ನೆರಳಿನ ವ್ಯವಸ್ಥೆ ಇಲ್ಲದೆ ಉರಿ ಬಿಸಿಲಿನಲ್ಲಿ ಪರದಾಡಿದ ಶಾಲಾ ಕ್ರೀಡಾಪಟುಗಳು* *ಕುಷ್ಟಗಿ:* ತಾಲೂಕು ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ/ಪ್ರೌಢ ಶಾಲೆಗಳ ಬಾಲಕ-ಬಾಲಕಿಯರ ಕ್ರೀಡಾಕೂಟದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಶಾಲಾ ಕ್ರೀಡಾಪಟುಗಳು ಉರಿ ಬಿಸಿಲಿನಲ್ಲಿ ಪರದಾಡುವಂತಾಯಿತು ಎಂದು ಪೋಷಕರು ಹಾಗೂ ಸಾರ್ವಜನಿಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. 2026-27ನೇ ಸಾಲಿನ ಕುಷ್ಟಗಿ ತಾಲೂಕು ಮಟ್ಟದ ಕ್ರೀಡಾಕೂಟ ಸೆಪ್ಟೆಂಬರ್ 15 ಮತ್ತು 16 ರಂದು ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಆದರೆ ಕ್ರೀಡಾಂಗಣದಲ್ಲಿ ಮಕ್ಕಳು ಕುಳಿತುಕೊಳ್ಳಲು ನೆರಳಿನ ವ್ಯವಸ್ಥೆ, ಕುರ್ಚಿ ಮತ್ತು ಕುಡಿಯುವ ನೀರು ಹಾಗೂ ಕುಳಿತುಕೊಳ್ಳಲು ಚಾಪೆ, ಮ್ಯಾಟ್ ವ್ಯವಸ್ಥೆ ಮಾಡಿರಲಿಲ್ಲ. ಬೆಳಗ್ಗೆ 9-30ಕ್ಕೆ ಆರಂಭವಾದ ಕ್ರೀಡಾಕೂಟ ಸಂಜೆ ವರಗೆ ನಡೆದಿದ್ದು, ಪುಟ್ಟ ಮಕ್ಕಳು ಬಿಸಿಲಿನಲ್ಲಿಯೇ ನಿಂತು ಪರದಾಡುವಂತಾಯಿತು. ಕೆಲ ಮಕ್ಕಳು ಬಿಸಿಲಿನ ತಾಪಕ್ಕೆ ಸುಸ್ತಾಗಿ ಕುಳಿತುಕೊಂಡಿರುವ ದೃಶ್ಯ ಕಂಡು ಬಂತು. ಆಯೋಜಕರು ಕನಿಷ್ಠ ಟೆಂಟ್ ವ್ಯವಸ್ಥೆಯನ್ನೂ ಮಾಡಿರಲಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ. ಕೂಡಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳು ಗಮನಹರಿಸಿ, ನಾಳೆಯ ಕ್ರೀಡಾಕೂಟದಲ್ಲಿ ಮಕ್ಕಳಿಗೆ ನೆರಳು, ಕುಡಿಯುವ ನೀರು ಹಾಗೂ ಪ್ರಥಮ ಚಿಕಿತ್ಸಾ ವ್ಯವಸ್ಥೆ ಮಾಡಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ. *ಫೋಟೋ ಕ್ಯಾಪ್ಷನ್:* ಕುಷ್ಟಗಿ ತಾಲೂಕು ಕ್ರೀಡಾಂಗಣದಲ್ಲಿ ನೆರಳಿನ ವ್ಯವಸ್ಥೆ ಇಲ್ಲದೆ ಬಿಸಿಲಿನಲ್ಲಿ ನಿಂತಿರುವ ಶಾಲಾ ಮಕ್ಕಳು.
