logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, ಅಸೂಟಿ ಮುರುಗರಾಜೇಂದ್ರ ಶಾಂತಿಧಾಮದ ದಿವಾನ್ ಶರೀಫರು ಹಾಗೂ ಭಾರತೀಯ ಕಿಸಾನ್ ಸೇನೆಯ ಜಿಲ್ಲಾ ಕಾರ್ಯಧ್ಯಕ್ಷ ಎಸ್.ಎಂ. ಮುಲ್ಲಾ ಸೇರಿದಂತೆ ಅನೇಕರು ರೋಣ ಮತಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲರಿಗೆ ಮಂತ್ರಿ ಸ್ಥಾನ ನೀಡಿ ಗೌರವಿಸುವಂತೆ ಸರ್ಕಾರವನ್ನು ಆಗ್ರಹಿಸಿದರು. ಜಿ.ಎಸ್. ಪಾಟೀಲರು ಸರಳ ಸಜ್ಜನಿಕೆ ಹೊಂದಿದ್ದು, ಸರ್ವ ಧರ್ಮದವರನ್ನು ಪ್ರೀತಿಸುವ, ಬಡವರ ಬಂಧು ಆಗಿದ್ದಾರೆ ಎಂದು ದಿವಾನ್ ಶರೀಫರು ಬಣ್ಣಿಸಿದರು. ಅವರ ದೃಷ್ಟಿಕೋನ ದೊಡ್ಡದಾಗಿದ್ದು, ಮನೆ ಬಾಗಿಲಿಗೆ ಬಂದ ಯಾರನ್ನೂ ಅವರು ಬರಿಗೈಯಲ್ಲಿ ಕಳಿಸಿದವರಲ್ಲ ಎಂದು ಹೇಳಿದ ಶರೀಫರು, ಪಾಟೀಲ ಕುಟುಂಬದ ಕೊಡುಗೆ ಅಪಾರವಾಗಿದೆ ತಿಳಿಸಿದರು. ತಾವು ಬೇರೆ ಮತಕ್ಷೇತ್ರದವರಾಗಿದ್ದರೂ, ಮತ ಹಾಕದಿದ್ದರೂ ಸಹ ಅವರ ಜನಪರ ಕಾಳಜಿಯನ್ನು ಮೆಚ್ಚಿ ಇಲ್ಲಿಗೆ ಬಂದಿರುವುದಾಗಿ ಹೇಳಿದ ಅವರು, ಪಾಟೀಲರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಹಿರಿಯ ಶಾಸಕರಾಗಿದ್ದು, ಜಾತ್ಯತೀತವಾಗಿ ಮತ್ತು ಪಕ್ಷಾತೀತವಾಗಿ ಅವರಿಗೆ ಬೆಂಬಲ ಸೂಚಿಸುವುದಾಗಿ ಹೇಳಿದರು. ಜಿಲ್ಲೆಯ ಅಭಿವೃದ್ಧಿಗೆ ಅವರ ಮಂತ್ರಿ ಸ್ಥಾನ ಅಗತ್ಯವಾಗಿದೆ ಎಂದು ಅವರು ಒತ್ತಿ ಹೇಳಿದರು. ಇದೇ ವೇಳೆ ಮಾತನಾಡಿದ ಭಾರತೀಯ ಕಿಸಾನ್ ಸೇನೆಯ ಜಿಲ್ಲಾ ಕಾರ್ಯಧ್ಯಕ್ಷ ಎಸ್.ಎಂ. ಮುಲ್ಲಾ, ಜಿ.ಎಸ್. ಪಾಟೀಲರ ಕೊಡುಗೆ ಅಪಾರವಾಗಿದೆ ಎಂದರು. ಅವರು ಎಲ್ಲಾ ಸಮಾಜದವರನ್ನು ಗೌರವಿಸಿ ಪ್ರೀತಿಸಿ ಬಡವರ ಅಭಿವೃದ್ಧಿಗಾಗಿ ಶ್ರಮಿಸಿದವರು, ಶಿಕ್ಷಣ ಪ್ರೇಮಿಗಳು ಹಾಗೂ ರೈತರ ಬದುಕನ್ನು ಉತ್ತಮಗೊಳಿಸಲು ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನು ನೀಡಿದವರು ಎಂದು ಮುಲ್ಲಾ ಹೇಳಿದರು. ಅಷ್ಟು ವಯಸ್ಸಾಗಿದ್ದರೂ ಸಹ, ಹರೆಯದವರಂತೆ ಮತಕ್ಷೇತ್ರದ ಪ್ರತಿ ಗ್ರಾಮಕ್ಕೂ ತೆರಳಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಾರೆ ಎಂದು ಅವರು ಪ್ರಶಂಸಿಸಿದರು. ಅಂತಹವರು ಮಂತ್ರಿಯಾದರೆ ಜಿಲ್ಲೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಅಭಿವೃದ್ಧಿಯಾಗುತ್ತದೆ ಎಂದು ಮುಲ್ಲಾ ಅಭಿಪ್ರಾಯಪಟ್ಟರು. ಜಿ.ಎಸ್. ಪಾಟೀಲರಿಗೆ ಮಂತ್ರಿ ಸ್ಥಾನ ನೀಡದಿದ್ದಲ್ಲಿ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲು ಸಿದ್ಧರಿರುವುದಾಗಿ ದಿವಾನ್ ಶರೀಫರು ಎಚ್ಚರಿಕೆ ನೀಡಿದರು. ಇದೇ ರೀತಿ, ಎಸ್.ಎಂ. ಮುಲ್ಲಾ ಅವರು ಗದಗ ಜಿಲ್ಲಾ ಅಧಿಕಾರಿಗಳ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಈ ಸುದ್ದಿಗೋಷ್ಠಿಯಲ್ಲಿ ಮಹದೇವಪ್ಪ ಅಬ್ಬಿಗೇರಿ, ನಜಿರಅಹಮದ ಮಕನದಾರ, ಪಕೃಸಾಬ್ ವಾಲಿಕಾರ, ವೀರಣ್ಣ ಮೂದೇನಗುಡಿ, ಸಲೀಮ್ ಹೊರಪೇಟಿ, ಶಾಂತಪ್ಪ ಸಕ್ಕರ, ಮಕ್ತುಮ್ ಸಾಬ ರಾಜೇಖಾನ, ಮೊಹಮ್ಮದ ಹುಸೇನ್ ಮುಲ್ಲಾ, ಸೈಯ್ಯದಭಾಷಾ ಮುಲ್ಲಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

8 hrs ago
user_ಚಂದ್ರು ನೆಲ್ಲೂರ
ಚಂದ್ರು ನೆಲ್ಲೂರ
Local News Reporter ರೋಣ, ಗದಗ, ಕರ್ನಾಟಕ•
8 hrs ago
8259fdbb-59fe-45d7-b4a5-0fb1ec3257a1

ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, ಅಸೂಟಿ ಮುರುಗರಾಜೇಂದ್ರ ಶಾಂತಿಧಾಮದ ದಿವಾನ್ ಶರೀಫರು ಹಾಗೂ ಭಾರತೀಯ ಕಿಸಾನ್ ಸೇನೆಯ ಜಿಲ್ಲಾ ಕಾರ್ಯಧ್ಯಕ್ಷ ಎಸ್.ಎಂ. ಮುಲ್ಲಾ ಸೇರಿದಂತೆ ಅನೇಕರು ರೋಣ ಮತಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲರಿಗೆ ಮಂತ್ರಿ ಸ್ಥಾನ ನೀಡಿ ಗೌರವಿಸುವಂತೆ ಸರ್ಕಾರವನ್ನು ಆಗ್ರಹಿಸಿದರು. ಜಿ.ಎಸ್. ಪಾಟೀಲರು ಸರಳ ಸಜ್ಜನಿಕೆ ಹೊಂದಿದ್ದು, ಸರ್ವ ಧರ್ಮದವರನ್ನು ಪ್ರೀತಿಸುವ, ಬಡವರ ಬಂಧು ಆಗಿದ್ದಾರೆ ಎಂದು ದಿವಾನ್ ಶರೀಫರು ಬಣ್ಣಿಸಿದರು. ಅವರ ದೃಷ್ಟಿಕೋನ ದೊಡ್ಡದಾಗಿದ್ದು, ಮನೆ ಬಾಗಿಲಿಗೆ ಬಂದ ಯಾರನ್ನೂ

b23b4131-ad74-4979-a9c8-7dd65cb655fb

ಅವರು ಬರಿಗೈಯಲ್ಲಿ ಕಳಿಸಿದವರಲ್ಲ ಎಂದು ಹೇಳಿದ ಶರೀಫರು, ಪಾಟೀಲ ಕುಟುಂಬದ ಕೊಡುಗೆ ಅಪಾರವಾಗಿದೆ ತಿಳಿಸಿದರು. ತಾವು ಬೇರೆ ಮತಕ್ಷೇತ್ರದವರಾಗಿದ್ದರೂ, ಮತ ಹಾಕದಿದ್ದರೂ ಸಹ ಅವರ ಜನಪರ ಕಾಳಜಿಯನ್ನು ಮೆಚ್ಚಿ ಇಲ್ಲಿಗೆ ಬಂದಿರುವುದಾಗಿ ಹೇಳಿದ ಅವರು, ಪಾಟೀಲರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಹಿರಿಯ ಶಾಸಕರಾಗಿದ್ದು, ಜಾತ್ಯತೀತವಾಗಿ ಮತ್ತು ಪಕ್ಷಾತೀತವಾಗಿ ಅವರಿಗೆ ಬೆಂಬಲ ಸೂಚಿಸುವುದಾಗಿ ಹೇಳಿದರು. ಜಿಲ್ಲೆಯ ಅಭಿವೃದ್ಧಿಗೆ ಅವರ ಮಂತ್ರಿ ಸ್ಥಾನ ಅಗತ್ಯವಾಗಿದೆ ಎಂದು ಅವರು ಒತ್ತಿ ಹೇಳಿದರು. ಇದೇ ವೇಳೆ ಮಾತನಾಡಿದ ಭಾರತೀಯ ಕಿಸಾನ್ ಸೇನೆಯ

22d2aebd-b1e8-4b23-add2-ee88e51c0ab7

ಜಿಲ್ಲಾ ಕಾರ್ಯಧ್ಯಕ್ಷ ಎಸ್.ಎಂ. ಮುಲ್ಲಾ, ಜಿ.ಎಸ್. ಪಾಟೀಲರ ಕೊಡುಗೆ ಅಪಾರವಾಗಿದೆ ಎಂದರು. ಅವರು ಎಲ್ಲಾ ಸಮಾಜದವರನ್ನು ಗೌರವಿಸಿ ಪ್ರೀತಿಸಿ ಬಡವರ ಅಭಿವೃದ್ಧಿಗಾಗಿ ಶ್ರಮಿಸಿದವರು, ಶಿಕ್ಷಣ ಪ್ರೇಮಿಗಳು ಹಾಗೂ ರೈತರ ಬದುಕನ್ನು ಉತ್ತಮಗೊಳಿಸಲು ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನು ನೀಡಿದವರು ಎಂದು ಮುಲ್ಲಾ ಹೇಳಿದರು. ಅಷ್ಟು ವಯಸ್ಸಾಗಿದ್ದರೂ ಸಹ, ಹರೆಯದವರಂತೆ ಮತಕ್ಷೇತ್ರದ ಪ್ರತಿ ಗ್ರಾಮಕ್ಕೂ ತೆರಳಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಾರೆ ಎಂದು ಅವರು ಪ್ರಶಂಸಿಸಿದರು. ಅಂತಹವರು ಮಂತ್ರಿಯಾದರೆ ಜಿಲ್ಲೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಅಭಿವೃದ್ಧಿಯಾಗುತ್ತದೆ ಎಂದು ಮುಲ್ಲಾ ಅಭಿಪ್ರಾಯಪಟ್ಟರು. ಜಿ.ಎಸ್.

