ಆಗಸ್ಟ್ 2 ರಂದು ಪೊಲೀಸ್ ಕಾನ್‍ಸ್ಟೇಬಲ್ ನೇಮಕಾತಿ ಪರೀಕ್ಷೆ* *26 ಕೇಂದ್ರಗಳಲ್ಲಿ ಪರೀಕ್ಷೆ : 9592 ಅಭ್ಯರ್ಥಿಗಳು ಹಾಜರು* *ಆಗಸ್ಟ್ 2 ರಂದು ಪೊಲೀಸ್ ಕಾನ್‍ಸ್ಟೇಬಲ್ ನೇಮಕಾತಿ ಪರೀಕ್ಷೆ* *26 ಕೇಂದ್ರಗಳಲ್ಲಿ ಪರೀಕ್ಷೆ : 9592 ಅಭ್ಯರ್ಥಿಗಳು ಹಾಜರು* *ಪಾರದರ್ಶಕ ಮತ್ತು ಲೋಪದೋಷರಹಿತ ಪರೀಕ್ಷೆ ನಿರ್ವಹಣೆಗೆ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಸೂಚನೆ* ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ30: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಆಗಸ್ಟ್ 2 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12 ಗಂಟೆಯ ವರೆಗೆ ಪೆÇಲೀಸ್ ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ನಡೆಯಲಿದೆ. ಚಿತ್ರದುರ್ಗ ನಗರದ 26 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 9,592 ಅಭ್ಯರ್ಥಿಗಳು ಪರೀಕ್ಷೆ ಹಾಜರಾಗಲಿದ್ದಾರೆ. ದೂರುಗಳಿಗೆ ಆಸ್ಪದ ನೀಡದಂತೆ, ಅಧಿಕಾರಿಗಳು ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ಕಾರ್ಯ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಸೂಚಿಸಿದರು. ಈ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸೂಕ್ತ ಭದ್ರತೆ ಮತ್ತು ಬ್ಯಾರಿಕೇಡಿಂಗ್ ವ್ಯವಸ್ಥೆ ಮಾಡಬೇಕು. ಎಲ್ಲಾದರೂ ಕಾಂಪೌಂಡ್ ಅಥವಾ ಗೋಡೆಗಳ ದುರಸ್ತಿ ಕಾರ್ಯ ನಡೆಯುತ್ತಿದ್ದರೆ, ಅಂತಹ ಸ್ಥಳಗಳಲ್ಲಿ ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ಅಗತ್ಯ ತಡೆಗೋಡೆಗಳನ್ನು ನಿರ್ಮಿಸಿ ಸುರಕ್ಷತೆ ಖಾತ್ರಿಪಡಿಸಿಕೊಳ್ಳಬೇಕು. ಅಗತ್ಯ ಬಿದ್ದರೆ, ಪೊಲೀಸ್ ಸಿಬ್ಬಂದಿಯನ್ನು ಕಾವಲಿಗೆ ನೇಮಿಸಬೇಕು. ಪ್ರಶ್ನೆ ಪತ್ರಿಕೆಗಳ ಭದ್ರತೆ ಹಾಗೂ ಪಾಲನೆಗಾಗಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಈಗಾಗಲೇ ತ್ರಿಸದಸ್ಯ ಸಮಿತಿ ರಚಿಸಲಾಗಿದೆ. ಇದಲ್ಲದೆ ತಾಲೂಕು ಮಟ್ಟದಲ್ಲೂ ತಹಶೀಲ್ದಾರ್, ಬಿಇಒ ಹಾಗೂ ಪ್ರಾಂಶುಪಾಲರನ್ನೊಳಗೊಂಡ ಸಮಿತಿಗಳನ್ನು ನೇಮಿಸಲಾಗಿದ್ದು, ಅವರಿಗೆ ನೀಡಲಾಗಿರುವ ಕರ್ತವ್ಯದ ಮಾರ್ಗದರ್ಶಿ ಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು. ಪ್ರಶ್ನೆ ಪತ್ರಿಕೆಗಳನ್ನು ಸಾಗಿಸುವ ವಾಹನಗಳಿಗೆ ಜಿಪಿಎಸ್ ವ್ಯವಸ್ಥೆ ಕಡ್ಡಾಯವಾಗಿದ್ದು, ಡಿಡಿಪಿಐ ಅವರು ಈ ಬಗ್ಗೆ ನಿಗಾವಹಿಸಬೇಕು. ರೈಲ್ವೇ ಗೇಟ್ ಅಥವಾ ಟ್ರಾಫಿಕ್ ಸಮಸ್ಯೆ ಇರುವ ಮಾರ್ಗಗಳಲ್ಲಿ ಪ್ರಶ್ನೆ ಪತ್ರಿಕೆ ಸಾಗಿಸುವಾಗ ವಿಳಂಬವಾಗದಂತೆ ಮುನ್ನೆಚ್ಚರಿಕೆ ವಹಿಸಿ, ಪರೀಕ್ಷಾ ಕೇಂದ್ರಗಳಿಗೆ ಸಮಯಕ್ಕೆ ಸರಿಯಾಗಿ ತಲುಪಿಸಲು ಕ್ರಮ ಕೈಗೊಳ್ಳಬೇಕು. ಪರೀಕ್ಷೆ ಪ್ರಾರಂಭವಾಗುವ ಮುನ್ನವೇ ಪರೀಕ್ಷಾ ಕೇಂದ್ರಗಳ ಸುತ್ತಲೂ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗುವುದು. ಪ್ರಶ್ನೆ ಪತ್ರಿಕೆ ಸಾಗಿಸುವ ಪ್ರತಿ ಮಾರ್ಗದ ವಾಹನಕ್ಕೂ ಸಶಸ್ತ್ರ ಪೊಲೀಸ್ ಸಿಬ್ಬಂದಿಯ ಭದ್ರತೆ ಒದಗಿಸಬೇಕು ಎಂದರು. *ಕೊಠಡಿ ಸಿದ್ಧತೆ ಮತ್ತು ಪರಿಶೀಲನೆ:* ಪರೀಕ್ಷಾ ಕೊಠಡಿಗಳ ಸಿದ್ಧತೆ, ಕೊಠಡಿ ಮೇಲ್ವಿಚಾರಕರ ನಿಯೋಜನೆ ಮತ್ತು ಅವರಿಗೆ ಅಗತ್ಯ ತರಬೇತಿ ನೀಡುವ ಬಗ್ಗೆ ಕಚೇರಿ ಮುಖ್ಯಸ್ಥರು ಗಮನಹರಿಸಬೇಕು. ಪರೀಕ್ಷಾ ಸಿಬ್ಬಂದಿಗೆ ವಹಿಸಲಾದ ಜವಾಬ್ದಾರಿಯನ್ನು ಅಧಿಕಾರಿಗಳು ಖುದ್ದಾಗಿ ಸ್ಥಳದಲ್ಲೇ ಪರಿಶೀಲಿಸಿ ದೃಢೀಕರಿಸಿಕೊಳ್ಳಬೇಕು. ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಹಾಗೂ ಸಹ ಮುಖ್ಯ ವೀಕ್ಷಕರು ಪರೀಕ್ಷೆ ಪ್ರಾರಂಭವಾಗುವ ಮುನ್ನವೇ ಕೇಂದ್ರದಲ್ಲಿ ಹಾಜರಿರಬೇಕು. ಪ್ರಶ್ನೆ ಪತ್ರಿಕೆ ವಿತರಣೆ ಸೇರಿದಂತೆ ಪರೀಕ್ಷೆಯ ಪ್ರತಿಯೊಂದು ಪ್ರಕ್ರಿಯೆಯೂ ಸಿಸಿಟಿವಿ ಕಣ್ಗಾವಲಿನಲ್ಲಿಯೇ ನಡೆಯಬೇಕು. ಜಿಲ್ಲಾ ಮಟ್ಟದಲ್ಲಿ ವಿಶೇಷ ತಂಡವು ಈ ದೃಶ್ಯಾವಳಿಗಳನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಿದೆ. ಪರೀಕ್ಷೆ ಆರಂಭವಾದ ತಕ್ಷಣ ಗೈರುಹಾಜರಾದ ವಿದ್ಯಾರ್ಥಿಗಳ ವಿವರಗಳನ್ನು ಆನ್‍ಲೈನ್ ಮೂಲಕ ತಕ್ಷಣವೇ ಅಪ್‍ಲೋಡ್ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. *ಮಾರ್ಗದರ್ಶನ ಹಾಗೂ ಚಾರ್ಟ್ ಪ್ರದರ್ಶನ:* ಪರೀಕ್ಷಾರ್ಥಿಗಳು ಸುಲಭವಾಗಿ ಪರೀಕ್ಷಾ ಕೇಂದ್ರಗಳನ್ನು ತಲುಪಲು ಅನುಕೂಲವಾಗುವಂತೆ ಬಸ್ ನಿಲ್ದಾಣ ಹಾಗೂ ರೈಲ್ವೆ ಸ್ಟೇಷನ್‍ಗಳಲ್ಲಿ ಪರೀಕ್ಷಾ ಕೇಂದ್ರಗಳ ವಿವರವಿರುವ ಚಾರ್ಟ್‍ಗಳನ್ನು ಪ್ರದರ್ಶಿಸಬೇಕು. ಪ್ರತಿ ಪರೀಕ್ಷಾ ಕೇಂದ್ರದಲ್ಲೂ ತುರ್ತು ಚಿಕಿತ್ಸೆಗಾಗಿ ಅಗತ್ಯ ಸಿಬ್ಬಂದಿ, ಪ್ರಥಮ ಚಿಕಿತ್ಸಾ ಕಿಟ್, ಒಆರ್‍ಎಸ್ ಹಾಗೂ ಅಗತ್ಯ ವೈದ್ಯಕೀಯ ವ್ಯವಸ್ಥೆ ಇರಬೇಕು. ಅಲ್ಲದೆ, ತಕ್ಷಣದ ತುರ್ತು ಸೇವೆಗೆ ಆಂಬುಲೆನ್ಸ್ ಹಾಗೂ ವೈದ್ಯರ ತಂಡ ಸಿದ್ಧವಿರಬೇಕು. ಪರೀಕ್ಷೆ ನಡೆಯುವ ಸಮಯದಲ್ಲಿ ಅಭ್ಯರ್ಥಿಗಳು ಪರೀಕ್ಷೆ ಬರೆಯುವುದನ್ನು ವೀಡಿಯೋ ಚಿತ್ರೀಕರಣ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಒಳಗೆ ಮಾಧ್ಯಮದವರಿಗೆ ಪ್ರವೇಶವಿಲ್ಲ. ಪರೀಕ್ಷಾ ಕೇಂದ್ರ ಹೊರಗಡೆಯೇ ಅಭ್ಯರ್ಥಿಗಳು ಪ್ರವೇಶಿಸುವುದನ್ನು ವೀಡಿಯೋ ಮಾಡಿ ಸುದ್ದಿ ಬಿತ್ತರಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಸ್ಪಷ್ಟ ಪಡಿಸಿದರು. ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮಾತನಾಡಿ, ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೂ ಅಗತ್ಯ ಉಸ್ತುವಾರಿ ಹಾಗೂ ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿದೆ. ಕೆ.ಇ.ಎ ನೀಡಿರುವ ಮಿನಿಟ್ ಟು ಮಿನಿಟ್ ನಿಯಮಗಳನ್ನು ಎಲ್ಲರೂ ಪಾಲಿಸಬೇಕು. ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ತಪಾಸಣೆಗಾಗಿ ವಿಶೇಷ ಕೊಠಡಿಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪರೀಕ್ಷಾ ಕೊಠಡಿಗಳ ಮೇಲ್ವಿಚಾರಕರು ಮಾತ್ರ ಕಾರ್ಯನಿರ್ವಹಿಸಲಿದ್ದು, ಪೆÇಲೀಸ್ ಸಿಬ್ಬಂದಿಗೆ ಕೊಠಡಿಯೊಳಗೆ ಪ್ರವೇಶವಿರುವುದಿಲ್ಲ. ಮೇಲ್ವಿಚಾರಣೆ ನಡೆಸುವ ಡಿ.ಎಸ್.ಪಿ ಹಂತದ ಅಧಿಕಾರಿಗಳನ್ನು ಹೊರತುಪಡಿಸಿ, ಇತರ ಯಾವ ಅಧಿಕಾರಿಗಳಿಗೂ ಕೊಠಡಿ ಪ್ರವೇಶಕ್ಕೆ ಅವಕಾಶವಿರುವುದಿಲ್ಲ. ಪರೀಕ್ಷೆಗೆ ಹಾಜರಾಗುತ್ತಿರುವ ಅಭ್ಯರ್ಥಿಗಳಲ್ಲಿ ಯಾರಾದರೂ ಪೊಲೀಸ್ ಅಥವಾ ಇತರ ನಿಯೋಜಿತ ಸಿಬ್ಬಂದಿಯ ಸಂಬಂಧಿಕರಿದ್ದರೆ, ಅದನ್ನು ಸಿಬ್ಬಂದಿಯು ಮುಂಚಿತವಾಗಿಯೇ ಮೇಲಾಧಿಕಾರಿಗಳಿಗೆ ತಿಳಿಸಬೇಕು. ಇಂತಹ ಕಡೆಗಳಲ್ಲಿ ಸೂಕ್ತ ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದರು. ಸಭೆಯಲ್ಲಿ ಪಿ.ಯು. ಉಪನಿರ್ದೇಶಕ ಶಶಿಧರ್.ಎಸ್.ವಿ, ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯಕ್, ಖಜಾನೆ ಇಲಾಖೆ ಉಪನಿರ್ದೇಶಕ ಹೆಚ್.ಟಿ.ಅಶೋಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕಮಾರ್, ಲೋಕೋಯೋಗಿ ಇಲಾಖೆ ಕಾರ್ಯಪಾಲಕ ಇಂಜಿಯರ್ ನಾಗರಾಜ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ಮಾರ್ಗಧಿಕಾರಿಗಳು, ವಸ್ತ್ರಸಂಹಿತೆ ಅಧಿಕಾರಿಗಳು ಉಪಸ್ಥಿತರಿದ್ದರು.

- ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಆರು ವರ್ಷಗಳ ಹಿಂದೆ ಸ್ವಾತಂತ್ರ್ಯ ದಿನಾಚರಣೆಯ ದಿನ ಹಾಕಿದ್ದ ಗಿಡಗಳು ಇಂದು ಫಸಲು ಬಿಡುತ್ತಿದ್ದವು. ಆದರೆ ಇದನ್ನು ಕಡಿದ ಪರಿಣಾಮ ಅರಣ್ಯ ಇಲಾಖೆ ಅಧಿಕಾರಿಗಳು FIR ದಾಖಲಿಸಲು ಆಗ್ರಹಿಸಿದರು. ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಗೋಪ್ಯಾನಾಯ್ಕ ಅವರಿಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿ ಪ್ರಭುಶಂಕರ್ ಮತ್ತು ಸಿಬ್ಬಂದಿ ಗಳು ಆಗಮಿಸಿ ಮಹಜರು ಮಾಡಿದರು. ಇದೇ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಅಧ್ಯಕ್ಷರಾದ ಮಾಲತೇಶ್ ಅರಸ್ , ಜೋಗಿಮಟ್ಟಿ ಗೆಳೆಯರ ಬಳದ ಮಾರ್ಗದರ್ಶಕ ರಾಜಣ್ಣ , ಮಾಜಿ ಅಧ್ಯಕ್ಷರಾದ ರವಿಕುಮಾರ್, ರಾಘವೇಂದ್ರ, ಕಾರ್ಯದರ್ಶಿ ಮಂಜುನಾಥ್ , ರವಿಬಡಗಿ ಇತರರು ಇದ್ದರು. ಬೈಟ್: ರಾಜಣ್ಣ2
- ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ ಹಿರಿಯೂರು ನಗರದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ನ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇನ್ನೂ ಕರ್ನಾಟಕ ಪ್ರದೇಶ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಅವರ ಆದೇಶದಂತೆ, ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಅವರ ವಿವಾದಾತ್ಮಕ ಹೇಳಿಕೆಗಳನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಆಗ್ರಹಿಸಿ ಹಿರಿಯೂರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ಹೋರಾಟದಲ್ಲಿ ಚಿತ್ರದುರ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕರ್ನಾಟಕ ರಾಜ್ಯ ಮಹಿಳಾ ಪ್ರಧಾನಕಾರ್ಯದರ್ಶಿಗಳು ಹಿರಿಯೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.1
- ವಿದ್ಯಾರ್ಥಿ ನಿಲಯಗಳ ಮುಂದೆ ಇರುವ ಪೆಟ್ಟಿಗೆ ಅಂಗಡಿಗಳಲ್ಲಿ ಎಗ್ಗ್ ರೈಸ್ ಜೊತೆಗೆ ಸಿಗುತ್ತೆ ಗುಟ್ಕಾ, ಸಿಗರೇಟ್ ಹಾಗೂ ವಿವಿಧ ತಂಬಾಕು ಉತ್ಪನ್ನ ಗಳು, ಇದು ವಿದ್ಯಾರ್ಥಿಗಳಿಗೆ ಬೇಕಾ?. ಇಲ್ಲಿ ಮಾರಾಟ ಮಾಡುವುದು ಸರಿನಾ. ಶಾಲೆ–ವಸತಿ ನಿಲಯಗಳ ಸುತ್ತ ತಂಬಾಕು ದಂಧೆ: ಅಧಿಕಾರಿಗಳ ಕಣ್ಣೆದುರೇ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ! ಚಳ್ಳಕೆರೆ ನಗರದ ಪಾವಗಡ ರಸ್ತೆಯಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ, ಆದರ್ಶ ಶಾಲೆ, ಮೊರಾರ್ಜಿ ವಸತಿ ಶಾಲೆ, ಸರ್ಕಾರಿ ಐಟಿಐ ಕಾಲೇಜು ಹಾಗೂ ವಿದ್ಯಾರ್ಥಿ ವಸತಿ ನಿಲಯಗಳ ಸುತ್ತಮುತ್ತ ಅಕ್ರಮ ಪೆಟ್ಟಿಗೆ ಅಂಗಡಿಗಳ ಹಾವಳಿ ಮಿತಿ ಮೀರಿದೆ ಎಂಬ ಆರೋಪ ಕೇಳಿಬಂದಿದೆ. ಈ ಅಂಗಡಿಗಳಲ್ಲಿ ಎಗ್ಗ್ ರೈಸ್ ಜೊತೆಗೆ ಗುಟ್ಕಾ, ಸಿಗರೇಟ್ ಹಾಗೂ ವಿವಿಧ ತಂಬಾಕು ಉತ್ಪನ್ನಗಳನ್ನು ಬಹಿರಂಗವಾಗಿ ಮಾರಾಟ ಮಾಡಲಾಗುತ್ತಿದ್ದು, ವಿದ್ಯಾರ್ಥಿಗಳು ತಂಬಾಕು ವ್ಯಸನದತ್ತ ಆಕರ್ಷಿತರಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಪರಿಸ್ಥಿತಿಯ ಗಂಭೀರತೆಯನ್ನು ತೋರಿಸುವಂತೆ, ಆದರ್ಶ ಶಾಲೆಯ ವಿದ್ಯಾರ್ಥಿಯೊಬ್ಬನ ತಂದೆ ಪೊಲೀಸ್ ಇಲಾಖೆಗೆ ದೂರು ನೀಡಿದ ಬಳಿಕ ತಮ್ಮ ಮಗನನ್ನು ಶಾಲೆಯಿಂದ ಬಿಡಿಸಿ ಬೇರೆ ಶಾಲೆಗೆ ಸೇರಿಸಿರುವ ಘಟನೆ ಕೂಡ ಬೆಳಕಿಗೆ ಬಂದಿದೆ. ಈ ಹಿಂದೆ ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಕ್ರಮ ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಿಧಿಸಿದ್ದರೂ, ಕೆಲವೇ ದಿನಗಳಲ್ಲಿ ಮತ್ತೆ ತಂಬಾಕು ಉತ್ಪನ್ನಗಳ ಮಾರಾಟ ಆರಂಭವಾಗಿದೆ ಎನ್ನಲಾಗಿದೆ. ಶಾಲೆ, ಕಾಲೇಜು, ವಿದ್ಯಾರ್ಥಿ ನಿಲಯ ಹಾಗೂ ಸಾರ್ವಜನಿಕ ಸ್ಥಳಗಳ ಸಮೀಪ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ನಿಷೇಧವಿದ್ದರೂ ನಿಯಮಗಳನ್ನು ಬಹಿರಂಗವಾಗಿ ಉಲ್ಲಂಘಿಸಲಾಗುತ್ತಿದೆ ಎಂಬ ಆರೋಪಗಳಿವೆ. ಇದನ್ನು ಕಂಡೂ ಸಂಬಂಧಪಟ್ಟ ಅಧಿಕಾರಿಗಳು ಮೌನ ವಹಿಸಿರುವುದು ಸಾರ್ವಜನಿಕರ ಅನುಮಾನಕ್ಕೆ ಕಾರಣವಾಗಿದ್ದು, ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ಅಕ್ರಮ ಅಂಗಡಿಗಳನ್ನು ಶಾಶ್ವತವಾಗಿ ತೆರವುಗೊಳಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.1