ನೆರಳಿನ ವ್ಯವಸ್ಥೆ ಇಲ್ಲದೆ ಉರಿ ಬಿಸಿಲಿನಲ್ಲಿ ಪರದಾಡಿದ ಶಾಲಾ ಕ್ರೀಡಾಪಟುಗಳು* *ಕುಷ್ಟಗಿ:* ತಾಲೂಕು ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ/ಪ್ರೌಢ ಶಾಲೆಗಳ ಬಾಲಕ-ಬಾಲಕಿಯರ ಕ್ರೀಡಾಕೂಟದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಶಾಲಾ ಕ್ರೀಡಾಪಟುಗಳು ಉರಿ ಬಿಸಿಲಿನಲ್ಲಿ ಪರದಾಡುವಂತಾಯಿತು ಎಂದು ಪೋಷಕರು ಹಾಗೂ ಸಾರ್ವಜನಿಕ
ಆಕ್ರೋಶ ವ್ಯಕ್ತಪಡಿಸಿದ್ದಾರೆ. 2026-27ನೇ ಸಾಲಿನ ಕುಷ್ಟಗಿ ತಾಲೂಕು ಮಟ್ಟದ ಕ್ರೀಡಾಕೂಟ ಸೆಪ್ಟೆಂಬರ್ 15 ಮತ್ತು 16 ರಂದು ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಆದರೆ ಕ್ರೀಡಾಂಗಣದಲ್ಲಿ ಮಕ್ಕಳು ಕುಳಿತುಕೊಳ್ಳಲು ನೆರಳಿನ ವ್ಯವಸ್ಥೆ, ಕುರ್ಚಿ ಮತ್ತು ಕುಡಿಯುವ ನೀರು ಹಾಗೂ ಕುಳಿತುಕೊಳ್ಳಲು ಚಾಪೆ, ಮ್ಯಾಟ್
ವ್ಯವಸ್ಥೆ ಮಾಡಿರಲಿಲ್ಲ. ಬೆಳಗ್ಗೆ 9-30ಕ್ಕೆ ಆರಂಭವಾದ ಕ್ರೀಡಾಕೂಟ ಸಂಜೆ ವರಗೆ ನಡೆದಿದ್ದು, ಪುಟ್ಟ ಮಕ್ಕಳು ಬಿಸಿಲಿನಲ್ಲಿಯೇ ನಿಂತು ಪರದಾಡುವಂತಾಯಿತು. ಕೆಲ ಮಕ್ಕಳು ಬಿಸಿಲಿನ ತಾಪಕ್ಕೆ ಸುಸ್ತಾಗಿ ಕುಳಿತುಕೊಂಡಿರುವ ದೃಶ್ಯ ಕಂಡು ಬಂತು. ಆಯೋಜಕರು ಕನಿಷ್ಠ ಟೆಂಟ್ ವ್ಯವಸ್ಥೆಯನ್ನೂ ಮಾಡಿರಲಿಲ್ಲ ಎಂದು ಸಾರ್ವಜನಿಕರು
ದೂರಿದ್ದಾರೆ. ಕೂಡಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳು ಗಮನಹರಿಸಿ, ನಾಳೆಯ ಕ್ರೀಡಾಕೂಟದಲ್ಲಿ ಮಕ್ಕಳಿಗೆ ನೆರಳು, ಕುಡಿಯುವ ನೀರು ಹಾಗೂ ಪ್ರಥಮ ಚಿಕಿತ್ಸಾ ವ್ಯವಸ್ಥೆ ಮಾಡಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ. *ಫೋಟೋ ಕ್ಯಾಪ್ಷನ್:* ಕುಷ್ಟಗಿ ತಾಲೂಕು ಕ್ರೀಡಾಂಗಣದಲ್ಲಿ ನೆರಳಿನ ವ್ಯವಸ್ಥೆ ಇಲ್ಲದೆ ಬಿಸಿಲಿನಲ್ಲಿ ನಿಂತಿರುವ ಶಾಲಾ ಮಕ್ಕಳು.
