ತಮಿಳುನಾಡಿ ಗೆ ನೀರು ಬಿಡದಂತೆ ಸರ್ಕಾರ ತೀರ್ಮಾನ ಗೊಳ್ಳುವಂತೆ ಕಾರ್ಯಕರ್ತರಿಂದ ರಸ್ತೆ ತಡೆ ಪ್ರತಿಭಟನೆ ಮಳವಳ್ಳಿ: ತಮಿಳುನಾಡಿಗೆ ಕಾವೇರಿ ನೀರು ನಿರ್ವಾಹಣ ಮಂಡಳಿ ಆದೇಶದಂತೆ ಕಾವೇರಿನೀರು ಬಿಡಲು ಹೊರಟಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಮೂಲಸಂಘಟನೆಯ ಕಾರ್ಯಕರ್ತರು ಮಳವಳ್ಳಿ ತಾಲ್ಲೂಕಿನ ಕಾಗೇಪುರ ಗೇಟ್ ಬಳಿ ರಸ್ತೆತಡೆ ಹಾಗೂ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ದೇವಿಪುರಬಸವರಾಜು ನೇತೃತ್ವದಲ್ಲಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ರಾಮಲಿಂಗೇಗೌಡ ಮಾತನಾಡಿ, ಒಂದು ದಿನಕ್ಕೆ 3500 ಕ್ಯೂಸೆಕ್ಸ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಾಹಣಾ ಮಂಡಳಿ ಆದೇಶ ಮಾಡಿದ್ದು, ರಾಜ್ಯ ಸರ್ಕಾರ ಆ ಆದೇಶವನ್ನು ತಿರಸ್ಕಾರ ಮಾಡಬೇಕು. ನಾಳೆ ವಿಧಾನಸಭೆ ಯಲ್ಲಿ ಸರ್ವಸದಸ್ಯರ ಸಭೆಯಲ್ಲಿ ರಾಜ್ಯ ಸರ್ಕಾರ ಕರೆದಿದ್ದು, ಎಲ್ಲಾ ಶಾಸಕರು ತಮಿಳುನಾಡಿಗೆ ನೀರು ಬಿಡದಂತೆ ತೀರ್ಮಾನ ತೆಗೆದುಕೊಳ್ಳುವಂತೆ ಆಗ್ರಹಿಸಿದರು. ಇನ್ನೂ ಇದೇ ವೇಳೆ ತಾಲ್ಲೂಕು ಅಧ್ಯಕ್ಷ ದೇವಿಪುರ ಬಸವರಾಜು ಮಾತನಾಡಿ, ಮಂಡ್ಯ ಹಾಗೂ ಮೈಸೂರು ಜಿಲ್ಲೆಗೆ ಕುಡಿಯಲು ನೀರಿಲ್ಲ , ತಮಿಳುನಾಡಿಗೆ ನೀರು ಬಿಡಬೇಕಂತೆ ಇದು ಸಾಧ್ಯವಿಲ್ಲ , ನೀರು ಬಿಟ್ಟರೆ ಉಗ್ರಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ತಾಲ್ಲೂಕು ಅಧ್ಯಕ್ಷ ದೇವಿಪುರ ಬಸವರಾಜು, ಜಿಲ್ಲಾ ಉಪಾಧ್ಯಕ್ಷ ರಾಮಲಿಂಗೇಗೌಡ, ಸೋ.ಶಿ ಪ್ರಕಾಶ, ಪ್ರಭುಲಿಂಗು, ಶಿವನಂಜು, ಭೂಮಿಗೌಡ, ಚೌಡೇಗೌಡ, ಮಲ್ಲೇಶ್, ಗಿರೀಶ್, ಹನುಮಂತ, ಕೃಷ್ಣ, ಲಿಂಗಪಟ್ಟಣ ಬಸವರಾಜು, ಮಹೇಶ್ ಸೇರಿದಂತೆ ಹಲವರು ಇದ್ದರು.
