ಯೋಗ ಸಂಸ್ಕೃತಿ ಬೆಳೆಸಿದ ಶಿಕ್ಷಕರಿಗೆ ಪ್ರತಾಪ್ ಸಿಂಹರಿಂದ ಸನ್ಮಾನ ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಅಂಗವಾಗಿ ಪ್ರತಾಪ್ ಸಿಂಹ ಅಭಿಮಾನಿಗಳ ಬಳಗ, ಚಾಮರಾಜ ವಿಧಾನಸಭಾ ಕ್ಷೇತ್ರದ ವತಿಯಿಂದ ನಗರದ ದಿವಾನ್ಸ್ ರಸ್ತೆಯಲ್ಲಿರುವ ಗ್ರೀನ್ ಹೆರಿಟೇಜ್ ಹೋಟೆಲ್‌ನಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ನೇತೃತ್ವದಲ್ಲಿ ಚಾಮರಾಜ ವಿಧಾನಸಭಾ ಕ್ಷೇತ್ರದ 76 ಯೋಗ ಮುಖ್ಯ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪ್ರತಾಪ್ ಸಿಂಹ ಅವರು, ಯೋಗವು ಭಾರತದ ಪ್ರಾಚೀನ ಪರಂಪರೆಯಾಗಿದ್ದು, ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಯೋಗ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಪ್ರೇರಣೆಯಿಂದ ಯೋಗ ಇಂದು ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಯೋಗದ ಮಹತ್ವವನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಶಿಕ್ಷಕರು ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ಎನ್.ವಿ. ಫಣೀಶ್, ಸಿ.ವಿ. ಗೋಪಿನಾಥ್, ಗಣೇಶ್ ಕುಮಾರ್, ಚಂದ್ರಶೇಖರ್, ಕಾರ್ಯಕ್ರಮದ ಆಯೋಜಕರಾದ ಆರ್. ಪರಮೇಶ್ ಗೌಡ, ಕರ್ನಾಟಕ ರಾಜ್ಯ ಹೋಟೆಲ್ ಮಾಲೀಕರ ಸಂಘದ ಉಪಾಧ್ಯಕ್ಷ ಸಿ. ನಾರಾಯಣಗೌಡ, ವಸಂತ್ ಮನೀಶ್, ರಾಧಾಕೃಷ್ಣ, ಚೇತನ್, ಸತೀಶ್ ಗೌಡ, ಬೊ. ಉಮೇಶ್, ಎಸ್.ಕೆ. ದಿನೇಶ್, ಖುಷಿ, ರಾಘವೇಂದ್ರ, ಲೋಕೇಶ್, ಪ್ರಮೋದ್, ವಿನೋದ್ ಅರಸು, ಶ್ರೀನಿವಾಸ್, ಬಂಗಾರಿ, ಕಾಂತ, ನಿಖಿಲ್, ಯಶವಂತ್, ಸಂದೇಶ್ ಪವಾರ್, ಪಿಂಕಿ, ಮಲ್ಲಿಕಾರ್ಜುನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಯೋಗ ಸಂಸ್ಕೃತಿ ಬೆಳೆಸಿದ ಶಿಕ್ಷಕರಿಗೆ ಪ್ರತಾಪ್ ಸಿಂಹರಿಂದ ಸನ್ಮಾನ ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಅಂಗವಾಗಿ ಪ್ರತಾಪ್ ಸಿಂಹ ಅಭಿಮಾನಿಗಳ ಬಳಗ, ಚಾಮರಾಜ ವಿಧಾನಸಭಾ ಕ್ಷೇತ್ರದ ವತಿಯಿಂದ ನಗರದ ದಿವಾನ್ಸ್ ರಸ್ತೆಯಲ್ಲಿರುವ ಗ್ರೀನ್ ಹೆರಿಟೇಜ್ ಹೋಟೆಲ್‌ನಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ನೇತೃತ್ವದಲ್ಲಿ ಚಾಮರಾಜ ವಿಧಾನಸಭಾ ಕ್ಷೇತ್ರದ 76 ಯೋಗ ಮುಖ್ಯ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪ್ರತಾಪ್ ಸಿಂಹ ಅವರು, ಯೋಗವು ಭಾರತದ ಪ್ರಾಚೀನ ಪರಂಪರೆಯಾಗಿದ್ದು, ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಯೋಗ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಪ್ರೇರಣೆಯಿಂದ ಯೋಗ ಇಂದು ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಯೋಗದ ಮಹತ್ವವನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಶಿಕ್ಷಕರು ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ಎನ್.ವಿ. ಫಣೀಶ್, ಸಿ.ವಿ. ಗೋಪಿನಾಥ್, ಗಣೇಶ್ ಕುಮಾರ್, ಚಂದ್ರಶೇಖರ್, ಕಾರ್ಯಕ್ರಮದ ಆಯೋಜಕರಾದ ಆರ್. ಪರಮೇಶ್ ಗೌಡ, ಕರ್ನಾಟಕ ರಾಜ್ಯ ಹೋಟೆಲ್ ಮಾಲೀಕರ ಸಂಘದ ಉಪಾಧ್ಯಕ್ಷ ಸಿ. ನಾರಾಯಣಗೌಡ, ವಸಂತ್ ಮನೀಶ್, ರಾಧಾಕೃಷ್ಣ, ಚೇತನ್, ಸತೀಶ್ ಗೌಡ, ಬೊ. ಉಮೇಶ್, ಎಸ್.ಕೆ. ದಿನೇಶ್, ಖುಷಿ, ರಾಘವೇಂದ್ರ, ಲೋಕೇಶ್, ಪ್ರಮೋದ್, ವಿನೋದ್ ಅರಸು, ಶ್ರೀನಿವಾಸ್, ಬಂಗಾರಿ, ಕಾಂತ, ನಿಖಿಲ್, ಯಶವಂತ್, ಸಂದೇಶ್ ಪವಾರ್, ಪಿಂಕಿ, ಮಲ್ಲಿಕಾರ್ಜುನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
- All About,Irregularities/Misuse of #WaqfProperties related with #JamiaNizamia *ಭಾರತ ನಲ್ಲಿ ವೈರಲ್*1
- ನಂಜನಗೂಡಿನ ಸರಕಾರಿ ಹಿರಿಯ ದಳವಾಯಿ ಪ್ರಾಥಮಿಕ ಶಾಲೆಯಲ್ಲಿ ಎಲ್ಕೆಜಿ ಮಕ್ಕಳಿಂದ ಚದ್ಮವೇಷ ಸ್ಪರ್ಧೆ. ನಂಜನಗೂಡು ತಾಲೂಕಿನ : ಪಟ್ಟಣದ ಅತಿ ದೊಡ್ಡ ದಳವಾಯಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಗಿನ ಪ್ರಾರ್ಥನಾ ಸಮಯದಲ್ಲಿ ಎಲ್ಕೆಜಿ ಮಕ್ಕಳಿಂದ ಚದ್ಮ ವೇಷ ಸ್ಪರ್ಧೆ ನಡೆಯಿತು . ಮಕ್ಕಳು ಹಣ್ಣಿನ ಹಾಗೂ ತರಕಾರಿ ವಿವಿಧ ವೇಷಗಳನ್ನು ಧರಿಸಿ ಪ್ರದರ್ಶನ ನೀಡಿದರು. ಈಸ್ಪರ್ಧೆಯನ್ನು ಉದ್ದೇಶಿಸಿ ಸಹ ಶಿಕ್ಷಕಿಯಾದ ಮಮತಾ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ನಾಗೇಶ್ ಸಿಬ್ಬಂದಿ ವರ್ಗ ಹಾಜರಿದ್ದರು. ಎಲ್ಲಾ ಶಿಕ್ಷಕರು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಈ ಪ್ರದರ್ಶನದಲ್ಲಿ ಮಾರ್ಗದರ್ಶಿ ಶಿಕ್ಷಕಿಯಾಗಿ ಶಿಲ್ಪಾ ಅವರು ಭಾಗವಹಿಸಿದ್ದರು. ಶಿಲ್ಪ ಅವರು ಎಲ್ಲ ಶಿಕ್ಷಕರಿಗೆ ಅಭಿನಂದನೆಯನ್ನು ಸಲ್ಲಿಸಿದರು.4
