ಮಲೆ ಮಹದೇಶ್ವರ ಬೆಟ್ಟದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಅವರಿಂದ ಘನತ್ಯಾಜ್ಯ ನಿರ್ವಹಣೆಯ ಯಂತ್ರೋಪಕರಣಗಳಿಗೆ ಚಾಲನೆ. ಮಲೆ ಮಹದೇಶ್ವರ ಬೆಟ್ಟ ‘ಹಸಿರು ನಾಳೆ-ಎಂ.ಎಂ. ಹಿಲ್ಸ್' (Green Tomorrow – MM Hills) ಅಭಿಯಾನದ ಅಂಗವಾಗಿ ಜಿಲ್ಲಾಧಿಕಾರಿ ಶ್ರೀರೂಪ ಅವರು ಬುಧವಾರ (ಏ.15) ಮಲೆ ಮಹದೇಶ್ವರ ಬೆಟ್ಟದಲ್ಲಿ ಘನ ತ್ಯಾಜ್ಯ ನಿರ್ವಹಣೆಯ ನೂತನ ಯಂತ್ರೋಪಕರಣಗಳನ್ನು ಅಧಿಕೃತವಾಗಿ ಉದ್ಘಾಟಿಸಿದರು. ಪವಿತ್ರ ಯಾತ್ರಾ ಸ್ಥಳದಲ್ಲಿ ಹೆಚ್ಚುತ್ತಿರುವ ಪರಿಸರ ಸವಾಲುಗಳನ್ನು ಎದುರಿಸಲು ಮತ್ತು ವೈಜ್ಞಾನಿಕ ಮಾದರಿಯಲ್ಲಿ ತ್ಯಾಜ್ಯ ಸಂಸ್ಕರಣೆ ಮಾಡಲು ಅಭಿಯಾನ ಹಮ್ಮಿಕೊಳ್ಳಲಾಗಿದೆ. ನೂತನವಾಗಿ ಅಳವಡಿಸಲಾದ ಯಂತ್ರಗಳು ಕಸವನ್ನು ಸಮರ್ಪಕವಾಗಿ ವಿಂಗಡಿಸಲು ಮತ್ತು ವಿಲೇವಾರಿ ಮಾಡಲು ಸಹಕಾರಿಯಾಗಲಿದ್ದು, ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಹಾಗೂ ಪರಿಸರ ಸ್ನೇಹಿ ತಾಣವನ್ನಾಗಿ ಮಾಡುವ ಗುರಿಯನ್ನು ಹೊಂದಿವೆ. ಯೋಜನೆಯ ಯಶಸ್ಸಿನ ಹಿಂದಿರುವ ಪೌರಕಾರ್ಮಿಕರು ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು ಈ ಸಮಾರಂಭಕ್ಕೆ ಸಾಕ್ಷಿಯಾದರು. ಈ ಸಾಮೂಹಿಕ ಪ್ರಯತ್ನವು ಬೆಟ್ಟದ ನೈಸರ್ಗಿಕ ಸೌಂದರ್ಯವನ್ನು ಕಾಪಾಡುವಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ. ಈ ಸಂದರ್ಭದಲ್ಲಿ ಮಲೆ ಮಹದೇಶ್ವರ ಬೆಟ್ಟ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಎ.ಇ. ರಘು, ಉಪಕಾರ್ಯದರ್ಶಿ ಚಂದ್ರಶೇಖರ್, ಮೈಕಾಪ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಅಶ್ರಫುಲ್ ಹಸನ್, ಗ್ರಾಮ ಪಂಚಾಯಿತಿ ಪಿಡಿಒ ಕಿರಣ್, ಜಾಗೃತ್ ಟೆಕ್ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕರು, ಮಂಗಳೂರಿನ ಮಿನಿ ಟೆಕ್ ಸಂಸ್ಥೆಯ ಪ್ರತಿನಿಧಿಗಳು, ಇತರರು ಉಪಸ್ಥಿತರಿದ್ದರು.
