logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಪಾವಗಡ: ಟೀಚರ್ಸ್ ಕಾಲೋನಿಯಲ್ಲಿ 29ನೇ ವರ್ಷದ ಗಣೇಶೋತ್ಸವ – ಶಾಸಕ ಹೆಚ್.ವಿ. ವೆಂಕಟೇಶ್ ಭೇಟಿ, ಪೂಜೆ ಸಲ್ಲಿಕೆ ಪಾವಗಡ: ಟೀಚರ್ಸ್ ಕಾಲೋನಿಯಲ್ಲಿ 29ನೇ ವರ್ಷದ ಗಣೇಶೋತ್ಸವ – ಶಾಸಕ ಹೆಚ್.ವಿ. ವೆಂಕಟೇಶ್ ಭೇಟಿ, ಪೂಜೆ ಸಲ್ಲಿಕೆ ​ಪಾವಗಡ: ಪಟ್ಟಣದ ಟೀಚರ್ಸ್ ಕಾಲೋನಿಯ 'ವಿನಾಯಕ ಗೆಳೆಯರ ಬಳಗ'ದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 29ನೇ ವರ್ಷದ ಶ್ರದ್ಧಾ-ಭಕ್ತಿಯ ಗಣೇಶೋತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ನೆರವೇರಿತು. ​ಕಾರ್ಯಕ್ರಮಕ್ಕೆ ಕ್ಷೇತ್ರ ಶಾಸಕರಾದ ಹೆಚ್.ವಿ. ವೆಂಕಟೇಶ್ ಅವರು ಆಗಮಿಸಿ, ವಿಘ್ನನಿವಾರಕ ಶ್ರೀ ಮಹಾಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ, ಮಹಾಮಂಗಳಾರತಿ ನೆರವೇರಿಸಿ ಸ್ವಾಮಿಯ ಆಶೀರ್ವಾದ ಪಡೆದರು. ​ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತಿ ಮಾಜಿ ಉಪಾಧ್ಯಕ್ಷ ಐ.ಜಿ. ನಾಗರಾಜ್, ಪುರಸಭಾ ಮಾಜಿ ಅಧ್ಯಕ್ಷ ವೇಲು ರಾಜು, ಗುತ್ತಿಗೆದಾರ ಆರ್.ಎ. ಹನುಮಂತರಾಯಪ್ಪ, ಉದ್ಯಮಿ ಆರ್.ಎ. ಬಾಲಾಜಿ, ರೆಡ್ಡಿ ಬೋರ್‌ವೆಲ್ ವೆಂಕಟೇಶ್, ಥಿಯೇಟರ್ ಎಸ್.ಎ. ಗಂಗಾಧರ್ ಸೇರಿದಂತೆ ಸ್ಥಳೀಯ ಪ್ರಮುಖ ಮುಖಂಡರು, ಸಂಘಟನೆಯ ಕಾರ್ಯಕರ್ತರು ಹಾಗೂ ಅಪಾರ ಸಂಖ್ಯೆಯ ಭಕ್ತಾದಿಗಳು ಉಪಸ್ಥಿತರಿದ್ದು, ಶ್ರೀ ಸ್ವಾಮಿಯ ದರ್ಶನ ಪಡೆದರು. ಪಾವಗಡ ವರದಿ

23 hrs ago
user_Ctv news
Ctv news
Voice of people ಪಾವಗಡ, ತುಮಕೂರು, ಕರ್ನಾಟಕ•
23 hrs ago
ff5ff6c7-69e5-4b53-a000-ce314935c054

ಪಾವಗಡ: ಟೀಚರ್ಸ್ ಕಾಲೋನಿಯಲ್ಲಿ 29ನೇ ವರ್ಷದ ಗಣೇಶೋತ್ಸವ – ಶಾಸಕ ಹೆಚ್.ವಿ. ವೆಂಕಟೇಶ್ ಭೇಟಿ, ಪೂಜೆ ಸಲ್ಲಿಕೆ ಪಾವಗಡ: ಟೀಚರ್ಸ್ ಕಾಲೋನಿಯಲ್ಲಿ 29ನೇ ವರ್ಷದ ಗಣೇಶೋತ್ಸವ – ಶಾಸಕ ಹೆಚ್.ವಿ. ವೆಂಕಟೇಶ್ ಭೇಟಿ, ಪೂಜೆ ಸಲ್ಲಿಕೆ ​ಪಾವಗಡ: ಪಟ್ಟಣದ ಟೀಚರ್ಸ್ ಕಾಲೋನಿಯ 'ವಿನಾಯಕ ಗೆಳೆಯರ ಬಳಗ'ದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 29ನೇ ವರ್ಷದ ಶ್ರದ್ಧಾ-ಭಕ್ತಿಯ ಗಣೇಶೋತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ನೆರವೇರಿತು. ​ಕಾರ್ಯಕ್ರಮಕ್ಕೆ ಕ್ಷೇತ್ರ ಶಾಸಕರಾದ ಹೆಚ್.ವಿ. ವೆಂಕಟೇಶ್ ಅವರು ಆಗಮಿಸಿ, ವಿಘ್ನನಿವಾರಕ ಶ್ರೀ ಮಹಾಗಣಪತಿಗೆ ವಿಶೇಷ

a24be457-1944-4fe3-8594-f6f3d685235b

ಪೂಜೆ ಸಲ್ಲಿಸಿ, ಮಹಾಮಂಗಳಾರತಿ ನೆರವೇರಿಸಿ ಸ್ವಾಮಿಯ ಆಶೀರ್ವಾದ ಪಡೆದರು. ​ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತಿ ಮಾಜಿ ಉಪಾಧ್ಯಕ್ಷ ಐ.ಜಿ. ನಾಗರಾಜ್, ಪುರಸಭಾ ಮಾಜಿ ಅಧ್ಯಕ್ಷ ವೇಲು ರಾಜು, ಗುತ್ತಿಗೆದಾರ ಆರ್.ಎ. ಹನುಮಂತರಾಯಪ್ಪ, ಉದ್ಯಮಿ ಆರ್.ಎ. ಬಾಲಾಜಿ, ರೆಡ್ಡಿ ಬೋರ್‌ವೆಲ್ ವೆಂಕಟೇಶ್, ಥಿಯೇಟರ್ ಎಸ್.ಎ. ಗಂಗಾಧರ್ ಸೇರಿದಂತೆ ಸ್ಥಳೀಯ ಪ್ರಮುಖ ಮುಖಂಡರು, ಸಂಘಟನೆಯ ಕಾರ್ಯಕರ್ತರು ಹಾಗೂ ಅಪಾರ ಸಂಖ್ಯೆಯ ಭಕ್ತಾದಿಗಳು ಉಪಸ್ಥಿತರಿದ್ದು, ಶ್ರೀ ಸ್ವಾಮಿಯ ದರ್ಶನ ಪಡೆದರು. ಪಾವಗಡ ವರದಿ

More news from ಕರ್ನಾಟಕ and nearby areas
  • ಬ್ರೇಕಿಂಗ್ ನ್ಯೂಸ್ : ಪಾವಗಡ ಪೊಲೀಸರ ಭರ್ಜರಿ ಬೇಟೆ: ಬಲೆಗೆ ಬಿದ್ದ ನಕ್ಸಲ್ ವೆಂಕಟೇಶ್
    1
    ಬ್ರೇಕಿಂಗ್ ನ್ಯೂಸ್ : ಪಾವಗಡ ಪೊಲೀಸರ ಭರ್ಜರಿ ಬೇಟೆ: ಬಲೆಗೆ ಬಿದ್ದ ನಕ್ಸಲ್ ವೆಂಕಟೇಶ್
    user_MSMEDIACHANNEL
    MSMEDIACHANNEL
    Social Media Manager ಪಾವಗಡ, ತುಮಕೂರು, ಕರ್ನಾಟಕ•
    20 hrs ago
  • ಪದೇ ಪದೇ ಕಾಣಿಸಿಕೊಳ್ಳುತ್ತಿರುವ ಚಿರತೆಗಳು: ಆತಂಕದಲ್ಲಿ ರೈತರು MADHUGIRI ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ದೊಡ್ಡ ಮಾಲೂರು ಭೂದೇನಹಳ್ಳಿ ವ್ಯಾಪ್ತಿಯಲ್ಲಿ ನಿತ್ಯ ಚಿರತೆಗಳು ಕಂಡುಬರುತ್ತಿದ್ದು ರೈತರು ಆತಂಕಕೊಳಗಾಗಿದ್ದಾರೆ. ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳು ತುರ್ತಾಗಿ ಬೋನು ಅಳವಡಿಸಿ ಚಿರತೆಗಳನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.
    1
    ಪದೇ ಪದೇ ಕಾಣಿಸಿಕೊಳ್ಳುತ್ತಿರುವ ಚಿರತೆಗಳು: ಆತಂಕದಲ್ಲಿ ರೈತರು MADHUGIRI 
ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ದೊಡ್ಡ ಮಾಲೂರು ಭೂದೇನಹಳ್ಳಿ ವ್ಯಾಪ್ತಿಯಲ್ಲಿ ನಿತ್ಯ ಚಿರತೆಗಳು ಕಂಡುಬರುತ್ತಿದ್ದು ರೈತರು ಆತಂಕಕೊಳಗಾಗಿದ್ದಾರೆ. ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳು ತುರ್ತಾಗಿ ಬೋನು ಅಳವಡಿಸಿ ಚಿರತೆಗಳನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.
