logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಚಿತ್ರಕಲಾ ಸ್ಪರ್ಧೆಯಲ್ಲಿ ವಿದ್ಯಾರ್ಥಿ ನಾಗರತ್ನ ಯತ್ನಟ್ಟಿಗೆ ಪ್ರಥಮ ಸ್ಥಾನ aksharakranti news ಚಿತ್ರಕಲಾ ಸ್ಪರ್ಧೆಯಲ್ಲಿ ನಾಗರತ್ನ ಯತ್ನಟ್ಟಿಗೆ ಪ್ರಥಮ ಸ್ಥಾನ ಕೊಪ್ಪಳ,: ರಾಯಚೂರಿನಲ್ಲಿ ನಡೆದ ಕಲಬುರಗಿ ವಿಭಾಗ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪಿಎಂಶ್ರೀ ಆದರ್ಶ ವಿದ್ಯಾಲಯ, ಕೊಪ್ಪಳ ಜಿಲ್ಲೆಯ ಕುಕನೂರಿನ ಇಟಗಿಯ 9ನೇ ತರಗತಿ ವಿದ್ಯಾರ್ಥಿನಿ ಕುಮಾರಿ ನಾಗರತ್ನ ಯತ್ನಟ್ಟಿ ಅವರು "ನಮ್ಮ ಭೂಮಿ, ನಮ್ಮ ನೀರು, ನಮ್ಮ ಶಕ್ತಿ" ಎಂಬ ವಿಷಯದ ಮೇಲೆ ಚಿತ್ರ ರಚಿಸಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿಭಾಗ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುವ ನಾಗರತ್ನ ಯತ್ನಟ್ಟಿ ಅವರಿಗೆ 25,000 ನಗದು ಬಹುಮಾನ ಲಭಿಸಿದೆ. ತಮ್ಮ ಪ್ರತಿಭೆಯ ಮೂಲಕ ಕೊಪ್ಪಳ ಜಿಲ್ಲೆ ಹಾಗೂ ಶಾಲೆಗೆ ಕೀರ್ತಿ ತಂದಿರುವುದು ಹೆಮ್ಮೆಯ ಸಂಗತಿಯಾಗಿದೆ. ವಿದ್ಯಾರ್ಥಿನಿಗೆ ಇದೇ ದಿನಾಂಕ 17-09-2026ರಂದು ಕಲಬುರಗಿಯಲ್ಲಿ ನಡೆಯುವ ಕಲ್ಯಾಣ ಕರ್ನಾಟಕ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಪುರಸ್ಕಾರ ಬಹುಮಾನ ನೀಡಿ ಗೌರವಿಸಲಾಗುತ್ತದೆ. ವಿದ್ಯಾರ್ಥಿನಿಗೆ ಚಿತ್ರಕಲಾ ಸ್ಪರ್ಧೆಗೆ ತರಬೇತಿ ಹಾಗೂ ಮಾರ್ಗದರ್ಶನ ನೀಡಿದ ಚಿತ್ರಕಲಾ ಶಿಕ್ಷಕರಾದ ನಾಗರಾಜ್ ಸುನಗ ಅವರ ಪ್ರಯತ್ನವನ್ನು ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದೆ. ಈ ಸಾಧನೆಗೆ ಮುಖ್ಯೋಪಾಧ್ಯಾಯರಾದ ರಾಮರಡ್ಡೆಪ್ಪ SDMC ಅಧ್ಯಕ್ಷರಾದ ಕಳಕನಗೌಡ ಸಾದಾರ SDMC ಸದಸ್ಯರು ಹಾಗೂ ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿ, ವಿದ್ಯಾರ್ಥಿನಿ ನಾಗರತ್ನ ಯತ್ನಟ್ಟಿ ಹಾಗೂ ತರಬೇತಿ ನೀಡಿದ ಶಿಕ್ಷಕ ನಾಗರಾಜ್ ಸುನಗ ಅವರಿಗೆ ಶುಭ ಹಾರೈಸಿದ್ದಾರೆ.

1 hr ago
user_ಅಕ್ಷರಕ್ರಾಂತಿ ನ್ಯೂಸ್
ಅಕ್ಷರಕ್ರಾಂತಿ ನ್ಯೂಸ್
Local News Reporter ಕೊಪ್ಪಳ, ಕೊಪ್ಪಳ, ಕರ್ನಾಟಕ•
1 hr ago
41a5d9b2-3671-4b9a-b706-666ea0871311

ಚಿತ್ರಕಲಾ ಸ್ಪರ್ಧೆಯಲ್ಲಿ ವಿದ್ಯಾರ್ಥಿ ನಾಗರತ್ನ ಯತ್ನಟ್ಟಿಗೆ ಪ್ರಥಮ ಸ್ಥಾನ aksharakranti news ಚಿತ್ರಕಲಾ ಸ್ಪರ್ಧೆಯಲ್ಲಿ ನಾಗರತ್ನ ಯತ್ನಟ್ಟಿಗೆ ಪ್ರಥಮ ಸ್ಥಾನ ಕೊಪ್ಪಳ,: ರಾಯಚೂರಿನಲ್ಲಿ ನಡೆದ ಕಲಬುರಗಿ ವಿಭಾಗ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪಿಎಂಶ್ರೀ ಆದರ್ಶ ವಿದ್ಯಾಲಯ, ಕೊಪ್ಪಳ ಜಿಲ್ಲೆಯ ಕುಕನೂರಿನ ಇಟಗಿಯ 9ನೇ ತರಗತಿ ವಿದ್ಯಾರ್ಥಿನಿ ಕುಮಾರಿ ನಾಗರತ್ನ ಯತ್ನಟ್ಟಿ ಅವರು "ನಮ್ಮ ಭೂಮಿ, ನಮ್ಮ ನೀರು, ನಮ್ಮ ಶಕ್ತಿ" ಎಂಬ ವಿಷಯದ ಮೇಲೆ ಚಿತ್ರ ರಚಿಸಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿಭಾಗ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುವ ನಾಗರತ್ನ ಯತ್ನಟ್ಟಿ ಅವರಿಗೆ 25,000 ನಗದು ಬಹುಮಾನ ಲಭಿಸಿದೆ. ತಮ್ಮ ಪ್ರತಿಭೆಯ ಮೂಲಕ ಕೊಪ್ಪಳ ಜಿಲ್ಲೆ ಹಾಗೂ ಶಾಲೆಗೆ ಕೀರ್ತಿ ತಂದಿರುವುದು ಹೆಮ್ಮೆಯ ಸಂಗತಿಯಾಗಿದೆ. ವಿದ್ಯಾರ್ಥಿನಿಗೆ ಇದೇ ದಿನಾಂಕ 17-09-2026ರಂದು ಕಲಬುರಗಿಯಲ್ಲಿ ನಡೆಯುವ ಕಲ್ಯಾಣ ಕರ್ನಾಟಕ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಪುರಸ್ಕಾರ ಬಹುಮಾನ ನೀಡಿ ಗೌರವಿಸಲಾಗುತ್ತದೆ. ವಿದ್ಯಾರ್ಥಿನಿಗೆ ಚಿತ್ರಕಲಾ ಸ್ಪರ್ಧೆಗೆ ತರಬೇತಿ ಹಾಗೂ ಮಾರ್ಗದರ್ಶನ ನೀಡಿದ ಚಿತ್ರಕಲಾ ಶಿಕ್ಷಕರಾದ ನಾಗರಾಜ್ ಸುನಗ ಅವರ ಪ್ರಯತ್ನವನ್ನು ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದೆ. ಈ ಸಾಧನೆಗೆ ಮುಖ್ಯೋಪಾಧ್ಯಾಯರಾದ ರಾಮರಡ್ಡೆಪ್ಪ SDMC ಅಧ್ಯಕ್ಷರಾದ ಕಳಕನಗೌಡ ಸಾದಾರ SDMC ಸದಸ್ಯರು ಹಾಗೂ ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿ, ವಿದ್ಯಾರ್ಥಿನಿ ನಾಗರತ್ನ ಯತ್ನಟ್ಟಿ ಹಾಗೂ ತರಬೇತಿ ನೀಡಿದ ಶಿಕ್ಷಕ ನಾಗರಾಜ್ ಸುನಗ ಅವರಿಗೆ ಶುಭ ಹಾರೈಸಿದ್ದಾರೆ.