- ಚಿಕ್ಕಜೋಗಿಹಳ್ಳಿ : ಮೂರು ವರೆ ದಶಕಗಳ ಸಾರ್ಥಕ ಸೇವೆ ಸಲ್ಲಿಸಿ ನಿವೃತ್ತರಾದ RNK ನಿಜಲಿಂಗಪ್ಪ ರವರಿಗೆ , ಸಂಘಟನೆಗಳಿಂದ ಗೌರವ ಸನ್ಮಾನ - ಬೀಳ್ಕೊಡುಗೆ_ವಿಜಯನಗರ ಜಿಲ್ಲೆ ಕೂಡ್ಲಿಗಿ *ಚಿಕ್ಕಜೋಗಿಹಳ್ಳಿ : ಮೂರು ವರೆ ದಶಕಗಳ ಸಾರ್ಥಕ ಸೇವೆ ಸಲ್ಲಿಸಿ ನಿವೃತ್ತರಾದ RNK ನಿಜಲಿಂಗಪ್ಪ ರವರಿಗೆ , ಸಂಘಟನೆಗಳಿಂದ ಗೌರವ ಸನ್ಮಾನ - ಬೀಳ್ಕೊಡುಗೆ*_ವಿಜಯನಗರ ಜಿಲ್ಲೆ ಕೂಡ್ಲಿಗಿ : ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಜುಲೈ 31ರಂದು , ಉಪ ಆರೋಗ್ಯಕೇಂದ್ರದಲ್ಲಿ ಡಿ ದರ್ಜೆ ನೌಕರರಾದ RNK ನಿಜಲಿಂಗಪ್ಪರವರಿಗೆ. ವಯೋ ನಿವೃತ್ತಿ ಹೊಂದಿದ RNK ನಿಜಲಿಂಗಪ್ಪರವರನ್ನು , ಆರೋಗ್ಯ ಸಿಬ್ಬಂದಿ ಹಾಗೂ ಡಾ ॥ ವಿಷ್ಣು ಸೇನಾ ಸಮಿತಿ ಸೇರಿದಂತೆ. ವಿವಿದ ಸಂಘಟನೆಗಳ ಪದಾಧಿಕಾರಿಗಳು , ಅವರನ್ನು ಸನ್ಮಾನಿಸಿ ಗೌರವ ಪೂರ್ವಕವಾಗಿ ಬಿಳ್ಕೊಟ್ಟರು. ಮೂಲತಃ ಕೊಟ್ಟೂರು ರಾಂಪುರ ಗ್ರಾಮದವರಾದ , ನಿಜಲಿಂಗಪ್ಪರವರು. ಕಳೆದ ಮೂರು ದಶಕಗಳ ಹಿಂದೆಯೇ , ಬಳ್ಳಾರಿಯ ರೇಷ್ಮೆ ಇಲಾಖೆಯಲ್ಲಿ. ಮಾಸಿಕ ಭತ್ಯೆ ಹೊರಗುತ್ತಿಗೆ ಆಧಾರದಂತೆ , ಹತ್ತು ವರ್ಷಗಳ ಕಾಲ ಡಿ ದರ್ಜೆ ನೌಕರರಾಗಿ ಕರ್ಥವ್ಯೆ ನಿರ್ವಹಿಸಿದ್ದರು. ತದನಂತರ ಆರೊಗ್ಯ ಇಲಾಖೆಯಲ್ಲಿ ಕೆಲ ವರ್ಷಗಳ ಕಾಲ , ಹೊರಗುತ್ತಿಗೆ ಡಿ ದರ್ಜೆ ನೌಕರಾಗಿ ಕರ್ಥವ್ಯ ನಿರ್ವಹಿಸಿದರು. ನಂತರ ವಷ್ಠೆ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ , ಖಾಯಂ ನೌಕರರಾಗಿ ಗುರುತಿಸಿಕೊಂಡು ಮೂರುವರೆ ದಶಕಗಳ ಕಾಲ ಡಿ ದರ್ಜೆ ನೌಕರರಾರಿ ಕರ್ಥವ್ಯ ನಿರ್ವಹಿಸಿ ವಯೋ ನಿವೃತ್ತಿ ಹೊಂದಿದ್ದಾರೆ. ನಿಜಲಿಂಪ್ಪರವರು ಚಿಕ್ಕಜೋಗಳ್ಳಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ , 1998 ರಿಂದ ಸೇವೆ ಆರಂಭಿಸಿ ಜುಲೈ 31 2026 ರವರೆಗೆ. ಅಂದರೆ ಸತತ 34 ವರ್ಷಗಳ ಕಾಲ , ಚಿಕ್ಕಜೋಗಿಹಳ್ಳಿ ಉಪ ಆರೋಗ್ಯಕೇಂದ್ರದಲ್ಲಿ ಸೇವೆ ಸಲ್ಪಿಸಿದ್ದಾರೆ. 31 7 2026ರಂದು , ಅವರು ವಯೋ ನಿವೃತ್ತಿ ಹೊಂದಿರುತ್ತಾರೆ. ಅವರ ಸಾರ್ಥಕ ಸೇವೆ ಹಾಗೂ ಸನ್ನಡತೆ ಮೆಚ್ಚಿದ , ಆರೋಗ್ಯ ಇಲಾಖಾಧಿಕಾರಿಗಳು ಸಿಬ್ಬಂದಿಯವರು. ಮತ್ತು ಡಾ ॥ ವಿಷ್ಣು ಸೇನಾ ಸಮಿತಿ ಸೇರಿದಂತೆ , ವಿವಿದ ಸಂಘಟನೆಗಳ ಪದಾಧಿಕಾರಿಗಳು. ನಿಜಲಿಂಗಪ್ಪರವರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಿ , ಅಭಿಮಾನದಿಂದ ಹಾರೈಸಿ ಸರಳ ಬೀಳ್ಕೊಡುಗೆ ಸಮಾರಂಭದ ಮೂಲಕ ಬೀಳ್ಕೊಟ್ಟಿದ್ದಾರೆ. ಡಾ ॥ ವಿಷ್ಣು ಸೇನಾ ಸಮಿತಿ ಅಧ್ಯಕ್ಷರಾದ ಮಹಮದ್ ಸಾಧಿಕ್ ರವರು ಮಾತನಾಡಿ , ನಿಜಲಿಂಗಪ್ಪರವರು ಸಜ್ಜನ ಪ್ರಾಮಾಣಿಕ ನೌಕರರಾಗಿದ್ದರು. ಅವರು ಕಿಂಚಿತ್ತು ಯಾವುದೇ ದೋಷರೋಪಗಳಿಲ್ಲದೆ , ನಿಷ್ಕಳಂಕದಿಂದ ಮೂರುವರೆ ದಶಕಗಳ ಕಾಲ ಸೇವೆ ಸಲ್ಲಿಸಿದ್ದು. ನಿಜಲಿಂಗಪ್ಪರವರ ಸಾರ್ಥಕ ಸೇವೆಗಾಗಿ , ಅವರನ್ನು ಅವರ ಮಡದಿಯೊಡಗೂಡಿ ತಾವು ಗೌರವಿಸಿ ಸನ್ಮಾನಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಅವರಿಗೆ ಮುಂದಿನ ಆರೋಗ್ಯ ಆಯಸ್ಸು ಸುಖಮಯವಾಗಿರಲೆಂದು , ತಾವು ದೇವರಲ್ಲಿ ಕೋರುವುದಾಗಿ ಅವರು ತಿಳಿಸಿದ್ದಾರೆ. ವಿಷ್ಣು ಸೇನಾ ಸಮಿತಿ ಮುಖಂಡರಾದ ಜನನಾಯಕ ಕುರಿಹಟ್ಟಿ ಓಬಣ್ಣ , ಮಲಿಯಪ್ಪ , ರಾಜು ಸೇರಿದಂತೆ. ವಿವಿದ ಸಂಘಟನೆಗಳ ಪದಾಧಿಕಾರಿಗಳು ಸದಸ್ಯರು. ಮತ್ತು ಆರೊಗ್ಯ ಇಲಾಖಾಧಿಕಾರಿಗಳು ಸಿಬ್ಬಂದಿಯವರು ಉಪಸ್ಥಿತರಿದ್ದು. ನಿಜಲಿಂಗಪ್ಪರವರಿಗೆ ನಿವೃತ್ತಿ ಜೀವನ , ಸುಖಮಯವಾಗಿರಲೆಂದು ಶುಭ ಹಾರೈಸಿದ್ದಾರೆ. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*3
- ರೈತರ ಹಕ್ಕಿಗಾಗಿ ನಡೆಯುತ್ತಿರುವ ಬೃಹತ್ ಪ್ರತಿಭಟನಾ ಬ್ಯಾಲಿಗೆ ಅಭೂತಪೂರ್ವ ಜನಬೆಂಬಲ ಸಾವಿರಾರು ರೈತರು, ವಿವಿಧ ರೈತಪರ ಸಂಘಟನೆಗಳ ಮುಖಂಡರು, ಸಾರ್ವಜನಿಕರು ಹಾಗೂ ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಿನಿಂದ ಭಾಗವಹಿಸಿ ರೈತರ ನ್ಯಾಯಸಮ್ಮತ ನೀರಿನ ಹಕ್ಕಿಗಾಗಿ ಧ್ವನಿಯಾಗಿದ್ದಾರೆ.1
- ಗುರು ಕನಕ ವಿದ್ಯಾ ಕೇಂದ್ರದಲ್ಲಿ ಗುರು ಪೂರ್ಣಿಮೆ: ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ ಕೂಡ್ಲಿಗಿ: ತಾಲೂಕಿನ ತಾಯಕನಹಳ್ಳಿ ಶ್ರೀ ಗುರು ಕನಕ ವಿದ್ಯಾ ಕೇಂದ್ರದಲ್ಲಿ ಬುಧವಾರ ಗುರು ಪೂರ್ಣಿಮೆ ಪ್ರಯುಕ್ತ ಅಕ್ಷರಭ್ಯಾಸೋತ್ಸವ ಕಾರ್ಯಕ್ರಮದ ಅಂಗವಾಗಿ ಎಲ್.ಕೆ ಜಿ ಮಕ್ಕಳಿಗೆ ಸಾಮೂಹಿಕವಾಗಿ ಅಕ್ಷರಭ್ಯಾಸ ಆರಂಭೋತ್ಸವವನ್ನು ಪಾಲಕ ಪೋಷಕರು ಅದ್ದೂರಿಯಾಗಿ ಭಾಗವಹಿಸಿ ತಮ್ಮ ಮಕ್ಕಳಿಗೆ ಗುರುಗಳ ಸಮ್ಮುಖದಲ್ಲಿ ವೇದೋಕ್ತವಾಗಿ ಅಕ್ಷರ ಅಭ್ಯಾಸವನ್ನು ಮಾಡಿಸಿ ಧನ್ಯತಾಭಾವವನ್ನು ತಳಿದರು. 40 ಕ್ಕೂ ಹೆಚ್ಚು ಮಕ್ಕಳು ಪೋಷಕರ ಜೊತೆಗೂಡಿ ಅಕ್ಷರಾಭ್ಯಾಸ ಮಾಡಿದರು. ಪೋಷಕರು ಕೂಡ ಗುರುಕುಲ ಪದ್ಧತಿಯ ಅಕ್ಷರಾಭ್ಯಾಸ ಮಾಡಿಸುವ ಕಾರ್ಯಕ್ರಮದಿಂದ ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಾಲೆಯ ಕಾರ್ಯದರ್ಶಿಗಳು ಬಿ.