- ಅಲಂಪೂರ್ ಪೇಟೆಯಲ್ಲಿ ಗಣೇಶನ ಪ್ರತಿಷ್ಠಾಪನೆ ; ಪ್ರಸಾದಕ್ಕೆ ಚಾಲನೆ ನೀಡಿದ ಮುಖಂಡರು ಇಲಕಲ್ ನಗರದ ಅಲಂಪೂರ ಪೇಟೆಯಲ್ಲಿ ಓಣಿಯ ಗುರುಹಿರಿಯರು ಯುವ ಮಿತ್ರರಿಂದ ಪ್ರತಿಷ್ಠಾಪನೆಗೊಂಡಿರುವ ಗಣೇಶಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರದ ಹಿರಿಯ ಮುಖಂಡರಾದ ವೆಂಕಟೇಶ ಸಾಕಾ, ಮಂಜುನಾಥ ಹೊಸಮನಿ, ನಗರ ಪಿಎಸ್ಐ ನಾಗರಾಜ ಗಡಾದ, ಹನುಮಂತ ತುಂಬದ, ಅಶೋಕ ಪೂಜಾರಿ ಹಾಗೂ ಅನಂಪುರ್ಪೇಟೆಯ ಯುವ ಮಿತ್ರರು ಉಪಸ್ಥಿತರಿದ್ದರು4
- ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯಡಿ ಶೀಘ್ರವೇ 9000 ಎಕರೆ ಜಮೀನಿಗೆ ನೀರು: ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಕೊಪ್ಪಳ : ತಾಲೂಕಿನ ಬಹುನಿರೀಕ್ಷಿತ ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಒಟ್ಟು 9000 ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಹೇಳಿದರು. ನಗರದ ಎಸ್.ಎಫ್. ಶಾಲೆಯ ಎದುರುಗಡೆಯಿರುವ ತಮ್ಮ ಕಾರ್ಯಾಲಯದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಅಳವಂಡಿ ಬೇಟಗೇರಿ ಏತ ನೀರಾವರಿ ಯೋಜನೆಯು ಕೊಪ್ಪಳ ತಾಲ್ಲೂಕಿನ ಹನಕುಂಟಿ ಗ್ರಾಮದಿಂದ 2 ಕಿ.ಮೀ. ಹತ್ತಿರದಲ್ಲಿರುತ್ತದೆ. ಸದರಿ ಯೋಜನೆಗೆ ಮೂಲತಃ ಕೃಷ್ಣ ಕೊಳ್ಳದ ವ್ಯಾಪ್ತಿಯಲ್ಲಿ ಬರುವ ತುಂಗಭದ್ರ ನದಿಯಿಂದ 0.50 ಟಿ.ಎಂ.ಸಿ ನೀರನ್ನು ಹಂಚಿಕೆ ಮಾಡಲಾಗಿದೆ. ಈ ಯೋಜನೆಯಿಂದ ಕೊಪ್ಪಳ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಒಟ್ಟು 9000 ಏಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಬಹುದಾಗಿರುತ್ತದೆ. ಈ ಯೋಜನೆಗೆ ಈ ಹಿಂದೆ 87.10 ಕೋಟಿಗಳಿಗೆ ಡಿ.ಪಿ.ಆರ್ ಅನ್ನು ಸರ್ಕಾರಕ್ಕೆ ಸಲ್ಲಸಿ ದಿನಾಂಕ: 30.12.2014 ರಂದು ಆಡಳಿತಾತ್ಮಕ ಅನುಮೋದನೆ ನೀಡಲಾಗಿರುತ್ತದೆ ಎಂದರು. ಜಾಕ್‌ವೆಲ್, ಇನ್‌ಟೇಕ್ ಕಾಲುವೆ. ರೈಸಿಂಗ್ ಮೇನ್, ಡೆಲಿವರಿ ಚೇಂಬರ್ ಹಾಗೂ ಟ್ರಾನ್ಸ್‌ಮಿಷನ್ ಲೈನ್, 33 ಕೆವಿ ಸಬ್ ಸ್ಟೇಷನ್ ನಿರ್ಮಾಣ ಕಾಮಗಾರಿಗಳನ್ನು ಗುತ್ತಿಗೆದಾರರಾದ ಜಿ.