dd04ef57-9e05-4e78-9aa1-5643b510e8e1

ಪಾಟೀಲರಿಗೆ ಮಂತ್ರಿ ಸ್ಥಾನ ನೀಡದಿದ್ದಲ್ಲಿ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲು ಸಿದ್ಧರಿರುವುದಾಗಿ ದಿವಾನ್ ಶರೀಫರು ಎಚ್ಚರಿಕೆ ನೀಡಿದರು. ಇದೇ ರೀತಿ, ಎಸ್.ಎಂ. ಮುಲ್ಲಾ ಅವರು ಗದಗ ಜಿಲ್ಲಾ ಅಧಿಕಾರಿಗಳ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಈ ಸುದ್ದಿಗೋಷ್ಠಿಯಲ್ಲಿ ಮಹದೇವಪ್ಪ ಅಬ್ಬಿಗೇರಿ, ನಜಿರಅಹಮದ ಮಕನದಾರ, ಪಕೃಸಾಬ್ ವಾಲಿಕಾರ, ವೀರಣ್ಣ ಮೂದೇನಗುಡಿ, ಸಲೀಮ್ ಹೊರಪೇಟಿ, ಶಾಂತಪ್ಪ ಸಕ್ಕರ, ಮಕ್ತುಮ್ ಸಾಬ ರಾಜೇಖಾನ, ಮೊಹಮ್ಮದ ಹುಸೇನ್ ಮುಲ್ಲಾ, ಸೈಯ್ಯದಭಾಷಾ ಮುಲ್ಲಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಗುಳೇದಗುಡ್ಡ ಪಟ್ಟಣದ ತಹಶೀಲ್ದಾರರ ಕಚೇರಿಯಲ್ಲಿ ಶುಕ್ರವಾರ ನಡೆದ ತಾಲೂಕು ಮಟ್ಟದ ವಿಕಲಚೇತನರ ಕುಂದುಕೊರತೆ ಸಭೆಯಲ್ಲಿ, ತಹಶೀಲ್ದಾರ ಎಸ್.ಎಫ್. ಬೊಮ್ಮಣ್ಣವರ ಅವರು ಎಲ್ಲ ಇಲಾಖೆಗಳಿಗೆ ನಿರ್ದೇಶನ ನೀಡಿದರು. ಸರಕಾರದ ಆದೇಶದಂತೆ, ಇಲಾಖೆಗಳಿಗೆ ನಿಗದಿಪಡಿಸಿದ ಒಟ್ಟು ಅನುದಾನದಲ್ಲಿ ಶೇಕಡಾ 5 ರಷ್ಟನ್ನು ಕಡ್ಡಾಯವಾಗಿ ಖರ್ಚು ಮಾಡಬೇಕು ಹಾಗೂ ಅಗತ್ಯ ಮಾಹಿತಿಯೊಂದಿಗೆ ಮುಂದಿನ ಸಭೆಗೆ ಹಾಜರಾಗಬೇಕು ಎಂದು ಅವರು ಸೂಚಿಸಿದರು. ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗುವುದು ಮತ್ತು ಕಾಟಾಚಾರಕ್ಕೆ ಸಭೆಗೆ ಹಾಜರಾಗಬಾರದು ಎಂದು ಎಚ್ಚರಿಕೆ ನೀಡಿದರು. ವಿಕಲಚೇತನರು ತಮ್ಮ ಸಮಸ್ಯೆಗಳನ್ನು ಲಿಖಿತವಾಗಿ ಅಥವಾ ನೇರವಾಗಿ ತಮ್ಮನ್ನು ಸಂಪರ್ಕಿಸುವಂತೆ ತಹಶೀಲ್ದಾರರು ತಿಳಿಸಿದರು. ಇದುವರೆಗೆ ಮೂರು ತಿಂಗಳ ವಿಕಲಚೇತನರ ಪೋಷಣಾ ಭತ್ಯೆ ಅನುದಾನ ಜಮಾ ಆಗದಿರುವ ಬಗ್ಗೆ ಸಭೆಯಲ್ಲಿ ಗಮನ ಸೆಳೆಯಲಾಯಿತು. ಕೃಷಿ, ಪಶುಸಂಗೋಪನೆ, ಮತ್ತು ಹೆಸ್ಕಾಂ ಇಲಾಖೆಯವರು ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ನಿಯಮಾನುಸಾರ ವಿಕಲಚೇತನರಿಗೆ ಆದ್ಯತೆ ನೀಡಬೇಕು ಎಂದು ಸೂಚಿಸಲಾಯಿತು. ಇದೇ ವೇಳೆ, ಬಸ್ ನಿಲ್ದಾಣದಲ್ಲಿ ವಿಶೇಷ ಶೌಚಾಲಯ ನಿರ್ಮಿಸಲು ಹಾಗೂ ಬಸ್‌ನಲ್ಲಿ ವಾಸಸ್ಥಳದಿಂದ 100 ಕಿ.ಮೀ. ಪ್ರಯಾಣಿಸಲು ಅವಕಾಶ ಕಲ್ಪಿಸಿ, ಮಾನವೀಯತೆಯಿಂದ ವರ್ತಿಸಲು ಮತ್ತು ನಿಗದಿಪಡಿಸಿದ ಆಸನದಲ್ಲಿ ಕೂರಲು ಅವಕಾಶ ಮಾಡಿಕೊಡುವಂತೆ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. ಅಲ್ಲದೆ, ವಾರದಲ್ಲಿ ಒಂದು ದಿನ ಗುಳೇದಗುಡ್ಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಯುಡಿಐಡಿ ಮೆಡಿಕಲ್ ಕ್ಯಾಂಪ್ ನಡೆಸಲು ಕ್ರಮವಹಿಸುವಂತೆ ಸೂಚಿಸಲಾಯಿತು. ಈ ಸಭೆಗೆ ತಾಲ್ಲೂಕು ಪಂಚಾಯತ್, ಅರಣ್ಯ, ಖಜಾನೆ, ಪೊಲೀಸ್, ತೋಟಗಾರಿಕೆ, ಸಮಾಜ ಕಲ್ಯಾಣ ಸೇರಿದಂತೆ ಬಹುತೇಕ ಇಲಾಖೆಗಳ ಅಧಿಕಾರಿಗಳು ಗೈರು ಹಾಜರಾಗಿದ್ದರು. ಇದರಿಂದ ಆಕ್ರೋಶಗೊಂಡ ವಿಕಲಚೇತನರು, ಮುಂದಿನ ಸಭೆಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಜರಾಗದಿದ್ದರೆ ಸಭೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದರು. ಸಭೆಯಲ್ಲಿ ಮಾತನಾಡಿದ ವಿಕಲಚೇತನರ ಸಂಘದ ತಾಲ್ಲೂಕು ಅಧ್ಯಕ್ಷ ಹುಚ್ಚೇಶ ಯಂಡಿಗೇರಿ ಅವರು, ವಿಕಲಚೇತನರ ಕುಂದುಕೊರತೆ ಸಭೆಗಳನ್ನು ಪ್ರತಿ ಮೂರು ತಿಂಗಳಿಗೊಮ್ಮೆ ನಡೆಸಬೇಕು, ಇದು ಕಾಟಾಚಾರದ ಸಭೆಯಾಗಬಾರದು, ಹಾಗೂ ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದರೊಂದಿಗೆ ಗುಳೇದಗುಡ್ಡದಲ್ಲಿ ವಿಕಲಚೇತನರ ಸಮುದಾಯ ಭವನ ನಿರ್ಮಿಸುವಂತೆ ಒತ್ತಾಯಿಸಿದರು. ತಹಶೀಲ್ದಾರ ಬೊಮ್ಮಣ್ಣವರ ಅವರು, ಸಭೆಗೆ ಗೈರಾದ ಇಲಾಖಾ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಮತ್ತೊಮ್ಮೆ ಸೂಚಿಸಿದರು.
    4
    ಗುಳೇದಗುಡ್ಡ ಪಟ್ಟಣದ ತಹಶೀಲ್ದಾರರ ಕಚೇರಿಯಲ್ಲಿ ಶುಕ್ರವಾರ ನಡೆದ ತಾಲೂಕು ಮಟ್ಟದ ವಿಕಲಚೇತನರ ಕುಂದುಕೊರತೆ ಸಭೆಯಲ್ಲಿ, ತಹಶೀಲ್ದಾರ ಎಸ್.ಎಫ್. ಬೊಮ್ಮಣ್ಣವರ ಅವರು ಎಲ್ಲ ಇಲಾಖೆಗಳಿಗೆ ನಿರ್ದೇಶನ ನೀಡಿದರು. ಸರಕಾರದ ಆದೇಶದಂತೆ, ಇಲಾಖೆಗಳಿಗೆ ನಿಗದಿಪಡಿಸಿದ ಒಟ್ಟು ಅನುದಾನದಲ್ಲಿ ಶೇಕಡಾ 5 ರಷ್ಟನ್ನು ಕಡ್ಡಾಯವಾಗಿ ಖರ್ಚು ಮಾಡಬೇಕು ಹಾಗೂ ಅಗತ್ಯ ಮಾಹಿತಿಯೊಂದಿಗೆ ಮುಂದಿನ ಸಭೆಗೆ ಹಾಜರಾಗಬೇಕು ಎಂದು ಅವರು ಸೂಚಿಸಿದರು. ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗುವುದು ಮತ್ತು ಕಾಟಾಚಾರಕ್ಕೆ ಸಭೆಗೆ ಹಾಜರಾಗಬಾರದು ಎಂದು ಎಚ್ಚರಿಕೆ ನೀಡಿದರು.

