ಬಸವ ಜಯಂತಿ ಪೂರ್ವಭಾವಿ ಸಭೆಗೆ ಗೈರಾದ ಅಧಿಕಾರಿಗಳ ವಿರುದ್ಧ ಮುಖಂಡರ ಆಕ್ರೋಶ: ನೋಟಿಸ್ ನೀಡಲು ತಹಶೀಲ್ದಾರರಿಗೆ ಸೂಚನೆ ಕುಂದಗೋಳ: ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬಸವೇಶ್ವರ ಜಯಂತಿಯ ಪೂರ್ವಭಾವಿ ಸಭೆಗೆ ಹಲವು ಇಲಾಖೆಯ ಅಧಿಕಾರಿಗಳು ಗೈರಾದ ಕ್ರಮಕ್ಕೆ ಸಮಾಜದ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಭೆಯನ್ನು ನಿರ್ಲಕ್ಷಿಸಿದ ಅಧಿಕಾರಿಗಳಿಗೆ ತಕ್ಷಣವೇ ನೋಟಿಸ್ ಜಾರಿ ಮಾಡಬೇಕು ಎಂದು ಮುಖಂಡರು ಪಟ್ಟು ಹಿಡಿದ ಹಿನ್ನೆಲೆಯಲ್ಲಿ, ತಹಶೀಲ್ದಾರ್ ರಾಜು ಮಾವರಕರ್ ಅವರು ನೋಟಿಸ್ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬರುವ ಸೋಮವಾರ (ಏಪ್ರಿಲ್ 20) ನಡೆಯಲಿರುವ ಜಯಂತ್ಯೋತ್ಸವದ ಸಿದ್ಧತೆ ಕುರಿತು ಚರ್ಚಿಸಲು ಸಭೆ ಕರೆಯಲಾಗಿತ್ತು. ಆದರೆ, 33 ಇಲಾಖೆಗಳ ಪೈಕಿ ಬೆರಳೆಣಿಕೆಯಷ್ಟು ಅಧಿಕಾರಿಗಳು ಮಾತ್ರ ಹಾಜರಿದ್ದು, ಕೆಲವರು ತಮ್ಮ ಪರವಾಗಿ ಸಿಬ್ಬಂದಿಯನ್ನು ಕಳುಹಿಸಿದ್ದರು. ಇದರಿಂದ ಕೆರಳಿದ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಕಿರೇಸೂರ, "ಪ್ರತಿ ಸಭೆಗೂ ಅಧಿಕಾರಿಗಳು ಗೈರಾಗುವುದು ಕಾಟಾಚಾರಕ್ಕೆ ಜಯಂತಿ ಆಚರಿಸುವಂತಿದೆ. ಇಂತಹ ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ತಾಲ್ಲೂಕು ಆಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಮತ್ತು ಅವರಿಗೆ ನೋಟಿಸ್ ನೀಡಬೇಕು" ಎಂದು ಆಗ್ರಹಿಸಿದರು. ಜಯಂತಿ ಆಚರಣೆಗೆ ಜಿಪಿಎಸ್ ಕಡ್ಡಾಯ: ಮುಖಂಡರ ಆಗ್ರಹಕ್ಕೆ ಸ್ಪಂದಿಸಿದ ತಹಶೀಲ್ದಾರ್ ರಾಜು ಮಾವರಕರ್ ಮಾತನಾಡಿ, "ಅಧಿಕಾರಿಗಳ ಗೈರುಹಾಜರಿಯನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಎಲ್ಲಾ ಸರ್ಕಾರಿ ಇಲಾಖೆಗಳು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಕಡ್ಡಾಯವಾಗಿ ಜಯಂತಿ ಆಚರಿಸಿ, ಜಿಪಿಎಸ್ ಫೋಟೋ ಸಹಿತ ವರದಿ ನೀಡಬೇಕು" ಎಂದು ಆದೇಶಿಸಿದರು. ಅಲ್ಲದೆ, ಗೈರಾದವರಿಗೆ ನೋಟಿಸ್ ನೀಡುವಂತೆ ಸಂಬಂಧಪಟ್ಟ ಸಿಬ್ಬಂದಿಗೆ ಸೂಚನೆ ನೀಡಿದರು. ನೈಜ ಸಾಧಕರಿಗೆ ಗೌರವ: ಸನ್ಮಾನ ಕಾರ್ಯಕ್ರಮದ ಕುರಿತು ಚರ್ಚಿಸುವಾಗ, ಸಮಾಜದ ಮುಖಂಡರು "ಬಿಳಿ ಬಟ್ಟೆ ಧರಿಸಿ ಮೋಜು ಮಾಡುವವರಿಗಿಂತ, ಹೊಲದಲ್ಲಿ ದುಡಿಯುವ ನೈಜ ರೈತರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ನಿಜವಾಗಿ ಸಾಧನೆ ಮಾಡಿದವರನ್ನು ತಾಲ್ಲೂಕು ಆಡಳಿತವೇ ಗುರುತಿಸಿ ಗೌರವಿಸಬೇಕು" ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮಕ್ಕೆ ಶ್ರೀ ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳನ್ನು ಆಹ್ವಾನಿಸಲು ತೀರ್ಮಾನಿಸಲಾಯಿತು. ಜಯಂತಿಯ ದಿನದಂದು ಸಂಜೆ ಬಸವ ಸೇನೆಯ ವತಿಯಿಂದ ಶ್ರೀ ಶಂಭುಲಿಂಗೇಶ್ವರ ದೇವಸ್ಥಾನದಿಂದ ಭವ್ಯ ಮೆರವಣಿಗೆ ನಡೆಯಲಿದೆ. ಸಭೆಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಉಮೇಶ ಹೆಬಸೂರ, ಶ್ರೀಕಂಠಗೌಡ ಹಿರೇಗೌಡ್ರ, ನಾಗರಾಜ ದೇಶಪಾಂಡೆ, ಸೋಮರಾವ್ ದೇಸಾಯಿ, ರಮೇಶ ಕೊಪ್ಪದ, ಬಸವರಾಜ ಸಿರಸಂಗಿ ಸೇರಿದಂತೆ ಸಮಾಜದ ಹಿರಿಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

- ಭಾಲ್ಕಿಯಲ್ಲಿ ಬೃಹತ್ ಆರೋಗ್ಯ ಶಿಬಿರ: 180 ಜನರಿಗೆ ತಪಾಸಣೆ, 101 ಯುವಕರಿಂದ ರಕ್ತದಾನ ಆರೋಗ್ಯವೇ ಭಾಗ್ಯ: ಭಾಲ್ಕಿಯ ಚನ್ನಬಸವಾಶ್ರಮದಲ್ಲಿ ಮಾನವೀಯತೆಯ ಮೆರಗು; 101 ಯುನಿಟ್ ರಕ್ತ ಸಂಗ್ರಹ #JB_News_Kannada1
- *ರಾಯಬಾಗದಲ್ಲಿ ಬಸವ ಜಯಂತಿಯ ಹಳ್ಳಿ ಸೊಬಗು: ಶಿಕ್ಷಣ ಪ್ರೇಮಿ ಪಾಟೀಲ ಪರಿವಾರದ ಜನಸೇವೆಗೆ ಸಾಕ್ಷಿಯಾದ ಶೋಭಾಯಾತ್ರೆ* ಕಾಯಕವೇ ಕೈಲಾಸ ಎಂದು ಸಾರಿದ ಜಗಜ್ಯೋತಿ ಬಸವಣ್ಣನವರ ಜಯಂತಿಯ ನಿಮಿತ್ತ ಇಂದು ರಾಯಬಾಗ ಪಟ್ಟಣ ಭಕ್ತಿ ಮತ್ತು ಸಂಭ್ರಮದ ಕಡಲಲ್ಲಿ ತೇಲಿತು. ಪಟ್ಟಣದಾದ್ಯಂತ ಹಮ್ಮಿಕೊಳ್ಳಲಾಗಿದ್ದ ಭವ್ಯ ಶೋಭಾಯಾತ್ರೆಯು ಹಳ್ಳಿಯ ಸೊಬಗನ್ನು ಮರುಸೃಷ್ಟಿಸಿ ನೋಡುಗರ ಕಣ್ಮನ ಸೆಳೆಯಿತು. ಹಿಂದೂ ಧರ್ಮದಲ್ಲಿ ಬಸವಣ್ಣ ಅಥವಾ ನಂದಿ ಎಂದು ಪೂಜಿಸಲ್ಪಡುವ ಸುಮಾರು 170ಕ್ಕೂ ಹೆಚ್ಚು ಎತ್ತುಗಳನ್ನು ಅತ್ಯಂತ ಸುಂದರವಾಗಿ ಅಲಂಕರಿಸಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಮಾಡಲಾಗಿತ್ತು. ಸಾಲು ಸಾಲಾಗಿ ಸಾಗುತ್ತಿದ್ದ ಈ ಎತ್ತುಗಳ ಗಾಂಭೀರ್ಯವು ಗ್ರಾಮೀಣ ಸೊಬಗನ್ನು ಎತ್ತಿ ತೋರಿಸುವಂತಿತ್ತು. ಮೆರವಣಿಗೆಯ ಮುಂಚೂಣಿಯಲ್ಲಿ ಕಂಗೊಳಿಸುತ್ತಿದ್ದ ಬಸವಣ್ಣನವರ ಬೃಹತ್ ಪುತ್ಥಳಿಯು ಭಕ್ತರ ಪಾಲಿಗೆ ದರ್ಶನ ಭಾಗ್ಯವನ್ನೇ ನೀಡಿತು. ರಾಯಬಾಗದ ಇತಿಹಾಸದಲ್ಲಿ ವಸಂತರಾವ್ ಪಾಟೀಲ್ ಅವರ ಕುಟುಂಬದ ಹೆಸರು ಅಚ್ಚಳಿಯದಂತದ್ದು. ಅಜ್ಜನ ಕಾಲದಿಂದಲೂ ಬಡವರಿಗೆ ಅಕ್ಷರ ದಾಸೋಹ ಮಾಡುತ್ತಾ ಬಂದಿರುವ ಈ ಕುಟುಂಬ, ಸಾವಿರಾರು ಜನ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಲು ಕಾರಣವಾಗಿದೆ. ಇಂದಿಗೂ ಶಿಕ್ಷಣ ಪ್ರೇಮಿಯಾಗಿ ಬಡ ಮಕ್ಕಳ ಪಾಲಿನ ಆಶಾಕಿರಣವಾಗಿರುವ ವಸಂತರಾವ್ ಪಾಟೀಲ್ ಅವರ ಸರಳತೆ ಎಲ್ಲರಿಗೂ ಮಾದರಿ. ಈ ಮೆರವಣಿಗೆಯ ವಿಶೇಷ ಆಕರ್ಷಣೆಯೆಂದರೆ, ಹಿರಿಯರು ಮತ್ತು ಯುವಕರ ಹೃದಯದಲ್ಲಿ ಸ್ಥಾನ ಪಡೆದಿರುವ ಯುವ ನಾಯಕ ಪ್ರಣಯ್ ಅಣ್ಣ ಪಾಟೀಲ್ ಅವರ ಮೇಲಿನ ಅಭಿಮಾನ. ಸಮಾಜ ಸೇವೆಯಲ್ಲಿ ಸದಾ ಮುಂಚೂಣಿಯಲ್ಲಿರುವ ಅವರ ಭಾವಚಿತ್ರವನ್ನು ಎತ್ತುಗಳ ಮೇಲೆ ಕಲಾತ್ಮಕವಾಗಿ ಬಿಡಿಸಿದ್ದು, ಜನರ ವಿಶೇಷ ಗಮನ ಸೆಳೆಯಿತು. "ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ಹಿರಿಯರು ಒಂದೆಡೆಯಾದರೆ, ಸಮಾಜ ಸೇವೆಯ ಮೂಲಕ ಯುವ ಶಕ್ತಿಯನ್ನು ಸಂಘಟಿಸುತ್ತಿರುವ ಪ್ರಣಯ್ ಅಣ್ಣ ಪಾಟೀಲ್ ಅವರ ನಾಯಕತ್ವ ರಾಯಬಾಗಕ್ಕೆ ಹೆಮ್ಮೆ."1
- Post by Onlinetv24x71
- Post by Mayur TV Hangal YouTube c1
- ಏ. 20 : ಅರಸೀಕೆರೆ ತಾಲೂಕು ರಾಮಸಾಗರ ಗ್ರಾಮದ ಬಸವ ತತ್ವ ಪ್ರಸಾರ ಕೇಂದ್ರದಲ್ಲಿ ಶರಣ ಸಿದ್ದಪ್ಪ ಶರಣೆ ಮಲ್ಲಮ್ಮನವರು ಸ್ಥಾಪಿಸಿರುವ ಶ್ರೀ ಬಸವ ತತ್ವ ಪ್ರಸಾರ ಕೇಂದ್ರವನ್ನು 2013ರಲ್ಲಿ 12ನೇ ಶತಮಾನದ ಆಗಿಹೋದ ಶರಣರ ಆಚರಣೆ ಅನುಭಾವ, ಅನುಕರಣೆ, ಪ್ರಚಾರಕ್ಕೋಸ್ಕರ ಸ್ಥಾಪಿಸಲಾಯಿತು. ಅಂದಿನಿಂದ ಇಂದಿನವರೆಗೆ ಯಾರ ಸಹಾಯವಿಲ್ಲದೆ ತನು-ಮನ ಧನವನ್ನು ಬಸವ ತತ್ವ ಪ್ರಚಾರಕ್ಕೆ ಮುಡುಪಾಗಿಟ್ಟಂತಹ ದಂಪತಿಗಳಿವರು. ಈವರು ಸ್ಥಾಪಿಸಲ್ಪಟ್ಟ ಬಸವ ತತ್ವ ಪ್ರಸಾರ ಕೇಂದ್ರದಲ್ಲಿ ಅದ್ದೂರಿಯಾಗಿ ಬಸವ ಜಯಂತಿ ಆಚರಣೆ ಮಾಡಲಾಯಿತು. ಪ್ರತಿ ತಿಂಗಳು ಒಂದರಂದು ಲಿಂಗ ಪೂಜೆ, ಅನುಭಾವ, ಪ್ರಸಾದ, ಪ್ರಚಾರ ಈತರ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದಾರೆ. ಅವರ ಈ ಕಾರ್ಯಕ್ರಮಗಳಿಗೆ ನಾವೆಲ್ಲರೂ ಅಭಿನಂದಿಸೋಣ. ಇಂದು ಈ ಬಸವ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಹಿರಿಯರಾದ ಶ್ರೀ ಶರಣ ಹಾಲಪ್ಪ ಹಿರಿಯೂರ್, ಶರಣ ಸಿದ್ದೇಶ, ಪುಟಾಣಿ ಮಕ್ಕಳು ಹಾಗೂ ಶರಣ ಶ್ರೀ ವಿನಯ್ ಪಾಟೀಲ್ ರವರು ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ರಾಮಸಾಗರ ಗ್ರಾಮಸ್ಥರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.2
- (Weather News) "ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ."3
- ಮಹಿಳಾ ಮೀಸಲಾತಿ ಬಿಲ್ ವಿಚಾರದಲ್ಲಿ ದಕ್ಷಿಣ ಭಾರತದ ಸೀಟ್ ಕಡಿಮೆ ಮಾಡಲು ಇದು ಷಡ್ಯಂತ್ರ. ಒಬ್ಬನೇ ಒಬ್ಬ ಬಿಜೆಪಿಯವರು ಮಾತಾಡುತ್ತಿಲ್ಲ. ದಕ್ಷಿಣ ಭಾರತದವರು ಇಲ್ಲದೇ ಇದ್ದರೂ ಅವರದೇ ಸರ್ಕಾರ ತರೋ ಹುನ್ನಾರ ಮಾಡಿದ್ದಾರೆ ಎಂದು ಹುಬ್ಬಳ್ಳಿ ವಿಮಾನನಿಲ್ದಾಣದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು. ಹುಬ್ಬಳ್ಳಿ ನಗರದಲ್ಲಿ ಭಾನುವಾರ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಬಿಲ್ ಅನ್ನು ನಾವು ಸೋಲಿಸಿದ್ದೇವೆ. ಇದು ಅವರ ಸೋಲಿನ ಆರಂಭ, ಇದು ಮುಂದುವರಿಯಲಿದೆ ಎಂದರು. ಮಹದಾಯಿ ಯೋಜನೆ ಅನುಷ್ಠಾನಕ್ಕೆ ಬಿಜೆಪಿ ಸರ್ಕಾರ ಪರವಾನಗಿ ಕೊಡಿಸುತ್ತಿಲ್ಲ, ಬಿಜೆಪಿ ಎಂಪಿ ಗಳು ಕರ್ನಾಟಕ ನೀರಾವರಿಗೆ ಯಾವುದೇ ಕೊಡುಗೆ ನೀಡುತ್ತಿಲ್ಲ. ಎಲ್ಲರೂ ಅಡ್ವಾಂಟೇಜ್ ತೆಗೆದುಕೊಳ್ಳಲು ಹೋಗುತ್ತಿದ್ದಾರೆ. ನಮ್ಮ ಕರ್ತವ್ಯ ನಾವು ಮಾಡಿದ್ದೇವೆ. ಬಿಜೆಪಿ ಈ ವಿಚಾರದಲ್ಲಿ ಪೇಲ್ ಆಗಿದೆ. ಪಿಎಂ ಭೇಟಿ ಮಾಡಿ ಮಾತಾಡುವಷ್ಟು ಶಕ್ತಿ ಬಿಜೆಪಿ ಎಂಪಿ ಗಳಿಗೆ ಇಲ್ಲ ಎಂದು ಕಿಡಿಕಾರಿದರು.1
- Post by Onlinetv24x71
- Post by Vv Vv1