Shuru
Apke Nagar Ki App…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಸೋಮವಾರ ನಡೆದ ದ್ವಿತೀಯ ಪಿ.ಯು.ಸಿ ಸಮಾಜಶಾಸ್ತ್ರ ಪರೀಕ್ಷೆಗೆ 3302 ವಿದ್ಯಾರ್ಥಿಗಳು ಹಾಜರಾಗಿದ್ದು, 91 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಜೀವಶಾಸ್ತ್ರ ಪರೀಕ್ಷೆಗೆ 11935 ವಿದ್ಯಾರ್ಥಿಗಳು ಹಾಜರಾಗಿದ್ದು, 32 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಕಂಪ್ಯೂಟರ್ ಸಯನ್ಸ್ ಪರೀಕ್ಷೆಗೆ 10657 ವಿದ್ಯಾರ್ಥಿಗಳು ಹಾಜರಾಗಿದ್ದು, 29 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.
Shamsheer Budoli
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಸೋಮವಾರ ನಡೆದ ದ್ವಿತೀಯ ಪಿ.ಯು.ಸಿ ಸಮಾಜಶಾಸ್ತ್ರ ಪರೀಕ್ಷೆಗೆ 3302 ವಿದ್ಯಾರ್ಥಿಗಳು ಹಾಜರಾಗಿದ್ದು, 91 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಜೀವಶಾಸ್ತ್ರ ಪರೀಕ್ಷೆಗೆ 11935 ವಿದ್ಯಾರ್ಥಿಗಳು ಹಾಜರಾಗಿದ್ದು, 32 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಕಂಪ್ಯೂಟರ್ ಸಯನ್ಸ್ ಪರೀಕ್ಷೆಗೆ 10657 ವಿದ್ಯಾರ್ಥಿಗಳು ಹಾಜರಾಗಿದ್ದು, 29 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.
More news from ಕರ್ನಾಟಕ and nearby areas
- ಕಡಬ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೆಮ್ಮಾರದಲ್ಲಿ ಜೀಪು ಪಲ್ಟಿಯಾಗಿ ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಜೀಪು ಚಾಲಕ ದೇವಿಪ್ರಸಾದ್ ಗಾಯಗೊಂಡವರಾಗಿದ್ದಾರೆ. ಇವರು ಉಪ್ಪಿನಂಗಡಿಯಿಂದ ಕೊಯಿಲ ಕಡೆಗೆ ಬರುತ್ತಿದ್ದ ವೇಳೆ ಕೆಮ್ಮಾರದಲ್ಲಿ ನಿಯಂತ್ರಣ ತಪ್ಫಿ ರಸ್ತೆ ಬದಿಯ ಗುಂಡಿಗೆ ಬಿದ್ದಿದೆ ಎಂದು ವರದಿಯಾಗಿದೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ್ದ ಸ್ಥಳೀಯ ಯುವಕರಾದ ಹನೀಫ್ ಅಳಕೆ, ನವಾಝ್, ಝುಬೈರ್ ಹಾಗೂ ಹಬೀಬ್‌ರವರು ಗಾಯಾಳುವನ್ನು ಮೇಲೆತ್ತಿ, ಹನೀಫ್‌ರವರ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ. ದೇವಿಪ್ರಸಾದ್‌ರವರು ಉಪ್ಪಿನಂಗಡಿ ಸೂರ್ಯ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.1
- ಶಿವಮೊಗ್ಗ: ನಗರದ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ವಾಹನ ನಿಲುಗಡೆ ವಿಚಾರವಾಗಿ ಸ್ವಲ್ಪ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ಇಂದು ನಡೆದಿದೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಈದ್ಗಾ ಮೈದಾನದ ವಿಚಾರ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಮೈದಾನದ ಸ್ವಚ್ಛತೆಗಾಗಿ ಬ್ಯಾರಿಕೇಡ್ ಅಳವಡಿಸಿರುವುದನ್ನು ವಿರೋಧಿಸಿ ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಮಾ: 20 ರಂದು ರಂಜಾನ್ ಹಬ್ಬ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮೈದಾನವನ್ನು ಸಿದ್ಧಪಡಿಸಿಕೊಡು ವಂತೆ ಮುಸ್ಲಿಂ ಸಂಘಟನೆಗಳು ಮಹಾನಗರ ಪಾಲಿಕೆಗೆ ಮನವಿ ಮಾಡಿದ್ದವು. ಈ ಕೋರಿಕೆಯ ಮೇರೆಗೆ ಪಾಲಿಕೆ ಯು ಇಂದು ಮೈದಾನದ ಸುತ್ತ ಬ್ಯಾರಿಕೇಡ್ ಹಾಕಿ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿತ್ತು. ಆದರೆ, ಹಬ್ಬಕ್ಕೆ ಇನ್ನೂ ಮೂರು ದಿನ ಬಾಕಿ ಇರುವಾಗಲೇ ಬ್ಯಾರಿಕೇಡ್ ಹಾಕಿರುವುದರಿಂದ ಸಾರ್ವಜನಿಕ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ ಎಂದು ಹಿಂದೂ ಪರ ಸಂಘಟನೆಗಳ ಪದಾಧಿಕಾರಿಗಳು ಸ್ಥಳಕ್ಕಾಗಮಿಸಿ ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಪ್ರತಿಕ್ರಿಯಿಸಿದ ಎಸ್ಪಿ ನಿಖಿಲ್ ಬಿ.ಪಾರ್ಕಿಂಗ್ ಸಮಸ್ಯೆ ಯಾಗದಂತೆ ಪಾಲಿಕೆ ಅಧಿಕಾರಿ ಗಳೊಂದಿಗೆ ಚರ್ಚಿಸಲಾಗಿದೆ. ಯುಗಾದಿ ಹಬ್ಬದ ಕಾರಣ ಕೆಲಸ ಗಾರರ ಕೊರತೆ ಎದುರಾಗಬಹುದು ಎಂಬ ಮುನ್ನೆಚ್ಚರಿಕೆಯಿಂದ ಮುಂಚಿತವಾಗಿ ಸ್ವಚ್ಛತೆ ಆರಂಭಿಸ ಲಾಗಿದೆ.ಸಾರ್ವಜನಿಕರಿಗೆ ತೊಂದರೆಯಾಗದಂತೆ ಮತ್ತು ಶಾಂತಿಯುತವಾಗಿ ಹಬ್ಬ ಆಚರಿಸಲು ಎಲ್ಲಾ ಮುಖಂಡರು ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.1