ಮಲೆ ಮಹದೇಶ್ವರ ಬೆಟ್ಟದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಅವರಿಂದ ಘನತ್ಯಾಜ್ಯ ನಿರ್ವಹಣೆಯ ಯಂತ್ರೋಪಕರಣಗಳಿಗೆ ಚಾಲನೆ. ಮಲೆ ಮಹದೇಶ್ವರ ಬೆಟ್ಟ ‘ಹಸಿರು ನಾಳೆ-ಎಂ.ಎಂ. ಹಿಲ್ಸ್' (Green Tomorrow – MM Hills) ಅಭಿಯಾನದ ಅಂಗವಾಗಿ ಜಿಲ್ಲಾಧಿಕಾರಿ ಶ್ರೀರೂಪ ಅವರು ಬುಧವಾರ (ಏ.15) ಮಲೆ ಮಹದೇಶ್ವರ ಬೆಟ್ಟದಲ್ಲಿ ಘನ ತ್ಯಾಜ್ಯ
ನಿರ್ವಹಣೆಯ ನೂತನ ಯಂತ್ರೋಪಕರಣಗಳನ್ನು ಅಧಿಕೃತವಾಗಿ ಉದ್ಘಾಟಿಸಿದರು. ಪವಿತ್ರ ಯಾತ್ರಾ ಸ್ಥಳದಲ್ಲಿ ಹೆಚ್ಚುತ್ತಿರುವ ಪರಿಸರ ಸವಾಲುಗಳನ್ನು ಎದುರಿಸಲು ಮತ್ತು ವೈಜ್ಞಾನಿಕ ಮಾದರಿಯಲ್ಲಿ ತ್ಯಾಜ್ಯ ಸಂಸ್ಕರಣೆ ಮಾಡಲು ಅಭಿಯಾನ ಹಮ್ಮಿಕೊಳ್ಳಲಾಗಿದೆ. ನೂತನವಾಗಿ ಅಳವಡಿಸಲಾದ ಯಂತ್ರಗಳು ಕಸವನ್ನು ಸಮರ್ಪಕವಾಗಿ ವಿಂಗಡಿಸಲು ಮತ್ತು ವಿಲೇವಾರಿ ಮಾಡಲು ಸಹಕಾರಿಯಾಗಲಿದ್ದು, ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ
ಹಾಗೂ ಪರಿಸರ ಸ್ನೇಹಿ ತಾಣವನ್ನಾಗಿ ಮಾಡುವ ಗುರಿಯನ್ನು ಹೊಂದಿವೆ. ಯೋಜನೆಯ ಯಶಸ್ಸಿನ ಹಿಂದಿರುವ ಪೌರಕಾರ್ಮಿಕರು ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು ಈ ಸಮಾರಂಭಕ್ಕೆ ಸಾಕ್ಷಿಯಾದರು. ಈ ಸಾಮೂಹಿಕ ಪ್ರಯತ್ನವು ಬೆಟ್ಟದ ನೈಸರ್ಗಿಕ ಸೌಂದರ್ಯವನ್ನು ಕಾಪಾಡುವಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ. ಈ ಸಂದರ್ಭದಲ್ಲಿ ಮಲೆ ಮಹದೇಶ್ವರ ಬೆಟ್ಟ
ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಎ.ಇ. ರಘು, ಉಪಕಾರ್ಯದರ್ಶಿ ಚಂದ್ರಶೇಖರ್, ಮೈಕಾಪ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಅಶ್ರಫುಲ್ ಹಸನ್, ಗ್ರಾಮ ಪಂಚಾಯಿತಿ ಪಿಡಿಒ ಕಿರಣ್, ಜಾಗೃತ್ ಟೆಕ್ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕರು, ಮಂಗಳೂರಿನ ಮಿನಿ ಟೆಕ್ ಸಂಸ್ಥೆಯ ಪ್ರತಿನಿಧಿಗಳು, ಇತರರು ಉಪಸ್ಥಿತರಿದ್ದರು.
