logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಜನರ ಧ್ವನಿಯಾದವರಿಗೆ ಆರೋಗ್ಯದ ತಪಾಸಣ ಪತ್ರಕರ್ತರಿಗಾಗಿ ಬಸವೇಶ್ವರ ಆಸ್ಪತ್ರೆಯ ವಿಶೇಷ ಕಾಳಜಿ! #ಪತ್ರಕರ್ತರು #ಪತ್ರಕರ್ತರಆರೋಗ್ಯ #ಬಸವೇಶ್ವರಆಸ್ಪತ್ರೆ #ಉಚಿತಆರೋಗ್ಯತಪಾಸಣೆ #ಚಿತ್ರದುರ್ಗ #ವಿಶ್ವಮಧುಮೇಹದಿನ #ಆರೋಗ್ಯಜಾಗೃತಿ #ಮಾಧ್ಯಮಮಿತ್ರರು #ಪತ್ರಕರ್ತರಸಂಘ #ಬಸವೇಶ್ವರಮೆಡಿಕಲ್ಕಾಲೇಜು #ಮಾನವೀಯಕಾಳಜಿ #JournalistsHealth #BasaveshwaraHospital #FreeHealthCheckup #ChitradurgaNews #KannadaNews #MediaFriends #HealthAwareness #Journalists

14 hrs ago
user_Ctownnews16
Ctownnews16
Local News Reporter ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
14 hrs ago

ಜನರ ಧ್ವನಿಯಾದವರಿಗೆ ಆರೋಗ್ಯದ ತಪಾಸಣ ಪತ್ರಕರ್ತರಿಗಾಗಿ ಬಸವೇಶ್ವರ ಆಸ್ಪತ್ರೆಯ ವಿಶೇಷ ಕಾಳಜಿ! #ಪತ್ರಕರ್ತರು #ಪತ್ರಕರ್ತರಆರೋಗ್ಯ #ಬಸವೇಶ್ವರಆಸ್ಪತ್ರೆ #ಉಚಿತಆರೋಗ್ಯತಪಾಸಣೆ #ಚಿತ್ರದುರ್ಗ #ವಿಶ್ವಮಧುಮೇಹದಿನ #ಆರೋಗ್ಯಜಾಗೃತಿ #ಮಾಧ್ಯಮಮಿತ್ರರು #ಪತ್ರಕರ್ತರಸಂಘ #ಬಸವೇಶ್ವರಮೆಡಿಕಲ್ಕಾಲೇಜು #ಮಾನವೀಯಕಾಳಜಿ #JournalistsHealth #BasaveshwaraHospital #FreeHealthCheckup #ChitradurgaNews #KannadaNews #MediaFriends #HealthAwareness #Journalists

More news from ಕರ್ನಾಟಕ and nearby areas
  • ಜನರ ಧ್ವನಿಯಾದವರಿಗೆ ಆರೋಗ್ಯದ ತಪಾಸಣ ಪತ್ರಕರ್ತರಿಗಾಗಿ ಬಸವೇಶ್ವರ ಆಸ್ಪತ್ರೆಯ ವಿಶೇಷ ಕಾಳಜಿ! #ಪತ್ರಕರ್ತರು #ಪತ್ರಕರ್ತರಆರೋಗ್ಯ #ಬಸವೇಶ್ವರಆಸ್ಪತ್ರೆ #ಉಚಿತಆರೋಗ್ಯತಪಾಸಣೆ #ಚಿತ್ರದುರ್ಗ #ವಿಶ್ವಮಧುಮೇಹದಿನ #ಆರೋಗ್ಯಜಾಗೃತಿ #ಮಾಧ್ಯಮಮಿತ್ರರು #ಪತ್ರಕರ್ತರಸಂಘ #ಬಸವೇಶ್ವರಮೆಡಿಕಲ್ಕಾಲೇಜು #ಮಾನವೀಯಕಾಳಜಿ #JournalistsHealth #BasaveshwaraHospital #FreeHealthCheckup #ChitradurgaNews #KannadaNews #MediaFriends #HealthAwareness #Journalists
    1
    ಜನರ ಧ್ವನಿಯಾದವರಿಗೆ ಆರೋಗ್ಯದ ತಪಾಸಣ
ಪತ್ರಕರ್ತರಿಗಾಗಿ ಬಸವೇಶ್ವರ ಆಸ್ಪತ್ರೆಯ ವಿಶೇಷ ಕಾಳಜಿ! 
