logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬೆಳಗಾವಿಯಲ್ಲಿ ಭೀಕರ ಅಪಘಾತಕ್ಕೆ ನಾಲ್ಕು ಜನ ಒಂದೇ ಕುಟುಂಬದಲ್ಲಿ ಬಲಿ |ಭೀಕರ ದುರಂತ ; ಹಬ್ಬದ ದಿನವೇ ಒಂದೇ ಕುಟುಂಬದ ನಾಲ್ವರು ಸಾವು ಬೆಳಗಾವಿ : ಗಣೇಶೋತ್ಸವದ ಸಂಭ್ರಮದ ನಡುವೆಯೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ನಗರದ ಚವ್ಹಾಟಗಲ್ಲಿಯಲ್ಲಿ ತಡರಾತ್ರಿ ನಡೆದಿದೆ. ಮನೆಯಲ್ಲಿ ಫ್ರಿಜ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡು ಕ್ಷಣಾರ್ಧದಲ್ಲಿ ಇಡೀ ಮನೆಗೆ ಬೆಂಕಿ ಆವರಿಸಿದೆ. ಮನೆಯಲ್ಲಿದ್ದವರು ಬೆಂಕಿಯಿಂದ ಹೊರಬರಲಾಗದೆ ಸಿಲುಕಿಕೊಂಡ ಪರಿಣಾಮ ದುರಂತ ಸಂಭವಿಸಿದೆ. ಗಜಾನನ ದಮೋನೆ (65), ರೋಷನ ದಮೋನೆ (21), ಶಾರಧಾ ದಮೋನೆ (45) ಹಾಗೂ ಭಾರತಿ ರದಮೋನೆ (50) ಮೃತಪಟ್ಟವರು. ಅವಘಡದಲ್ಲಿ ಪ್ರಿಯಾ ದಮೋನೆ (28) ಹಾಗೂ ಗಂಗಾ ದಮೋನೆ (25) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಕುಟುಂಬ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿತ್ತು. ಗಣೇಶ ಚತುರ್ಥಿಯ ದಿನವೇ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವುದು ಕುಟುಂಬಸ್ಥರಲ್ಲಿ ಆಘಾತ ಮೂಡಿಸಿದೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆ�

1 hr ago
user_The Law Hints
The Law Hints
Association or organisation ಚಿಕ್ಕೋಡಿ, ಬೆಳಗಾವಿ, ಕರ್ನಾಟಕ•
1 hr ago
58e7a2bb-f138-46c8-bbd5-c745f42469bd

ಬೆಳಗಾವಿಯಲ್ಲಿ ಭೀಕರ ಅಪಘಾತಕ್ಕೆ ನಾಲ್ಕು ಜನ ಒಂದೇ ಕುಟುಂಬದಲ್ಲಿ ಬಲಿ |ಭೀಕರ ದುರಂತ ; ಹಬ್ಬದ ದಿನವೇ ಒಂದೇ ಕುಟುಂಬದ ನಾಲ್ವರು ಸಾವು ಬೆಳಗಾವಿ : ಗಣೇಶೋತ್ಸವದ ಸಂಭ್ರಮದ ನಡುವೆಯೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ನಗರದ ಚವ್ಹಾಟಗಲ್ಲಿಯಲ್ಲಿ ತಡರಾತ್ರಿ ನಡೆದಿದೆ. ಮನೆಯಲ್ಲಿ ಫ್ರಿಜ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡು ಕ್ಷಣಾರ್ಧದಲ್ಲಿ ಇಡೀ ಮನೆಗೆ ಬೆಂಕಿ ಆವರಿಸಿದೆ. ಮನೆಯಲ್ಲಿದ್ದವರು ಬೆಂಕಿಯಿಂದ ಹೊರಬರಲಾಗದೆ ಸಿಲುಕಿಕೊಂಡ ಪರಿಣಾಮ ದುರಂತ ಸಂಭವಿಸಿದೆ. ಗಜಾನನ ದಮೋನೆ (65), ರೋಷನ ದಮೋನೆ (21), ಶಾರಧಾ ದಮೋನೆ (45) ಹಾಗೂ ಭಾರತಿ ರದಮೋನೆ (50) ಮೃತಪಟ್ಟವರು. ಅವಘಡದಲ್ಲಿ ಪ್ರಿಯಾ ದಮೋನೆ (28) ಹಾಗೂ ಗಂಗಾ ದಮೋನೆ (25) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಕುಟುಂಬ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿತ್ತು. ಗಣೇಶ ಚತುರ್ಥಿಯ ದಿನವೇ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವುದು ಕುಟುಂಬಸ್ಥರಲ್ಲಿ ಆಘಾತ ಮೂಡಿಸಿದೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆ�