ತಮಿಳುನಾಡಿ ಗೆ ನೀರು ಬಿಡದಂತೆ ಸರ್ಕಾರ ತೀರ್ಮಾನ ಗೊಳ್ಳುವಂತೆ ಕಾರ್ಯಕರ್ತರಿಂದ ರಸ್ತೆ ತಡೆ ಪ್ರತಿಭಟನೆ ಮಳವಳ್ಳಿ: ತಮಿಳುನಾಡಿಗೆ ಕಾವೇರಿ ನೀರು ನಿರ್ವಾಹಣ ಮಂಡಳಿ ಆದೇಶದಂತೆ ಕಾವೇರಿನೀರು ಬಿಡಲು ಹೊರಟಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಮೂಲಸಂಘಟನೆಯ ಕಾರ್ಯಕರ್ತರು ಮಳವಳ್ಳಿ ತಾಲ್ಲೂಕಿನ ಕಾಗೇಪುರ ಗೇಟ್ ಬಳಿ ರಸ್ತೆತಡೆ ಹಾಗೂ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ದೇವಿಪುರಬಸವರಾಜು ನೇತೃತ್ವದಲ್ಲಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ರಾಮಲಿಂಗೇಗೌಡ ಮಾತನಾಡಿ, ಒಂದು ದಿನಕ್ಕೆ 3500 ಕ್ಯೂಸೆಕ್ಸ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಾಹಣಾ ಮಂಡಳಿ ಆದೇಶ ಮಾಡಿದ್ದು, ರಾಜ್ಯ ಸರ್ಕಾರ ಆ ಆದೇಶವನ್ನು ತಿರಸ್ಕಾರ ಮಾಡಬೇಕು. ನಾಳೆ ವಿಧಾನಸಭೆ ಯಲ್ಲಿ ಸರ್ವಸದಸ್ಯರ ಸಭೆಯಲ್ಲಿ ರಾಜ್ಯ ಸರ್ಕಾರ ಕರೆದಿದ್ದು, ಎಲ್ಲಾ ಶಾಸಕರು ತಮಿಳುನಾಡಿಗೆ ನೀರು ಬಿಡದಂತೆ ತೀರ್ಮಾನ ತೆಗೆದುಕೊಳ್ಳುವಂತೆ ಆಗ್ರಹಿಸಿದರು. ಇನ್ನೂ ಇದೇ ವೇಳೆ ತಾಲ್ಲೂಕು ಅಧ್ಯಕ್ಷ ದೇವಿಪುರ ಬಸವರಾಜು ಮಾತನಾಡಿ, ಮಂಡ್ಯ ಹಾಗೂ ಮೈಸೂರು ಜಿಲ್ಲೆಗೆ ಕುಡಿಯಲು ನೀರಿಲ್ಲ , ತಮಿಳುನಾಡಿಗೆ ನೀರು ಬಿಡಬೇಕಂತೆ ಇದು ಸಾಧ್ಯವಿಲ್ಲ , ನೀರು ಬಿಟ್ಟರೆ ಉಗ್ರಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ತಾಲ್ಲೂಕು ಅಧ್ಯಕ್ಷ ದೇವಿಪುರ ಬಸವರಾಜು, ಜಿಲ್ಲಾ ಉಪಾಧ್ಯಕ್ಷ ರಾಮಲಿಂಗೇಗೌಡ, ಸೋ.ಶಿ ಪ್ರಕಾಶ, ಪ್ರಭುಲಿಂಗು, ಶಿವನಂಜು, ಭೂಮಿಗೌಡ, ಚೌಡೇಗೌಡ, ಮಲ್ಲೇಶ್, ಗಿರೀಶ್, ಹನುಮಂತ, ಕೃಷ್ಣ, ಲಿಂಗಪಟ್ಟಣ ಬಸವರಾಜು, ಮಹೇಶ್ ಸೇರಿದಂತೆ ಹಲವರು ಇದ್ದರು.