ಟಿ. ಮಂಜಣ್ಣ ಮಾತನಾಡಿ, ಶಿಕ್ಷಣ ಮತ್ತು ಸಂಸ್ಕಾರ ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಮಕ್ಕಳಿಗೆ ಮನೆಯ ಮೊದಲ ಪಾಠಶಾಲೆ ತಾಯಿಯೇ ಮೊದಲ ಗುರು ಮಕ್ಕಳಿಗೆ ಮನೆಯಿಂದಲೇ ಉತ್ತಮ ಸಂಸ್ಕಾರ ನೀಡಿ. ಅಮೃತ ಹಸ್ತದಿಂದ ಗುರುಗಳ ಮಾರ್ಗದರ್ಶನದಿಂದ ಗುರುಪೂರ್ಣಿಮೆಯ ದಿನ ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸುವುದು ಸಂಪ್ರದಾಯವಾಗಿದೆ. ಗ್ರಾಮೀಣ ಭಾಗದ ಮಕ್ಕಳಿಗೆ ಅನುಕೂಲವಾಗಲೆಂಬ ಮತ್ತು ಗುಣಮಟ್ಟದ ಶಿಕ್ಷಣ ಪಡೆಯಲೆಂಬ ಸದುದ್ದೇಶದಿಂದ ಸಂಸ್ಥೆ ವತಿಯಿಂದ ಆಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು ವಿದ್ಯಾರ್ಥಿಗಳು ಪ್ರಯೋಜನ ಪಡೆಯಬೇಕು. ಋಷಿಮುನಿಗಳ ಕಾಲದಲ್ಲಿ ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡಿಸಿ ಸಮಾಜದ ಸತ್ಪಜೆಗಳನ್ನಾಗಿ ರೂಪಿಸುತ್ತಿದ್ದರು. ಅದೇ ಮಾದರಿಯಲ್ಲಿ ಮಕ್ಕಳಿಗೆ ಸಂಸ್ಕಾರ, ಮೌಲ್ಯಗಳನ್ನು ಕಲಿಸಿ ಸನ್ಮಾರ್ಗದತ್ತ ನಡೆಯುವಂತೆ ಪ್ರೇರೇಪಿಸುವ ಜೊತೆಗೆ ಗುಣಮಟ್ಟದ ಸಂಸ್ಕಾರ ಪೋಷಕರು ಮಹತ್ತರ ಜವಾಬ್ದಾರಿಯಾಗಿದೆ. ಇತ್ತೀಚೆಗಿನ ದಿನಗಳಲ್ಲಿ ಮಕ್ಕಳಲ್ಲಿ ಮೊಬೈಲ್ ಬಳಕೆ ಜಾಸ್ತಿಯಾಗಿದ್ದು, ಇದನ್ನು ತಡೆಯಬೇಕು. ಮೊಬೈಲ್ ಸದ್ಬಳಕೆ ಎಷ್ಟು ಉಪಯುಕ್ತವೋ ಅಷ್ಟೇ ದುರ್ಬಳಕೆ ಅವಕಾಶಗಳು ಇದರಲ್ಲಿ ಸಾಕಷ್ಟು ಅಡಗಿದೆ. ಹೀಗಿರುವಾಗ ಮಕ್ಕಳಿಗೆ ತಮ್ಮ ವಿದ್ಯಾಭ್ಯಾಸದ ಸಮಯದಲ್ಲಿ ಪೋಷಕರು ಮೊಬೈಲ್ ಕೊಡಿಸುವುದು ತರವಲ್ಲ. ಮೊಬೈಲನ್ನು ಅಗತ್ಯಕ್ಕಿಂತ ಹೆಚ್ಚು ಬಳಕೆ ಮಾಡುವುದು ಸರಿಯಿಲ್ಲ, ಅದರ ಅತಿಯಾದ ಬಳಕೆಯಿಂದ ತಮ್ಮ ವಿದ್ಯಾರ್ಥಿ ಜೀವನ ಹಾಳಾಗುತ್ತದೆ ಎಂಬ ಪರಿಜ್ಞಾನ ಮಕ್ಕಳಲ್ಲಿ ಬೆಳೆಯುವ ವಯಸ್ಸಿನವರೆಗೂ ಅವರಿಗೆ ಮೊಬೈಲ್ ಕೊಡಿಸುವುದು ಸೂಕ್ತವಲ್ಲ. ಇದರಿಂದ ಅವರ ಬುದ್ಧಿಶಕ್ತಿ ಬೆಳವಣಿಗೆ ಕುಂಠಿತಗೊಳ್ಳಲಿದೆ ಎಂದರು. ಈ ವೇಳೆ ಸುನಿತಾ ಗುರುರಾಜ್ ಮುಖ್ಯ ಶಿಕ್ಷಕಿ ಪ್ರಾಸ್ತಾವಿಕವಾಗಿ ಮಾತನಾಡಿ ಗು-ಎಂದರೆ ಅಂಧಕಾರ ರ-ಎಂದರೆ ಕಳೆಯುವ ಅಜ್ಞಾನದಿಂದ ಜ್ಞಾನದ ಕಡೆಗೆ ಕೊಂಡೊಯ್ಯುವ ಕತ್ತಲೆಯಿಂದ ಬೆಳಕಿನೆಡೆಗೆ ಕೊಂಡೊಯ್ಯುವ ಶಕ್ತಿ ಗುರು ತಂದೆ ತಾಯಿ ಹೊರತುಪಡಿಸಿ ಗುರು ವ್ಯಕ್ತಿಯ ಜೀವನದಲ್ಲಿ ಮಹತ್ತರ ಪಾತ್ರ ವಹಿಸುತ್ತಾರೆ ಅವರಿಗೆ ಗೌರವ ಸಮರ್ಪಣೆ ಮಾಡುವ ದಿನ ಇದಾಗಿದೆ. ಗುರುಪೂರ್ಣಿಮೆ ಮಾಹಿತಿ ತಿಳಿಸಿ ಮಕ್ಕಳಿಗೆ ಶಿಕ್ಷಣ ಮತ್ತು ಸಂಸ್ಕಾರ ಒಂದು ನಾಣ್ಯದ ಎರಡು ಮುಖಗಳು ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡಿ ಎಂದು ತಿಳಿಸಿದರು. ಈ ವೇಳೆ ಚಿಕ್ಕೋವನಹಳ್ಳಿ ಶ್ರೀ ವೀರೇಶ ಸ್ವಾಮಿ ಪುರೋಹಿತರು ಪೂಜಾ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಸಹ ಶಿಕ್ಷಕರಾದ ಹಂಪಮ್ಮ ಪೂಜಾರ್, ಮಂಜುಳಾ, ಸುಮಿತ್ರ, ರುದ್ರಮ್ಮ, ನೇತ್ರಾವತಿ, ಮಮತಾ, ಜಿಪಿ ಬಸವರಾಜ್, ಬೋಧಕೇತರ ಸಿಬ್ಬಂದಿ ವರ್ಗದವರಾದ ಮಲ್ಲಿಕಾರ್ಜುನ ಶಾಂತಕುಮಾರ್ ವನಜಾಕ್ಷಮ್ಮ ಹಾಗೂ ಶಾಲಾ ಮಕ್ಕಳು, ಪೋಷಕರು ಭಾಗವಹಿಸಿದ್ದರು.1
- ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ನಡೆಯುತ್ತಿರುವ ಅಹೋರಾತ್ರಿ ಧರಣೀಯ ಎರಡನೇ ದಿನದ ರಾತ್ರಿಲ್ಲೂ ಕೂಡ ಅರಿತರು ಜಗ್ಗದೆ ಧರಣಿ ಮುಂದುವರಿಸುತ್ತಿರುವುದು1
- ಕೃತಯುಗ, ತ್ರೇತಾಯುಗ,ದ್ವಾಪರಯುಗದಿಂದ ಗುರುಶಿಷ್ಯರ ಪರಂಪರೆ ಕಾಯುತ್ತೇವೆ. ಚಳ್ಳಕೆರೆ:ಪರಿಶುದ್ಧ ಮನಸ್ಸಿನಿಂದ ಗುರು ಸ್ಮರಣೆ ಮಾಡುವವರು ಬದುಕಿನ ಯಶಸ್ವಿ ಕಂಡುಕೊಳ್ಳುತ್ತಾರೆ ಎಂದು ಕವಿ ಕೊರ್ಲಕುಂಟೆ ತಿಪ್ಪೇಸ್ವಾಮಿ ಹೇಳಿದರು. ಚಳ್ಳಕೆರೆ ನಗರದ ಬಳ್ಳಾರಿ ರಸ್ತೆ ಮಾರ್ಗದಲ್ಲಿ ಇರುವ ಎಸ್ಆರ್ ಎಸ್ ವಿದ್ಯಾ ಸಂಸ್ಥೆಯಲ್ಲಿ ಶ್ರೀ ಗುರುಪೂರ್ಣಿಮೆ ಅಂಗವಾಗಿ ನೂರಾರು ವಿದ್ಯಾರ್ಥಿಗಳಿಂದ ಹೆತ್ತವರಿಗೆ ಹಮ್ಮಿಕೊಂಡಿದ್ದ ಪಾದಪೂಜೆ ಕಾರ್ಯಕ್ರಮವನ್ನು ಉದ್ಟಾಟಿಸಿ ಮಾತನಾಡಿದರು. ತಂದೆ,ತಾಯಿ ಮತ್ತು ವಿದ್ಯೆ ಕಲಿಸುವ ಗುರುವಿನಲ್ಲಿ ದೈವ ಸ್ವರೂಪ ಕಂಡುಕೊಳ್ಳುವ ಸ್ಮರಣೆ ನಮ್ಮದಾಗಬೇಕು. ಕೃತಯುಗ, ತ್ರೇತಾಯುಗ,ದ್ವಾಪರಯುಗದಿಂದ ಗುರುಶಿಷ್ಯರ ಪರಂಪರೆ ಕಾಯುತ್ತೇವೆ.ಗುರು ಗೋವಿಂದಭಟ್ಟರ ಶಿಷ್ಯ ಸಮನ್ವಯತೆಯ ಕವಿ ಸಂತ ಶಶಿನಾಳ ಶರೀಫರು ಎನ್ನುವ ಸಂಬಂಧದಲ್ಲಿ ಜಾತಿ,ಧರ್ಮ ಮೀರಿದ ಗುರುಶಿಷ್ಯರ ಸಂಬಂಧ ಸಮಾಜಕ್ಕೆ ಶ್ರೇಷ್ಠವಾಗಿದೆ. ಮಲೆನಾಡಿನ ಕವಿ ಕುವೆಂಪು ತಮ್ಮ ರಾಮಾಯಣ ದರ್ಶನಂ ಕೃತಿಯನ್ನು ವಿದ್ಯಾ ಗುರುಗಳಾದ ತಳುಕಿನ ಟಿ.ಎಸ್. ವೆಂಕಣ್ಣಯ್ಯ ಅವರಿಗೆ ಅರ್ಪಿಸಿ ದಾಖಲೆಯಾಗಿ ಉಳಿಸಿದ್ದಾರೆ. ಆದರೆ,ಹಿರಿಯರಿಗೆ ಗೌರವ ತೋರದೆ ಗುರು ಎನ್ನುವ ಭಕ್ತಿ ಭಾವನೆ ಇಲ್ಲದ ಪ್ರಸ್ತುತ ಕಲಿಯುಗದಲ್ಲಿ ಸಮಾಜದ ತಲ್ಲಣಗಳನ್ನು ಕಾಣುತ್ತೇವೆ. ಮಕ್ಕಳು ಹೆಚ್ಚು ಅಂಕಪಡೆದು ಉದ್ಯೋಗಸ್ಥರಾಗಬೇಕು ಎನ್ನುವ ಆಸೆಯ ಜತೆಗೆ,ಒಳ್ಳೆಯ ಸಂಸ್ಕಾರ ಮತ್ತು ಸದ್ಗುಣಗಳು ಕಲಿಸುವ ಜವಾಬ್ದಾರಿ ಪಾಲಕರು ಮನೆಯಲ್ಲಿ ಒಂದು ಭಾಗವಾಗಿ ಮಾಡಿಕೊಳ್ಳಬೇಕು ಎಂದು ಹೇಳಿದರು. ವಿದ್ಯಾ ಸಂಸ್ಥೆ ಕಾರ್ಯದರ್ಶಿ ಸುಜಾತ ಲಿಂಗಾರೆಡ್ಡಿ ಮಾತನಾಡಿ, ಬುದ್ದ ತನ್ನ ಲೋಕದ ಜ್ಞಾನವನ್ನು ಐದು ಜನ ಶಿಷ್ಯರಿಗೆ ಹಂಚಿಕೊಂಡ ದಿನವನ್ನು ಗುರುಪೂರ್ಣಿಮೆ ದಿನವಾಗಿ ಆಚರಿಸುತ್ತೇವೆ. ವಿದ್ಯೆ ಜತೆಗೆ ಸಂಸ್ಕಾರ, ವಿನಯತೆ ಇದ್ದಾಗ ಮಾತ್ರ ಬದುಕಿನ ಸಾರ್ಥಕತೆ ಆಗುತ್ತದೆ. ಹೆತ್ತವರ ಪರಿಶ್ರಮ ಮಕ್ಕಳಿಗೆ ಅರ್ಥವಾಗಬೇಕು. ಹೆತ್ತವರ ಪಾದ ಪೂಜೆಯಿಂದ ಕುಟುಂಬ ಸಂಬಂಧ ತಿಳಿಯಬೇಕು. ಹಿರಿಯರು ಮತ್ತು ಗುರುಗಳ ಆರೈಕೆ ಪಡೆಯು ಭಾವನೆ ರೂಢಿಸಿಕೊಳ್ಳಬೇಕು. ಶಾಲಾ ಹಂತದಲ್ಲಿ ಪಾದ ಪೂಜೆ ಕಾರ್ಯಕ್ಕೆ ಪಾಲಕರಿಂದ ಒಳ್ಳೆಯ ಸ್ಪಂದನೆ ಇದೆ ಎಂದು ಸ್ಮರಿಸಿದರು. ಪ್ರಾಚಾರ್ಯ ಬಿ.ಎಸ್. ವಿಜಯ್ ಸೇರಿ ನೂರಾರು ಪಾಲಕರು ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.1