ಕುಷ್ಟಗಿ ಪಟ್ಟಣದ ಸರ್ಕಾರಿ ಬಾಲಕಿಯರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಕಟ್ಟಡದ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸುವಂತೆ ಹಾಗೂ ಶಾಲಾ ಕಾಂಪೌಂಡ್‌ಗೆ ಹೊಂದಿಕೊಂಡಿರುವ ಕಪಾಟುಗಳನ್ನು ತೆರವುಗೊಳಿಸುವಂತೆ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರು ಮತ್ತು ಸದಸ್ಯರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಮ್ಯಾನೇಜರ್ ಶಿವಶಂಕರಪ್ಪ, ಪುರಸಭೆ ಮುಖ್ಯಾಧಿಕಾರಿ ವೆಂಕಪ್ಪ ಬಿಳಗಿ ಮತ್ತು ಕುಷ್ಟಗಿ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ. ಎಸ್.ಡಿ.ಎಂ.ಸಿ. ಅಧ್ಯಕ್ಷ ಪವಾಡೆಪ್ಪ ಚೌಡ್ಕಿ ಮಾತನಾಡಿ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆಯಡಿ ಸುಮಾರು 32 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಎರಡು ಶಾಲಾ ಕೊಠಡಿಗಳ ಕಟ್ಟಡ ನಿರ್ಮಾಣವನ್ನು ನಿರ್ಮಿತಿ ಕೇಂದ್ರವು ಗುತ್ತಿಗೆ ಪಡೆದು ಅರ್ಧಕ್ಕೆ ನಿಲ್ಲಿಸಿದೆ. ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಮತ್ತು ನಿರ್ಮಿತಿ ಕೇಂದ್ರದ ಇಂಜಿನಿಯರ್ ಆದೇಶ ಅವರಿಗೆ ಹಲವು ಬಾರಿ ಮನವಿ ಮಾಡಿದರೂ, ಇಂಜಿನಿಯರ್ ಆದೇಶ ಅವರು ಫೋನ್ ಸಂಪರ್ಕಕ್ಕೆ ಸಿಗುತ್ತಿಲ್ಲ, ವಾಟ್ಸಾಪ್ ಕರೆಗಳಿಗೂ ಉತ್ತರಿಸುತ್ತಿಲ್ಲ. ಒಂದು ವೇಳೆ ಉತ್ತರಿಸಿದರೂ ಬರೀ ಭರವಸೆ ಮಾತ್ರ ನೀಡಿ, ಕೆಲಸ ಪೂರ್ಣಗೊಳಿಸುತ್ತಿಲ್ಲ. ಈಗಾಗಲೇ 2026ನೇ ಸಾಲಿನ ತರಗತಿಗಳು ಪ್ರಾರಂಭವಾಗಿರುವುದರಿಂದ ಶಾಲಾ ಮಕ್ಕಳಿಗೆ ಪಾಠ ಮಾಡಲು ಕೊಠಡಿಗಳ ಸಮಸ್ಯೆ ತೀವ್ರವಾಗಿದ್ದು, ಆದಷ್ಟು ಬೇಗ ಶಾಲಾ ಕೊಠಡಿಗಳನ್ನು ಪೂರ್ಣಗೊಳಿಸಲು ಮತ್ತು ಕಪಾಟುಗಳನ್ನು ತೆರವುಗೊಳಿಸಲು ಒತ್ತಾಯಿಸಿದ್ದಾರೆ. ಎಸ್.ಡಿ.ಎಂ.ಸಿ. ಸದಸ್ಯ ಮಲ್ಲಪ್ಪ ಕಂಚಿ ಅವರು, ಶಾಲಾ ಕೊಠಡಿ ಕಟ್ಟಡ ಪ್ರಾರಂಭವಾಗಿ ಸುಮಾರು ಒಂದೂವರೆ ವರ್ಷ ಕಳೆದಿದ್ದರೂ, ನಿರ್ಮಿತಿ ಕೇಂದ್ರವು ಅರ್ಧಕ್ಕೆ ನಿಲ್ಲಿಸಿ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮನವಿ ಮಾಡಿದರೂ ಕೊಠಡಿಗಳನ್ನು ನಿರ್ಮಿಸಲು ಮುಂದಾಗದಿದ್ದರೆ, ತಕ್ಷಣವೇ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಮಂಜುನಾಥ ತಳುಗೇರಿ ಮಾತನಾಡಿ, ಶಾಲೆಯಲ್ಲಿ ಆಂಗ್ಲ ಮಾಧ್ಯಮ ಎಲ್.ಕೆ.ಜಿ.ಯಿಂದ ಮೂರನೇ ತರಗತಿವರೆಗೆ ಪ್ರಾರಂಭವಾಗಿದ್ದು, ಮುಂದಿನ ದಿನಗಳಲ್ಲಿ ಕೊಠಡಿಗಳ ಸಂಖ್ಯೆ ಕಡಿಮೆ ಇರುವುದರಿಂದ ಮಕ್ಕಳಿಗೆ ಬಹಳ ಸಮಸ್ಯೆ ಎದುರಾಗಲಿದೆ. ಮಾನ್ಯ ಶಾಸಕರು ಮತ್ತು ಅಧಿಕಾರಿಗಳು ಈ ಸಮಸ್ಯೆಯನ್ನು ಪರಿಗಣಿಸಿ ಪರಿಹಾರ ಕಂಡುಹಿಡಿಯುವಂತೆ ತಿಳಿಸಿದರು. ಎಸ್.