- ಜೆಸ್ಕಾಂ ಕಚೇರಿ ಮುಂದೆ ಕೃಷಿಕಂಸೆಟ್ಗಳಿಗೆ ಸಮರ್ಪಕ ವಿದ್ಯುತ್ ನೀಡುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ ಟಿ. ನರಸೀಪುರ ಅಸಮರ್ಪಕ ವಿದ್ಯುತ್ ಪೂರೈಕೆ: ರೈತರು ಸಂಕಷ್ಟದಲ್ಲಿ. ಟಿ. ನರಸೀಪುರ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿದ್ಯುತ್ ಪೂರೈಕೆಯಲ್ಲಿ ಪದೇಪದೇ ವ್ಯತ್ಯಯ ಉಂಟಾಗುತ್ತಿರುವುದರಿಂದ ನೀರಾವರಿ ವ್ಯವಸ್ಥೆಗೆ ತೊಂದರೆಯಾಗಿದ್ದು, ಹೊಲಗಳಲ್ಲಿ ಬೆಳೆದಿರುವ ಬೆಳೆಗಳು ನೀರಿನ ಕೊರತೆಯಿಂದ ಒಣಗುವ ಆತಂಕ ಎದುರಾಗಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ನಿಗದಿತ ಸಮಯದಲ್ಲಿ ಸಮರ್ಪಕ ವೋಲ್ಟೇಜ್‌ನೊಂದಿಗೆ ವಿದ್ಯುತ್ ಪೂರೈಕೆ ಮಾಡದಿರುವುದರಿಂದ ಮೋಟಾರ್‌ಗಳನ್ನು ಚಾಲನೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ಈಗಾಗಲೇ ಬೆಳೆಗಳಿಗೆ ಸಾಕಷ್ಟು ಖರ್ಚು ಮಾಡಿರುವ ರೈತರಿಗೆ ವಿದ್ಯುತ್ ಸಮಸ್ಯೆ ಮತ್ತಷ್ಟು ಆರ್ಥಿಕ ಹೊರೆ ತಂದಿದೆ. ವಿದ್ಯುತ್ ಸಮಸ್ಯೆಯಿಂದ ಬೆಳೆ ಹಾನಿಯಾದರೆ ರೈತರ ಪರಿಸ್ಥಿತಿ ಮತ್ತಷ್ಟು ದುಸ್ತರವಾಗಲಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ನಿಗದಿತ ಸಮಯದಲ್ಲಿ ನಿರಂತರ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು. ವಿದ್ಯುತ್ ಲೈನ್‌ಗಳು, ಟ್ರಾನ್ಸ್‌ಫಾರ್ಮರ್‌ಗಳು ಹಾಗೂ ಇತರೆ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣವೇ ಸರಿಪಡಿಸಿ ರೈತರ ಬೆಳೆಗಳನ್ನು ರಕ್ಷಿಸಲು ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಸಂಬಂಧಪಟ್ಟ ವಿದ್ಯುತ್ ಇಲಾಖೆ ಅಧಿಕಾರಿಗಳು ತುರ್ತಾಗಿ ಸಮಸ್ಯೆ ಪರಿಹರಿಸಿ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂಬುದು ರೈತರ ಆಗ್ರಹವಾಗಿದೆ. ರೈತರ ಬೆಳೆ ಉಳಿಸಲು ವಿದ್ಯುತ್ ಪೂರೈಕೆ ಸಮರ್ಪಕವಾಗಲಿಯಂದು ರೈತರ ಒತ್ತಾಯ . ಈ ಪ್ರತಿಭಟನೆಯಲ್ಲಿ ಕಿರಗುಸೂರು ಶಂಕರ್ ಕೆಜಿ ಗುರುಸ್ವಾಮಿ ಕುರುಬುರ್ ಗೌರಿಶಂಕರ್ ವಾಚ್ ಕುಮಾರ್ ಆದಿ ಬೆಟ್ಟಳ್ಳಿ ನಂಜುಂಡಸ್ವಾಮಿ ಅಪ್ಪಣ್ಣ ಕುರುಬೂರು ಸಿದ್ದೇಶ್, ಬಿಪಿ ಪರಶಿವಮೂರ್ತಿ, ಕರುವಟಿ ಉಮೇಶ್ ಕುರುಬೂರ ಪ್ರದೀಪ್ ಸೋಮಶೇಖರ್ ಬನ್ನಳ್ಳಿ ಹುಂಡಿ ರಾಜೇಂದ್ರ ನಿಲ್ಸೋಗೆ ಉಮೇಶ್ ಪ್ರತಾಪ್, ಕುಮಾರ್ ಕೆ ಎಂ, ವಾಟಾಳ್ ಪುರ ಸತೀಶ್ ಕುಮಾರ್ ಹೊಸಪುರ ನಾಗರಾಜು ಮಾದೇಶ್ ಮಾದೇವಮೂರ್ತಿ ಬಸವರಾಜು ಎಸ್ ಕೆಬ್ಬೆ ಹುಂಡಿ, ಮಾದೇವಸ್ವಾಮಿ ಮಾವ್ನಹಳ್ಳಿ, ತರಕಾರಿ ನಿಂಗರಾಜು ಬನ್ನಳ್ಳಿ ಶಾಂತರಾಜು ಆದಿ ಬೆಟ್ಟಳ್ಳಿ ಮಹೇಶ ಕನ್ನಳ್ಳಿ ಮೊಳೆ ಮಣಿಕಂಠ ಲೋಕೇಶ್ ರವೀಂದ್ರ ಮಾದೇಶ್ ನಿಲ್ಸೋಗೆ ನಾಗರಾಜು ಚಿನ್ನಸ್ವಾಮಿ ಕುರುಬೂರು ಶಿವಪ್ರಸಾದ್ ವೀರೇಶ್ ಎಲ್ ಐ ಸಿ ಪ್ರದೀಪ್ ಎಬಿ ಮಂಜುನಾಥ್ ನವೀನ ತೊಟ್ಟುವಾಡಿ ಇನ್ನು ಮುಂತಾದ ರೈತರು ಭಾಗವಹಿಸಿದ್ದರು1
- ಪ್ರಧಾನಿ ಮೋದಿ ದಣಿವರಿಯದ ವಿಶ್ವಶ್ರೇಷ್ಠ ನಾಯಕ, ಪಟ್ಟಣದಲ್ಲಿ ಬಿಜೆಪಿ ಮುಖಂಡ ಯಮದೂರು ಸಿದ್ದರಾಜು ಬಣ್ಣನೆ ಮಳವಳ್ಳಿ: ಜನ ಸೇವೆಗಾ ಗಿಯೇ ತಮ್ಮ ಜೀವನವನ್ನು ಮುಡಿಪಾಗಿಸಿರುವ ದಣಿವರಿ ಯದ ನಾಯಕ ಪ್ರಧಾನಿ ನರೇಂದ್ರ ಮೋದಿ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ ಯಮದೂರು ಸಿದ್ದರಾಜು ಬಣ್ಣಿಸಿದ್ದಾರೆ. ಗುರುವಾರ ಮಧ್ಯಾಹ್ನ 1.30 ರ ಸಮಯದಲ್ಲಿ ಮಳವಳ್ಳಿ ಪಟ್ಟಣದ ಸಾರ್ವ ಜನಿಕ ಆಸ್ಪತ್ರೆ ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ತಾಲೂಕು ಬಿಜೆಪಿ ಮಂಡಲದ ವತಿಯಿಂದ ರೋಗಿ ಗಳಿಗೆ ಹಣ್ಣು ಹಂಪಲು ವಿತರಿ ಸುವ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಅವರು ಪ್ರಧಾನಿ ಮೋದಿ ಅವರು ಕಳೆದ 11 ವರ್ಷಗಳಿಂದ ದೇಶದ ಸರ್ವ ತೋಮುಖ ಅಭಿವೃದ್ಧಿಗೆ ಶ್ರಮಿ ಸುತ್ತಿದ್ದಾರೆ. ಬಡವರ, ರೈತರ, ಮಹಿಳೆಯರ, ಯುವಜನರ ಏಳಿಗೆಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ವಿಶ್ವದಲ್ಲೇ ಭಾರತದ ಗೌರವವನ್ನು ಹೆಚ್ಚಿಸಿದ್ದಾರೆ. ಅವರ ಜನ್ಮದಿನವನ್ನು ಸೇವಾ ದಿನವಾಗಿ ಆಚರಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು. ಬಿಜೆಪಿ ತಾಲ್ಲೂಕು ಅಧ್ಯಕ್ಷ ಮಧು ಗಂಗಾಧರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಸುರಕ್ಷಿತವಾಗಿದೆ, ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಹೇಳಿದರು. ಮೋದಿ ಅವರು ಹುಟ್ಟುಹಬ್ಬ ವನ್ನು ಅದ್ಧೂರಿಯಾಗಿ ಆಚರಿಸಿ ಕೊಳ್ಳದೆ, ಸೇವಾ ಕಾರ್ಯಗಳ ಮೂಲಕ ಆಚರಿಸಲು ಕರೆ ನೀಡಿದ್ದಾರೆ. ಅದರಂತೆ ಇಂದು ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಗಿದೆ. ಮೋದಿ ಅವರ ಆರೋಗ್ಯ, ದೀರ್ಘಾಯುಷ್ಯ ಕ್ಕಾಗಿ ಪ್ರಾರ್ಥಿಸಿ ಮನೆಗಳಲ್ಲಿ ದೀಪ ಬೆಳಗುವಿಕೆ ದೇವಾಲಯ ಗಳಲ್ಲಿ ವಿಶೇಷ ಪೂಜೆ ಹಮ್ಮಿ ಕೊಳ್ಳಲಾಗಿದೆ ಎಂದು ತಿಳಿಸಿ ದರು. ಕಾರ್ಯಕ್ರಮದಲ್ಲಿ ವೈದ್ಯಾಧಿಕಾ ರಿಗಳಾದ ಡಾ. ಶಿವಸ್ವಾಮಿ ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ಹೆಬ್ಬಣಿ ಬಸವರಾಜು, ಎಸ್ಸಿ ಮೋರ್ಚಾ ತಾಲೂಕು ಅಧ್ಯಕ್ಷ ಚಿಕ್ಜಣ್ಣ, ಪ್ರಧಾನ ಕಾರ್ಯದರ್ಶಿ ಉಮೇಶ್, ಜೆಡಿಎಸ್ ಮುಖಂಡ ಕಂಬರಾಜು, ಮುಖಂಡರಾದ ಸಿದ್ದರಾಜು, ದೇವರಾಜು, ವಕ್ಕರಹಳ್ಳಿ ಬಸವರಾಜು, ಮಾದೇಶ, ಸೇರಿದಂತೆ ಇತರರು ಈ ವೇಳೆ ಹಾಜರಿದ್ದರು.1
- ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಪ್ರಧಾನಿ ಮೋದಿ ಜನ್ಮ ದಿನಾಚರಣೆ ಆಚರಿಸಿದ ಬಿಜೆಪಿ ಕಾರ್ಯಕರ್ತರು ಮಳವಳ್ಳಿ: ಪ್ರಧಾನಿ ನರೇಂದ್ರಮೋದಿ ರವರ 76 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ಪಕ್ಷದ ವತಿಯಿಂದ ಮಳವಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯಮದೂರು ಸಿದ್ದರಾಜು ನೇತೃತ್ವದಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ವೇಳೆ ಜಿಲ್ಲಾ ಉಪಾಧ್ಯಕ್ಷ ಯಮದೂರು ಸಿದ್ದರಾಜು ಮಾತನಾಡಿ, ಮೋದಿರವರು ರೈತರಪರ, ದಲಿತರಪರ, ಯುವಕರಪರ ಇರುವ ವಿಶ್ವನಾಯಕರು, ಶೃಂಗ ಸಭೆಯಲ್ಲಿ ಮೋದಿರವರು ಮೆಚ್ಚಿಗೆ ಗಳಿಸಿದ್ದಾರೆ. ಇಂದಿನಿಂದ ಒಂದು ತಿಂಗಳ ಕಾಲ ಸೇವಾ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಈ ವೇಳೆ ಬಿಜೆಪಿ ತಾಲ್ಲೂಕು ಅಧ್ಯಕ್ಷ ಮಧುಗಂಗಾಧರ್ ಮಾತನಾಡಿ, ಇಂದು ಸಂಜೆ ಮನೆಮನೆಗೂ ದೀಪ ಹಚ್ಚಿ ಮೋದಿರವರ ಹುಟ್ಟಹಬ್ಬವನ್ನು ಆಚರಿಸಲಾಗುತ್ತದೆ. ಸತತ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು, ಈ ತಿಂಗಳು 17 ನೇ ತಾರೀಖಿನಿಂದ ಮುಂದಿನ ತಿಂಗಳು 17 ರವರಗೆ ಚುಟುವಟಿಕೆಗಳನ್ನು ಹಮ್ಮಿಕೊಂಡಿದ್ಧೇವೆ ಎಂದರು. ಈ ವೇಳೆ ಬಿಜೆಪಿ ಅಧ್ಯಕ್ಷ ಮಧುಗಂಗಾಧರ್, ಹೆಬ್ಬಣ್ಞಿಬಸವರಾಜು,ಚಿಕ್ಕಣ್ಞ, ದೇವರಾಜು,ತಮ್ಮಡಹಳ್ಳಿ ಮಾದೇಶ ಸೇರಿದಂತೆ ಹಲವರು ಇದ್ದರು.1
