logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿವಮೊಗ್ಗ-ಸಿನಿಮೀಯ ರೀತಿಯಲ್ಲಿ ಪೊಲೀಸರ ಚೇಸಿಂಗ್- ದನಗಳ್ಳರ ಕಾರು ಪೊಲೀಸರ ವಶಕ್ಕೆ ಶಿವಮೊಗ್ಗ: ಜಿಲ್ಲೆಯ ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿದ್ದ ಸರಣಿ ದನ ಕಳ್ಳತನ ಪ್ರಕರಣದ ತನಿಖೆ ವೇಳೆ ಶಂಕಿತ ಆರೋಪಿಗಳನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಆಗುಂಬೆಯಿಂದ ಆರಂಭವಾದ ಈ ಹೈ-ವೋಲ್ಟೇಜ್ ಚೇಸಿಂಗ್ ರಿಪ್ಪನ್‌ಪೇಟೆ ಸಮೀಪದ ಬೆನವಳ್ಳಿವರೆಗೆ ಮುಂದುವರಿ ದಿದ್ದು, ಕೊನೆಗೆ ಆರೋಪಿಗಳು ಕಾರನ್ನು ರಸ್ತೆ ಬದಿಯಲ್ಲಿ ಬಿಟ್ಟು ದಟ್ಟ ಅರಣ್ಯದೊಳಗೆ ನುಗ್ಗಿ ಪರಾರಿಯಾಗಿದ್ದಾರೆ. ಘಾಟಿ ರಸ್ತೆಯಲ್ಲಿ ಬೆಳಗಿನ ಜಾವ ಆರಂಭ ವಾದ ಈ ಕಾರ್ಯಾಚರಣೆ ಹಲವು ಕಿಲೋ ಮೀಟರ್‌ಗಳವರೆಗೆ ಮುಂದುವರಿದಿತು. ಒಂದೆಡೆ ಸೈರನ್ ಮೊಳಗಿಸುತ್ತಾ ವೇಗವಾಗಿ ಚಲಿಸುತ್ತಿದ್ದ ಪೊಲೀಸ್ ವಾಹನಗಳು, ಮತ್ತೊಂದೆಡೆ ತಪ್ಪಿಸಿಕೊಳ್ಳಲು ಅತಿವೇಗದಲ್ಲಿ ಕಾರು ಚಲಾಯಿಸುತ್ತಿದ್ದ ಆರೋಪಿಗಳು ಎಂಬ ದೃಶ್ಯ ಕೆಲಕಾಲ ಸಿನಿಮಾವನ್ನೇ ನೆನಪಿಸುವಂತಿತ್ತು. ಪಕ್ಕಾ ಮಾಹಿತಿ ಆಧರಿಸಿ ಕಾರ್ಯಾಚರಣೆ ಆಗುಂಬೆ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಸರಣಿಯಾಗಿ ನಡೆದಿದ್ದ ದನ ಕಳ್ಳತನ ಪ್ರಕರಣಗಳ ತನಿಖೆ ನಡೆಸುತ್ತಿದ್ದ ಆಗುಂಬೆ ಪಿಎಸ್‌ಐ ಶಿವನಗೌಡ ಮತ್ತು ತಂಡಕ್ಕೆ ಮುಂಜಾನೆ ಶಂಕಿತ ಆರೋಪಿಗಳು ನಿರ್ದಿಷ್ಟ ಕಾರಿನಲ್ಲಿ ಸಂಚರಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ಮಾಹಿತಿ ಸಿಕ್ಕ ತಕ್ಷಣ ಪೊಲೀಸರು ಕಾರ್ಯಾಚರಣೆಗೆ ಇಳಿದು ವಾಹನವನ್ನು ತಡೆಯಲು ಮುಂದಾದರು. ಆದರೆ ಪೊಲೀಸರನ್ನು ಗಮನಿಸಿದ ಚಾಲಕ ಕಾರಿನ ವೇಗ ಹೆಚ್ಚಿಸಿ ಅಲ್ಲಿಂದ ತಪ್ಪಿಸಿ ಕೊಳ್ಳಲು ಯತ್ನಿಸಿದ್ದಾನೆ. ಆಗುಂಬೆಯಿಂದ ರಿಪ್ಪನ್‌ಪೇಟೆ ಮಾರ್ಗವಾಗಿ ಕಾರು ಚಲಾಯಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ನಿರಂತರವಾಗಿ ಬೆನ್ನಟ್ಟಿದರು. ರಿಪ್ಪನ್‌ಪೇಟೆ ಪೊಲೀಸರಿಗೂ ಅಲರ್ಟ್:- ಘಟನೆಯ ಮಾಹಿತಿ ದೊರೆಯುತ್ತಿದ್ದಂತೆಯೇ ಆಗುಂಬೆ ಪೊಲೀಸರು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಅವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಎಚ್ಚೆತ್ತ ರಿಪ್ಪನ್‌ಪೇಟೆ ಪೊಲೀಸರು ಶಿವಮೊಗ್ಗ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಸಮೀಪ ಬ್ಯಾರಿಕೇಡ್ ಅಳವಡಿಸಿ ವಾಹನ ತಡೆಯಲು ಪ್ರಯತ್ನಿಸಿದರು. ಆದರೆ ಆರೋಪಿಗಳು ಅಲ್ಲಿಯೂ ವಾಹನ ನಿಲ್ಲಿಸದೆ ಬ್ಯಾರಿಕೇಡ್ ತಪ್ಪಿಸಿಕೊಂಡು ಬೆನವಳ್ಳಿಯತ್ತ ಕಾರು ಚಲಾಯಿಸಿ ಪರಾರಿ ಯಾಗಲು ಮುಂದಾದರು. ಈ ವೇಳೆ ಎರಡೂ ಠಾಣೆಗಳ ಪೊಲೀಸರು ಜಂಟಿಯಾಗಿ ಬೆನ್ನಟ್ಟುವ ಕಾರ್ಯಾಚರಣೆ ಯನ್ನು ಮತ್ತಷ್ಟು ತೀವ್ರಗೊಳಿಸಿದರು. ಕಾರು ಬಿಟ್ಟು ಕಾಡಿಗೆ ಪರಾರಿ:- ಪೊಲೀಸರ ಚೇಸಿಂಗ್ ತೀವ್ರಗೊಂಡಂತೆ ಆತಂಕಕ್ಕೊಳಗಾದ ಆರೋಪಿಗಳು ಬೆನವಳ್ಳಿ ಬಸ್ ನಿಲ್ದಾಣದ ಸಮೀಪದ ಕಚ್ಚಾ ರಸ್ತೆಗೆ ಕಾರು ತಿರುಗಿಸಿ, ರಸ್ತೆ ಬದಿಯಲ್ಲಿ ಕಾರನ್ನು ನಿಲ್ಲಿಸಿ ಕ್ಷಣಾರ್ಧದಲ್ಲೇ ಹೊರಬಂದು ಸಮೀಪದ ದಟ್ಟ ಅರಣ್ಯದೊಳಗೆ ಓಡಿ ಪರಾರಿಯಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿದರೂ ಆರೋಪಿಗಳು ಅರಣ್ಯದೊಳಗೆ ನುಗ್ಗಿದ್ದರಿಂದ ತಕ್ಷಣ ಬಂಧಿಸಲು ಸಾಧ್ಯವಾಗಿಲ್ಲ. ಡ್ರೋನ್ ಮೂಲಕ ಶೋಧ ಕಾರ್ಯ ಘಟನೆಯ ಬಳಿಕ ಆಗುಂಬೆ ಹಾಗೂ ರಿಪ್ಪನ್‌ಪೇಟೆ ಪೊಲೀಸರು ಜಂಟಿಯಾಗಿ ಬೆನವಳ್ಳಿ ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದಾರೆ. ಆರೋಪಿಗಳ ಚಲನವಲನ ಪತ್ತೆಹಚ್ಚಲು ಡ್ರೋನ್ ಕ್ಯಾಮೆರಾಗಳನ್ನೂ ಬಳಸಲಾಗುತ್ತಿದ್ದು, ಅರಣ್ಯದ ವಿವಿಧ ಭಾಗಗಳಲ್ಲಿ ತೀವ್ರ ಶೋಧ ಮುಂದುವರಿದಿದೆ. ಆರೋಪಿಗಳು ಬಿಟ್ಟುಹೋದ ಕಾರನ್ನು ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಕಾರಿನೊಳಗೆ ದೊರೆತಿರುವ ದಾಖಲೆಗಳು ಹಾಗೂ ಇತರೆ ಸುಳಿವುಗಳ ಆಧಾರದ ಮೇಲೆ ತನಿಖೆ ಚುರುಕುಗೊಂಡಿದೆ. ದೊಡ್ಡ ಕಳ್ಳತನ ಜಾಲದ ಶಂಕೆ:- ಇತ್ತೀಚಿನ ದಿನಗಳಲ್ಲಿ ಆಗುಂಬೆ ಭಾಗದಲ್ಲಿ ವರದಿಯಾಗಿರುವ ದನ ಕಳ್ಳತನ ಪ್ರಕರಣಗಳ ಹಿಂದೆ ಸಂಘಟಿತ ಗ್ಯಾಂಗ್ ಕಾರ್ಯನಿರ್ವಹಿಸುತ್ತಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಈ ಪ್ರಕರಣದ ತನಿಖೆಯನ್ನು ಪೊಲೀಸರು ವಿವಿಧ ಆಯಾಮಗಳಲ್ಲಿ ಮುಂದುವರಿಸಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರಿಗೆ ಮನವಿ:- ದೂನ, ಬೆನವಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳಿಗೆ ಪೊಲೀಸರು ಎಚ್ಚರಿಕೆ ನೀಡಿದ್ದು, ಕಾಡು ಪ್ರದೇಶ ಅಥವಾ ಗ್ರಾಮಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದರೆ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ. ಆರೋಪಿಗಳ ಬಂಧನಕ್ಕಾಗಿ ವಿಶೇಷ ತಂಡಗಳು ನಿರಂತರ ಕಾರ್ಯಾಚರಣೆ ನಡೆಸುತ್ತಿವೆ.

