logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಅಖಿಲ ಭಾರತ ಗಾಣಿಗ ವಿದ್ಯಾ ಹಾಗೂ ಉದ್ಯೋಗವರ್ಧಕ ಟ್ರಸ್ಟ್‌ ವತಿಯಿಂದ 2026ರ ಜೂನ್ 14ರಂದು ಗದಗ ನಗರದ ಗಾಣಿಗ ಭವನದಲ್ಲಿ ರಾಜ್ಯ ಮಟ್ಟದ ವಧು-ವರರ ಉಚಿತ ಸಮಾವೇಶವನ್ನು ಬೆಳಿಗ್ಗೆ 9 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶವನ್ನು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸಮಾಜ ಬಾಂಧವರ ಸಹಕಾರದೊಂದಿಗೆ ಆಯೋಜಿಸಲಾಗುತ್ತಿದೆ. ಗದಗ ಜಿಲ್ಲಾ ಗಾಣಿಗ ಸಂಘವು ಕಳೆದ ಹಲವು ವರ್ಷಗಳಿಂದ ಸಮಾಜಕ್ಕೆ ಉಪಯುಕ್ತವಾದ ರಚನಾತ್ಮಕ ಕಾರ್ಯಕ್ರಮಗಳನ್ನು ಏರ್ಪಡಿಸುತ್ತ ಬಂದಿದೆ. ಈ ಹಿಂದೆ ಸಹ ರಾಜ್ಯಮಟ್ಟದ ವಧು-ವರರ ಸಮಾವೇಶಗಳನ್ನು ಯಶಸ್ವಿಯಾಗಿ ಮತ್ತು ವ್ಯವಸ್ಥಿತವಾಗಿ ನಡೆಸಿದೆ. ಪ್ರಸ್ತುತ ದಿನಗಳಲ್ಲಿ ವಧು-ವರರ ಸಮಾವೇಶವು ಸಮಾಜ ಬಾಂಧವರಿಗೆ ಅತ್ಯಂತ ಅವಶ್ಯಕವಾಗಿದೆ ಎಂಬುದು ಎಲ್ಲರಿಗೂ ತಿಳಿದ ವಿಷಯವಾಗಿದೆ. ಈ ರಾಜ್ಯಮಟ್ಟದ ಉಚಿತ ವಧು-ವರರ ಸಮಾವೇಶದಲ್ಲಿ ಭಾಗವಹಿಸಲು ಇಚ್ಛಿಸುವ ಗಾಣಿಗ ಸಮಾಜ ಬಾಂಧವರು 2026ರ ಜೂನ್ 10ರ ಒಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ನೋಂದಣಿಗಾಗಿ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಆಧಾರ್ ಕಾರ್ಡ್ ಹಾಗೂ ಬಯೋಡೇಟಾವನ್ನು ಲಗತ್ತಿಸಿ ವಿವರಗಳೊಂದಿಗೆ ಸಲ್ಲಿಸಬೇಕು. ಸಮಾವೇಶದಲ್ಲಿ ಭಾಗವಹಿಸುವ ವಧು-ವರರ ಜೊತೆಗೆ ಕೇವಲ ಇಬ್ಬರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆಗಳಾದ 9741648546, 9591066921, 9880369245, 9448103739 ಸಂಪರ್ಕಿಸಬಹುದಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಬಸವರಾಜ ಬಿಂಗಿ ಮತ್ತು ಕಾರ್ಯದರ್ಶಿ ಮರುಗೇಶ ಬಡ್ನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

6 hrs ago
user_ಪ್ರಕಾಶ ಗುದ್ನೇಪ್ಪನವರ.
ಪ್ರಕಾಶ ಗುದ್ನೇಪ್ಪನವರ.
Local News Reporter ಗದಗ, ಗದಗ, ಕರ್ನಾಟಕ•
6 hrs ago
da1252ba-1db9-4791-8a11-57a9d99a44cd

ಅಖಿಲ ಭಾರತ ಗಾಣಿಗ ವಿದ್ಯಾ ಹಾಗೂ ಉದ್ಯೋಗವರ್ಧಕ ಟ್ರಸ್ಟ್‌ ವತಿಯಿಂದ 2026ರ ಜೂನ್ 14ರಂದು ಗದಗ ನಗರದ ಗಾಣಿಗ ಭವನದಲ್ಲಿ ರಾಜ್ಯ ಮಟ್ಟದ ವಧು-ವರರ ಉಚಿತ ಸಮಾವೇಶವನ್ನು ಬೆಳಿಗ್ಗೆ 9 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶವನ್ನು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸಮಾಜ ಬಾಂಧವರ ಸಹಕಾರದೊಂದಿಗೆ ಆಯೋಜಿಸಲಾಗುತ್ತಿದೆ. ಗದಗ ಜಿಲ್ಲಾ ಗಾಣಿಗ ಸಂಘವು ಕಳೆದ ಹಲವು ವರ್ಷಗಳಿಂದ ಸಮಾಜಕ್ಕೆ ಉಪಯುಕ್ತವಾದ ರಚನಾತ್ಮಕ ಕಾರ್ಯಕ್ರಮಗಳನ್ನು ಏರ್ಪಡಿಸುತ್ತ ಬಂದಿದೆ. ಈ ಹಿಂದೆ ಸಹ ರಾಜ್ಯಮಟ್ಟದ ವಧು-ವರರ ಸಮಾವೇಶಗಳನ್ನು ಯಶಸ್ವಿಯಾಗಿ ಮತ್ತು ವ್ಯವಸ್ಥಿತವಾಗಿ ನಡೆಸಿದೆ. ಪ್ರಸ್ತುತ ದಿನಗಳಲ್ಲಿ ವಧು-ವರರ ಸಮಾವೇಶವು ಸಮಾಜ ಬಾಂಧವರಿಗೆ ಅತ್ಯಂತ ಅವಶ್ಯಕವಾಗಿದೆ ಎಂಬುದು ಎಲ್ಲರಿಗೂ ತಿಳಿದ ವಿಷಯವಾಗಿದೆ. ಈ ರಾಜ್ಯಮಟ್ಟದ ಉಚಿತ ವಧು-ವರರ ಸಮಾವೇಶದಲ್ಲಿ ಭಾಗವಹಿಸಲು ಇಚ್ಛಿಸುವ ಗಾಣಿಗ ಸಮಾಜ ಬಾಂಧವರು 2026ರ ಜೂನ್ 10ರ ಒಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ನೋಂದಣಿಗಾಗಿ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಆಧಾರ್ ಕಾರ್ಡ್ ಹಾಗೂ ಬಯೋಡೇಟಾವನ್ನು ಲಗತ್ತಿಸಿ ವಿವರಗಳೊಂದಿಗೆ ಸಲ್ಲಿಸಬೇಕು. ಸಮಾವೇಶದಲ್ಲಿ ಭಾಗವಹಿಸುವ ವಧು-ವರರ ಜೊತೆಗೆ ಕೇವಲ ಇಬ್ಬರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆಗಳಾದ 9741648546, 9591066921, 9880369245, 9448103739 ಸಂಪರ್ಕಿಸಬಹುದಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಬಸವರಾಜ ಬಿಂಗಿ ಮತ್ತು ಕಾರ್ಯದರ್ಶಿ ಮರುಗೇಶ ಬಡ್ನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More news from ಕರ್ನಾಟಕ and nearby areas
  • ತಮ್ಮ ನೆಚ್ಚಿನ ಆರ್‌ಸಿಬಿ (ಬೆಂಗಳೂರು) ತಂಡ ಫೈನಲ್ ತಲುಪಿರುವ ಹಿನ್ನೆಲೆಯಲ್ಲಿ, ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಅಭಿಮಾನಿಗಳು ಫೈನಲ್ ಪಂದ್ಯವನ್ನು ವೀಕ್ಷಿಸಲು ಹೈದರಾಬಾದ್‌ಗೆ ತೆರಳಿದ್ದಾರೆ. ಇಂದು ಹೈದರಾಬಾದ್‌ನಲ್ಲಿ ನಡೆಯಲಿರುವ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ನಡುವಿನ ಫೈನಲ್ ಪಂದ್ಯವನ್ನು ವೀಕ್ಷಿಸಲು ಈ ಅಭಿಮಾನಿಗಳು ಉತ್ಸುಕತೆಯಿಂದ ಪ್ರಯಾಣಿಸಿದ್ದಾರೆ. ಈ ಅಭಿಮಾನಿಗಳು ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದು, ಅದು ಬಹಳಷ್ಟು ಕುತೂಹಲವನ್ನು ಕೆರಳಿಸಿದೆ.
    1
    ತಮ್ಮ ನೆಚ್ಚಿನ ಆರ್‌ಸಿಬಿ (ಬೆಂಗಳೂರು) ತಂಡ ಫೈನಲ್ ತಲುಪಿರುವ ಹಿನ್ನೆಲೆಯಲ್ಲಿ, ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಅಭಿಮಾನಿಗಳು ಫೈನಲ್ ಪಂದ್ಯವನ್ನು ವೀಕ್ಷಿಸಲು ಹೈದರಾಬಾದ್‌ಗೆ ತೆರಳಿದ್ದಾರೆ. ಇಂದು ಹೈದರಾಬಾದ್‌ನಲ್ಲಿ ನಡೆಯಲಿರುವ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ನಡುವಿನ ಫೈನಲ್ ಪಂದ್ಯವನ್ನು ವೀಕ್ಷಿಸಲು ಈ ಅಭಿಮಾನಿಗಳು ಉತ್ಸುಕತೆಯಿಂದ ಪ್ರಯಾಣಿಸಿದ್ದಾರೆ.

ಈ ಅಭಿಮಾನಿಗಳು ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದು, ಅದು ಬಹಳಷ್ಟು ಕುತೂಹಲವನ್ನು ಕೆರಳಿಸಿದೆ.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    8 hrs ago
  • ಧಾರ್ವಾಡ್ ನಗರದ ರವೀಂದ್ರ ನಗರದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾರ್ಯದಲ್ಲಿ ತೀವ್ರ ವಿಳಂಬವಾಗಿದೆ. ಈ ಕುರಿತು 2015ರಿಂದ ವರದಿಗಳನ್ನು ಸಲ್ಲಿಸಲಾಗಿದ್ದರೂ, ಇಲ್ಲಿಯವರೆಗೂ ಯಾವುದೇ ಕಾಮಗಾರಿ ಪ್ರಾರಂಭವಾಗಿಲ್ಲ ಎಂದು ಈ ವಿಡಿಯೋದಲ್ಲಿ ಮಾಹಿತಿ ನೀಡಲಾಗಿದೆ. ರವೀಂದ್ರ ನಗರದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸುವ ವಿಚಾರದಲ್ಲಿನ ಈ ಸಮಸ್ಯೆಯನ್ನು ಎತ್ತಿ ಹಿಡಿಯಲು ಈ ವಿಡಿಯೋವನ್ನು ಅಪ್ಲೋಡ್ ಮಾಡಲಾಗಿದೆ.
