ಬಳ್ಳಾರಿ ವಿವಿ ಹಿಂದಿನ ಕುಲಪತಿ, ಕುಲಸಚಿವರ ಲೋಪ ಬಯಲು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ (ವಿಎಸ್‌ಕೆಯು) ನಡೆದಿದ್ದ ಪದವಿ, ಸ್ನಾತಕೋತ್ತರ ಪದವಿ ಘಟಿಕೋತ್ಸವ ಪ್ರಮಾಣ ಪತ್ರ ಹಗರಣದ ತನಿಖೆಗೆ ರಚಿಸಲಾಗಿದ್ದ ನಿವೃತ್ತ ಜಿಲ್ಲಾ ನ್ಯಾಯಾಧೀಶ ಡಿ.ಎಸ್.ಶಿಂಧೆ ಸಮಿತಿಯು ಹಿಂದಿನ ಪ್ರಭಾರ ಕುಲಪತಿ, ಮೌಲ್ಯಮಾಪನ ಕುಲಸಚಿವ ಸೇರಿ ಹಲವರ ಲೋಪಗಳನ್ನು ಬಯಲಿಗೆಳೆದಿದೆ. ವಿಶ್ವವಿದ್ಯಾಲಯ ಘಟಿಕೋತ್ಸವದ ಕನಿಷ್ಠ 4,476 ಪ್ರಮಾಣ ಪತ್ರಕ್ಕೆ ದಾಖಲೆ ಇಲ್ಲದಿರುವುದು, ಕಾಣೆಯಾಗಿರುವುದು ಪತ್ತೆಯಾಗಿದ್ದು, ₹ 2 ಕೋಟಿಗೂ ಹೆಚ್ಚು ಮೌಲ್ಯದ ಅವ್ಯವಹಾರ ನಡೆದಿದೆ ಎಂದು ಸಮಿತಿಯು ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ವಿಎಸ್‌ಕೆಯುನಲ್ಲಿ ಘಟಿಕೋತ್ಸವ ಪ್ರಮಾಣ ಪತ್ರಗಳನ್ನು ಹಣಕ್ಕೆ ಮಾರಿಕೊಂಡ ಸಂಗತಿ 2025ರ ಫೆಬ್ರುವರಿ 17ರಂದು ಬಯಲಾಗಿತ್ತು. ಈ ಸಂಬಂಧ ರಚನೆಯಾಗಿದ್ದ ಆಂತರಿಕ ತನಿಖಾ ಸಮಿತಿಯು ವರದಿ ಸಲ್ಲಿಸಿದ್ದರೂ, ಹಗರಣದ ವಿಸ್ತೃತ ತನಿಖೆಗಾಗಿ ನಿವೃತ್ತ ಜಿಲ್ಲಾ ನ್ಯಾಯಾಧೀಶ ಡಿ.ಎಸ್.ಶಿಂಧೆ ಅವರ ನೇತೃತ್ವದಲ್ಲಿ 2025ರ ಜೂನ್‌ನಲ್ಲಿ ಸಮಿತಿ ರಚಿಸಲಾಗಿತ್ತು. ವಿವಿಯ ಪಿಎಚ್‌ಡಿ ವಿಭಾಗದ ವಿಷಯ ನಿರ್ವಾಹಕ ಮಹಾಂತೇಶ ಮತ್ತು ಘಟಿಕೋತ್ಸವ ಪ್ರಮಾಣ ಪತ್ರದ ವಿಷಯ ನಿರ್ವಾಹಕ ಹನುಮೇಶ ಎಂಬ ಇಬ್ಬರು ಗುತ್ತಿಗೆ ನೌಕರರು ವಿವಿ ಮತ್ತು ಅದರ ವ್ಯಾಪ್ತಿಯ ವಿದ್ಯಾರ್ಥಿಗಳಿಂದ ನೇರವಾಗಿ ಹಣ ಪಡೆದು ನಕಲಿ ಘಟಿಕೋತ್ಸವ ಪ್ರಮಾಣ ಪತ್ರ ನೀಡಿರುವುದು, ವಿವಿಯ ಅತಿಥಿ ಉಪನ್ಯಾಸಕರೂ ತಮ್ಮವರಿಗಾಗಿ ಈ ಇಬ್ಬರಿಂದ ಅಕ್ರಮವಾಗಿ ನಕಲಿ ಘಟಿಕೋತ್ಸವ ಪ್ರಮಾಣ ಪತ್ರ ಪಡೆದಿರುವುದು ಸೇರಿ ಹಲವು ಲೋಪಗಳನ್ನು ಸಮಿತಿ ಪತ್ತೆ ಮಾಡಿದೆ. ನಿಯಮಬಾಹಿರ ಖರೀದಿ: 2022ರಲ್ಲಿ ಘಟಿಕೋತ್ಸವ 25 ಸಾವಿರ ಪ್ರಮಾಣಪತ್ರಗಳನ್ನು, 2023ರಲ್ಲಿ 50 ಸಾವಿರ ಪ್ರಮಾಣ ಪತ್ರವನ್ನು ನಿಯಮ ಉಲ್ಲಂಘಿಸಿ ಖರೀದಿಸಿರುವುದು ತನಿಖೆಯಲ್ಲಿ ಬಯಲಾಗಿದೆ. ಅಂದಿನ ಪ್ರಭಾರ ಕುಲಪತಿ ಕರ್ತವ್ಯ ಲೋಪ ಎಸಗಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ಅವಧಿಯಲ್ಲಿ ಸಾಹೇಬ್ ಅಲಿ ಪ್ರಭಾರದಲ್ಲಿದ್ದರು. ಸಮಿತಿಯ ಶಿಫಾರಸುಗಳು ಕುಲಪತಿ ಸಾಹೇಬ ಅಲಿ ಎಚ್. ನಿರಗುಡಿ ಅವರ ವಿರುದ್ಧ ದುರ್ನಡತೆ ಆಧಾರದಲ್ಲಿ ಶಿಸ್ತುಕ್ರಮ ಕೈಗೊಳ್ಳಬೇಕು. ಕುಲಸಚಿವ ರಮೇಶ ಓಲೇಕಾರ ಅಮಾನತಾಗಬೇಕು, ಶಿಸ್ತುಕ್ರಮ ಜರುಗಿಸಬೇಕು, ಅಕ್ರಮವಾಗಿ ಘಟಿಕೋತ್ಸವ ಪ್ರಮಾಣ ಪತ್ರ ನೀಡಿದ, ಸ್ವೀಕರಿಸಿದ ಎಲ್ಲರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಬೇಕು, ಎಂಬಿಎ ವಿಬಾಗದ ಡಿಇಒ ಬಸವರಾಜು ಪ್ರಶಾಂತ, ಅತಿಥಿ ಉಪನ್ಯಾಸಕರಾದ ಪಿನ್ನಿಂಟಿ ಈಶ್ವರರಾವ್, ಕುಮಾರಸ್ವಾಮಿ ಡಿ.ಎಚ್ ಎಂಬುವವರನ್ನು ಅಮಾನತು ಮಾಡಬೇಕು, ಪರೀಕ್ಷಾಂಗ ವಿಭಾಗದ ಗೌಪ್ಯತೆ ರಕ್ಷಿಸಬೇಕು ಎಂದು ಶಿಫಾರಸು ಮಾಡಲಾಗಿದೆ. - ಎಂ. ಮುನಿರಾಜು, ವಿಎಸ್‌ಕೆಯು ಕುಲಪತಿ ಘಟಿಕೋತ್ಸವ ಪ್ರಮಾಣಪತ್ರ ಅವ್ಯವಹಾರದ ತನಿಖಾ ವರದಿಯ ಕುರಿತು ಸಿಂಡಿಕೇಟ್‌ನಲ್ಲಿ ಈ ಬಗ್ಗೆ ಗುರುವಾರ ಚರ್ಚೆ ನಡೆದಿದೆ. ಪ್ರಕರಣ ದಾಖಲಿಸಲು ಸಿಂಡಿಕೇಟ್‌ನಲ್ಲಿ ತೀರ್ಮಾನಿಸಲಾಗಿದೆ.

- ಭಾಲ್ಕಿಯಲ್ಲಿ ಎ. 20ರಿಂದ ಬಸವ ಜಯಂತಿ ಹಾಗೂ ವಚನ ಜಾತ್ರೆ ಸಂಭ್ರಮ; ಏಪ್ರಿಲ್ 18ಕ್ಕೆ ಬೈಕ್ ರ್‍ಯಾಲಿ #jb_news_kannada #bidar #bhalki1
- ಬಳ್ಳಾರಿ ಮಹಾನಗರ ಪಾಲಿಕೆ 2026-27ನೇ ಸಾಲಿನ ಆಸ್ತಿ ತೆರಿಗೆ ಪಾವತಿದಾರರಿಗೆ ವಿಶೇಷ ರಿಯಾಯಿತಿಗಳನ್ನು ಘೋಷಿಸಿದೆ 💰 👉 ಏಪ್ರಿಲ್ 1 ರಿಂದ 30ರವರೆಗೆ ಪಾವತಿಸಿದರೆ 5% ರಿಯಾಯಿತಿ 👉 ಮೇ 1 ರಿಂದ ಜೂನ್ 30ರವರೆಗೆ ದಂಡವಿಲ್ಲದೆ ಪಾವತಿ ಅವಕಾಶ 👉 ಜುಲೈ 1ರಿಂದ ಪ್ರತಿ ತಿಂಗಳು 2% ದಂಡ ಪಾಲಿಕೆ ಆಯುಕ್ತರು, ನಗರದ ಅಭಿವೃದ್ಧಿಗೆ ನಾಗರಿಕರ ಸಹಕಾರ ಅಗತ್ಯ ಎಂದು ಮನವಿ ಮಾಡಿ, ಸಕಾಲದಲ್ಲಿ ತೆರಿಗೆ ಪಾವತಿಸಿ ಲಾಭ ಪಡೆಯಲು ಕರೆ ನೀಡಿದ್ದಾರೆ.1
- ಮನೆ ಕಳ್ಳತನ ಮಾಡಿದ್ದ ಆರೋಪಿ ಬಂಧನ; ₹1,90,000 ಜಪ್ತಿ ಕೂಡ್ಲಿಗಿ ಮನೆ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕಾನಹೊಸಹಳ್ಳಿಯ ಪೊಲೀಸರು ಯಶಸ್ವಿಯಾಗಿದರೆ. ನಜೀರ್ ಶಫಿ ಬಂಧಿತ ಆರೋಪಿ, ಕಾನಹೊಸಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯ ಮಂಗಾಪುರ ಗ್ರಾಮದಲ್ಲಿ ಜನವರಿ ಹಾಗು ಡಿಸೆಂಬರ್ ತಿಂಗಳಲ್ಲಿ ಎರಡು ಪ್ರತ್ಯಕ ಮನೆಗಳ್ಳತಾನವಾದ ಕುರಿತು ಪ್ರಕರಣ ದಾಕಲಾಗಿದ್ದವು, ಪ್ರಕರಣದ ಜಾಡು ಹಿಡಿದ ಕಾನಾಹೊಸಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿ ₹1,90000 ಹಣವನ್ನು ವಶಕ್ಕೆ ಪಡೆದಿದ್ದಾರೆ. ಮಂಗಪುರದ ಬಸವರಾಜ ಎಂಬುವವರ ಮನೆಯಲ್ಲಿ ಬೀರುವಿನಲ್ಲಿದ್ದ 145000 ಹಾಗೂ ಗುರುಬಸವರಾಜ್ ಎಂಬುವವರ ಮನೆಯಲ್ಲಿ ₹55000 ಹಣವನ್ನು ಯಾರು ಇಲ್ಲದ ವೇಳೆ ಕಳ್ಳತನ ಮಾಡಿರುವ ಬಗ್ಗೆ ಪ್ರಕರಣ ದಾಕಲಾಗಿತ್ತು. ಎಸ್ಪಿ ಜಾಹ್ನವಿ ಎಸ್, ಎಎಸ್ಪಿ ಮಂಜುನಾಥ, ಡಿವೈಸ್ಪಿ ಮಲ್ಲೇಶ್ ದೊಡ್ಡಮನಿ, ಸಿಪಿಐ ಡಿ ದುರುಗಪ್ಪ ಮಾರ್ಗದರ್ಶನದಲ್ಲಿ ಪಿಎಸ್ಐ ಸಿದ್ರಾಮ್ ಬಿದರಾಣಿ ನೇತೃತ್ವದಲ್ಲಿ ಸಿಬಂದ್ದಿ ಕೃಷ್ಣಪ್ಪ, ಸುರೇಶ್, ಕೊಟ್ರೇಶ ಅಂಗಡಿ, ಸಿದ್ದಲಿಂಗಪ್ಪ, ವಿನಾಯಕ್, ಸಂದೀಪ್, ರವಿಚಂದ್ರ ಗೌಡ, ಕೃಷ್ಣ ನಾಯಕ್ ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಭಾಗಿಯಾದ ಅಧಿಕಾರಿ ಹಾಗೂ ಸಿಬಂದ್ದಿ ವರ್ಗಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಜಾಹ್ನವಿ ಅಭಿನಂದಿಸಿದ್ದಾರೆ.1