#ಪತ್ರಕರ್ತರು #ಪತ್ರಕರ್ತರಆರೋಗ್ಯ #ಬಸವೇಶ್ವರಆಸ್ಪತ್ರೆ #ಉಚಿತಆರೋಗ್ಯತಪಾಸಣೆ #ಚಿತ್ರದುರ್ಗ #ವಿಶ್ವಮಧುಮೇಹದಿನ #ಆರೋಗ್ಯಜಾಗೃತಿ #ಮಾಧ್ಯಮಮಿತ್ರರು #ಪತ್ರಕರ್ತರಸಂಘ #ಬಸವೇಶ್ವರಮೆಡಿಕಲ್ಕಾಲೇಜು #ಮಾನವೀಯಕಾಳಜಿ #JournalistsHealth #BasaveshwaraHospital #FreeHealthCheckup #ChitradurgaNews #KannadaNews #MediaFriends #HealthAwareness #Journalists
    user_Ctownnews16
    Ctownnews16
    Local News Reporter ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    14 hrs ago
  • ಭಾರತದ ಸಂವಿಧಾನವನ್ನು ಭಾರತದ ಗ್ರಂಥವನ್ನಾಗಿ ಮಾಡಿ: ಸಿ.ತಿಪ್ಪೇಸ್ವಾಮಿ ಆಗ್ರಹ. ಜಗಳೂರು ಪಟ್ಟಣದ ತಾಲ್ಲೂಕು ಪಂಚಾಯುತಿ ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆಯನ್ನು ಏರ್ಪಡಿಸಲಾಗಿದ್ದ ಸಂವಿಧಾನ ದಿನಾಚರಣೆಯನ್ನು ಕುರಿತಿ ನಿವೃತ್ತಿ ಸಮಾಜ ಕಲ್ಯಾಣ ಇಲಾಖೆಯ ಸಿ. ತಿಪ್ಪೇಸ್ವಾಮಿ ಯವರು ಮಾತನಾಡಿದರು.
    2
    ಭಾರತದ ಸಂವಿಧಾನವನ್ನು ಭಾರತದ ಗ್ರಂಥವನ್ನಾಗಿ ಮಾಡಿ: ಸಿ.ತಿಪ್ಪೇಸ್ವಾಮಿ ಆಗ್ರಹ.
ಜಗಳೂರು ಪಟ್ಟಣದ ತಾಲ್ಲೂಕು ಪಂಚಾಯುತಿ ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆಯನ್ನು ಏರ್ಪಡಿಸಲಾಗಿದ್ದ ಸಂವಿಧಾನ ದಿನಾಚರಣೆಯನ್ನು ಕುರಿತಿ ನಿವೃತ್ತಿ ಸಮಾಜ ಕಲ್ಯಾಣ ಇಲಾಖೆಯ ಸಿ. ತಿಪ್ಪೇಸ್ವಾಮಿ ಯವರು ಮಾತನಾಡಿದರು.
    user_Basavaraja B Press Reporter AP
    Basavaraja B Press Reporter AP
    Social Media Manager ಜಗಳೂರು, ದಾವಣಗೆರೆ, ಕರ್ನಾಟಕ•
    20 hrs ago
  • ### ಹೆಚ್ಚುವರಿ ಹಣ ವಸೂಲಿ ಆರೋಪ: ಜಗಳೂರು ತಹಶೀಲ್ದಾರ್ ಕಚೇರಿಯ ಡಾಟಾ ಎಂಟ್ರಿ ಆಪರೇಟರ್ ವಜಾ **ಜಗಳೂರು:** ವಿವಿಧ ಸರ್ಕಾರಿ ಅರ್ಜಿಗಳ ಸಲ್ಲಿಕೆಗೆ ಸಾರ್ವಜನಿಕರಿಂದ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಜಗಳೂರು ತಹಶೀಲ್ದಾರ್ ಕಚೇರಿಯ ಡಾಟಾ ಎಂಟ್ರಿ ಆಪರೇಟರ್‌ನನ್ನು ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ವಜಾಗೊಳಿಸಿದ್ದಾರೆ. ತಹಶೀಲ್ದಾರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್ ಮನೀಶ್ ಗೌಡ ಅವರು ಹದ್ದುಬಸ್ತು, ಮೋಜಣಿ ಸೇರಿದಂತೆ ವಿವಿಧ ಅರ್ಜಿಗಳ ಪ್ರಕ್ರಿಯೆಗಾಗಿ ನಿಗದಿತ ಶುಲ್ಕಕ್ಕಿಂತ ಹೆಚ್ಚುವರಿಯಾಗಿ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ರೈತ ಸಂಘಟನೆಯ ನೇತೃತ್ವದಲ್ಲಿ ರೈತರು ಹಾಗೂ ಸಂಘಟನೆಯ ಕಾರ್ಯಕರ್ತರು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ, ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಸಾರ್ವಜನಿಕರಿಂದಲೂ ಗಂಭೀರ ದೂರುಗಳು ಬಂದಿದ್ದವು. ಪ್ರತಿಭಟನೆ ಹಾಗೂ ಸಾರ್ವಜನಿಕರ ದೂರುಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ, ಹೆಚ್ಚುವರಿ ಹಣ ವಸೂಲಿ ಆರೋಪದ ಹಿನ್ನೆಲೆಯಲ್ಲಿ ಡಾಟಾ ಎಂಟ್ರಿ ಆಪರೇಟರ್ ಮನೀಶ್ ಗೌಡ ಅವರನ್ನು ಸೇವೆಯಿಂದ ವಜಾಗೊಳಿಸಿ ಕ್ರಮ ಕೈಗೊಂಡಿದೆ. ಈ ಕ್ರಮದಿಂದ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸಗಳಿಗೆ ಅನಗತ್ಯವಾಗಿ ಹೆಚ್ಚುವರಿ ಹಣ ವಸೂಲಿ ಮಾಡುವ ಸಿಬ್ಬಂದಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದಂತಾಗಿದೆ.
    1
    ### ಹೆಚ್ಚುವರಿ ಹಣ ವಸೂಲಿ ಆರೋಪ: ಜಗಳೂರು ತಹಶೀಲ್ದಾರ್ ಕಚೇರಿಯ ಡಾಟಾ ಎಂಟ್ರಿ ಆಪರೇಟರ್ ವಜಾ
**ಜಗಳೂರು:** ವಿವಿಧ ಸರ್ಕಾರಿ ಅರ್ಜಿಗಳ ಸಲ್ಲಿಕೆಗೆ ಸಾರ್ವಜನಿಕರಿಂದ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಜಗಳೂರು ತಹಶೀಲ್ದಾರ್ ಕಚೇರಿಯ ಡಾಟಾ ಎಂಟ್ರಿ ಆಪರೇಟರ್‌ನನ್ನು ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ವಜಾಗೊಳಿಸಿದ್ದಾರೆ.
ತಹಶೀಲ್ದಾರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್ ಮನೀಶ್ ಗೌಡ ಅವರು ಹದ್ದುಬಸ್ತು, ಮೋಜಣಿ ಸೇರಿದಂತೆ ವಿವಿಧ ಅರ್ಜಿಗಳ ಪ್ರಕ್ರಿಯೆಗಾಗಿ ನಿಗದಿತ ಶುಲ್ಕಕ್ಕಿಂತ ಹೆಚ್ಚುವರಿಯಾಗಿ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ಈ ಹಿನ್ನೆಲೆಯಲ್ಲಿ ರಾಜ್ಯ ರೈತ ಸಂಘಟನೆಯ ನೇತೃತ್ವದಲ್ಲಿ ರೈತರು ಹಾಗೂ ಸಂಘಟನೆಯ ಕಾರ್ಯಕರ್ತರು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ, ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಸಾರ್ವಜನಿಕರಿಂದಲೂ ಗಂಭೀರ ದೂರುಗಳು ಬಂದಿದ್ದವು.
ಪ್ರತಿಭಟನೆ ಹಾಗೂ ಸಾರ್ವಜನಿಕರ ದೂರುಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ, ಹೆಚ್ಚುವರಿ ಹಣ ವಸೂಲಿ ಆರೋಪದ ಹಿನ್ನೆಲೆಯಲ್ಲಿ ಡಾಟಾ ಎಂಟ್ರಿ ಆಪರೇಟರ್ ಮನೀಶ್ ಗೌಡ ಅವರನ್ನು ಸೇವೆಯಿಂದ ವಜಾಗೊಳಿಸಿ ಕ್ರಮ ಕೈಗೊಂಡಿದೆ.
ಈ ಕ್ರಮದಿಂದ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸಗಳಿಗೆ ಅನಗತ್ಯವಾಗಿ ಹೆಚ್ಚುವರಿ ಹಣ ವಸೂಲಿ ಮಾಡುವ ಸಿಬ್ಬಂದಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದಂತಾಗಿದೆ.
    user_Chaithra bk
    Chaithra bk
    Local News Reporter ದಾವಣಗೆರೆ, ದಾವಣಗೆರೆ, ಕರ್ನಾಟಕ•
    9 hrs ago
  • ವಿನೋದ ರಾಜ್ ಒಂದು ಮನಮುಟ್ಟುವ ಬೆಂಬಲ #ಆಶಾ #protest #ASHA #AIUTUC ವಿನೋದ ರಾಜ್ ಒಂದು ಮನಮುಟ್ಟುವ ಬೆಂಬಲ #ಆಶಾ #protest #ASHA #AIUTUC
    1
    ವಿನೋದ ರಾಜ್ ಒಂದು ಮನಮುಟ್ಟುವ ಬೆಂಬಲ  #ಆಶಾ #protest #ASHA #AIUTUC
ವಿನೋದ ರಾಜ್ ಒಂದು ಮನಮುಟ್ಟುವ ಬೆಂಬಲ  #ಆಶಾ #protest #ASHA #AIUTUC
    user_ಸುರೇಶ್ ಕೆ ಆರ್
    ಸುರೇಶ್ ಕೆ ಆರ್
    Department of Social Services ಚನ್ನಗಿರಿ, ದಾವಣಗೆರೆ, ಕರ್ನಾಟಕ•
    13 hrs ago
  • # ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ನ.30ರಂದು ಬೆಂಗಳೂರಿನಲ್ಲಿ ರೈತಾಕ್ರೋಶ ಆಂದೋಲನ **ಚನ್ನಗಿರಿ ತಾಲ್ಲೂಕಿನ ರೈತರು, ಅಡಿಕೆ ಬೆಳೆಗಾರರು ಪ್ರತಿಭಟನೆಯಲ್ಲಿ ಭಾಗವಹಿಸಲು ಭಾರತೀಯ ಕಿಸಾನ್ ಸಂಘದ ಕರೆ** **ಚನ್ನಗಿರಿ, ನ.26:** ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನವೆಂಬರ್ 30ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯಮಟ್ಟದ ಬೃಹತ್ ‘ರೈತಾಕ್ರೋಶ ಆಂದೋಲನ’ ಹಮ್ಮಿಕೊಳ್ಳಲಾಗಿದ್ದು, ಚನ್ನಗಿರಿ ತಾಲ್ಲೂಕಿನ ರೈತರು, ಅಡಿಕೆ ಬೆಳೆಗಾರರು ಸೇರಿದಂತೆ ಸಮಸ್ತ ರೈತ ಸಮುದಾಯ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರಭು ಬಿ. ಗೊಲ್ಲರಹಳ್ಳಿ ಮನವಿ ಮಾಡಿದರು. ಗುರುವಾರ ಚನ್ನಗಿರಿ ಪಟ್ಟಣದ ಪತ್ರಿಕಾ ಭವನದಲ್ಲಿ ಭಾರತೀಯ ಕಿಸಾನ್ ಸಂಘದ ಚನ್ನಗಿರಿ ತಾಲ್ಲೂಕು ಸಮಿತಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು. ಹಾಲಿನ ಖರೀದಿ ಬೆಲೆ ಮತ್ತು ಹೈನುಗಾರಿಕೆಗೆ ಸೂಕ್ತ ಪ್ರೋತ್ಸಾಹಧನ, ಕೃಷಿ ಪಂಪ್‌ಸೆಟ್‌ಗಳ ದುರಸ್ತಿಗೆ ಹಳೆಯ ದರದ ವ್ಯವಸ್ಥೆ ಮರುಜಾರಿ, ಕಾಡಂಚಿನ ಪ್ರದೇಶಗಳಲ್ಲಿ ವನ್ಯಜೀವಿಗಳ ಹಾವಳಿ ನಿಯಂತ್ರಣ ಹಾಗೂ ರೈತರಿಗೆ ಹಗಲಿನ ವೇಳೆಯೇ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿದರು. ಕಂದಾಯ ಇಲಾಖೆಯಲ್ಲಿನ ಪಹಣಿ, ಭೂಮಾಪನ, ಪೋಡಿ ಮತ್ತು ಭೂದಾಖಲೆಗಳ ದೋಷಗಳನ್ನು ತ್ವರಿತವಾಗಿ ಸರಿಪಡಿಸಬೇಕು. ರೈತರ ಸಾಲ ಮತ್ತು ಬೆಳೆಸಾಲದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು. ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಂಬಲ ಬೆಲೆ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಪಾರದರ್ಶಕತೆ ಹಾಗೂ ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ದೊರಕಿಸಬೇಕು ಎಂದು ಒತ್ತಾಯಿಸಿದರು. ಇದಲ್ಲದೆ, ನೀರಾವರಿ ಯೋಜನೆಗಳ ಸಮರ್ಪಕ ಅನುಷ್ಠಾನ, ಕೆರೆಗಳ ಹೂಳೆತ್ತುವಿಕೆ, ಪಶ್ಚಿಮ ಘಟ್ಟದ ರೈತರ ಸಮಸ್ಯೆಗಳಿಗೆ ಪರಿಹಾರ, ರೈತರ ಭೂಹಕ್ಕುಗಳ ರಕ್ಷಣೆ ಮತ್ತು ಕೃಷಿ ಯಂತ್ರೋಪಕರಣಗಳಿಗೆ ಸಬ್ಸಿಡಿ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದರು. **“ಕೃಷಿ ಉಳಿದರೆ ದೇಶದ ಆಹಾರ ಭದ್ರತೆ ಉಳಿಯುತ್ತದೆ. ರೈತರ ನ್ಯಾಯಯುತ ಹಕ್ಕುಗಳಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಡಬೇಕು”** ಎಂದು ಕರೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ಅಧ್ಯಕ್ಷ ಡಿ.ಎಂ. ಮಂಜುನಾಥ್, ತಾಲ್ಲೂಕು ಕಾರ್ಯದರ್ಶಿ ಜಿ.ಸಿ. ಕುಮಾರಸ್ವಾಮಿ, ತಾಲ್ಲೂಕು ಕಾರ್ಯಕಾರಿಣಿ ಸದಸ್ಯ ಮಹಾಬಲೇಶ್ ಹಾಗೂ ಪ್ರದೀಪ್ ಉಪಸ್ಥಿತರಿದ್ದರು. ವರದಿ :ದೇವರಾಜ್ ಕೆ ನೆಲ್ಲಿಹಂಕಲು ದಾವಣಗೆರೆ
    4
    # ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ನ.30ರಂದು ಬೆಂಗಳೂರಿನಲ್ಲಿ ರೈತಾಕ್ರೋಶ ಆಂದೋಲನ
 
**ಚನ್ನಗಿರಿ ತಾಲ್ಲೂಕಿನ ರೈತರು, ಅಡಿಕೆ ಬೆಳೆಗಾರರು ಪ್ರತಿಭಟನೆಯಲ್ಲಿ ಭಾಗವಹಿಸಲು ಭಾರತೀಯ ಕಿಸಾನ್ ಸಂಘದ ಕರೆ**
**ಚನ್ನಗಿರಿ, ನ.26:** ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನವೆಂಬರ್ 30ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯಮಟ್ಟದ ಬೃಹತ್ ‘ರೈತಾಕ್ರೋಶ ಆಂದೋಲನ’ ಹಮ್ಮಿಕೊಳ್ಳಲಾಗಿದ್ದು, ಚನ್ನಗಿರಿ ತಾಲ್ಲೂಕಿನ ರೈತರು, ಅಡಿಕೆ ಬೆಳೆಗಾರರು ಸೇರಿದಂತೆ ಸಮಸ್ತ ರೈತ ಸಮುದಾಯ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರಭು ಬಿ. ಗೊಲ್ಲರಹಳ್ಳಿ ಮನವಿ ಮಾಡಿದರು.