ವಿಕಲಚೇತನರು ತಮ್ಮ ಸಮಸ್ಯೆಗಳನ್ನು ಲಿಖಿತವಾಗಿ ಅಥವಾ ನೇರವಾಗಿ ತಮ್ಮನ್ನು ಸಂಪರ್ಕಿಸುವಂತೆ ತಹಶೀಲ್ದಾರರು ತಿಳಿಸಿದರು. ಇದುವರೆಗೆ ಮೂರು ತಿಂಗಳ ವಿಕಲಚೇತನರ ಪೋಷಣಾ ಭತ್ಯೆ ಅನುದಾನ ಜಮಾ ಆಗದಿರುವ ಬಗ್ಗೆ ಸಭೆಯಲ್ಲಿ ಗಮನ ಸೆಳೆಯಲಾಯಿತು. ಕೃಷಿ, ಪಶುಸಂಗೋಪನೆ, ಮತ್ತು ಹೆಸ್ಕಾಂ ಇಲಾಖೆಯವರು ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ನಿಯಮಾನುಸಾರ ವಿಕಲಚೇತನರಿಗೆ ಆದ್ಯತೆ ನೀಡಬೇಕು ಎಂದು ಸೂಚಿಸಲಾಯಿತು. ಇದೇ ವೇಳೆ, ಬಸ್ ನಿಲ್ದಾಣದಲ್ಲಿ ವಿಶೇಷ ಶೌಚಾಲಯ ನಿರ್ಮಿಸಲು ಹಾಗೂ ಬಸ್‌ನಲ್ಲಿ ವಾಸಸ್ಥಳದಿಂದ 100 ಕಿ.ಮೀ. ಪ್ರಯಾಣಿಸಲು ಅವಕಾಶ ಕಲ್ಪಿಸಿ, ಮಾನವೀಯತೆಯಿಂದ ವರ್ತಿಸಲು ಮತ್ತು ನಿಗದಿಪಡಿಸಿದ ಆಸನದಲ್ಲಿ ಕೂರಲು ಅವಕಾಶ ಮಾಡಿಕೊಡುವಂತೆ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. ಅಲ್ಲದೆ, ವಾರದಲ್ಲಿ ಒಂದು ದಿನ ಗುಳೇದಗುಡ್ಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಯುಡಿಐಡಿ ಮೆಡಿಕಲ್ ಕ್ಯಾಂಪ್ ನಡೆಸಲು ಕ್ರಮವಹಿಸುವಂತೆ ಸೂಚಿಸಲಾಯಿತು.

ಈ ಸಭೆಗೆ ತಾಲ್ಲೂಕು ಪಂಚಾಯತ್, ಅರಣ್ಯ, ಖಜಾನೆ, ಪೊಲೀಸ್, ತೋಟಗಾರಿಕೆ, ಸಮಾಜ ಕಲ್ಯಾಣ ಸೇರಿದಂತೆ ಬಹುತೇಕ ಇಲಾಖೆಗಳ ಅಧಿಕಾರಿಗಳು ಗೈರು ಹಾಜರಾಗಿದ್ದರು. ಇದರಿಂದ ಆಕ್ರೋಶಗೊಂಡ ವಿಕಲಚೇತನರು, ಮುಂದಿನ ಸಭೆಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಜರಾಗದಿದ್ದರೆ ಸಭೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದರು. ಸಭೆಯಲ್ಲಿ ಮಾತನಾಡಿದ ವಿಕಲಚೇತನರ ಸಂಘದ ತಾಲ್ಲೂಕು ಅಧ್ಯಕ್ಷ ಹುಚ್ಚೇಶ ಯಂಡಿಗೇರಿ ಅವರು, ವಿಕಲಚೇತನರ ಕುಂದುಕೊರತೆ ಸಭೆಗಳನ್ನು ಪ್ರತಿ ಮೂರು ತಿಂಗಳಿಗೊಮ್ಮೆ ನಡೆಸಬೇಕು, ಇದು ಕಾಟಾಚಾರದ ಸಭೆಯಾಗಬಾರದು, ಹಾಗೂ ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದರೊಂದಿಗೆ ಗುಳೇದಗುಡ್ಡದಲ್ಲಿ ವಿಕಲಚೇತನರ ಸಮುದಾಯ ಭವನ ನಿರ್ಮಿಸುವಂತೆ ಒತ್ತಾಯಿಸಿದರು. ತಹಶೀಲ್ದಾರ ಬೊಮ್ಮಣ್ಣವರ ಅವರು, ಸಭೆಗೆ ಗೈರಾದ ಇಲಾಖಾ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಮತ್ತೊಮ್ಮೆ ಸೂಚಿಸಿದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    17 hrs ago
  • ಕುಷ್ಟಗಿ ನಗರದಲ್ಲಿ ಬಹುನಿರೀಕ್ಷಿತ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ನಡುವಿನ ಫೈನಲ್ ಕ್ರಿಕೆಟ್ ಪಂದ್ಯವನ್ನು ನೇರಪ್ರಸಾರದಲ್ಲಿ ವೀಕ್ಷಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ನಾಳೆ ರವಿವಾರದಂದು ನಡೆಯುವ ಈ ಪಂದ್ಯವನ್ನು ಮಾಜಿ ಶಾಸಕರಾದ ಹಸನ ಸಾಬ್ ದೋಟಿಹಾಳ್ ಅವರ ಬಸ್ ಸ್ಟ್ಯಾಂಡ್ ಪಕ್ಕದ ಜಾಗದಲ್ಲಿ ಅಳವಡಿಸಲಾಗಿರುವ ದೊಡ್ಡ ಎಲ್ಇಡಿ ಪರದೆಯ ಮೂಲಕ ವೀಕ್ಷಿಸಲು ಸಿದ್ಧತೆ ಮಾಡಲಾಗಿದೆ. ದೊಡ್ಡ ಬಸವನಗೌಡ ಪಾಟೀಲ್, ಲಾಡ್ಲೆ ಮಶಾಕ್ ದೋಟಿಹಾಳ್ ಹಾಗೂ ಅವರ ಸ್ನೇಹಿತರು ಈ ವ್ಯವಸ್ಥೆಯನ್ನು ಮಾಡಿದ್ದಾರೆ. ಉದ್ಯಮಿಗಳು ಹಾಗೂ ಎಸ್‌ಆರ್‌ಕೆ ಬ್ಯಾಂಕ್ ಅಧ್ಯಕ್ಷರಾದ ಉಮೇಶ್ ಮಂಗಳೂರು ಅವರು ಆರ್‌ಸಿಬಿ ಅಭಿಮಾನಿಗಳು, ಕ್ರೀಡಾಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪಂದ್ಯವನ್ನು ವೀಕ್ಷಿಸಬೇಕೆಂದು ಮನವಿ ಮಾಡಿದ್ದಾರೆ.
    1
    ಕುಷ್ಟಗಿ ನಗರದಲ್ಲಿ ಬಹುನಿರೀಕ್ಷಿತ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ನಡುವಿನ ಫೈನಲ್ ಕ್ರಿಕೆಟ್ ಪಂದ್ಯವನ್ನು ನೇರಪ್ರಸಾರದಲ್ಲಿ ವೀಕ್ಷಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ನಾಳೆ ರವಿವಾರದಂದು ನಡೆಯುವ ಈ ಪಂದ್ಯವನ್ನು ಮಾಜಿ ಶಾಸಕರಾದ ಹಸನ ಸಾಬ್ ದೋಟಿಹಾಳ್ ಅವರ ಬಸ್ ಸ್ಟ್ಯಾಂಡ್ ಪಕ್ಕದ ಜಾಗದಲ್ಲಿ ಅಳವಡಿಸಲಾಗಿರುವ ದೊಡ್ಡ ಎಲ್ಇಡಿ ಪರದೆಯ ಮೂಲಕ ವೀಕ್ಷಿಸಲು ಸಿದ್ಧತೆ ಮಾಡಲಾಗಿದೆ.