    1
    ಧಾರ್ವಾಡ್ ನಗರದ ರವೀಂದ್ರ ನಗರದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾರ್ಯದಲ್ಲಿ ತೀವ್ರ ವಿಳಂಬವಾಗಿದೆ. ಈ ಕುರಿತು 2015ರಿಂದ ವರದಿಗಳನ್ನು ಸಲ್ಲಿಸಲಾಗಿದ್ದರೂ, ಇಲ್ಲಿಯವರೆಗೂ ಯಾವುದೇ ಕಾಮಗಾರಿ ಪ್ರಾರಂಭವಾಗಿಲ್ಲ ಎಂದು ಈ ವಿಡಿಯೋದಲ್ಲಿ ಮಾಹಿತಿ ನೀಡಲಾಗಿದೆ. ರವೀಂದ್ರ ನಗರದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸುವ ವಿಚಾರದಲ್ಲಿನ ಈ ಸಮಸ್ಯೆಯನ್ನು ಎತ್ತಿ ಹಿಡಿಯಲು ಈ ವಿಡಿಯೋವನ್ನು ಅಪ್ಲೋಡ್ ಮಾಡಲಾಗಿದೆ.
    user_Kushal Hiremath
    Kushal Hiremath
    ಧಾರವಾಡ, ಧಾರವಾಡ, ಕರ್ನಾಟಕ•
    12 hrs ago
  • ಇಳಕಲ್ ತಾಲೂಕಿನ ಹಿರೇ ಓತಗೇರಿ ಗ್ರಾಮದಲ್ಲಿ, ಐಪಿಎಲ್ ಫೈನಲ್ ಪಂದ್ಯವನ್ನು ವಿಶೇಷವಾಗಿ ದೊಡ್ಡ ಪರದೆಯ ಮೇಲೆ ವೀಕ್ಷಿಸುವ ವ್ಯವಸ್ಥೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಆರ್ ಸಿ ಬಿ (RCB) ತಂಡದ ಅಭಿಮಾನಿಗಳು ಸೇರಿದಂತೆ ಇಡೀ ಗ್ರಾಮಸ್ಥರು ಒಟ್ಟಾಗಿ ಸೇರಿ ಪಂದ್ಯವನ್ನು ವೀಕ್ಷಿಸಿದರು, ಸಮುದಾಯದ ಉತ್ಸಾಹ ಮತ್ತು ಒಗ್ಗಟ್ಟನ್ನು ಪ್ರದರ್ಶಿಸಿದರು.
    2
    ಇಳಕಲ್ ತಾಲೂಕಿನ ಹಿರೇ ಓತಗೇರಿ ಗ್ರಾಮದಲ್ಲಿ, ಐಪಿಎಲ್ ಫೈನಲ್ ಪಂದ್ಯವನ್ನು ವಿಶೇಷವಾಗಿ ದೊಡ್ಡ ಪರದೆಯ ಮೇಲೆ ವೀಕ್ಷಿಸುವ ವ್ಯವಸ್ಥೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಆರ್ ಸಿ ಬಿ (RCB) ತಂಡದ ಅಭಿಮಾನಿಗಳು ಸೇರಿದಂತೆ ಇಡೀ ಗ್ರಾಮಸ್ಥರು ಒಟ್ಟಾಗಿ ಸೇರಿ ಪಂದ್ಯವನ್ನು ವೀಕ್ಷಿಸಿದರು, ಸಮುದಾಯದ ಉತ್ಸಾಹ ಮತ್ತು ಒಗ್ಗಟ್ಟನ್ನು ಪ್ರದರ್ಶಿಸಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    6 hrs ago
  • ಆರ್‌ಸಿಬಿ ತಂಡದ ಫೈನಲ್ ಪಂದ್ಯವನ್ನು ಸಾವಿರಾರು ಜನರು ಕಣ್ತುಂಬಿಕೊಂಡರು. ಈ ಸಂದರ್ಭದಲ್ಲಿ ಆರ್‌ಸಿಬಿ ತಂಡವು ಗೆಲ್ಲಲೆಂದು ಎಲ್ಲರೂ ಶುಭ ಹಾರೈಸಿದರು.
