ಭೀಕರ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ ದೊಡ್ಡ ಮಟ್ಟದ ಶಬ್ದ ಎರಡು ಕಾರುಗಳ ನಡುವೆ ಬೀಕರ ಅಪಘಾತ ಗೋಡೆಕೆರೆ ಗೇಟ್ ಬಳಿ ಭೀಕರ ಅಪಘಾತ: ನಾಲ್ವರು ಸಾವು, ಮೂವರಿಗೆ ಗಾಯ ಚಿಕ್ಕನಾಯಕನಹಳ್ಳಿ: ತಾಲೂಕಿನ ಗೋಡೆಕೆರೆ ಗೇಟ್ ಬಳಿ ಶುಕ್ರವಾರ ರಾತ್ರಿ ಸುಮಾರು 8 ಗಂಟೆ ವೇಳೆಯಲ್ಲಿ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ. ಕೆ.ಬಿ. ಕ್ರಾಸ್ ಕಡೆಯಿಂದ ಚಿಕ್ಕನಾಯಕನಹಳ್ಳಿ ಕಡೆಗೆ ಬರುತ್ತಿದ್ದ ಕಾರಿನಲ್ಲಿ ಪಟ್ಟಣದ ನಿವಾಸಿಗಳಾದ ಅನಿಲ್ (31) ಹಾಗೂ ವಿವೇಕ್ (32) ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಅನಿಲ್ ಹಾಗೂ ವಿವೇಕ್ ಮೃತಪಟ್ಟಿದ್ದಾರೆ. ಇದೇ ಕಾರಿನಲ್ಲಿದ್ದ ನಿಶಾನಿ ಅನಿಲ್ (31) ಅವರು ತೀವ್ರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿಗೆ ಕಳುಹಿಸಲಾಗಿದೆ. ಮತ್ತೊಂದು ಕಾರು ಚಿಕ್ಕನಾಯಕನಹಳ್ಳಿಯ ತಾತಯ್ಯನವರ ದರ್ಗಾಕ್ಕೆ ಭೇಟಿ ನೀಡಿ ತುರುವೇಕೆರೆ ಕಡೆಗೆ ತೆರಳುತ್ತಿತ್ತು. ಈ ಕಾರಿನಲ್ಲಿ 3 ವರ್ಷದ ಹೆಣ್ಣು ಮಗು ಅನಾಫಾತಿಮ ಹಾಗೂ ಚಾಲಕ ದಾವೂದ್ (45) ಸೇರಿದಂತೆ ಪ್ರಯಾಣಿಕರು ಇದ್ದರು. ಅಪಘಾತದಲ್ಲಿ ಅನಾಫಾತಿಮ ಹಾಗೂ ಚಾಲಕ ದಾವೂದ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ನಾಲ್ವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೆ ನಿಖರ ಕಾರಣ ತಿಳಿದುಬರಬೇಕಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಭೀಕರ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ ದೊಡ್ಡ ಮಟ್ಟದ ಶಬ್ದ ಎರಡು ಕಾರುಗಳ ನಡುವೆ ಬೀಕರ ಅಪಘಾತ ಗೋಡೆಕೆರೆ ಗೇಟ್ ಬಳಿ ಭೀಕರ ಅಪಘಾತ: ನಾಲ್ವರು ಸಾವು, ಮೂವರಿಗೆ ಗಾಯ ಚಿಕ್ಕನಾಯಕನಹಳ್ಳಿ: ತಾಲೂಕಿನ ಗೋಡೆಕೆರೆ ಗೇಟ್ ಬಳಿ ಶುಕ್ರವಾರ ರಾತ್ರಿ ಸುಮಾರು 8 ಗಂಟೆ ವೇಳೆಯಲ್ಲಿ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ. ಕೆ.