1 day ago
user_ಆರ್.ವಿ.ಕೃಷ್ಣ
ಆರ್.ವಿ.ಕೃಷ್ಣ
Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
1 day ago
ee8aad9e-1d77-40a4-8eb0-e517ab410e72

ಶಿವಮೊಗ್ಗ-ಸಿನಿಮೀಯ ರೀತಿಯಲ್ಲಿ ಪೊಲೀಸರ ಚೇಸಿಂಗ್- ದನಗಳ್ಳರ ಕಾರು ಪೊಲೀಸರ ವಶಕ್ಕೆ ಶಿವಮೊಗ್ಗ: ಜಿಲ್ಲೆಯ ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿದ್ದ ಸರಣಿ ದನ ಕಳ್ಳತನ ಪ್ರಕರಣದ ತನಿಖೆ ವೇಳೆ ಶಂಕಿತ ಆರೋಪಿಗಳನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಆಗುಂಬೆಯಿಂದ ಆರಂಭವಾದ ಈ ಹೈ-ವೋಲ್ಟೇಜ್ ಚೇಸಿಂಗ್ ರಿಪ್ಪನ್‌ಪೇಟೆ ಸಮೀಪದ ಬೆನವಳ್ಳಿವರೆಗೆ ಮುಂದುವರಿ ದಿದ್ದು, ಕೊನೆಗೆ ಆರೋಪಿಗಳು ಕಾರನ್ನು ರಸ್ತೆ ಬದಿಯಲ್ಲಿ ಬಿಟ್ಟು ದಟ್ಟ ಅರಣ್ಯದೊಳಗೆ ನುಗ್ಗಿ ಪರಾರಿಯಾಗಿದ್ದಾರೆ. ಘಾಟಿ ರಸ್ತೆಯಲ್ಲಿ ಬೆಳಗಿನ ಜಾವ ಆರಂಭ ವಾದ ಈ ಕಾರ್ಯಾಚರಣೆ ಹಲವು ಕಿಲೋ ಮೀಟರ್‌ಗಳವರೆಗೆ ಮುಂದುವರಿದಿತು. ಒಂದೆಡೆ ಸೈರನ್ ಮೊಳಗಿಸುತ್ತಾ ವೇಗವಾಗಿ ಚಲಿಸುತ್ತಿದ್ದ ಪೊಲೀಸ್ ವಾಹನಗಳು, ಮತ್ತೊಂದೆಡೆ ತಪ್ಪಿಸಿಕೊಳ್ಳಲು ಅತಿವೇಗದಲ್ಲಿ ಕಾರು ಚಲಾಯಿಸುತ್ತಿದ್ದ ಆರೋಪಿಗಳು ಎಂಬ ದೃಶ್ಯ ಕೆಲಕಾಲ ಸಿನಿಮಾವನ್ನೇ ನೆನಪಿಸುವಂತಿತ್ತು. ಪಕ್ಕಾ ಮಾಹಿತಿ ಆಧರಿಸಿ ಕಾರ್ಯಾಚರಣೆ ಆಗುಂಬೆ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಸರಣಿಯಾಗಿ ನಡೆದಿದ್ದ ದನ ಕಳ್ಳತನ ಪ್ರಕರಣಗಳ ತನಿಖೆ ನಡೆಸುತ್ತಿದ್ದ ಆಗುಂಬೆ ಪಿಎಸ್‌ಐ ಶಿವನಗೌಡ ಮತ್ತು ತಂಡಕ್ಕೆ ಮುಂಜಾನೆ ಶಂಕಿತ ಆರೋಪಿಗಳು ನಿರ್ದಿಷ್ಟ ಕಾರಿನಲ್ಲಿ ಸಂಚರಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ಮಾಹಿತಿ ಸಿಕ್ಕ ತಕ್ಷಣ ಪೊಲೀಸರು ಕಾರ್ಯಾಚರಣೆಗೆ ಇಳಿದು ವಾಹನವನ್ನು ತಡೆಯಲು ಮುಂದಾದರು. ಆದರೆ ಪೊಲೀಸರನ್ನು ಗಮನಿಸಿದ ಚಾಲಕ ಕಾರಿನ ವೇಗ ಹೆಚ್ಚಿಸಿ ಅಲ್ಲಿಂದ ತಪ್ಪಿಸಿ ಕೊಳ್ಳಲು ಯತ್ನಿಸಿದ್ದಾನೆ. ಆಗುಂಬೆಯಿಂದ ರಿಪ್ಪನ್‌ಪೇಟೆ ಮಾರ್ಗವಾಗಿ ಕಾರು ಚಲಾಯಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ನಿರಂತರವಾಗಿ ಬೆನ್ನಟ್ಟಿದರು. ರಿಪ್ಪನ್‌ಪೇಟೆ ಪೊಲೀಸರಿಗೂ ಅಲರ್ಟ್:- ಘಟನೆಯ ಮಾಹಿತಿ ದೊರೆಯುತ್ತಿದ್ದಂತೆಯೇ ಆಗುಂಬೆ ಪೊಲೀಸರು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಅವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಎಚ್ಚೆತ್ತ ರಿಪ್ಪನ್‌ಪೇಟೆ ಪೊಲೀಸರು ಶಿವಮೊಗ್ಗ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಸಮೀಪ ಬ್ಯಾರಿಕೇಡ್ ಅಳವಡಿಸಿ ವಾಹನ ತಡೆಯಲು ಪ್ರಯತ್ನಿಸಿದರು. ಆದರೆ ಆರೋಪಿಗಳು ಅಲ್ಲಿಯೂ ವಾಹನ ನಿಲ್ಲಿಸದೆ ಬ್ಯಾರಿಕೇಡ್ ತಪ್ಪಿಸಿಕೊಂಡು ಬೆನವಳ್ಳಿಯತ್ತ ಕಾರು ಚಲಾಯಿಸಿ ಪರಾರಿ ಯಾಗಲು ಮುಂದಾದರು. ಈ ವೇಳೆ ಎರಡೂ ಠಾಣೆಗಳ ಪೊಲೀಸರು ಜಂಟಿಯಾಗಿ ಬೆನ್ನಟ್ಟುವ ಕಾರ್ಯಾಚರಣೆ ಯನ್ನು ಮತ್ತಷ್ಟು ತೀವ್ರಗೊಳಿಸಿದರು. ಕಾರು ಬಿಟ್ಟು ಕಾಡಿಗೆ ಪರಾರಿ:- ಪೊಲೀಸರ ಚೇಸಿಂಗ್ ತೀವ್ರಗೊಂಡಂತೆ ಆತಂಕಕ್ಕೊಳಗಾದ ಆರೋಪಿಗಳು ಬೆನವಳ್ಳಿ ಬಸ್ ನಿಲ್ದಾಣದ ಸಮೀಪದ ಕಚ್ಚಾ ರಸ್ತೆಗೆ ಕಾರು ತಿರುಗಿಸಿ, ರಸ್ತೆ ಬದಿಯಲ್ಲಿ ಕಾರನ್ನು ನಿಲ್ಲಿಸಿ ಕ್ಷಣಾರ್ಧದಲ್ಲೇ ಹೊರಬಂದು ಸಮೀಪದ ದಟ್ಟ ಅರಣ್ಯದೊಳಗೆ ಓಡಿ ಪರಾರಿಯಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿದರೂ ಆರೋಪಿಗಳು ಅರಣ್ಯದೊಳಗೆ ನುಗ್ಗಿದ್ದರಿಂದ ತಕ್ಷಣ ಬಂಧಿಸಲು ಸಾಧ್ಯವಾಗಿಲ್ಲ. ಡ್ರೋನ್ ಮೂಲಕ ಶೋಧ ಕಾರ್ಯ ಘಟನೆಯ ಬಳಿಕ ಆಗುಂಬೆ ಹಾಗೂ ರಿಪ್ಪನ್‌ಪೇಟೆ ಪೊಲೀಸರು ಜಂಟಿಯಾಗಿ ಬೆನವಳ್ಳಿ ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದಾರೆ. ಆರೋಪಿಗಳ ಚಲನವಲನ ಪತ್ತೆಹಚ್ಚಲು ಡ್ರೋನ್ ಕ್ಯಾಮೆರಾಗಳನ್ನೂ ಬಳಸಲಾಗುತ್ತಿದ್ದು, ಅರಣ್ಯದ ವಿವಿಧ ಭಾಗಗಳಲ್ಲಿ ತೀವ್ರ ಶೋಧ ಮುಂದುವರಿದಿದೆ. ಆರೋಪಿಗಳು ಬಿಟ್ಟುಹೋದ ಕಾರನ್ನು ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಕಾರಿನೊಳಗೆ ದೊರೆತಿರುವ ದಾಖಲೆಗಳು ಹಾಗೂ ಇತರೆ ಸುಳಿವುಗಳ ಆಧಾರದ ಮೇಲೆ ತನಿಖೆ ಚುರುಕುಗೊಂಡಿದೆ. ದೊಡ್ಡ ಕಳ್ಳತನ ಜಾಲದ ಶಂಕೆ:- ಇತ್ತೀಚಿನ ದಿನಗಳಲ್ಲಿ ಆಗುಂಬೆ ಭಾಗದಲ್ಲಿ ವರದಿಯಾಗಿರುವ ದನ ಕಳ್ಳತನ ಪ್ರಕರಣಗಳ ಹಿಂದೆ ಸಂಘಟಿತ ಗ್ಯಾಂಗ್ ಕಾರ್ಯನಿರ್ವಹಿಸುತ್ತಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಈ ಪ್ರಕರಣದ ತನಿಖೆಯನ್ನು ಪೊಲೀಸರು ವಿವಿಧ ಆಯಾಮಗಳಲ್ಲಿ ಮುಂದುವರಿಸಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರಿಗೆ ಮನವಿ:- ದೂನ, ಬೆನವಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳಿಗೆ ಪೊಲೀಸರು ಎಚ್ಚರಿಕೆ ನೀಡಿದ್ದು, ಕಾಡು ಪ್ರದೇಶ ಅಥವಾ ಗ್ರಾಮಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದರೆ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ. ಆರೋಪಿಗಳ ಬಂಧನಕ್ಕಾಗಿ ವಿಶೇಷ ತಂಡಗಳು ನಿರಂತರ ಕಾರ್ಯಾಚರಣೆ ನಡೆಸುತ್ತಿವೆ.