    user_Madhugiri news
    Madhugiri news
    Local News Reporter ಮಧುಗಿರಿ, ತುಮಕೂರು, ಕರ್ನಾಟಕ•
    12 hrs ago
  • ಕೊರಟಗೆರೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಅಸ್ವಸ್ಥ : ತಾಲ್ಲೂಕು ಅಧಿಕಾರಿ ನಿಂದಿಸಿದ್ದಕ್ಕೆ ಬಿ.ಪಿ ಲೋ ಆಗಿ ಕುಸಿದುಬಿದ್ದು ಹೃದಯಾಘಾತ!!! *ಕೊರಟಗೆರೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಅಸ್ವಸ್ಥ : ತಾಲ್ಲೂಕು ಅಧಿಕಾರಿ ನಿಂದಿಸಿದ್ದಕ್ಕೆ ಬಿ.ಪಿ ಲೋ ಆಗಿ ಕುಸಿದುಬಿದ್ದು ಹೃದಯಾಘಾತ* *ಕೊರಟಗೆರೆ, ಸೆ.16:* ಕೊರಟಗೆರೆ ತಾಲ್ಲೂಕು ಹೊಳವನಹಳ್ಳಿ ಹೋಬಳಿ ಕರಕಲ್ಲಘಟ್ಟ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ರಾಮಕ್ಕ (BLO) ಅವರು ಕರ್ತವ್ಯದ ವೇಳೆ ಬಿ.ಪಿ ಲೋ ಆಗಿ ಕುಸಿದುಬಿದ್ದು ಹೃದಯ ತೊಂದರೆಗೆ ಒಳಗಾಗಿರುವ ಘಟನೆ ನಡೆದಿದೆ. ಹೊಳವನಹಳ್ಳಿ 1ನೇ ಬ್ಲಾಕ್ ವ್ಯಾಪ್ತಿಯಲ್ಲಿ ಬಿ.ಎಲ್.ಓ ಆಗಿ ಕೆಲಸ ನಿರ್ವಹಿಸುತ್ತಿದ್ದ ರಾಮಕ್ಕ ಅವರು ನಿನ್ನೆ ದಿನಾಂಕ 15-09-2026 ರಂದು ಕೈಬಿಟ್ಟ ಮತದಾರರಿಗೆ ನೋಟಿಸ್ ನೀಡುವ ಕಾರ್ಯದಲ್ಲಿದ್ದರು. ಈ ವೇಳೆ ತಾಲ್ಲೂಕು ನಿರ್ವಹಣಾಧಿಕಾರಿ ಅಪೂರ್ವ ಅನಂತರಾಮು ಅವರು ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾದ ರಾಮಕ್ಕ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಹೊಳವನಹಳ್ಳಿಯ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇ.ಸಿ.ಜಿ ಪರೀಕ್ಷೆಯಲ್ಲಿ ಹೃದಯದ ತೊಂದರೆ ಇರುವುದು ದೃಢಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಗಿದೆ. ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ. ಆದರೆ ಕುಟುಂಬದ ಆರ್ಥಿಕ ಸಂಕಷ್ಟದಿಂದಾಗಿ ಅವರು ಇನ್ನೂ ಕೊರಟಗೆರೆ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಗೆ ತಾಲ್ಲೂಕು ಅಧಿಕಾರಿಗಳೇ ನೇರ ಹೊಣೆ ಎಂದು ಅಂಗನವಾಡಿ ನೌಕರರ ಸಂಘ ಆಕ್ರೋಶ ವ್ಯಕ್ತಪಡಿಸಿದ್ದು, ರಾಮಕ್ಕ ಅವರಿಗೆ ಏನಾದರೂ ಅನಾಹುತವಾದರೆ ಅಧಿಕಾರಿಗಳೇ ಜವಾಬ್ದಾರರು ಎಂದು ಎಚ್ಚರಿಕೆ ನೀಡಿದೆ. ಹಾಗೂ ಇನ್ನು ಮುಂದೆ ಯಾವುದೇ ಅಂಗನವಾಡಿ ಕಾರ್ಯಕರ್ತೆಯರಿಗೆ ಈ ರೀತಿ ಮಾನಸಿಕ ಕಿರುಕುಳ ನೀಡದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದೆ.
    4
    ಕೊರಟಗೆರೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಅಸ್ವಸ್ಥ : ತಾಲ್ಲೂಕು ಅಧಿಕಾರಿ ನಿಂದಿಸಿದ್ದಕ್ಕೆ ಬಿ.ಪಿ ಲೋ ಆಗಿ ಕುಸಿದುಬಿದ್ದು ಹೃದಯಾಘಾತ!!! 
*ಕೊರಟಗೆರೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಅಸ್ವಸ್ಥ : ತಾಲ್ಲೂಕು ಅಧಿಕಾರಿ ನಿಂದಿಸಿದ್ದಕ್ಕೆ ಬಿ.ಪಿ ಲೋ ಆಗಿ ಕುಸಿದುಬಿದ್ದು ಹೃದಯಾಘಾತ*
*ಕೊರಟಗೆರೆ, ಸೆ.16:* ಕೊರಟಗೆರೆ ತಾಲ್ಲೂಕು ಹೊಳವನಹಳ್ಳಿ ಹೋಬಳಿ ಕರಕಲ್ಲಘಟ್ಟ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ರಾಮಕ್ಕ (BLO) ಅವರು ಕರ್ತವ್ಯದ ವೇಳೆ ಬಿ.ಪಿ ಲೋ ಆಗಿ ಕುಸಿದುಬಿದ್ದು ಹೃದಯ ತೊಂದರೆಗೆ ಒಳಗಾಗಿರುವ ಘಟನೆ ನಡೆದಿದೆ.
ಹೊಳವನಹಳ್ಳಿ 1ನೇ ಬ್ಲಾಕ್ ವ್ಯಾಪ್ತಿಯಲ್ಲಿ ಬಿ.ಎಲ್.ಓ ಆಗಿ ಕೆಲಸ ನಿರ್ವಹಿಸುತ್ತಿದ್ದ ರಾಮಕ್ಕ ಅವರು ನಿನ್ನೆ ದಿನಾಂಕ 15-09-2026 ರಂದು ಕೈಬಿಟ್ಟ ಮತದಾರರಿಗೆ ನೋಟಿಸ್ ನೀಡುವ ಕಾರ್ಯದಲ್ಲಿದ್ದರು. ಈ ವೇಳೆ ತಾಲ್ಲೂಕು ನಿರ್ವಹಣಾಧಿಕಾರಿ ಅಪೂರ್ವ ಅನಂತರಾಮು ಅವರು ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾದ ರಾಮಕ್ಕ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.