    1
    ಆರ್‌ಸಿಬಿ ತಂಡದ ಫೈನಲ್ ಪಂದ್ಯವನ್ನು ಸಾವಿರಾರು ಜನರು ಕಣ್ತುಂಬಿಕೊಂಡರು. ಈ ಸಂದರ್ಭದಲ್ಲಿ ಆರ್‌ಸಿಬಿ ತಂಡವು ಗೆಲ್ಲಲೆಂದು ಎಲ್ಲರೂ ಶುಭ ಹಾರೈಸಿದರು.
    user_H M ಹರಕುಣಿ
    H M ಹರಕುಣಿ
    Local News Reporter Haveri, Karnataka•
    7 hrs ago
  • ಕಲಘಟಗಿಯಲ್ಲಿ ಬೆಳೆ ವಿಮೆಯಲ್ಲಿನ ತಾರತಮ್ಯದ ತನಿಖೆಗೆ ಆಗ್ರಹಿಸಿ ಭಾರತೀಯ ಕಿಸಾನ ಸಂಘ ನಡೆಸುತ್ತಿರುವ 11ನೇ ದಿನದ ಧರಣಿ ಸತ್ಯಾಗ್ರಹಕ್ಕೆ ದೇವರಕೊಂಡ ಗ್ರಾಮದ ಬಾಲಯೋಗಿ ಮಾಣಿಕ್ ವೃಷಭೇಂದ್ರ ಸ್ವಾಮೀಜಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಪಟ್ಟಣದ ತಹಸೀಲ್ದಾರ್ ಕಚೇರಿ ಮುಂದೆ ನಡೆಯುತ್ತಿರುವ ಈ ಪ್ರತಿಭಟನೆಗೆ ಆಶೀರ್ವಚನ ನೀಡಿದ ಸ್ವಾಮೀಜಿ, ರೈತರ ಮನಸ್ಸಿಗೆ ನೋವುಂಟು ಮಾಡಿದರೆ ಪಾಪ ಕರ್ಮಗಳು ಹೆಚ್ಚಾಗುತ್ತವೆ ಎಂದು ಎಚ್ಚರಿಕೆ ನೀಡಿದರು. ಸ್ವಾಮೀಜಿ ತಮ್ಮ ಭಾಷಣದಲ್ಲಿ, ಧರ್ಮದ ಹಾದಿಯಲ್ಲಿ ಸಾಗಿದರೆ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂದು ತಿಳಿಸಿದರು. ಕೆಲವು ಅಧಿಕಾರಿಗಳು ರೈತರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ, ಅವರಿಗೆ ವಿಮೆ ಹಣ ಬಂದಿದ್ದರೂ ಕೇಳುವವರಿಲ್ಲದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಏಜೆಂಟರ ಮೂಲಕ ಹಣ ಜಮೆ ಮಾಡಿಸಿಕೊಂಡು ಶೇಕಡ 50ರಷ್ಟು ಕಮಿಷನ್ ಪಡೆಯುತ್ತಿರುವುದು ದೇಶದ ಅನ್ನದಾತನಿಗೆ ಬಗೆಯುತ್ತಿರುವ ದ್ರೋಹ ಎಂದು ಬಣ್ಣಿಸಿದ ಅವರು, ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿದರು. ಈ ಧರಣಿ ಸತ್ಯಾಗ್ರಹಕ್ಕೆ ಪಟ್ಟಣದ ಹನ್ನೆರಡು ಮಠದ ರೇವಣಸಿದ್ದ ಶಿವಾಚಾರ್ಯ ಸ್ವಾಮೀಜಿ, ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಗುರುನಾಥ ಬಸನಗೌಡ್ರ, ತಾಲ್ಲೂಕು ಅಧ್ಯಕ್ಷ ಸಿದ್ದಪ್ಪ ಬೆಟಗೇರಿ, ಸಂಗ್ರಾಮ ಸೇನೆ ತಾಲ್ಲೂಕು ಅಧ್ಯಕ್ಷ ಸಾತಪ್ಪ ಕುಂಕೂರ, ಚಂದ್ರಗೌಡ ಪಾಟೀಲ, ಶಂಕರಗೌಡ ಪಾಟೀಲ, ಶಶಿಧರ ಹುಲಿಕಟ್ಟಿ, ಪರಶುರಾಮ ಹುಲಿಹೊಂಡ ಹಾಗೂ ಬಸವರಾಜ ಕಟ್ಟಿಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
    1
    ಕಲಘಟಗಿಯಲ್ಲಿ ಬೆಳೆ ವಿಮೆಯಲ್ಲಿನ ತಾರತಮ್ಯದ ತನಿಖೆಗೆ ಆಗ್ರಹಿಸಿ ಭಾರತೀಯ ಕಿಸಾನ ಸಂಘ ನಡೆಸುತ್ತಿರುವ 11ನೇ ದಿನದ ಧರಣಿ ಸತ್ಯಾಗ್ರಹಕ್ಕೆ ದೇವರಕೊಂಡ ಗ್ರಾಮದ ಬಾಲಯೋಗಿ ಮಾಣಿಕ್ ವೃಷಭೇಂದ್ರ ಸ್ವಾಮೀಜಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಪಟ್ಟಣದ ತಹಸೀಲ್ದಾರ್ ಕಚೇರಿ ಮುಂದೆ ನಡೆಯುತ್ತಿರುವ ಈ ಪ್ರತಿಭಟನೆಗೆ ಆಶೀರ್ವಚನ ನೀಡಿದ ಸ್ವಾಮೀಜಿ, ರೈತರ ಮನಸ್ಸಿಗೆ ನೋವುಂಟು ಮಾಡಿದರೆ ಪಾಪ ಕರ್ಮಗಳು ಹೆಚ್ಚಾಗುತ್ತವೆ ಎಂದು ಎಚ್ಚರಿಕೆ ನೀಡಿದರು.

ಸ್ವಾಮೀಜಿ ತಮ್ಮ ಭಾಷಣದಲ್ಲಿ, ಧರ್ಮದ ಹಾದಿಯಲ್ಲಿ ಸಾಗಿದರೆ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂದು ತಿಳಿಸಿದರು. ಕೆಲವು ಅಧಿಕಾರಿಗಳು ರೈತರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ, ಅವರಿಗೆ ವಿಮೆ ಹಣ ಬಂದಿದ್ದರೂ ಕೇಳುವವರಿಲ್ಲದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಏಜೆಂಟರ ಮೂಲಕ ಹಣ ಜಮೆ ಮಾಡಿಸಿಕೊಂಡು ಶೇಕಡ 50ರಷ್ಟು ಕಮಿಷನ್ ಪಡೆಯುತ್ತಿರುವುದು ದೇಶದ ಅನ್ನದಾತನಿಗೆ ಬಗೆಯುತ್ತಿರುವ ದ್ರೋಹ ಎಂದು ಬಣ್ಣಿಸಿದ ಅವರು, ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿದರು.

ಈ ಧರಣಿ ಸತ್ಯಾಗ್ರಹಕ್ಕೆ ಪಟ್ಟಣದ ಹನ್ನೆರಡು ಮಠದ ರೇವಣಸಿದ್ದ ಶಿವಾಚಾರ್ಯ ಸ್ವಾಮೀಜಿ, ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಗುರುನಾಥ ಬಸನಗೌಡ್ರ, ತಾಲ್ಲೂಕು ಅಧ್ಯಕ್ಷ ಸಿದ್ದಪ್ಪ ಬೆಟಗೇರಿ, ಸಂಗ್ರಾಮ ಸೇನೆ ತಾಲ್ಲೂಕು ಅಧ್ಯಕ್ಷ ಸಾತಪ್ಪ ಕುಂಕೂರ, ಚಂದ್ರಗೌಡ ಪಾಟೀಲ, ಶಂಕರಗೌಡ ಪಾಟೀಲ, ಶಶಿಧರ ಹುಲಿಕಟ್ಟಿ, ಪರಶುರಾಮ ಹುಲಿಹೊಂಡ ಹಾಗೂ ಬಸವರಾಜ ಕಟ್ಟಿಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
    user_Kallappa m mirji
    Kallappa m mirji
    Farmer ಕಳಘಟಗಿ, ಧಾರವಾಡ, ಕರ್ನಾಟಕ•
    8 hrs ago
  • ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಬಂಜಾರ ಸಮುದಾಯವು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ತೀವ್ರ ಎಚ್ಚರಿಕೆ ನೀಡಿದೆ. 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಬಂಜಾರ ಸಮುದಾಯ ಪ್ರಮುಖ ಪಾತ್ರ ವಹಿಸಿದ್ದು, ಸಮುದಾಯಕ್ಕೆ ಸೂಕ್ತ ಸ್ಥಾನಮಾನ ನೀಡದಿದ್ದರೆ ಭವಿಷ್ಯದ ಚುನಾವಣೆಗಳಲ್ಲಿ ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಸ್ಪಷ್ಟ ಸಂದೇಶ ರವಾನಿಸಿದೆ. ಸಮುದಾಯದ ಮುಖಂಡರು ಮಾತನಾಡಿ, ಕಳೆದ ಮೂರು ವರ್ಷಗಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಸಮಾಜವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿತ್ತು. ಡಿ.ಕೆ. ಶಿವಕುಮಾರ್ ಅವರ ಅವಧಿಯಲ್ಲಿ ಇದು ಪುನರಾವರ್ತನೆಯಾಗಬಾರದು ಎಂದು ಮನವರಿಕೆ ಮಾಡಿದ್ದಾರೆ. ರಾಜ್ಯದಲ್ಲಿ ಬಂಜಾರ ಸಮುದಾಯವು ಮೂವತ್ತು ಲಕ್ಷಕ್ಕೂ ಹೆಚ್ಚು ಮತಗಳನ್ನು ಹೊಂದಿದ್ದು, ಚುನಾವಣಾ ಸಂದರ್ಭದಲ್ಲಿ ಗೆಲುವಿಗೆ ನಿರ್ಣಾಯಕ ಮತಗಳನ್ನು ಹೊಂದಿರುವ ಪ್ರಮುಖ ಸಮುದಾಯಗಳಲ್ಲಿ ಒಂದಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷವು ಉಳಿದ ಎರಡು ವರ್ಷಗಳ ಅವಧಿಯಲ್ಲಾದರೂ ಸಮುದಾಯಕ್ಕೆ ತಕ್ಕ ಸ್ಥಾನಮಾನ ನೀಡಬೇಕೆಂದು ಮುಖಂಡರು ಹಕ್ಕೊತ್ತಾಯ ಮಾಡಿದ್ದಾರೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಗಳಾಗುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ, ಬಂಜಾರ ಸಮುದಾಯದ ಶಾಸಕರಾದ ರುದ್ರಪ್ಪ ಲಂಬಾಣಿಯವರಿಗೆ ಮಂತ್ರಿ ಮಂಡಲದಲ್ಲಿ ಮಂತ್ರಿಸ್ಥಾನ ನೀಡಬೇಕು, ಅಥವಾ ಪಕ್ಷದ ಪಿ.