ಬಿ. ಕ್ರಾಸ್ ಕಡೆಯಿಂದ ಚಿಕ್ಕನಾಯಕನಹಳ್ಳಿ ಕಡೆಗೆ ಬರುತ್ತಿದ್ದ ಕಾರಿನಲ್ಲಿ ಪಟ್ಟಣದ ನಿವಾಸಿಗಳಾದ ಅನಿಲ್ (31) ಹಾಗೂ ವಿವೇಕ್ (32) ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಅನಿಲ್ ಹಾಗೂ ವಿವೇಕ್ ಮೃತಪಟ್ಟಿದ್ದಾರೆ. ಇದೇ ಕಾರಿನಲ್ಲಿದ್ದ ನಿಶಾನಿ ಅನಿಲ್ (31) ಅವರು ತೀವ್ರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿಗೆ ಕಳುಹಿಸಲಾಗಿದೆ. ಮತ್ತೊಂದು ಕಾರು ಚಿಕ್ಕನಾಯಕನಹಳ್ಳಿಯ ತಾತಯ್ಯನವರ ದರ್ಗಾಕ್ಕೆ ಭೇಟಿ ನೀಡಿ ತುರುವೇಕೆರೆ ಕಡೆಗೆ ತೆರಳುತ್ತಿತ್ತು. ಈ ಕಾರಿನಲ್ಲಿ 3 ವರ್ಷದ ಹೆಣ್ಣು ಮಗು ಅನಾಫಾತಿಮ ಹಾಗೂ ಚಾಲಕ ದಾವೂದ್ (45) ಸೇರಿದಂತೆ ಪ್ರಯಾಣಿಕರು ಇದ್ದರು. ಅಪಘಾತದಲ್ಲಿ ಅನಾಫಾತಿಮ ಹಾಗೂ ಚಾಲಕ ದಾವೂದ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ನಾಲ್ವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೆ ನಿಖರ ಕಾರಣ ತಿಳಿದುಬರಬೇಕಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
- ಹುಳಿಯಾರು ಹೋಬಳಿ ದಸೂಡಿ ಸೊಸೈಟಿಯಲ್ಲಿ ಸರ್ವರ್ ಸಮಸ್ಯೆ ತಿಂಗಳು ಮುಗಿಯುತ್ತಾ ಬಂದಿದ್ದರು ಅಕ್ಕಿ ಇನ್ನೂ ಸಿಕ್ಕಿಲ್ಲ ಹುಳಿಯಾರು ಹೋಬಳಿ ದಸೂಡಿ ಸೊಸೈಟಿಯಲ್ಲಿ ಸರ್ವರ್ ಸಮಸ್ಯೆ ತಿಂಗಳು ಮುಗಿಯುತ್ತಾ ಬಂದಿದ್ದರು ಅಕ್ಕಿ ಇನ್ನೂ ಸಿಕ್ಕಿಲ್ಲ1
- ರಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಮಾಡಬೇಕು ನಮಗೆ ಅದರಿಂದ ತೊಂದರೆ ಆಗುತ್ತಿದೆ ರಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಮಾಡಬೇಕು ನಮಗೆ ಅದರಿಂದ ತೊಂದರೆ ಆಗುತ್ತಿದೆ1
- ಶಾಸಕ ಬಾಬು ಬಂಡಿಸಿದೇಗೌಡ ಕತ್ತೆ ಕೆಲಸ ಮಾಡುವ ವಿಡಿಯೋ ವೈರಲ್,ಏನಂದ್ರು ಗೊತ್ತಾ ನೆಟ್ಟಿಗರು ಮಂಡ್ಯ ಶ್ರೀರಂಗಪಟ್ಟಣ ಶಾಸಕ ಬಾಬು ಬಂಡಿ ಸಿದ್ದೇಗೌಡ ವ್ಯವಸಾಯ ಮಾಡುವ ವಿಡಿಯೋ ಆಗಿಸಿ ಸಾಮಾಜಿಕ ಜಾಲತಾಣದಲ್ಲಿ ಶಾಸಕರ ಗದ್ದೆ ಕೆಲಸ ಮಾಡುವ ವಿಡಿಯೋ ಬೈಕೇರಿ ಹೋಗುವ ಜೊತೆಯಲ್ಲಿ ಗುದ್ದಲಿ ಹಿಡಿದು ಗದ್ದೆಯಲ್ಲಿ ಕೆಲಸ ಮಾಡುವ ವಿಡಿಯೋಗೆ ನೆಟ್ಟಗಿರೋ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೆಲ್ಮೆಟ್ ಹಾಕದೆ ಗಾಡಿ ಓಡಿಸಬೇಕು ಕೆಲವರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ1