More news from ಕರ್ನಾಟಕ and nearby areas
  • ಬನಹಟ್ಟಿ ಸತ್ಯಾಗ್ರಹ ಸ್ಥಳಕ್ಕೆ ಪೊಲೀಸರ ಭೇಟಿ - ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನ ಪ್ರಜಾಸೌಧ ಕುರಿತು ಬನಹಟ್ಟಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದವರ ಆರೋಗ್ಯದಲ್ಲಿ ಏರುಪೇರಾಗಿದ್ದು ವೈದ್ಯಕೀಯ ಶಿಪಾರಸ್ಸು ಮೇರೆಗೆ ಅವರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು
    1
    ಬನಹಟ್ಟಿ ಸತ್ಯಾಗ್ರಹ ಸ್ಥಳಕ್ಕೆ ಪೊಲೀಸರ ಭೇಟಿ - ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನ
ಪ್ರಜಾಸೌಧ ಕುರಿತು ಬನಹಟ್ಟಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದವರ ಆರೋಗ್ಯದಲ್ಲಿ ಏರುಪೇರಾಗಿದ್ದು ವೈದ್ಯಕೀಯ ಶಿಪಾರಸ್ಸು ಮೇರೆಗೆ ಅವರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು
    user_Shanur Kullolli
    Shanur Kullolli
    ರಬಕವಿ ಬನಹಟ್ಟಿ, ಬಾಗಲಕೋಟೆ, ಕರ್ನಾಟಕ•
    18 hrs ago
  • ನಿಡಗುಂದಿಯಲ್ಲಿ ಸರಿಯಾಗಿ 7ವಿದ್ಯುತ್ ನೀಡದ keb ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ರಾಯಬಾಗ: ನಿಡಗುಂದಿ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆ ವಿಚಾರವಾಗಿ ರೈತರು ಕೆಇಬಿ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    1
    ನಿಡಗುಂದಿಯಲ್ಲಿ ಸರಿಯಾಗಿ 7ವಿದ್ಯುತ್ ನೀಡದ keb ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು 
ರಾಯಬಾಗ: ನಿಡಗುಂದಿ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆ ವಿಚಾರವಾಗಿ ರೈತರು ಕೆಇಬಿ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    user_Ramesh Biradi
    Ramesh Biradi
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    13 min ago
  • ಅಥಣಿ ಪಟ್ಟಣದಲ್ಲಿ ಗಣೇಶ ಉತ್ಸವದಲ್ಲಿ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕಿದ ಸಚಿವ ಲಕ್ಷ್ಮಣ ಸವದಿ. ಅಥಣಿ : ಕರ್ನಾಟಕ ಸರ್ಕಾರದ ಸಹಕಾರ ಸಚಿವ ಗಣೇಶ ಆಗಮನದ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕುವ ಮೂಲಕ ಅಭಿಮಾನಿಗಳಲ್ಲಿ ಸಂತಸ ಸಂಭ್ರಮ ಮೂಡಿಸಿದರು. ಈ ವೇಳೆ ಅಭಿಮಾನಿಗಳು ಸೌದಿ ಅವರೊಂದಿಗೆ ಸ್ಟೆಪ್ ಹಾಕುವ ಮೂಲಕ ಸಂಭ್ರಮಿಸಿದರು.