More news from ಕರ್ನಾಟಕ and nearby areas
  • ಸಣ್ಣ ತಿಪ್ಪಯ್ಯ ಕಲ್ಯಾಣ ಮಂಟಪ ಹೆಸರು ಬದಲಾವಣೆ .ರೈತ ಸಮುದಾಯ ಭವನ ಎಂದು ನಾಮಫಲಕ. ಚಳ್ಳಕೆರೆ :ನಗರದ ಎಪಿಎಂಸಿ‌ ಮಾರುಕಟ್ಟೆ ಆವರಣದಲ್ಲಿರುವ ರೈತ ಸಮುದಾಯ ಭವನವನ್ನು ಖಾಸಗಿ ವ್ಯಕ್ತಿಗೆ ನೀಡಲಾಗಿದೆ ಎನ್ನುವ ಆರೋಪ ಹಿನ್ನೆಲೆಯಲ್ಲಿ ಎಪಿಎಂಸಿ ಆಡಳಿತ ಕಚೇರಿಗೆ ಭೇಟಿ ನೀಡಿದ್ದ ಉಪ ವಿಭಾಗಾಧಿಕಾರಿ ಕೆ.ಜೆ. ಕಾಂತರಾಜ್ ದಾಖಲೆಗಳನ್ನು ‌ಪರಿಶೀಲನೆ ಮಾಡಿದರು. ಈ ವೇಳೆ ಮಾಹಿತಿ ನೀಡಿದ ಎಪಿಎಂಸಿ ಕಾರ್ಯದರ್ಶಿ ಜೆ. ಪ್ರಭು, ಕೃಷಿ ಮಾರಾಟ ಇಲಾಖೆ ನಿಯಮದಡಿ ಅನುಪಯುಕ್ತವಾಗಿ ಉಳಿದಿದ್ದ ರೈತ ಸಮುದಾಯ ಭವನವನ್ನು ಹರಾಜು ಪ್ರಕ್ರಿಯೆಯಲ್ಲಿ 2026 ರಿಂದ ಅನ್ವಯ ಆಗುವ ರೀತಿಯಲ್ಲಿ ಬಿ. ವೆಂಕಟೇಶ್ ದಳವಾಯಿ ಎಂಬುವರಿಗೆ 55 ತಿಂಗಳ ಅವದಿಗೆ ಲೀಜಿಗೆ ನೀಡಲಾಗಿದೆ. ಇದರ ಬಾಬ್ತು ಮಾನಸಿ 34 ಸಾವಿರ ಕಟ್ಟಬೇಕು. 11 ತಿಂಗಳಿಗೊಮ್ಮೆ ಲೈಸೆನ್ಸ್ ನವೀಕರಣ ಮಾಡಿಕೊಳ್ಳಬೇಕು. 33 ತಿಂಗಳಿಗೊಮ್ಮೆ ಮಾಸಿಕ ಬಾಡಿಗೆ ಹಣದಲ್ಲಿ ಶೇ.5 ರಷ್ಟು ಹೆಚ್ಚಳ ಮಾಡುವ ಷರತ್ತುಗಳು ವಿಧಿಸಿ ನೀಡಲಾಗಿದೆ ಎಂದು ತಿಳಿಸಿದರು. ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರೈತ ಭವನವನ್ನು ಖಾಸಗಿ ವ್ಯಕ್ತಿಗೆ ನೀಡಲಾಗಿದೆ. ಸಮುದಾಯ ಭವನ ಬದಲಿಗೆ, ಸಣ್ಣ ತಿಪ್ಪಯ್ಯ ಕಲ್ಯಾಣ ಮಂಟಪ ಎಂದು ಹೆಸರು ಬೆರಸಿರುವ ಬಗ್ಗೆ ರಾಜ್ಯ ರೈತ ಸಂಘ, ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಗಂಭೀರವಾಗಿ ಆರೋಪ ಮಾಡಲಾಗಿತ್ತು. ಈ ಬೆನ್ನಲ್ಲೇ ಬಾಡಿಗೆ ಪಡೆದಿದ್ದ ಬಿ. ವೆಂಕಟೇಶ್ ದಳವಾಯಿ ಅವರಿಗೆ ನೋಟಿಸ್ ಜಾರಿ ಮಾಡಿ, ತಕ್ಷಣವೇ ಸಣ್ಣ ತಿಪ್ಪಯ್ಯ ಕಲ್ಯಾಣ ಮಂಟಪ ಹೆಸರನ್ನು ಬದಲಾಯಿಸಿ, ಮೊದಲಿನಂತೆ ರೈತ ಸಮುದಾಯ ಭವನ ಎಂದು ಬರೆಸಿರುವುದಾಗಿ ದಾಖಲೆ ಸಹಿತ ಉಪ ವಿಭಾಗಾಧಿಕಾರಗಳಿಗೆ ಮಾಹಿತಿ ನೀಡಿದ್ದಾರೆ.
    1
    ಸಣ್ಣ ತಿಪ್ಪಯ್ಯ ಕಲ್ಯಾಣ ಮಂಟಪ ಹೆಸರು ಬದಲಾವಣೆ .ರೈತ ಸಮುದಾಯ ಭವನ ಎಂದು ನಾಮಫಲಕ.
