Shuru
Apke Nagar Ki App…
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಸೂಟರ್‌ಪೇಟೆ ಮಜಿಲದಲ್ಲಿರುವ ದೈವರಾಜ ಕೋರ್ದಬ್ಬು ದೈವಸ್ಥಾನದ ಜೀರ್ಣೋದ್ಧಾರ ಹಾಗೂ ಪುನರ್ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ಶ್ರೀ ಪ್ರವೀಣ್ ಮಚ್ಚೇಂದ್ರನಾಥ್ ಬಾಬ, ಪ್ರಮುಖರಾದ ಶಿವಪ್ಪ ನಂತೂರು, ಭಾಸ್ಕರ ಚಂದ್ರ ಶೆಟ್ಟಿ, ಭರತ್ ಕುಮಾರ್ ಸೇರಿದಂತೆ ಆಡಳಿತ ಕಮಿಟಿಯ ಅಧ್ಯಕ್ಷರು ಹಾಗೂ ಸದಸ್ಯರು, ಮಹಿಳಾ ಸದಸ್ಯರು ಹಾಗೂ ಊರಿನ ಹತ್ತು ಸಮಸ್ತರು ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು.
Shamsheer Budoli
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಸೂಟರ್‌ಪೇಟೆ ಮಜಿಲದಲ್ಲಿರುವ ದೈವರಾಜ ಕೋರ್ದಬ್ಬು ದೈವಸ್ಥಾನದ ಜೀರ್ಣೋದ್ಧಾರ ಹಾಗೂ ಪುನರ್ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ಶ್ರೀ ಪ್ರವೀಣ್ ಮಚ್ಚೇಂದ್ರನಾಥ್ ಬಾಬ, ಪ್ರಮುಖರಾದ ಶಿವಪ್ಪ ನಂತೂರು, ಭಾಸ್ಕರ ಚಂದ್ರ ಶೆಟ್ಟಿ, ಭರತ್ ಕುಮಾರ್ ಸೇರಿದಂತೆ ಆಡಳಿತ ಕಮಿಟಿಯ ಅಧ್ಯಕ್ಷರು ಹಾಗೂ ಸದಸ್ಯರು, ಮಹಿಳಾ ಸದಸ್ಯರು ಹಾಗೂ ಊರಿನ ಹತ್ತು ಸಮಸ್ತರು ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು.
More news from ಕರ್ನಾಟಕ and nearby areas
- ಬಂಟ್ವಾಳದ ಬಿ ಮೂಡ ಗ್ರಾಮದಲ್ಲಿ ದಯಾನಂದ (45) ಎಂಬುವವರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ರಿಕ್ಷಾ ಚಾಲಕ ಹಾಗೂ ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದು, ಕಳೆದ ಸುಮಾರು 6 ತಿಂಗಳಿನಿಂದ ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅವರ ಸಹೋದರ ಮೋಹನ (40) ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ದಿನಾಂಕ 10.07.2026 ರಂದು ದಯಾನಂದ ಅವರ ಪತ್ನಿ ಕೆಲಸಕ್ಕೆ ಹಾಗೂ ಮಗಳು ಶಾಲೆಗೆ ಹೋಗಿದ್ದರು. ಅವರ ತಾಯಿ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ತೆರಳಿದ್ದರಿಂದ ಮನೆಯಲ್ಲಿ ದಯಾನಂದ ಒಬ್ಬರೇ ಇದ್ದರು. ನೆರೆಯವರಾದ ಶಶಿಕಲಾ ಎಂಬುವವರು ಫಿರ್ಯಾದುದಾರ ಮೋಹನ ಅವರಿಗೆ ಕರೆ ಮಾಡಿ ದಯಾನಂದ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ತಿಳಿಸಿದ್ದಾರೆ. ತಾಯಿ ಮಧ್ಯಾಹ್ನ 3:00 ಗಂಟೆಗೆ ದೇವಸ್ಥಾನದಿಂದ ಬಂದಾಗ ದಯಾನಂದ ಮನೆಯಲ್ಲಿ ಇರಲಿಲ್ಲ ಎಂದು ತಿಳಿಸಿದ್ದು, ಸಂಜೆ 4:00 ಗಂಟೆಗೆ ಶಾಲೆ ಮುಗಿಸಿ ಬಂದ ಮಗಳು ತಂದೆ ನೇಣು ಬಿಗಿದುಕೊಂಡಿರುವುದನ್ನು ನೋಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 19/2026, ಕಲಂ 194 BNSS ಅಡಿಯಲ್ಲಿ ಪ್ರಕರಣ ದಾಖಲಾಗಿದೆ.1
- ಭಾರತೀಯ ಸಂಗೀತ ಲೋಕದ ಅಮೂಲ್ಯ ರತ್ನ, ಗಾನ ಕೋಗಿಲೆ ಡಾಕ್ಟರ್ ಎಸ್. ಜಾನಕಿ ಅಮ್ಮ ಅವರ ಅಂತಿಮ ದರ್ಶನ ಪಡೆದು ಹಲವಾರು ಗಣ್ಯರು ಭಾವಪೂರ್ಣ ನಮನ ಸಲ್ಲಿಸಿದ್ದು, ಈ ವೇಳೆ ಸಮಾಜಮುಖಿ ವ್ಯಕ್ತಿತ್ವ ಹಾಗೂ ಯುವ ಉದ್ಯಮಿ ಜಿಮ್ ರವಿ ಅವರೂ ಸಹ ಆಗಮಿಸಿ ಪಾರ್ಥಿವ ಶರೀರಕ್ಕೆ ಶ್ರದ್ಧಾಂಜಲಿ ಅರ್ಪಿಸಿದರು. ಸಂಗೀತ ಲೋಕಕ್ಕೆ ಜಾನಕಿ ಅಮ್ಮ ಅವರು ನೀಡಿದ ಅಪಾರ ಕೊಡುಗೆಯನ್ನು ಈ ಸಂದರ್ಭದಲ್ಲಿ ಸ್ಮರಿಸಿದ ಜಿಮ್ ರವಿ ಅವರು, ಅವರ ಅಗಲಿಕೆಯು ಇಡೀ ದೇಶದ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.1
- ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಹಳೆನಗರದ ಸರ್ಕಾರಿ ಉರ್ದು ಪ್ರೌಢಶಾಲೆಯ ಸುತ್ತಲೂ ಕಸದ ರಾಶಿ ಹಾಗೂ ಕೊಚ್ಛೆ ತುಂಬಿಕೊಂಡಿದ್ದು, ಈ ಬಗ್ಗೆ ಕೂಡಲೇ ಗಮನಹರಿಸಿ ಸ್ವಚ್ಛತೆ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಮಾನವ ಹಕ್ಕುಗಳ ಹೋರಾಟ ಸಮಿತಿಯ ಅಧ್ಯಕ್ಷ ಬಿ. ಎನ್. ರಾಜು ಅವರು ವಿಧಾನ ಪರಿಷತ್ ಶಾಸಕಿ ಬಲ್ಕಿಷ್ ಬಾನು ಅವರಿಗೆ ಒತ್ತಾಯಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ಬಡ ಕುಟುಂಬಗಳ ಮಕ್ಕಳೇ ವಿದ್ಯಾಭ್ಯಾಸ ಮಾಡುತ್ತಿದ್ದು, ಅವರು ರೋಗರುಜಿನಗಳಿಗೆ ತುತ್ತಾಗುವ ಮುನ್ನವೇ ಶಾಲಾ ಆವರಣವನ್ನು ಸ್ವಚ್ಛಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಶಿವಮೊಗ್ಗ ಹಳೆನಗರದ ಸರ್ಕಾರಿ ಉರ್ದು ಪ್ರೌಢಶಾಲೆಯ ಆವರಣದಲ್ಲಿ ಕೊಚ್ಛೆ ತುಂಬಿಕೊಂಡಿರುವ ಪರಿಸ್ಥಿತಿಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.1
- ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಹೆರಿಗೆ ವಾರ್ಡಿನಲ್ಲಿ ತೀವ್ರ ಅವ್ಯವಸ್ಥೆ ಇರುವುದು ಬೆಳಕಿಗೆ ಬಂದಿದೆ. ಇಲ್ಲಿನ ಹೆರಿಗೆ ವಾರ್ಡಿನ ಬಾತ್ ರೂಮ್ ನಲ್ಲಿ ಬಲ್ಬ್ ಹಾಳಾಗಿದ್ದು, ಬಾಣಂತಿಯರು ಕತ್ತಲೆಯಲ್ಲಿಯೇ ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಹೆರಿಗೆ ವಾರ್ಡಿನಲ್ಲಿ ವಾಟರ್ ಫಿಲ್ಟರ್ ಕೆಟ್ಟು ಮೂರು ದಿನ ಕಳೆದಿದ್ದರೂ ಸಹ ಅದನ್ನು ದುರಸ್ತಿ ಮಾಡಿಸದೆ ನಿರ್ಲಕ್ಷ್ಯ ವಹಿಸಲಾಗಿದೆ. ಆಸ್ಪತ್ರೆಯ ವಾರ್ಡುಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವಂತೆ ಹಾಗೂ ಕೆಟ್ಟು ಹೋಗಿರುವ ವಾಟರ್ ಫಿಲ್ಟರ್ ಅನ್ನು ತಕ್ಷಣವೇ ಸರಿಪಡಿಸುವಂತೆ ಡಾ. ಮಲ್ಲಿಕಾರ್ಜುನ್ ಅವರಿಗೆ ಕರೆ ಮಾಡಿ ಗಮನಕ್ಕೆ ತರಲಾಗಿದೆ. ಈ ಭೇಟಿಯ ಸಂದರ್ಭದಲ್ಲಿ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಸಲ್ಮಾನ್, ರೂಪಾ ನಾರಾಯಣ್, ಅನಿತಾ ಚಂದ್ರು, ಮಂಜು ಹಾಗೂ ಐಸಾಕ್ ಲಿಂಕನ್ ಉಪಸ್ಥಿತರಿದ್ದರು. ಭದ್ರಾವತಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಕೊಠಡಿಗಳು ಕತ್ತಲೆಮಯವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.3
- ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಖ್ಯಾತರಾಗಿದ್ದ ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರು ತಮ್ಮ 88ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸುಮಾರು ಆರು ದಶಕಗಳ ಸುದೀರ್ಘ ಸಂಗೀತ ಪಯಣ ಹೊಂದಿದ್ದ ಅವರು ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಸೇರಿದಂತೆ 17ಕ್ಕೂ ಹೆಚ್ಚು ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಹಾಡುವ ಮೂಲಕ ಕೋಟ್ಯಾಂತರ ಅಭಿಮಾನಿಗಳ ಹೃದಯ ಗೆದ್ದಿದ್ದರು. ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಸೇರಿದಂತೆ ಅನೇಕ ಗೌರವಗಳನ್ನು ಪಡೆದಿದ್ದ ಅವರ ನಿಧನವು ಭಾರತೀಯ ಸಂಗೀತ ಲೋಕಕ್ಕೆ ತುಂಬಲಾರದ ಅಪಾರ ನಷ್ಟವನ್ನುಂಟು ಮಾಡಿದೆ. ಅಪ್ರತಿಮ ಗಾಯಕಿಯ ನಿಧನಕ್ಕೆ ಅಭಿಮಾನಿಗಳು, ಕಲಾವಿದರು ಹಾಗೂ ಸಾರ್ವಜನಿಕರು ತೀವ್ರ ಸಂತಾಪ ಸೂಚಿಸುತ್ತಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.3