ಡಿ.ಎಂ.ಸಿ. ಸದಸ್ಯ ಗುರುರಾಜ ಆಗೋಲಿ ಅವರು, ಶಾಲಾ ಅಭಿವೃದ್ಧಿ ಮಾಡಬೇಕಾದವರೇ ತಪ್ಪು ದಾರಿ ತುಳಿದರೆ ನಮ್ಮವರ ಗತಿಯೇನು ಎಂದು ಪ್ರಶ್ನಿಸಿ, ಶಾಸಕರು ಶಿಕ್ಷಣದ ಬಗ್ಗೆ ಕಾಳಜಿ ವಹಿಸಿ ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಬಸಾಪೂರ ಅವರು, ಈ ವಿಷಯ ಇಲಾಖೆಯ ಗಮನದಲ್ಲಿದ್ದು, ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು. ಹಾಗೂ ಇನ್ನೆರಡು ದಿನಗಳಲ್ಲಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಪ್ರಕ್ರಿಯೆ ಪ್ರಾರಂಭಿಸುವುದಾಗಿ ತಿಳಿಸಿದರು. ಆದರೆ, ಎಸ್.ಡಿ.ಎಂ.ಸಿ. ಅಧ್ಯಕ್ಷ ಪವಾಡೆಪ್ಪ ಚೌಡ್ಕಿ ಅವರು, ಒಂದು ವಾರದಲ್ಲಿ ಬಿ.ಇ.ಓ. ಮೇಡಂ ಉಮಾದೇವಿ ಬಸಾಪೂರ ಅವರು ಸಂಬಂಧಿಸಿದ ಅಧಿಕಾರಿಗಳ ಜೊತೆಗೆ ಮಾತನಾಡಿದ್ದೇನೆ ಎಂದು ಭರವಸೆ ನೀಡಿದ್ದು, ಒಂದು ವೇಳೆ ಶಾಲಾ ಕಟ್ಟಡವನ್ನು ಸಂಪೂರ್ಣ ಮಾಡದೆ ಹೋದರೆ, ಶಾಲಾ ಮಕ್ಕಳೊಂದಿಗೆ ರಸ್ತೆಗೆ ಇಳಿದು ಕಾನೂನಾತ್ಮಕ ಹೋರಾಟ ನಡೆಸುವುದು ಶತಸಿದ್ಧ ಎಂದು ಮತ್ತೊಮ್ಮೆ ಎಚ್ಚರಿಕೆ ನೀಡಿದರು.
ಕುಷ್ಟಗಿ ಪಟ್ಟಣದ ಸರ್ಕಾರಿ ಬಾಲಕಿಯರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಕಟ್ಟಡದ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸುವಂತೆ ಹಾಗೂ ಶಾಲಾ ಕಾಂಪೌಂಡ್‌ಗೆ ಹೊಂದಿಕೊಂಡಿರುವ ಕಪಾಟುಗಳನ್ನು ತೆರವುಗೊಳಿಸುವಂತೆ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರು ಮತ್ತು ಸದಸ್ಯರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಮ್ಯಾನೇಜರ್ ಶಿವಶಂಕರಪ್ಪ, ಪುರಸಭೆ ಮುಖ್ಯಾಧಿಕಾರಿ ವೆಂಕಪ್ಪ ಬಿಳಗಿ ಮತ್ತು ಕುಷ್ಟಗಿ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ. ಎಸ್.ಡಿ.ಎಂ.ಸಿ. ಅಧ್ಯಕ್ಷ ಪವಾಡೆಪ್ಪ ಚೌಡ್ಕಿ ಮಾತನಾಡಿ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆಯಡಿ ಸುಮಾರು 32 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಎರಡು ಶಾಲಾ ಕೊಠಡಿಗಳ ಕಟ್ಟಡ ನಿರ್ಮಾಣವನ್ನು ನಿರ್ಮಿತಿ ಕೇಂದ್ರವು ಗುತ್ತಿಗೆ ಪಡೆದು ಅರ್ಧಕ್ಕೆ ನಿಲ್ಲಿಸಿದೆ. ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಮತ್ತು ನಿರ್ಮಿತಿ ಕೇಂದ್ರದ ಇಂಜಿನಿಯರ್ ಆದೇಶ ಅವರಿಗೆ ಹಲವು ಬಾರಿ ಮನವಿ ಮಾಡಿದರೂ, ಇಂಜಿನಿಯರ್ ಆದೇಶ ಅವರು ಫೋನ್ ಸಂಪರ್ಕಕ್ಕೆ ಸಿಗುತ್ತಿಲ್ಲ, ವಾಟ್ಸಾಪ್ ಕರೆಗಳಿಗೂ ಉತ್ತರಿಸುತ್ತಿಲ್ಲ.