ಶಂಕರ್ ರವರಿಗೆ ಟೆಂಡರ್ ಆಧಾರದ ಮೇಲೆ 61.30 ಕೋಟಿಗಳಿಗೆ 21.02.2016 ರಂದು ವಹಿಸಲಾಗಿತ್ತು. ಈ ಯೋಜನೆಯಡಿ ಜಾಕ್‌ವೆಲ್, ಇನ್‌ಟೀಕ್ ಕಾಲುವೆ ಉದ್ದ 1.02 ಕಿ.ಮೀ. 16.50ಕಿ.ಮೀ ಉದ್ದ ಎಂಎಸ್ ರೈಸಿಂಗ್ ಮೇನ್, 1760 ಹೆಚ್.ಪಿ ಸಾಮರ್ಥ್ಯದ 2+1 ಪಂಪ್ ಮತ್ತು ಮೋಟಾರಗಳು, 2 ಡೆಲವರಿ ಚೇಂಬರ್‌ಗಳು. ಜಾಕ್‌ವೆಲ್ ಪಕ್ಕದಲ್ಲಿ 33/6.6 ಕೆವಿ ಸಬ್ ಸ್ಟೇಷನ್, 6.10 ಕಿ.ಮೀ ಉದ್ದ ಟ್ರಾನ್ಸ್‌ಮಿಷನ್ ಲೈನ್ ಹಾಗೂ ಟರ್ಮಿನಲ್ ಬೇ ಸಿರ್ಮಿಸಲಾಗಿರುತ್ತದೆ. ದಿನಾಂಕ 10.09.2026 ರಂದು ಸಬ್ ಸ್ಟೇಷನ್ ಚಾರ್ಜ್ ಮಾಡಲಾಗಿರುತ್ತದೆ ಎಂದು ಹೇಳಿದರು. ಪ್ರತಿ ಪಂಪ್‌ನಿಂದ 28.28 ಕ್ಯೂಸೆಕ್ಸ್ ರಂತೆ ಒಟ್ಟು 56.56 ಕ್ಯೂಸೆಕ್ಸ್ ನೀರನ್ನು ಹರಿಸಲಾಗುವುದು ಹಾಗೂ ಜಲಾಶಯದ ನೀರಿನ ಮಟ್ಟ 1605.00 ಅಡಿ (ಜಲಾಶಯದ ಸಾಮರ್ಥ್ಯ 28.70 ಟಿ.ಎಂ.ಸಿ ವರೆಗು) ತಲುಪುವವರೆಗೆ ಲಭ್ಯವಿರುವ ನೀರನ್ನು ಪಡೆಯಬಹುದು. ಈ ಯೋಜನೆಯ ಹೆಚ್ಚುವರಿ 3000 ಎಕರೆ ಕ್ಷೇತ್ರದ ನೀರಾವರಿ ಕಲ್ಪಿಸುವ ಕಾಮಗಾರಿಯನ್ನು ಎ ವಿಆರ್ ಕನ್ಸಟ್ರಕ್ಷನ್ಸ್ ಇವರಿಗೆ ರೂ:4.59 ಕೋಟಿಗಳಿಗೆ ದಿನಾಂಕ: 30/03/2021 ರಂದು (9 ತಿಂಗಳ ಅವಧಿಗೆ) ಟರ್ನಕೀ ಆಧಾರದ ಮೇಲೆ ವಹಿಸಿದ್ದು, ಈ ಕಾಮಗಾರಿಯಲ್ಲಿ ರೈಸಿಂಗ್ ಮೇನ್ ಪೂರ್ಣಗೊಂಡಿದೆ ಮತ್ತು ಪಂಪುಗಳನ್ನು ಅಳವಡಿಸುವುದು ಹಾಗೂ ಸಬ್‌ಸ್ಟೇಷನ್ ಕಾಮಗಾರಿಗಳು ಬಾಕಿ ಉಳಿದಿರುತ್ತದೆ ಎಂದರು. ಪ್ರಸ್ತುತ ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯ ಪರಿಷ್ಕೃತ ಡಿ.ಪಿ.ಆರ್ ಅನ್ನು ಕರ್ನಾಟಕ ನೀರಾವರಿ ನಿಗಮದ ನಿರ್ದೇಶಕರ ಮಂಡಳಿಯ 105ನೇ ಸಭೆಯಲ್ಲಿ ಮಂಡಿಸಿದ್ದು. ರೂ.211.00 ಕೋಟಿಗಳಿಗೆ ಅನುಮೋದನೆ ನೀಡಿರುತ್ತಾರೆ. ಯೋಜನೆಯಡಿ 6000 ಎಕರೆ ಜಮೀನುಗಳಗೆ ಈಗಾಗಲೇ ಒಟ್ಟಾರೆ 39.78 ಕಿ.ಮೀ ಉದ್ದದ ಮುಖ್ಯ ಕಾಲುವೆ ಹಾಗೂ ಉಪ ಕಾಲುವೆಗಳ ನಿರ್ಮಾಣ ಪೂರ್ಣಗೊಂಡಿರುತ್ತದೆ ಎಂದು ತಿಳಿಸಿದರು. 3000 ಏಕರೆ ಜಮೀನುಗಳಗೆ ಮಧ್ಯ ಪ್ರದೇಶ ಮಾದರಿಯ ಮುಖ್ಯ ಪೈಪ್‌ಲೈನ್ ಹಾಗೂ ವಿತರಣಾ ಕಾಲುವೆ ಪೈಪ್‌ಲೈನ್ ಕಾಮಗಾರಿಯನ್ನು ರೂ. 