- Post by Mouli Varma1
- ಹೊಳಲ್ಕೆರೆ ಅಂಗಡಿ ಹೋಟೆಲ್ ಗಳ ಮೇಲೆ ತಹಶಿಲ್ದಾರ್ ವಿಜಯ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ ಅಕ್ರಮ ಸಿಲಿಂಡರ್ ಗಳನ್ನ ವಷಕ್ಕೆ ಪಡೆಯಲಾಗಿದೆ. ಇನ್ನೂ ಸಿಲಿಂಡರ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅಕ್ರಮವಾಗಿ ಸಿಲಿಂಡರ್ ಗಳನ್ನ ಏಜೆನ್ಸಿ ಮಾಲೀಕರು ಮಾರಾಟ ಮಾಡುತ್ತಿದ್ದ ಬಗ್ಗೆ ಆರೋಪಗಳು ಕೇಳಿ ಬರುತ್ತಿದ್ದು ಈ ಹಿನ್ನೆಲೆ ದಾಳಿ ನಡೆಸಿ ಸಿಲಿಂಡರ್ ಗಳನ್ನ ವಷಕ್ಕೆ ಪಡೆದಿದ್ದಾರೆ.1
- ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ಮರಳುತ್ತಿದ್ದ ಭಕ್ತರ ಬಾಳಿನಲ್ಲಿ ವಿಧಿ ಅಟ್ಟಹಾಸ ಮೆರೆದಿದೆ. ಮಂತ್ರಾಲಯದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಿಕ್ಕಬಳ್ಳಾಪುರ ಮೂಲದ ಎಂಟು ಮಂದಿ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ...ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವರಕುಂಟ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಮಂತ್ರಾಲಯಕ್ಕೆ ತೆರಳಿದ್ದ ಭಕ್ತರು ಸಂಚರಿಸುತ್ತಿದ್ದ ಬೊಲೆರೊ ವಾಹನಕ್ಕೆ, ವೇಗವಾಗಿ ಬಂದ ಸಿಮೆಂಟ್ ಮತ್ತು ಜಲ್ಲಿಕಲ್ಲು ಸಾಗಿಸುತ್ತಿದ್ದ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೊಲೆರೊ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಮೃತಪಟ್ಟವರೆಲ್ಲರೂ ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ನಿವಾಸಿಗಳು ಎಂದು ಗುರುತಿಸಲಾಗಿದೆ.ಟ್ಯಾಂಕರ್ ಡಿಕ್ಕಿಯಾದ ರಭಸಕ್ಕೆ ಬೊಲೆರೊ ವಾಹನ ಅಪ್ಪಚ್ಚಿಯಾಗಿದ್ದು, ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಡಬೇಕಾಗಿದೆ.1