- ಮಂಡ್ಯ ಬ್ರಿಡ್ಜ್ ಹದಗೆಟ್ಟಿದೆ ಸರಿ ಮಾಡಿಸಿಕೊಡಿ ಅಂತ ಸಾಮಾಜಿಕ ಜಾಲ ತಾಣದಲ್ಲಿ ಶಾಸಕರಿಗೆ ಆಗ್ರಹಿಸಿದ ಯುವಕ ವಿಡಿಯೋ ವೈರಲ್ ಮಂಡ್ಯ - ಬ್ರಿಡ್ಜ್ ಹದಗೆಟ್ಟಿದೆ ಸರಿ ಮಾಡಿಸಿಕೊಡಿ ಅಂತ ಸಾಮಾಜಿಕ ಜಾಲ ತಾಣದಲ್ಲಿ ಆಗ್ರಹಿಸಿದ ಯುವಕ ವಿಡಿಯೋ ವೈರಲ್, ಮಂಡ್ಯದ ಅರಕೇಶ್ವರ ಸ್ವಾಮಿ ದೇವಾಲಯದ ರಸ್ತೆಯಲ್ಲಿಬರುವ ಬ್ರಿಡ್ಜ್ ಹಳ್ಳ ಬಿದ್ದಿದೆ ಈ ರಸ್ತೆಯಲ್ಲಿ ಹಲವಾರು ವಾಹನ ಓಡಾಡುತ್ತಿದ್ದು ಶಾಲಾವಾಹನಗಳು ಹೆಚ್ಚಾಗಿ ಒಡಾಡುತ್ತಿದ್ದು ಅತಾಚುರ್ಯ ವಾಗುವ ಮೊದಲು ಸರಿಪಡಿಸಿ ಅಂತ ಯುವಕ ಮನವಿ ಮಾಡಿದ್ದಾನೆ.1
- "ಬಿಜೆಪಿಯವರು ನನ್ನ ಪ್ಯಾಂಟ್-ಅಂಗಿ ಹರಿಯುತ್ತಿದ್ದಾರೆ" : ಡಿಕೆಶಿ ವ್ಯಂಗ್ಯ ರಾಜ್ಯದಲ್ಲಿ ನಿರಂತರ ಮಳೆಯ ಪರಿಣಾಮ ಜಲಾಶಯಗಳು ವೇಗವಾಗಿ ಭರ್ತಿಯಾಗುತ್ತಿದ್ದು, ಹೆಚ್ಚುವರಿ ನೀರನ್ನು ಹೊರಬಿಡುವುದು ಅನಿವಾರ್ಯ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಹೋರಾಟಗಾರರು ಜಲಾಶಯಗಳ ಬಳಿ ತೆರಳಬಾರದು ಹಾಗೂ ನೀರು ಬಿಡುವುದಿಲ್ಲ ಎಂದು ನದಿಗಳಿಗೆ ಇಳಿದು ಪ್ರತಿಭಟನೆ ನಡೆಸಬಾರದು ಎಂದು ಎಚ್ಚರಿಕೆ ನೀಡಿದರು. ಮೈಸೂರಿನಲ್ಲಿ ಮಾತನಾಡಿದ ಅವರು, “ಆ ರೀತಿ ನದಿಗೆ ಇಳಿದರೆ ಕೊಚ್ಚಿಕೊಂಡು ಹೋಗುವ ಅಪಾಯವಿದೆ. ಜೀವ ಅಮೂಲ್ಯವಾದದ್ದು. ಯಾರೂ ಇಂತಹ ಸಾಹಸಕ್ಕೆ ಕೈ ಹಾಕಬಾರದು” ಎಂದು ಮನವಿ ಮಾಡಿದರು. ಇದೇ ವೇಳೆ ಆಗಸ್ಟ್ 3ರಂದು ರಾಜ್ಯಕ್ಕೆ ಆಗಮಿಸಬೇಕಿದ್ದ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಭೇಟಿ ರದ್ದಾಗಿದೆ ಎಂದು ತಿಳಿಸಿದರು. “ಪ್ರಸ್ತುತ ಪರಿಸ್ಥಿತಿ ಸೂಕ್ತವಾಗಿಲ್ಲದ ಕಾರಣ ಅವರು ಬರುತ್ತಿಲ್ಲ. ಶಾಂತ ವಾತಾವರಣದಲ್ಲಿ ಚರ್ಚೆ ನಡೆದರೆ ಮಾತ್ರ ಉತ್ತಮ ಫಲಿತಾಂಶ ಸಿಗುತ್ತದೆ. ಪರಿಸ್ಥಿತಿ ಸಹಜವಾದ ಬಳಿಕ ಅವರು ರಾಜ್ಯಕ್ಕೆ ಆಗಮಿಸಲಿದ್ದಾರೆ” ಎಂದರು. ಬಿಜೆಪಿ ಹೋರಾಟಗಳ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, “ಹೋರಾಟದ ಹೆಸರಿನಲ್ಲಿ ನನ್ನ ಪ್ಯಾಂಟ್, ಅಂಗಿಯನ್ನೇ ಹರಿಯುತ್ತಿದ್ದಾರೆ. ಕರ್ನಾಟಕದ ಸಂಸದರು ರಾಜ್ಯದ ಪರವಾಗಿ ಸಂಸತ್‌ನಲ್ಲಿ ಧ್ವನಿ ಎತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಡ್ಯಾಂಗೆ ಬಾಗಿನ ಅರ್ಪಿಸುವ ಬಗ್ಗೆ ಹೇಗೆ ಮಾತನಾಡಲು ಸಾಧ್ಯ?” ಎಂದು ವ್ಯಂಗ್ಯವಾಡಿದರು.1