11.50 ಕೋಟಿಗಳಿಗೆ ಟೆಂಡರ್ ಕರೆಯಲಾಗಿದ್ದು, ಚಿದು ಇನ್ಫ್ರಾಟೆಕ್ ಪ್ರೈ.ಲಿ (CHIDU INFRATECH PRIVATE LIMITED) ಇವರಿಗೆ ರೂ:11.80 ಕೋಟಿಗಳಿಗೆ ದಿನಾಂಕ: 22/08/2025 ರಂದು (9 ತಿಂಗಳ ಅವಧಿಗೆ) ಟರ್ನಕೀ ಆಧಾರದ ಮೇಲೆ ವಹಿಸಲಾಗಿರುತ್ತದೆ. ಈ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿರುತ್ತದೆ ಎಂದರು. ಡೆಲಿವರಿ ಚೇಂಬರ್ ನಿಂದ ಬ್ಲಾಕ್-1 ಗೆ ಹೆ.ಡಿ.ಪಿ.ಇ ಪೈಪ್ (Dia-355 to 125) ನ ಒಟ್ಟು ಉದ್ದ 8.7 ಕಿ.ಮೀ, ಪೈಪ್ ನೆಟ್‌ವರ್ಕ್ ನಿಂದ 1243 ಎಕರೆ ಬ್ಲಾಕ್-2 ಗೆ ಎಂಎಸ್ ಪೈಪ್ (Dia-380, 360, 330) ಹಾಗೂ ಹೆ.ಡಿ.ಪಿ.ಇ ಪೈಪ್ (Dia-355 to 125)ನ ಒಟ್ಟು ಉದ್ದ 16.82 ಕಿ.ಮೀ ಪೈಪ್ ನೆಟ್‌ವರ್ಕ್ ನಿಂದ 1757 ಎಕರೆ ಒಟ್ಟಾರೆ 3000 ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಸಲು ಯೋಜಿಸಲಾಗಿರುತ್ತದೆ. ಪ್ರತಿ 20 ಹೆಕ್ಟೇರ್ ಜಮೀನುಗಳಗೆ ಪೈಪ್ ಗಳಂದ ಚೆಕ್ ಓಟ್ ಲೆಟ್ ನಿಂದಾ ನೀರನ್ನು ಒದಗಿಸಲಾಗುವುದು ಎಂದು ಹೇಳಿದರು. *ಒಟ್ಟು 9 ಹಳ್ಳಿಗಳಿಗೆ ಅನುಕೂಲ:* ಅಳವಂಡಿ-ಬೆಟ್ಟಗೇರಿ ಏತ ನೀರಾವರಿ ಯೋಜನೆಯಿಂದ ಕೊಪ್ಪಳ ತಾಲೂಕಿನ ಮೈನಾಳ್ಳಿ, ಹಂದ್ರಾಳ, ಅಳವಂಡಿ, ಕವಲೂರು, ಹಿರೇಸಿಂದೋಗಿ, ಬಿಕ್ಕನಹಳ್ಳಿ, ಬೆಟ್ಟಗೇರಿ ಹಾಗೂ ಕುಕನೂರು ತಾಲೂಕಿನ ತಳಕಲ್ಲು, ಕೋಮಲಾಪುರ ಸೇರಿದಂತೆ ಒಟ್ಟು 9 ಗ್ರಾಮಗಳ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ದೊರೆಯಲಿದೆ. ಅಲ್ಲದೆ, 9000 ಎಕರೆ ಹೊಲಗಾಲುವೆಗಳ ನಿರ್ಮಾಣಕ್ಕಾಗಿ 47 ಕೋಟಿ ರೂ. ಅನುದಾನ ಅಗತ್ಯವಿದೆ ಎಂದು ಶಾಸಕರು ವಿವರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದರಾದ ಕರಡಿ ಸಂಗಣ್ಣ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ಗಡಾದ, ಜಿ.ಪಂ ಮಾಜಿ ಅಧ್ಯಕ್ಷರಾದ ಎಸ್.ಬಿ. ನಾಗರಳ್ಳಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.1