- ಮಲೆ ಮಹದೇಶ್ವರ ಬೆಟ್ಟ ‘ಹಸಿರು ನಾಳೆ-ಎಂ.ಎಂ. ಹಿಲ್ಸ್' (Green Tomorrow – MM Hills) ಅಭಿಯಾನದ ಅಂಗವಾಗಿ ಜಿಲ್ಲಾಧಿಕಾರಿ ಶ್ರೀರೂಪ ಅವರು ಬುಧವಾರ (ಏ.15) ಮಲೆ ಮಹದೇಶ್ವರ ಬೆಟ್ಟದಲ್ಲಿ ಘನ ತ್ಯಾಜ್ಯ ನಿರ್ವಹಣೆಯ ನೂತನ ಯಂತ್ರೋಪಕರಣಗಳನ್ನು ಅಧಿಕೃತವಾಗಿ ಉದ್ಘಾಟಿಸಿದರು. ಪವಿತ್ರ ಯಾತ್ರಾ ಸ್ಥಳದಲ್ಲಿ ಹೆಚ್ಚುತ್ತಿರುವ ಪರಿಸರ ಸವಾಲುಗಳನ್ನು ಎದುರಿಸಲು ಮತ್ತು ವೈಜ್ಞಾನಿಕ ಮಾದರಿಯಲ್ಲಿ ತ್ಯಾಜ್ಯ ಸಂಸ್ಕರಣೆ ಮಾಡಲು ಅಭಿಯಾನ ಹಮ್ಮಿಕೊಳ್ಳಲಾಗಿದೆ. ನೂತನವಾಗಿ ಅಳವಡಿಸಲಾದ ಯಂತ್ರಗಳು ಕಸವನ್ನು ಸಮರ್ಪಕವಾಗಿ ವಿಂಗಡಿಸಲು ಮತ್ತು ವಿಲೇವಾರಿ ಮಾಡಲು ಸಹಕಾರಿಯಾಗಲಿದ್ದು, ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಹಾಗೂ ಪರಿಸರ ಸ್ನೇಹಿ ತಾಣವನ್ನಾಗಿ ಮಾಡುವ ಗುರಿಯನ್ನು ಹೊಂದಿವೆ. ಯೋಜನೆಯ ಯಶಸ್ಸಿನ ಹಿಂದಿರುವ ಪೌರಕಾರ್ಮಿಕರು ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು ಈ ಸಮಾರಂಭಕ್ಕೆ ಸಾಕ್ಷಿಯಾದರು. ಈ ಸಾಮೂಹಿಕ ಪ್ರಯತ್ನವು ಬೆಟ್ಟದ ನೈಸರ್ಗಿಕ ಸೌಂದರ್ಯವನ್ನು ಕಾಪಾಡುವಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ. ಈ ಸಂದರ್ಭದಲ್ಲಿ ಮಲೆ ಮಹದೇಶ್ವರ ಬೆಟ್ಟ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಎ.ಇ. ರಘು, ಉಪಕಾರ್ಯದರ್ಶಿ ಚಂದ್ರಶೇಖರ್, ಮೈಕಾಪ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಅಶ್ರಫುಲ್ ಹಸನ್, ಗ್ರಾಮ ಪಂಚಾಯಿತಿ ಪಿಡಿಒ ಕಿರಣ್, ಜಾಗೃತ್ ಟೆಕ್ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕರು, ಮಂಗಳೂರಿನ ಮಿನಿ ಟೆಕ್ ಸಂಸ್ಥೆಯ ಪ್ರತಿನಿಧಿಗಳು, ಇತರರು ಉಪಸ್ಥಿತರಿದ್ದರು.4
