ಮೀಸಲಾತಿಯನ್ನು ಶೆಡ್ಯೂಲ್ 9ಗೆ ಸೇರಿಸದಿದ್ದರೆ ಉಗ್ರ ಹೋರಾಟ!.... ಮೀಸಲಾತಿಯನ್ನು ಶೆಡ್ಯೂಲ್ 9ಗೆ ಸೇರಿಸದಿದ್ದರೆ ಉಗ್ರ ಹೋರಾಟ! ಬೆಂಗಳೂರು, ಮೇ. ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟ ಜಾತಿಯ ಮೀಸಲಾತಿ ಹೆಚ್ಚಳ ವಿಚಾರವನ್ನು ಶೆಡ್ಯೂಲ್ 9ಗೆ ಸೇರಿಸದಿದ್ದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಮಾಜಿ ಸಂಸದರು, ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷರಾದ ವಿ.ಎಸ್. ಉಗ್ರಪ್ಪ ಎಚ್ಚರಿಸಿದ್ದಾರೆ. ಬೆಂಗಳೂರಿನ ಶಾಸಕರ ಭವನದ ಆವರಣದಲ್ಲಿರುವ ವಾಲ್ಮೀಕಿ ಪ್ರತಿಮೆ ಎದುರು ಸಮಾಜದ ಮುಖಂಡರ ಸಭೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದರು. ಇಂದು ಎಸ್ಟಿ, ಎಸ್ಸಿ, ಒಬಿಸಿ ಸಮುದಾಯದ ಸಂಘಟಕರ ತುರ್ತು ಸಭೆ ನಡೆಸಿದ್ದೇವೆ. ನಾವು ಈಗಾಗಲೇ 22 ಜಿಲ್ಲೆಗಳ ಪ್ರವಾಸ ಮಾಡಿ ಎಲ್ಲ ಕಡೆ ಸುದ್ದಿಗೋಷ್ಠಿ ನಡೆಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಮುಂದೆ ಪ್ರವಾಸ ಮಾಡುತ್ತೇವೆ. ರಾಜ್ಯದಲ್ಲಿ 1.20 ಕೋಟಿ ಎಸ್ಸಿ, 50 ಲಕ್ಷ ಎಸ್ಟಿ, 32% ಒಬಿಸಿ ಜನರಿದ್ದಾರೆ. 243 ಕಲಂ ಪ್ರಕಾರ ಎಲ್ಲ ಕಡೆ ಮೀಸಲಾತಿ ಇದೆ. ಆದರೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಇಲ್ಲದಾಗಿದೆ ಎಂದರು. ಹೈಕೋರ್ಟ್ ನಲ್ಲಿ 2022ರಲ್ಲಿ (16852/2015) ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಹಾಕಲಾಗಿತ್ತು. ಹೈಕೋರ್ಟ್ ನಿರ್ದೇಶನದ ಮೇಲೆ ನ್ಯಾ. ನಾಗಮೋಹನ್ ದಾಸ್ ಆಯೋಗ ರಚನೆ ಆಯ್ತು. ನಂತರ ನ್ಯಾ. ಸುಭಾಷ್ ಅಡಿ ನೇತೃತ್ವದಲ್ಲಿ ಮತ್ತೊಂದು ಆಯೋಗ ಆಯ್ತು. ಅವುಗಳ ವರದಿ ಆದಾರದ ಮೇಲೆ ಹಿಂದಿನ ಬಿಜೆಪಿ ಸರ್ಕಾರ ಮೀಸಲಾತಿ ಹೆಚ್ಚಳ ಮಾಡ್ತು. ಆದರೆ ಇಲ್ಲಿವರೆಗೆ ಆ ಮೀಸಲಾತಿ ಕಾನೂನನ್ನು ಶೆಡ್ಯೂಲ್ 9 ಗೆ ಸೇರಿಸಿಲ್ಲ. ಇದು ವಿಪರ್ಯಾಸ. ಆದರೆ ಈಗ ಹೈಕೋರ್ಟ್ ನಲ್ಲಿ ತಡೆಯಾಜ್ಞೆ ಬಂದಿದೆ! ಅದಾದ ಬಳಿಕ ಯಾವ ಪಕ್ಷದ ನಾಯಕರೂ ಮಾತಾಡ್ತಿಲ್ಲ. ನಿಮಗೆ ಬದ್ದತೆ ಇದ್ರೆ ದಯಮಾಡಿ ಬಾಯಿ ಬಿಡಿ, ಇದನ್ನು ಶೆಡ್ಯೂಲ್ 9ಗೆ ಸೇರಿಸಲು ಒತ್ತಾಯಿಸಬೇಕು ಎಂದು ಆಗ್ರಹಿಸಿದರು. ನಾಳೆ ಸಿಎಂಗೆ ಭೇಟಿ ಮಾಡಿ ಮನವಿ ಮಾಡುತ್ತೇವೆ. ತಕ್ಷಣ ಸರ್ವ ಪಕ್ಷ ಸಭೆ ಕರೆಯಬೇಕು. ಸರ್ವ ಪಕ್ಷದ ನಾಯಕರನ್ನು ಕರೆದುಕೊಂಡು ಹೋಗಿ ಪ್ರಧಾನಿಯನ್ನು ಭೇಟಿ ಮಾಡಬೇಕು. ನಂತರ ಮೀಸಲಾತಿ ಬಗ್ಗೆ ಹೈಕೋರ್ಟ್ ನಲ್ಲಿರುವ ಪ್ರಕರಣವನ್ನು ಸರ್ಕಾರ ತೆರವು ಮಾಡಿಸಬೇಕು. ಇಲ್ಲದಿದ್ದರೆ ಉತ್ತಮ ನ್ಯಾಯವಾದಿಗಳನ್ನು ಇಟ್ಟು ಕೇಸ್ ಪರ ವಾದ ಮಾಡಿಸಬೇಕು. ರಾಜ್ಯದಲ್ಲಿ ಈಗಾಗಲೇ ಸುಳ್ಳು ಜಾತಿ ಪ್ರಮಾಣ ಪತ್ರ ಹೆಚ್ಚಾಗ್ತಿದೆ. ಈ ಸುಳ್ಳು ಜಾತಿ ಪ್ರಮಾಣಪತ್ರ ನೀಡಬಾರದು ಎಂದು ಆದೇಶ ಇದ್ರೂ ಸುಳ್ಳು ಜಾತಿ ಪ್ರಮಾಣ ಪತ್ರ ವಿತರಣೆ ಯಾಗ್ತಿದೆ. ಹೀಗಾಗಿ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಸುಳ್ಳು ಪ್ರಮಾಣ ಪತ್ರ ಪಡೆದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಗ್ರಪ್ಪ ಒತ್ತಾಯಿಸಿದರು. ಮೀಸಲಾತಿ ವಿಚಾರದಲ್ಲಿ ನಮ್ಮ ನಾಯಕರು ಮೌನಿ ಬಾಬಾಗಳಾಗಬೇಡಿ, ಆತ್ಮ ವಂಚನೆ ಮಾಡಿಕೊಳ್ಳಬೇಡಿ. ಇದು ಕೇಂದ್ರ ಸರ್ಕಾರದ ಜವಾಬ್ದಾರಿ. ಆದರೆ ಜವಾಬ್ದಾರಿ ತೆಗೆದುಕೊಳ್ತಿಲ್ಲ. ಈ ಬಗ್ಗೆ ನೀವೆಲ್ಲ ತುಟಿ ಬಿಚ್ಚಬೇಕು. RSSನ ದತ್ತಾತ್ರೇಯ ಹೊಸಬಾಳೆ ಅವರು ನಾವೆಲ್ಲರೂ ಹಿಂದೂ ಎನ್ನುತ್ತೀರಿ. ಎಲ್ಲಿದೆ ನಾವೆಲ್ಲ ಒಂದು? ಎಂದು ಪ್ರಶ್ನಿಸಿದರು. ಸಿಎಂಗೆ ಈ ಬಗ್ಗೆ ಮನವಿ ಕೊಡ್ತೀವಿ. ಈ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಕ್ಷಣ ಎಚ್ಚೆತ್ತುಕೊಂಡು ಮೀಸಲಾತಿಯನ್ನು ಶೆಡ್ಯೂಲ್ 9ಗೆ ಸೇರಿಸದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡ್ತೀವಿ. ಎಸ್ಸಿ, ಎಸ್ಟಿ, ಒಬಿಸಿ ಒಟ್ಟುಗೂಡಿ ಅಹಿಂಸಾತ್ಮಕ ಹೋರಾಟ ಮಾಡ್ತೀವಿ. ಶೇ. 