- ಭದ್ರಾವತಿ ತಾಲ್ಲೂಕು ಕನಕ ಮಂಟಪದಲ್ಲಿ ಸುಮಾರು 8 ಲಕ್ಷದ 50 ಸಾವಿರ ವೆಚ್ಚದಲ್ಲಿ ನಿರ್ಮಾಣವಾಗಿರುವ ಶೌಚಾಲಯ ಕಳಪೆ ನಗರಸಭಾ ಆಡಳಿತ ಇದರ ಬಗ್ಗೆ ಎಚ್ಚೆತ್ತುಕೊಳ್ಳಬೇಕೆಂದು ಮಾನವ ಹಕ್ಕು ಹೋರಾಟ ಸಮಿತಿ ವತಿಯಿಂದ ಆರೋಪ ಸಾರ್ವಜನಿಕರಿಗೆ ಉಪಯೋಗಕ್ಕೆ ಆಗದಂತೆ ಇರುವ ಸೌಚಾಲಯ ಈ ರೀತಿ ಇದ್ದರೆ ಹೇಗೆ ನಗರ ಸಭೆ ಅಧಿಕಾರಿಗಳು ಇದರ ಬಗ್ಗೆ ಸ್ವಚ್ಛಗೊಳಿಸಲು ಮುಂದಾಗಬೇಕು ಮಾನವ ಹಕ್ಕು ಹೋರಾಟ ಸಮಿತಿ ಬಿಎನ್ ರಾಜು ಆಗ್ರಹ1
- Post by Dr CP Patel 8302083835 आयुष हॉस्पिटल1
- ಸೊರಬ ತಾಲ್ಲೂಕು ಶಾಂತಪುರ ಮಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಹಾಗೂ ರಂಬಾಪುರಿ ಪೀಠದ ಶ್ರೀ ಶ್ರೀ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ|| ವೀರ ಸೋಮೇಶ್ವರ ಶಿವಾಚಾರ್ಯ ಮಹಾ ಭಗವದ್ಪಾದಂಗಳವರ ಇಷ್ಟಲಿಂಗ ಪೂಜಾ ನಿಮಿತ್ಯ ಶ್ರೀ ಜಗದ್ಗುರು ಪಂಚಾಚಾರ್ಯರ ಧ್ವಜಾರೋಹಣ ಕಾರ್ಯಕ್ರಮವು ನೆರವೇರಿತು ಧ್ವಜಾರೋಹಣವನ್ನು ಷ ಬ್ರ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಶಾಂತಪುರ ಮಠ ನೆರೆವೇರಿಸಿದರು ಸಂಗೊಳ್ಳಿ ಶ್ರೀಗಳು. ಹಾರನಹಳ್ಳಿ ಶ್ರೀಗಳು. ಕುರುವತ್ತಿ ಶ್ರೀಗಳು. ಉಪಸ್ಥಿತರಿದ್ದರು ಸುತ್ತಮುತ್ತಲಿನ ಗ್ರಾಮದ ಸದ್ಭಕ್ತರು ಭಾಗಿಯಾಗಿದ್ದರು ದಿನಾಂಕ 17-03-2026ನೇ ಮಂಗಳವಾರ ಬೆಳಿಗ್ಗೆ 9 ಕ್ಕೆ ಜಗದ್ಗುರುಗಳವರ ಸಾಮೂಹಿಕ ಇಷ್ಟ ಲಿಂಗಪೂಜಾ ಕಾರ್ಯಕ್ರಮವು ನೆರವೇರುವುದು ಸದ್ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಜಗದ್ಗುರುಗಳವರ ಕೃಪ ಆಶೀರ್ವಾದ ಪಡೆದುಕೊಳ್ಳಬಹುದು1
- #ವಿರಾಟ್ ಹಿಂದೂ ಸಮಾಜೋತ್ಸವ.1