- ತೀವ್ರ ಬರ ಪರಿಸ್ಥಿತಿಯಿಂದ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ನೀರು–ಮೇವು ಒದಗಿಸುವಲ್ಲಿ ಅಧಿಕಾರಿಗಳು ವಿಫಲರಾಗಿರುವುದನ್ನು ಖಂಡಿಸಿ ಮಾರ್ಟಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ ರೈತರು ಹಾಗೂ ಮಹಿಳೆಯರು ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಖಾಲಿ ಬಿಂದಿಗೆಗಳನ್ನು ಹಿಡಿದು ಎಂದು ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ನೀರಿನ ತೀವ್ರ ಕೊರತೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಗ್ರಾಮಸ್ಥರು ದಿನನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು. ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಬರ ಪರಿಸ್ಥಿತಿ ಮುಂದುವರಿದರೂ ಸಮರ್ಪಕ ಕ್ರಮ ಕೈಗೊಳ್ಳದಿರುವುದು ವಿಷಾದನೀಯ. ಜಾನುವಾರುಗಳಿಗೆ ನೀರು ಹಾಗೂ ಬೇಸಿಗೆಯಲ್ಲಿ ಅಗತ್ಯವಾದ ಮೇವು ಒದಗಿಸುವಲ್ಲಿಯೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. ಜೊತೆಗೆ ಸ್ವತ್ತು ಮತ್ತು ಪೋಡಿ ಸಂಬಂಧಿತ ಸಮಸ್ಯೆಗಳಿಗೂ ಪರಿಹಾರ ನೀಡದಿರುವುದನ್ನು ಖಂಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಇಒ ಉಮೇಶ್, ಬೋರ್‌ವೆಲ್‌ಗಳಲ್ಲಿ ನೀರು ಬತ್ತಿರುವ ಹಿನ್ನೆಲೆಯಲ್ಲಿ ಸಮಸ್ಯೆ ಉಂಟಾಗಿದೆ ಎಂದು ತಿಳಿಸಿ, ನೀರಿನ ಅಭಾವ ಇರುವ ಪ್ರದೇಶಗಳಿಗೆ ಮೂರು ದಿನಗಳೊಳಗೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ರೈತ ಸಂಘಟನೆಯ ಹಿರಿಯ ಮುಖಂಡ ಶೈಲಿಂದ್ರ ಕುಮಾರ್ ರೈತರ ಮುಖಂಡ ಅರ್ಪತ್ ರಾಜ್ ಡೇವಿಡ್ ಪೀಟರ್ ಹಾಜರಿದ್ದರು2
- ಸಾರ್ವಜನಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಕೊಳ್ಳೇಗಾಲ ಇಒ ಮತ್ತು ಗ್ರಾ.