ಚಳ್ಳಕೆರೆ :ನಗರದ ಎಪಿಎಂಸಿ‌ ಮಾರುಕಟ್ಟೆ ಆವರಣದಲ್ಲಿರುವ ರೈತ ಸಮುದಾಯ ಭವನವನ್ನು ಖಾಸಗಿ ವ್ಯಕ್ತಿಗೆ ನೀಡಲಾಗಿದೆ ಎನ್ನುವ ಆರೋಪ ಹಿನ್ನೆಲೆಯಲ್ಲಿ  ಎಪಿಎಂಸಿ ಆಡಳಿತ ಕಚೇರಿಗೆ ಭೇಟಿ ನೀಡಿದ್ದ ಉಪ ವಿಭಾಗಾಧಿಕಾರಿ ಕೆ.ಜೆ. ಕಾಂತರಾಜ್ ದಾಖಲೆಗಳನ್ನು ‌ಪರಿಶೀಲನೆ ಮಾಡಿದರು. ಈ ವೇಳೆ ಮಾಹಿತಿ ನೀಡಿದ ಎಪಿಎಂಸಿ ಕಾರ್ಯದರ್ಶಿ ಜೆ. ಪ್ರಭು, ಕೃಷಿ ಮಾರಾಟ ಇಲಾಖೆ ನಿಯಮದಡಿ ಅನುಪಯುಕ್ತವಾಗಿ ಉಳಿದಿದ್ದ ರೈತ ಸಮುದಾಯ ಭವನವನ್ನು ಹರಾಜು ಪ್ರಕ್ರಿಯೆಯಲ್ಲಿ 2026 ರಿಂದ ಅನ್ವಯ ಆಗುವ ರೀತಿಯಲ್ಲಿ ಬಿ. ವೆಂಕಟೇಶ್ ದಳವಾಯಿ ಎಂಬುವರಿಗೆ 55 ತಿಂಗಳ ಅವದಿಗೆ ಲೀಜಿಗೆ ನೀಡಲಾಗಿದೆ. ಇದರ ಬಾಬ್ತು ಮಾನಸಿ 34 ಸಾವಿರ ಕಟ್ಟಬೇಕು. 11 ತಿಂಗಳಿಗೊಮ್ಮೆ ಲೈಸೆನ್ಸ್ ನವೀಕರಣ ಮಾಡಿಕೊಳ್ಳಬೇಕು. 33 ತಿಂಗಳಿಗೊಮ್ಮೆ ಮಾಸಿಕ ಬಾಡಿಗೆ ಹಣದಲ್ಲಿ ಶೇ.5 ರಷ್ಟು ಹೆಚ್ಚಳ ಮಾಡುವ ಷರತ್ತುಗಳು ವಿಧಿಸಿ ನೀಡಲಾಗಿದೆ ಎಂದು ತಿಳಿಸಿದರು.
ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರೈತ ಭವನವನ್ನು ಖಾಸಗಿ ವ್ಯಕ್ತಿಗೆ ನೀಡಲಾಗಿದೆ. ಸಮುದಾಯ ಭವನ ಬದಲಿಗೆ, ಸಣ್ಣ ತಿಪ್ಪಯ್ಯ ಕಲ್ಯಾಣ ಮಂಟಪ ಎಂದು ಹೆಸರು ಬೆರಸಿರುವ ಬಗ್ಗೆ ರಾಜ್ಯ ರೈತ ಸಂಘ, ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಗಂಭೀರವಾಗಿ ಆರೋಪ ಮಾಡಲಾಗಿತ್ತು. ಈ ಬೆನ್ನಲ್ಲೇ ಬಾಡಿಗೆ ಪಡೆದಿದ್ದ ಬಿ.  ವೆಂಕಟೇಶ್ ದಳವಾಯಿ ಅವರಿಗೆ ನೋಟಿಸ್ ಜಾರಿ ಮಾಡಿ, ತಕ್ಷಣವೇ ಸಣ್ಣ ತಿಪ್ಪಯ್ಯ ಕಲ್ಯಾಣ ಮಂಟಪ ಹೆಸರನ್ನು ಬದಲಾಯಿಸಿ, ಮೊದಲಿನಂತೆ ರೈತ ಸಮುದಾಯ ಭವನ ಎಂದು ಬರೆಸಿರುವುದಾಗಿ ದಾಖಲೆ ಸಹಿತ ಉಪ ವಿಭಾಗಾಧಿಕಾರಗಳಿಗೆ ಮಾಹಿತಿ ನೀಡಿದ್ದಾರೆ.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    5 hrs ago
  • ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಆರು ವರ್ಷಗಳ ಹಿಂದೆ ಸ್ವಾತಂತ್ರ್ಯ ದಿನಾಚರಣೆಯ ದಿನ ಹಾಕಿದ್ದ ಗಿಡಗಳು ಇಂದು ಫಸಲು ಬಿಡುತ್ತಿದ್ದವು. ಆದರೆ ಇದನ್ನು ಕಡಿದ ಪರಿಣಾಮ ಅರಣ್ಯ ಇಲಾಖೆ ಅಧಿಕಾರಿಗಳು FIR ದಾಖಲಿಸಲು ಆಗ್ರಹಿಸಿದರು. ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಗೋಪ್ಯಾನಾಯ್ಕ ಅವರಿಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿ ಪ್ರಭುಶಂಕರ್ ಮತ್ತು ಸಿಬ್ಬಂದಿ ಗಳು ಆಗಮಿಸಿ ಮಹಜರು ಮಾಡಿದರು. ಇದೇ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಅಧ್ಯಕ್ಷರಾದ ಮಾಲತೇಶ್ ಅರಸ್ , ಜೋಗಿಮಟ್ಟಿ ಗೆಳೆಯರ ಬಳದ ಮಾರ್ಗದರ್ಶಕ ರಾಜಣ್ಣ , ಮಾಜಿ ಅಧ್ಯಕ್ಷರಾದ ರವಿಕುಮಾರ್, ರಾಘವೇಂದ್ರ, ಕಾರ್ಯದರ್ಶಿ ಮಂಜುನಾಥ್ , ರವಿಬಡಗಿ ಇತರರು ಇದ್ದರು. ಬೈಟ್: ರಾಜಣ್ಣ
    2
    ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ

ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ  ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ
ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ
ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ  ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಆರು ವರ್ಷಗಳ ಹಿಂದೆ ಸ್ವಾತಂತ್ರ್ಯ ದಿನಾಚರಣೆಯ ದಿನ ಹಾಕಿದ್ದ ಗಿಡಗಳು ಇಂದು ಫಸಲು ಬಿಡುತ್ತಿದ್ದವು. ಆದರೆ ಇದನ್ನು ಕಡಿದ ಪರಿಣಾಮ ಅರಣ್ಯ ಇಲಾಖೆ ಅಧಿಕಾರಿಗಳು FIR ದಾಖಲಿಸಲು ಆಗ್ರಹಿಸಿದರು.
ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಗೋಪ್ಯಾನಾಯ್ಕ ಅವರಿಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿ ಪ್ರಭುಶಂಕರ್ ಮತ್ತು ಸಿಬ್ಬಂದಿ ಗಳು ಆಗಮಿಸಿ ಮಹಜರು ಮಾಡಿದರು.
ಇದೇ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಅಧ್ಯಕ್ಷರಾದ ಮಾಲತೇಶ್ ಅರಸ್ , ಜೋಗಿಮಟ್ಟಿ ಗೆಳೆಯರ ಬಳದ ಮಾರ್ಗದರ್ಶಕ ರಾಜಣ್ಣ , ಮಾಜಿ ಅಧ್ಯಕ್ಷರಾದ ರವಿಕುಮಾರ್, ರಾಘವೇಂದ್ರ, ಕಾರ್ಯದರ್ಶಿ ಮಂಜುನಾಥ್ , ರವಿಬಡಗಿ ಇತರರು ಇದ್ದರು. 
