ತಾಲೂಕ ವೀಕ್ಷಣೆ ಮುಖ್ಯವಲ್ಲ ರೈತರಿಗೆ ಪರಿಷ್ಕಾರವೇ ಮುಖ್ಯ ಬಸವರೆಡ್ಡಿ ತಾಲೂಕು ವೀಕ್ಷಣೆ ಮುಖ್ಯವಲ್ಲ, ರೈತರಿಗೆ ಪರಿಹಾರ ಬೇಕು ಬಸವರೆಡ್ಡಿ. ಮೊಳಕಾಲ್ಮುರು ಸುದ್ದಿ ಕಾಂಗ್ರೆಸ್ ಪಕ್ಷದ ಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್ ರವರು , ಬಿಜೆಪಿ ಪಕ್ಷದ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ರವರು ಹಾಗೂ ಕಾಂಗ್ರೆಸ್ ಹಿರಿಯ ನಾಯಕರು ಸ್ಥಳ ವೀಕ್ಷಣೆ ಮಾಡಲು ಮಾತ್ರ ಬಂದಿದ್ದಾರೆ ಆದರೆ ರೈತರ ಸಮಸ್ಯೆಗಳನ್ನು ಆಲಿಸುತ್ತಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಕಾರ್ಯಾಧ್ಯಕ್ಷರಾದ ಬೇಡರೆಡ್ಡಿ ಹಳ್ಳಿಯ ಬಸವ ರೆಡ್ಡಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ತಾಲೂಕಿನ ನಾಗಸಮುದ್ರ ಗ್ರಾಮದಲ್ಲಿ ಇಂದು ನೂತನವಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಇವರು ಮಾತನಾಡಿದರು. ಕಾಂಗ್ರೆಸ್ ಹಾಗೂ ಬಿಜೆಪಿ ಸರ್ಕಾರದಿಂದ ಅನೇಕ ನಾಯಕರು ಕ್ಷೇತ್ರ ವೀಕ್ಷಣೆ ಮಾಡಲು ಬರುತ್ತಿದ್ದಾರೆ ಆದರೆ ವಾಸ್ತವವಾಗಿ ಇಲ್ಲಿ ಯಾವ ಸಮಸ್ಯೆಗಳಾಗಿದೆ ರೈತರ ಸಮಸ್ಯೆಗಳ ಬಗ್ಗೆ ತಳ ಮಟ್ಟದಿಂದ ಆಲೋಚನೆ ಮಾಡುತ್ತಿಲ್ಲ ಎನ್ನುವುದು ದುರದೃಷ್ಟಕರ. ರೈತರಿಗೆ ಸಕಾಲಕ್ಕೆ ಕ್ಷೇತ್ರದಲ್ಲಿ ಪ್ರತಿ ವರ್ಷ ಉತ್ತಮ ಮಳೆ ಯಾಗದೆ ರೈತರು ಕಂಗಾಲಾಗಿರುತ್ತಾರೆ. ಇಂತಹ ರೈತರ ಜೊತೆಯಲ್ಲಿ ಅಧಿಕಾರಿಗಳು ಹಾಗೂ ರಾಜಕೀಯ ನಾಯಕರು ಸಮಾಲೋಚನೆ ನಡೆಸಿ ಸಮಸ್ಯೆಗಳನ್ನು ಆಲಿಸಿ ಪರಿಷ್ಕಾರ ಕೊಡುವ ಕೆಲಸ ಸರ್ಕಾರಗಳು ಮಾಡಬೇಕು ಎಂದು ತಮ್ಮ ಬೇಸರವನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರು ರವಿಕುಮಾರ್ ಟಿ ಮರ್ಲಳ್ಳಿ, ತಾಲೂಕ ಅಧ್ಯಕ್ಷರು ಸೂರಮನಹಳ್ಳಿ ರಾಜಣ್ಣ ,ನಾಗಸಮುದ್ರ ಸಂಘದ ಅಧ್ಯಕ್ಷರು ಗೋವಿಂದಪ್ಪ, ಡಿ ಎಸ್ ಎಸ್ ಸಂಚಾಲಕರು ಕೊಂಡಾಪುರ ಪರಮೇಶ್ವರ್, ಡಿ ಸಿ ನಾಗರಾಜ್., ಎಸ್ ಚಂದ್ರಣ್ಣ, ಸಣ್ಣ ಮಾರಣ್ಣ ಅಡವಿಮಾರಣ್ಣ, ಪಿ ಟಿ ಹಟ್ಟಿ ಲಿಂಗಣ್ಣ, ರಮೇಶ್, ಕರೆ ಗೌಡರ ರಾಜಣ್ಣ, ಮರ್ರಿಸ್ವಾಮಿ, ಈಶಪ್ಪ, ಆಡವೇಪ್ಪ, ಗಂಗಣ್ಣ, ಆಂಜನೇಯ, ಹೊನ್ನೂರಪ್ಪ ಮಾರಣ್ಣ, ಗಂಗಾಧರ್, ರಾಮಾಂಜಿನೇಯ, ಶಿವಣ್ಣ, ಬಸಪ್ಪ ಹಾಗೂ ರೈತರು ಭಾಗವಹಿಸಿದ್ದರು.