- ಮಸ್ಕಿ ಟಾಟಾ ಎಸಿ ಚಾಲಕರ–ಮಾಲಕರ ಸಂಘದಿಂದ ಅದ್ದೂರಿ ಗಣೇಶ ವಿಸರ್ಜನೆ ಟಾಟಾ ಎಸಿ ಚಾಲಕರ–ಮಾಲಕರ ಸಂಘದಿಂದ ಅದ್ದೂರಿ ಗಣೇಶ ವಿಸರ್ಜನೆ ಮಸ್ಕಿ: ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ಮಲ್ಲಿಕಾರ್ಜುನ ಬಂಡೆ ಟಾಟಾ ಎಸಿ ಚಾಲಕರ ಹಾಗೂ ಮಾಲಕರ ಸಂಘದ ವತಿಯಿಂದ ಗಣೇಶ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಸಂಘದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ಮೂರ್ತಿಯ ವಿಸರ್ಜನಾ ಕಾರ್ಯಕ್ರಮವನ್ನು ಸೋಮವಾರ ಸಂಜೆ ಸುಮಾರು 7 ಗಂಟೆಗೆ ಸಂಭ್ರಮದಿಂದ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಸದಸ್ಯರು, ಚಾಲಕರು ಹಾಗೂ ಮಾಲಕರು ಡಿಜೆ ಸಂಗೀತಕ್ಕೆ ಹೆಜ್ಜೆ ಹಾಕಿ, ನೃತ್ಯ ಮಾಡುವ ಮೂಲಕ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದರು. ಗಣೇಶ ಮೂರ್ತಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ದು ಭಕ್ತಿಭಾವ ಹಾಗೂ ಸಡಗರದಿಂದ ವಿಸರ್ಜನೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.1
- ಲಿಂಗಸೂರು ಪಟ್ಟಣದ 7ನೇ ವಾರ್ಡಿನಲ್ಲಿ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ಲಿಂಗಸುಗೂರು ಪಟ್ಟಣದ ಪಟ್ಟಣದ 7ನೇ ಎಕ್ಸ್ಪರ್ಟ್ ಸ್ಕೂಲ್ ಹತ್ತಿರ ಪ್ರತಿ ವರ್ಷದಂತೆ ಈ ವರ್ಷವೂ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದ್ದು ಬೆಳಗಿನ ಜಾವ ವಿವಿಧ ಪೂಜಾ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಪ್ರತಿಷ್ಠಾಪನೆ ಮಾಡಲಾಯಿತು. ಈ ಸಂದರ್ಭದಲ್ಲಿ ಗಣೇಶ ಯುವಕ ಮಂಡಳಿಯ ಸದಸ್ಯರು, ವಾರ್ಡಿನ ಗುರು ಹಿರಿಯರು ಮಹಿಳೆಯರು ಮಕ್ಕಳು ಗಣೇಶನ ಭಕ್ತರು ಭಾಗವಹಿಸಿದ್ದರು.4
- ಗುಳೇದಗುಡ್ಡ: ನೀಲಕಂಠೇಶ್ವರ ಪತ್ತಿನ ಸಹಕಾರಿ ಸಂಘಕ್ಕೆ 26ಲಕ್ಷ ರು ಲಾಭ ಗುಳೇದಗುಡ್ಡ : ಸಹಕಾರಿ ಕ್ಷೇತ್ರ ಬೆಳವಣಿಗೆ ಹೊಂದಬೇಕಾದರೆ ಅದಕ್ಕೆ ಪರಸ್ಪರ ಸಹಕಾರ ಅವಶ್ಯವಾಗಿಬೇಕು. ಸಕಾಲದಲ್ಲಿ ಸಾಲ ಮರುಪಾವತಿ, ಸದಸ್ಯರ ಸಹಕಾರದಿಂದ ನಮ್ಮ ಸಹಕಾರಿ ಸಂಘವು ಪ್ರಸಕ್ತ ವರ್ಷ 26 ಲಕ್ಷ 66ಸಾವಿರ ಲಾಭಗಳಿಸಿದೆ ಎಂದು ನೀಲಕಂಠೇಶ್ವರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಿದ್ದು ಅರಕಾಲಚಿಟ್ಟಿ ಹೇಳಿದರು. ಅವರು ಪಟ್ಟಣದ ಶ್ರೀ ನೀಲಕಂಠೇಶ್ವರ ಪತ್ತಿನ ಸಹಕಾರಿ ಸಂಘದ 17ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘದಲ್ಲಿ 1737 ಸದಸ್ಯರಿದ್ದು, 866 ಸಹ ಸದಸ್ಯರಿದ್ದಾರೆ. 