More news from ಕರ್ನಾಟಕ and nearby areas
  • ಅಸಹಾಯಕ ದಿವ್ಯಾಂಗ ಯುವಕನ ನೋವಿಗೆ ತಕ್ಷಣ ಸ್ಪಂದನೆ; ಶೌಚಾಲಯ ಹಾಗೂ ವಾಹನದ ನೆರವಿಗೆ ಶಾಸಕ ಭರವಸೆ ಕೂಡ್ಲಿಗಿ: ಅಧಿಕಾರವೆಂಬುದು ಕೇವಲ ಆಡಳಿತ ನಡೆಸುವ ಹೊಣೆಗಾರಿಕೆಯಲ್ಲ; ಸಂಕಷ್ಟದಲ್ಲಿರುವವರ ಕಣ್ಣೀರೊರೆಸುವ ಮಾನವೀಯ ಹೊಣೆಗಾರಿಕೆಯೂ ಹೌದು ಎಂಬುದನ್ನು ಕೂಡ್ಲಿಗಿ ಕ್ಷೇತ್ರದ ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಮತ್ತೊಮ್ಮೆ ತೋರಿಸಿದ್ದಾರೆ. ಕೂಡ್ಲಿಗಿ ತಾಲೂಕಿನ ಬಡೇಲಡಕು ಗ್ರಾಮದ ದಿವ್ಯಾಂಗ ಯುವಕನೊಬ್ಬ ಹಲವು ದಿನಗಳಿಂದ ಮೂಲಭೂತ ಸೌಲಭ್ಯಗಳ ಕೊರತೆಯ ನಡುವೆ ಅಸಹಾಯಕ ಬದುಕು ಸಾಗಿಸುತ್ತಿದ್ದ. ಮನೆಯಲ್ಲಿ ಶೌಚಾಲಯದ ವ್ಯವಸ್ಥೆಯಿಲ್ಲದೆ ಮುಜುಗರ ಹಾಗೂ ಸಂಕಷ್ಟ ಅನುಭವಿಸುತ್ತಿದ್ದ ಈತನಿಗೆ, ಓಡಾಡಲು ಸೂಕ್ತ ವಾಹನವೂ ಇರಲಿಲ್ಲ. ಇದರಿಂದ ದಿನನಿತ್ಯದ ಬದುಕೇ ಸವಾಲಾಗಿ ಪರಿಣಮಿಸಿತ್ತು. ಇದಕ್ಕಿಂತಲೂ ನೋವಿನ ಸಂಗತಿಯೆಂದರೆ, ದ್ವಿಚಕ್ರ ವಾಹನ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ ಪರಿಣಾಮ ಯುವಕನ ಕುಟುಂಬದ ಸಂಕಷ್ಟ ಮತ್ತಷ್ಟು ಹೆಚ್ಚಾಗಿತ್ತು. ಒಂದು ಕಡೆ ದೈಹಿಕ ಅಸಹಾಯಕತೆ, ಮತ್ತೊಂದೆಡೆ ಆರ್ಥಿಕ ಸಂಕಷ್ಟ ಹಾಗೂ ಮೂಲಭೂತ ಸೌಲಭ್ಯಗಳ ಕೊರತೆ—ಇವೆಲ್ಲವೂ ಆತನ ಬದುಕನ್ನು ಕತ್ತಲೆಯತ್ತ ತಳ್ಳಿದ್ದವು. ಸ್ನೇಹಿತರ ಮನವಿಗೆ ಸ್ಪಂದಿಸಿದ ಶಾಸಕ ಯುವಕನ ಪರಿಸ್ಥಿತಿಯನ್ನು ಆತನ ಸ್ನೇಹಿತರು ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಅವರ ಗಮನಕ್ಕೆ ತಂದರು. ವಿಷಯ ತಿಳಿದ ತಕ್ಷಣವೇ ಶಾಸಕ ಸ್ಪಂದಿಸಿದ್ದು, ಯಾವುದೇ ವಿಳಂಬ ಮಾಡದೆ ಯುವಕನ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.
    1
    ಅಸಹಾಯಕ ದಿವ್ಯಾಂಗ ಯುವಕನ ನೋವಿಗೆ ತಕ್ಷಣ ಸ್ಪಂದನೆ; ಶೌಚಾಲಯ ಹಾಗೂ ವಾಹನದ ನೆರವಿಗೆ ಶಾಸಕ ಭರವಸೆ
ಕೂಡ್ಲಿಗಿ:
ಅಧಿಕಾರವೆಂಬುದು ಕೇವಲ ಆಡಳಿತ ನಡೆಸುವ ಹೊಣೆಗಾರಿಕೆಯಲ್ಲ; ಸಂಕಷ್ಟದಲ್ಲಿರುವವರ ಕಣ್ಣೀರೊರೆಸುವ ಮಾನವೀಯ ಹೊಣೆಗಾರಿಕೆಯೂ ಹೌದು ಎಂಬುದನ್ನು ಕೂಡ್ಲಿಗಿ ಕ್ಷೇತ್ರದ ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಮತ್ತೊಮ್ಮೆ ತೋರಿಸಿದ್ದಾರೆ.
ಕೂಡ್ಲಿಗಿ ತಾಲೂಕಿನ ಬಡೇಲಡಕು ಗ್ರಾಮದ ದಿವ್ಯಾಂಗ ಯುವಕನೊಬ್ಬ ಹಲವು ದಿನಗಳಿಂದ ಮೂಲಭೂತ ಸೌಲಭ್ಯಗಳ ಕೊರತೆಯ ನಡುವೆ ಅಸಹಾಯಕ ಬದುಕು ಸಾಗಿಸುತ್ತಿದ್ದ. ಮನೆಯಲ್ಲಿ ಶೌಚಾಲಯದ ವ್ಯವಸ್ಥೆಯಿಲ್ಲದೆ ಮುಜುಗರ ಹಾಗೂ ಸಂಕಷ್ಟ ಅನುಭವಿಸುತ್ತಿದ್ದ ಈತನಿಗೆ, ಓಡಾಡಲು ಸೂಕ್ತ ವಾಹನವೂ ಇರಲಿಲ್ಲ. ಇದರಿಂದ ದಿನನಿತ್ಯದ ಬದುಕೇ ಸವಾಲಾಗಿ ಪರಿಣಮಿಸಿತ್ತು.
ಇದಕ್ಕಿಂತಲೂ ನೋವಿನ ಸಂಗತಿಯೆಂದರೆ, ದ್ವಿಚಕ್ರ ವಾಹನ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ ಪರಿಣಾಮ ಯುವಕನ ಕುಟುಂಬದ ಸಂಕಷ್ಟ ಮತ್ತಷ್ಟು ಹೆಚ್ಚಾಗಿತ್ತು. ಒಂದು ಕಡೆ ದೈಹಿಕ ಅಸಹಾಯಕತೆ, ಮತ್ತೊಂದೆಡೆ ಆರ್ಥಿಕ ಸಂಕಷ್ಟ ಹಾಗೂ ಮೂಲಭೂತ ಸೌಲಭ್ಯಗಳ ಕೊರತೆ—ಇವೆಲ್ಲವೂ ಆತನ ಬದುಕನ್ನು ಕತ್ತಲೆಯತ್ತ ತಳ್ಳಿದ್ದವು.
ಸ್ನೇಹಿತರ ಮನವಿಗೆ ಸ್ಪಂದಿಸಿದ ಶಾಸಕ
ಯುವಕನ ಪರಿಸ್ಥಿತಿಯನ್ನು ಆತನ ಸ್ನೇಹಿತರು ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಅವರ ಗಮನಕ್ಕೆ ತಂದರು. ವಿಷಯ ತಿಳಿದ ತಕ್ಷಣವೇ ಶಾಸಕ ಸ್ಪಂದಿಸಿದ್ದು, ಯಾವುದೇ ವಿಳಂಬ ಮಾಡದೆ ಯುವಕನ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.
    user_ಹೂಡೇಂ ಮಂಜುನಾಥ
    ಹೂಡೇಂ ಮಂಜುನಾಥ
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    22 hrs ago
  • ಪಕ್ಕ ಲವರ್’ ಸಿನಿಮಾ ಶುರು! 🎬 ಸ್ಥಳೀಯ ಪ್ರತಿಭೆಗಳಿಗೆ ದೊಡ್ಡ ಅವಕಾಶ! ಸಿನಿಮಾ ನಿರ್ಮಾಣಕ್ಕಿಂತ ಪ್ರಮೋಷನ್ ಮುಖ್ಯ! ಬಳ್ಳಾರಿಯ ಸ್ಥಳೀಯ ಪ್ರತಿಭೆಗಳನ್ನೇ ಒಳಗೊಂಡು ನಿರ್ಮಾಣವಾಗುತ್ತಿರುವ ‘ಪಕ್ಕ ಲವರ್’ ಕನ್ನಡ ಚಲನಚಿತ್ರದ ಟೈಟಲ್ ಹಾಗೂ ಹಾಡು ಬಿಡುಗಡೆಗೊಂಡಿದೆ. 🎬 ಸ್ಥಳೀಯ ಕಲಾವಿದರು ಹಾಗೂ ಪ್ರತಿಭೆಗಳಿಗೆ ಅವಕಾಶ ನೀಡಿ ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಚಿತ್ರದ ನಿರ್ದೇಶಕ ಕೋಳೂರು ಶೇಖರ್ ಹೇಳಿದ್ದಾರೆ. ಚಿತ್ರದ ಶೇ.30ರಷ್ಟು ಚಿತ್ರೀಕರಣ ಈಗಾಗಲೇ ಪೂರ್ಣಗೊಂಡಿದ್ದು, ಉಳಿದ ಚಿತ್ರೀಕರಣವನ್ನು ಬಳ್ಳಾರಿ ಮತ್ತು ಬೆಂಗಳೂರಿನಲ್ಲಿ ನಡೆಸಲಾಗಲಿದೆ. ಚಿತ್ರದ ನಾಯಕ ನಟ ಅವಿನಾಶ್, ‘ಪಕ್ಕ ಲವರ್’ ಸಿನಿಮಾ ಯಶಸ್ವಿಯಾಗುವ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಉದ್ಯಮಿ ಹಾಗೂ ನಿರ್ಮಾಪಕ ಪೋಲಾ ಪ್ರವೀಣ್ ಕುಮಾರ್, ಸಿನಿಮಾ ನಿರ್ಮಾಣದಷ್ಟೇ ಪ್ರಮೋಷನ್‌ಗೂ ಆದ್ಯತೆ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. 👉 ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ಸಿಗಬೇಕು ಎನ್ನುವ ನಿಮ್ಮ ಅಭಿಪ್ರಾಯವೇನು? ಕಾಮೆಂಟ್ ಮಾಡಿ. ASN NEWS24 ಕನ್ನಡ – ಸುತ್ತಮುತ್ತ ನಡೆಯುವ ಸುದ್ದಿ ನಿಮ್ಮ ಮುಂದೆ. #PakkaLover #PakkaLoverMovie #KannadaMovie #KannadaCinema #KannadaFilm #Ballari #BallariNews #Bellary #KannadaNews #KannadaFilmIndustry #LocalTalent #LocalArtists #Avinash #KannadaActor #FilmPromotion #Sandalwood #SandalwoodNews #KarnatakaNews #ASNNews24 #ASNNews24Kannada
    1
    ಪಕ್ಕ ಲವರ್’ ಸಿನಿಮಾ ಶುರು! 🎬
ಸ್ಥಳೀಯ ಪ್ರತಿಭೆಗಳಿಗೆ ದೊಡ್ಡ ಅವಕಾಶ!
ಸಿನಿಮಾ ನಿರ್ಮಾಣಕ್ಕಿಂತ ಪ್ರಮೋಷನ್ ಮುಖ್ಯ!
ಬಳ್ಳಾರಿಯ ಸ್ಥಳೀಯ ಪ್ರತಿಭೆಗಳನ್ನೇ ಒಳಗೊಂಡು ನಿರ್ಮಾಣವಾಗುತ್ತಿರುವ ‘ಪಕ್ಕ ಲವರ್’ ಕನ್ನಡ ಚಲನಚಿತ್ರದ ಟೈಟಲ್ ಹಾಗೂ ಹಾಡು ಬಿಡುಗಡೆಗೊಂಡಿದೆ. 🎬
ಸ್ಥಳೀಯ ಕಲಾವಿದರು ಹಾಗೂ ಪ್ರತಿಭೆಗಳಿಗೆ ಅವಕಾಶ ನೀಡಿ ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಚಿತ್ರದ ನಿರ್ದೇಶಕ ಕೋಳೂರು ಶೇಖರ್ ಹೇಳಿದ್ದಾರೆ.
ಚಿತ್ರದ ಶೇ.30ರಷ್ಟು ಚಿತ್ರೀಕರಣ ಈಗಾಗಲೇ ಪೂರ್ಣಗೊಂಡಿದ್ದು, ಉಳಿದ ಚಿತ್ರೀಕರಣವನ್ನು ಬಳ್ಳಾರಿ ಮತ್ತು ಬೆಂಗಳೂರಿನಲ್ಲಿ ನಡೆಸಲಾಗಲಿದೆ.
ಚಿತ್ರದ ನಾಯಕ ನಟ ಅವಿನಾಶ್, ‘ಪಕ್ಕ ಲವರ್’ ಸಿನಿಮಾ ಯಶಸ್ವಿಯಾಗುವ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಉದ್ಯಮಿ ಹಾಗೂ ನಿರ್ಮಾಪಕ ಪೋಲಾ ಪ್ರವೀಣ್ ಕುಮಾರ್, ಸಿನಿಮಾ ನಿರ್ಮಾಣದಷ್ಟೇ ಪ್ರಮೋಷನ್‌ಗೂ ಆದ್ಯತೆ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
👉 ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ಸಿಗಬೇಕು ಎನ್ನುವ ನಿಮ್ಮ ಅಭಿಪ್ರಾಯವೇನು? ಕಾಮೆಂಟ್ ಮಾಡಿ.
ASN NEWS24 ಕನ್ನಡ – ಸುತ್ತಮುತ್ತ ನಡೆಯುವ ಸುದ್ದಿ ನಿಮ್ಮ ಮುಂದೆ.