ಗುರುವಾರ ಚನ್ನಗಿರಿ ಪಟ್ಟಣದ ಪತ್ರಿಕಾ ಭವನದಲ್ಲಿ ಭಾರತೀಯ ಕಿಸಾನ್ ಸಂಘದ ಚನ್ನಗಿರಿ ತಾಲ್ಲೂಕು ಸಮಿತಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.
ಹಾಲಿನ ಖರೀದಿ ಬೆಲೆ ಮತ್ತು ಹೈನುಗಾರಿಕೆಗೆ ಸೂಕ್ತ ಪ್ರೋತ್ಸಾಹಧನ, ಕೃಷಿ ಪಂಪ್‌ಸೆಟ್‌ಗಳ ದುರಸ್ತಿಗೆ ಹಳೆಯ ದರದ ವ್ಯವಸ್ಥೆ ಮರುಜಾರಿ, ಕಾಡಂಚಿನ ಪ್ರದೇಶಗಳಲ್ಲಿ ವನ್ಯಜೀವಿಗಳ ಹಾವಳಿ ನಿಯಂತ್ರಣ ಹಾಗೂ ರೈತರಿಗೆ ಹಗಲಿನ ವೇಳೆಯೇ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿದರು.
ಕಂದಾಯ ಇಲಾಖೆಯಲ್ಲಿನ ಪಹಣಿ, ಭೂಮಾಪನ, ಪೋಡಿ ಮತ್ತು ಭೂದಾಖಲೆಗಳ ದೋಷಗಳನ್ನು ತ್ವರಿತವಾಗಿ ಸರಿಪಡಿಸಬೇಕು. ರೈತರ ಸಾಲ ಮತ್ತು ಬೆಳೆಸಾಲದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು. ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಂಬಲ ಬೆಲೆ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಪಾರದರ್ಶಕತೆ ಹಾಗೂ ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ದೊರಕಿಸಬೇಕು ಎಂದು ಒತ್ತಾಯಿಸಿದರು.
ಇದಲ್ಲದೆ, ನೀರಾವರಿ ಯೋಜನೆಗಳ ಸಮರ್ಪಕ ಅನುಷ್ಠಾನ, ಕೆರೆಗಳ ಹೂಳೆತ್ತುವಿಕೆ, ಪಶ್ಚಿಮ ಘಟ್ಟದ ರೈತರ ಸಮಸ್ಯೆಗಳಿಗೆ ಪರಿಹಾರ, ರೈತರ ಭೂಹಕ್ಕುಗಳ ರಕ್ಷಣೆ ಮತ್ತು ಕೃಷಿ ಯಂತ್ರೋಪಕರಣಗಳಿಗೆ ಸಬ್ಸಿಡಿ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದರು.
**“ಕೃಷಿ ಉಳಿದರೆ ದೇಶದ ಆಹಾರ ಭದ್ರತೆ ಉಳಿಯುತ್ತದೆ. ರೈತರ ನ್ಯಾಯಯುತ ಹಕ್ಕುಗಳಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಡಬೇಕು”** ಎಂದು ಕರೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ಅಧ್ಯಕ್ಷ ಡಿ.ಎಂ. ಮಂಜುನಾಥ್, ತಾಲ್ಲೂಕು ಕಾರ್ಯದರ್ಶಿ ಜಿ.ಸಿ. ಕುಮಾರಸ್ವಾಮಿ, ತಾಲ್ಲೂಕು ಕಾರ್ಯಕಾರಿಣಿ ಸದಸ್ಯ ಮಹಾಬಲೇಶ್ ಹಾಗೂ ಪ್ರದೀಪ್ ಉಪಸ್ಥಿತರಿದ್ದರು.