- ಸುದ್ದಿಗೊಷ್ಠಿ ಮದ್ಯೆ ಕಣ್ಣೀರಾಕಿದ ಸಚಿವ ನಾಗೇಂದ್ರ... ಕಣ್ಣೀರಾಕಿ ರಾಜೀನಾಮೆ ಘೋಷಿಸಿದ ನಾಗೇಂದ್ರ. ಶಾಸಕ ಸ್ಥಾನಕ್ಕೂ ರಾಜೀನಾಮೆ ನಿಡ್ತಿನಿ...!? ಬೆಂಗಳೂರು, ಆ.28: ವಿಧಾನಸೌಧದಲ್ಲಿ ಸಚಿವರಾದ ಬಿ. ನಾಗೇಂದ್ರ, ಅಜಯ್ ಸಿಂಗ್, ರಿಜ್ವಾನ್ ಅರ್ಷದ್, ನಾಸೀರ್ ಅಹಮದ್ ಹಾಗೂ ಜಿ.ಸಿ. ಚಂದ್ರಶೇಖರ್ ಅವರ ಜಂಟಿ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಮಾತನಾಡಿದ ಸಚಿವ ಬಿ. ನಾಗೇಂದ್ರ, ವಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸದನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕಿತ್ತು. ಆದರೆ ವಿಪಕ್ಷದವರು ಸದನವನ್ನೇ ನಡೆಯಲು ಬಿಡಲಿಲ್ಲ ಎಂದು ಆರೋಪಿಸಿದರು. “ವಿಪಕ್ಷದವರು ಮನುಸ್ಮೃತಿಯನ್ನು ಜಾರಿಗೆ ತರಲು ಹೊರಟಿದ್ದಾರೆ. ಅವರಿಗೆ ಇದು ಯಾವ ಕಾಲ ಎಂಬುದು ಗೊತ್ತಿಲ್ಲ. ಇದು ಸಂವಿಧಾನದ ಕಾಲ, ಬಾಬಾಸಾಹೇಬರ ಕಾಲ” ಎಂದು ಹೇಳಿದರು. ರಾಮಾಯಣದ ಉತ್ತರಕಾಂಡದಲ್ಲಿನ ಶಂಬೂಕನ ಪ್ರಸಂಗವನ್ನು ಉಲ್ಲೇಖಿಸಿದ ನಾಗೇಂದ್ರ, ಇಂದಿನ ಯುಗದಲ್ಲಿ ಶಂಬೂಕನ ಹತ್ಯೆಯಾಗಲು ಸಾಧ್ಯವಿಲ್ಲ. ಸಂವಿಧಾನ ಶೂದ್ರರು, ದಲಿತರು, ಮಹಿಳೆಯರು, ಆದಿವಾಸಿಗಳು ಹಾಗೂ ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡುತ್ತಿದೆ ಎಂದರು. “ರಾಜ್ಯದಲ್ಲಿ ಭೀಕರ ಬರಗಾಲವಿದೆ. ಕೆಪಿಎಸ್‌ಸಿ ಹಗರಣದ ಕುರಿತು ಚರ್ಚೆ ಮಾಡಬಹುದಿತ್ತು. ಶಾಸಕರು ತಮ್ಮ ಕ್ಷೇತ್ರಗಳ ಸಮಸ್ಯೆಗಳನ್ನು ಸದನದಲ್ಲಿ ಪ್ರಸ್ತಾಪಿಸಬಹುದಿತ್ತು. ನಾವು ಎಲ್ಲದಕ್ಕೂ ಅವಕಾಶ ನೀಡುತ್ತಿದ್ದೆವು. ಆದರೆ ಯಾವುದೇ ಆಧಾರವಿಲ್ಲದ ವಿಚಾರಗಳನ್ನು ಮುಂದಿಟ್ಟುಕೊಂಡು ಪಾದಯಾತ್ರೆ ಮಾಡುತ್ತಿದ್ದಾರೆ” ಎಂದು ನಾಗೇಂದ್ರ ಆರೋಪಿಸಿದರು. 2024ರಲ್ಲೇ ರಾಜೀನಾಮೆ ನೀಡಿದ್ದೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ನಾಗೇಂದ್ರ, 2024ರಲ್ಲೇ ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ ಎಂದು ಹೇಳಿದರು. “ನಂತರ ಎಸ್‌ಐಟಿ, ಸಿಐಡಿ ತನಿಖೆ ಎದುರಿಸಿದ್ದೇನೆ. ಕೇಂದ್ರದ ಇಡಿಯಿಂದ ನನ್ನನ್ನು ಬಂಧಿಸಲಾಗಿತ್ತು. ಜೈಲಿಗೂ ಹೋಗಿ ಬಂದಿದ್ದೇನೆ. ಎರಡು ಬಾರಿ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಮೊದಲ ಚಾರ್ಜ್‌ಶೀಟ್‌ನಲ್ಲಿ ನನ್ನ ಹೆಸರಿರಲಿಲ್ಲ. ಎರಡನೇ ಚಾರ್ಜ್‌ಶೀಟ್‌ನಲ್ಲಿ ನನ್ನ ಹೆಸರು ಸೇರಿಸಲಾಗಿದೆ” ಎಂದು ಹೇಳಿದರು. ತಾವು