#PakkaLover #PakkaLoverMovie #KannadaMovie #KannadaCinema #KannadaFilm #Ballari #BallariNews #Bellary #KannadaNews #KannadaFilmIndustry #LocalTalent #LocalArtists #Avinash #KannadaActor #FilmPromotion #Sandalwood #SandalwoodNews #KarnatakaNews #ASNNews24 #ASNNews24Kannada
    user_AsnNews24Kannada
    AsnNews24Kannada
    Local News Reporter Ballari, Karnataka•
    10 hrs ago
  • ಮಸ್ಕಿ ಟಾಟಾ ಎಸಿ ಚಾಲಕರ–ಮಾಲಕರ ಸಂಘದಿಂದ ಅದ್ದೂರಿ ಗಣೇಶ ವಿಸರ್ಜನೆ ಟಾಟಾ ಎಸಿ ಚಾಲಕರ–ಮಾಲಕರ ಸಂಘದಿಂದ ಅದ್ದೂರಿ ಗಣೇಶ ವಿಸರ್ಜನೆ ಮಸ್ಕಿ: ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ಮಲ್ಲಿಕಾರ್ಜುನ ಬಂಡೆ ಟಾಟಾ ಎಸಿ ಚಾಲಕರ ಹಾಗೂ ಮಾಲಕರ ಸಂಘದ ವತಿಯಿಂದ ಗಣೇಶ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಸಂಘದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ಮೂರ್ತಿಯ ವಿಸರ್ಜನಾ ಕಾರ್ಯಕ್ರಮವನ್ನು ಸೋಮವಾರ ಸಂಜೆ ಸುಮಾರು 7 ಗಂಟೆಗೆ ಸಂಭ್ರಮದಿಂದ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಸದಸ್ಯರು, ಚಾಲಕರು ಹಾಗೂ ಮಾಲಕರು ಡಿಜೆ ಸಂಗೀತಕ್ಕೆ ಹೆಜ್ಜೆ ಹಾಕಿ, ನೃತ್ಯ ಮಾಡುವ ಮೂಲಕ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದರು. ಗಣೇಶ ಮೂರ್ತಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ದು ಭಕ್ತಿಭಾವ ಹಾಗೂ ಸಡಗರದಿಂದ ವಿಸರ್ಜನೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
    1
    ಮಸ್ಕಿ ಟಾಟಾ ಎಸಿ ಚಾಲಕರ–ಮಾಲಕರ ಸಂಘದಿಂದ ಅದ್ದೂರಿ ಗಣೇಶ ವಿಸರ್ಜನೆ
ಟಾಟಾ ಎಸಿ ಚಾಲಕರ–ಮಾಲಕರ ಸಂಘದಿಂದ ಅದ್ದೂರಿ ಗಣೇಶ ವಿಸರ್ಜನೆ
ಮಸ್ಕಿ: ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ಮಲ್ಲಿಕಾರ್ಜುನ ಬಂಡೆ ಟಾಟಾ ಎಸಿ ಚಾಲಕರ ಹಾಗೂ ಮಾಲಕರ ಸಂಘದ ವತಿಯಿಂದ ಗಣೇಶ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಸಂಘದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ಮೂರ್ತಿಯ ವಿಸರ್ಜನಾ ಕಾರ್ಯಕ್ರಮವನ್ನು ಸೋಮವಾರ ಸಂಜೆ ಸುಮಾರು 7 ಗಂಟೆಗೆ ಸಂಭ್ರಮದಿಂದ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಸದಸ್ಯರು, ಚಾಲಕರು ಹಾಗೂ ಮಾಲಕರು ಡಿಜೆ ಸಂಗೀತಕ್ಕೆ ಹೆಜ್ಜೆ ಹಾಕಿ, ನೃತ್ಯ ಮಾಡುವ ಮೂಲಕ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದರು.
ಗಣೇಶ ಮೂರ್ತಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ದು ಭಕ್ತಿಭಾವ ಹಾಗೂ ಸಡಗರದಿಂದ ವಿಸರ್ಜನೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
    user_ಹನುಮೇಶ ನಾಯಕ್
    ಹನುಮೇಶ ನಾಯಕ್
    ಮಾಸ್ಕಿ, ರಾಯಚೂರು, ಕರ್ನಾಟಕ•
    21 hrs ago
  • ಗುಳೇದಗುಡ್ಡ: ನೀಲಕಂಠೇಶ್ವರ ಪತ್ತಿನ ಸಹಕಾರಿ ಸಂಘಕ್ಕೆ 26ಲಕ್ಷ ರು ಲಾಭ ಗುಳೇದಗುಡ್ಡ : ಸಹಕಾರಿ ಕ್ಷೇತ್ರ ಬೆಳವಣಿಗೆ ಹೊಂದಬೇಕಾದರೆ ಅದಕ್ಕೆ ಪರಸ್ಪರ ಸಹಕಾರ ಅವಶ್ಯವಾಗಿಬೇಕು. ಸಕಾಲದಲ್ಲಿ ಸಾಲ ಮರುಪಾವತಿ, ಸದಸ್ಯರ ಸಹಕಾರದಿಂದ ನಮ್ಮ ಸಹಕಾರಿ ಸಂಘವು ಪ್ರಸಕ್ತ ವರ್ಷ 26 ಲಕ್ಷ 66ಸಾವಿರ ಲಾಭಗಳಿಸಿದೆ ಎಂದು ನೀಲಕಂಠೇಶ್ವರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಿದ್ದು ಅರಕಾಲಚಿಟ್ಟಿ ಹೇಳಿದರು. ಅವರು ಪಟ್ಟಣದ ಶ್ರೀ ನೀಲಕಂಠೇಶ್ವರ ಪತ್ತಿನ ಸಹಕಾರಿ ಸಂಘದ 17ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘದಲ್ಲಿ 1737 ಸದಸ್ಯರಿದ್ದು, 866 ಸಹ ಸದಸ್ಯರಿದ್ದಾರೆ. 92 ಲಕ್ 76 ಸಾವಿರ ಶೇರು ಬಂಡವಾಳ, 11 ಕೋಟಿ 23 ಲಕ್ಷ ಠೇವು, 13 ಕೋಟಿ 90 ಲಕ್ಷ ದುಡಿಯುವ ಬಂಡವಾಳ, 9 ಕೋಟಿ 69 ಲಕ್ಷ ಸಾಲ ನೀಡಲಾಗಿದೆ ಎಂದರು. ಸಹಕಾರಿ ಕ್ಷೇತ್ರವು ಸಹಕಾರಿ ತತ್ವದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಂಘದ ಸದಸ್ಯರು ಉತ್ತಮ ಸ್ಪಂದನೆ ನೀಡುತ್ತಿದ್ದು, ವರ್ಷದಿಂದ ವರ್ಷಕ್ಕೆ ಉತ್ತಮ ಪ್ರಗತಿಯತ್ತ ಸಾಗುತ್ತಿದೆ. ಸದಸ್ಯರು ಇನ್ನಷ್ಟು ಸಹಕಾರ ನೀಡಬೇಕೆಂದು ಸಿದ್ದು ಅರಕಾಲಚಿಟ್ಟಿ ಹೇಳಿದರು. ನಿವೃತ್ತ ಉಪನ್ಯಾಸಕ ಮಹದೇವಯ್ಯ ನೀಲಕಂಠಮಠ ಅವರು ಸಾನಿಧ್ಯ ವಹಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್‌ಸಿ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ನೂರಂದಪ್ಪ ಮಳ್ಳಿ, ನಿರ್ದೇಶಕರಾದ ಸಿದ್ರಾಮಪ್ಪ ಹನಮಸಾಗರ, ರವೀಂದ್ರ ಕಲಕೇರಿ, ವಿಜಯಕುಮಾರ ಬೇಟಗೇರಿಗೌಡ್ರ, ಮಾಗುಂಡಪ್ಪ ದೇವರಮನಿ, ಓಂಕಾರಪ್ಪ ದಿಂಡಿ, ರವಿ ಬೆಕಿನಾಳ, ಗುರು ಹಂಡಿ, ರಾಮಕೃಷ್ಣ ಹಲಗಲಿ, ಬಸವಣ್ಣೆವ್ವ ಯಂಡಿಗೇರಿ, ಲತಾ ರಾಂಪೂರ, ಸುವರ್ಣಾ ಉಣಚಗಿ ಸೇರಿದಂತೆ ಕೊಂಕಣಕೊಪ್ಪ ಶಾಖೆ ಸಲಹಾ ಸಮಿತಿ ಪದಾಧಿಕಾರಿಗಳು ಸೇರಿದಂತೆ ಇತರರು ಇದ್ದರು.