ತಾಲೂಕ ವೀಕ್ಷಣೆ ಮುಖ್ಯವಲ್ಲ ರೈತರಿಗೆ ಪರಿಷ್ಕಾರವೇ ಮುಖ್ಯ ಬಸವರೆಡ್ಡಿ ತಾಲೂಕು ವೀಕ್ಷಣೆ ಮುಖ್ಯವಲ್ಲ, ರೈತರಿಗೆ ಪರಿಹಾರ ಬೇಕು ಬಸವರೆಡ್ಡಿ. ಮೊಳಕಾಲ್ಮುರು ಸುದ್ದಿ ಕಾಂಗ್ರೆಸ್ ಪಕ್ಷದ ಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್ ರವರು , ಬಿಜೆಪಿ ಪಕ್ಷದ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ರವರು ಹಾಗೂ ಕಾಂಗ್ರೆಸ್ ಹಿರಿಯ ನಾಯಕರು ಸ್ಥಳ ವೀಕ್ಷಣೆ ಮಾಡಲು ಮಾತ್ರ ಬಂದಿದ್ದಾರೆ ಆದರೆ ರೈತರ ಸಮಸ್ಯೆಗಳನ್ನು ಆಲಿಸುತ್ತಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಕಾರ್ಯಾಧ್ಯಕ್ಷರಾದ ಬೇಡರೆಡ್ಡಿ ಹಳ್ಳಿಯ ಬಸವ ರೆಡ್ಡಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ತಾಲೂಕಿನ ನಾಗಸಮುದ್ರ ಗ್ರಾಮದಲ್ಲಿ ಇಂದು ನೂತನವಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಇವರು ಮಾತನಾಡಿದರು. ಕಾಂಗ್ರೆಸ್ ಹಾಗೂ ಬಿಜೆಪಿ ಸರ್ಕಾರದಿಂದ ಅನೇಕ ನಾಯಕರು ಕ್ಷೇತ್ರ ವೀಕ್ಷಣೆ ಮಾಡಲು ಬರುತ್ತಿದ್ದಾರೆ ಆದರೆ
ವಾಸ್ತವವಾಗಿ ಇಲ್ಲಿ ಯಾವ ಸಮಸ್ಯೆಗಳಾಗಿದೆ ರೈತರ ಸಮಸ್ಯೆಗಳ ಬಗ್ಗೆ ತಳ ಮಟ್ಟದಿಂದ ಆಲೋಚನೆ ಮಾಡುತ್ತಿಲ್ಲ ಎನ್ನುವುದು ದುರದೃಷ್ಟಕರ. ರೈತರಿಗೆ ಸಕಾಲಕ್ಕೆ ಕ್ಷೇತ್ರದಲ್ಲಿ ಪ್ರತಿ ವರ್ಷ ಉತ್ತಮ ಮಳೆ ಯಾಗದೆ ರೈತರು ಕಂಗಾಲಾಗಿರುತ್ತಾರೆ. ಇಂತಹ ರೈತರ ಜೊತೆಯಲ್ಲಿ ಅಧಿಕಾರಿಗಳು ಹಾಗೂ ರಾಜಕೀಯ ನಾಯಕರು ಸಮಾಲೋಚನೆ ನಡೆಸಿ ಸಮಸ್ಯೆಗಳನ್ನು ಆಲಿಸಿ ಪರಿಷ್ಕಾರ ಕೊಡುವ ಕೆಲಸ ಸರ್ಕಾರಗಳು ಮಾಡಬೇಕು ಎಂದು ತಮ್ಮ ಬೇಸರವನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರು ರವಿಕುಮಾರ್ ಟಿ ಮರ್ಲಳ್ಳಿ, ತಾಲೂಕ ಅಧ್ಯಕ್ಷರು ಸೂರಮನಹಳ್ಳಿ ರಾಜಣ್ಣ ,ನಾಗಸಮುದ್ರ ಸಂಘದ ಅಧ್ಯಕ್ಷರು ಗೋವಿಂದಪ್ಪ, ಡಿ ಎಸ್ ಎಸ್ ಸಂಚಾಲಕರು ಕೊಂಡಾಪುರ ಪರಮೇಶ್ವರ್, ಡಿ ಸಿ ನಾಗರಾಜ್., ಎಸ್ ಚಂದ್ರಣ್ಣ, ಸಣ್ಣ ಮಾರಣ್ಣ ಅಡವಿಮಾರಣ್ಣ, ಪಿ ಟಿ ಹಟ್ಟಿ ಲಿಂಗಣ್ಣ, ರಮೇಶ್, ಕರೆ ಗೌಡರ ರಾಜಣ್ಣ, ಮರ್ರಿಸ್ವಾಮಿ, ಈಶಪ್ಪ, ಆಡವೇಪ್ಪ, ಗಂಗಣ್ಣ, ಆಂಜನೇಯ, ಹೊನ್ನೂರಪ್ಪ ಮಾರಣ್ಣ, ಗಂಗಾಧರ್, ರಾಮಾಂಜಿನೇಯ, ಶಿವಣ್ಣ, ಬಸಪ್ಪ ಹಾಗೂ ರೈತರು ಭಾಗವಹಿಸಿದ್ದರು.
- ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಪೂರ್ವ ಸಿದ್ಧತೆ ಸಭೆ ಕೂಡ್ಲಿಗಿ: ಆಗಷ್ಟ-15ರಂದು ನಡೆಯುವ 80ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಪೂರ್ವ ಸಿದ್ಧತಾ ಕ್ರಮಗಳು ಹಾಗೂ ಸ್ವಾತಂತ್ರ್ಯೋತ್ಸವ ಆಚರಣೆಯ ಬಗ್ಗೆ ಪೂರ್ವಭಾವಿ ಸಭೆ ಇಲ್ಲಿನ ಪ್ರವಾಸಿ ಮಂದಿರ ಸಭಾಂಗಣದಲ್ಲಿ ಶನಿವಾರ ನಡೆಯಿತು. ಆಚರಣೆ ಸಮಿತಿ ಅಧ್ಯಕ್ಷ, ತಹಸೀಲ್ದಾರ್ ವಿ.ಕೆ ನೇತ್ರಾವತಿ ಮಾತನಾಡಿ, 80ನೇ ಸ್ವಾತಂತ್ರ್ಯ ದಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹನೀಯರನ್ನು ಸನ್ಮಾನ ಮಾಡುವ ಮುಖೇನ ಅವರಿಗೆ ಗೌರವ ಸಲ್ಲಿಸೋಣ. ಪ್ರೌಢಶಾಲಾ ಹಾಗೂ ಕಾಲೇಜು ಮಟ್ಟದ ವಿಧ್ಯಾರ್ಥಿಗಳಿಗೆ ದೇಶ ಭಕ್ತಿ ಹುಟ್ಟಿಸುವ ಹಾಗೂ ದೇಶದ ಪ್ರಗತಿ ವಿಷಯವಾಗಿ ಭಾಷಣ ಹಾಗೂ ಪ್ರಭಂದ ಸ್ಪರ್ಧೆ ಏರ್ಪಡಿಸಿ ಬಹುಮಾನ ನೀಡುವ ಕಾರ್ಯಕ್ರಮ ಮಾಡುವುದಾಗಿ ತಿಳಿಸಿದರು. ಸ್ವಾತಂತ್ರ್ಯ ದಿನದಂದು ಬೆಳಿಗ್ಗೆ ಗಾಂಧಿ ಚಿತಾಭಸ್ಮವಿರುವ ಹುತಾತ್ಮರ ಸ್ಮಾರಕಕ್ಕೆ ಮೊದಲು ಪುಷ್ಪ ನಮನ ಸಲ್ಲಿಸಿ ನಂತರ ಧ್ವಜಾರೋಹಣ ಕಾರ್ಯಕ್ರಮ ನಡೆಸಲಾಗುವುದು. ಪೊಲೀಸ್ ಇಲಾಖೆ ಹಾಗೂ ವಿವಿಧ ಶಾಲಾ ಮಕ್ಕಳಿಂದ ಧ್ವಜಾ ವಂದನೆ ಕಾರ್ಯಕ್ರಮ, ಆಯ್ದಾ ಹತ್ತು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ಸಭೆಯಲ್ಲಿ ಚರ್ಚೆ ಮಾಡಲಾಯಿತು. ಸ್ವಾತಂತ್ರ್ಯ ದಿನದಂದು ಬೆಳಿಗ್ಗೆ ಶಾಲಾ ಮಕ್ಕಳಿಂದ ಪ್ರಭಾತ್ ಪೇರಿ ನಡೆಸಲಿದ್ದು ಸುಗಮ ಸಂಚಾರಕ್ಕೆ ತೊಂದರೆ ಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದರು. ಈ ಸಂದರ್ಭದಲ್ಲಿ ಇಒ ನರಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ಬೇವೂರ್, ಪಿಎಸ್ಐ ಪ್ರಕಾಶ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ವೆಂಕಟೇಶ, ಮುಖಂಡರಾದ ಹಿರೇಕುಂಬಳಗುಂಟೆ ಉಮೇಶ್, ಕೋಗಳಿ ಮಂಜುನಾಥ, ಗುನ್ನಳ್ಳಿ ರಾಘವೇಂದ್ರ, ಕಾಟೇರ ಹಾಲೇಶ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.1
- " ಪಕ್ಷ ನಮ್ಮೆಲ್ಲರ ತಾಯಿ " ನಾವೆಲ್ಲರೂ ಸಹೋದರರು , ಹಿರಿಯ ಸಹೋದರರ ಮಾರ್ಗದರ್ಶನದಂತೆ ನಾವೆಲ್ಲರೂ ಮುನ್ನಡೆಯೋಣ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ -ವಿಜಯನಗರ ಜಿಲ್ಲೆ ಕೂಡ್ಲಿಗಿ *" ಪಕ್ಷ ನಮ್ಮೆಲ್ಲರ ತಾಯಿ " ನಾವೆಲ್ಲರೂ ಸಹೋದರರು , ಹಿರಿಯ ಸಹೋದರರ ಮಾರ್ಗದರ್ಶನದಂತೆ ನಾವೆಲ್ಲರೂ ಮುನ್ನಡೆಯೋಣ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್*-ವಿಜಯನಗರ ಜಿಲ್ಲೆ ಕೂಡ್ಲಿಗಿ : " ಕಾಂಗ್ರೆಸ್ ಪಕ್ಷ ನಮ್ಮೆಲ್ಲರ ತಾಯಿ " , ನಾವೆಲ್ಲರೂ ಸಹೋದರರು. ಪಕ್ಷದ ಹಿರಿಯ ಸಹೋದರರ ಮಾರ್ಗದರ್ಶನದಂತೆ , ಸಂಘಟನೆ ಮಾಡಿ ಪಕ್ಷವನ್ನು ಬಲ ಪಡಿಸೋಣ ಎಂದು. ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು , ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ , ಜುಲೈ 30 ರಂದು. ಕಾಂಗ್ರೆಸ್ ಪಕ್ಷದ ವಿವಿದ ವಿಭಾಗಗಳ ನಾಯಕರ ಆಯ್ಕೆ , ಹಾಗೂ ಪಕ್ಷ ಸಂಘಟನೆಗಾಗಿ ಆಯೋಜಿಸಲಾಗಿದ್ದ. ಸಂಘಟನೆ ಸೃಜನ ಅಭಿಯಾನದಲ್ಲಿ , ಕಾರ್ಯಕರ್ತರನ್ನುದ್ಧೇಶಿಸಿ ಮಾತನಾಡಿದರು. ಟಿಪಿಸಿಸಿ ಕಾರ್ಯದರ್ಶಿಗಳು ಹಾಗೂ ಎಐಸಿಸಿ ಸಲಹಾ ಸಮಿತಿಯ ಹಿರಿಯರು. ವೀಕ್ಷಕರಾದ ಪಕ್ಷದ ರಾಷ್ಟ್ರೀಯ ನಾಯಕರಾದ ಹರಕರ್ ವೇಣುಗೋಪಾಲ್ ರಾವ್ ಹಾಗೂ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್ , ಮಾಜಿ ಶಾಸಕರು ಹಾಗೂ ಕಾಂಗ್ರೆಸ್ ವಿಜಯನಗರ ಜಿಲ್ಲಾಧ್ಯಕ್ಷರಾದ , ಶಿರಾಜ್ ಶೇಖ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವಾಗಿ ಚರ್ಚಿಸಿದರು. ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ , ಕೂಡ್ಲಿಗಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ಆಧ್ಯಕ್ಷ ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಅಂತಿಮ ಹಂತದ ಸಿದ್ದತೆ ಪರಿಶೀಲಿಸಿದ ಜಿಲ್ಲಾಧಿಕಾರಿ ಟಿ ವೆಂಕಟೇಶ್ ಚಿತ್ರದುರ್ಗದಲ್ಲಿ ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಆಗಸ್ಟ್ 2 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12 ಗಂಟೆಯ ವರೆಗೆ ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ನಡೆಯಲಿದೆ. ಚಿತ್ರದುರ್ಗ ನಗರದ 26 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 9,592 ಅಭ್ಯರ್ಥಿಗಳು ಪರೀಕ್ಷೆ ಹಾಜರಾಗಲಿದ್ದಾರೆ. ಇನ್ನೂ ಈಗಾಗಲೆvಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸೂಕ್ತ ಭದ್ರತೆ ಮತ್ತು ಬ್ಯಾರಿಕೇಡಿಂಗ್ ವ್ಯವಸ್ಥೆ ಮಾಡಿದ್ದು ಪ್ರಶ್ನೆ ಪತ್ರಿಕೆಗಳ ಭದ್ರತೆ ಹಾಗೂ ಪಾಲನೆಗಾಗಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಈಗಾಗಲೇ ತ್ರಿಸದಸ್ಯ ಸಮಿತಿ ರಚಿಸಲಾಗಿದೆ.1
- ದವಳಗಿರಿ ಬಡಾವಣೆ: ಟ್ರಾನ್ಸ್‌ಫಾರ್ಮರ್ ಶಾರ್ಟ್ ಸರ್ಕ್ಯೂಟ್; ಕತ್ತಲಲ್ಲಿ ಮುಳುಗಿದ ನಿವಾಸಿಗಳು! ದವಳಗಿರಿ ಬಡಾವಣೆ: ಟ್ರಾನ್ಸ್‌ಫಾರ್ಮರ್ ಶಾರ್ಟ್ ಸರ್ಕ್ಯೂಟ್; ಕತ್ತಲಲ್ಲಿ ಮುಳುಗಿದ ನಿವಾಸಿಗಳು! ಚಿತ್ರದುರ್ಗ : ನಗರದ ದವಳಗಿರಿ ಬಡಾವಣೆಯ ಮೂರನೇ ಹಂತದಲ್ಲಿ ಭಾರಿ ಮಳೆಯ ಹಿನ್ನೆಲೆಯಲ್ಲಿ ಮುಖ್ಯ ರಸ್ತೆಯಲ್ಲಿರುವ ಟ್ರಾನ್ಸ್‌ಫಾರ್ಮರ್ (ವಿದ್ಯುತ್ ಪರಿವರ್ತಕ) ಪೆಟ್ಟಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಪರಿಣಾಮವಾಗಿ ಇಡೀ ಬಡಾವಣೆಯಾದ್ಯಂತ ವಿದ್ಯುತ್ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ಸ್ಥಳೀಯರ ಆತಂಕ: ಶಾರ್ಟ್ ಸರ್ಕ್ಯೂಟ್ ಆದ ತಕ್ಷಣ ಟ್ರಾನ್ಸ್‌ಫಾರ್ಮರ್‌ನಿಂದ ಭಾರಿ ಪ್ರಮಾಣದಲ್ಲಿ ಕಿಡಿಗಳು ಸಿಡಿದು, ಹೊಗೆ ಕಾಣಿಸಿಕೊಂಡಿದೆ. ಇದರಿಂದಾಗಿ ಸುತ್ತಮುತ್ತಲಿನ ನಿವಾಸಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಅಧಿಕಾರಿಗಳ ಗಮನಕ್ಕೆ ಮನವಿ:ವಿದ್ಯುತ್ ಕೈಕೊಟ್ಟಿರುವುದರಿಂದ ಇಡೀ ಬಡಾವಣೆ ಕತ್ತಲಲ್ಲಿ ಮುಳುಗಿದೆ. ಬೆಸ್ಕಾಂ (BESCOM) ಅಧಿಕಾರಿಗಳು ಹಾಗೂ ಸಂಬಂಧಪಟ್ಟ ವಿದ್ಯುತ್ ಇಲಾಖೆಯ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಬೇಕು. ಹಾನಿಗೊಳಗಾದ ಟ್ರಾನ್ಸ್‌ಫಾರ್ಮರ್ ಅನ್ನು ದುರಸ್ತಿಗೊಳಿಸಿ, ಬಡಾವಣೆಗೆ ಶೀಘ್ರವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂದು ಸಾರ್ವಜನಿಕರು ತೀವ್ರವಾಗಿ ಒತ್ತಾಯಿಸಿದ್ದಾರೆ.3
- ಖಾಸಗಿ ವಾಹನಗಳ ಮೇಲೆ ‘ಪ್ರೆಸ್’ (PRESS) ಎಂದು ಹಾಕಿಕೊಂಡು ಸಂಚರಿಸುವುದು ಕಾನೂನು ಬಾಹಿರವಾಗಿದ್ದು, ಇಂತಹವರ ವಿರುದ್ಧ ಕಠಿಣ ಕಾನೂನು ಕ್ರಮ . ಮಾಧ್ಯಮ ರಂಗಕ್ಕೆ ಸಂಬಂಧಿಸಿಲ್ಲದ ವ್ಯಕ್ತಿಗಳು ತಮ್ಮ ಖಾಸಗಿ ವಾಹನಗಳ ಮೇಲೆ ‘ಪ್ರೆಸ್’ (PRESS) ಎಂದು ಹಾಕಿಕೊಂಡು ಸಂಚರಿಸುವುದು ಕಾನೂನು ಬಾಹಿರವಾಗಿದ್ದು, ಇಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಚಿತ್ರದುರ್ಗ ಜಿಲ್ಲಾ ಪೊಲೀಸರು ಪತ್ರಿಕಾ ಪ್ರಕಟಣೆ ಮೂಲಕ ಎಚ್ಚರಿಸಿದ್ದಾರೆ. ಸಾಮಾನ್ಯವಾಗಿ ಪತ್ರಕರ್ತರು ಮತ್ತು ಮಾಧ್ಯಮ ಕ್ಷೇತ್ರದ ಸಿಬ್ಬಂದಿ ತಮ್ಮ ಗುರುತಿಗಾಗಿ ವಾಹನಗಳ ಮೇಲೆ ‘PRESS’ ಎಂಬ ನಾಮಫಲಕವನ್ನು ಬಳಸುತ್ತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮಾಧ್ಯಮ ಕ್ಷೇತ್ರಕ್ಕೆ ಸಂಬಂಧವಿಲ್ಲದ ಅನಾಮಧೇಯ ವ್ಯಕ್ತಿಗಳು ಸಹ ತಮ್ಮ ಮೋಟಾರ್ ಸೈಕಲ್ ಹಾಗೂ ಇತರೆ ವಾಹನಗಳ ಮೇಲೆ ‘PRESS’ ಬೋರ್ಡ್ ಹಾಕಿಕೊಂಡು.