ಒಂದು ವೇಳೆ ಉತ್ತರಿಸಿದರೂ ಬರೀ ಭರವಸೆ ಮಾತ್ರ ನೀಡಿ, ಕೆಲಸ ಪೂರ್ಣಗೊಳಿಸುತ್ತಿಲ್ಲ. ಈಗಾಗಲೇ 2026ನೇ ಸಾಲಿನ ತರಗತಿಗಳು ಪ್ರಾರಂಭವಾಗಿರುವುದರಿಂದ ಶಾಲಾ ಮಕ್ಕಳಿಗೆ ಪಾಠ ಮಾಡಲು ಕೊಠಡಿಗಳ ಸಮಸ್ಯೆ ತೀವ್ರವಾಗಿದ್ದು, ಆದಷ್ಟು ಬೇಗ ಶಾಲಾ ಕೊಠಡಿಗಳನ್ನು ಪೂರ್ಣಗೊಳಿಸಲು ಮತ್ತು ಕಪಾಟುಗಳನ್ನು ತೆರವುಗೊಳಿಸಲು ಒತ್ತಾಯಿಸಿದ್ದಾರೆ. ಎಸ್.ಡಿ.ಎಂ.ಸಿ. ಸದಸ್ಯ ಮಲ್ಲಪ್ಪ ಕಂಚಿ ಅವರು, ಶಾಲಾ ಕೊಠಡಿ ಕಟ್ಟಡ ಪ್ರಾರಂಭವಾಗಿ ಸುಮಾರು ಒಂದೂವರೆ ವರ್ಷ ಕಳೆದಿದ್ದರೂ, ನಿರ್ಮಿತಿ ಕೇಂದ್ರವು ಅರ್ಧಕ್ಕೆ ನಿಲ್ಲಿಸಿ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮನವಿ ಮಾಡಿದರೂ ಕೊಠಡಿಗಳನ್ನು ನಿರ್ಮಿಸಲು ಮುಂದಾಗದಿದ್ದರೆ, ತಕ್ಷಣವೇ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಮಂಜುನಾಥ ತಳುಗೇರಿ ಮಾತನಾಡಿ, ಶಾಲೆಯಲ್ಲಿ ಆಂಗ್ಲ ಮಾಧ್ಯಮ ಎಲ್.ಕೆ.ಜಿ.ಯಿಂದ ಮೂರನೇ ತರಗತಿವರೆಗೆ ಪ್ರಾರಂಭವಾಗಿದ್ದು, ಮುಂದಿನ ದಿನಗಳಲ್ಲಿ ಕೊಠಡಿಗಳ ಸಂಖ್ಯೆ ಕಡಿಮೆ ಇರುವುದರಿಂದ ಮಕ್ಕಳಿಗೆ ಬಹಳ ಸಮಸ್ಯೆ ಎದುರಾಗಲಿದೆ. ಮಾನ್ಯ ಶಾಸಕರು ಮತ್ತು ಅಧಿಕಾರಿಗಳು ಈ ಸಮಸ್ಯೆಯನ್ನು ಪರಿಗಣಿಸಿ ಪರಿಹಾರ ಕಂಡುಹಿಡಿಯುವಂತೆ ತಿಳಿಸಿದರು. ಎಸ್.ಡಿ.ಎಂ.ಸಿ.
ಸದಸ್ಯ ಗುರುರಾಜ ಆಗೋಲಿ ಅವರು, ಶಾಲಾ ಅಭಿವೃದ್ಧಿ ಮಾಡಬೇಕಾದವರೇ ತಪ್ಪು ದಾರಿ ತುಳಿದರೆ ನಮ್ಮವರ ಗತಿಯೇನು ಎಂದು ಪ್ರಶ್ನಿಸಿ, ಶಾಸಕರು ಶಿಕ್ಷಣದ ಬಗ್ಗೆ ಕಾಳಜಿ ವಹಿಸಿ ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಬಸಾಪೂರ ಅವರು, ಈ ವಿಷಯ ಇಲಾಖೆಯ ಗಮನದಲ್ಲಿದ್ದು, ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು. ಹಾಗೂ ಇನ್ನೆರಡು ದಿನಗಳಲ್ಲಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಪ್ರಕ್ರಿಯೆ ಪ್ರಾರಂಭಿಸುವುದಾಗಿ ತಿಳಿಸಿದರು. ಆದರೆ, ಎಸ್.ಡಿ.ಎಂ.ಸಿ. ಅಧ್ಯಕ್ಷ ಪವಾಡೆಪ್ಪ ಚೌಡ್ಕಿ ಅವರು, ಒಂದು ವಾರದಲ್ಲಿ ಬಿ.ಇ.ಓ. ಮೇಡಂ ಉಮಾದೇವಿ ಬಸಾಪೂರ ಅವರು ಸಂಬಂಧಿಸಿದ ಅಧಿಕಾರಿಗಳ ಜೊತೆಗೆ ಮಾತನಾಡಿದ್ದೇನೆ ಎಂದು ಭರವಸೆ ನೀಡಿದ್ದು, ಒಂದು ವೇಳೆ ಶಾಲಾ ಕಟ್ಟಡವನ್ನು ಸಂಪೂರ್ಣ ಮಾಡದೆ ಹೋದರೆ, ಶಾಲಾ ಮಕ್ಕಳೊಂದಿಗೆ ರಸ್ತೆಗೆ ಇಳಿದು ಕಾನೂನಾತ್ಮಕ ಹೋರಾಟ ನಡೆಸುವುದು ಶತಸಿದ್ಧ ಎಂದು ಮತ್ತೊಮ್ಮೆ ಎಚ್ಚರಿಕೆ ನೀಡಿದರು.