    1
    ಗುಳೇದಗುಡ್ಡ: ನೀಲಕಂಠೇಶ್ವರ ಪತ್ತಿನ ಸಹಕಾರಿ ಸಂಘಕ್ಕೆ 26ಲಕ್ಷ ರು ಲಾಭ 
ಗುಳೇದಗುಡ್ಡ : ಸಹಕಾರಿ ಕ್ಷೇತ್ರ ಬೆಳವಣಿಗೆ ಹೊಂದಬೇಕಾದರೆ ಅದಕ್ಕೆ ಪರಸ್ಪರ ಸಹಕಾರ ಅವಶ್ಯವಾಗಿಬೇಕು. ಸಕಾಲದಲ್ಲಿ ಸಾಲ ಮರುಪಾವತಿ, ಸದಸ್ಯರ ಸಹಕಾರದಿಂದ ನಮ್ಮ ಸಹಕಾರಿ ಸಂಘವು ಪ್ರಸಕ್ತ ವರ್ಷ 26 ಲಕ್ಷ 66ಸಾವಿರ ಲಾಭಗಳಿಸಿದೆ ಎಂದು ನೀಲಕಂಠೇಶ್ವರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಿದ್ದು ಅರಕಾಲಚಿಟ್ಟಿ ಹೇಳಿದರು.
ಅವರು ಪಟ್ಟಣದ ಶ್ರೀ ನೀಲಕಂಠೇಶ್ವರ ಪತ್ತಿನ ಸಹಕಾರಿ ಸಂಘದ 17ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘದಲ್ಲಿ 1737 ಸದಸ್ಯರಿದ್ದು, 866 ಸಹ ಸದಸ್ಯರಿದ್ದಾರೆ. 92 ಲಕ್ 76 ಸಾವಿರ ಶೇರು ಬಂಡವಾಳ, 11 ಕೋಟಿ 23 ಲಕ್ಷ ಠೇವು, 13 ಕೋಟಿ 90 ಲಕ್ಷ ದುಡಿಯುವ ಬಂಡವಾಳ, 9 ಕೋಟಿ 69 ಲಕ್ಷ ಸಾಲ ನೀಡಲಾಗಿದೆ ಎಂದರು. 
ಸಹಕಾರಿ ಕ್ಷೇತ್ರವು ಸಹಕಾರಿ ತತ್ವದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಂಘದ ಸದಸ್ಯರು ಉತ್ತಮ ಸ್ಪಂದನೆ ನೀಡುತ್ತಿದ್ದು, ವರ್ಷದಿಂದ ವರ್ಷಕ್ಕೆ ಉತ್ತಮ ಪ್ರಗತಿಯತ್ತ ಸಾಗುತ್ತಿದೆ. ಸದಸ್ಯರು ಇನ್ನಷ್ಟು ಸಹಕಾರ ನೀಡಬೇಕೆಂದು ಸಿದ್ದು ಅರಕಾಲಚಿಟ್ಟಿ ಹೇಳಿದರು.
ನಿವೃತ್ತ ಉಪನ್ಯಾಸಕ ಮಹದೇವಯ್ಯ ನೀಲಕಂಠಮಠ ಅವರು ಸಾನಿಧ್ಯ ವಹಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್‌ಸಿ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ನೂರಂದಪ್ಪ ಮಳ್ಳಿ, ನಿರ್ದೇಶಕರಾದ ಸಿದ್ರಾಮಪ್ಪ ಹನಮಸಾಗರ, ರವೀಂದ್ರ ಕಲಕೇರಿ, ವಿಜಯಕುಮಾರ ಬೇಟಗೇರಿಗೌಡ್ರ, ಮಾಗುಂಡಪ್ಪ ದೇವರಮನಿ, ಓಂಕಾರಪ್ಪ ದಿಂಡಿ, ರವಿ ಬೆಕಿನಾಳ, ಗುರು ಹಂಡಿ, ರಾಮಕೃಷ್ಣ ಹಲಗಲಿ, ಬಸವಣ್ಣೆವ್ವ ಯಂಡಿಗೇರಿ, ಲತಾ ರಾಂಪೂರ, ಸುವರ್ಣಾ ಉಣಚಗಿ ಸೇರಿದಂತೆ ಕೊಂಕಣಕೊಪ್ಪ ಶಾಖೆ ಸಲಹಾ ಸಮಿತಿ ಪದಾಧಿಕಾರಿಗಳು ಸೇರಿದಂತೆ ಇತರರು ಇದ್ದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    22 hrs ago
  • ಲಿಂಗಸೂರು ಪಟ್ಟಣದ 7ನೇ ವಾರ್ಡಿನಲ್ಲಿ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ಲಿಂಗಸುಗೂರು ಪಟ್ಟಣದ ಪಟ್ಟಣದ 7ನೇ ಎಕ್ಸ್ಪರ್ಟ್ ಸ್ಕೂಲ್ ಹತ್ತಿರ ಪ್ರತಿ ವರ್ಷದಂತೆ ಈ ವರ್ಷವೂ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದ್ದು ಬೆಳಗಿನ ಜಾವ ವಿವಿಧ ಪೂಜಾ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಪ್ರತಿಷ್ಠಾಪನೆ ಮಾಡಲಾಯಿತು. ಈ ಸಂದರ್ಭದಲ್ಲಿ ಗಣೇಶ ಯುವಕ ಮಂಡಳಿಯ ಸದಸ್ಯರು, ವಾರ್ಡಿನ ಗುರು ಹಿರಿಯರು ಮಹಿಳೆಯರು ಮಕ್ಕಳು ಗಣೇಶನ ಭಕ್ತರು ಭಾಗವಹಿಸಿದ್ದರು.