- ಬಿಸಿಲಿನ ತೀವ್ರತೆ ಹೆಚ್ಚಿರುವ ಕಾರಣ, ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ಅವಧಿಯನ್ನು ಹೊಸ ಸಮಯ: ಇನ್ಮುಂದೆ ಬೆಳಿಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ನಿಗದಿ ಮಾಡಿ ಯಂದು ಕೇಳಿಕೊಳ್ಳುತ್ತಿದ್ದಾರೆ ಮಧ್ಯಾಹ್ನದ ಸುಡುವ ಬಿಸಿಲಿನಿಂದ ನೌಕರರನ್ನು ಮತ್ತು ದೂರದ ಊರುಗಳಿಂದ ಬರುವ ಜನರನ್ನು ರಕ್ಷಿಸುವುದು ಈ ಬದಲಾವಣೆಯ ಹಿಂದಿನ ಮುಖ್ಯ ಉದ್ದೇಶವಾಗಿದೆ. "ಜನಸಾಮಾನ್ಯರ ಆರೋಗ್ಯ ಮತ್ತು ಕೆಲಸದ ದಕ್ಷತೆಯನ್ನು ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಸಿಲು ಕಡಿಮೆಯಾಗುವವರೆಗೆ ಈ ಹೊಸ ವೇಳಾಪಟ್ಟಿ ಜಾರಿಗೆ ತರಬಹುದು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸಬೇಕು ಮತ್ತು ಅನಗತ್ಯವಾಗಿ ಮಧ್ಯಾಹ್ನ ಹೊರಬರಬಾರದು ಎಂದು ಆರೋಗ್ಯ ಇಲಾಖೆ ಕೂಡ ಸೂಚಿಸಿದೆ. ಈ ಸಮಯದ ಬದಲಾವಣೆಯನ್ನ ಮಾಡುವಂತೆ ಸರ್ಕಾರಕ್ಕೆ ಬಸವರಾಜ ಬಳ್ಳಾರಿ ಗದಗ ಜಿಲ್ಲಾ ನೌಕರರ ಸಂಘದ ಅಧ್ಯಕ್ಷೆರು ಸರ್ಕಾರ ಕ್ಕೆ ಮನವಿ ಮಾಡಿದ್ದಾರೆ ಸರ್ಕಾರ ಸಮಯ ಬದಲಾವಣೆ ಮಾಡುತ್ತಾ ಕಾದು ನೋಡಬೇಕಿದೆ ಮತ್ತು ಸರ್ಕಾರಿ ಕೆಲಸಗಳಿಗೆ ಬರುವ ಜನರಿಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.1
- ಭಾರತೀಯ ಜನತಾ ಪಾರ್ಟಿ ಬಳ್ಳಾರಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಹಂಪಿ ರಮಣ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಮಾತನಾಡಿದ ಹಂಪಿ ರಮಣ ಅವರು, ಈ ಹೊಣೆಗಾರಿಕೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷವನ್ನು ತಳಮಟ್ಟದಲ್ಲಿ ಸದೃಡಗೊಳಿಸುವುದಾಗಿ ತಿಳಿಸಿದ್ದಾರೆ. ಮುಂಬರುವ ಸವಾಲುಗಳನ್ನು ಎದುರಿಸಿ, ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಸತತವಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.1