- ಇಳಕಲ್ ನಗರದಲ್ಲಿ ಮಡಿವಾಳ ಸಮಾಜದ ವತಿಯಿಂದ ಮಾಧ್ಯಮ ಘೋಷ್ಠಿ ನಡೆಸಲಾಯಿತು. ಈ ಸಂದರ್ಭದಲ್ಲಿ, ಉತ್ತರ ಕರ್ನಾಟಕದ ಯುವಕರ ಕಣ್ಮಣಿ ಹಾಗೂ ಅಭಿವೃದ್ಧಿಯ ಹರಿಕಾರರೆಂದು ಗುರುತಿಸಿಕೊಂಡಿರುವ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಗೆ ಮನವಿ ಮಾಡಲಾಯಿತು. ಮಾಧ್ಯಮ ಘೋಷ್ಠಿಯಲ್ಲಿ ಮಡಿವಾಳ ಸಮಾಜದ ಮುಖಂಡರು ಹಾಗೂ ಯುವ ಮಿತ್ರರು ಉಪಸ್ಥಿತರಿದ್ದರು. ಜನಪ್ರಿಯ ಶಾಸಕ ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ದೊರಕಿಸಿಕೊಡಬೇಕೆಂದು ಮಡಿವಾಳ ಸಮಾಜದ ಮುಖಂಡರು ಬಲವಾಗಿ ಆಗ್ರಹಿಸಿದರು.3
- ವಿಜಯಪುರ ಜಿಲ್ಲೆಯ ಐತಿಹಾಸಿಕ ತಾಳಿಕೋಟಿ ಪಟ್ಟಣದಲ್ಲಿ, ಶ್ರೀ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ನಿರ್ಮಾಣ ಸೇವಾ ಸಮಿತಿಯ ವತಿಯಿಂದ ಅದರ ಮೂರನೇ ವಾರ್ಷಿಕೋತ್ಸವದ ನಿಮಿತ್ತ ಪುರಾಣ ಕಾರ್ಯಕ್ರಮವನ್ನು ರಾಜವಾಡೆ ಆವರಣದಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಪ್ರಗತಿಪರ ರೈತರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದ ಪೂಜ್ಯ ಶ್ರೀ ಪ್ರಭುಲಿಂಗ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಈ ದೇಶದ ರೈತರು ಅನ್ನದಾತರಾಗಿದ್ದು, ದೇಶಕ್ಕೆ ಅನ್ನ ನೀಡುವ ಅವರ ಸೇವೆ ದೇವರ ಸೇವೆಗೆ ಸಮಾನವಾಗಿದೆ ಎಂದು ಹೇಳಿದರು. ರೈತರನ್ನು ಸನ್ಮಾನಿಸಿರುವುದು ಹೆಮ್ಮೆಯ ವಿಷಯ ಎಂದು ಅವರು ಬಣ್ಣಿಸಿದರು. ಪುರಸಭೆ ಮಾಜಿ ಅಧ್ಯಕ್ಷರು ಹಾಗೂ ರೈತ ಮುಖಂಡರಾದ ದಶರಥಸಿಂಗ್ ಮನಗೂಳಿ ಅವರು ಮಾತನಾಡಿ, ಹುಟ್ಟು ಹೋರಾಟಗಾರ್ತಿಯಾದ ನೀಲಮ್ಮಗೌಡತಿ ಪಾಟೀಲ ಅವರು ಹಲವಾರು ಸಮಾಜಸೇವಾ ಕಾರ್ಯಗಳನ್ನು ಮಾಡುತ್ತಿದ್ದು, ಅವರಿಗೆ ಎಲ್ಲರ ಸಹಕಾರ ನೀಡುವ ಅಗತ್ಯವಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಸುಮಾರು 15 ಜೋಡಿ ರೈತ ದಂಪತಿಗಳನ್ನು ಸನ್ಮಾನಿಸಲಾಯಿತು. ಕಿತ್ತೂರಾಣಿ ಚೆನ್ನಮ್ಮಳ ನೂರಾರು ಅಭಿಮಾನಿಗಳು ಈ ಪುರಾಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.1
- ಗದಗ್ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಕೊಂಚಿಗೇರಿ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ಅಳವಡಿಸಲಾಗಿರುವ ಹೈ ಮಾಸ್ಕ್ ದೀಪ ಇಂದಿಗೂ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಈ ಹೈ ಮಾಸ್ಕ್ ದೀಪ ಸರಿಯಾಗಿ ಆನ್ ಆಗದಿರುವುದು ಮುಖ್ಯ ಸಮಸ್ಯೆಯಾಗಿದ್ದು, ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದಾಗ ಅವರು 'ನೋಡೋಣ' ಎಂದು ಹೇಳಿ ನಿರ್ಲಕ್ಷ್ಯ ತೋರುತ್ತಿದ್ದಾರೆ.1