ದೊಡ್ಡ ಬಸವನಗೌಡ ಪಾಟೀಲ್, ಲಾಡ್ಲೆ ಮಶಾಕ್ ದೋಟಿಹಾಳ್ ಹಾಗೂ ಅವರ ಸ್ನೇಹಿತರು ಈ ವ್ಯವಸ್ಥೆಯನ್ನು ಮಾಡಿದ್ದಾರೆ. ಉದ್ಯಮಿಗಳು ಹಾಗೂ ಎಸ್‌ಆರ್‌ಕೆ ಬ್ಯಾಂಕ್ ಅಧ್ಯಕ್ಷರಾದ ಉಮೇಶ್ ಮಂಗಳೂರು ಅವರು ಆರ್‌ಸಿಬಿ ಅಭಿಮಾನಿಗಳು, ಕ್ರೀಡಾಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪಂದ್ಯವನ್ನು ವೀಕ್ಷಿಸಬೇಕೆಂದು ಮನವಿ ಮಾಡಿದ್ದಾರೆ.
    user_Bhimasenrao Kulkarni Kushtagi
    Bhimasenrao Kulkarni Kushtagi
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    2 hrs ago
  • ಇಳಕಲ್ ತಾಲೂಕು ಅಹಿಂದ ಸಂಘಟನೆಯು ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸುವ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದೆ. ಇದರೊಂದಿಗೆ, ಸಂಘಟನೆಯು ತಮ್ಮ ಸಂಪುಟದಲ್ಲಿ ರಾಜ್ಯದ ಅಹಿಂದ ನಾಯಕರಾದ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಸ್ಥಾನವನ್ನು ನೀಡಬೇಕು ಎಂದು ಆಗ್ರಹಿಸಿದೆ. ಜೊತೆಗೆ, ಅಹಿಂದ ತತ್ವಗಳ ಆದರ್ಶಗಳನ್ನು ಹೊಂದಿರುವ ಉತ್ತರ ಕರ್ನಾಟಕದ ಪ್ರಭಾವಿ ನಾಯಕರಾದ ವಿಜಯಾನಂದ ಕಾಶಪ್ಪನವರ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದೂ ಅಹಿಂದ ಸಂಘಟನೆಯ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯ ಮೂಲಕ ತಿಳಿಸಿದ್ದಾರೆ. ಈ ಪತ್ರಿಕಾಗೋಷ್ಠಿಯಲ್ಲಿ ಅಹಿಂದ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ರಫೀಕ್ ಮುಲ್ಲಾ, ಅಹಿಂದ ರಾಜ್ಯ ಅಲ್ಪಸಂಖ್ಯಾತ ಯುವ ಘಟಕದ ಅಧ್ಯಕ್ಷ ಮೈಹಿನು ಕಂದಗಲ್ಲ, ಅಹಿಂದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಪರಶುರಾಮ ತಂಬಲಗಡ್ಡಿ, ಚಂದ್ರಶೇಖರ್ ಬಸರಗಿಡದ, ಸಂಗಪ್ಪ ಕುರಿ, ರಾಜು ಭಾಗವಾನ್, ಮತ್ತು ಸಂಗಪ್ಪ ತೊಂಡಿಹಾಳ ಸೇರಿದಂತೆ ಇತರ ಅಹಿಂದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಇಳಕಲ್ ತಾಲೂಕು ಅಹಿಂದ ಸಂಘಟನೆಯು ಈ ಬೇಡಿಕೆಗಳನ್ನು ಪುನರುಚ್ಚರಿಸಿದೆ.
    1
    ಇಳಕಲ್ ತಾಲೂಕು ಅಹಿಂದ ಸಂಘಟನೆಯು ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸುವ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದೆ. ಇದರೊಂದಿಗೆ, ಸಂಘಟನೆಯು ತಮ್ಮ ಸಂಪುಟದಲ್ಲಿ ರಾಜ್ಯದ ಅಹಿಂದ ನಾಯಕರಾದ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಸ್ಥಾನವನ್ನು ನೀಡಬೇಕು ಎಂದು ಆಗ್ರಹಿಸಿದೆ. ಜೊತೆಗೆ, ಅಹಿಂದ ತತ್ವಗಳ ಆದರ್ಶಗಳನ್ನು ಹೊಂದಿರುವ ಉತ್ತರ ಕರ್ನಾಟಕದ ಪ್ರಭಾವಿ ನಾಯಕರಾದ ವಿಜಯಾನಂದ ಕಾಶಪ್ಪನವರ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದೂ ಅಹಿಂದ ಸಂಘಟನೆಯ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯ ಮೂಲಕ ತಿಳಿಸಿದ್ದಾರೆ.