    1
    ಅಥಣಿ ಪಟ್ಟಣದಲ್ಲಿ ಗಣೇಶ ಉತ್ಸವದಲ್ಲಿ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕಿದ ಸಚಿವ ಲಕ್ಷ್ಮಣ ಸವದಿ.
ಅಥಣಿ : ಕರ್ನಾಟಕ ಸರ್ಕಾರದ ಸಹಕಾರ ಸಚಿವ ಗಣೇಶ ಆಗಮನದ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕುವ ಮೂಲಕ ಅಭಿಮಾನಿಗಳಲ್ಲಿ ಸಂತಸ ಸಂಭ್ರಮ ಮೂಡಿಸಿದರು. ಈ ವೇಳೆ ಅಭಿಮಾನಿಗಳು ಸೌದಿ ಅವರೊಂದಿಗೆ ಸ್ಟೆಪ್ ಹಾಕುವ ಮೂಲಕ ಸಂಭ್ರಮಿಸಿದರು.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    12 hrs ago
  • ಮುಧೋಳ ನಗರದಲ್ಲಿ ಗಣೇಶೋತ್ಸವ ಸಂಭ್ರಮದಲ್ಲಿ ಮಿಂದೆದ್ದ ಅಸಂಖ್ಯ ಭಕ್ತಗಣ ಮುಧೋಳ : ಗಣೇಶೋತ್ಸವ ಹಿನ್ನೆಲೆ ನಗರದಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಅಸಂಖ್ಯ ಭಕ್ತಗಣದ ಮಧ್ಯೆ ಅದ್ದೂರಿಯಾಗಿ ಜರುಗಿತು. ನಗರದ ಶಿವಾಜಿ ವೃತ್ತ, ಗಾಂಧಿ ವೃತ್ತ, ಜೈ ಭಾರತ ಸರ್ಕಲ್, ಜನತಾ ಪ್ಲಾಟ್ ಸೇರಿದಂತೆ ಹಲವಾರು ಭಾಗದಲ್ಲಿ ಪ್ರತಿಷ್ಠಾಪನೆಗೊಂಡ ಗಣೇಶ ಮೂರ್ತಿಗಳ ಮೆರವಣಿಗೆ ಅದ್ದೂರಿಯಾಗಿ ಜರುಗಿತು. ಪಂಢರಪುರದ ದಿಂಡೆ ರೂಪಕ, ಮಹಾರಾಷ್ಟ್ರದ ಡೋಲ್ ತಾಷ್, ಡಿಜೆ, ಡಾಲ್ಬಿ ಸದ್ದಿಗೆ ಸಾವಿರಾರು ಯುವಕರು ಹೆಜ್ಜೆ ಹಾಕಿದರು. ಮಹಳೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ‌ ಪಾಲ್ಗೊಂಡಿದ್ದರು. ಜೈ ಭಾರತ ವೃತ್ತದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ ವೀಕ್ಷಣೆಗೆ ಸಾವಿರಾರು ಜನರು ನೆರದಿದ್ದರು. ಭಕ್ತಿಭಾವದಿಂದ ಗಣೇಶ ಮೂರ್ತಿಗಳನ್ನು‌ ಪ್ರತಿಷ್ಠಾಪನೆ ಮಾಡಲಾಯಿತು.
    4
    ಮುಧೋಳ ನಗರದಲ್ಲಿ ಗಣೇಶೋತ್ಸವ ಸಂಭ್ರಮದಲ್ಲಿ ಮಿಂದೆದ್ದ ಅಸಂಖ್ಯ ಭಕ್ತಗಣ
ಮುಧೋಳ : ಗಣೇಶೋತ್ಸವ ಹಿನ್ನೆಲೆ ನಗರದಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಅಸಂಖ್ಯ ಭಕ್ತಗಣದ ಮಧ್ಯೆ ಅದ್ದೂರಿಯಾಗಿ ಜರುಗಿತು.