ವರದಿ  :ದೇವರಾಜ್ ಕೆ ನೆಲ್ಲಿಹಂಕಲು ದಾವಣಗೆರೆ
    user_ದೇವರಾಜ್ ಕೆ ನೆಲ್ಲಿಹಂಕಲು
    ದೇವರಾಜ್ ಕೆ ನೆಲ್ಲಿಹಂಕಲು
    Local News Reporter ಚನ್ನಗಿರಿ, ದಾವಣಗೆರೆ, ಕರ್ನಾಟಕ•
    14 hrs ago
  • ಗ್ರಾಹಕರ ಗಮನಕ್ಕೆ ಬಾರದಂತೆ ₹17.55 ಲಕ್ಷ ಸಾಲ ಮಂಜೂರು; ₹3.83 ಲಕ್ಷ ವಂಚಕರ ಪಾಲು ದಾವಣಗೆರೆ: ಗ್ರಾಹಕರ ಗಮನಕ್ಕೆ ಬಾರದಂತೆ ಖಾಸಗಿ ಬ್ಯಾಂಕ್‌ನಲ್ಲಿ ₹17.55 ಲಕ್ಷ ಸಾಲ ಮಂಜೂರು ಮಾಡಿಸಿ, ಅದರಲ್ಲಿ ₹3.83 ಲಕ್ಷ ಹಣವನ್ನು ಸೈಬರ್ ವಂಚಕರು ಎಗರಿಸಿರುವ ಘಟನೆ ಚನ್ನಗಿರಿ ಪಟ್ಟಣದಲ್ಲಿ ನಡೆದಿದೆ. ಚನ್ನಗಿರಿ ಪಟ್ಟಣದ ಎಸ್.ವಿ. ರಸ್ತೆ ನಿವಾಸಿಯೊಬ್ಬರಿಗೆ ಸೇರಿದ ಬ್ಯಾಂಕ್ ಖಾತೆಯಲ್ಲಿ ಗ್ರಾಹಕರ ಗಮನಕ್ಕೆ ಬಾರದಂತೆ ₹17.55 ಲಕ್ಷ ಸಾಲ ಮಂಜೂರಾಗಿದೆ. ಬ್ಯಾಂಕ್ ಶುಲ್ಕ ಕಡಿತಗೊಂಡು ₹16.98 ಲಕ್ಷ ಹಣ ಅವರ ಖಾತೆಗೆ ಜಮೆಯಾಗಿದೆ. ಅಕ್ಟೋಬರ್ 1ರಂದು ಸೈಬರ್ ವಂಚಕರು ಹಂತ ಹಂತವಾಗಿ ₹52,108, ₹1.17 ಲಕ್ಷ ಹಾಗೂ ₹30 ಸಾವಿರ ಹಣವನ್ನು ವರ್ಗಾವಣೆ ಮಾಡಿಕೊಂಡಿದ್ದಾರೆ. ಬ್ಯಾಂಕ್ ಸಿಬ್ಬಂದಿ ಕರೆ ಮಾಡಿ ಸಾಲದ ಕುರಿತು ಮಾಹಿತಿ ನೀಡಿದ ಬಳಿಕವಷ್ಟೇ ಗ್ರಾಹಕರಿಗೆ ವಂಚನೆಯ ವಿಚಾರ ತಿಳಿದುಬಂದಿದೆ. ಈ ಸಂಬಂಧ ವಂಚನೆಗೊಳಗಾದ ಗ್ರಾಹಕರು ದಾವಣಗೆರೆ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಗ್ರಾಹಕರ ಗಮನಕ್ಕೆ ಬಾರದಂತೆ ಸಾಲ ಮಂಜೂರಾಗಿರುವುದು ಹಾಗೂ ಹಣ ವರ್ಗಾವಣೆಯಾಗಿರುವ ಪ್ರಕರಣದ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
    1
    ಗ್ರಾಹಕರ ಗಮನಕ್ಕೆ ಬಾರದಂತೆ ₹17.55 ಲಕ್ಷ ಸಾಲ ಮಂಜೂರು; ₹3.83 ಲಕ್ಷ ವಂಚಕರ ಪಾಲು
ದಾವಣಗೆರೆ: ಗ್ರಾಹಕರ ಗಮನಕ್ಕೆ ಬಾರದಂತೆ ಖಾಸಗಿ ಬ್ಯಾಂಕ್‌ನಲ್ಲಿ ₹17.55 ಲಕ್ಷ ಸಾಲ ಮಂಜೂರು ಮಾಡಿಸಿ, ಅದರಲ್ಲಿ ₹3.83 ಲಕ್ಷ ಹಣವನ್ನು ಸೈಬರ್ ವಂಚಕರು ಎಗರಿಸಿರುವ ಘಟನೆ ಚನ್ನಗಿರಿ ಪಟ್ಟಣದಲ್ಲಿ ನಡೆದಿದೆ.
ಚನ್ನಗಿರಿ ಪಟ್ಟಣದ ಎಸ್.ವಿ. ರಸ್ತೆ ನಿವಾಸಿಯೊಬ್ಬರಿಗೆ ಸೇರಿದ ಬ್ಯಾಂಕ್ ಖಾತೆಯಲ್ಲಿ ಗ್ರಾಹಕರ ಗಮನಕ್ಕೆ ಬಾರದಂತೆ ₹17.55 ಲಕ್ಷ ಸಾಲ ಮಂಜೂರಾಗಿದೆ. ಬ್ಯಾಂಕ್ ಶುಲ್ಕ ಕಡಿತಗೊಂಡು ₹16.98 ಲಕ್ಷ ಹಣ ಅವರ ಖಾತೆಗೆ ಜಮೆಯಾಗಿದೆ.
ಅಕ್ಟೋಬರ್ 1ರಂದು ಸೈಬರ್ ವಂಚಕರು ಹಂತ ಹಂತವಾಗಿ ₹52,108, ₹1.17 ಲಕ್ಷ ಹಾಗೂ ₹30 ಸಾವಿರ ಹಣವನ್ನು ವರ್ಗಾವಣೆ ಮಾಡಿಕೊಂಡಿದ್ದಾರೆ. ಬ್ಯಾಂಕ್ ಸಿಬ್ಬಂದಿ ಕರೆ ಮಾಡಿ ಸಾಲದ ಕುರಿತು ಮಾಹಿತಿ ನೀಡಿದ ಬಳಿಕವಷ್ಟೇ ಗ್ರಾಹಕರಿಗೆ ವಂಚನೆಯ ವಿಚಾರ ತಿಳಿದುಬಂದಿದೆ.