    4
    ಲಿಂಗಸೂರು ಪಟ್ಟಣದ 7ನೇ ವಾರ್ಡಿನಲ್ಲಿ 
 ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ 
ಲಿಂಗಸುಗೂರು  ಪಟ್ಟಣದ ಪಟ್ಟಣದ 7ನೇ ಎಕ್ಸ್ಪರ್ಟ್ ಸ್ಕೂಲ್ ಹತ್ತಿರ ಪ್ರತಿ ವರ್ಷದಂತೆ ಈ ವರ್ಷವೂ ವಾರ್ಡ್ ನಂಬರ್ 7 ರ ಕಾ ಮಹಾರಾಜ್  ಗಣೇಶ್ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದ್ದು ಬೆಳಗಿನ ಜಾವ ವಿವಿಧ ಪೂಜಾ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಪ್ರತಿಷ್ಠಾಪನೆ ಮಾಡಲಾಯಿತು. ಈ ಸಂದರ್ಭದಲ್ಲಿ ಗಣೇಶ ಯುವಕ ಮಂಡಳಿಯ ಸದಸ್ಯರು, ವಾರ್ಡಿನ ಗುರು ಹಿರಿಯರು ಮಹಿಳೆಯರು ಮಕ್ಕಳು ಗಣೇಶನ ಭಕ್ತರು ಭಾಗವಹಿಸಿದ್ದರು.
    user_ಸಿದ್ದನಗೌಡ ಪಾಟೀಲ್
    ಸಿದ್ದನಗೌಡ ಪಾಟೀಲ್
    Lingsugur, Raichur•
    22 hrs ago
  • ಶಿಗ್ಗಾಂವಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಬೇಕು ಎಂದು ಬೃಹತ್ ಪ್ರತಿಭಟನೆ. ಶಿಗ್ಗಾಂವಿ. ರೈತಪರ ಒಕ್ಕೂಟ ಹಾಗೂ ಕನ್ನಡ ಪರ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಪ್ರಮುಖ ಮೂರು ಬೇಡಿಕೆಗಳ ಈಡೇರಿಕೆಗಾಗಿ ಬೃಹತ್ ಪ್ರತಿಭಟನೆಯನ್ನು ದಿನಾಂಕ್ 16. 9. 2026. ಬುಧವಾರ ರಂದು, ಪೋಸ್ಟ್ ಆಫೀಸ್ ನಿಂದ ಕಿತ್ತೂರು ರಾಣಿ ಚೆನ್ನಮ್ಮರ ಸರ್ಕಲ್ ವರೆಗೂ ಬೃಹತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಆದ ಕಾರಣ ಕನ್ನಡಪರ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳು ನಮ್ಮ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ತಾಲೂಕ ರೈತ ಸಂಘದ ಅಧ್ಯಕ್ಷರಾದ ಶ್ರೀ ಬಸಲಿಂಗಪ್ಪ ನರಗುಂದ ಮನವಿ ಮಾಡಿದರು.
    2
    ಶಿಗ್ಗಾಂವಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಬೇಕು ಎಂದು ಬೃಹತ್ ಪ್ರತಿಭಟನೆ.
ಶಿಗ್ಗಾಂವಿ. ರೈತಪರ ಒಕ್ಕೂಟ ಹಾಗೂ ಕನ್ನಡ ಪರ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಪ್ರಮುಖ ಮೂರು ಬೇಡಿಕೆಗಳ ಈಡೇರಿಕೆಗಾಗಿ ಬೃಹತ್ ಪ್ರತಿಭಟನೆಯನ್ನು ದಿನಾಂಕ್ 16. 9. 2026. ಬುಧವಾರ ರಂದು, ಪೋಸ್ಟ್ ಆಫೀಸ್ ನಿಂದ ಕಿತ್ತೂರು ರಾಣಿ ಚೆನ್ನಮ್ಮರ ಸರ್ಕಲ್ ವರೆಗೂ ಬೃಹತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಆದ ಕಾರಣ ಕನ್ನಡಪರ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳು ನಮ್ಮ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ತಾಲೂಕ ರೈತ ಸಂಘದ ಅಧ್ಯಕ್ಷರಾದ ಶ್ರೀ ಬಸಲಿಂಗಪ್ಪ ನರಗುಂದ ಮನವಿ ಮಾಡಿದರು.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    3 hrs ago
  • ಕಿತ್ತೂರು ಉತ್ಸವಕ್ಕೆ ರಾಷ್ಟ್ರಮಟ್ಟದ ಮೆರುಗು ನೀಡುವ ಸಂಕಲ್ಪ! ಸಚಿವ ಸತೀಶ ಜಾರಕಿಹೊಳಿ. ಮೈಸೂರು ದಸರಾ ಉತ್ಸವದ ಮಾದರಿಯಲ್ಲಿ ಕಿತ್ತೂರು ಉತ್ಸವವನ್ನು ಮತ್ತಷ್ಟು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಿ, ವೀರರಾಣಿ ಕಿತ್ತೂರು ರಾಣಿ ಚನ್ನಮ್ಮ ಅವರ ಶೌರ್ಯ, ಸಾಹಸ ಮತ್ತು ದೇಶಪ್ರೇಮದ ಇತಿಹಾಸವನ್ನು ರಾಷ್ಟ್ರಮಟ್ಟದಲ್ಲಿ ಪರಿಚಯಿಸುವ ನಿಟ್ಟಿನಲ್ಲಿ ಇಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಿತ್ತೂರು ಉತ್ಸವದ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಈ ಬಾರಿಯ ಉತ್ಸವದ ರೂಪುರೇಷೆಗಳು, ಕಾರ್ಯಕ್ರಮಗಳ ಆಯೋಜನೆ ಹಾಗೂ ಅಗತ್ಯ ಸಿದ್ಧತೆಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಉತ್ಸವದ ಉದ್ಘಾಟನೆಗೆ ಸಾಹಿತಿಗಳು, ಬುದ್ಧಿಜೀವಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಆಹ್ವಾನಿಸುವ ಕುರಿತು ಚಿಂತನೆ ನಡೆಸಲಾಯಿತು. ಬೆಳಗಿನ ಗೋಷ್ಠಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಕಾರ್ಯಕ್ರಮ ರೂಪಿಸುವುದು, ಮಕ್ಕಳಿಗೆ ಹೆಚ್ಚಿನ ಸಮಯ ಮೀಸಲಿಟ್ಟು ಅವರ ಜ್ಞಾನ, ಪ್ರತಿಭೆ ಹಾಗೂ ಸೃಜನಶೀಲತೆಗೆ ಪೂರಕವಾದ ಕಾರ್ಯಕ್ರಮಗಳನ್ನು ಆಯೋಜಿಸುವುದು, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡುವುದು ಹಾಗೂ ಕಿತ್ತೂರು ಮತ್ತು ಕಾಕತಿ ಪ್ರದೇಶಗಳಿಗೆ ಸೀಮಿತವಾಗಿ ಕೃಷಿ ಸಂಬಂಧಿತ ಉಪಯುಕ್ತ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು ಚರ್ಚಿಸಲಾಯಿತು. ಈ ಬಾರಿ ಕಿತ್ತೂರು ಉತ್ಸವಕ್ಕೆ ಸರ್ಕಾರದಿಂದ ₹5 ಕೋಟಿ ಹಾಗೂ ಲೋಕೋಪಯೋಗಿ ಇಲಾಖೆಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ₹5 ಕೋಟಿ ಸೇರಿದಂತೆ ಒಟ್ಟು ₹10 ಕೋಟಿ ಅನುದಾನ ಒದಗಿಸುವ ಕುರಿತು ಮಾಹಿತಿ ನೀಡಲಾಯಿತು. ಉತ್ಸವದ ಅಂಗವಾಗಿ ಜಾನುವಾರು ಜಾತ್ರೆ ಮತ್ತು ತೋಟಗಾರಿಕೆ ಇಲಾಖೆಯ ವತಿಯಿಂದ ಕೃಷಿ ಮೇಳ ಆಯೋಜಿಸುವುದು ಹಾಗೂ ಅನುಮತಿ ದೊರೆತಲ್ಲಿ ಏರ್ ಶೋ ನಡೆಸುವ ಬಗ್ಗೆಯೂ ಚಿಂತನೆ ನಡೆಸಲಾಯಿತು. ಸಭೆಯಲ್ಲಿ ಕಿತ್ತೂರು ಶಾಸಕ ಶ್ರೀ ಬಾಬಾಸಾಹೇಬ ಪಾಟೀಲ, ಬೆಳಗಾವಿ ಉತ್ತರ ಶಾಸಕ ಶ್ರೀ ಆಸೀಫ್ ಸೇಠ್, ಬೆಳಗಾವಿ ಜಿಲ್ಲಾಧಿಕಾರಿ ಶ್ರೀ ಮುಹಮ್ಮದ್ ರೋಷನ್, ಪೊಲೀಸ್ ಆಯುಕ್ತ ಶ್ರೀ ಪ್ರಕಾಶ್ ನಿಕಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ರಾಹುಲ್ ಶಿಂಧೆ, ಎನ್‌ಡಬ್ಲ್ಯುಕೆಆರ್‌ಟಿಸಿ ಉಪಾಧ್ಯಕ್ಷ ಶ್ರೀ ಸುನೀಲ ಹನ್ನಮಣ್ಣವರ ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
    1
    ಕಿತ್ತೂರು ಉತ್ಸವಕ್ಕೆ ರಾಷ್ಟ್ರಮಟ್ಟದ ಮೆರುಗು ನೀಡುವ ಸಂಕಲ್ಪ! ಸಚಿವ ಸತೀಶ ಜಾರಕಿಹೊಳಿ.