ತಕ್ಷಣ ಅವರನ್ನು ಹೊಳವನಹಳ್ಳಿಯ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇ.ಸಿ.ಜಿ ಪರೀಕ್ಷೆಯಲ್ಲಿ ಹೃದಯದ ತೊಂದರೆ ಇರುವುದು ದೃಢಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಗಿದೆ. ವೈದ್ಯರು ಪ್ರಥಮ ಚಿಕಿತ್ಸೆ ನೀಡಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ. ಆದರೆ ಕುಟುಂಬದ ಆರ್ಥಿಕ ಸಂಕಷ್ಟದಿಂದಾಗಿ ಅವರು ಇನ್ನೂ ಕೊರಟಗೆರೆ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಘಟನೆಗೆ ತಾಲ್ಲೂಕು ಅಧಿಕಾರಿಗಳೇ ನೇರ ಹೊಣೆ ಎಂದು ಅಂಗನವಾಡಿ ನೌಕರರ ಸಂಘ ಆಕ್ರೋಶ ವ್ಯಕ್ತಪಡಿಸಿದ್ದು, ರಾಮಕ್ಕ ಅವರಿಗೆ ಏನಾದರೂ ಅನಾಹುತವಾದರೆ ಅಧಿಕಾರಿಗಳೇ ಜವಾಬ್ದಾರರು ಎಂದು ಎಚ್ಚರಿಕೆ ನೀಡಿದೆ. ಹಾಗೂ ಇನ್ನು ಮುಂದೆ ಯಾವುದೇ ಅಂಗನವಾಡಿ ಕಾರ್ಯಕರ್ತೆಯರಿಗೆ ಈ ರೀತಿ ಮಾನಸಿಕ ಕಿರುಕುಳ ನೀಡದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದೆ.
    user_ವಿಜಯ್ ಶಂಕರ್
    ವಿಜಯ್ ಶಂಕರ್
    Local News Reporter ಕೊರಟಗೆರೆ, ತುಮಕೂರು, ಕರ್ನಾಟಕ•
    7 hrs ago
  • ಗೌರಸಮುದ್ರ ಮಾರೆಮ್ಮ ಜಾತ್ರೆಯಲ್ಲಿ ಶಾಸಕರು ಎನ್. ವೈ. ಗೋಪಾಲಕೃಷ್ಣ ಭಾಗಿ .ಗೌರಸಮುದ್ರ ಜಾತ್ರೆಯಲ್ಲಿ ಶಾಸಕ ಎನ್. ವೈ. ಗೋಪಾಲಕೃಷ್ಣ ಭಾಗಿ ಮೊಳಕಾಲ್ಮುರು ಸುದ್ದಿ. ಗೌರಸಮುದ್ರ ಗ್ರಾಮದಲ್ಲಿ ನಡೆಯುತ್ತಿರುವ ಗೌರಸಮುದ್ರ ಜಾತ್ರೆ ಅದ್ದೂರಿಯಾಗಿ ನಡೆಯುತ್ತಿದ್ದು, ಮೊಳಕಾಲ್ಮುರು ಕ್ಷೇತ್ರದ ಶಾಸಕರಾದ ಎನ್. ವೈ. ಗೋಪಾಲಕೃಷ್ಣ ಅವರು ಜಾತ್ರೆಯಲ್ಲಿ ಭಾಗವಹಿಸಿ ದೇವಿಯ ದರ್ಶನ ಪಡೆದುಕೊಂಡರು. ಈ ಸಂದರ್ಭದಲ್ಲಿ ಜಾತ್ರೆಯ ಕಾರ್ಯಕ್ರಮಗಳ ಕುರಿತು ಅಧಿಕಾರಿಗಳು ಹಾಗೂ ಆಯೋಜಕರಿಂದ ಮಾಹಿತಿ ಪಡೆದ ಶಾಸಕರು, ಜಾತ್ರೆಗೆ ಆಗಮಿಸುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಕುರಿತು ಪರಿಶೀಲಿಸಿದರು. ವಿಶೇಷವಾಗಿ ಕುಡಿಯುವ ನೀರಿನ ವ್ಯವಸ್ಥೆ, ವೈದ್ಯಕೀಯ ನೆರವು ಹಾಗೂ ಮೆಡಿಕಲ್ ಕಿಟ್‌ಗಳ ಲಭ್ಯತೆ, ಪೊಲೀಸ್ ಭದ್ರತಾ ವ್ಯವಸ್ಥೆ ಮತ್ತು ಜಾತ್ರಾ ಸ್ಥಳದ ಶುಚಿತ್ವದ ಬಗ್ಗೆ ಮಾಹಿತಿ ಪಡೆದುಕೊಂಡರು. ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ಹಾಗೂ ಸ್ವಚ್ಛತೆ ಮತ್ತು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದರು. ಜಾತ್ರೆಯು ಶಾಂತಿಯುತವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಲು ಅಧಿಕಾರಿಗಳು ಮತ್ತು ಆಯೋಜಕರು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಶಾಸಕರು ತಿಳಿಸಿದರು. ಜಾತ್ರೆಯಲ್ಲಿ ತಳಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ನಾಗೇಶ್ ರೆಡ್ಡಿ, ಹಿರೇಹಳ್ಳಿ ವಕೀಲರು ಮಲ್ಲೇಶಿ ರಾಂಪುರ ಸಿದ್ದಬಸಪ್ಪ, ಶ್ರೀಕಾಂತ, ಪೊಲೀಸ್ ಇಲಾಖೆ ಸಾವಿರಾರು ಭಕ್ತರು ಜಾತ್ರೆಯಲ್ಲಿ ಭಾಗವಹಿಸಿ ದೇವಿಯ ಧರ್ಶನ ಪಡೆದರು.