ಪಂ ಕಾರ್ಯದರ್ಶಿ ವಿರುದ್ಧ ಆಕ್ರೋಶ ಕೊಳ್ಳೇಗಾಲ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವ ಅಧಿಕಾರಿಯೊಬ್ಬರು, ಗ್ರಾಮದ ಯುವಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನಲ್ಲಿ ವರದಿಯಾಗಿದೆ. ಘಟನೆಯ ವಿವರ: ಕುಂತೂರು ಗ್ರಾಮದ ದಲಿತ ಯುವಕರು ತಮ್ಮ ಗ್ರಾಮದ ಕೆಲವು ಸಮಸ್ಯೆಗಳ ಕುರಿತು ಮನವಿ ಸಲ್ಲಿಸಲು ಹೋದ ಸಂದರ್ಭದಲ್ಲಿ, ಕೊಳ್ಳೇಗಾಲ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಗುರು ಶಾಂತಪ್ಪ ಹಾಗೂ ಕುಂತೂರು ಗ್ರಾಮ ಪಂಚಾಯತ್ ಕಾರ್ಯದರ್ಶಿ ಶಿವಪ್ರಸಾದ್ ಅವರು ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ಸಮಸ್ಯೆಗಳನ್ನು ಆಲಿಸುವ ಬದಲು, ಅಧಿಕಾರಿ ಗುರು ಶಾಂತಪ್ಪ ಅವರು ಯುವಕರನ್ನು ಉದ್ದೇಶಿಸಿ "ಬೇವರ್ಸಿಗಳು" ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೀಳುಮಟ್ಟದ ನಡವಳಿಕೆ ತೋರಿದ್ದಾರೆ ಎನ್ನಲಾಗಿದೆ. ಸಾರ್ವಜನಿಕರ ಆಕ್ರೋಶ: "ಸರ್ಕಾರಿ ನೌಕರರ ನಡತೆ ನಿಯಮಗಳ ಪ್ರಕಾರ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಆದರೆ, ದಲಿತ ಯುವಕರನ್ನು ಈ ರೀತಿ ನಿಂದಿಸಿರುವುದು ನಮಗೆ ತೀವ್ರ ಮನನೋಯಿಸಿದೆ. ಒಬ್ಬ ಜವಾಬ್ದಾರಿಯುತ ಅಧಿಕಾರಿಗೆ ಇದು ಶೋಭೆ ತರುವುದಿಲ್ಲ," ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮನವಿ: ಈ ಘಟನೆಯು ಸರ್ಕಾರಿ ಅಧಿಕಾರಿಗಳ ಮೈಗಳ್ಳತನ ಮತ್ತು ಸಾರ್ವಜನಿಕ ವಿರೋಧಿ ಧೋರಣೆಯನ್ನು ಎತ್ತಿ ತೋರಿಸುತ್ತಿದ್ದು, ಕೂಡಲೇ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಸಂತ್ರಸ್ತ ಯುವಕರು ಮತ್ತು ಗ್ರಾಮಸ್ಥರು ಒತ್ತಾಯಿಸಿದ್ದಾರೆ.3
- ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕ ನೀರುಪಾಲು.*1
- ಆನೇಕಲ್ ತಾಲ್ಲೂಕಿನ ಸರ್ಜಾಪುರ ಸಮೀಪದ ಮಟ್ಟನಹಳ್ಳಿ ಕೆರೆ ಸಮೀಪ ನಿನ್ನೆ ರಾತ್ರಿ ಕುಡಿತದ ವೇಳೆ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ದುರ್ಘಟನೆ ನಡೆದಿದೆ. ತಮಿಳುನಾಡು ಗಡಿಭಾಗದ ಸಿಂಗಸದನಪಳ್ಳಿ ಗ್ರಾಮದ ನಿವಾಸಿ ಮನೋಜ್ ಮತ್ತು ಅದೇ ಗ್ರಾಮದ ಮೋಹನ್ ನಡುವೆ ಮಾತಿಗೆ ಮಾತು