- ಮೈಸೂರಿನಲ್ಲಿ ಎಸ್.ಜಾನಕಿ ಅವರ ಅಂತಿಮ ದರ್ಶನಕ್ಕೆ ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುವ ನಿರೀಕ್ಷೆಯಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಎಸ್.ಜಾನಕಿ ಅವರು ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದು, ಅವರ ಅಂತಿಮ ದರ್ಶನಕ್ಕಾಗಿ ಸಾಕಷ್ಟು ಅಭಿಮಾನಿಗಳು ಬರುವ ನಿರೀಕ್ಷೆ ಇದೆ ಎಂದು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಒಟ್ಟು 455 ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ. ಭದ್ರತೆಗಾಗಿ 4 ಎಸಿಪಿ, 12 ಇನ್ಸ್‌ಪೆಕ್ಟರ್, 20 ಪಿಎಸ್‌ಐಗಳು, 3 ಕೆ.ಎಸ್.ಆರ್.ಪಿ ಹಾಗೂ 3 ಕಮಾಂಡೋ ಪಡೆಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದ್ದು, ಬ್ಯಾರಿಕೇಟ್‌ಗಳನ್ನು ಅಳವಡಿಸಿ ಸೂಕ್ತ ಬಂದೋಬಸ್ತ್ ಮಾಡಲಾಗಿದೆ.1
- ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನ ಕನಕದಾಸ ವಿದ್ಯಾಸಂಸ್ಥೆಯ 2025-26 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಟಾಪರ್‌ಗಳಾದ ಪವಿತ್ರ ಮತ್ತು ಲತಾ ಅವರಿಗೆ ವಿಶೇಷ ಗೌರವ ಸಂದಿದೆ. ಈ ಇಬ್ಬರು ಸಾಧಕ ವಿದ್ಯಾರ್ಥಿನಿಯರ ಯಶಸ್ಸನ್ನು ಶ್ಲಾಘಿಸಿರುವ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳ ಸಂಘವು, ಅವರಿಗೆ ನಗದು ಬಹುಮಾನ ನೀಡಿ ಅಧಿಕೃತವಾಗಿ ಪುರಸ್ಕರಿಸಿದೆ.1
- ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯಲ್ಲಿ ಯುವಕನೊಬ್ಬ ಮನೆಯ ಮಲಗುವ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತನನ್ನು ಸೋಮಶೇಖರ್ ಹೆಚ್ (27) ಎಂದು ಗುರುತಿಸಲಾಗಿದೆ. ದಿನಾಂಕ 10.07.2026 ರಂದು ಬೆಳಗ್ಗಿನ ಜಾವದ ಅವಧಿಯಲ್ಲಿ ಸೋಮಶೇಖರ್ ನೇಣು ಬಿಗಿದುಕೊಂಡಿದ್ದು, ಆ ವೇಳೆ ನೇಣಿಗೆ ಬಳಸಿದ್ದ ಹಗ್ಗ ತುಂಡಾಗಿ ಆತನ ದೇಹವು ನೆಲದಲ್ಲಿದ್ದ ಗ್ಲಾಸ್ ಚೂರುಗಳ ಮೇಲೆ ಕವುಚಿ ಬಿದ್ದು ಮೃತಪಟ್ಟಿರುವುದು ಕಂಡುಬಂದಿದೆ. ಮೃತ ಸೋಮಶೇಖರ್ ಪ್ರತೀದಿನ ಮನೆಯವರಲ್ಲಿ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಮೃತನ ತಂದೆ, ಕಡಬ ನೆಲ್ಯಾಡಿ ನಿವಾಸಿ ಗಣಪಯ್ಯ (69) ಅವರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಗಣಪಯ್ಯ ಅವರು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ: 28/2026 ಹಾಗೂ ಕಲಂ: 194 BNSS ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.1