ಮೈಸೂರು ದಸರಾ ಉತ್ಸವದ ಮಾದರಿಯಲ್ಲಿ ಕಿತ್ತೂರು ಉತ್ಸವವನ್ನು ಮತ್ತಷ್ಟು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಿ, ವೀರರಾಣಿ ಕಿತ್ತೂರು ರಾಣಿ ಚನ್ನಮ್ಮ ಅವರ ಶೌರ್ಯ, ಸಾಹಸ ಮತ್ತು ದೇಶಪ್ರೇಮದ ಇತಿಹಾಸವನ್ನು ರಾಷ್ಟ್ರಮಟ್ಟದಲ್ಲಿ ಪರಿಚಯಿಸುವ ನಿಟ್ಟಿನಲ್ಲಿ ಇಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಿತ್ತೂರು ಉತ್ಸವದ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.
ಸಭೆಯಲ್ಲಿ ಈ ಬಾರಿಯ ಉತ್ಸವದ ರೂಪುರೇಷೆಗಳು, ಕಾರ್ಯಕ್ರಮಗಳ ಆಯೋಜನೆ ಹಾಗೂ ಅಗತ್ಯ ಸಿದ್ಧತೆಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಉತ್ಸವದ ಉದ್ಘಾಟನೆಗೆ ಸಾಹಿತಿಗಳು, ಬುದ್ಧಿಜೀವಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಆಹ್ವಾನಿಸುವ ಕುರಿತು ಚಿಂತನೆ ನಡೆಸಲಾಯಿತು. ಬೆಳಗಿನ ಗೋಷ್ಠಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಕಾರ್ಯಕ್ರಮ ರೂಪಿಸುವುದು, ಮಕ್ಕಳಿಗೆ ಹೆಚ್ಚಿನ ಸಮಯ ಮೀಸಲಿಟ್ಟು ಅವರ ಜ್ಞಾನ, ಪ್ರತಿಭೆ ಹಾಗೂ ಸೃಜನಶೀಲತೆಗೆ ಪೂರಕವಾದ ಕಾರ್ಯಕ್ರಮಗಳನ್ನು ಆಯೋಜಿಸುವುದು, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡುವುದು ಹಾಗೂ ಕಿತ್ತೂರು ಮತ್ತು ಕಾಕತಿ ಪ್ರದೇಶಗಳಿಗೆ ಸೀಮಿತವಾಗಿ ಕೃಷಿ ಸಂಬಂಧಿತ ಉಪಯುಕ್ತ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು ಚರ್ಚಿಸಲಾಯಿತು.
ಈ ಬಾರಿ ಕಿತ್ತೂರು ಉತ್ಸವಕ್ಕೆ ಸರ್ಕಾರದಿಂದ ₹5 ಕೋಟಿ ಹಾಗೂ ಲೋಕೋಪಯೋಗಿ ಇಲಾಖೆಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ₹5 ಕೋಟಿ ಸೇರಿದಂತೆ ಒಟ್ಟು ₹10 ಕೋಟಿ ಅನುದಾನ ಒದಗಿಸುವ ಕುರಿತು ಮಾಹಿತಿ ನೀಡಲಾಯಿತು. ಉತ್ಸವದ ಅಂಗವಾಗಿ ಜಾನುವಾರು ಜಾತ್ರೆ ಮತ್ತು ತೋಟಗಾರಿಕೆ ಇಲಾಖೆಯ ವತಿಯಿಂದ ಕೃಷಿ ಮೇಳ ಆಯೋಜಿಸುವುದು ಹಾಗೂ ಅನುಮತಿ ದೊರೆತಲ್ಲಿ ಏರ್ ಶೋ ನಡೆಸುವ ಬಗ್ಗೆಯೂ ಚಿಂತನೆ ನಡೆಸಲಾಯಿತು.
ಸಭೆಯಲ್ಲಿ ಕಿತ್ತೂರು ಶಾಸಕ ಶ್ರೀ ಬಾಬಾಸಾಹೇಬ ಪಾಟೀಲ, ಬೆಳಗಾವಿ ಉತ್ತರ ಶಾಸಕ  ಶ್ರೀ ಆಸೀಫ್ ಸೇಠ್, ಬೆಳಗಾವಿ ಜಿಲ್ಲಾಧಿಕಾರಿ ಶ್ರೀ ಮುಹಮ್ಮದ್ ರೋಷನ್, ಪೊಲೀಸ್ ಆಯುಕ್ತ ಶ್ರೀ ಪ್ರಕಾಶ್ ನಿಕಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ರಾಹುಲ್ ಶಿಂಧೆ, ಎನ್‌ಡಬ್ಲ್ಯುಕೆಆರ್‌ಟಿಸಿ ಉಪಾಧ್ಯಕ್ಷ ಶ್ರೀ ಸುನೀಲ ಹನ್ನಮಣ್ಣವರ ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    3 hrs ago
  • ED. IT. ಯಾವಾಗ ಬೇಕಾದರೂ ನನ್ನ ಮನೆಗೆ ಬರಬಹುದು ಸಚಿವ ವಿಜಯಾನಂದ ಕಾಶಪ್ಪನವರ ಬಾಗಲಕೋಟೆ: ಕೈ ಶಾಸಕರನ್ನು ಬಿಜೆಪಿಗೆ ಸೆಳೆಯುವ ಹುನ್ನಾರ ವಿಚಾರಕ್ಕೆ ಸಚಿವ ಕಾಶಪ್ಪನವರ ಪ್ರತಿಕ್ರಿಯಿಸಿದರು ಈ ಹಿಂದೆ ಬಿಜೆಪಿ ಕಾಂಗ್ರೆಸ್ನ 55 ಜನರ ಪಟ್ಟಿ ರೆಡಿ ಮಾಡಿತ್ತು ಕಾಂಗ್ರೆಸ್ ಶಾಸಕರ ಆಪರೇಷನ್ ಪಟ್ಟಿಯಲ್ಲಿ ನನ್ನ ಹೆಸರು ಇತ್ತು ಬಿಜೆಪಿ ಪಕ್ಷಕ್ಕೆ ಸೆಳೆಯುವುದು, ಬರೋಲ್ಲ ಅಂದರೆ ಹಿಡಿ ದಾಳಿ ಅಂಜಿಕೆ ಹಾಕುವುದು ಮಾಡಿದ್ದರು. ನಾ ಬಿಜೆಪಿಗರಿಗೆ ಹೇಳಿದ್ದೇನೆ ನನ್ನ ಮೇಲೆ ಇಡಿ ಐಟಿ ದಾಳಿ ಮಾಡಿದರು ಅಂಜಿಕೆ ಇಲ್ಲ ಎಂದು ಸಚಿವ ಕಾಶಪ್ಪನವರ ಬಾಗಲಕೋಟೆಯಲ್ಲಿ ಹೇಳಿದರು.