ಬೈಟ್: ರಾಜಣ್ಣ
    user_Nagesh BR Durgavara
    Nagesh BR Durgavara
    Photographer Chitradurga, Karnataka•
    16 hrs ago
  • ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ನಡೆಯುತ್ತಿರುವ ಅಹೋರಾತ್ರಿ ಧರಣೀಯ ಎರಡನೇ ದಿನದ ರಾತ್ರಿಲ್ಲೂ ಕೂಡ ಅರಿತರು ಜಗ್ಗದೆ ಧರಣಿ ಮುಂದುವರಿಸುತ್ತಿರುವುದು
    1
    ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ನಡೆಯುತ್ತಿರುವ ಅಹೋರಾತ್ರಿ ಧರಣೀಯ ಎರಡನೇ ದಿನದ ರಾತ್ರಿಲ್ಲೂ ಕೂಡ ಅರಿತರು ಜಗ್ಗದೆ ಧರಣಿ ಮುಂದುವರಿಸುತ್ತಿರುವುದು
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    15 hrs ago
  • ರೈತ ಆತ್ಮಹತ್ಯೆ, ಉಪತಹಶೀಲ್ದಾರ ಕಛೇರಿ ಎದುರು ಪರಿಹಾರಕ್ಕಾಗಿ ರೈತರ ಪ್ರತಿಭಟನೆ. ರೈತನ ಕುಟುಂಬಕ್ಕೆ ಪರಿಹಾರಕ್ಕಾಗಿ ರೈತರ ಪ್ರತಿಭಟನೆ ಶಿಗ್ಗಾವಿ : ತಾಲೂಕಿನ ಹೋತನಹಳ್ಳಿ ಗ್ರಾಮದ ರೈತ ಮಲ್ಲೇಶಪ್ಪ ತಳವಾರ ಆತ್ಮಹತ್ಯೆ ಮಾಡಿಕೊಂಡು ಮೃತರಾಗಿ 10 ತಿಂಗಳು ಕಳೆದರು ಸರ್ಕಾರದಿಂದ ಯಾವುದೇ ಪರಿಹಾರ ಬಿಡುಗಡೆಯಾಗಿಲ್ಲ. ತಕ್ಷಣ ಮೇಲಾಧಿಕಾರಿಗಳು ಪರಿಶೀಲಿಸಿ ಮೃತ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಬಂಕಾಪುರ ಉಪತಹಶೀಲ್ದಾರ್ ಕಚೇರಿಗೆ ಬೀಗ ಹಾಕಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಕುಟುಂಬಕ್ಕೆ ಆಸರೆಯಾದ ರೈತ ಸಾಲಕ್ಕೆ ಸಿಲುಕಿನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ, ಮಕ್ಕಳು ಬದುಕು ಸಾಗಿಸುವುದು ಕಷ್ಟವಾಗಿದೆ. ಸಂಬಂಧಿಸಿದ ಅಧಿಕಾರಿಗಳು ಸರ್ಕಾರಕ್ಕೆ ಈ ವರೆಗೆ ಯಾವುದೇ ವರದಿ ಕಳುಹಿಸಿಲ್ಲ. ಅಧಿಕಾರಿಗಳ ನಿರ್ಲಕ್ಷತೆಯಿಂದ ಬಡ ಕುಟುಂಬಕ್ಕೆ ಪರಿಹಾರ ಮಂಜುರಾತಿ ವಿಳಂಬವಾಗಿದೆ. ಹೀಗಾಗಿ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಉಪತಹಶೀಲ್ದಾರ್ ಕಚೇರಿ ಬೀಗ ಹಾಕಿದ ಹಿನ್ನೆಲೆಯಲ್ಲಿ ಉಪತಹಶೀಲ್ದಾರ್ ವೆಂಕಟೇಶ ಕುಲಕರ್ಣಿ ಹಾಗೂ ಸಿಬ್ಬಂದಿ ಹೂರಗೆ ಉಳಿಯಬೇಕಾಯಿತು. ಸುತ್ತಲಿನ ಗ್ರಾಮಗಳ ಸಾರ್ವಜನಿಕರು ತಮ್ಮ ದಾಖಲಾತಿ ಪಡೆಯಲು ಬಂದು ಮರಳಿ ಹೋಗಬೇಕಾಯಿತು. ಕೆಲವರು ಕಾದು ಬೇಸರಗೊಂಡರು. ಎಸ್.ಐ.ಆರ್ ಮಾಡುವ ನೌಕರರು ಸಹ ಕಾಯ್ದು ಕುಳಿತು ಮರಳಿ ಹೋದರು. ಹೀಗಾಗಿ ಕೆಲಸ ಕಾರ್ಯಗಳಿಗೆ ಅಡೆತಡೆಯಾಯಿತು. ಆದರೂ ರೈತರು ಮೇಲಾಧಿಕಾರಿಗಳು ಬರಬೇಕೆಂದು ಪಟ್ಟು ಹಿಡಿದರು. ಕೃಷಿ ಅಧಿಕಾರಿ ಶಿವಕುಮಾರ ಶಿಡೇನೂರ ಭೇಟಿ ನೀಡಿ ಪ್ರತಿಭಟನಾಕಾರರಿಗೆ ಸ್ಪಂದಿಸಿ ತಕ್ಷಣ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸುತ್ತೇನೆ. ರೈತನ ಕುಟುಂಬಕ್ಕೆ ತ್ವರಿತವಾಗಿ ಪರಿಹಾರ ಸಿಗುವಂತೆ ಮಾಡಲಾಗುತ್ತದೆ ಎಂದಾಗಿ ಪ್ರತಿಭಟನೆ ಹಿಂದರು. ರೈತ ಮುಖಂಡರಾದ ಶಶಿಧರ ಹೊಣ್ಣನ್ನವರ , ಶಿವಾನಂದ ತೊಂಡೂರ, ಉಮೇಶ ಗುಳೇದ, ಚಂದ್ರಣ್ಣ ಬೆಳವತ್ತಿ, ಶಂಕ್ರಣ್ಣ ಗಂಗಣ್ಣವರ, ಬಾಪುಗೌಡ ಪಾಟೀಲ,  ದೇವಣ್ಣ ಹಳವಳ್ಳಿ, ಶಂಭಣ್ಣ ಕುರಗೋಡಿ, ಬಸವರಾಜ ನಾರಾಯಣಪುರ, ಚಂದ್ರಣ್ಣ ತಳವಾರ, ಮೃತ ರೈತನ ಪತ್ನಿ ಕವಿತಾ ಅವರ ಕುಟುಂಬದ ಸದಸ್ಯರು, ವಿವಿಧ ಗ್ರಾಮಗಳ ರೈತರು ಇದ್ದರು.
    1
    ರೈತ ಆತ್ಮಹತ್ಯೆ, ಉಪತಹಶೀಲ್ದಾರ ಕಛೇರಿ ಎದುರು ಪರಿಹಾರಕ್ಕಾಗಿ ರೈತರ ಪ್ರತಿಭಟನೆ.
ರೈತನ ಕುಟುಂಬಕ್ಕೆ ಪರಿಹಾರಕ್ಕಾಗಿ ರೈತರ ಪ್ರತಿಭಟನೆ
ಶಿಗ್ಗಾವಿ : ತಾಲೂಕಿನ ಹೋತನಹಳ್ಳಿ ಗ್ರಾಮದ ರೈತ ಮಲ್ಲೇಶಪ್ಪ ತಳವಾರ ಆತ್ಮಹತ್ಯೆ ಮಾಡಿಕೊಂಡು ಮೃತರಾಗಿ 10 ತಿಂಗಳು ಕಳೆದರು ಸರ್ಕಾರದಿಂದ ಯಾವುದೇ ಪರಿಹಾರ ಬಿಡುಗಡೆಯಾಗಿಲ್ಲ. ತಕ್ಷಣ ಮೇಲಾಧಿಕಾರಿಗಳು ಪರಿಶೀಲಿಸಿ ಮೃತ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಬಂಕಾಪುರ ಉಪತಹಶೀಲ್ದಾರ್ ಕಚೇರಿಗೆ ಬೀಗ ಹಾಕಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಕುಟುಂಬಕ್ಕೆ ಆಸರೆಯಾದ ರೈತ ಸಾಲಕ್ಕೆ ಸಿಲುಕಿನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ, ಮಕ್ಕಳು ಬದುಕು ಸಾಗಿಸುವುದು ಕಷ್ಟವಾಗಿದೆ. ಸಂಬಂಧಿಸಿದ ಅಧಿಕಾರಿಗಳು ಸರ್ಕಾರಕ್ಕೆ ಈ ವರೆಗೆ ಯಾವುದೇ ವರದಿ ಕಳುಹಿಸಿಲ್ಲ. ಅಧಿಕಾರಿಗಳ ನಿರ್ಲಕ್ಷತೆಯಿಂದ ಬಡ ಕುಟುಂಬಕ್ಕೆ ಪರಿಹಾರ ಮಂಜುರಾತಿ ವಿಳಂಬವಾಗಿದೆ. ಹೀಗಾಗಿ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಉಪತಹಶೀಲ್ದಾರ್ ಕಚೇರಿ ಬೀಗ ಹಾಕಿದ ಹಿನ್ನೆಲೆಯಲ್ಲಿ ಉಪತಹಶೀಲ್ದಾರ್ ವೆಂಕಟೇಶ ಕುಲಕರ್ಣಿ ಹಾಗೂ ಸಿಬ್ಬಂದಿ ಹೂರಗೆ ಉಳಿಯಬೇಕಾಯಿತು. ಸುತ್ತಲಿನ ಗ್ರಾಮಗಳ ಸಾರ್ವಜನಿಕರು ತಮ್ಮ ದಾಖಲಾತಿ ಪಡೆಯಲು ಬಂದು ಮರಳಿ ಹೋಗಬೇಕಾಯಿತು. ಕೆಲವರು ಕಾದು ಬೇಸರಗೊಂಡರು. ಎಸ್.ಐ.ಆರ್ ಮಾಡುವ ನೌಕರರು ಸಹ ಕಾಯ್ದು ಕುಳಿತು ಮರಳಿ ಹೋದರು. ಹೀಗಾಗಿ ಕೆಲಸ ಕಾರ್ಯಗಳಿಗೆ ಅಡೆತಡೆಯಾಯಿತು. ಆದರೂ ರೈತರು ಮೇಲಾಧಿಕಾರಿಗಳು ಬರಬೇಕೆಂದು ಪಟ್ಟು ಹಿಡಿದರು.
ಕೃಷಿ ಅಧಿಕಾರಿ ಶಿವಕುಮಾರ ಶಿಡೇನೂರ ಭೇಟಿ ನೀಡಿ ಪ್ರತಿಭಟನಾಕಾರರಿಗೆ ಸ್ಪಂದಿಸಿ ತಕ್ಷಣ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸುತ್ತೇನೆ. ರೈತನ ಕುಟುಂಬಕ್ಕೆ ತ್ವರಿತವಾಗಿ ಪರಿಹಾರ ಸಿಗುವಂತೆ ಮಾಡಲಾಗುತ್ತದೆ ಎಂದಾಗಿ ಪ್ರತಿಭಟನೆ ಹಿಂದರು.
