಗತ್ಯ ⚠️1
- Post by Onlinetv24x71
- Post by Mayur TV Hangal YouTube c1
- ಕೃಷಿ ಸಹಯಕ ನಿರ್ದೇಶಕ ಎಸ್ ಟಿ ರಮೇಶ್ ಇಂದು ಚಳ್ಳಕೆರೆ ನಗರದ ರೇಣುಕಾ ,ಫರ್ಟಿಲೈಸರ್ಸ್ ಆಂಜನೇಯ ಪವನ್ ಪರ್ಟಿಲೈಜರ್ಸ್, ಗಳಿಗೆ ಭೇಟಿ ನೀಡಿ ಪರಶೀಲಿಸಿದರು..1