- ಬಂಡಿಪುರ ಸಫಾರಿ ಹಣ ಎಲ್ಲಿಗೆ ಹೋಗುತ್ತಿದೆ? ಕಾಡಂಚಿನ ಜನರ ಸಮಸ್ಯೆಗಳಿಗೆ ಆದ್ಯತೆ ನೀಡಲು ರೈತ ಸಂಘ ಒತ್ತಾಯ. ಗುಂಡ್ಲುಪೇಟೆ: ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪ್ರತಿನಿತ್ಯ ಸಫಾರಿ ನಡೆಯುತ್ತಿದ್ದು, ಇದರಿಂದ ಸರ್ಕಾರಕ್ಕೆ ಹೆಚ್ಚಿನ ಆದಾಯ ಬರುತ್ತಿದೆ. ಆದರೆ ಕಾಡಂಚಿನ ಗ್ರಾಮಗಳ ಜನರು ಮಾನವ–ವನ್ಯಜೀವಿ ಸಂಘರ್ಷ, ಬೆಳೆ ಹಾನಿ, ಜಾನುವಾರುಗಳ ಮೇಲೆ ದಾಳಿ ಹಾಗೂ ಜೀವಭಯ ಎದುರಿಸುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಿಳಿಸಿದೆ. ವನ್ಯಜೀವಿ ದಾಳಿ ಸಂದರ್ಭದಲ್ಲಿ ತ್ವರಿತವಾಗಿ ಕಾರ್ಯಾಚರಣೆ ನಡೆಸಲು ಅಗತ್ಯ ಸಿಬ್ಬಂದಿ, ಕ್ಯಾಮೆರಾ, ಡ್ರೋನ್ ಹಾಗೂ ಇತರೆ ಸುರಕ್ಷತಾ ಸೌಲಭ್ಯಗಳು ಸಮರ್ಪಕವಾಗಿಲ್ಲ ಎಂಬುದು ರೈತರ ಆರೋಪವಾಗಿದೆ. ಸಫಾರಿಯಿಂದ ಬರುವ ಆದಾಯದಲ್ಲಿ ಕಾಡಂಚಿನ ಗ್ರಾಮಗಳ ಸುರಕ್ಷತೆ, ಮೂಲಸೌಕರ್ಯ ಹಾಗೂ ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ ಆದ್ಯತೆ ನೀಡಬೇಕು ಎಂದು ಸಂಘಟನೆ ಒತ್ತಾಯಿಸಿದೆ. ಈ ಕುರಿತು ಸಫಾರಿ ಆದಾಯ ಎಷ್ಟು, ಅದನ್ನು ಎಲ್ಲಿ ಮತ್ತು ಹೇಗೆ ಬಳಸಲಾಗಿದೆ, ಕಾಡಂಚಿನ ಗ್ರಾಮಗಳ ಅಭಿವೃದ್ಧಿಗೆ ಹಾಗೂ ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ ಎಷ್ಟು ಹಣ ಖರ್ಚಾಗಿದೆ ಎಂಬ ಮಾಹಿತಿಯನ್ನು ಪಡೆಯಲು ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಲಾಗಿದೆ. ಸಫಾರಿ ವಿರೋಧಿಸುವುದಿಲ್ಲ. ಆದರೆ ಸಫಾರಿ ಆದಾಯ ಪಾರದರ್ಶಕವಾಗಿ ಬಳಕೆಯಾಗಬೇಕು. ಕಾಡು ಮತ್ತು ಕಾಡಂಚಿನ ಜನರ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಸಂಘಟನೆಯ ಅಧ್ಯಕ್ಷೀಯ ಮಂಡಳಿ ಸದಸ್ಯ ಹೊನ್ನೂರು ಪ್ರಕಾಶ್ ಒತ್ತಾಯಿಸಿದ್ದಾರೆ.4
- ನರೇಂದ್ರಮೋದಿ ಹುಟ್ಟುಹಬ್ಬ: ಪೌರಕಾರ್ಮಿಕರಿಗೆ ಗೌರವ ಸಮರ್ಪಣೆ, ಸೀರೆ, ಸಿಹಿ ವಿತರಣೆ ವರದಿ: ಹೊಮ್ಮನಂಜುಂಡನಾಯಕ ನರೇಂದ್ರಮೋದಿ ಹುಟ್ಟುಹಬ್ಬ: ಪೌರಕಾರ್ಮಿಕರಿಗೆ ಗೌರವ ಸಮರ್ಪಣೆ, ಸೀರೆ, ಸಿಹಿ ವಿತರಣೆ ಚಾಮರಾಜನಗರ: ಪ್ರಧಾನಮಂತ್ರಿ ನರೇಂದ್ರಮೋದಿಯವರ 76ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿ ಬಳಗ ಹಾಗೂ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶಿವುವಿರಾಟ್, ಬಿಜೆಪಿ ಕಾರ್ಯಕರ್ತರ ವತಿಯಿಂದ ನಗರದಲ್ಲಿ ಪೌರಕಾರ್ಮಿಕ ಮಹಿಳೆಯನ್ನು ಸನ್ಮಾನಿಸಿ, ಸೀರೆ, ಸಿಹಿ ವಿತರಿಸಲಾಯಿತು. ಇದಕ್ಕೂ ಮೊದಲು ನಗರದ ಮುದುಕುಮಾರಮ್ಮ ದೇವಸ್ಥಾನದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶಿವುವಿರಾಟ್ ಅವರ ನೇತೃತ್ವದಲ್ಲಿ ಮೋದಿಯವರ ಹೆಸರಿನಲ್ಲಿ ಆರ್ಚನೆ ಮಾಡಿಸಿ... ವಿಶೇಷಪೂಜೆ ಸಲ್ಲಿಸಲಾಯಿತು. ಪೂಜಾ ಕಾರ್ಯ ನೆರವೇರಿಸಿದ ಆಗಮಿಕ ಪ್ರದೀಪ್ ಕುಮಾರ್ ದೀಕ್ಷಿತ್ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರಮೋದಿಯವರ ಜನ್ಮದಿನದ ಅಂಗವಾಗಿ ಶಿವುವಿರಾಟ್ ಅವರು ಸಮಾಜಮುಖಿ ಚಿಂತನೆಗಳೊಂದಿಗೆ ಅರ್ಥಪೂರ್ಣವಾಗಿ ಆಚರಣೆ ಮಾಡುತಿದ್ದಾರೆ. ಈ ಭೂಮಿಗೆ ಅನೇಕ ಮಹನೀಯರು ತಮ್ಮ ಕೊಡುಗೆ ನೀಡಿದ್ದಾರೆ. ಬಹಳ ವಿಶಿಷ್ಠ ವ್ಯಕ್ತಿತ್ವಯುಳ್ಳ ವ್ಯಕ್ತಿ ನರೇಂದ್ರಮೋದಿಯವರು, ಅವರು ದೇಶದ ಪ್ರಧಾನಿಗಳಾಗಿ ಅವರು ಆಯ್ಕೆಯಾದ ಮೇಲೆ ರಾಷ್ಟ್ರದ ಚಿಂತನೆಯಲ್ಲಿ ದೇಶ ಕಂಡಂತಹ ಅನೇಕ ಪ್ರಧಾನಿಗಳಲ್ಲಿ ನರೇಂದ್ರಮೋದಿಯವರು ಅಗ್ರಗಣ್ಯರು ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್ ಮಾತನಾಡಿ, ನರೇಂದ್ರಮೋದಿಯವರು ಮುಖ್ಯಮಂತ್ರಿಯಾಗಿ, ಪ್ರಧಾನಮಂತ್ರಿಯಾಗಿ ಇಂದು ದೇಶದಲ್ಲಿ ಕಾರ್ಯಕ್ರಮಗಳು ನಡೆಯುತ್ತಿದೆ. ನರೇಂದ್ರಮೋದಿಯವರು ಸೃಚ್ಚಭಾರತ್ ಮಿಷನ್ ಯೋಜನೆಯಡಿಯಲ್ಲಿ ಶೌಚಾಲಯ ನಿರ್ಮಾಣ ಮಾಡಿದರು. ಜಲಜೀವನ್ ಮಿಷನ್ ಯೋಜನೆಯಡಿ ಮನೆಮನೆಗೆ ನಳ ಸೌಲಭ್ಯ ಕಲ್ಪಿಸಿದರು. ಉಜ್ವಲ ಯೋಜನೆಯಡಿಯಲ್ಲಿ ಉಚಿತ ಅನಿಲ ಸಂಪರ್ಕ ಕಲ್ಪಿಸಿದರು. ಉತ್ತ ಮ ರಸ್ತೆಗಳ ನಿರ್ಮಾಣ, ದೊಡ್ಡದೊಡ್ಡ ಸೇತುವೆ ನಿರ್ಮಾಣ ಮಾಡಿದರು. ಗ್ರಾಮೀಣ ಭಾಗದ ಅಭಿವೃದ್ಧಿಗೆ ಒತ್ತು ನೀಡಿದ್ದರು. ಅಲ್ಲದೆ ದೇಶದ ಪ್ರಗತಿಗಾಗಿ ಒತ್ತು ನೀಡಿದ್ದಾರೆ. ಎಂದರು. ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ. ಎಂ.ರಾಮಚಂದ್ರ ಮಾತನಾಡಿ, ನರೇಂದ್ರಮೋದಿಯವರ ಆಡಳಿತದ ಅವಧಿಯಲ್ಲಿ ದೇಶ ಸುಭದ್ರವಾಗಿದೆ. ಯಾವುದೇ ಆರ್ಥಿಕ ಸಮಸ್ಯೆ. ಇಲ್ಲದೆ ಭಾರತವನ್ನು ಇಡೀ ವಿಶ್ವಕ್ಕೆ ಕೊಂಡೊಯ್ಯುವ ಕೆಲಸವನ್ನು ನರೇಂದ್ರಮೋದಿಯವರು ಮಾಡಿದ್ದಾರೆ ಎಂದರು. ಕಾರ್ಯಕ್ರಮದ ಆಯೋಜಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶಿವುವಿರಾಟ್ ಮಾತನಾಡಿ, ಪ್ರಧಾನಿಮಂತ್ರಿ ನರೇಂದ್ರಮೋದಿ ಅವರು ಪೌರಕಾರ್ಮಿಕರ ಪಾದಗಳನ್ನು ತೊಳೆದು, ಒರೆಸಿ ಗೌರವಿಸಿದರು. ಅವರ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿ ಬಳಗ, ಬಿಜೆಪಿ ಕಾರ್ಯಕರ್ತರು ಸೇರಿ ನಗರದ ಮುದುಕುಮಾರಮ್ಮ ದೇವಸ್ಥಾನದಲ್ಲಿ ವಿಶೇಷಪೂಜೆ ಸಲ್ಲಿಸಿ, ಪೌರಕಾರ್ಮಿಕರ ಮಹಿಳೆಯರನ್ನು ಸನ್ಮಾನಿಸಿ, ಸೀರೆ ವಿತರಣೆ ಮಾಡುವ ಮೂಲಕ ಮೋದಿಯವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೊ.ಕೆ.ಆರ್.ಮಲ್ಲಿ ಕಾರ್ಜುನಪ್ಪ, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಕಾಡಾ ಮಾಜಿ ಅಧ್ಯಕ್ಷ ನಿಜಗುಣರಾಜು, ಎಸ್‌ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಜಯಸುಂದರ್, ಡಾ.ಎ.ಆರ್.ಬಾಬು, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷರಾದ ಆರ್.ಸುಂದರ್, ನಾರಾಯಣಪ್ರಸಾದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ವೃಷಬೇಂದದ್ರಪ್ಪ, ಜಿಲ್ಲಾ ವಕ್ತಾರ ಮನೋಜ್‌ಪಟೇಲ್, ಮೂಡ್ಲು ಪುರ ನಂದೀಶ್, ಶ್ರೀನಿವಾಸಗೌಡ, ನಗರಸಭಾ ಮಾಜಿ ಸದಸ್ಯರಾದ ರಾಜೇಶ್, ಶಿವಣ್ಣ, ಜಿಲ್ಲಾ ಕಾರ್ಯದರ್ಶಿನಟರಾಜು, ಆನಂದ್ ಭಗೀರಥ, ರವಿ, ನಾಗೇಂದ್ರ, ಆಟೋ ಮಹೇಶ್, ಕೃಷ್ಣ, ಚಂದ್ರಶೇಖರ್, ಪ್ರದೀಪ್, ರಾಕೇಶ್, ಮಣಿಕಂಠ, ಮನು, ಅರುಣ್, ಪ್ರಸನ್ನ, ಭಾನು, ಟಗರುಶಿವ, ಕುಮಾರ್, ಕಿಲಗೆರೆಶಿವು, ರಾಮಸಮುದ್ರಶಿವು, ವೆಂಕಟೇಶ್, ಪುರುಷೋತ್ತಮ . ಫೃಥ್ವಿ, ಕಿರಣ ಇತರರು ಹಾಜರಿದ್ದರು.4
- All About,How the political Influencial are misuing #WaqfProperties #WaqfFunds to their advantage *ಭಾರತ ನಲ್ಲಿ ವೈರಲ್*1