56℅ ಮೀಸಲಾತಿ ಅಡಿಯಲ್ಲೇ ಸರ್ಕಾರಿ ನೌಕರರ ನೇಮಕಾತಿ ಆಗಬೇಕು. ಈ ಚಂಡು ಕೇಂದ್ರ ಸರ್ಕಾರದ ಅಂಗಳದಲ್ಲಿದೆ. ರಾಜ್ಯದ ಸಂಸದರೆಲ್ಲ ಏನ್ ಮಾಡ್ತಿದ್ದಾರೆ? ಆರ್ಥಿಕ ಮೀಸಲಾತಿ ಜಾರಿಗೆ ತರುವಾಗ ಮೀಸಲಾತಿ ವಿಚಾರ ಗೊತ್ತಾಗಲಿಲ್ವಾ? ಆದರೆ ಪರಿಶಿಷ್ಟ ಜಾತಿ, ಪತಿಶಿಷ್ಟ ಪಂಗಡದ ಮೀಸಲಾತಿ ವಿಚಾರ ಬಂದಾಗ ಮಾತ್ರ ಮೀಸಲಾತಿಯ ಗಡಿ ಅಡ್ಡ ಬರುತ್ತದೆ ಅಲ್ವಾ ಎಂದು ಪ್ರಶ್ನಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಜಯ್ ಕುಮಾರ್ ಸ್ವಾಮೀಜಿ, ರಾಮಲಿಂಗೇಶ್ವರ ಸ್ವಾಮೀಜಿ, ಪ್ರಕಾಶ ಸ್ವಾಮೀಜಿ, ಶಿವಾನಂದಸ್ವಾಮೀಜಿ, ವೇದಿಕೆ ಕಾರ್ಯಾಧ್ಯಕ್ಷರಾದ ಎಂ. ನರಸಿಂಹಯ್ಯ, ಖಜಾಂಚಿ ಇ.ರಾಜಪ್ಪ, ವೇದಿಕೆ ಉಪಾಧ್ಯಕ್ಷರಾದ ಎಚ್.ಸಿ. ಹನುಮಂತಯ್ಯ, ರೇವತಿ ಭೀಮಪುತ್ರಿ, ರಾಜಣ್ಣ ಟಿ., ಪ್ರಧಾನ ಕಾರ್ಯದರ್ಶಿಗಳಾದ ಸಣ್ಣ ನಾಯಕ್, ರಾಧಾಕೃಷ್ಣ ಪಲ್ಲಕ್ಕಿ, ರಮೇಶ್ ಹಿರೇಬೂರು, ನಾಗರಾಜ್ ಗಾಣದ ಹುಣಸೆ, ಡಾ.ಗೋಪಾಲಕೃಷ್ಣ, ತುಳಸೀರಾಂ ಟಿ.ಆರ್., ಸುಖನ್ಯ ನಾಯಕ್, ಯಾದಗಿರಿಯ ಮುಗ್ದಂಪುರ, ಕೋಲಾರದ ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

- ಆನೇಕಲ್: ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಯುವಕರು; ವಿಡಿಯೋ ವೈರಲ್. ಆನೇಕಲ್‌ನ ಹೊಸೂರು ಮುಖ್ಯರಸ್ತೆಯ ಹೊಂಪಲಘಟ್ಟ ಕ್ರಾಸ್ ಬಳಿ ಹಣದ ವಿಚಾರವಾಗಿ ಇಬ್ಬರು ಯುವಕರು ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಘಟನೆ ನಡೆದಿದೆ. ಮಾತಿಗೆ ಮಾತು ಬೆಳೆದು ಪರಸ್ಪರ ಕೈಕೈ ಮಿಲಾಯಿಸಿದ ಯುವಕರು, ಸಾರ್ವಜನಿಕರ ಎದುರೇ ಕಪಾಳಮೋಕ್ಷ ಮಾಡಿಕೊಂಡಿದ್ದಾರೆ. ಈ ದೃಶ್ಯಗಳನ್ನು ಹಾದಿಹೋಕರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜನನಿಬಿಡ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಅಸಭ್ಯವಾಗಿ ವರ್ತಿಸಿದ ಯುವಕರ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.1