- ಕೂಡ್ಲಿಗಿ ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಕಾರಣ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಮಳೆರಾಯನ ಆಗಮನಕ್ಕಾಗಿ ತಾಲ್ಲೂಕಿನಾದ್ಯಂತ ವಿವಿಧ ಆಚರಣೆಗಳು ಮತ್ತು ಪೂಜೆಗಳನ್ನು ನಡೆಸಲಾಗುತ್ತಿದ್ದು, ಅದರ ಭಾಗವಾಗಿ ಶನಿವಾರ ಅಮ್ಮನಕೆರಿ ಗ್ರಾಮದಲ್ಲಿ ವಿಶೇಷ ಗುರ್ಜಿ ಪೂಜೆ ಸಲ್ಲಿಸಲಾಯಿತು. ಈ ಆಚರಣೆಯಲ್ಲಿ, ಜೋಳದ ರೊಟ್ಟಿ ಬೇಯಿಸುವ ಹಂಚಿನ ಮೇಲೆ ಸೆಗಣಿಯಿಂದ ತಯಾರಿಸಿದ ಗುರ್ಜಿಯನ್ನು ಒಬ್ಬ ಯುವಕನ ತಲೆಯ ಮೇಲೆ ಇಟ್ಟುಕೊಂಡು ಮನೆ ಮನೆಗೆ ಹೋಗಲಾಯಿತು. ಈ ವೇಳೆ ಮಹಿಳೆಯರು "ಗುರ್ಜಿ ಗುರ್ಜಿ ಎಲ್ಲಾಡಿ ಬಂದೆ. ಹಳ್ಳಕೊಳ್ಳ ಸುತ್ತಾಡಿ ಬಂದೆ. ಕಾರ ಮಳೆಯೋ ಕಪ್ಪತ್ತ ಮಳೆಯೋ.. ಸುರಿ ಸುರಿ ಸುರಿಯೋ ಮಳೆರಾಯ, ಬಣ್ಣ ಕೊಡ್ತೀನಿ ಬಾರಲೇ ಮಳೆಯೇ ಸುಣ್ಣ ಕೊಡ್ತೀನಿ ಸುರಿಯಲೇ ಮಳೆಯೇ" ಎಂದು ಹಾಡುತ್ತಾ ಮಳೆಗಾಗಿ ಪ್ರಾರ್ಥಿಸಿದರು. ಅಮ್ಮನಕೆರಿ ಗ್ರಾಮದಲ್ಲಿ ಬೇಗ ಮಳೆ ಬರುವಂತೆ ಕೋರಿ ಈ ಗುರ್ಜಿ ಪೂಜೆಯನ್ನು ಆಚರಿಸಲಾಯಿತು.1
- ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಗ್ರಾಮದಲ್ಲಿ, ಮಳೆಗಾಗಿ 'ಗೊರ್ಜೆವ್ವ' (ಗೌರವ್ವ) ಹೊತ್ತ ಮಕ್ಕಳಿಗೆ ಗಂಗೆ ಪೂಜೆ ನೆರವೇರಿಸಲಾಯಿತು. ಗೊರ್ಜೆವ್ವಳ ಮೂರ್ತಿ ಹೊತ್ತ ಬಾಲಕ ಗ್ರಾಮದಾದ್ಯಂತ ಮನೆ ಮನೆಗೆ ತೆರಳಿ ಪೂಜೆ ಸಲ್ಲಿಸುವ ಮೂಲಕ ವರುಣ ದೇವರ ಕೃಪೆಗೆ ಪ್ರಾರ್ಥಿಸಲಾಯಿತು. 'ಗೊರ್ಜೆಮ್ಮ' ಅಥವಾ ಗೌರಮ್ಮ ಆರಾಧನೆಯು ಕರ್ನಾಟಕದ ಗ್ರಾಮೀಣ ಜಾನಪದ ಸಂಪ್ರದಾಯದ ಒಂದು ವಿಶಿಷ್ಟ ಭಾಗವಾಗಿದೆ. ಇದು ಮುಖ್ಯವಾಗಿ ಮಹಿಳಾ ಶಕ್ತಿಯ ಆರಾಧನೆಯನ್ನು, ಗ್ರಾಮೀಣ ಪಶುಪಾಲನಾ ಸಮುದಾಯಗಳ ಸಂಸ್ಕೃತಿಯನ್ನು ಪ್ರತಿಬಿಂಬಿಸುವ, ಪ್ರಕೃತಿ, ಕೃಷಿ ಮತ್ತು ದೈವಭಕ್ತಿಯ ಸಂಗಮವಾಗಿರುವ ಆಚರಣೆಯಾಗಿದೆ. ಕಲ್ಯಾಣ ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಗೊರ್ಜೆವ್ವ ಆಚರಣೆಯನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ನಡೆಸಲಾಗುತ್ತದೆ. ಗೊರ್ಜೆವ್ವ (ಗೌರವ್ವ) ದೇವಿಯನ್ನು ಪಶುಪಾಲಕರ ಮತ್ತು ಅವರ ಜಾನುವಾರುಗಳ ರಕ್ಷಕಿಯಾಗಿ ಪೂಜಿಸಲಾಗುತ್ತದೆ. ಈ ಸಂದರ್ಭದಲ್ಲಿ, ಮಹಿಳೆಯರು, ಯುವತಿಯರು ಮತ್ತು ಮಕ್ಕಳು ಒಗ್ಗೂಡಿ ಅರಿಶಿನ, ಮಣ್ಣು ಮತ್ತು ನೈಸರ್ಗಿಕ ಸಾಮಗ್ರಿಗಳನ್ನು ಬಳಸಿ ಗೌರಮ್ಮಳ (ಗೊರ್ಜೆಮ್ಮ) ವಿಗ್ರಹವನ್ನು ಸರಳ ಹಾಗೂ ಸಾಂಪ್ರದಾಯಿಕ ರೀತಿಯಲ್ಲಿ ತಯಾರಿಸುತ್ತಾರೆ. ಗೊರ್ಜೆವ್ವ ಉತ್ಸವವನ್ನು ರಾತ್ರಿ ಸಮಯದಲ್ಲಿ ಆಚರಿಸಲಾಗುತ್ತದೆ. ದೇವಿಯ ವಿಗ್ರಹವನ್ನು ಗ್ರಾಮದ ವಿವಿಧ ದೇವಾಲಯಗಳಿಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತದೆ. ಮೆರವಣಿಗೆಯಲ್ಲಿ ಮಹಿಳೆಯರು ಕೈಯಲ್ಲಿ ತೈಲದೀಪಗಳನ್ನು ಹಿಡಿದು, ಹೂವುಗಳನ್ನು ಅರ್ಪಿಸಿ ಭಕ್ತಿಭಾವದಿಂದ ಸಾಗುತ್ತಾರೆ. ಹಬ್ಬದ ಪ್ರಮುಖ ಆಕರ್ಷಣೆಯಾಗಿ, ಪುರುಷ ಭಕ್ತರು ದೇವಿಯ ಮೇಲಿನ ಅಚಲ ಭಕ್ತಿಯ ಸಂಕೇತವಾಗಿ ಮುಖ್ಯ ದೇವಾಲಯದ ಎದುರು 'ಉರುಳು ಸೇವೆ' ಮಾಡುತ್ತಾರೆ. ಜಾನಪದ ಹಾಡುಗಳು ಮತ್ತು ಸೋಬಾನೆ ಪದಗಳ ಮೂಲಕ ಗೊರ್ಜೆವ್ವಳನ್ನು ಆರಾಧಿಸಲಾಗುತ್ತದೆ. ಮಹಿಳೆಯರು ವಿಶೇಷವಾಗಿ ಸೋಬಾನೆ ಪದಗಳನ್ನು ಹಾಗೂ ದೇವಿಯ ಮಹಿಮೆಯನ್ನು ಸಾರುವ ಜಾನಪದ ಗೀತೆಗಳನ್ನು ಹಾಡುತ್ತಾರೆ. "ಗಂಗಮ್ಮ ಗೌರಮ್ಮ" ಮುಂತಾದ ಭಕ್ತಿಗೀತೆಗಳನ್ನು ಹಾಡಿ, ಭಜನೆ ಮಾಡುವ ಮೂಲಕ ಮಳೆ ದೇವರನ್ನು ಆಹ್ವಾನಿಸಲಾಗುತ್ತದೆ. ಬಹುತೇಕ ಗ್ರಾಮೀಣ ಭಾಗಗಳಲ್ಲಿ, ಮಕ್ಕಳು ಅರೆಬೆತ್ತಲಾಗಿ ಮಣ್ಣಿನ ಗೊರ್ಜೆವ್ವಳನ್ನು ಕಟ್ಟಿಗೆಯ ಹಲಗೆಯ ಮೇಲೆ ಪ್ರತಿಷ್ಠಾಪಿಸಿಕೊಂಡು ವಿಶೇಷವಾಗಿ ಪೂಜಿಸುತ್ತಾರೆ. ಒಬ್ಬ ಅರೆಬೆತ್ತಲೆಯ ಬಾಲಕ ಅದನ್ನು ತನ್ನ ತಲೆಯ ಮೇಲೆ ಹೊತ್ತು ಗ್ರಾಮದ ಮನೆ ಮನೆಗೆ ತೆರಳಿ ಗೊರ್ಜೆವ್ವಳನ್ನು ಆರಾಧಿಸುತ್ತಾನೆ. ಮನೆಯ ಬಾಗಿಲಿಗೆ ಬಂದ ಗೊರ್ಜೆವ್ವಳಿಗೆ ಪೂಜೆ ಸಲ್ಲಿಸುವಂತೆ ಕೋರಲಾಗುತ್ತದೆ. ಮನೆಯವರು ಗೊರ್ಜೆವ್ವಳನ್ನು ಭಕ್ತಿಯಿಂದ ಸ್ವಾಗತಿಸಿ, ಹೊತ್ತವರಿಗೆ ಗಂಗಾಭಿಷೇಕ ಮಾಡಿ ನಮಿಸುತ್ತಾರೆ ಮತ್ತು ಆರಾಧಕರಿಗೆ ಧಾನ್ಯಗಳು ಹಾಗೂ ದಕ್ಷಿಣೆಯನ್ನು ನೀಡಿ ಕಳುಹಿಸಿಕೊಡುತ್ತಾರೆ. ಗೊರ್ಜೆವ್ವಳ ಆರಾಧಕರು ಜನರು ನೀಡಿದ ಧಾನ್ಯಗಳನ್ನು ಸಂಗ್ರಹಿಸಿ, ನಂತರ ಒಗ್ಗೂಡಿ ತಿಂಡಿ ತಿನಿಸುಗಳನ್ನು ತಯಾರಿಸಿ ಗೊರ್ಜೆವ್ವಳಿಗೆ ಎಡೆ ಮಾಡಿ ನಮಿಸುತ್ತಾರೆ. ನಂತರ ಶ್ರದ್ಧಾಭಕ್ತಿಯಿಂದ ಪ್ರಸಾದವನ್ನು ಸೇವಿಸುತ್ತಾರೆ. ಈ ಆರಾಧನೆಯಲ್ಲಿ ಬಾಲಕರು ಮತ್ತು ಬಾಲೆಯರ ದಂಡೇ ಭಾಗಿಯಾಗಿರುತ್ತದೆ. ಗೊರ್ಜೆವ್ವಳ ಆರಾಧಕರು ಗ್ರಾಮವೆಲ್ಲಾ ಅಲೆದಾಡಿದ ನಂತರ ಕೊನೆಗೆ ಗ್ರಾಮದಾಚೆಯ ದೇವಸ್ಥಾನದಲ್ಲಿ ತಂಗುತ್ತಾರೆ. ಇದು ಒಂದು ವಿಶಿಷ್ಟ ಮತ್ತು ವಿಶೇಷ ಜಾನಪದ ಆಚರಣೆಯಾಗಿದೆ.4
- ಬಳ್ಳಾರಿ ನಗರದ ಹವಾಂಭಾವಿ ಪ್ರದೇಶದಲ್ಲಿ ಅಕ್ರಮ ಸರ್ಕಾರಿ ಜಾಗ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದೆ. ಜಿಲ್ಲಾಡಳಿತವು ಪೊಲೀಸ್ ಭದ್ರತೆಯಲ್ಲಿ ಸರ್ವೇ ನಂ. 275ರಲ್ಲಿರುವ 1.33 ಎಕರೆ ಸರ್ಕಾರಿ ಜಾಗವನ್ನು ತೆರವುಗೊಳಿಸಿ ವಶಕ್ಕೆ ಪಡೆದುಕೊಂಡಿದೆ. ಈ ಜಾಗದ ಮೌಲ್ಯ ಕೋಟ್ಯಾಂತರ ರೂಪಾಯಿ ಎಂದು ಅಂದಾಜಿಸಲಾಗಿದೆ. ಜಿಲ್ಲಾಡಳಿತವು ತೆರವುಗೊಳಿಸಿದ ಈ ಜಾಗದಲ್ಲಿ ಸರ್ಕಾರಿ ಸ್ವಾಮ್ಯದ ಫಲಕವನ್ನು ಅಳವಡಿಸಿದ್ದು, ಅಕ್ರಮವಾಗಿ ಒತ್ತುವರಿ ಮಾಡಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ.1