ಈ ಸಂಬಂಧ ವಂಚನೆಗೊಳಗಾದ ಗ್ರಾಹಕರು ದಾವಣಗೆರೆ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಗ್ರಾಹಕರ ಗಮನಕ್ಕೆ ಬಾರದಂತೆ ಸಾಲ ಮಂಜೂರಾಗಿರುವುದು ಹಾಗೂ ಹಣ ವರ್ಗಾವಣೆಯಾಗಿರುವ ಪ್ರಕರಣದ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
    user_Prahalad bs
    Prahalad bs
    Local News Reporter ದಾವಣಗೆರೆ, ದಾವಣಗೆರೆ, ಕರ್ನಾಟಕ•
    23 hrs ago
  • ಸಂವಿಧಾನ ದಿನಾಚರಣೆ: ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ. ಶಿವಕುಮಾರ್ ಪುಷ್ಪ ನಮನ ಬೆಂಗಳೂರು: ಸಂವಿಧಾನ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮದ್, ಸಚಿವ ಕೆ.ಎಚ್. ಮುನಿಯಪ್ಪ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಬಸನಗೌಡ ದದ್ದಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
    1
    ಸಂವಿಧಾನ ದಿನಾಚರಣೆ: ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ. ಶಿವಕುಮಾರ್ ಪುಷ್ಪ ನಮನ
ಬೆಂಗಳೂರು: ಸಂವಿಧಾನ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮದ್, ಸಚಿವ ಕೆ.ಎಚ್. ಮುನಿಯಪ್ಪ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಬಸನಗೌಡ ದದ್ದಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
    user_ಹೂಡೇಂ ಮಂಜುನಾಥ
    ಹೂಡೇಂ ಮಂಜುನಾಥ
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    18 hrs ago
  • ಸಂವಿಧಾನ ಸರ್ವರಿಗೂ ಸಮಾನತೆಯ ಹಕ್ಕು ಕಲ್ಪಿಸಿದೆ ತರೀಕೆರೆ: ನ. 26: ಪ್ರಪಂಚದಲ್ಲಿಯೇ ಅತ್ಯಂತ ಶ್ರೇಷ್ಠವಾದ ಸಂವಿಧಾನ ನಮ್ಮದಾಗಿದ್ದು, ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆಯ ಹಕ್ಕು ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಲ್ಪಿಸಿದೆ ಎಂದು ಮಹಾತ್ಮ ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ತರೀಕೆರೆ ಎನ್. ವೆಂಕಟೇಶ್ ಹೇಳಿದರು. ಪಟ್ಟಣದ ಪುರಸಭೆಯಲ್ಲಿ ಗುರುವಾರ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು. ವಿವಿಧ ಜಾತಿ, ಧರ್ಮ ಹಾಗೂ ಭಾಷೆಗಳನ್ನು ಹೊಂದಿರುವ ಭಾರತ ದೇಶದ ವೈವಿಧ್ಯಮಯ ಸಂಸ್ಕೃತಿಯನ್ನು ಎತ್ತಿಹಿಡಿಯುವ ಮೂಲಕ ಸಂವಿಧಾನವು ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಬಲಪಡಿಸಿರುವ ಸಂವಿಧಾನವನ್ನು ರೂಪಿಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ಅವರ ಕೊಡುಗೆ ದೇಶದ ಇತಿಹಾಸದಲ್ಲಿ ಸದಾ ಸ್ಮರಣೀಯವಾಗಿದೆ ಎಂದರು. ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪೌರಕಾರ್ಮಿಕರ ಜೀವನಮಟ್ಟ ಸುಧಾರಣೆಯಾಗಿದ್ದು, ಸರ್ಕಾರದಿಂದ ವಿವಿಧ ಸೌಲಭ್ಯಗಳು ದೊರೆಯುತ್ತಿವೆ ಎಂದು ತಿಳಿಸಿದರು. ಪುರಸಭೆ ಮುಖ್ಯಾಧಿಕಾರಿ ಹರೀಶ್ ಎಂ.ಎನ್. ಮಾತನಾಡಿ, ಸಂವಿಧಾನದ ಆಶಯದಂತೆ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ವ್ಯವಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ದೇಶದಲ್ಲಿ ಕಾನೂನು ಸುವ್ಯವಸ್ಥೆ ಜಾರಿಯಲ್ಲಿರಲು ಸಂವಿಧಾನವೇ ಆಧಾರವಾಗಿದೆ. ನಮ್ಮೆಲ್ಲರ ಹಕ್ಕುಗಳು ಮತ್ತು ಕರ್ತವ್ಯಗಳಿಗೆ ಮಾರ್ಗದರ್ಶಿಯಾಗಿರುವ ಸಂವಿಧಾನವನ್ನು ದೇಶಕ್ಕೆ ಅರ್ಪಿಸಿದ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಸದಾ ಸ್ಮರಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಪರಿಸರ ಅಭಿಯಂತರರಾದ ತಹೇರಾ ತಸ್ನಿಮ್, ಕಚೇರಿ ವ್ಯವಸ್ಥಾಪಕ ಪರಶುರಾಮಪ್ಪ ಎಚ್., ಸಮುದಾಯ ಸಂಘಟನಾಧಿಕಾರಿ ಪ್ರಸನ್ನ ಕುಮಾರ್, ಕಂದಾಯ ಅಧಿಕಾರಿ ಯೋಗೀಶ್ ಡಿ.ಎಲ್., ಹಿರಿಯ ಆರೋಗ್ಯ ನಿರೀಕ್ಷಕ ಪರಮೇಶ್, ಸಂಪತ್, ಲಿಂಗರಾಜು ಕೆ., ಅಂತೋನಿ ಕ್ರೂಸ್, ಪ್ರಕಾಶ್, ಅನಿತಾ, ಕಣ್ಣನ್, ಕಿರಣ್ ಸೇರಿದಂತೆ ಪುರಸಭೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವರದಿ: ಪ್ರದೀಪ್ ಹೆಚ್ ಈ. ತರೀಕೆರೆ
    3
    ಸಂವಿಧಾನ ಸರ್ವರಿಗೂ ಸಮಾನತೆಯ ಹಕ್ಕು ಕಲ್ಪಿಸಿದೆ

ತರೀಕೆರೆ: ನ. 26:
 ಪ್ರಪಂಚದಲ್ಲಿಯೇ ಅತ್ಯಂತ ಶ್ರೇಷ್ಠವಾದ ಸಂವಿಧಾನ ನಮ್ಮದಾಗಿದ್ದು, ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆಯ ಹಕ್ಕು ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಲ್ಪಿಸಿದೆ ಎಂದು ಮಹಾತ್ಮ ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ತರೀಕೆರೆ ಎನ್. ವೆಂಕಟೇಶ್ ಹೇಳಿದರು.