ಸಂವಿಧಾನಕ್ಕೆ ಗೌರವ ನೀಡುವುದಾಗಿ ತಿಳಿಸಿದ ನಾಗೇಂದ್ರ, ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಆದರೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧದ ಪ್ರಾಸಿಕ್ಯೂಷನ್ ವಿಚಾರದಲ್ಲಿ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು. “ವಾಲ್ಮೀಕಿ ಹಗರಣದಲ್ಲಿ ನನ್ನ ಪಾತ್ರವಿಲ್ಲ” “ವಾಲ್ಮೀಕಿ ಹಗರಣದಲ್ಲಿ ನನ್ನ ಪಾತ್ರವಿಲ್ಲ. ನಾನು ಕೇವಲ ಸಚಿವನಾಗಿದ್ದೆ. ನಾನು ನೋಟ್‌ಶೀಟ್ ಹಾಕಿದ್ದೇನಾ? ಎಲ್ಲಾದರೂ ಸಹಿ ಹಾಕಿದ್ದೇನಾ? ನಾನು ಇದರಲ್ಲಿ ಭಾಗಿಯಾಗಿದ್ದೇನಾ?” ಎಂದು ಪ್ರಶ್ನಿಸಿದರು. ಅಕ್ರಮವಾಗಿ ವರ್ಗಾವಣೆಯಾಗಿದ್ದ ಹಣ ವಾಪಸ್ ಆಗಿದೆ ಎಂದು ಹೇಳಿದ ಅವರು, “ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಯಾರ ಅಧೀನದಲ್ಲಿದೆ? ನಿರ್ಮಲಾ ಸೀತಾರಾಮನ್ ಅವರ ಅಧೀನದಲ್ಲಿರುವ ಬ್ಯಾಂಕ್ ಅಲ್ಲವೇ? ಹಾಗಾದರೆ ಅವರ ಮೇಲೆ ಏಕೆ ತನಿಖೆ ನಡೆಯುತ್ತಿಲ್ಲ? ನಾನು ದಲಿತ ಎಂಬ ಕಾರಣಕ್ಕೆ ನನ್ನ ಮೇಲೆ ಕ್ರಮ ಕೈಗೊಳ್ಳಲಾಗಿದೆಯೇ?” ಎಂದು ಪ್ರಶ್ನಿಸಿದರು. ಈ ವೇಳೆ ನಾಗೇಂದ್ರ ಭಾವುಕರಾಗಿ ಮಾತನಾಡಿದರು. ಕಣ್ಣೀರು ಹಾಕಿದ ಅವರು ಟಿಶ್ಯೂ ಬಳಸಿ ಕಣ್ಣೊರೆಸಿಕೊಂಡರು. ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವ ಘೋಷಣೆ ಮುಖ್ಯಮಂತ್ರಿ, ಪಕ್ಷದ ವರಿಷ್ಠರಿಗೆ ಮುಜುಗರವಾಗಬಾರದು ಹಾಗೂ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂಬ ಕಾರಣಕ್ಕಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ನಾಗೇಂದ್ರ ಹೇಳಿದರು. “ಈಗ ನಾನು ನನ್ನ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ. ನನಗೆ ಆಗಿರುವ ಅನ್ಯಾಯವನ್ನು ನಾನು ಹೇಳುತ್ತೇನೆ. ಬನ್ನಿ ಅಖಾಡಕ್ಕೆ ಹೋಗೋಣ, ಜನತಾ ನ್ಯಾಯಾಲಯಕ್ಕೆ ಹೋಗೋಣ” ಎಂದು ಸವಾಲು ಹಾಕಿದರು. ಬಳ್ಳಾರಿ ಬಿಜೆಪಿ ನಾಯಕರಾದ ಬಿ. ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, “ರಾಮುಲಣ್ಣ, ನೀ ಬಾರಣ್ಣ, ನೀನೇ ಬಾ. ನನ್ನ ಸವಾಲು ಸ್ವೀಕರಿಸು. ಜನತಾ ನ್ಯಾಯಾಲಯಕ್ಕೆ ಹೋಗೋಣ” ಎಂದು ಸವಾಲು ಹಾಕಿದರು. “ನನ್ನ ಮೇಲೆ ಇಡಿ, ಸಿಬಿಐ ಬಿಡಬಹುದು. ಆದರೆ ನಿಮ್ಮ ಗೊಡ್ಡು ಬೆದರಿಕೆಗೆ ನಾನು ಬಗ್ಗುವುದಿಲ್ಲ. ನಾನು ಆರೋಪ ಮುಕ್ತನಾಗಿ ಹೊರಬರುವ ವಿಶ್ವಾಸವಿದೆ” ಎಂದು ನಾಗೇಂದ್ರ ಹೇಳಿದರು. ಬಳ್ಳಾರಿ ಜನರು ಈಗಾಗಲೇ ಬಿಜೆಪಿ ನಾಯಕರಿಗೆ ಎರಡು ಬಾರಿ ಛೀಮಾರಿ ಹಾಕಿದ್ದಾರೆ. ನೀವು ಚಲಾವಣೆಯಲ್ಲಿಲ್ಲದ ನಾಣ್ಯಗಳಾಗಿದ್ದೀರಿ ಎಂದು ಟೀಕಿಸಿದ ಅವರು, ತಮ್ಮ ವಿರುದ್ಧದ ಆರೋಪಗಳಿಗೆ ಜನತಾ ನ್ಯಾಯಾಲಯದಲ್ಲೇ ಉತ್ತರ ನೀಡುವುದಾಗಿ ಹೇಳಿದರು. ಕೊನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ರಣದೀಪ್ ಸಿಂಗ್ ಸುರ್ಜೇವಾಲಾ, ಕೆ.ಸಿ. ವೇಣುಗೋಪಾಲ್, ಹರಿಪ್ರಸಾದ್ ಸೇರಿದಂತೆ ತಮ್ಮ ಪರ ನಿಂತ ಎಲ್ಲ ನಾಯಕರನ್ನು ಸ್ಮರಿಸಿದ ನಾಗೇಂದ್ರ, ಪಕ್ಷದ ಹಿತದೃಷ್ಟಿಯಿಂದ ಮುಖ್ಯಮಂತ್ರಿ ಅವರಿಗೆ ರಾಜೀನಾಮೆ ಸಲ್ಲಿಸುವುದಾಗಿ ತಿಳಿಸಿದರು.1
- ಇಂದು ನಡೆದ ಸರಣಿ ಅಪಘಾತ , ದಿನೇ ದಿನೇ ಹೆಚ್ಚಾಗುತ್ತಿದೆ ಬೆಂಗಳೂರಿನಲ್ಲಿ ಇಂತಹ ಪ್ರಕರಣಗಳು. ಇಂದು ಯಲಹಂಕದ ಏರ್ಪೋರ್ಟ್ ರಸ್ತೆಯ ಬಳಿ ನಡೆದ ಸರಣಿ ಅಪಘಾತ, ಇಂದು ಮಧ್ಯಾಹ್ನ ಸುಮಾರು ನಾಲ್ಕು ಗಂಟೆಗೆ ಈ ಘಟನೆ ನಡೆದಿದ್ದು ಸದ್ಯಕ್ಕೆ ಯಾರ ಪ್ರಾಣಿಗೂ ಹಾನಿಯಾಗಲಿಲ್ಲ ಆದರೆ ಗಾಡಿಗಳು ಮಾತ್ರ ಜಕಮ್ ಗೊಂಡಿವೆ1
- ಕಣ್ಣೀರಿಡುತ್ತಲೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ! | ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದ್ದಾರೆ. ರಾಜೀನಾಮೆ ಘೋಷಿಸುವ ವೇಳೆ ಬಿ.ನಾಗೇಂದ್ರ ಅವರು ತೀವ್ರ ಭಾವುಕರಾಗಿ ಕಣ್ಣೀರಿಟ್ಟ ಘಟನೆ ಗಮನ ಸೆಳೆಯಿತು. ಯಾವುದೇ ಒತ್ತಡವಿಲ್ಲದೆ ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿರುವುದಾಗಿ ಅವರು ಸ್ಪಷ್ಟಪಡಿಸಿದರು. ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಯವರಿಗೆ ಸಲ್ಲಿಸುವುದಾಗಿ ತಿಳಿಸಿದ ಅವರು, ಪಕ್ಷದ ವರಿಷ್ಠರಿಗೂ ಮನವಿ ಮಾಡಿರುವುದಾಗಿ ಹೇಳಿದರು. ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಮುಂದೇನು ಎಂಬ ಕುತೂಹಲ ಹೆಚ್ಚಾಗಿದೆ. ಸಂಪೂರ್ಣ ಸುದ್ದಿಗಾಗಿ ವಿಡಿಯೋ ನೋಡಿ ಮತ್ತು ನಿಮ್ಮ ಅಭಿಪ್ರಾಯವನ್ನು ಕಾಮೆಂಟ್‌ನಲ್ಲಿ ತಿಳಿಸಿ. #BNagendra #ಬಿನಾಗೇಂದ್ರ #KarnatakaPolitics #KarnatakaNews #BreakingNews #PoliticalNews #BangaloreNews #Congress #Karnataka #KannadaNews #ರಾಜಕೀಯ #ರಾಜೀನಾಮೆ #ಬೆಂಗಳೂರು #asnnews24kannada1