ಈ ಪತ್ರಿಕಾಗೋಷ್ಠಿಯಲ್ಲಿ ಅಹಿಂದ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ರಫೀಕ್ ಮುಲ್ಲಾ, ಅಹಿಂದ ರಾಜ್ಯ ಅಲ್ಪಸಂಖ್ಯಾತ ಯುವ ಘಟಕದ ಅಧ್ಯಕ್ಷ ಮೈಹಿನು ಕಂದಗಲ್ಲ, ಅಹಿಂದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಪರಶುರಾಮ ತಂಬಲಗಡ್ಡಿ, ಚಂದ್ರಶೇಖರ್ ಬಸರಗಿಡದ, ಸಂಗಪ್ಪ ಕುರಿ, ರಾಜು ಭಾಗವಾನ್, ಮತ್ತು ಸಂಗಪ್ಪ ತೊಂಡಿಹಾಳ ಸೇರಿದಂತೆ ಇತರ ಅಹಿಂದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಇಳಕಲ್ ತಾಲೂಕು ಅಹಿಂದ ಸಂಘಟನೆಯು ಈ ಬೇಡಿಕೆಗಳನ್ನು ಪುನರುಚ್ಚರಿಸಿದೆ.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    4 hrs ago
  • ರಾಜ್ಯದಲ್ಲಿ ನೂತನ ಸಚಿವ ಸಂಪುಟ ರಚನೆಯಾಗಲಿರುವ ಹಿನ್ನೆಲೆಯಲ್ಲಿ, ಹುನಗುಂದ ಮತಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ದೊರೆಯಬೇಕೆಂದು ಅವರ ಅಭಿಮಾನಿಗಳು ಆಗ್ರಹಿಸಿದ್ದಾರೆ. ಇಳಕಲ್ಲದ ಕಿಲ್ಲಾ ಓಣಿಯ ಕಾಶಪ್ಪನವರ ಅಭಿಮಾನಿಗಳು ಶ್ರೀಶೈಲದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ತಮ್ಮ ಈ ಬೇಡಿಕೆಯನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅಭಿಮಾನಿಗಳು, ಶಾಸಕ ವಿಜಯಾನಂದ ಕಾಶಪ್ಪನವರಿಗೆ ಹೈಕಮಾಂಡ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಭಾವಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಕಾಶಪ್ಪನವರಿಗೆ ಜೈಕಾರ ಕೂಗುವ ಮೂಲಕ ತಮ್ಮ ಬೆಂಬಲ ಮತ್ತು ಆಶಯವನ್ನು ಪ್ರದರ್ಶಿಸಿದರು.
    1
    ರಾಜ್ಯದಲ್ಲಿ ನೂತನ ಸಚಿವ ಸಂಪುಟ ರಚನೆಯಾಗಲಿರುವ ಹಿನ್ನೆಲೆಯಲ್ಲಿ, ಹುನಗುಂದ ಮತಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ದೊರೆಯಬೇಕೆಂದು ಅವರ ಅಭಿಮಾನಿಗಳು ಆಗ್ರಹಿಸಿದ್ದಾರೆ. ಇಳಕಲ್ಲದ ಕಿಲ್ಲಾ ಓಣಿಯ ಕಾಶಪ್ಪನವರ ಅಭಿಮಾನಿಗಳು ಶ್ರೀಶೈಲದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ತಮ್ಮ ಈ ಬೇಡಿಕೆಯನ್ನು ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಅಭಿಮಾನಿಗಳು, ಶಾಸಕ ವಿಜಯಾನಂದ ಕಾಶಪ್ಪನವರಿಗೆ ಹೈಕಮಾಂಡ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಭಾವಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಕಾಶಪ್ಪನವರಿಗೆ ಜೈಕಾರ ಕೂಗುವ ಮೂಲಕ ತಮ್ಮ ಬೆಂಬಲ ಮತ್ತು ಆಶಯವನ್ನು ಪ್ರದರ್ಶಿಸಿದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    17 hrs ago
  • ಧಾರವಾಡದಲ್ಲಿ ತಡಸಿನಕೊಪ್ಪ ಬಳಿ ಇತ್ತೀಚೆಗೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಗಾಯಗೊಂಡ ವಿಠಲ ವಾಲೀಕಾರನ ಆರೋಗ್ಯ ವಿಚಾರಿಸಲು ಎಸ್‌ಡಿಎಂ ಆಸ್ಪತ್ರೆಗೆ ಬಂದಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಥಳಕ್ಕೆ ಆಗಮಿಸದ ಕಾರಣ ತೀವ್ರವಾಗಿ ಗರಂ ಆಗಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ಸಚಿವರು ಆಸ್ಪತ್ರೆಗೆ ಬರುವ ಬಗ್ಗೆ ಮಾಹಿತಿ ಇದ್ದರೂ ಆಯುಕ್ತರು ಗೈರುಹಾಜರಾಗಿದ್ದರು. ಈ ಘಟನೆಯಿಂದ ಕೋಪಗೊಂಡ ಜೋಶಿ, ಗುಂಡಿನ ದಾಳಿ ಪ್ರಕರಣದಲ್ಲಿ ಪೊಲೀಸರೇ ಭಾಗಿಯಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಗುಂಡಿನ ದಾಳಿ ನಡೆದು ನಾಲ್ಕು ದಿನಗಳಾದರೂ ಮುಖ್ಯ ಆರೋಪಿಯನ್ನು ಬಂಧಿಸಲು ಸಾಧ್ಯವಾಗದಿರುವುದು ವಿಚಿತ್ರ ಎಂದ ಅವರು, ಅಲ್ಲಿ ಉಪಸ್ಥಿತರಿದ್ದ ಡಿಸಿಪಿ ಶ್ರುತಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡು, "ನಿಮ್ಮ ಕಮಿಷನರ್ ಎಲ್ಲಿ? ಇಲ್ಲಿಗೆ ಬರುವುದು ಅವರ ಕೆಲಸ ಅಲ್ಲವೇ?" ಎಂದು ಪ್ರಶ್ನಿಸಿದರು.
    1
    ಧಾರವಾಡದಲ್ಲಿ ತಡಸಿನಕೊಪ್ಪ ಬಳಿ ಇತ್ತೀಚೆಗೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಗಾಯಗೊಂಡ ವಿಠಲ ವಾಲೀಕಾರನ ಆರೋಗ್ಯ ವಿಚಾರಿಸಲು ಎಸ್‌ಡಿಎಂ ಆಸ್ಪತ್ರೆಗೆ ಬಂದಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಥಳಕ್ಕೆ ಆಗಮಿಸದ ಕಾರಣ ತೀವ್ರವಾಗಿ ಗರಂ ಆಗಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ಸಚಿವರು ಆಸ್ಪತ್ರೆಗೆ ಬರುವ ಬಗ್ಗೆ ಮಾಹಿತಿ ಇದ್ದರೂ ಆಯುಕ್ತರು ಗೈರುಹಾಜರಾಗಿದ್ದರು.