    1
    ED. IT. ಯಾವಾಗ ಬೇಕಾದರೂ ನನ್ನ ಮನೆಗೆ ಬರಬಹುದು ಸಚಿವ ವಿಜಯಾನಂದ ಕಾಶಪ್ಪನವರ
ಬಾಗಲಕೋಟೆ: ಕೈ ಶಾಸಕರನ್ನು ಬಿಜೆಪಿಗೆ ಸೆಳೆಯುವ ಹುನ್ನಾರ ವಿಚಾರಕ್ಕೆ ಸಚಿವ ಕಾಶಪ್ಪನವರ ಪ್ರತಿಕ್ರಿಯಿಸಿದರು ಈ ಹಿಂದೆ ಬಿಜೆಪಿ ಕಾಂಗ್ರೆಸ್ನ 55 ಜನರ ಪಟ್ಟಿ ರೆಡಿ ಮಾಡಿತ್ತು ಕಾಂಗ್ರೆಸ್ ಶಾಸಕರ ಆಪರೇಷನ್ ಪಟ್ಟಿಯಲ್ಲಿ ನನ್ನ ಹೆಸರು ಇತ್ತು ಬಿಜೆಪಿ ಪಕ್ಷಕ್ಕೆ ಸೆಳೆಯುವುದು, ಬರೋಲ್ಲ ಅಂದರೆ ಹಿಡಿ ದಾಳಿ ಅಂಜಿಕೆ ಹಾಕುವುದು ಮಾಡಿದ್ದರು. ನಾ ಬಿಜೆಪಿಗರಿಗೆ ಹೇಳಿದ್ದೇನೆ ನನ್ನ ಮೇಲೆ ಇಡಿ ಐಟಿ ದಾಳಿ ಮಾಡಿದರು ಅಂಜಿಕೆ ಇಲ್ಲ ಎಂದು ಸಚಿವ ಕಾಶಪ್ಪನವರ ಬಾಗಲಕೋಟೆಯಲ್ಲಿ ಹೇಳಿದರು.
    user_Shabbir Bijapur
    Shabbir Bijapur
    Photographer ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    4 hrs ago
  • ಗಣೇಶ ಮೂರ್ತಿಗೆ ವಿದ್ಯುತ್ ತಂತಿ ತಗುಲಿ ಅವಘಡ! ಇಬ್ಬರಿಗೆ ಗಾಯ; ತಪ್ಪಿದ ಭಾರೀ ದುರಂತ ಹೊಸಪೇಟೆ ನಗರದ ಹೊರವಲಯದಲ್ಲಿ ಗಣೇಶ ಮೂರ್ತಿಯನ್ನು ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಸಾಗಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಅವಘಡ ಸಂಭವಿಸಿದೆ. ವಿದ್ಯುತ್ ಪ್ರವಹಿಸಿದ ಪರಿಣಾಮ ಮೂರ್ತಿಗೆ ಬೆಂಕಿ ಹೊತ್ತಿಕೊಂಡಿದ್ದು, ಟ್ರಾಲಿಯಲ್ಲಿದ್ದ ಇಬ್ಬರು ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಸ್ಥಳೀಯರು ತಕ್ಷಣ ಗಾಯಾಳುಗಳಿಗೆ ನೆರವು ನೀಡಿ ಆಸ್ಪತ್ರೆಗೆ ದಾಖಲಿಸಿದ್ದು, ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ರಸ್ತೆಗೆ ಇಳಿಬಿದ್ದಿದ್ದ ವಿದ್ಯುತ್ ತಂತಿಗಳ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಂತಹ ತಾಜಾ ಕರ್ನಾಟಕ ಸುದ್ದಿಗಳಿಗಾಗಿ ASN News24 Kannada ಅನ್ನು Follow & Subscribe ಮಾಡಿ. #ಹೊಸಪೇಟೆ #ವಿಜಯನಗರ #ಗಣೇಶೋತ್ಸವ #ಗಣೇಶಮೂರ್ತಿ #ವಿದ್ಯುತ್ ಅವಘಡ #ಕರ್ನಾಟಕಸುದ್ದಿ #KannadaNews #KarnatakaNews #Hospet #Vijayanagara #GaneshChaturthi #GaneshFestival #BreakingNews #LatestNews #NewsUpdate #ASNNews24Kannada
    1
    ಗಣೇಶ ಮೂರ್ತಿಗೆ ವಿದ್ಯುತ್ ತಂತಿ ತಗುಲಿ ಅವಘಡ! ಇಬ್ಬರಿಗೆ ಗಾಯ; ತಪ್ಪಿದ ಭಾರೀ ದುರಂತ
ಹೊಸಪೇಟೆ ನಗರದ ಹೊರವಲಯದಲ್ಲಿ ಗಣೇಶ ಮೂರ್ತಿಯನ್ನು ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಸಾಗಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಅವಘಡ ಸಂಭವಿಸಿದೆ. ವಿದ್ಯುತ್ ಪ್ರವಹಿಸಿದ ಪರಿಣಾಮ ಮೂರ್ತಿಗೆ ಬೆಂಕಿ ಹೊತ್ತಿಕೊಂಡಿದ್ದು, ಟ್ರಾಲಿಯಲ್ಲಿದ್ದ ಇಬ್ಬರು ಕೆಳಗೆ ಬಿದ್ದು ಗಾಯಗೊಂಡಿದ್ದಾರೆ.
ಸ್ಥಳೀಯರು ತಕ್ಷಣ ಗಾಯಾಳುಗಳಿಗೆ ನೆರವು ನೀಡಿ ಆಸ್ಪತ್ರೆಗೆ ದಾಖಲಿಸಿದ್ದು, ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ರಸ್ತೆಗೆ ಇಳಿಬಿದ್ದಿದ್ದ ವಿದ್ಯುತ್ ತಂತಿಗಳ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇಂತಹ ತಾಜಾ ಕರ್ನಾಟಕ ಸುದ್ದಿಗಳಿಗಾಗಿ ASN News24 Kannada ಅನ್ನು Follow & Subscribe ಮಾಡಿ.
#ಹೊಸಪೇಟೆ #ವಿಜಯನಗರ #ಗಣೇಶೋತ್ಸವ #ಗಣೇಶಮೂರ್ತಿ #ವಿದ್ಯುತ್ ಅವಘಡ #ಕರ್ನಾಟಕಸುದ್ದಿ #KannadaNews #KarnatakaNews #Hospet #Vijayanagara #GaneshChaturthi #GaneshFestival #BreakingNews #LatestNews #NewsUpdate #ASNNews24Kannada
    user_AsnNews24Kannada
    AsnNews24Kannada
    Local News Reporter Ballari, Karnataka•
    21 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.