- ಭೀಕರ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ ದೊಡ್ಡ ಮಟ್ಟದ ಶಬ್ದ ಎರಡು ಕಾರುಗಳ ನಡುವೆ ಬೀಕರ ಅಪಘಾತ ಗೋಡೆಕೆರೆ ಗೇಟ್ ಬಳಿ ಭೀಕರ ಅಪಘಾತ: ನಾಲ್ವರು ಸಾವು, ಮೂವರಿಗೆ ಗಾಯ ಚಿಕ್ಕನಾಯಕನಹಳ್ಳಿ: ತಾಲೂಕಿನ ಗೋಡೆಕೆರೆ ಗೇಟ್ ಬಳಿ ಶುಕ್ರವಾರ ರಾತ್ರಿ ಸುಮಾರು 8 ಗಂಟೆ ವೇಳೆಯಲ್ಲಿ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ. ಕೆ.ಬಿ. ಕ್ರಾಸ್ ಕಡೆಯಿಂದ ಚಿಕ್ಕನಾಯಕನಹಳ್ಳಿ ಕಡೆಗೆ ಬರುತ್ತಿದ್ದ ಕಾರಿನಲ್ಲಿ ಪಟ್ಟಣದ ನಿವಾಸಿಗಳಾದ ಅನಿಲ್ (31) ಹಾಗೂ ವಿವೇಕ್ (32) ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಅನಿಲ್ ಹಾಗೂ ವಿವೇಕ್ ಮೃತಪಟ್ಟಿದ್ದಾರೆ. ಇದೇ ಕಾರಿನಲ್ಲಿದ್ದ ನಿಶಾನಿ ಅನಿಲ್ (31) ಅವರು ತೀವ್ರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿಗೆ ಕಳುಹಿಸಲಾಗಿದೆ. ಮತ್ತೊಂದು ಕಾರು ಚಿಕ್ಕನಾಯಕನಹಳ್ಳಿಯ ತಾತಯ್ಯನವರ ದರ್ಗಾಕ್ಕೆ ಭೇಟಿ ನೀಡಿ ತುರುವೇಕೆರೆ ಕಡೆಗೆ ತೆರಳುತ್ತಿತ್ತು. ಈ ಕಾರಿನಲ್ಲಿ 3 ವರ್ಷದ ಹೆಣ್ಣು ಮಗು ಅನಾಫಾತಿಮ ಹಾಗೂ ಚಾಲಕ ದಾವೂದ್ (45) ಸೇರಿದಂತೆ ಪ್ರಯಾಣಿಕರು ಇದ್ದರು. ಅಪಘಾತದಲ್ಲಿ ಅನಾಫಾತಿಮ ಹಾಗೂ ಚಾಲಕ ದಾವೂದ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ನಾಲ್ವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೆ ನಿಖರ ಕಾರಣ ತಿಳಿದುಬರಬೇಕಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.1
- ಚಿಕ್ಕನಾಯಕನಹಳ್ಳಿ ಎರಡು ಕಾರುಗಳ ನಡುವೆ ಬೀಗರ ಅಪಘಾತ ನಾಲ್ಕು ಸಾವು ಚಿಕ್ಕನಾಯಕನಹಳ್ಳಿ ತಾಲೂಕು ಗೋಡೆಗೆರೆ ಬಳಿ 2 ಕಾರುಗಳ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿದ್ದು ಇನ್ನೂ ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ ಭೀಕರ ಅಪಘಾತಕ್ಕೆ ಇಡಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ ತುರುವೇಕೆರೆ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.1