ಈ ಘಟನೆಯಿಂದ ಕೋಪಗೊಂಡ ಜೋಶಿ, ಗುಂಡಿನ ದಾಳಿ ಪ್ರಕರಣದಲ್ಲಿ ಪೊಲೀಸರೇ ಭಾಗಿಯಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಗುಂಡಿನ ದಾಳಿ ನಡೆದು ನಾಲ್ಕು ದಿನಗಳಾದರೂ ಮುಖ್ಯ ಆರೋಪಿಯನ್ನು ಬಂಧಿಸಲು ಸಾಧ್ಯವಾಗದಿರುವುದು ವಿಚಿತ್ರ ಎಂದ ಅವರು, ಅಲ್ಲಿ ಉಪಸ್ಥಿತರಿದ್ದ ಡಿಸಿಪಿ ಶ್ರುತಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡು, "ನಿಮ್ಮ ಕಮಿಷನರ್ ಎಲ್ಲಿ? ಇಲ್ಲಿಗೆ ಬರುವುದು ಅವರ ಕೆಲಸ ಅಲ್ಲವೇ?" ಎಂದು ಪ್ರಶ್ನಿಸಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    3 hrs ago
  • ರಾಜ್ಯ ಸರ್ಕಾರ ಸಚಿವ ಸಂಪುಟ ಪುನರ್‌ರಚನೆಗೆ ಮುಂದಾದಲ್ಲಿ, ಬಂಜಾರಾ ಸಮಾಜದಿಂದ ಕಾಂಗ್ರೆಸ್‌ನ ಏಕೈಕ ಶಾಸಕರಾಗಿರುವ ಹಾವೇರಿ ಶಾಸಕ ಹಾಗೂ ವಿಧಾನ ಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಸಮಾಜದ ಯುವ ಮುಖಂಡ ಸುಧೀರ ಲಮಾಣಿ ಒತ್ತಾಯಿಸಿದ್ದಾರೆ. ಶಿಗ್ಗಾವಿಯಲ್ಲಿ ಈ ಕುರಿತು ಪ್ರಕಟಣೆ ನೀಡಿರುವ ಸುಧೀರ ಲಮಾಣಿ, ರಾಜ್ಯದ ಪರಿಶಿಷ್ಟ ಜಾತಿಯ ೩೬ ಮೀಸಲು ಮತಕ್ಷೇತ್ರಗಳು ಹಾಗೂ ಪರಿಶಿಷ್ಟ ಪಂಗಡದ ೧೫ ಮೀಸಲು ಮತಕ್ಷೇತ್ರಗಳಲ್ಲಿ ಬಂಜಾರ ಸಮುದಾಯದ ಮತ ನಿರ್ಣಾಯಕವಾಗಿದೆ ಎಂದು ಹೇಳಿದ್ದಾರೆ. ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ, ಕಳೆದ ಬಿಜೆಪಿ ಸರ್ಕಾರದ ಅವೈಜ್ಞಾನಿಕ ಒಳಮೀಸಲಾತಿ ವರ್ಗೀಕರಣ ಮತ್ತು ಶಿಫಾರಸುಗಳನ್ನು ಖಂಡಿಸಿ, "ಬಿಜೆಪಿ ಹಠಾವೋ-ತಾಂಡಾ ಬಚಾವೋ" ಘೋಷಣೆಯೊಂದಿಗೆ ರಾಜ್ಯದ ೪೦ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವಲ್ಲಿ ಸಮುದಾಯ ಪ್ರಮುಖ ಪಾತ್ರ ವಹಿಸಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ರಾಜ್ಯದ ೩೦ ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿರುವ ಬಂಜಾರ ಸಮುದಾಯದವರು, ಏಕೈಕ ಶಾಸಕರಾದ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ದೊರೆಯುವ ನಿರೀಕ್ಷೆಯಲ್ಲಿದ್ದರು. ಆದರೆ, ಕೆಲವು ರಾಜಕೀಯ ಕಾರಣಗಳಿಂದ ಅವರಿಗೆ ಸಚಿವ ಸ್ಥಾನ ಸಿಕ್ಕಿರಲಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮೂರು ಬಾರಿ ಶಾಸಕರಾಗಿರುವ ರುದ್ರಪ್ಪ ಲಮಾಣಿ ಅವರು ೨೦೧೪ರಿಂದ ಸಂತ ಸೇವಾಲಾಲ್ ಗುರೂಜಿ ಜನ್ಮಸ್ಥಳವಾದ ಸೂರಗೊಂಡನಕೊಪ್ಪ ಮಹಾಮಠ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಮಹಾಮಠದ ಅಭಿವೃದ್ಧಿಗಾಗಿ ಸರ್ಕಾರದಿಂದ ₹೫೦ ಕೋಟಿ ಅನುದಾನ ತಂದು, ೧೫ ಎಕರೆ ಜಾಗವನ್ನು ೨೮ ಎಕರೆಗೆ ವಿಸ್ತರಿಸಿ, ಅದನ್ನು ಧಾರ್ಮಿಕ ಹಾಗೂ ಶೈಕ್ಷಣಿಕ ಉದ್ದೇಶಗಳಿಗಾಗಿ ಮೀಸಲಿಟ್ಟಿದ್ದಾರೆ. ಸರ್ಕಾರ ಬಂದು ಈಗಾಗಲೇ ಮೂರು ವರ್ಷಗಳು ಕಳೆದಿವೆ ಎಂದು ಸುಧೀರ ಲಮಾಣಿ ಉಲ್ಲೇಖಿಸಿದ್ದಾರೆ. ಹೈಕಮಾಂಡ್ ನಿರ್ದೇಶನದ ಮೇರೆಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆಂದು ಹೇಳಿರುವ ಅವರು, ಮುಂದಿನ ಸಂಪುಟ ಪುನರ್‌ರಚನೆ ಸಂದರ್ಭದಲ್ಲಿ ರುದ್ರಪ್ಪ ಲಮಾಣಿ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕು ಎಂದು ಪುನರುಚ್ಚರಿಸಿದ್ದಾರೆ.
    1
    ರಾಜ್ಯ ಸರ್ಕಾರ ಸಚಿವ ಸಂಪುಟ ಪುನರ್‌ರಚನೆಗೆ ಮುಂದಾದಲ್ಲಿ, ಬಂಜಾರಾ ಸಮಾಜದಿಂದ ಕಾಂಗ್ರೆಸ್‌ನ ಏಕೈಕ ಶಾಸಕರಾಗಿರುವ ಹಾವೇರಿ ಶಾಸಕ ಹಾಗೂ ವಿಧಾನ ಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಸಮಾಜದ ಯುವ ಮುಖಂಡ ಸುಧೀರ ಲಮಾಣಿ ಒತ್ತಾಯಿಸಿದ್ದಾರೆ. ಶಿಗ್ಗಾವಿಯಲ್ಲಿ ಈ ಕುರಿತು ಪ್ರಕಟಣೆ ನೀಡಿರುವ ಸುಧೀರ ಲಮಾಣಿ, ರಾಜ್ಯದ ಪರಿಶಿಷ್ಟ ಜಾತಿಯ ೩೬ ಮೀಸಲು ಮತಕ್ಷೇತ್ರಗಳು ಹಾಗೂ ಪರಿಶಿಷ್ಟ ಪಂಗಡದ ೧೫ ಮೀಸಲು ಮತಕ್ಷೇತ್ರಗಳಲ್ಲಿ ಬಂಜಾರ ಸಮುದಾಯದ ಮತ ನಿರ್ಣಾಯಕವಾಗಿದೆ ಎಂದು ಹೇಳಿದ್ದಾರೆ.

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ, ಕಳೆದ ಬಿಜೆಪಿ ಸರ್ಕಾರದ ಅವೈಜ್ಞಾನಿಕ ಒಳಮೀಸಲಾತಿ ವರ್ಗೀಕರಣ ಮತ್ತು ಶಿಫಾರಸುಗಳನ್ನು ಖಂಡಿಸಿ, "ಬಿಜೆಪಿ ಹಠಾವೋ-ತಾಂಡಾ ಬಚಾವೋ" ಘೋಷಣೆಯೊಂದಿಗೆ ರಾಜ್ಯದ ೪೦ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವಲ್ಲಿ ಸಮುದಾಯ ಪ್ರಮುಖ ಪಾತ್ರ ವಹಿಸಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ರಾಜ್ಯದ ೩೦ ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿರುವ ಬಂಜಾರ ಸಮುದಾಯದವರು, ಏಕೈಕ ಶಾಸಕರಾದ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ದೊರೆಯುವ ನಿರೀಕ್ಷೆಯಲ್ಲಿದ್ದರು. ಆದರೆ, ಕೆಲವು ರಾಜಕೀಯ ಕಾರಣಗಳಿಂದ ಅವರಿಗೆ ಸಚಿವ ಸ್ಥಾನ ಸಿಕ್ಕಿರಲಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮೂರು ಬಾರಿ ಶಾಸಕರಾಗಿರುವ ರುದ್ರಪ್ಪ ಲಮಾಣಿ ಅವರು ೨೦೧೪ರಿಂದ ಸಂತ ಸೇವಾಲಾಲ್ ಗುರೂಜಿ ಜನ್ಮಸ್ಥಳವಾದ ಸೂರಗೊಂಡನಕೊಪ್ಪ ಮಹಾಮಠ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಮಹಾಮಠದ ಅಭಿವೃದ್ಧಿಗಾಗಿ ಸರ್ಕಾರದಿಂದ ₹೫೦ ಕೋಟಿ ಅನುದಾನ ತಂದು, ೧೫ ಎಕರೆ ಜಾಗವನ್ನು ೨೮ ಎಕರೆಗೆ ವಿಸ್ತರಿಸಿ, ಅದನ್ನು ಧಾರ್ಮಿಕ ಹಾಗೂ ಶೈಕ್ಷಣಿಕ ಉದ್ದೇಶಗಳಿಗಾಗಿ ಮೀಸಲಿಟ್ಟಿದ್ದಾರೆ.