    1
    ಗೌರಸಮುದ್ರ ಮಾರೆಮ್ಮ ಜಾತ್ರೆಯಲ್ಲಿ ಶಾಸಕರು ಎನ್. ವೈ. ಗೋಪಾಲಕೃಷ್ಣ ಭಾಗಿ
.ಗೌರಸಮುದ್ರ ಜಾತ್ರೆಯಲ್ಲಿ ಶಾಸಕ ಎನ್. ವೈ. ಗೋಪಾಲಕೃಷ್ಣ ಭಾಗಿ
ಮೊಳಕಾಲ್ಮುರು ಸುದ್ದಿ.
ಗೌರಸಮುದ್ರ ಗ್ರಾಮದಲ್ಲಿ ನಡೆಯುತ್ತಿರುವ ಗೌರಸಮುದ್ರ ಜಾತ್ರೆ ಅದ್ದೂರಿಯಾಗಿ ನಡೆಯುತ್ತಿದ್ದು, ಮೊಳಕಾಲ್ಮುರು ಕ್ಷೇತ್ರದ ಶಾಸಕರಾದ ಎನ್. ವೈ. ಗೋಪಾಲಕೃಷ್ಣ ಅವರು ಜಾತ್ರೆಯಲ್ಲಿ ಭಾಗವಹಿಸಿ ದೇವಿಯ ದರ್ಶನ ಪಡೆದುಕೊಂಡರು.
ಈ ಸಂದರ್ಭದಲ್ಲಿ ಜಾತ್ರೆಯ ಕಾರ್ಯಕ್ರಮಗಳ ಕುರಿತು ಅಧಿಕಾರಿಗಳು ಹಾಗೂ ಆಯೋಜಕರಿಂದ ಮಾಹಿತಿ ಪಡೆದ ಶಾಸಕರು, ಜಾತ್ರೆಗೆ ಆಗಮಿಸುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಕುರಿತು ಪರಿಶೀಲಿಸಿದರು. ವಿಶೇಷವಾಗಿ ಕುಡಿಯುವ ನೀರಿನ ವ್ಯವಸ್ಥೆ, ವೈದ್ಯಕೀಯ ನೆರವು ಹಾಗೂ ಮೆಡಿಕಲ್ ಕಿಟ್‌ಗಳ ಲಭ್ಯತೆ, ಪೊಲೀಸ್ ಭದ್ರತಾ ವ್ಯವಸ್ಥೆ ಮತ್ತು ಜಾತ್ರಾ ಸ್ಥಳದ ಶುಚಿತ್ವದ ಬಗ್ಗೆ ಮಾಹಿತಿ ಪಡೆದುಕೊಂಡರು.
ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ಹಾಗೂ ಸ್ವಚ್ಛತೆ ಮತ್ತು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದರು.
ಜಾತ್ರೆಯು ಶಾಂತಿಯುತವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಲು ಅಧಿಕಾರಿಗಳು ಮತ್ತು ಆಯೋಜಕರು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಶಾಸಕರು ತಿಳಿಸಿದರು.
ಜಾತ್ರೆಯಲ್ಲಿ ತಳಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ನಾಗೇಶ್ ರೆಡ್ಡಿ, ಹಿರೇಹಳ್ಳಿ ವಕೀಲರು ಮಲ್ಲೇಶಿ ರಾಂಪುರ ಸಿದ್ದಬಸಪ್ಪ, ಶ್ರೀಕಾಂತ, ಪೊಲೀಸ್ ಇಲಾಖೆ ಸಾವಿರಾರು ಭಕ್ತರು ಜಾತ್ರೆಯಲ್ಲಿ ಭಾಗವಹಿಸಿ ದೇವಿಯ ಧರ್ಶನ ಪಡೆದರು.