- ಕೆ.ಆರ್.ಪೇಟೆ,ಮಾ.16: ತಾಲ್ಲೂಕಿನ ಬೂಕನಕೆರೆ ಮತ್ತು ಶೀಳನೆರೆ ಹೋಬಳಿಗಳಿಗೆ ನೀರಾವರಿ ಸೌಲಭ್ಯ ಸೌಲಭ್ಯವನ್ನು ಒದಗಿಸುವ ಕಟ್ಟಹಳ್ಳಿ ಬಳಿ ನಿರ್ಮಿಸಲಾಗಿರುವ ಸುಮಾರು 165ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಿಸಲಾಗಿರುವ ಐಚನಹಳ್ಳಿ ಏತ ನೀರಾವರಿ ಯೋಜನೆಯ ಎರಡನೇ ಹಂತದ ನೀರು ಪೂರೈಸುವ ಪಂಪ್‌ಹೌಸ್ ಕೇಂದ್ರವನ್ನು ಮೊಸಳೆಕೊಪ್ಪಲು ಬಳಿ ಶಾಸಕ ಹೆಚ್.ಟಿ.ಮಂಜು ವೀಕ್ಷಣೆ ಮಾಡಿ ಆದಷ್ಟು ಬೇಗ ಉದ್ಘಾಟನೆಗೆ ಸಿದ್ದತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ತಾಲ್ಲೂಕಿನ ಮೊಸಳೇಕೊಪ್ಪಲು ಗ್ರಾಮದ ಬಳಿ ನಿರ್ಮಿಸಿರುವ ಎರಡನೇ ಹಂತದ ಏತ ನೀರಾವರಿ ಯೋಜನೆಯ ಪಂಪ್ ಹೌಸ್ ಕೇಂದ್ರವನ್ನು ವೀಕ್ಷಣೆ ಮಾಡಿ ನಂತರ ಶೀಳನೆರೆ ಹೋಬಳಿಯ ಭೈರಾಪುರ ಕೆರೆಗೆ ಪ್ರಾಯೋಗಿಕವಾಗಿ ನೀರು ತುಂಬಿಸುವ ಕಾರ್ಯವನ್ನು ಸಣ್ಣ ನೀರಾವರಿ ಅಧಿಕಾರಿಗಳು ಮತ್ತು ಭೈರಾಪುರ ಗ್ರಾಮಸ್ಥರೊಂದಿಗೆ ವೀಕ್ಷಣೆ ಮಾಡಿ ನೀರನ್ನು ಪೋಲು ಮಾಡದಂತೆ ಸಂರಕ್ಷಣೆ ಮಾಡಬೇಕು ಎಂದು ಮನವಿ ಮಾಡಿದರು. ಐಚನಹಳ್ಳಿ ಏತನೀರಾವರಿ ಯೋಜನೆಯನ್ನು ನಮ್ಮ ತಾಲ್ಲೂಕಿನ ಬೂಕನಕೆರೆ ಗ್ರಾಮದ ಸುಪುತ್ರರಾದ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ತವರೂರಿಗೆ ವಿಶೇಷ ಯೋಜನೆ ರೂಪಿಸಬೇಕೆಂಬ ಮಹದಾಸೆಯಿಂದ 165ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕಟ್ಟಹಳ್ಳಿ ಬಳಿ ಏತ ನೀರಾವರಿ ಯೋಜನೆಗೆ ತಮ್ಮ ಅಧಿಕಾರದ ಅವಧಿಯಲ್ಲಿ 2020ರಲ್ಲಿ ಚಾಲನೆ ನೀಡಿದ್ದರು. ಇದರ ಮೊದಲ ಅಂತದ ಕಾಮಗಾರಿಯು ಮುಗಿದು ಬೂಕನಕೆರೆ ಹೋಬಳಿಯ ಎಲ್ಲಾ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ ಕಳೆದ ವರ್ಷ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಮತ್ತು ಕ್ಷೇತ್ರದ ಶಾಸಕನಾದ ನಾನು ಸೇರಿ ಉದ್ಘಾಟನೆ ಮಾಡಿದ್ದೆವು. ಈಗ ಎರಡನೇ ಹಂತದ ಏತನೀರಾವರಿ ಯೋಜನೆಯ ಕಾಮಗಾರಿಯು ಮುಕ್ತಾಯಗೊಂಡಿದ್ದು ಉದ್ಘಾಟನೆಗೆ ಸಿದ್ದವಾಗಿದೆ. ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚೆಲುವರಾಯಸ್ವಾಮಿ ಮತ್ತು ಸಂಬAಧಪಟ್ಟ ಸಚಿವರು ಉದ್ಘಾಟನೆಗೆ ಹಸಿರು ನಿಶಾನೆ ತೋರಿದ ಕೂಡಲೇ ದಿನಾಂಕ ನಿಗಧಿಪಡಿಸಿದ ಎರಡನೇ ಹಂತದ ಏತನೀರಾವರಿ ಯೋಜನೆಯನ್ನು ಉದ್ಘಾಟಿಸಲಾಗುವುದು. ಇದರ ಪ್ರಾಯೋಗಿಕ ನೀರು ಹರಿಸುವ ಕಾರ್ಯಕ್ಕೆ ಇಂದು ಚಾಲನೆ ನೀಡಲಾಗಿದೆ. ಅಧಿಕೃತ ಉದ್ಘಾಟನೆಯ ನಂತರ ಶೀಳನೆರೆ ಹೋಬಳಿಯ ಎಲ್ಲಾ ಕೆರೆಕಟ್ಟೆಗಳಿಗೆ ನೀರು ತುಂಬಿಸಲು ಕ್ರಮ ವಹಿಸಲಾಗುವುದು. ಮಳೆಯಾಶ್ರಿತ ಪ್ರದೇಶವಾಗಿರುವ ಶೀಳನೆರೆ ಮತ್ತು ಬೂಕನಕೆರೆ ಹೋಬಳಿಗಳಿಗೆ ಈ ಏತ ನೀರಾವರಿ ಯೋಜನೆ ವರಧಾನವಾದ ಯೋಜನೆಯಾಗಿದೆ. ಅಂತರ್ಜಲ ಮಟ್ಟ ವೃದ್ದಿಯಾಗಲಿದೆ. ರೈತರ ಕೃಷಿ ಕೊಳವೆ ಬಾವಿಗಳು, ರೈತರ ತೆರೆದ ಬಾವಿಗಳು, ಕುಡಿಯುವ ನೀರಿನ ಮೂಲಗಳಲ್ಲಿ ಅಂತರ್ಜಲ ಮಟ್ಟದ ಹೆಚ್ಚಲಿದೆ. ಕುಡಿಯುವ ನೀರಿಗೆ ಹಾಗೂ ಜನ-ಜಾನುವಾರುಗಳಿಗೆ ಅನುಕೂಲವಾಗಲಿದೆ. ಈ ಏತ ಯೋಜನೆಗೆ ಕಾರಣಕರ್ತರಾದ ಮಾಜಿ ಸಿ.ಎಂ.ಯಡಿಯೂರಪ್ಪ ಹಾಗೂ ಮಾಜಿ ಸಚಿವ ನಾರಾಯಣಗೌಡ ಅವರಿಗೆ ಎರಡೂ ಹೋಬಳಿಯ ಜನತೆಯ ಪರವಾಗಿ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಶಾಸಕ ಹೆಚ್.ಟಿ.ಮಂಜು ಹೇಳಿದರು. ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ನಿರ್ಮಲೇಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಭೈರಾಪುರ ಹರೀಶ್, ತಾಲ್ಲೂಕು ಜೆಡಿಎಸ್ ರೈತ ಮೋರ್ಚಾ ಅಧ್ಯಕ್ಷ ಹೆಳವೇಗೌಡ, ಮೊಸಳೇಕೊಪ್ಪಲು ಗ್ರಾಮದ ಯಜಮಾನರುಗಳಾದ ಪಟೇಲ್ ನಿಂಗೇಗೌಡ, ಯಜಮಾನ್ ರಾಮಕೃಷ್ಣೇಗೌಡ, ರಮೇಶ್, ಬಸವೇಗೌಡ, ರಂಗೇಗೌಡ, ಕೆಂಪಣ್ಣ ರವಿ, ಡೇರಿ ತಿಮ್ಮೇಗೌಡ, ನಗುವನಹಳ್ಳಿ ರಾಮಕೃಷ್ಣೇಗೌಡ, ನಾಗೇಗೌಡ, ಅರೆ ರಮೇಶ್, ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಮಂಜುನಾಥ್, ಶೀಳನೆರೆ ಹೋಬಳಿ ಜೆಡಿಎಸ್ ಅಧ್ಯಕ್ಷ ಸ್ವಾಮೀಗೌಡ, ಜಿಲ್ಲಾ ಜೆಡಿಎಸ್ ಕರ‍್ಯಕಾರಣಿ ಸದಸ್ಯ ಕುರುಬಹಳ್ಳಿ ಕೆ.ಬಿ.