ಸರ್ಕಾರ ಬಂದು ಈಗಾಗಲೇ ಮೂರು ವರ್ಷಗಳು ಕಳೆದಿವೆ ಎಂದು ಸುಧೀರ ಲಮಾಣಿ ಉಲ್ಲೇಖಿಸಿದ್ದಾರೆ. ಹೈಕಮಾಂಡ್ ನಿರ್ದೇಶನದ ಮೇರೆಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆಂದು ಹೇಳಿರುವ ಅವರು, ಮುಂದಿನ ಸಂಪುಟ ಪುನರ್‌ರಚನೆ ಸಂದರ್ಭದಲ್ಲಿ ರುದ್ರಪ್ಪ ಲಮಾಣಿ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕು ಎಂದು ಪುನರುಚ್ಚರಿಸಿದ್ದಾರೆ.
    user_ವಿಶ್ವನಾಥ ಬಂಡಿವಡ್ಡರ
    ವಿಶ್ವನಾಥ ಬಂಡಿವಡ್ಡರ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    7 hrs ago
  • ಮಾಜಿ ಶಾಸಕಿ ಸೀಮಾ ಮಸೂತಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಸಿದ್ದರಾಮಯ್ಯನವರು ಬಿಟ್ಟಿ ಭಾಗ್ಯಗಳನ್ನು ಘೋಷಣೆ ಮಾಡಿ ರಾಜ್ಯವನ್ನು ಅಧೋಗತಿಗೆ ತಲುಪಿಸಿ ರಾಜಿನಾಮೆ ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ. ಧಾರವಾಡ ನಗರದಲ್ಲಿ ಈ ಕುರಿತು ಮಾತನಾಡಿದ ಅವರು, ರಾಜ್ಯದ ಆರ್ಥಿಕ ಪರಿಸ್ಥಿತಿ ಬಹಳಷ್ಟು ಹದಗೆಟ್ಟಿದೆ ಹಾಗೂ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿವೆ ಎಂದರು. ಗ್ಯಾರಂಟಿ ಯೋಜನೆಗಳ ಕಡಿತ ಮಾಡಲಾಗುತ್ತಿದೆ ಎಂದು ದೂರಿದ ಅವರು, ಮುಂದೆ ಬರಲಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ಈ ಬೆಳವಣಿಗೆಗಳಿಂದ ರೋಸಿಹೋದ ಜನರು ಮುಂಬರುವ ದಿನಗಳಲ್ಲಿ ವಿಧಾನಸೌಧ ನುಗ್ಗಿ ಪ್ರತಿಭಟನೆ (ಹೊಡೆಯುವ) ನಡೆಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಸೀಮಾ ಮಸೂತಿ ಎಚ್ಚರಿಕೆ ನೀಡಿದರು.
    1
    ಮಾಜಿ ಶಾಸಕಿ ಸೀಮಾ ಮಸೂತಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಸಿದ್ದರಾಮಯ್ಯನವರು ಬಿಟ್ಟಿ ಭಾಗ್ಯಗಳನ್ನು ಘೋಷಣೆ ಮಾಡಿ ರಾಜ್ಯವನ್ನು ಅಧೋಗತಿಗೆ ತಲುಪಿಸಿ ರಾಜಿನಾಮೆ ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ. ಧಾರವಾಡ ನಗರದಲ್ಲಿ ಈ ಕುರಿತು ಮಾತನಾಡಿದ ಅವರು, ರಾಜ್ಯದ ಆರ್ಥಿಕ ಪರಿಸ್ಥಿತಿ ಬಹಳಷ್ಟು ಹದಗೆಟ್ಟಿದೆ ಹಾಗೂ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿವೆ ಎಂದರು.

ಗ್ಯಾರಂಟಿ ಯೋಜನೆಗಳ ಕಡಿತ ಮಾಡಲಾಗುತ್ತಿದೆ ಎಂದು ದೂರಿದ ಅವರು, ಮುಂದೆ ಬರಲಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ಈ ಬೆಳವಣಿಗೆಗಳಿಂದ ರೋಸಿಹೋದ ಜನರು ಮುಂಬರುವ ದಿನಗಳಲ್ಲಿ ವಿಧಾನಸೌಧ ನುಗ್ಗಿ ಪ್ರತಿಭಟನೆ (ಹೊಡೆಯುವ) ನಡೆಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಸೀಮಾ ಮಸೂತಿ ಎಚ್ಚರಿಕೆ ನೀಡಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    3 hrs ago
  • ಹುಬ್ಬಳ್ಳಿಯ ವಿದ್ಯಾನಗರ ವ್ಯಾಪ್ತಿಯಲ್ಲಿ ಯುವತಿಯೊಬ್ಬಳಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದ ಯುವಕನಿಗೆ ಆಕೆ ಚಪ್ಪಲಿ ಏಟು ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾನಗರ ಶಿಗ್ಗಾವಿ ಫ್ಲಾಟ್‌ನಲ್ಲಿರುವ ಬಿಗ್ ಬಾಸ್ ಸಲೂನ್‌ನಲ್ಲಿ ಕೆಲಸ ಮಾಡುವ ಮುಸ್ಲಿಂ ಯುವಕನೊಬ್ಬ, ಯುವತಿಯ ಪ್ರಾಣ ತಿನ್ನುವಂತೆ ಪ್ರೀತಿಸಲು ಪೀಡಿಸುತ್ತಿದ್ದ ಎಂದು ವರದಿಯಾಗಿದೆ. ಈ ಯುವಕನ ಕಿರುಕುಳದಿಂದ ರೋಸಿಹೋದ ಸಂತ್ರಸ್ತ ಯುವತಿ ಮತ್ತು ಆಕೆಯ ಪೋಷಕರು ಸೇರಿ, ಆ ಯುವಕನಿಗೆ ಚಪ್ಪಲಿ ಏಟು ನೀಡಿದ್ದು ಮಾತ್ರವಲ್ಲದೆ, ತೀವ್ರವಾಗಿ ತಳಿದು ಧರ್ಮದ ದೆಟ್ ಹಾಕಿದ್ದಾರೆ.
    1
    ಹುಬ್ಬಳ್ಳಿಯ ವಿದ್ಯಾನಗರ ವ್ಯಾಪ್ತಿಯಲ್ಲಿ ಯುವತಿಯೊಬ್ಬಳಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದ ಯುವಕನಿಗೆ ಆಕೆ ಚಪ್ಪಲಿ ಏಟು ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾನಗರ ಶಿಗ್ಗಾವಿ ಫ್ಲಾಟ್‌ನಲ್ಲಿರುವ ಬಿಗ್ ಬಾಸ್ ಸಲೂನ್‌ನಲ್ಲಿ ಕೆಲಸ ಮಾಡುವ ಮುಸ್ಲಿಂ ಯುವಕನೊಬ್ಬ, ಯುವತಿಯ ಪ್ರಾಣ ತಿನ್ನುವಂತೆ ಪ್ರೀತಿಸಲು ಪೀಡಿಸುತ್ತಿದ್ದ ಎಂದು ವರದಿಯಾಗಿದೆ.

ಈ ಯುವಕನ ಕಿರುಕುಳದಿಂದ ರೋಸಿಹೋದ ಸಂತ್ರಸ್ತ ಯುವತಿ ಮತ್ತು ಆಕೆಯ ಪೋಷಕರು ಸೇರಿ, ಆ ಯುವಕನಿಗೆ ಚಪ್ಪಲಿ ಏಟು ನೀಡಿದ್ದು ಮಾತ್ರವಲ್ಲದೆ, ತೀವ್ರವಾಗಿ ತಳಿದು ಧರ್ಮದ ದೆಟ್ ಹಾಕಿದ್ದಾರೆ.
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.