    user_Basavaraj
    Basavaraj
    Local News Reporter ಮೊಳಕಾಲ್ಮೂರು, ಚಿತ್ರದುರ್ಗ, ಕರ್ನಾಟಕ•
    13 hrs ago
  • ತಮಾಷೆ ಹಾಗೂ ಆರೋಗ್ಯಕರವಾದಂತ ವಿಡಿಯೋ ಇದು ನೋಡಿ #onlinetv24x7
    1
    ತಮಾಷೆ ಹಾಗೂ ಆರೋಗ್ಯಕರವಾದಂತ ವಿಡಿಯೋ ಇದು ನೋಡಿ  #onlinetv24x7
    user_Onlinetv24x7
    Onlinetv24x7
    ತುಮಕೂರು, ತುಮಕೂರು, ಕರ್ನಾಟಕ•
    23 hrs ago
  • ಇ ಗೌರಸಮುದ್ರ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಸಿಡಿ ಉತ್ಸವಕ್ಕೆ ವಿಘ್ನ! ಗೌರಸಮುದ್ರ ಮಾರಮ್ಮ ದೊಡ್ಡ ಜಾತ್ರೆಯ ನಂತರ ಎರಡನೇ ದಿನ ಸಿಡಿ ಉತ್ಸವ ನಡೆಸುವ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತದೆ ಇಂದು ಗೌರಸಮುದ್ರ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಸಿಡಿ ಉತ್ಸವಕ್ಕೆ ವಿಘ್ನ! ಚಳ್ಳಕೆರೆ ತಾಲೂಕಿನ ಗೌರಸಮುದ್ರ ಗ್ರಾಮದ ಶ್ರೀ ಮಾರಮ್ಮದೇವಿ ದೇವಸ್ಥಾನದ ಆವರಣದಲ್ಲಿ ಬುಧವಾರ ಸಂಜೆ ನಾಲ್ಕು ಗಂಟೆಗೆ ಸಿಡಿ ಉತ್ಸವ ನಡೆಯಬೇಕಿತ್ತು. ಸಿಡಿ ಉತ್ಸವದಲ್ಲಿ ಭಾಗವಹಿಸಲು ಕೋನಸಾಗರ ಗ್ರಾಮದ ಭಕ್ತರು ಬರಿಗಾಲಿನಲ್ಲಿ ನಡೆದುಕೊಂಡು ಗೌರಸಮುದ್ರಕ್ಕೆ ಆಗಮಿಸಿದ್ದರು. ಇನ್ನೇನು ಸಿಡಿ ಉತ್ಸವ ಆರಂಭವಾಗಬೇಕು ಎನ್ನುವಷ್ಟರಲ್ಲೇ… ಸಿಡಿ ಮರದ ತುಂಡೊಂದು ಮುರಿದು ಬಿದ್ದಿದೆ! ಬಹುಶಹ ಸಿಡಿ ಮರ ಹಳೆಯದಾಗಿದ್ದು ಇದರಿಂದ ಮುರಿದು ಬಿದ್ದಿರುವ ಶಂಕೆ ವ್ಯಕ್ತವಾಗಿದೆ ಇದರಿಂದ ಸಿಡಿ ಉತ್ಸವಕ್ಕೆ ವಿಘ್ನ ಎದುರಾಗಿದ್ದು, ಭಕ್ತರಲ್ಲಿ ಆತಂಕ ಮನೆ ಮಾಡಿದೆ. ಮತ್ತೊಮ್ಮೆ ಸಿಡಿ ಮರವನ್ನು ಸರಿಪಡಿಸಿ ಕಟ್ಟುವ ಪ್ರಯತ್ನ ನಡೆಸಲಾಗಿದ್ದು, ಮತ್ತೆ ಸಮಸ್ಯೆ ಉಂಟಾಗಿದ್ದು ಹಿನ್ನೆಲೆಯಲ್ಲಿ ಭಕ್ತರು ಆತಂಕಗೊಂಡಿದ್ದಾರೆ. ಗೌರಸಮುದ್ರ ಮಾರಮ್ಮದೇವಿಯ ಜಾತ್ರೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸಿಡಿ ಮರ ತುಂಡಾಗಿ ಉತ್ಸವಕ್ಕೆ ವಿಘ್ನ ಉಂಟಾಗಿದೆ ಎಂದು ಗ್ರಾಮದ ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಸಂದರ್ಭದಲ್ಲಿ ಯಾವುದೇ ಅಪಾಯವಾಗಿಲ್ಲ. ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.
    1
    ಇ ಗೌರಸಮುದ್ರ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಸಿಡಿ ಉತ್ಸವಕ್ಕೆ ವಿಘ್ನ!
ಗೌರಸಮುದ್ರ ಮಾರಮ್ಮ ದೊಡ್ಡ ಜಾತ್ರೆಯ ನಂತರ ಎರಡನೇ ದಿನ ಸಿಡಿ ಉತ್ಸವ ನಡೆಸುವ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತದೆ
ಇಂದು ಗೌರಸಮುದ್ರ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಸಿಡಿ ಉತ್ಸವಕ್ಕೆ ವಿಘ್ನ!
ಚಳ್ಳಕೆರೆ ತಾಲೂಕಿನ ಗೌರಸಮುದ್ರ ಗ್ರಾಮದ ಶ್ರೀ ಮಾರಮ್ಮದೇವಿ ದೇವಸ್ಥಾನದ ಆವರಣದಲ್ಲಿ ಬುಧವಾರ ಸಂಜೆ ನಾಲ್ಕು ಗಂಟೆಗೆ ಸಿಡಿ ಉತ್ಸವ ನಡೆಯಬೇಕಿತ್ತು.
ಸಿಡಿ ಉತ್ಸವದಲ್ಲಿ ಭಾಗವಹಿಸಲು ಕೋನಸಾಗರ ಗ್ರಾಮದ ಭಕ್ತರು ಬರಿಗಾಲಿನಲ್ಲಿ ನಡೆದುಕೊಂಡು ಗೌರಸಮುದ್ರಕ್ಕೆ ಆಗಮಿಸಿದ್ದರು.
ಇನ್ನೇನು ಸಿಡಿ ಉತ್ಸವ ಆರಂಭವಾಗಬೇಕು ಎನ್ನುವಷ್ಟರಲ್ಲೇ… ಸಿಡಿ ಮರದ ತುಂಡೊಂದು ಮುರಿದು ಬಿದ್ದಿದೆ!