ಬೆಳೆದು ತೀವ್ರ ವಾಗ್ವಾದಕ್ಕೆ ತಿರುಗಿದೆ. ಗಲಾಟೆಯ ಸಂದರ್ಭದಲ್ಲಿ ನಶೆಯಲ್ಲಿದ್ದ ಮನೋಜ್, ಮೋಹನ್ ತಲೆಯ ಮೇಲೆ ಕಲ್ಲು ಹಾಕಿ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಮೋಹನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಮೃತ ಮೋಹನ್ (25) ಬೈಕ್ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದನು. ಆತ ತಮಿಳುನಾಡಿನ ಹೊಸೂರು ತಾಲ್ಲೂಕಿನ ಸಿಂಗಸದನಪಳ್ಳಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಲು ಕ್ರಮ ಕೈಗೊಂಡಿದ್ದಾರೆ.1
- ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ* *ಸಿಎಂ ಆಪ್ತರನ್ನೆ ಟಾರ್ಗೆಟ್ ಮಾಡ್ತಿದ್ದಾರ?ಕೆ ಎನ್ ರಾಜಣ್ಣ ಆಯ್ತು ಈಗ ಜಬ್ಬಾರ್,ನಸೀರ್,ಜಮೀರ್ ಮೇಲೂ ಕ್ರಮ ಆಗ್ಬೇಕೆನ್ನುವ ಒತ್ತಾಯವಿರುವ ವಿಚಾರವಾಗಿ ಪ್ರಶ್ನೆ* ಕಾಂಗ್ರೆಸ್‌ನಿಂದ ಬೇರೆ ಬೇರೆ ಸಮುದಾಯಕ್ಕೆ ಅನ್ಯಾಯ ಆಯ್ತು ಎಂದು ಚರ್ಚೆ ಆಯ್ತು ಈ ಹಿಂದೆ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯವಾಯ್ತು ಈಗ ಮುಸ್ಲಿಂ ಸಮುದಾಯಕ್ಕೆ ಅನ್ಯಾಯವೆಂದು ಚರ್ಚೆ ಆಗಿದೆ ಈ ರೀತಿಯಾಗಿ ತಪ್ಪು ಸಂದೇಶ ಹೋಗ್ಬಾರ್ದು ನಾನು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಮಾತಾಡ್ತೇನೆ ಈ ವಿಚಾರವಾಗಿ ಚರ್ಚೆ ಮಾಡ್ತೇವೆ ಎಂದ ಸಚಿವ ಸತೀಶ್ ಜಾರಕಿಹೊಳಿ....1
- ಅರಕಲಗೂಡಿನಲ್ಲಿ ನಡೆದ ಈ ಘಟನೆ ನಿಜಕ್ಕೂ ಆತಂಕಕಾರಿ. ಅದೃಷ್ಟವಶಾತ್ ಟ್ರ್ಯಾಕ್ಟರ್ ನಿಧಾನವಾಗಿ ಚಲಿಸುತ್ತಿದ್ದರಿಂದ ಮತ್ತು ಸಮಯಪ್ರಜ್ಞೆ ಮೆರೆದ ಸಾರ್ವಜನಿಕರಿಂದ ದೊಡ್ಡ ಅನಾಹುತ ತಪ್ಪಿದೆ. ಅರಕಲಗೂಡು : ಪಟ್ಟಣದಿಂದ ರಾಮನಾಥಪುರ ಕಡೆಗೆ ಟ್ರ್ಯಾಕ್ಟರ್ ಚಾಲನೆ ಮಾಡುತ್ತಿದ್ದ ವ್ಯಕ್ತಿಯೋರ್ವ ಹಠಾತ್ತನೆ ಮೂರ್ಚೆಹೋದ ಪ್ರಕರಣ ನಡೆದಿದೆ. ಬುಧವಾರ ಮಧ್ಯಾಹ್ನ 12-15ರ ವೇಳೆ ಪಟ್ಟಣದ ಖಾಸಗಿ ಅಂಗಡಿಯೊಂದರಲ್ಲಿ ಪಶು ಆಹಾರದ ಚೀಲಗಳನ್ನು ಟ್ರ್ಯಾಕ್ಟರ್ ನಲ್ಲಿ ತುಂಬಿಸಿಕೊಂಡು ಶಿರಂಗಾಲ ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿಯೇ ಚಾಲನೆ ಮಾಡುವ ವೇಳೆಯೇ ಮೂರ್ಚೆ ಹೋಗಿದ್ದಾನೆ.