ಟಿ. ಪರಮೇಶ್ವರನಾಯ್ಕ ರವರಿಗೆ, ಇಲ್ಲವೇ ಭೀಮಾನಾಯ್ಕ ರವರಿಗೆ ಎಂಎಲ್ಸಿ ಮಾಡಿ ಕ್ಯಾಬಿನೆಟ್ ಮಂತ್ರಿಸ್ಥಾನ ನೀಡಬೇಕೆಂದು ಅವರು ಪಕ್ಷದ ವರಿಷ್ಠರಲ್ಲಿ ಮತ್ತು ಡಿ.ಕೆ. ಶಿವಕುಮಾರ್ ಅವರಲ್ಲಿ ಆಗ್ರಹಿಸಿದ್ದಾರೆ. ಸಮುದಾಯವನ್ನು ಈಗಲೂ ನಿರ್ಲಕ್ಷಿಸಿ ಅವಮಾನಿಸಿದರೆ, ಮುಂಬರುವ ಎಲ್ಲಾ ಹಂತಗಳ ಚುನಾವಣೆಗಳಲ್ಲಿ, ವಿಶೇಷವಾಗಿ 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿರುವ ಬಂಜಾರ ಸಮುದಾಯವು ತಕ್ಕ ಪಾಠ ಕಲಿಸಲಿದೆ ಎಂದು ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿಗಳಾಗಲಿರುವ ಡಿ.ಕೆ. ಶಿವಕುಮಾರ್‌ರಿಗೆ ಸಮಾಜದ ವತಿಯಿಂದ ಅಭಿನಂದನೆ ಸಲ್ಲಿಸಿದ ಮುಖಂಡರು, ಮಂತ್ರಿಮಂಡಲ ವಿಸ್ತರಣೆ ಸಂದರ್ಭದಲ್ಲಿ ಬಂಜಾರ ಸಮುದಾಯದವರಿಗೆ ಮಂತ್ರಿಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ. ಈ ಸಂಬಂಧ ಮೇ 31ರಂದು ಪಟ್ಟಣದ ಪ್ರವಾಸಿಮಂದಿರದಲ್ಲಿ ದೂಪದಹಳ್ಳಿ ತಾಂಡಮಠದ ಪ್ರಕಾಶ ಮಹಾರಾಜ ಸ್ವಾಮೀಜಿ ನೇತೃತ್ವದಲ್ಲಿ, ಬಂಜಾರ ಸಮುದಾಯದ ತಾಲೂಕಾಧ್ಯಕ್ಷ ವಾಸುದೇವನಾಯ್ಕರವರ ಮುಂದಾಳತ್ವದಲ್ಲಿ ಸಮುದಾಯದ ಪ್ರಮುಖ ಮುಖಂಡರು ಪತ್ರಿಕಾಗೋಷ್ಠಿ ನಡೆಸಿದರು. ಈ ಸಂದರ್ಭದಲ್ಲಿ ಬಂಜಾರ ಸಮಾಜದ ಸಂಘಟನೆಯ ಉಪಾಧ್ಯಕ್ಷ ಎಂ.ಎಸ್.ಎಂ. ಕೃಷ್ಣ, ಸಹಕಾರ್ಯದರ್ಶಿ ರವಿಕುಮಾರ್, ಸಂಘಟನಾ ಕಾರ್ಯದರ್ಶಿ ಗೋವಿಂದ ನಾಯ್ಕ್, ಖಜಾಂಚಿ ದುರ್ಗಾ ನಾಯ್ಕ್, ಸದಸ್ಯರುಗಳಾದ ಕೆ. ವೆಂಕಟೇಶ್ ನಾಯ್ಕ್, ಆರ್.ಸಿ. ವಿಜಯಕುಮಾರ್, ವೆಂಕಟೇಶ್, ಶಿವಕುಮಾರ್, ರಾಮ ನಾಯ್ಕ್, ಪವಿತ್ರಬಾಯಿ, ಶ್ರೀ ಸಂತ ಸೇವಾಲಾಲ್ ಬಂಜಾರ (ಲಂಬಾಣಿ) ಅಭಿವೃದ್ಧಿ ಮತ್ತು ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸದಸ್ಯರು, ಬಂಜಾರ ಸಮುದಾಯದ ಹಿರಿಯರು ಮತ್ತು ಯುವಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
    4
    ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಬಂಜಾರ ಸಮುದಾಯವು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ತೀವ್ರ ಎಚ್ಚರಿಕೆ ನೀಡಿದೆ. 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಬಂಜಾರ ಸಮುದಾಯ ಪ್ರಮುಖ ಪಾತ್ರ ವಹಿಸಿದ್ದು, ಸಮುದಾಯಕ್ಕೆ ಸೂಕ್ತ ಸ್ಥಾನಮಾನ ನೀಡದಿದ್ದರೆ ಭವಿಷ್ಯದ ಚುನಾವಣೆಗಳಲ್ಲಿ ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಸ್ಪಷ್ಟ ಸಂದೇಶ ರವಾನಿಸಿದೆ.