- ಚಾಮರಾಜನಗರ ಕಲೆಗಳ ತವರೂರು : ಶ್ರೀನಿಧಿ ಕುದರ್ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗೀತಾಗಾಯನ ಕಾರ್ಯಕ್ರಮ ಚಾಮರಾಜನಗರ ಕಲೆಗಳ ತವರೂರು : ಶ್ರೀನಿಧಿ ಕುದರ್ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗೀತಾಗಾಯನ ಕಾರ್ಯಕ್ರಮ ಚಾಮರಾಜನಗರ : ಅತಿ ಹೆಚ್ಚು ಕಲಾವಿದರನ್ನು ಹೊಂದಿರುವ ಚಾಮರಾಜನಗರ ಜಿಲ್ಲೆಯು ಶ್ರೇಷ್ಠ ಜಾನಪದ ಕಲೆಗಳ ತವರೂರಾಗಿದೆ' ಎಂದು ಉದ್ಯಮಿ, ಯೂತ್ ಐಕಾನ್ ಶ್ರೀನಿಧಿ ಕುದರ್ ಹೇಳಿದರು. ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಎನ್.ಪಿ.ಬಾಲಸುಬ್ರಹ್ಮಣ್ಯಂ ಗಾನಗಂಧರ್ವ ಸಾಂಸ್ಕೃತಿಕ ಕಲಾವೇದಿಕೆ ಹಾಗೂ ರಾಗ ಲಹರಿ ಸಾಂಸ್ಕೃತಿಕ ಕಲಾ ವೇದಿಕೆ ಫ್ರೆಂಡ್ಸ್ ಮ್ಯೂಸಿಕ್ ಮೆಲೋಡಿನ್ ತಂಡದಿಂದ ಆಷಾಢಮಾಸದ ಶುಕ್ರವಾರದ ಪ್ರಯುಕ್ತ ನಡೆದ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗಾಯನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚಾಮರಾಜನಗರದಲ್ಲಿ ಆಷಾಢ ಮಾಸದಲ್ಲಿ ನಡೆಯುವ ಪ್ರಸಿದ್ಧ ಚಾಮರಾಜೇಶ್ವರಸ್ವಾಮಿ ರಥೋತ್ಸವ ರಾಜ್ಯದಲ್ಲೇ. ನಡೆಯುವ ಏಕೈಕ ರಥೋತ್ಸವ ಎಂಬ ವಿಶೇಷಕೆ ಪಡೆದಿದೆ.ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನಕ್ಕೆ 200 ವರ್ಷಗಳಾಗಿದೆ. ಶ್ರೀಮುಮ್ಮಡಿ ಕೃಷ್ಣರಾಜ ಒಡೆಯರ್ ತಮ್ಮ ತಂದೆಯ ನೆಪಿಗಾಗಿ ನಿರ್ಮಿಸಿದರು. ಜನರಿಗಾಗಿ ಇದ್ದಂತ ರಾಜಮನೆತನ ಎಂದರೆ ಅದು ಮೈಸೂರು ರಾಜಮನೆತನವಾಗಿದೆ. ಜನಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ಮಾಡಿದ ಕೀರ್ತಿ ಮೈಸೂರು ರಾಜಮನೆತನಕ್ಕೆ ಸಲ್ಲುತ್ತದೆ. ಅವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ಕಾರ್ಯಕ್ರಮ ಉದ್ಘಾಟಿಸಿದ ನಗರಸಭಾ ಮಾಜಿ ಸದಸ್ಯ ಗಣೇಶ್ ದೀಕ್ಷಿತ್ ಮಾತನಾಡಿ, ಅಷಾಢ ಮಾಸದ ಶುಕ್ರವಾರದ ಪ್ರಯುಕ್ತ ಭಕ್ತಿಗೀತೆ ಗಾಯನ ಕಾರ್ಯಕ್ರಮ ನಡೆಯುತ್ತಿರುವುದು ಸಂತಸಕರ ಸಂಗತಿ. ಇಂತಹ ಕಾರ್ಯಕ್ರಮಗಳು ದೇವಸ್ಥಾನದ ಮುಂಭಾಗದಲ್ಲಿ ಹೆಚ್ಚು ಹೆಚ್ಚು ನಡೆಯಬೇಕು. ಇದಕ್ಕೆ ಸರ್ಕಾರವು ಅವಕಾಶ ಕಲ್ಪಿಸಿಕೊಡಬೇಕು ಎಂದರು. ಸನ್ಮಾನ: ರೋಟರಿ ಸಂಸ್ಥೆ ನೂತನ ಅಧ್ಯಕ್ಷ ಅಬ್ದುಲ್ ಅಜೀಜ್, ಕಾರ್ಯದರ್ಶಿ ಜಿ.