ಪಟ್ಟಣದ ಪುರಸಭೆಯಲ್ಲಿ ಗುರುವಾರ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ವಿವಿಧ ಜಾತಿ, ಧರ್ಮ ಹಾಗೂ ಭಾಷೆಗಳನ್ನು ಹೊಂದಿರುವ ಭಾರತ ದೇಶದ ವೈವಿಧ್ಯಮಯ ಸಂಸ್ಕೃತಿಯನ್ನು ಎತ್ತಿಹಿಡಿಯುವ ಮೂಲಕ ಸಂವಿಧಾನವು ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಬಲಪಡಿಸಿರುವ ಸಂವಿಧಾನವನ್ನು ರೂಪಿಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ಅವರ ಕೊಡುಗೆ ದೇಶದ ಇತಿಹಾಸದಲ್ಲಿ ಸದಾ ಸ್ಮರಣೀಯವಾಗಿದೆ ಎಂದರು.

ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪೌರಕಾರ್ಮಿಕರ ಜೀವನಮಟ್ಟ ಸುಧಾರಣೆಯಾಗಿದ್ದು, ಸರ್ಕಾರದಿಂದ ವಿವಿಧ ಸೌಲಭ್ಯಗಳು ದೊರೆಯುತ್ತಿವೆ ಎಂದು ತಿಳಿಸಿದರು.

ಪುರಸಭೆ ಮುಖ್ಯಾಧಿಕಾರಿ ಹರೀಶ್ ಎಂ.ಎನ್. ಮಾತನಾಡಿ, ಸಂವಿಧಾನದ ಆಶಯದಂತೆ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ವ್ಯವಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ದೇಶದಲ್ಲಿ ಕಾನೂನು ಸುವ್ಯವಸ್ಥೆ ಜಾರಿಯಲ್ಲಿರಲು ಸಂವಿಧಾನವೇ ಆಧಾರವಾಗಿದೆ. ನಮ್ಮೆಲ್ಲರ ಹಕ್ಕುಗಳು ಮತ್ತು ಕರ್ತವ್ಯಗಳಿಗೆ ಮಾರ್ಗದರ್ಶಿಯಾಗಿರುವ ಸಂವಿಧಾನವನ್ನು ದೇಶಕ್ಕೆ ಅರ್ಪಿಸಿದ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಸದಾ ಸ್ಮರಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಪರಿಸರ ಅಭಿಯಂತರರಾದ ತಹೇರಾ ತಸ್ನಿಮ್, ಕಚೇರಿ ವ್ಯವಸ್ಥಾಪಕ ಪರಶುರಾಮಪ್ಪ ಎಚ್., ಸಮುದಾಯ ಸಂಘಟನಾಧಿಕಾರಿ ಪ್ರಸನ್ನ ಕುಮಾರ್, ಕಂದಾಯ ಅಧಿಕಾರಿ ಯೋಗೀಶ್ ಡಿ.ಎಲ್., ಹಿರಿಯ ಆರೋಗ್ಯ ನಿರೀಕ್ಷಕ ಪರಮೇಶ್, ಸಂಪತ್, ಲಿಂಗರಾಜು ಕೆ., ಅಂತೋನಿ ಕ್ರೂಸ್, ಪ್ರಕಾಶ್, ಅನಿತಾ, ಕಣ್ಣನ್, ಕಿರಣ್ ಸೇರಿದಂತೆ ಪುರಸಭೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವರದಿ: ಪ್ರದೀಪ್ ಹೆಚ್ ಈ. ತರೀಕೆರೆ
    user_ಪ್ರದೀಪ್ ಹೆಚ್ ಈ. ತರೀಕೆರೆ
    ಪ್ರದೀಪ್ ಹೆಚ್ ಈ. ತರೀಕೆರೆ
    ತರೀಕೆರೆ, ಚಿಕ್ಕಮಗಳೂರು, ಕರ್ನಾಟಕ•
    12 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.