- ಪರಿಸರ ಸಂರಕ್ಷಣೆ ಮತ್ತು ಹಸಿರು ಅಭಿವೃದ್ಧಿಯ ಉದ್ದೇಶದಿಂದ ಅರಣ್ಯ ಇಲಾಖೆಯು ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ರಸ್ತೆ ಮತ್ತು ಹೆದ್ದಾರಿಗಳ ಬದಿಯಲ್ಲಿ ಸಸಿ ನೆಡುವ ಕಾರ್ಯ ಕೈಗೊಂಡಿದ್ದರೂ, ಸಮರ್ಪಕ ಯೋಜನೆಯಿಲ್ಲದೆ ವಿದ್ಯುತ್ ತಂತಿಗಳ ಕೆಳಗೆ ಸಸಿಗಳನ್ನು ನೆಡುತ್ತಿರುವುದರಿಂದ ಸಾರ್ವಜನಿಕರ ತೆರಿಗೆ ಹಣ ವ್ಯರ್ಥವಾಗುತ್ತಿದೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೇಹಾದುಲ್-ಮುಸ್ಲಿಮೀನ್ (AIMIM) ಪಕ್ಷದ ರಾಯಚೂರು ನಗರ ಅಧ್ಯಕ್ಷ ಶಬ್ಬೀರ್ ಅಹ್ಮದ್ ಹೌದಾದಿ ಆರೋಪಿಸಿದ್ದಾರೆ. ಈ ಕುರಿತು ಅವರು 2026ರ ಜೂನ್ 20ರಂದು ಕಲಬುರ್ಗಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ರಾಯಚೂರಿನ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಅಧಿಕೃತ ಮನವಿ ಪತ್ರ ಸಲ್ಲಿಸಿದ್ದಾರೆ. ವಿದ್ಯುತ್ ತಂತಿಗಳ ಕೆಳಗೆ ಸಸಿ ನೆಡುವುದರಿಂದ ಹಲವು ಸಮಸ್ಯೆಗಳು ಉದ್ಭವಿಸುತ್ತಿವೆ. ಮರಗಳು ಬೆಳೆದು ದೊಡ್ಡದಾದಾಗ ಅವುಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಾಗಿ, ಗಾಳಿಯ ಸಂದರ್ಭದಲ್ಲಿ ಘರ್ಷಣೆಯಿಂದ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳುವ ಸಾಧ್ಯತೆ ಹೆಚ್ಚುತ್ತದೆ. ಇದರಿಂದ ಟ್ರಾನ್ಸ್‌ಫಾರ್ಮರ್‌ಗಳು ಸುಟ್ಟುಹೋಗುವ ಅಪಾಯವಿದ್ದು, ಟಿವಿ, ಫ್ರಿಡ್ಜ್ ಸೇರಿದಂತೆ ಮನೆಗಳಲ್ಲಿನ ಬೆಲೆಬಾಳುವ ವಿದ್ಯುತ್ ಉಪಕರಣಗಳಿಗೆ ಹಾನಿಯಾಗುತ್ತಿದೆ. ಅಲ್ಲದೆ, ಮರಗಳ ಕೊಂಬೆಗಳು ಬೀದಿ ದೀಪಗಳನ್ನು ಮರೆಮಾಡುವುದರಿಂದ ರಸ್ತೆಗಳು ಕತ್ತಲಲ್ಲಿ ಮುಳುಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಮರಗಳ ಕೊಂಬೆಗಳನ್ನು ಕತ್ತರಿಸುವ ಜವಾಬ್ದಾರಿ ಜೆಸ್ಕಾಂ ಹಾಗೂ ಮಹಾನಗರ ಪಾಲಿಕೆ ಸಿಬ್ಬಂದಿಗಳ ಮೇಲೆ ಬೀಳುತ್ತಿದ್ದು, ಇದು ಇಲಾಖೆಗಳ ನಡುವೆ ಅನಗತ್ಯ ಕೆಲಸದ ಒತ್ತಡಕ್ಕೆ ಕಾರಣವಾಗುತ್ತಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ. ರೈಲ್ವೆ ಸ್ಟೇಷನ್ ರಸ್ತೆಯಿಂದ RTO ಸರ್ಕಲ್ ವರೆಗೆ, RTO ಸರ್ಕಲ್‌ನಿಂದ BRB ಸರ್ಕಲ್ ವರೆಗೆ, ಜಿಲ್ಲಾಧಿಕಾರಿ ಬಂಗ್ಲಾದಿಂದ ಅಸ್ನಿಹಾಳ್ ಹಾಗೂ ಅಸ್ನಿಹಾಳ್‌ನಿಂದ ಮಿನಿ ವಿಧಾನಸೌಧದವರೆಗೆ, ಮಂತ್ರಾಲಯ ಕೆಫೆಯಿಂದ ಹಜರತ್ ಖ್ವಾಜಾ ಬಂದೇನವಾಜ್ ಕಾಲೋನಿ ಮಾರ್ಗವಾಗಿ ಮಿನಿ ವಿಧಾನಸೌಧದವರೆಗೆ, ಮತ್ತು ಬಸವೇಶ್ವರ ಸರ್ಕಲ್‌ನಿಂದ ಶಕ್ತಿನಗರ ಹಾಗೂ ರೈಲ್ವೆ ಸರ್ಕಲ್ ವರೆಗಿನ ಪ್ರದೇಶಗಳಲ್ಲಿ ಈ ಸಮಸ್ಯೆ ಕಂಡುಬಂದಿದೆ ಎಂದು ಶಬ್ಬೀರ್ ಅಹ್ಮದ್ ಹೌದಾದಿ ಗುರುತಿಸಿದ್ದಾರೆ. ಸಾರ್ವಜನಿಕರ ತೆರಿಗೆ ಹಣದ ಸದ್ಬಳಕೆಯೊಂದಿಗೆ ರಾಯಚೂರನ್ನು ಸುಂದರ ಹಾಗೂ ಹಸಿರು ನಗರವನ್ನಾಗಿ ರೂಪಿಸಲು, ಅರಣ್ಯ ಇಲಾಖೆ, ಜೆಸ್ಕಾಂ ಹಾಗೂ ಮಹಾನಗರ ಪಾಲಿಕೆ ಜಂಟಿಯಾಗಿ ಮುಂದಾಲೋಚನೆಯೊಂದಿಗೆ ಸಸಿ ನೆಡುವ ಯೋಜನೆ ರೂಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ಮನವಿ ಪತ್ರದ ಪ್ರತಿಗಳನ್ನು ರಾಯಚೂರು ಜಿಲ್ಲಾಧಿಕಾರಿಗಳು, ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಜೆಸ್ಕಾಂನ ಪ್ರಭಾರಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ಗಳಿಗೂ ಸೂಕ್ತ ಕ್ರಮಕ್ಕಾಗಿ ಸಲ್ಲಿಸಲಾಗಿದ್ದು, ಮನವಿ ಸಲ್ಲಿಸುವ ಸಂದರ್ಭದಲ್ಲಿ AIMIM ಮುಖಂಡರಾದ ಶಹಬಾಜ್ ಖಾನ್, ತನ್ವೀರ್ ಅಹ್ಮದ್, ಮೊಹಮ್ಮದ್ ಸೋಫಿ ಹಾಗೂ ಆಸಿಫ್ ಬಾಬಾ ಉಪಸ್ಥಿತರಿದ್ದರು.3
- ಬೆಂಗಳೂರಿನಲ್ಲಿ ಕರ್ನಾಟಕ ಜನತಾ ಸೇನಾ ದಳ ಆಯೋಜಿಸಿದ್ದ ಸಂಗಮ ಸಮಾವೇಶ ಕಾರ್ಯಕ್ರಮದಲ್ಲಿ ಸಮಾಜಸೇವಕ ಹಾಗೂ ಪತ್ರಕರ್ತ ನಜೀರ್ ಅಹ್ಮದ್ ಚೋರಗಸ್ತಿ ಅವರಿಗೆ 'ಭಾರತ ಬುದ್ಧ ಶ್ರೀ ರಾಷ್ಟ್ರೀಯ ಪ್ರಶಸ್ತಿ' ನೀಡಿ ಗೌರವಿಸಲಾಯಿತು. ಅವರ ಸಮಾಜಮುಖಿ ಸೇವೆ, ಪತ್ರಿಕೋದ್ಯಮ ಕ್ಷೇತ್ರದ ಕೊಡುಗೆ ಹಾಗೂ ಜನಪರ ಕಾರ್ಯಗಳನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಕಾರ್ಯಕ್ರಮದ ಸಾನ್ನಿಧ್ಯವನ್ನು ಬೆಂಗಳೂರಿನ ಶ್ರೀ ಬೇಲಿ ಮಠ ಮಹಾಸಂಸ್ಥಾನದ ಶ್ರೀ ಶ್ರೀ ಪರಮಪೂಜ್ಯ ಶ್ರೀ ನಿ.ಪ್ರ. ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು ವಹಿಸಿದ್ದರು. ಸನ್ಮಾನ್ಯ ಶ್ರೀ ಪುರುಷೋತ್ತಮ ಬಿಳಿಮಳೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು, ಹಾಗೂ ಬೆಂಗಳೂರು ಉಪ ಪೊಲೀಸ್ ಆಯುಕ್ತರಾದ ಶ್ರೀ ಮಂಜುನಾಥ ಬಾಬು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಜನತಾ ಸೇನಾ ದಳದ ಗೌರವಾಧ್ಯಕ್ಷರು, ಖ್ಯಾತ ಪತ್ರಕರ್ತರು, ನಾಟಕಕಾರರು, ಲೇಖಕರು, ನಿರ್ದೇಶಕರು, ಚಲನಚಿತ್ರ ತಂತ್ರಜ್ಞರು, ಪರಿಸರ ಪ್ರೇಮಿಗಳು, ಚಿಂತಕರು, ಸಾಹಿತಿಗಳು, ಸಮಾಜಸೇವಕರು ಹಾಗೂ ವಾಸ್ತು-ಜ್ಯೋತಿಷ್ಯ ತಜ್ಞರಾದ ಡಾ. ಕೆಂಚನೂರ್ ಶಂಕರ್ ಸ್ವಾಗತ ಭಾಷಣ ನೆರವೇರಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಜನತಾ ಸೇನಾ ದಳದ ರಾಜ್ಯಾಧ್ಯಕ್ಷರಾದ ಶ್ರೀ ಎಚ್. ಸದಾಶಿವ, ಜಿಲ್ಲಾ ಕಾರ್ಮಿಕ ಅಧ್ಯಕ್ಷರಾದ ಡಾ. ಸಿದ್ದು ಕಲ್ಲೂರ್, ಶ್ರೀ ಆನಂದ ಜಾದವ್ ಸೇರಿದಂತೆ ಹಲವು ಗಣ್ಯರು, ಪತ್ರಕರ್ತರು, ಸಾಮಾಜಿಕ ಹೋರಾಟಗಾರರು ಹಾಗೂ ಸಮಾಜಸೇವಕರು ಉಪಸ್ಥಿತರಿದ್ದರು.1