ಅಂಕಶೆಟ್ಟಿ ಹಾಗೂ ಚಾಮರಾಜೇಶ್ವರ ದೇವಸ್ಥಾನದ ಆರ್ಚಕರು, ರಥ ಕಟ್ಟುವರರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಜಾನಪದ ಗಾಯಕ ಸಿ.ಎಂ.ನರಸಿಂಹಮೂರ್ತಿ, ಮುಖಂಡ ಕೃಷ್ಣನಾಯಕ, ಕೂಸಣ್ಣ, ಪಣ್ಯದಹುಂಡಿ ರಾಜು, ಸಂಘದ ಅಧ್ಯಕ್ಷ ಮಂಗಲ ಹೊಸೂರು ಶಿವಣ್ಣ, ಗೌರವಾಧ್ಯಕ್ಷೆ ವಸಂತಮ್ಮ, ಉಪಾಧ್ಯಕ್ಷ ಬಂಗಾರು, ರಾಗ ಲಹರಿ ಸಾಂಸ್ಕೃತಿಕ ಕಲಾ ವೇದಿಕೆ ಅಧ್ಯಕ್ಷ ದೊರೆಸ್ವಾಮಿ ಆಲೂರು, ಕಾರ್ಯದರ್ಶಿ ನಾಗಮಹದೇವ, ಗೌರವ ಅಧ್ಯಕ್ಷನಾಗೇಂದ್ರ ಯಳಂದೂರು, ಮಹೇಶ್, ಮನು ಇತರರು ಹಾಜರಿದ್ದರು.4
- ಚಾಮರಾಜನಗರದಲ್ಲಿ ಇಂದು ಯುವ ಕರ್ನಾಟಕ ವೇದಿಕೆಯ ಜಿಲ್ಲಾ ಘಟಕ ಹಾಗೂ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು4
- ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ ಚಾಮರಾಜನಗರ, ಆ.1: ಕಾವೇರಿ ನೀರು ಬಿಡುಗಡೆ ಆದೇಶವನ್ನು ಖಂಡಿಸಿ ಯುವ ಕರ್ನಾಟಕ ವೇದಿಕೆಯ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬಳಿಕ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತದವರೆಗೆ ತೆರಳಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಖಾಲಿ ಬಿಂದಿಗೆಗಳನ್ನು ರಸ್ತೆಯ ಮಧ್ಯೆ ಇಟ್ಟು ನೀರಿನ ಅಭಾವದ ಸಂಕಷ್ಟವನ್ನು ಪ್ರತಿಬಿಂಬಿಸುವ ಪ್ರಯತ್ನ ಮಾಡಿದರು. ಪ್ರತಿಭಟನಾಕಾರರು ತಮಿಳುನಾಡು ಮುಖ್ಯಮಂತ್ರಿ ವಿಜಯ್ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ, ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಿರುವ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವುದನ್ನು ವಿರೋಧಿಸಿದರು.1
- ಮೂರನೇ ಆಷಾಢ ಶುಕ್ರವಾರ ಅಂಗವಾಗಿ 2000 ಜನರಿಗೆ ಅನ್ನಸಂತರ್ಪಣೆ ಮಾಡಿದ್ದಾರೆ ಮೈಸೂರು, ಜು.31: ಮೈಸೂರಿನಲ್ಲಿ ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ಗ್ಯಾರೇಜ್ ಹಾಗೂ ಟ್ಯಾಂಕರ್ ಮಾಲೀಕರ ಸಂಘದ ವತಿಯಿಂದ ಸುಮಾರು 2000 ಜನರಿಗೆ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಯೋಜಿಸಲಾಯಿತು. ನಗರದ ಪ್ರಮುಖ ವೃತ್ತದ ಸಮೀಪ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ಗ್ಯಾರೇಜ್‌ಗಳ ಮಾಲೀಕರು, ಟ್ಯಾಂಕರ್ ಮಾಲೀಕರು, ಚಾಲಕರು, ಕಾರ್ಮಿಕರು ಹಾಗೂ ಸಾರ್ವಜನಿಕರು ಭಾಗವಹಿಸಿದರು. ಆಷಾಢ ಶುಕ್ರವಾರವನ್ನು ವಿಶೇಷವಾಗಿ ದೇವಿ ಆರಾಧನೆಗೆ ಸಮರ್ಪಿತ ದಿನವೆಂದು ಪರಿಗಣಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ ಪೂಜೆ, ಅಲಂಕಾರ ಮತ್ತು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ ಬಳಿಕ ಅನ್ನಸಂತರ್ಪಣೆ ಆರಂಭಿಸಲಾಯಿತು. ಬಡವರು, ಕೂಲಿ ಕಾರ್ಮಿಕರು, ಪ್ರಯಾಣಿಕರು ಹಾಗೂ ಅಗತ್ಯವಿರುವ ಜನರಿಗೆ ಊಟ ವಿತರಿಸಲಾಯಿತು. ಕಾರ್ಯಕ್ರಮದ ಆಯೋಜಕರು ಮಾತನಾಡಿ, ಸಮಾಜಕ್ಕೆ ಸೇವೆ ಮಾಡುವ ಉದ್ದೇಶದಿಂದ ಪ್ರತಿವರ್ಷವೂ ಇಂತಹ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು. ಗ್ಯಾರೇಜ್ ಮತ್ತು ಟ್ಯಾಂಕರ್ ವೃತ್ತಿಯಲ್ಲಿ ತೊಡಗಿರುವ ಎಲ್ಲರೂ ಒಗ್ಗಟ್ಟಿನಿಂದ ಈ ಸೇವಾ ಕಾರ್ಯದಲ್ಲಿ ಭಾಗವಹಿಸಿರುವುದು ಸಂತಸದ ಸಂಗತಿ ಎಂದರು. ಅನ್ನಸಂತರ್ಪಣೆಯಲ್ಲಿ ಅನ್ನ, ಸಾಂಬಾರ್, ಪಲ್ಯ, ಪಾಯಸ ಸೇರಿದಂತೆ ವಿವಿಧ ಆಹಾರ ಪದಾರ್ಥಗಳನ್ನು ಸಿದ್ಧಪಡಿಸಲಾಗಿತ್ತು. ಸೇವೆ ಸಲ್ಲಿಸಿದ ಸ್ವಯಂಸೇವಕರು ಶಿಸ್ತಿನಿಂದ ಊಟ ವಿತರಣೆ ಮಾಡಿ ಭಕ್ತರ ಮೆಚ್ಚುಗೆ ಪಡೆದರು. ಸ್ಥಳೀಯ ಮುಖಂಡರು ಮತ್ತು ಸಾರ್ವಜನಿಕರು ಕಾರ್ಯಕ್ರಮವನ್ನು ಪ್ರಶಂಸಿಸಿ, ಧಾರ್ಮಿಕ ಆಚರಣೆಯ ಜೊತೆಗೆ ಮಾನವೀಯ ಸೇವೆಯೂ ಸಮಾಜದಲ್ಲಿ ಬೆಳೆಬೇಕು ಎಂದು ಅಭಿಪ್ರಾಯಪಟ್ಟರು. ಮೈಸೂರಿನಲ್ಲಿ ಇಂತಹ ಸೇವಾ ಚಟುವಟಿಕೆಗಳು ಸಾಮರಸ್ಯ ಮತ್ತು ಸಹಕಾರದ ಸಂಕೇತವಾಗಿವೆ ಎಂದು ಅವರು ಹೇಳಿದರು.2
- ಪ್ರತಿಭಟನೆಯಲ್ಲಿ ವಯೋವೃದ್ದೆ, ಅಭಿನಂದಿಸಿದ ಕುಮಾರ್ ಬಂಗಾರಪ್ಪ ಪ್ರತಿಭಟನೆಯಲ್ಲಿ ಬಾಗಿ ಮಂಡ್ಯ-ಕರ್ನಾಟಕ ರಾಜ್ಯ ರೈತಸಂಘ,ದಲಿತಸಂಘರ್ಷ ಸಮಿತಿ,ಹಾಗೂ ಕಬ್ಬುಬೆಳೆಗಾರರ ಒಕ್ಕೂಟದಿಂದ ಕಾವೇರಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಚಲನಚಿತ್ರ ನಟ ಹಾಗೂ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಬೇಟಿ ನೀಡಿ ತಮ್ಮ ಬೆಂಬಲ ವ್ಯಕ್ತಪಡಿಸಿದ್ರು ವಯೋವೃದ್ದೆ ಪ್ರತಿಭಟನೆಯಲ್ಲಿ ಬಾಗವಹಿಸಿದ್ದನ್ನಕಂಡು ಸಂತಸಪಟ್ಟು ಅವರನ್ನ ಅಭಿನಂದಿಸಿದ್ರು,ನಂತರ ಅಲ್ಲೇಪ್ರತಿಭನಾಕಾರ ರೊಂದಿಗೆ ಕುಳಿತು ಘೋಷಣೆ ಕೂಗಿದ್ರು.1