ಬಹುಶಹ ಸಿಡಿ ಮರ ಹಳೆಯದಾಗಿದ್ದು ಇದರಿಂದ ಮುರಿದು ಬಿದ್ದಿರುವ ಶಂಕೆ ವ್ಯಕ್ತವಾಗಿದೆ
ಇದರಿಂದ ಸಿಡಿ ಉತ್ಸವಕ್ಕೆ ವಿಘ್ನ ಎದುರಾಗಿದ್ದು, ಭಕ್ತರಲ್ಲಿ ಆತಂಕ ಮನೆ ಮಾಡಿದೆ.
ಮತ್ತೊಮ್ಮೆ ಸಿಡಿ ಮರವನ್ನು ಸರಿಪಡಿಸಿ ಕಟ್ಟುವ ಪ್ರಯತ್ನ ನಡೆಸಲಾಗಿದ್ದು,   ಮತ್ತೆ ಸಮಸ್ಯೆ ಉಂಟಾಗಿದ್ದು ಹಿನ್ನೆಲೆಯಲ್ಲಿ ಭಕ್ತರು ಆತಂಕಗೊಂಡಿದ್ದಾರೆ.
ಗೌರಸಮುದ್ರ ಮಾರಮ್ಮದೇವಿಯ ಜಾತ್ರೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸಿಡಿ ಮರ ತುಂಡಾಗಿ ಉತ್ಸವಕ್ಕೆ ವಿಘ್ನ ಉಂಟಾಗಿದೆ ಎಂದು ಗ್ರಾಮದ ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಸಂದರ್ಭದಲ್ಲಿ ಯಾವುದೇ ಅಪಾಯವಾಗಿಲ್ಲ. ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • ಧಾರ್ಮಿಕ ಜಾತ್ರೆ ಮತ್ತು ಆಚರಣೆಗಳು ಭಾವೈಕ್ಯತೆಗೆ ಪೂರಕ ಎಂದು ಮೊಣಕಾಲ್ಮೂರು ಬಿಜೆಪಿ ಮುಖಂಡ ಏನ್ ರಘು ಮೂರ್ತಿ ಹೇಳಿದರು ಧಾರ್ಮಿಕ ಜಾತ್ರೆ ಮತ್ತು ಆಚರಣೆಗಳು ಭಾವೈಕ್ಯತೆಗೆ ಪೂರಕ ಎಂದು ಮೊಣಕಾಲ್ಮೂರು ಬಿಜೆಪಿ ಮುಖಂಡ ಏನ್ ರಘು ಮೂರ್ತಿ ಹೇಳಿದರು ಅವರು ಇಂದು ಗೌರಸಮದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿ ಇಡೀ ದಕ್ಷಿಣ ಭಾರತದಲ್ಲಿ ಬುಡಕಟ್ಟು ಸಂಸ್ಕೃತಿ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರವಾದ ಈ ದೇವಸ್ಥಾನ ಐತಿಹಾಸಿಕ ಪರಂಪರೆಗೆ ಸಾಕ್ಷಿಯಾಗಿದೆ ಭಕ್ತರ ಕಠಿಣ ವ್ರತ ಮತ್ತು ಭಕ್ತಿಯ ನಂಬಿಕೆ ಮುಗಿಲು ಮುಟ್ಟಿದೆ ಇಂತಹ ಪವಿತ್ರ ದೇವಸ್ಥಾನಕ್ಕೆ ಇಲ್ಲಿ ಬರುವಂತ ಭಕ್ತಾದಿಗಳಿಗೆ ಜಿಲ್ಲಾಡಳಿತ ಮೂಲಭೂತ ಸೌಕರ್ಯವನ್ನು ಒದಗಿಸಬೇಕೆಂಬುದು ಭಕ್ತಾದಿಗಳ ಒತ್ತಾಸೆಯಾಗಿದೆ ಸರಿ ಸುಮಾರು ನಾಲ್ಕರಿಂದ ಐದು ಲಕ್ಷ ಬಕ್ತಾದಿಗಳು ಬರುವಂತಹ ಈ ಶ್ರದ್ದಾ ಕೇಂದ್ರಕ್ಕೆ ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿದರು ಈ ದೇವಿಯ ಜಾತ್ರೆ ಮುಖಾಂತರ ಭಕ್ತಾದಿಗಳಿಂದ ಸಲ್ಲುವಂತಹ ಪ್ರತಿಯೊಂದು ಸಂಕಲ್ಪಗಳು ಈ ನಾಡಿನ ಜನತೆಗೆ ಸುಖ ಶಾಂತಿ ನೆಮ್ಮದಿ ಮತ್ತು ಸಮೃದ್ಧಿಯನ್ನು ಜಗನ್ಮಾತೆಯಾದ ಮಾರಮ್ಮ ದೇವಿ ಕರುಣಿಸಲಿ ಇದರ ಮುಖಾಂತರ ಈ ಭಾಗದ ಜನ ಜೀವನದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ಬದಲಾವಣೆ ತರಲಿ ಎಂದು ಆಶಿಸಿದರು ಸಂದರ್ಭದಲ್ಲಿ ಜಿಲ್ಲಾ ದಿಶಾ ಕಮಿ ಟಿಯ ಸದಸ್ಯ ಹೊನ್ನೂರ್ ಗೋವಿಂದಪ್ಪ ಬಿಜೆಪಿ ಮುಖಂಡರಾದ ಶ್ರೀನಿವಾಸ್ ಪ್ರದೀಪ್ ಕುಮಾರ್ ವಕೀಲರದ ಶಶಿ ಕುಮಾರ್ ಮಾಜಿ ಪ್ರದಾನ ಜಿ ಟಿ ಮಾರಣ್ಣ ಮುಂತಾದವರು ಹಾಜರಿದ್ದರು