ನಗರದ ಶಿವಾಜಿ ವೃತ್ತ, ಗಾಂಧಿ ವೃತ್ತ, ಜೈ ಭಾರತ ಸರ್ಕಲ್, ಜನತಾ ಪ್ಲಾಟ್ ಸೇರಿದಂತೆ ಹಲವಾರು ಭಾಗದಲ್ಲಿ ಪ್ರತಿಷ್ಠಾಪನೆಗೊಂಡ ಗಣೇಶ ಮೂರ್ತಿಗಳ ಮೆರವಣಿಗೆ ಅದ್ದೂರಿಯಾಗಿ ಜರುಗಿತು.
ಪಂಢರಪುರದ ದಿಂಡೆ ರೂಪಕ, ಮಹಾರಾಷ್ಟ್ರದ ಡೋಲ್ ತಾಷ್, ಡಿಜೆ, ಡಾಲ್ಬಿ ಸದ್ದಿಗೆ ಸಾವಿರಾರು ಯುವಕರು ಹೆಜ್ಜೆ ಹಾಕಿದರು. ಮಹಳೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ‌ ಪಾಲ್ಗೊಂಡಿದ್ದರು. ಜೈ ಭಾರತ ವೃತ್ತದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ ವೀಕ್ಷಣೆಗೆ ಸಾವಿರಾರು ಜನರು ನೆರದಿದ್ದರು. ಭಕ್ತಿಭಾವದಿಂದ ಗಣೇಶ ಮೂರ್ತಿಗಳನ್ನು‌ ಪ್ರತಿಷ್ಠಾಪನೆ ಮಾಡಲಾಯಿತು.
    user_ಗೋವಿಂದಪ್ಪ ತಳವಾರ
    ಗೋವಿಂದಪ್ಪ ತಳವಾರ
    ಮುಧೋಳ, ಬಾಗಲಕೋಟೆ, ಕರ್ನಾಟಕ•
    12 hrs ago
  • ಬಾಗಲಕೋಟೆ: ಸಾಲ ಸೌಲಭ್ಯಕ್ಕಾಗಿ ಕುರಿಗಳೊಂದಿಗೆ ಬ್ಯಾಂಕ್‌ ಎದುರು ಪ್ರತಿಭಟನೆ
    1
    ಬಾಗಲಕೋಟೆ: ಸಾಲ ಸೌಲಭ್ಯಕ್ಕಾಗಿ ಕುರಿಗಳೊಂದಿಗೆ ಬ್ಯಾಂಕ್‌ ಎದುರು ಪ್ರತಿಭಟನೆ
    user_Shabbir Bijapur
    Shabbir Bijapur
    Photographer ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    10 hrs ago
  • ಗರಸು ತುಂಬಿದ ಟ್ರ್ಯಾಕ್ಟರ್‌ಗಳ ರೋಚಕ ಸ್ಪರ್ಧೆ, ಹಳ್ಳದ ಗೆಣ್ಣೂರಿನಲ್ಲಿ ಹಳ್ಳದ ಗೆಣ್ಣೂರಿನಲ್ಲಿ ಶ್ರೀ ಗಜಾನನ ಯುವಕ ಮಂಡಳಿಯಿಂದ ಆಯೋಜನೆ ಹಳ್ಳದ ಗೆಣ್ಣೂರು: ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಹಳ್ಳದ ಗೆಣ್ಣೂರು ಗ್ರಾಮದ ವಾಟರ್ ಟ್ಯಾಂಕ್ ಸಮೀಪ ಶ್ರೀ ಗಜಾನನ ಯುವಕ ಮಂಡಳಿಯ ವತಿಯಿಂದ ನಾಲ್ಕು ಟೈಲರ್‌ಗಳ ಗರಸು ತುಂಬಿದ ಟ್ರ್ಯಾಕ್ಟರ್‌ಗಳ ಸ್ಪರ್ಧೆಯನ್ನು ಮಂಗಳವಾರ ಸಂಜೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಟ್ರ್ಯಾಕ್ಟರ್‌ಗಳ ಸಾಮರ್ಥ್ಯ ಹಾಗೂ ಚಾಲಕರ ಕೌಶಲ್ಯ ಗಮನ ಸೆಳೆಯಿತು. ರೋಚಕ ಸ್ಪರ್ಧೆಯನ್ನು ಕಣ್ತುಂಬಿಕೊಳ್ಳಲು ಸುತ್ತಮುತ್ತಲಿನ ಗ್ರಾಮಗಳ ಯುವಕರು ಹಾಗೂ ಟ್ರ್ಯಾಕ್ಟರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಸ್ಪರ್ಧೆಯಲ್ಲಿ ಶಿವು ವಿ. ಬೆಳ್ಳುಬ್ಬಿ ಪ್ರಥಮ ಬಹುಮಾನ, ರೇವಣಸಿದ್ಧ ಪಡಸಲಗಿ ದ್ವಿತೀಯ ಬಹುಮಾನ ಹಾಗೂ ಅಬ್ದುಲ್ ನದಾಫ್ ತೃತೀಯ ಬಹುಮಾನ ಪಡೆದುಕೊಂಡರು ಎಂದು ಶ್ರೀ ಗಜಾನನ ಯುವಕ ಮಂಡಳಿಯ ಪದಾಧಿಕಾರಿಗಳು ತಿಳಿಸಿದ್ದಾರೆ. ಸ್ಪರ್ಧೆಯು ಯುವಕರಲ್ಲಿ ಉತ್ಸಾಹ ಮೂಡಿಸುವುದರೊಂದಿಗೆ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಿಸಿತು.
    1
    ಗರಸು ತುಂಬಿದ ಟ್ರ್ಯಾಕ್ಟರ್‌ಗಳ ರೋಚಕ ಸ್ಪರ್ಧೆ, ಹಳ್ಳದ ಗೆಣ್ಣೂರಿನಲ್ಲಿ
ಹಳ್ಳದ ಗೆಣ್ಣೂರಿನಲ್ಲಿ ಶ್ರೀ ಗಜಾನನ ಯುವಕ ಮಂಡಳಿಯಿಂದ ಆಯೋಜನೆ
ಹಳ್ಳದ ಗೆಣ್ಣೂರು: ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಹಳ್ಳದ ಗೆಣ್ಣೂರು ಗ್ರಾಮದ ವಾಟರ್ ಟ್ಯಾಂಕ್ ಸಮೀಪ ಶ್ರೀ ಗಜಾನನ ಯುವಕ ಮಂಡಳಿಯ ವತಿಯಿಂದ ನಾಲ್ಕು ಟೈಲರ್‌ಗಳ ಗರಸು ತುಂಬಿದ ಟ್ರ್ಯಾಕ್ಟರ್‌ಗಳ ಸ್ಪರ್ಧೆಯನ್ನು ಮಂಗಳವಾರ ಸಂಜೆ ಆಯೋಜಿಸಲಾಗಿತ್ತು.
ಸ್ಪರ್ಧೆಯಲ್ಲಿ ಟ್ರ್ಯಾಕ್ಟರ್‌ಗಳ ಸಾಮರ್ಥ್ಯ ಹಾಗೂ ಚಾಲಕರ ಕೌಶಲ್ಯ ಗಮನ ಸೆಳೆಯಿತು. ರೋಚಕ ಸ್ಪರ್ಧೆಯನ್ನು ಕಣ್ತುಂಬಿಕೊಳ್ಳಲು ಸುತ್ತಮುತ್ತಲಿನ ಗ್ರಾಮಗಳ ಯುವಕರು ಹಾಗೂ ಟ್ರ್ಯಾಕ್ಟರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
ಸ್ಪರ್ಧೆಯಲ್ಲಿ ಶಿವು ವಿ. ಬೆಳ್ಳುಬ್ಬಿ ಪ್ರಥಮ ಬಹುಮಾನ, ರೇವಣಸಿದ್ಧ ಪಡಸಲಗಿ ದ್ವಿತೀಯ ಬಹುಮಾನ ಹಾಗೂ ಅಬ್ದುಲ್ ನದಾಫ್ ತೃತೀಯ ಬಹುಮಾನ ಪಡೆದುಕೊಂಡರು ಎಂದು ಶ್ರೀ ಗಜಾನನ ಯುವಕ ಮಂಡಳಿಯ ಪದಾಧಿಕಾರಿಗಳು ತಿಳಿಸಿದ್ದಾರೆ.