- ಮೈಸೂರಿಗೆ ಪ್ರಧಾನಿ ಮೋದಿ ಆಗಮನ: ನಗರದಲ್ಲಿ ಬಿಗಿ ಭದ್ರತೆ, ಸಂಚಾರಕ್ಕೆ ನಿರ್ಬಂಧ ಮೈಸೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕಾರ್ಯಕ್ರಮ ನಡೆಯುವ ಸ್ಥಳದ ಸುತ್ತಮುತ್ತ ಹಾಗೂ ಮೋದಿ ಸಂಚರಿಸುವ ಮಾರ್ಗಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಶ್ವಾನದಳದ ಸಿಬ್ಬಂದಿಯಿಂದ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಕಾರ್ಯಕ್ರಮ ನಡೆಯುವ ಪ್ರದೇಶದ ಅಕ್ಕಪಕ್ಕದ ಅಂಗಡಿಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂದ್ ಮಾಡಿಸಲಾಗಿದೆ. ಪ್ರಧಾನಿ ಸಂಚರಿಸುವ ಮಾರ್ಗಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕೆಲವೆಡೆ ಸಾರ್ವಜನಿಕರ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸಂಚಾರ ದಟ್ಟಣೆ ತಪ್ಪಿಸಲು ವಾಹನ ಸವಾರರಿಗಾಗಿ ಬದಲಿ ಮಾರ್ಗಗಳನ್ನು ಪೊಲೀಸರು ಸಿದ್ಧಪಡಿಸಿದ್ದು, ಸಾರ್ವಜನಿಕರು ನಿಗದಿತ ಮಾರ್ಗಗಳಲ್ಲಿ ಸಂಚರಿಸಿ ಪೊಲೀಸರಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.1
- ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ಪ್ರತಿಭಟನೆ ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹಿಂಪಡೆಯುವಂತೆ ಮಲ್ಲುಯರಗಂಬಳ್ಳಿ, ಆಗ್ರಹ ಚಾಮರಾಜನಗರ : ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀಚಾಮರಾಜೇಶ್ವರ ಉದ್ಯಾನವನ ಮುಂಭಾಗದಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ಮಲ್ಲು ಯರಗಂಬಳ್ಳಿ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆಯಲ್ಲಿ ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆ ತಡೆ ನಡೆಸಿ, ತಮಿಳುನಾಡು ಸರ್ಕಾರ, ಕಾವೇರಿ ನೀರು ವಿಯಂತ್ರಣ ಸಮಿತಿ, ತಮಿಳುನಾಡು ಮುಖ್ಯಮಂತ್ರಿ ವಿಜಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ವೇದಿಕೆ ಜಿಲ್ಲಾಧ್ಯಕ್ಷ ಮಲ್ಲು ಯರಗಂಬಳ್ಳಿ ಮಾತನಾಡಿ, ಕಾವೇರಿ ನೀರು ನಿಯಂತ್ರಣ ಸಮಿತಿಯು ಕಾವೇರಿಯಿಂದ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 3.500 ಕ್ಯೂಸೆಕ್ ನೀರನ್ನು ಹರಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಿರುವುದು ಖಂಡನೀಯ. ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ಕುಡಿಯುವುದಕ್ಕೆ ನೀರಿಲ್ಲ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿನಲ್ಲಿ ಬೆಳೆ ಬೆಳೆಯುವುದಕ್ಕೆ ನೀರು ಹರಿಸುವುದು ಎಷ್ಟು ಸರಿ ? ರಾಜ್ಯ ಸರ್ಕಾರ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನು ಒಪ್ಪಿಕೊಳ್ಳಬಾದರು, ಒಂದು ಹನಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ಒತ್ತಾಯಿಸಿದರು. ಕರ್ನಾಟಕ ಬಂದ್ ಸಂಪೂರ್ಣ ಬೆಂಬಲ್ಲ: ಜಿಲ್ಲಾ ಗೌರವಾಧ್ಯಕ್ಷ ಪಿ.ಲಿಂಗರಾಜು ಮಾತನಾಡಿ, ರಾಜ್ಯ ಸರ್ಕಾರ ಕಳೆದ ನಾಲೈದು ದಿನಗಳಿಂದ ಕದ್ದು ಮುಚ್ಚಿ, ರಾತ್ರೋರಾತ್ರಿಗೆ ತಮಿಳುನಾಡಿಗೆ ನೀರು ಹರಿಸುತ್ತಿರುವುದು ಅತ್ಯಂತ ಖಂಡನೀಯವಾದದ್ದು, ರಾಜ್ಯದಲ್ಲಿ ಬರಗಾಲ ಆವರಿಸಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ರಾಜ್ಯದ ಜನತೆ ಸಂಕಷ್ಟದಲ್ಲಿ ಸಿಲುಕಿದ್ದಾರೆ ಇದು. ರಾಜ್ಯದ ಮುಖ್ಯಮಂತ್ರಿಗಳಿಗೆ ಗೊತ್ತಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು. ಇದನ್ನು ಖಂಡಿಸಿ ಕನ್ನಡ ಚಳವಳಿ ಕರೆ ನೀಡಿರುವ ಕರ್ನಾಟಕ ಬಂದ್ ಸಂಪೂರ್ಣ ಬೆಂಬಲವನ್ನು ನಮ್ಮ ಸಂಘಟನೆ ನೀಡಲಿದೆ. ಮುಖ್ಯಮಂತ್ರಿಗಳು ತಮಿಳುನಾಡಿಗೆ ನೀರು ಬಿಟ್ಟರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಉಪಾಧ್ಯಕ್ಷ ಶಬಾಜ್ ಷರೀಫ್, ಗೌರವ ಸಲಹೆಗಾರ ಸೈಯದ್ ಮುಜಾಮಿಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಮೋಹನ್‌ಕುಮಾರ್. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಾಲಿಕ್, ಶಿವಮೂರ್ತಿ, ಸೋಯಿಬ್, ಪ್ರಧಾನ ಕಾರ್ಯದರ್ಶಿ ಶಿವಮ್ಮ, ತಾಲೂಕು ಅಧ್ಯಕ್ಷ ಮಹದೇವಪ್ರಸಾದ್, ಪ್ರಧಾನಕಾರ್ಯದರ್ಶಿ ಸೋಮು, ಸಹ ಕಾರ್ಯದರ್ಶಿ ಅಜಯ್, ಮೊಹಮ್ಮದ್, ಸೈಯದ್ ರಿಯಾಜ್ ಅಹಮದ್, ನಾಸೀರ್‌ಉಲ್ಲಾ, ಅಬ್ದುಲ್ ಸುಭಾನ್, ಚಿಕ್ಕಅಂಕಶೆಟ್ಟಿ ಇತರರು ಭಾಗವಹಿಸಿದ್ದರು.4