92 ಲಕ್ 76 ಸಾವಿರ ಶೇರು ಬಂಡವಾಳ, 11 ಕೋಟಿ 23 ಲಕ್ಷ ಠೇವು, 13 ಕೋಟಿ 90 ಲಕ್ಷ ದುಡಿಯುವ ಬಂಡವಾಳ, 9 ಕೋಟಿ 69 ಲಕ್ಷ ಸಾಲ ನೀಡಲಾಗಿದೆ ಎಂದರು. ಸಹಕಾರಿ ಕ್ಷೇತ್ರವು ಸಹಕಾರಿ ತತ್ವದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಂಘದ ಸದಸ್ಯರು ಉತ್ತಮ ಸ್ಪಂದನೆ ನೀಡುತ್ತಿದ್ದು, ವರ್ಷದಿಂದ ವರ್ಷಕ್ಕೆ ಉತ್ತಮ ಪ್ರಗತಿಯತ್ತ ಸಾಗುತ್ತಿದೆ. ಸದಸ್ಯರು ಇನ್ನಷ್ಟು ಸಹಕಾರ ನೀಡಬೇಕೆಂದು ಸಿದ್ದು ಅರಕಾಲಚಿಟ್ಟಿ ಹೇಳಿದರು. ನಿವೃತ್ತ ಉಪನ್ಯಾಸಕ ಮಹದೇವಯ್ಯ ನೀಲಕಂಠಮಠ ಅವರು ಸಾನಿಧ್ಯ ವಹಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್‌ಸಿ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ನೂರಂದಪ್ಪ ಮಳ್ಳಿ, ನಿರ್ದೇಶಕರಾದ ಸಿದ್ರಾಮಪ್ಪ ಹನಮಸಾಗರ, ರವೀಂದ್ರ ಕಲಕೇರಿ, ವಿಜಯಕುಮಾರ ಬೇಟಗೇರಿಗೌಡ್ರ, ಮಾಗುಂಡಪ್ಪ ದೇವರಮನಿ, ಓಂಕಾರಪ್ಪ ದಿಂಡಿ, ರವಿ ಬೆಕಿನಾಳ, ಗುರು ಹಂಡಿ, ರಾಮಕೃಷ್ಣ ಹಲಗಲಿ, ಬಸವಣ್ಣೆವ್ವ ಯಂಡಿಗೇರಿ, ಲತಾ ರಾಂಪೂರ, ಸುವರ್ಣಾ ಉಣಚಗಿ ಸೇರಿದಂತೆ ಕೊಂಕಣಕೊಪ್ಪ ಶಾಖೆ ಸಲಹಾ ಸಮಿತಿ ಪದಾಧಿಕಾರಿಗಳು ಸೇರಿದಂತೆ ಇತರರು ಇದ್ದರು.1
- ವಿಜಯನಗರ ಜಿಲ್ಲೆ, ಹೊಸಪೇಟೆ ತಾಲೂಕು 76 ವೆಂಕಟಾಪುರ ಗ್ರಾಮದ ಸಮಸ್ತ ಯುವಕರಿಂದ 76 ವೆಂಕಟಾಪುರ ಮಹಾ ಗಣಪತಿ ಯುವ ಸಮಿತಿ 4ನೇ ವರ್ಷದ ಗಣೇಶೋತ್ಸವ ಮತ್ತು ವಿಜೃಂಭಣೆಯ ಮೆರವಣಿಗೆಯಲ್ಲಿ ತಂದು ಪ್ರತಿಷ್ಠಾಪಿಸಲಾಯಿತು.2
- ಮುದ್ದೇಬಿಹಾಳದಲ್ಲಿ ಗಣಪತಿ ಬಸವೇಶ್ವರ ಸರ್ಕಲಿನಲ್ಲಿ ಅತಿ ವಿಜೃಂಭಣೆಯಿಂದ ಮೆರೆವಣಿಗೆ ಮೂಲಕ . ಹುಡುಕು ಕಾಲೂನಿಗೆ ಪ್ರತಿ ಸ್ಥಾಪನೆ ಮಾಡಲಾಯಿತು.1