ಸ್ಪರ್ಧೆಯು ಯುವಕರಲ್ಲಿ ಉತ್ಸಾಹ ಮೂಡಿಸುವುದರೊಂದಿಗೆ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಿಸಿತು.
    user_S L TEGGI
    S L TEGGI
    Voice of people ಕೊಲ್ಹಾರ, ವಿಜಯಪುರ, ಕರ್ನಾಟಕ•
    10 hrs ago
  • ಗೋಕಾಕ ನಗರದಲ್ಲಿ ಪೊಲೀಸರಿಂದ ರೂಟ್ ಮಾರ್ಚ ಗಣೇಶ ಹಬ್ಬದ ನಿಮಿತ್ಯ ಗೋಕಾಕ ನಗರದಲ್ಲಿ ಪೊಲೀಸ ಇಲಾಖೆಯಿಂದ ರೂಟ್ ಮಾರ್ಚ ಗಣೇಶ ಹಬ್ಬದ ನಿಮಿತ್ಯ , ಹಬ್ಬದಲ್ಲಿ ಗಲಾಟೆ ದೊಂಬಿ ಮಾಡುವವರಿಗೆ,route ಮಾರ್ಚ್ ಮುಖಾಂತರ ಖಡಕ್ ಎಚ್ಚರಿಕೆ
    1
    ಗೋಕಾಕ ನಗರದಲ್ಲಿ ಪೊಲೀಸರಿಂದ ರೂಟ್ ಮಾರ್ಚ ಗಣೇಶ ಹಬ್ಬದ ನಿಮಿತ್ಯ 
ಗೋಕಾಕ ನಗರದಲ್ಲಿ ಪೊಲೀಸ ಇಲಾಖೆಯಿಂದ ರೂಟ್ ಮಾರ್ಚ ಗಣೇಶ ಹಬ್ಬದ ನಿಮಿತ್ಯ , ಹಬ್ಬದಲ್ಲಿ ಗಲಾಟೆ ದೊಂಬಿ ಮಾಡುವವರಿಗೆ,route ಮಾರ್ಚ್ ಮುಖಾಂತರ ಖಡಕ್ ಎಚ್ಚರಿಕೆ
    user_Ramesh Biradi
    Ramesh Biradi
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    11 hrs ago
  • ಹಳ್ಳೂರ ಗ್ರಾಮದಲ್ಲಿ 2ಜನರ ನಡುವಿನ ಗಲಾಟೆ ದೊಡ್ಡ ಸಂಘರ್ಷಕ್ಕೆ ಕಾರಣ ಪೊಲೀಸರು ಲಾಟಿ ಬೀಸಿ ಜನರನ್ನು ಚದುರಿಸಿದ್ದಾರೆ
    1
    ಹಳ್ಳೂರ ಗ್ರಾಮದಲ್ಲಿ 2ಜನರ ನಡುವಿನ ಗಲಾಟೆ ದೊಡ್ಡ ಸಂಘರ್ಷಕ್ಕೆ ಕಾರಣ ಪೊಲೀಸರು ಲಾಟಿ ಬೀಸಿ ಜನರನ್ನು ಚದುರಿಸಿದ್ದಾರೆ
    user_ತಾಯ್ನಾಡು ನ್ಯೂಸ್ ಕನ್ನಡ
    ತಾಯ್ನಾಡು ನ್ಯೂಸ್ ಕನ್ನಡ
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    22 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.