ರೈತ ಮುಖಂಡರಾದ ಶಶಿಧರ ಹೊಣ್ಣನ್ನವರ , ಶಿವಾನಂದ ತೊಂಡೂರ, ಉಮೇಶ ಗುಳೇದ, ಚಂದ್ರಣ್ಣ ಬೆಳವತ್ತಿ, ಶಂಕ್ರಣ್ಣ ಗಂಗಣ್ಣವರ, ಬಾಪುಗೌಡ ಪಾಟೀಲ,  ದೇವಣ್ಣ ಹಳವಳ್ಳಿ, ಶಂಭಣ್ಣ ಕುರಗೋಡಿ, ಬಸವರಾಜ ನಾರಾಯಣಪುರ, ಚಂದ್ರಣ್ಣ ತಳವಾರ, ಮೃತ ರೈತನ ಪತ್ನಿ ಕವಿತಾ ಅವರ ಕುಟುಂಬದ ಸದಸ್ಯರು, ವಿವಿಧ ಗ್ರಾಮಗಳ ರೈತರು ಇದ್ದರು.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    17 hrs ago
  • ಈಗಾಗಲೇ ನೀರಿಗೆ ಹಾಹಾಕಾರ ಶುರುವಾಗಿ ರಾಜ್ಯದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಕಾವೇರಿ ವಿವಾದದಲ್ಲಿ ತಕ್ಷಣವೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ ನಾಡಿನ ಹಿತ ಕಾಯುವುದು ಸಿಎಂ ಡಿ. ಕೆ. ಶಿವಕುಮಾರ್ ಅವರ ಆದ್ಯ ಕರ್ತವ್ಯವಾಗಬೇಕು. ಶ್ರೀ ಬಿ. ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳು #CongressFailsKarnataka #ರೈತವಿರೋಧಿಕಾಂಗ್ರೆಸ್
    1
    ಈಗಾಗಲೇ ನೀರಿಗೆ ಹಾಹಾಕಾರ ಶುರುವಾಗಿ ರಾಜ್ಯದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಕಾವೇರಿ ವಿವಾದದಲ್ಲಿ ತಕ್ಷಣವೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ ನಾಡಿನ ಹಿತ ಕಾಯುವುದು ಸಿಎಂ ಡಿ. ಕೆ. ಶಿವಕುಮಾರ್ ಅವರ ಆದ್ಯ ಕರ್ತವ್ಯವಾಗಬೇಕು.

 ಶ್ರೀ ಬಿ. ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳು

#CongressFailsKarnataka
#ರೈತವಿರೋಧಿಕಾಂಗ್ರೆಸ್
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    22 hrs ago
  • " ಪಕ್ಷ ನಮ್ಮೆಲ್ಲರ ತಾಯಿ " ನಾವೆಲ್ಲರೂ ಸಹೋದರರು , ಹಿರಿಯ ಸಹೋದರರ ಮಾರ್ಗದರ್ಶನದಂತೆ ನಾವೆಲ್ಲರೂ ಮುನ್ನಡೆಯೋಣ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ -ವಿಜಯನಗರ ಜಿಲ್ಲೆ ಕೂಡ್ಲಿಗಿ *" ಪಕ್ಷ ನಮ್ಮೆಲ್ಲರ ತಾಯಿ " ನಾವೆಲ್ಲರೂ ಸಹೋದರರು , ಹಿರಿಯ ಸಹೋದರರ ಮಾರ್ಗದರ್ಶನದಂತೆ ನಾವೆಲ್ಲರೂ ಮುನ್ನಡೆಯೋಣ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್*-ವಿಜಯನಗರ ಜಿಲ್ಲೆ ಕೂಡ್ಲಿಗಿ : " ಕಾಂಗ್ರೆಸ್ ಪಕ್ಷ ನಮ್ಮೆಲ್ಲರ ತಾಯಿ " , ನಾವೆಲ್ಲರೂ ಸಹೋದರರು. ಪಕ್ಷದ ಹಿರಿಯ ಸಹೋದರರ ಮಾರ್ಗದರ್ಶನದಂತೆ , ಸಂಘಟನೆ ಮಾಡಿ ಪಕ್ಷವನ್ನು ಬಲ ಪಡಿಸೋಣ ಎಂದು. ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು , ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ , ಜುಲೈ 30 ರಂದು. ಕಾಂಗ್ರೆಸ್ ಪಕ್ಷದ ವಿವಿದ ವಿಭಾಗಗಳ ನಾಯಕರ ಆಯ್ಕೆ , ಹಾಗೂ ಪಕ್ಷ ಸಂಘಟನೆಗಾಗಿ ಆಯೋಜಿಸಲಾಗಿದ್ದ. ಸಂಘಟನೆ ಸೃಜನ ಅಭಿಯಾನದಲ್ಲಿ , ಕಾರ್ಯಕರ್ತರನ್ನುದ್ಧೇಶಿಸಿ ಮಾತನಾಡಿದರು. ಟಿಪಿಸಿಸಿ ಕಾರ್ಯದರ್ಶಿಗಳು ಹಾಗೂ ಎಐಸಿಸಿ ಸಲಹಾ ಸಮಿತಿಯ ಹಿರಿಯರು. ವೀಕ್ಷಕರಾದ ಪಕ್ಷದ ರಾಷ್ಟ್ರೀಯ ನಾಯಕರಾದ ಹರಕರ್ ವೇಣುಗೋಪಾಲ್ ರಾವ್ ಹಾಗೂ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್‌ , ಮಾಜಿ ಶಾಸಕರು ಹಾಗೂ ಕಾಂಗ್ರೆಸ್ ವಿಜಯನಗರ ಜಿಲ್ಲಾಧ್ಯಕ್ಷರಾದ , ಶಿರಾಜ್ ಶೇಖ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹ‍ಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವ‍ಾಗಿ ಚರ್ಚಿಸಿದರು. ಪಟ್ಟಣ ಪಂಚ‍ಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನ‍‍ಾಯಕ , ಕೂಡ್ಲಿಗಿ ಬ್ಲ‍ಾಕ್ ಕ‍ಾಂಗ್ರೇಸ್ ಅಧ್ಯಕ್ಷ ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲ‍ಾಕ್ ಕಾಂಗ್ರೆಸ್ಆಧ್ಯಕ್ಷ ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    4
    " ಪಕ್ಷ ನಮ್ಮೆಲ್ಲರ ತಾಯಿ " ನಾವೆಲ್ಲರೂ ಸಹೋದರರು , ಹಿರಿಯ ಸಹೋದರರ ಮಾರ್ಗದರ್ಶನದಂತೆ ನಾವೆಲ್ಲರೂ ಮುನ್ನಡೆಯೋಣ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ -ವಿಜಯನಗರ ಜಿಲ್ಲೆ ಕೂಡ್ಲಿಗಿ
*" ಪಕ್ಷ ನಮ್ಮೆಲ್ಲರ ತಾಯಿ " ನಾವೆಲ್ಲರೂ ಸಹೋದರರು , ಹಿರಿಯ ಸಹೋದರರ ಮಾರ್ಗದರ್ಶನದಂತೆ ನಾವೆಲ್ಲರೂ ಮುನ್ನಡೆಯೋಣ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್*-ವಿಜಯನಗರ ಜಿಲ್ಲೆ ಕೂಡ್ಲಿಗಿ : " ಕಾಂಗ್ರೆಸ್ ಪಕ್ಷ ನಮ್ಮೆಲ್ಲರ ತಾಯಿ " ,  ನಾವೆಲ್ಲರೂ ಸಹೋದರರು. ಪಕ್ಷದ ಹಿರಿಯ ಸಹೋದರರ ಮಾರ್ಗದರ್ಶನದಂತೆ , ಸಂಘಟನೆ ಮಾಡಿ ಪಕ್ಷವನ್ನು ಬಲ ಪಡಿಸೋಣ ಎಂದು. ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು , ಕಾರ್ಯಕರ್ತರಿಗೆ ಕರೆ ನೀಡಿದರು. ಅವರು     ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ , ಜುಲೈ 30 ರಂದು. ಕಾಂಗ್ರೆಸ್ ಪಕ್ಷದ ವಿವಿದ ವಿಭಾಗಗಳ ನಾಯಕರ ಆಯ್ಕೆ , ಹಾಗೂ ಪಕ್ಷ  ಸಂಘಟನೆಗಾಗಿ ಆಯೋಜಿಸಲಾಗಿದ್ದ. ಸಂಘಟನೆ ಸೃಜನ ಅಭಿಯಾನದಲ್ಲಿ , ಕಾರ್ಯಕರ್ತರನ್ನುದ್ಧೇಶಿಸಿ ಮಾತನಾಡಿದರು.   