- ಮಸೀದಿಯ ಪಕ್ಕದಲ್ಲಿ ಕೂತ ‘ಹುಡಿಯದ ಓಣಿಯ ಸಾಮ್ರಾಟ್’! ಮುಂಡರಗಿಯಲ್ಲಿ ಸೌಹಾರ್ದತೆಯ ಗಣೇಶೋತ್ಸವ ಮೆರೆದ ಮುಸ್ಲಿಂ ಮಕ್ಕಳು! ಮಸೀದಿಯ ಪಕ್ಕದಲ್ಲಿ ಕೂತ ‘ಹುಡಿಯದ ಓಣಿಯ ಸಾಮ್ರಾಟ್’! ಮುಂಡರಗಿಯಲ್ಲಿ ಸೌಹಾರ್ದತೆಯ ಗಣೇಶೋತ್ಸವ ಮೆರೆದ ಮುಸ್ಲಿಂ ಮಕ್ಕಳು! ನಮಸ್ಕಾರ ಬಂಧುಗಳೇ... ನಾಡಿನಾದ್ಯಂತ ಗಣೇಶ ಚತುರ್ಥಿಯ ಸಂಭ್ರಮ ಕಳೆಗಟ್ಟಿದೆ. ಬೀದಿ ಬೀದಿಗಳಲ್ಲಿ ವಿಘ್ನನಿವಾರಕನ ಜಯಘೋಷ ಮೊಳಗುತ್ತಿದೆ. ಆದರೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ 'ಹುಡಿಯದ ಓಣಿ'ಯಲ್ಲಿ ಕಂಡುಬಂದ ಈ ದೃಶ್ಯ ಮಾತ್ರ ಇಡೀ ನಾಡಿನ ಗಮನ ಸೆಳೆಯುವಂತಿದೆ, ಪ್ರತಿಯೊಬ್ಬರ ಮನ ಮುಟ್ಟುವಂತಿದೆ! ಹೌದು, ಇಲ್ಲಿ ಒಂದೆಡೆ ಅಲ್ಲಾಹನ ಪ್ರಾರ್ಥನೆ ನಡೆಯುವ ಮಸೀದಿ ಇದ್ದರೆ... ಅದೇ ಮಸೀದಿಯ ಅಂಗಳದ ಪಕ್ಕದಲ್ಲೇ ಸಿದ್ದಿವಿನಾಯಕ ವಿರಾಜಮಾನನಾಗಿದ್ದಾನೆ! ವಿಶೇಷ ಎಂದರೆ, ಯಾವುದೇ ಜಾತಿ-ಧರ್ಮದ ಹಂಗಿಲ್ಲದೆ, ಇಲ್ಲಿನ ಮುಸ್ಲಿಂ ಸಮುದಾಯದ ಪುಟ್ಟ ಮಕ್ಕಳು ಅತ್ಯಂತ ಶ್ರದ್ಧಾ-ಭಕ್ತಿಯಿಂದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ತಮ್ಮ ಕೈಯಾರೆ ಕಾಯಿ ಒಡೆದು, ಪೂಜೆ ಸಲ್ಲಿಸಿ, ಪ್ರಸಾದ ಹಂಚಿ ಹಬ್ಬದ ಸಂಭ್ರಮದಲ್ಲಿದ್ದಾರೆ. ಇನ್ನು ಅತ್ಯಂತ ಖುಷಿಯ ವಿಷಯ ಎಂದರೆ... ಇಲ್ಲಿನ ಮಕ್ಕಳು ಕೇವಲ ಗಣಪತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿಲ್ಲ, ಬದಲಾಗಿ ಅತ್ಯಂತ ಪ್ರೀತಿಯಿಂದ ಈ ಮೂರ್ತಿಗೆ 'ಹುಡಿಯದ ಓಣಿಯ ಸಾಮ್ರಾಟ್' ಎಂದೇ ನಾಮಕರಣ ಮಾಡಿದ್ದಾರೆ! ಸಾಮ್ರಾಟ್ ಎಂಬ ಹೆಸರಿನಲ್ಲಿ ಗಣಪತಿಯನ್ನು ನೆನೆಯುತ್ತಿರುವ ಈ ಮಕ್ಕಳ ಮನಸ್ಸಿನಲ್ಲಿ 'ನಾವೆಲ್ಲರೂ ಒಂದೇ' ಎನ್ನುವ ಭ್ರಾತೃತ್ವದ ಸದ್ಭಾವನೆ ಆಳವಾಗಿ ಬೇರೂರಿದೆ. ಧರ್ಮಗಳ ಹೆಸರಿನಲ್ಲಿ ಕಹಿ ವಾತಾವರಣ ಸೃಷ್ಟಿಯಾಗುವ ಈ ದಿನಗಳಲ್ಲಿ, ಮುಂಡರಗಿಯ ಈ ಪುಟ್ಟ ಮಕ್ಕಳು ಇಡೀ ಸಮಾಜಕ್ಕೇ ಪ್ರೀತಿ ಮತ್ತು ಸೌಹಾರ್ದತೆಯ ದೊಡ್ಡ ಪಾಠ ಹೇಳಿಕೊಡುತ್ತಿದ್ದಾರೆ. ಶರೀಫ-ಶಿವಯೋಗಿಗಳು ನಡೆದ ಸೌಹಾರ್ದತೆಯ ನೆಲದಲ್ಲಿ, ಮುಂಡರಗಿಯ ಹುಡಿಯದ ಓಣಿಯ ಈ ಪುಟ್ಟ ಮಕ್ಕಳ ನಡೆ ಇಡೀ ನಾಡಿಗೆ ಭಾವೈಕ್ಯತೆಯ ಹೊಸ ಬೆಳಕನ್ನು ತೋರುತ್ತಿದೆ. ನಾವೆಲ್ಲರೂ ಒಂದೇ ಎನ್ನುವ ಈ ಮಕ್ಕಳ ಪ್ರೀತಿಗೆ ಕನ್ನಡಿಗರ ಪರವಾಗಿ ಹೃದಯಪೂರ್ವಕ ಸಾಷ್ಟಾಂಗ ನಮನಗಳು1