ನಾಗೇಶ್, ಜೈನ್ನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಧರಣೇಶ್, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯ ಚಿಕ್ಕಗಾಡಿಗನಹಳ್ಳಿ ಸೋಮಶೇಖರ್, ಗಂಜಿಗೆರೆಕೊಪ್ಪಲು ರಾಮಕೃಷ್ಣೇಗೌಡ, ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಚಿತ್ರಶೀರ್ಷಿಕೆ:16.ಕೆ.ಆರ್.ಪಿ-02: ಕೆ.ಆರ್.ಪೇಟೆ: ತಾಲ್ಲೂಕಿನ ಬೂಕನಕೆರೆ ಮತ್ತು ಶೀಳನೆರೆ ಹೋಬಳಿಗಳಿಗೆ ನೀರಾವರಿ ಸೌಲಭ್ಯ ಸೌಲಭ್ಯವನ್ನು ಒದಗಿಸುವ ಕಟ್ಟಹಳ್ಳಿ ಬಳಿ ನಿರ್ಮಿಸಲಾಗಿರುವ ಸುಮಾರು 165ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಐಚನಹಳ್ಳಿ ಏತ ನೀರಾವರಿ ಯೋಜನೆಯ ಎರಡನೇ ಹಂತದ ನೀರು ಪೂರೈಸುವ ಪಂಪ್‌ಹೌಸ್ ಕೇಂದ್ರವನ್ನು ಶಾಸಕ ಹೆಚ್.ಟಿ.ಮಂಜು ವೀಕ್ಷಣೆ ಮಾಡಿ ಆದಷ್ಟು ಬೇಗ ಉದ್ಘಾಟನೆಗೆ ಸಿದ್ದತೆ ಮಾಡಿಕೊಳ್ಳುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ==================================4
- ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ.10ರಿಂದ ನಡೆಯುವ ಜಾತ್ರೋತ್ಸವ ಸೇರಿದಂತೆ ಏ.17ರ ಬ್ರಹ್ಮರಥೋತ್ಸವಕ್ಕೆ ಸಿದ್ಧತೆಗಾಗಿ ಮಾ.16ರಂದು ಬೆಳಿಗ್ಗೆ ಬ್ರಹ್ಮರಥ ಮಂದಿರದಿಂದ ಬ್ರಹ್ಮರಥವನ್ನು ರಥ ಬೀದಿಗೆ ತರುವ ಮುಹೂರ್ತದೊಂದಿಗೆ ಜಾತ್ರೆಗೆ ಕ್ಷಣಗಣನೆ ನಡೆದಿದೆ. ಪ್ರತಿ ಬಾರಿ ರಥ ಕಟ್ಟುವ ಸ್ಥಳದಲ್ಲಿ ಒಂದಲ್ಲ ಒಂದು ಬಿಲ್ವಪತ್ರೆ, ತುಳಸಿ, ಹೂವುಗಳು ಭೂಸ್ಪರ್ಶ ಮಾಡುತ್ತಿದ್ದು ಈ ಬಾರಿ ಮಲ್ಲಿಗೆ ಮತ್ತು ಬಿಲ್ವಪತ್ರೆಯೊಂದು ಭೂ ಸ್ಪರ್ಶ ಮಾಡಿ ಜಾತ್ರೆಗೆ ಪೂರ್ಣಾನುಗ್ರಹ ಸೂಚಿಸಿದೆ. ಬೆಳಿಗ್ಗೆ ಶುಭ ಮುಹೂರ್ತದಲ್ಲಿ ದೇವಳದ ಪ್ರಧಾನ ಅರ್ಚಕ ವೇ.ಮೂ ವಸಂತ ಕೆದಿಲಾಯ ಅವರು ಬ್ರಹ್ಮರಥಕ್ಕೆ ಮಲ್ಲಿಗೆ ಪುಷ್ಪ, ಗಂಧ, ಬಿಲ್ವಪತ್ರೆ ಸಮರ್ಪಣೆ ಮಾಡಿ ವಿಜೃಂಭಣೆಯಿಂದ ಜಾತ್ರೆ ನಡೆಯುವಂತೆ ಪ್ರಾರ್ಥಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಅರ್ಚಕರು ತೆಂಗಿನ ಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು.1