ಸಮುದಾಯದ ಮುಖಂಡರು ಮಾತನಾಡಿ, ಕಳೆದ ಮೂರು ವರ್ಷಗಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಸಮಾಜವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿತ್ತು. ಡಿ.ಕೆ. ಶಿವಕುಮಾರ್ ಅವರ ಅವಧಿಯಲ್ಲಿ ಇದು ಪುನರಾವರ್ತನೆಯಾಗಬಾರದು ಎಂದು ಮನವರಿಕೆ ಮಾಡಿದ್ದಾರೆ. ರಾಜ್ಯದಲ್ಲಿ ಬಂಜಾರ ಸಮುದಾಯವು ಮೂವತ್ತು ಲಕ್ಷಕ್ಕೂ ಹೆಚ್ಚು ಮತಗಳನ್ನು ಹೊಂದಿದ್ದು, ಚುನಾವಣಾ ಸಂದರ್ಭದಲ್ಲಿ ಗೆಲುವಿಗೆ ನಿರ್ಣಾಯಕ ಮತಗಳನ್ನು ಹೊಂದಿರುವ ಪ್ರಮುಖ ಸಮುದಾಯಗಳಲ್ಲಿ ಒಂದಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷವು ಉಳಿದ ಎರಡು ವರ್ಷಗಳ ಅವಧಿಯಲ್ಲಾದರೂ ಸಮುದಾಯಕ್ಕೆ ತಕ್ಕ ಸ್ಥಾನಮಾನ ನೀಡಬೇಕೆಂದು ಮುಖಂಡರು ಹಕ್ಕೊತ್ತಾಯ ಮಾಡಿದ್ದಾರೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಗಳಾಗುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ, ಬಂಜಾರ ಸಮುದಾಯದ ಶಾಸಕರಾದ ರುದ್ರಪ್ಪ ಲಂಬಾಣಿಯವರಿಗೆ ಮಂತ್ರಿ ಮಂಡಲದಲ್ಲಿ ಮಂತ್ರಿಸ್ಥಾನ ನೀಡಬೇಕು, ಅಥವಾ ಪಕ್ಷದ ಪಿ.ಟಿ. ಪರಮೇಶ್ವರನಾಯ್ಕ ರವರಿಗೆ, ಇಲ್ಲವೇ ಭೀಮಾನಾಯ್ಕ ರವರಿಗೆ ಎಂಎಲ್ಸಿ ಮಾಡಿ ಕ್ಯಾಬಿನೆಟ್ ಮಂತ್ರಿಸ್ಥಾನ ನೀಡಬೇಕೆಂದು ಅವರು ಪಕ್ಷದ ವರಿಷ್ಠರಲ್ಲಿ ಮತ್ತು ಡಿ.ಕೆ. ಶಿವಕುಮಾರ್ ಅವರಲ್ಲಿ ಆಗ್ರಹಿಸಿದ್ದಾರೆ.

ಸಮುದಾಯವನ್ನು ಈಗಲೂ ನಿರ್ಲಕ್ಷಿಸಿ ಅವಮಾನಿಸಿದರೆ, ಮುಂಬರುವ ಎಲ್ಲಾ ಹಂತಗಳ ಚುನಾವಣೆಗಳಲ್ಲಿ, ವಿಶೇಷವಾಗಿ 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿರುವ ಬಂಜಾರ ಸಮುದಾಯವು ತಕ್ಕ ಪಾಠ ಕಲಿಸಲಿದೆ ಎಂದು ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿಗಳಾಗಲಿರುವ ಡಿ.ಕೆ. ಶಿವಕುಮಾರ್‌ರಿಗೆ ಸಮಾಜದ ವತಿಯಿಂದ ಅಭಿನಂದನೆ ಸಲ್ಲಿಸಿದ ಮುಖಂಡರು, ಮಂತ್ರಿಮಂಡಲ ವಿಸ್ತರಣೆ ಸಂದರ್ಭದಲ್ಲಿ ಬಂಜಾರ ಸಮುದಾಯದವರಿಗೆ ಮಂತ್ರಿಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಮೇ 31ರಂದು ಪಟ್ಟಣದ ಪ್ರವಾಸಿಮಂದಿರದಲ್ಲಿ ದೂಪದಹಳ್ಳಿ ತಾಂಡಮಠದ ಪ್ರಕಾಶ ಮಹಾರಾಜ ಸ್ವಾಮೀಜಿ ನೇತೃತ್ವದಲ್ಲಿ, ಬಂಜಾರ ಸಮುದಾಯದ ತಾಲೂಕಾಧ್ಯಕ್ಷ ವಾಸುದೇವನಾಯ್ಕರವರ ಮುಂದಾಳತ್ವದಲ್ಲಿ ಸಮುದಾಯದ ಪ್ರಮುಖ ಮುಖಂಡರು ಪತ್ರಿಕಾಗೋಷ್ಠಿ ನಡೆಸಿದರು. ಈ ಸಂದರ್ಭದಲ್ಲಿ ಬಂಜಾರ ಸಮಾಜದ ಸಂಘಟನೆಯ ಉಪಾಧ್ಯಕ್ಷ ಎಂ.ಎಸ್.ಎಂ. ಕೃಷ್ಣ, ಸಹಕಾರ್ಯದರ್ಶಿ ರವಿಕುಮಾರ್, ಸಂಘಟನಾ ಕಾರ್ಯದರ್ಶಿ ಗೋವಿಂದ ನಾಯ್ಕ್, ಖಜಾಂಚಿ ದುರ್ಗಾ ನಾಯ್ಕ್, ಸದಸ್ಯರುಗಳಾದ ಕೆ. ವೆಂಕಟೇಶ್ ನಾಯ್ಕ್, ಆರ್.ಸಿ. ವಿಜಯಕುಮಾರ್, ವೆಂಕಟೇಶ್, ಶಿವಕುಮಾರ್, ರಾಮ ನಾಯ್ಕ್, ಪವಿತ್ರಬಾಯಿ, ಶ್ರೀ ಸಂತ ಸೇವಾಲಾಲ್ ಬಂಜಾರ (ಲಂಬಾಣಿ) ಅಭಿವೃದ್ಧಿ ಮತ್ತು ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸದಸ್ಯರು, ಬಂಜಾರ ಸಮುದಾಯದ ಹಿರಿಯರು ಮತ್ತು ಯುವಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ
    ವರದಿಗಾರ ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    7 hrs ago
  • ಕರ್ನಾಟಕ ರಾಜ್ಯದಲ್ಲಿ ಶಿಕ್ಷಕರಿಗೆ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಈ ವ್ಯವಸ್ಥೆಯನ್ನು ಚಾಮರಾಜನಗರ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಕರ್ನಾಟಕ ಅಡ್ವಾನ್ಸ್ಡ್ ಮ್ಯಾನೇಜ್‌ಮೆಂಟ್ ಸಿಸ್ಟಮ್ ತಂತ್ರಾಂಶದ ಮೂಲಕ ಹೊಸ ಶೈಕ್ಷಣಿಕ ವರ್ಷದ ಆರಂಭದಿಂದಲೇ ಅನುಷ್ಠಾನಕ್ಕೆ ತರಲಾಗಿದೆ. ಈ ಹೊಸ ವ್ಯವಸ್ಥೆಯು ಶಿಕ್ಷಕರಿಗೆ ಎಷ್ಟು ಅನುಕೂಲಕರವಾಗಿದೆ ಎಂಬ ಪ್ರಶ್ನೆ ಉದ್ಭವಿಸಿದೆ. ಅಲ್ಲದೆ, ಮೊಬೈಲ್ ಆಧಾರಿತ ಹಾಜರಾತಿಯ ಲಾಗಿನ್ ಸಮಯವನ್ನು ಮೀರಿದರೆ ವೇತನ ಕಡಿತವಾಗುತ್ತದೆಯೇ ಎಂಬ ಆತಂಕವೂ ವ್ಯಕ್ತವಾಗಿದೆ. ಈ ಮೊಬೈಲ್ ಆಧಾರಿತ ಹಾಜರಾತಿಯ ಬಗ್ಗೆ ಶಿಕ್ಷಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.
    1
    ಕರ್ನಾಟಕ ರಾಜ್ಯದಲ್ಲಿ ಶಿಕ್ಷಕರಿಗೆ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಈ ವ್ಯವಸ್ಥೆಯನ್ನು ಚಾಮರಾಜನಗರ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಕರ್ನಾಟಕ ಅಡ್ವಾನ್ಸ್ಡ್ ಮ್ಯಾನೇಜ್‌ಮೆಂಟ್ ಸಿಸ್ಟಮ್ ತಂತ್ರಾಂಶದ ಮೂಲಕ ಹೊಸ ಶೈಕ್ಷಣಿಕ ವರ್ಷದ ಆರಂಭದಿಂದಲೇ ಅನುಷ್ಠಾನಕ್ಕೆ ತರಲಾಗಿದೆ.

ಈ ಹೊಸ ವ್ಯವಸ್ಥೆಯು ಶಿಕ್ಷಕರಿಗೆ ಎಷ್ಟು ಅನುಕೂಲಕರವಾಗಿದೆ ಎಂಬ ಪ್ರಶ್ನೆ ಉದ್ಭವಿಸಿದೆ. ಅಲ್ಲದೆ, ಮೊಬೈಲ್ ಆಧಾರಿತ ಹಾಜರಾತಿಯ ಲಾಗಿನ್ ಸಮಯವನ್ನು ಮೀರಿದರೆ ವೇತನ ಕಡಿತವಾಗುತ್ತದೆಯೇ ಎಂಬ ಆತಂಕವೂ ವ್ಯಕ್ತವಾಗಿದೆ. ಈ ಮೊಬೈಲ್ ಆಧಾರಿತ ಹಾಜರಾತಿಯ ಬಗ್ಗೆ ಶಿಕ್ಷಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    16 hrs ago
  • ಶಿಗ್ಗಾವಿ ತಾಲೂಕಿನ ಹುಕ್ಕೇರಿಯಲ್ಲಿರುವ ನೀರಾವರಿ ಅನ್ನದಾತರ ಹೋರಾಟ ವೇದಿಕೆಗೆ ಎಂಡಿ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ, ಎಂಡಿ ಅವರು ಅನ್ನದಾತರು ಎದುರಿಸುತ್ತಿರುವ ನೀರಾವರಿ ಸಮಸ್ಯೆಗಳನ್ನು ಆಲಿಸಿ, ಅವುಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ.
    1
    ಶಿಗ್ಗಾವಿ ತಾಲೂಕಿನ ಹುಕ್ಕೇರಿಯಲ್ಲಿರುವ ನೀರಾವರಿ ಅನ್ನದಾತರ ಹೋರಾಟ ವೇದಿಕೆಗೆ ಎಂಡಿ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ, ಎಂಡಿ ಅವರು ಅನ್ನದಾತರು ಎದುರಿಸುತ್ತಿರುವ ನೀರಾವರಿ ಸಮಸ್ಯೆಗಳನ್ನು ಆಲಿಸಿ, ಅವುಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    15 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.