ಈ ವೇಳೆ ವಾಹನದ ಚಾಲನೆ ಮುಂದೆ ಸಾಗುತ್ತಿತ್ತು.ಪಟ್ಟಣದ ಚನ್ನಬಸವೇಶ್ವರ ಸಮುದಾಯದ ಸರ್ಕಲ್‌ನಲ್ಲಿ ಗಾಡಿಯನ್ನು ರಾಮನಾಥಪುರ ಮಾರ್ಗಕ್ಕೆ ತಿರುಗಿಸಿದ್ದಾನೆ.ಈ ಭಾಗ ಸ್ವಲ್ಪಮಟ್ಟಿದೆ ದಿಬ್ಬದಿಂದ ಕೂಡಿರುವ ಪರಿಣಾಮ ನಿಧಾನವಾಗಿ ಟ್ರ್ಯಾಕ್ಟರ್ ಚಲಿಸುತ್ತಿದೆ.ಆದರೆ ಚಾಲಕ ಮಾತ್ರ ಸೀಟ್‌ಗೆ ಒರೆಗಿಕೊಂಡು ಪ್ರಜ್ಞಾ ಹೀನ ಸ್ಥಿತಿಯಲ್ಲಿ ತಲೆ ಹೊರಭಾಗಕ್ಕೆ ಭಾಗಿರುವುದು ಕಂಡುಬಂದೆ.ಕೂಡಲೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ನಿಧಾನಗತಿಯಲ್ಲಿ ಚಲಿಸುತ್ತಿದ್ದ ಟ್ರ್ಯಾಕ್ಟರ್‌ನ್ನು ತಡೆದು ಮುಂದೆ ಸಂಭವಿಸಬಹುದಾಗಿದ್ದ ಅಪಘಾತ,ಪ್ರಾಣ ಹಾನಿಯನ್ನು ತಪ್ಪಿಸಿದ್ದಾರೆ. ಒಬ್ಬ ವ್ಯಕ್ತಿ ಚಾಲನೆ ಮಾಡುವಾಗ ಈ ರೀತಿ ಮೂರ್ಛೆ ಹೋಗಲು ಅಥವಾ ಪ್ರಜ್ಞೆ ತಪ್ಪಲು ಹಲವು ಕಾರಣಗಳಿರಬಹುದು: ತೀವ್ರ ಬಿಸಿಲು ಮತ್ತು ನಿರ್ಜಲೀಕರಣ: ಬೇಸಿಗೆಯ ತಾಪಮಾನ ಹೆಚ್ಚಾಗಿರುವುದರಿಂದ ದೇಹದಲ್ಲಿ ನೀರಿನಂಶ ಕಡಿಮೆಯಾಗಿ (Dehydration) ತಲೆಸುತ್ತು ಬರಬಹುದು. ರಕ್ತದೊತ್ತಡದ ಏರುಪೇರು: ಲೋ ಬಿಪಿ ಅಥವಾ ಸಕ್ಕರೆ ಅಂಶ ಕಡಿಮೆಯಾಗುವುದು (Hypoglycemia) ಕೂಡ ಹಠಾತ್ ಪ್ರಜ್ಞೆ ತಪ್ಪಲು ಕಾರಣವಾಗುತ್ತದೆ. ಅಪಸ್ಮಾರ (Epilepsy): ವ್ಯಕ್ತಿಗೆ ಮೊದಲೇ ಫಿಟ್ಸ್ ಅಥವಾ ಅಪಸ್ಮಾರದ ಸಮಸ್ಯೆ ಇದ್ದರೆ ಈ ರೀತಿ ಸಂಭವಿಸುವ ಸಾಧ್ಯತೆ ಇರುತ್ತದೆ. ಅತಿಯಾದ ಆಯಾಸ: ಸರಿಯಾದ ವಿಶ್ರಾಂತಿ ಇಲ್ಲದೆ ದೀರ್ಘಕಾಲ ಕೆಲಸ ಮಾಡುವುದು ಸಹ ಮೆದುಳಿನ ಮೇಲೆ ಪರಿಣಾಮ ಬೀರಬಹುದು. #ArkalgudNews #tractorlife #news5kannada #NewsUpdate1
- ಟ್ರೈಓವರ್ ದೀಪಗಳು ಆಫ್, ವಾಹನ ಸವಾರರ ಪರದಾಟ ಕಡದಕಟ್ಟೆಯಲ್ಲಿ ಅಪಾಯ ಭೀತಿ, ಕ್ರಮಕ್ಕೆ ಒತ್ತಾಯ1