ಟಿಪಿಸಿಸಿ ಕಾರ್ಯದರ್ಶಿಗಳು ಹಾಗೂ ಎಐಸಿಸಿ ಸಲಹಾ ಸಮಿತಿಯ ಹಿರಿಯರು. ವೀಕ್ಷಕರಾದ   ಪಕ್ಷದ ರಾಷ್ಟ್ರೀಯ ನಾಯಕರಾದ ಹರಕರ್ ವೇಣುಗೋಪಾಲ್ ರಾವ್ ಹಾಗೂ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್‌ ,    ಮಾಜಿ ಶಾಸಕರು ಹಾಗೂ ಕಾಂಗ್ರೆಸ್ ವಿಜಯನಗರ ಜಿಲ್ಲಾಧ್ಯಕ್ಷರಾದ ,  ಶಿರಾಜ್ ಶೇಖ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹ‍ಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವ‍ಾಗಿ ಚರ್ಚಿಸಿದರು. ಪಟ್ಟಣ ಪಂಚ‍ಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನ‍‍ಾಯಕ , ಕೂಡ್ಲಿಗಿ ಬ್ಲ‍ಾಕ್ ಕ‍ಾಂಗ್ರೇಸ್ ಅಧ್ಯಕ್ಷ  ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲ‍ಾಕ್ ಕಾಂಗ್ರೆಸ್ಆಧ್ಯಕ್ಷ  ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ  ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    6 hrs ago
  • ಇನ್ನರ್ ವಿಲ್ ಕ್ಲಬ್ ಏಂಜಲ್ಸ್ ವತಿಯಿಂದ ಗೋಪೂಜೆ ಮತ್ತು ರಾಗಿಹುಲ್ಲು ವಿತರಣೆ". "ಇನ್ನರ್ ವಿಲ್ ಕ್ಲಬ್ ಏಂಜಲ್ಸ್ ವತಿಯಿಂದ ಗೋಪೂಜೆ ಮತ್ತು ರಾಗಿಹುಲ್ಲು ವಿತರಣೆ". ಚಳ್ಳಕೆರೆ:-ನಗರದ ಹೊರವಲಯದ ಅಜ್ಜನಗುಡಿ ಸಮೀಪದ ನನ್ನಿವಾಳದ ಕಟ್ಟೆಮನೆಯ ಮುತ್ಯಾಗಾರ ದೇವರ ಎತ್ತುಗಳಿಗೆ ನಗರದ ಇನ್ನರ್ ವಿಲ್ ಕ್ಲಬ್ ಏಂಜಲ್ಸ್ ನ ವತಿಯಿಂದ ಗೋಪೂಜೆ, ಬಾಳೆಹಣ್ಣು,ರಾಗಿಹುಲ್ಲು ವಿತರಿಸುವ ಮೂಲಕ ಸಾರ್ಥಕ ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವರ ಎತ್ತುಗಳ ಸಂರಕ್ಷಕರಾದ ಪೂಜಾರಿ ಓಬಯ್ಯ, ಪಾಲಯ್ಯ, ಸಿದ್ದೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಇನ್ನರ್ ವಿಲ್ ಕ್ಲಬ್ ಏಂಜಲ್ಸ್ ನ ಅಧ್ಯಕ್ಷೆ ಅಪರ್ಣ ದೇವೇಂದ್ರಪ್ಪ, ಕಾರ್ಯದರ್ಶಿ ಡಾ.ವಿದ್ಯಾ, ಖಜಾಂಚಿ ಕವಿತಾ ನಾಗೇಶ್,ದೇವರ ಎತ್ತುಗಳ ಸಂರಕ್ಷಣಾ ಸಮಿತಿಯ ಅಧ್ಯಕ್ಷೆ ಶುಭಾ ಸೋಮಶೇಖರ್, ಸಮಾಜ ಸೇವಕ ಯತೀಶ್ ಎಂ ಸಿದ್ದಾಪುರ, ಸದಸ್ಯರಾದ ಮೀರಾ ರಮೇಶ್,ಸುಮಾ, ನಾಗಶ್ರೀ,ಹೀನಾ ಸೇರಿದಂತೆ ದೇವರ ಎತ್ತುಗಳ ಕಿಲಾರಿಗಳು ಮತ್ತು ಆರಾಧಕರು ಉಪಸ್ಥಿತರಿದ್ದರು.
    1
    ಇನ್ನರ್ ವಿಲ್ ಕ್ಲಬ್ ಏಂಜಲ್ಸ್ ವತಿಯಿಂದ ಗೋಪೂಜೆ ಮತ್ತು ರಾಗಿಹುಲ್ಲು ವಿತರಣೆ". 
"ಇನ್ನರ್ ವಿಲ್ ಕ್ಲಬ್ ಏಂಜಲ್ಸ್ ವತಿಯಿಂದ ಗೋಪೂಜೆ ಮತ್ತು ರಾಗಿಹುಲ್ಲು ವಿತರಣೆ".                    ಚಳ್ಳಕೆರೆ:-ನಗರದ ಹೊರವಲಯದ ಅಜ್ಜನಗುಡಿ ಸಮೀಪದ ನನ್ನಿವಾಳದ ಕಟ್ಟೆಮನೆಯ ಮುತ್ಯಾಗಾರ ದೇವರ ಎತ್ತುಗಳಿಗೆ ನಗರದ ಇನ್ನರ್ ವಿಲ್ ಕ್ಲಬ್ ಏಂಜಲ್ಸ್ ನ ವತಿಯಿಂದ ಗೋಪೂಜೆ, ಬಾಳೆಹಣ್ಣು,ರಾಗಿಹುಲ್ಲು ವಿತರಿಸುವ ಮೂಲಕ ಸಾರ್ಥಕ ಸೇವೆ ಸಲ್ಲಿಸಿದರು.                    ಈ ಸಂದರ್ಭದಲ್ಲಿ  ದೇವರ ಎತ್ತುಗಳ ಸಂರಕ್ಷಕರಾದ ಪೂಜಾರಿ ಓಬಯ್ಯ, ಪಾಲಯ್ಯ, ಸಿದ್ದೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.                   ಕಾರ್ಯಕ್ರಮದಲ್ಲಿ ಇನ್ನರ್ ವಿಲ್ ಕ್ಲಬ್ ಏಂಜಲ್ಸ್ ನ ಅಧ್ಯಕ್ಷೆ ಅಪರ್ಣ ದೇವೇಂದ್ರಪ್ಪ, ಕಾರ್ಯದರ್ಶಿ ಡಾ.ವಿದ್ಯಾ, ಖಜಾಂಚಿ ಕವಿತಾ ನಾಗೇಶ್,ದೇವರ ಎತ್ತುಗಳ ಸಂರಕ್ಷಣಾ ಸಮಿತಿಯ ಅಧ್ಯಕ್ಷೆ ಶುಭಾ ಸೋಮಶೇಖರ್, ಸಮಾಜ ಸೇವಕ ಯತೀಶ್ ಎಂ ಸಿದ್ದಾಪುರ, ಸದಸ್ಯರಾದ ಮೀರಾ ರಮೇಶ್,ಸುಮಾ, ನಾಗಶ್ರೀ,ಹೀನಾ ಸೇರಿದಂತೆ ದೇವರ ಎತ್ತುಗಳ ಕಿಲಾರಿಗಳು ಮತ್ತು ಆರಾಧಕರು ಉಪಸ್ಥಿತರಿದ್ದರು.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    6 hrs ago
  • ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇನ್ನೂ ಕರ್ನಾಟಕ ಪ್ರದೇಶ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಅವರ ಆದೇಶದಂತೆ, ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಅವರ ವಿವಾದಾತ್ಮಕ ಹೇಳಿಕೆಗಳನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಆಗ್ರಹಿಸಿ ಹಿರಿಯೂರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ಹೋರಾಟದಲ್ಲಿ ಚಿತ್ರದುರ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕರ್ನಾಟಕ ರಾಜ್ಯ ಮಹಿಳಾ ಪ್ರಧಾನಕಾರ್ಯದರ್ಶಿಗಳು ಹಿರಿಯೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
    1
    ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ
ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇನ್ನೂ ಕರ್ನಾಟಕ ಪ್ರದೇಶ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಅವರ ಆದೇಶದಂತೆ, ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಅವರ ವಿವಾದಾತ್ಮಕ ಹೇಳಿಕೆಗಳನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಆಗ್ರಹಿಸಿ ಹಿರಿಯೂರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಈ ಹೋರಾಟದಲ್ಲಿ ಚಿತ್ರದುರ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕರ್ನಾಟಕ ರಾಜ್ಯ ಮಹಿಳಾ ಪ್ರಧಾನಕಾರ್ಯದರ್ಶಿಗಳು
ಹಿರಿಯೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    19 hrs ago
  • ಕನ್ನಡ ಸಂಘದ ಸಂಸ್ಥಾಪಕ ದಿವಂಗತ 'ಸೀಮೆಎಣ್ಣೆ ಕೃಷ್ಣಯ್ಯ' 9ನೇ ವರ್ಷದ ನುಡಿನಮನ: ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಮಾತು ​ಕನ್ನಡ ಸಂಘದ ಸಂಸ್ಥಾಪಕ ದಿವಂಗತ 'ಸೀಮೆಎಣ್ಣೆ ಕೃಷ್ಣಯ್ಯ' 9ನೇ ವರ್ಷದ ನುಡಿನಮನ: ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಮಾತು ------------------- ​ಚಿಕ್ಕನಾಯಕನಹಳ್ಳಿ: ತಾಲೂಕಿನಲ್ಲಿ ಕನ್ನಡ ಪರ ಚಟುವಟಿಕೆಗಳಿಗೆ ಬಲ ತುಂಬಲು ವೇದಿಕೆ ನಿರ್ಮಿಸಿ, ಶಾಶ್ವತ ಕಾರ್ಯಕ್ರಮಗಳನ್ನು ನೀಡಿದ ಕನ್ನಡ ಸಂಘದ ಸಂಸ್ಥಾಪಕ ಹಾಗೂ ಅಧ್ಯಕ್ಷ ದಿವಂಗತ 'ಸೀಮೆಎಣ್ಣೆ ಕೃಷ್ಣಯ್ಯ' ಅವರ ಸೇವೆ ಅತ್ಯಂತ ಸ್ಮರಣೀಯ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಬಣ್ಣಿಸಿದರು. ​ಪಟ್ಟಣದ ಕನ್ನಡ ಸಂಘದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ದಿವಂಗತ ಸೀಮೆಎಣ್ಣೆ ಕೃಷ್ಣಯ್ಯ ಅವರ 9 ನೇ ವರ್ಷದ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. ​"ತಾಲೂಕಿನಲ್ಲಿ ಕನ್ನಡ ಕಟ್ಟುವ ಕೆಲಸದಲ್ಲಿ ಕೃಷ್ಣಯ್ಯನವರು ಮತ್ತು ಅವರ ತಂಡದ ಕೊಡುಗೆ ಹಿರಿದಾದುದು. ಈ ಕ್ಷೇತ್ರದಲ್ಲಿ ಎಷ್ಟು ದಿನಗಳ ಕಾಲ ಕನ್ನಡ ಕಾರ್ಯಕ್ರಮಗಳು ನಡೆಯುತ್ತವೆಯೋ ಅಲ್ಲಿಯವರೆಗೂ ಕೃಷ್ಣಯ್ಯನವರ ಹೆಸರು ಅಮರವಾಗಿರಲಿದೆ," ಎಂದರು. ​ಬಡತನ ಮೆಟ್ಟಿ ಬೆಳೆದ ಧೀಮಂತ: "ನಾವು ಸಣ್ಣ ಹುಡುಗರಿದ್ದಾಗಿನಿಂದಲೂ ಕೃಷ್ಣಯ್ಯನವರ ಹೆಸರು ಮತ್ತು ಕಾರ್ಯಕ್ರಮಗಳನ್ನು ಕೇಳುತ್ತಾ ಬೆಳೆದಿದ್ದೇವೆ. ಅತ್ಯಂತ ಬಡತನದ ಹಿನ್ನೆಲೆಯಿಂದ ಬಂದ ಅವರು, ಬಡತನದಲ್ಲೇ ಬೆಳೆದು ತಮ್ಮ ಸ್ವಪ್ರಯತ್ನದಿಂದ ಉನ್ನತ ಶಿಕ್ಷಣ ಪಡೆದು ಪದವೀಧರರಾದರು. ನಂತರ ಉತ್ತಮ ಕೆಲಸದಲ್ಲಿದ್ದರೂ, ಕನ್ನಡ ನೆಲ-ಜಲ ಮತ್ತು ಸಮಾಜ ಸೇವೆಯತ್ತ ತೀವ್ರ ಒಲವು ಹೊಂದಿದ್ದರು. ವಿ.ಎನ್. ಪಾಟೀಲ್, ರಾಮಕೃಷ್ಣ ಹೆಗಡೆ ಅವರಂತಹ ಹಿರಿಯ ರಾಜಕಾರಣಿಗಳೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಅವರು, ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದರು," ಎಂದು ಕೃಷ್ಣಯ್ಯನವರ ವ್ಯಕ್ತಿತ್ವವನ್ನು ನೆನಪಿಸಿಕೊಂಡರು. ​ಕಾರ್ಯಕ್ರಮದಲ್ಲಿ ಕನ್ನಡ ಸಂಘದ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು.
    1
    ಕನ್ನಡ ಸಂಘದ ಸಂಸ್ಥಾಪಕ ದಿವಂಗತ 'ಸೀಮೆಎಣ್ಣೆ ಕೃಷ್ಣಯ್ಯ' 9ನೇ ವರ್ಷದ ನುಡಿನಮನ: ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಮಾತು
​ಕನ್ನಡ ಸಂಘದ ಸಂಸ್ಥಾಪಕ ದಿವಂಗತ 'ಸೀಮೆಎಣ್ಣೆ ಕೃಷ್ಣಯ್ಯ' 9ನೇ ವರ್ಷದ ನುಡಿನಮನ: ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಮಾತು
-------------------
​ಚಿಕ್ಕನಾಯಕನಹಳ್ಳಿ: ತಾಲೂಕಿನಲ್ಲಿ ಕನ್ನಡ ಪರ ಚಟುವಟಿಕೆಗಳಿಗೆ ಬಲ ತುಂಬಲು ವೇದಿಕೆ ನಿರ್ಮಿಸಿ, ಶಾಶ್ವತ ಕಾರ್ಯಕ್ರಮಗಳನ್ನು ನೀಡಿದ ಕನ್ನಡ ಸಂಘದ ಸಂಸ್ಥಾಪಕ ಹಾಗೂ ಅಧ್ಯಕ್ಷ ದಿವಂಗತ 'ಸೀಮೆಎಣ್ಣೆ ಕೃಷ್ಣಯ್ಯ' ಅವರ ಸೇವೆ ಅತ್ಯಂತ ಸ್ಮರಣೀಯ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಬಣ್ಣಿಸಿದರು.
​ಪಟ್ಟಣದ ಕನ್ನಡ ಸಂಘದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ದಿವಂಗತ ಸೀಮೆಎಣ್ಣೆ ಕೃಷ್ಣಯ್ಯ ಅವರ 9 ನೇ ವರ್ಷದ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
​"ತಾಲೂಕಿನಲ್ಲಿ ಕನ್ನಡ ಕಟ್ಟುವ ಕೆಲಸದಲ್ಲಿ ಕೃಷ್ಣಯ್ಯನವರು ಮತ್ತು ಅವರ ತಂಡದ ಕೊಡುಗೆ ಹಿರಿದಾದುದು. ಈ ಕ್ಷೇತ್ರದಲ್ಲಿ ಎಷ್ಟು ದಿನಗಳ ಕಾಲ ಕನ್ನಡ ಕಾರ್ಯಕ್ರಮಗಳು ನಡೆಯುತ್ತವೆಯೋ ಅಲ್ಲಿಯವರೆಗೂ ಕೃಷ್ಣಯ್ಯನವರ ಹೆಸರು ಅಮರವಾಗಿರಲಿದೆ," ಎಂದರು.
​ಬಡತನ ಮೆಟ್ಟಿ ಬೆಳೆದ ಧೀಮಂತ:
"ನಾವು ಸಣ್ಣ ಹುಡುಗರಿದ್ದಾಗಿನಿಂದಲೂ ಕೃಷ್ಣಯ್ಯನವರ ಹೆಸರು ಮತ್ತು ಕಾರ್ಯಕ್ರಮಗಳನ್ನು ಕೇಳುತ್ತಾ ಬೆಳೆದಿದ್ದೇವೆ. ಅತ್ಯಂತ ಬಡತನದ ಹಿನ್ನೆಲೆಯಿಂದ ಬಂದ ಅವರು, ಬಡತನದಲ್ಲೇ ಬೆಳೆದು ತಮ್ಮ ಸ್ವಪ್ರಯತ್ನದಿಂದ ಉನ್ನತ ಶಿಕ್ಷಣ ಪಡೆದು ಪದವೀಧರರಾದರು. ನಂತರ ಉತ್ತಮ ಕೆಲಸದಲ್ಲಿದ್ದರೂ, ಕನ್ನಡ ನೆಲ-ಜಲ ಮತ್ತು ಸಮಾಜ ಸೇವೆಯತ್ತ ತೀವ್ರ ಒಲವು ಹೊಂದಿದ್ದರು. ವಿ.ಎನ್. ಪಾಟೀಲ್, ರಾಮಕೃಷ್ಣ ಹೆಗಡೆ ಅವರಂತಹ ಹಿರಿಯ ರಾಜಕಾರಣಿಗಳೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಅವರು, ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದರು," ಎಂದು ಕೃಷ್ಣಯ್ಯನವರ ವ್ಯಕ್ತಿತ್ವವನ್ನು ನೆನಪಿಸಿಕೊಂಡರು.
​ಕಾರ್ಯಕ್ರಮದಲ್ಲಿ ಕನ್ನಡ ಸಂಘದ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು.
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    15 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.