ಸಂಚರಿಸುತ್ತಿರುವುದು ಕಂಡುಬಂದಿದೆ. ಸಾಮಾನ್ಯ ಸಾರ್ವಜನಿಕರು ನಂಬರ್ ಪ್ಲೇಟ್ ಹಾಗೂ ವಾಹನಗಳ ಮೇಲೆ ಅಕ್ರಮವಾಗಿ ‘ಪ್ರೆಸ್’ ಎಂದು ಬರೆಸಿಕೊಂಡು ಚಲಾಯಿಸುತ್ತಿರುವುದನ್ನು ತಡೆಯಲು ಜಿಲ್ಲಾದ್ಯಂತ ವಿಶೇಷ ಅಭಿಯಾನ ನಡೆಸಲಾಗುತ್ತದೆ. ಚಿತ್ರದುರ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ‘ಸ್ಪೆಷಲ್ ಡ್ರೈವ್’ ನಡೆಸುವ ಮೂಲಕ ಇಂತಹ ವಾಹನಗಳನ್ನು ಪತ್ತೆ ಹಚ್ಚಿ, ನಿಯಮ ಉಲ್ಲಂಘಿಸುವ ವಾಹನ ಚಾಲಕರು ಹಾಗೂ ಮಾಲೀಕರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.1
- ಕಲ್ಯಾಣ ಕರ್ನಾಟಕ ಭಾಗದ 76 ನೂತನ ಪಿಡಿಒ ಅಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಣೆ; ಅಧಿಕಾರಿಗಳ ಸಂತಸ ಬೆಂಗಳೂರು: ಇಂದು 2024ನೇ ಸಾಲಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಕಳೆದ ಆರು ತಿಂಗಳಿನಿಂದ ನೇಮಕಾತಿ ಆದೇಶಕ್ಕಾಗಿ ಕಾಯುತ್ತಿದ್ದ ಕಲ್ಯಾಣ ಕರ್ನಾಟಕ ಭಾಗದ 76 ನೂತನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ (PDO) ನೇಮಕಾತಿ ಆದೇಶ ಪತ್ರಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಈಶ್ವರ್ ಖಂಡ್ರೆ ಅವರು ಹಸ್ತಾಂತರಿಸಿದರು. ಈ ವೇಳೆ ನೂತನ ಪಿಡಿಓಗಳು ಅಧಿಕಾರಿಗಳು ಸಚಿವರಿಗೆ ಕೃತಜ್ಞತೆ ಸಲ್ಲಿಸಿದರು.1
- ಹಮ್ಮಿಗಿ ಗ್ರಾಮದಲ್ಲಿ ಸಣ್ಣದೊಂದು ಜನನ ಪ್ರಮಾಣ ಪತ್ರದ ತಿದ್ದುಪಡಿ ಗಾಗಿ ಅಂಗವಿಕಲ ಮಹಿಳೆಯೊಬ್ಬರು ನಾಲ್ಕು ದಿನಗಳಿಂದ ಅಲೆದಾಡುತ್ತಿರುವ ಘಟನೆ... ಹೌದು, ಹಮ್ಮಿಗಿ ಗ್ರಾಮದ ವೀರಮ್ಮ ಬಾಬುಸಾಬ ಮಡಿವಾಳರ ಎಂಬ ವಿಶೇಷ ಚೇತನ ಮಹಿಳೆ, ನವಿನ ಹಾಲಪ್ಪ ಈಟಿ ಅವರ ಜನನ ಪ್ರಮಾಣ ಪತ್ರಕ್ಕಾಗಿ ನಾಲ್ಕು ದಿನಗಳಿಂದ ನಿರಂತರವಾಗಿ ಅಲೆದಾಡುತ್ತಿದ್ದಾರೆ. ಎರಡು ಕಾಲು ಇಲ್ಲದೆ ನಡೆಯಲು ಶಕ್ತಿಯಿಲ್ಲದಿದ್ದರೂ, ಶ್ರಮಪಟ್ಟು ಕಚೇರಿಗೆ ಬಂದರೆ ತಲಾಠಿ ಮಾತ್ರ ಸ್ಥಳದಲ್ಲೇ ಇರುವುದಿಲ್ಲ! ಸಾರ್ವಜನಿಕರ ಕೆಲಸ ಮಾಡಿಕೊಡಬೇಕಾದ ಅಧಿಕಾರಿ ಹೀಗೆ ನಾಪತ್ತೆಯಾಗುತ್ತಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರಿ ಸಂಬಳ ಪಡೆಯುವ ಅಧಿಕಾರಿಗಳು ಹೀಗೆ ಬಡವರನ್ನು, ಅಂಗವಿಕಲರನ್ನು ಸತಾಹಿಸುವುದು ಎಷ್ಟು ಸರಿ ಎನ್ನುವುದು ಗ್ರಾಮಸ್ಥರ ಖಾರವಾದ ಪ್ರಶ್ನೆ.1
- ಪ್ರತಿಯೊಬ್ಬರು ಪಕ್ಷದಲ್ಲಿ ಶಿಸ್ಥು ಸಂಘಟನೆ ಕಾಪಾಡಿಕೊಳ್ಳೋದು ಮುಖ್ಯ - ಕಾಂಗ್ರೇಸ್ ಜಿಲ್ಲಾಧ್ಯಕ್ಷ ಶಿರಾಜ್ ಶೇಖ್ - ವಿಜಯನಗರ ಜಿಲ್ಲೆ ಕೂಡ್ಲಿಗಿ *ಪ್ರತಿಯೊಬ್ಬರು ಪಕ್ಷದಲ್ಲಿ ಶಿಸ್ಥು ಸಂಘಟನೆ ಕಾಪಾಡಿಕೊಳ್ಳೋದು ಮುಖ್ಯ - ಕಾಂಗ್ರೇಸ್ ಜಿಲ್ಲಾಧ್ಯಕ್ಷ ಶಿರಾಜ್ ಶೇಖ್*- ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಕ್ಷ ಭಲವರ್ಧನೆಗೆ ಎಲ್ಲರೂ ಶಿಸ್ಥು , ಹಾಗೂ ಸಂಘಟನಾತ್ಮಕ ಮನೋಭಾವ ಬಳೆಸಿಕೊಳ್ಳಬೇಕೆಂದು. ಕಾಂಗ್ರೇಸ್ ಪಕ್ಷದ ವಿಜಯನಗರ ಜಿಲ್ಲಾಧ್ಯಕ್ಷರು , ಹಾಗೂ ಮಾಜಿ ಶಾಸಕರಾದ ಶಿರಾಜ್ ಶೇಖ್ ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ , ಜುಲೈ 30 ರಂದು. ಕಾಂಗ್ರೆಸ್ ಪಕ್ಷದ ವಿವಿದ ವಿಭಾಗಗಳ ನಾಯಕರ ಆಯ್ಕೆ , ಹಾಗೂ ಪಕ್ಷ ಸಂಘಟನೆಗಾಗಿ ಆಯೋಜಿಸಲಾಗಿದ್ದ. ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ರವರ ನೇತೃತ್ವದಲ್ಲಿ ಜರುಗಿದ ಸಂಘಟನೆ ಸೃಜನ ಅಭಿಯಾನದಲ್ಲಿ , ಕಾರ್ಯಕರ್ತರನ್ನುದ್ಧೇಶಿಸಿ ಮಾತನಾಡಿದರು. ಟಿಪಿಸಿಸಿ ಕಾರ್ಯದರ್ಶಿಗಳು ಹಾಗೂ ಎಐಸಿಸಿ ಸಲಹಾ ಸಮಿತಿಯ ಹಿರಿಯರು. ವೀಕ್ಷಕರಾದ ಪಕ್ಷದ ರಾಷ್ಟ್ರೀಯ ನಾಯಕರಾದ ಹರಕರ್ ವೇಣುಗೋಪಾಲ್ ರಾವ್ ಹಾಗೂ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್ , ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವಾಗಿ ಚರ್ಚಿಸಿದರು. ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ , ಕೂಡ್ಲಿಗಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ಆಧ್ಯಕ್ಷ ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4