    1
    ಧಾರ್ಮಿಕ ಜಾತ್ರೆ ಮತ್ತು ಆಚರಣೆಗಳು ಭಾವೈಕ್ಯತೆಗೆ ಪೂರಕ ಎಂದು ಮೊಣಕಾಲ್ಮೂರು ಬಿಜೆಪಿ ಮುಖಂಡ ಏನ್ ರಘು ಮೂರ್ತಿ ಹೇಳಿದರು 
ಧಾರ್ಮಿಕ ಜಾತ್ರೆ ಮತ್ತು ಆಚರಣೆಗಳು ಭಾವೈಕ್ಯತೆಗೆ ಪೂರಕ ಎಂದು ಮೊಣಕಾಲ್ಮೂರು ಬಿಜೆಪಿ ಮುಖಂಡ ಏನ್ ರಘು ಮೂರ್ತಿ ಹೇಳಿದರು 
ಅವರು ಇಂದು ಗೌರಸಮದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿ ಇಡೀ ದಕ್ಷಿಣ ಭಾರತದಲ್ಲಿ ಬುಡಕಟ್ಟು ಸಂಸ್ಕೃತಿ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರವಾದ ಈ ದೇವಸ್ಥಾನ ಐತಿಹಾಸಿಕ ಪರಂಪರೆಗೆ ಸಾಕ್ಷಿಯಾಗಿದೆ ಭಕ್ತರ ಕಠಿಣ ವ್ರತ ಮತ್ತು ಭಕ್ತಿಯ ನಂಬಿಕೆ ಮುಗಿಲು ಮುಟ್ಟಿದೆ ಇಂತಹ ಪವಿತ್ರ ದೇವಸ್ಥಾನಕ್ಕೆ ಇಲ್ಲಿ ಬರುವಂತ ಭಕ್ತಾದಿಗಳಿಗೆ ಜಿಲ್ಲಾಡಳಿತ ಮೂಲಭೂತ ಸೌಕರ್ಯವನ್ನು ಒದಗಿಸಬೇಕೆಂಬುದು ಭಕ್ತಾದಿಗಳ ಒತ್ತಾಸೆಯಾಗಿದೆ 
ಸರಿ ಸುಮಾರು ನಾಲ್ಕರಿಂದ ಐದು ಲಕ್ಷ ಬಕ್ತಾದಿಗಳು ಬರುವಂತಹ ಈ ಶ್ರದ್ದಾ ಕೇಂದ್ರಕ್ಕೆ ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿದರು
ಈ ದೇವಿಯ ಜಾತ್ರೆ ಮುಖಾಂತರ ಭಕ್ತಾದಿಗಳಿಂದ ಸಲ್ಲುವಂತಹ ಪ್ರತಿಯೊಂದು ಸಂಕಲ್ಪಗಳು ಈ ನಾಡಿನ ಜನತೆಗೆ ಸುಖ ಶಾಂತಿ ನೆಮ್ಮದಿ ಮತ್ತು ಸಮೃದ್ಧಿಯನ್ನು ಜಗನ್ಮಾತೆಯಾದ ಮಾರಮ್ಮ ದೇವಿ ಕರುಣಿಸಲಿ ಇದರ ಮುಖಾಂತರ ಈ ಭಾಗದ ಜನ ಜೀವನದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ಬದಲಾವಣೆ ತರಲಿ ಎಂದು ಆಶಿಸಿದರು 
ಸಂದರ್ಭದಲ್ಲಿ ಜಿಲ್ಲಾ ದಿಶಾ ಕಮಿ ಟಿಯ ಸದಸ್ಯ ಹೊನ್ನೂರ್ ಗೋವಿಂದಪ್ಪ ಬಿಜೆಪಿ ಮುಖಂಡರಾದ ಶ್ರೀನಿವಾಸ್ ಪ್ರದೀಪ್ ಕುಮಾರ್ ವಕೀಲರದ ಶಶಿ ಕುಮಾರ್ ಮಾಜಿ ಪ್ರದಾನ ಜಿ ಟಿ ಮಾರಣ್ಣ ಮುಂತಾದವರು ಹಾಜರಿದ್ದರು
    user_Nagesh BR Durgavara
    Nagesh BR Durgavara
    Photographer Chitradurga, Karnataka•
    3 hrs ago
  • ಗೌರಸಮುದ್ರ ಮಾರಮ್ಮ ಜಾತ್ರೆ ಕುರಿತು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಎಂ .ಓಬಣ್ಣ ಏನ್ ಹೇಳಿದ್ರು ಗೊತ್ತೇ.
    1
    ಗೌರಸಮುದ್ರ ಮಾರಮ್ಮ ಜಾತ್ರೆ ಕುರಿತು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಎಂ .ಓಬಣ್ಣ ಏನ್ ಹೇಳಿದ್ರು ಗೊತ್ತೇ.
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    14 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.