- ತಮಿಳುನಾಡಿನ ಟಿವಿಕೆ ನಾಯಕ, ನಟ ವಿಜಯ್ ಇಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಜಯಗಳಿಸಿದ್ದ ಅವರು, ಇದೀಗ ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದಾರೆ. ಇದು ತಮಿಳುನಾಡಿನ ದ್ರಾವಿಡ ರಾಜಕೀಯದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿದೆ.1
- ಪ್ರೀತಿ ವಿಚಾರಕ್ಕೆ ಅಪಹರಣ, ಹಲ್ಲೆ ಆರೋಪ ಕೈಕಾಲು ಕಟ್ಟಿ ವಿಡಿಯೋ ಮಾಡಿದ ಘಟನೆ ಪ್ರೀತಿ ವಿಚಾರಕ್ಕೆ ಅಪಹರಣ, ಹಲ್ಲೆ ಆರೋಪ ಕೈಕಾಲು ಕಟ್ಟಿ ವಿಡಿಯೋ ಮಾಡಿದ ಘಟನೆ1
- ಹಾಸ್ಟೆಲ್‌ನಲ್ಲಿ ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ಅಹೋರಾತ್ರಿ ಧರಣಿ ಬೆಂಗಳೂರಿನ ಕೊಟ್ಟಿಗೆಪಾಳ್ಯದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಸ್ನಾತಕೋತ್ತರ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಅವ್ಯವಸ್ಥೆ ಮಿತಿಮೀರಿದ್ದು, ವಿದ್ಯಾರ್ಥಿಗಳು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಿನ್ನೆ ಸಂಜೆಯಿಂದ ಊಟ, ನಿದ್ದೆಯಿಲ್ಲದೆ ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ. ವಾರ್ಡನ್ ಹಾಗೂ ಸಿಬ್ಬಂದಿಗಳ ಗೈರುಹಾಜರಿ, ಕಳಪೆ ಗುಣಮಟ್ಟದ ಆಹಾರ ಮತ್ತು ಸಿಬ್ಬಂದಿಯ ಅಸಭ್ಯ ವರ್ತನೆಯಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಹಲವಾರು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು, ಕೂಡಲೇ ಜವಾಬ್ದಾರಿಯುತ ವಾರ್ಡನ್ ನೇಮಕ ಹಾಗೂ ಉತ್ತಮ ವಿದ್ಯಾಭ್ಯಾಸದ ವಾತಾವರಣ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ.1
- ರಾಜ್ಯದಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಅಚ್ಚರಿಯ ತಿರುವು ಸಿಕ್ಕಿದೆ. ಸಾಕ್ಷ್ಯಗಳನ್ನು ನಾಶಪಡಿಸಿದ್ದರೂ, ಕೊಲೆ ಆರೋಪಿಗಳಾದ ದಂಪತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಂಧನದಿಂದ ಪ್ರಕರಣದ ಹಲವು ರಹಸ್ಯಗಳು ಬಯಲಾಗುವ ಸಾಧ್ಯತೆ ಇದೆ.2
- ಸನ್ ಸ್ಟ್ರೋಕ್ ಗೆ ಕುಸಿದು ಬಿದ್ದು ವೃದ್ಧ ಸಾವನ್ನಪ್ಪಿರುವ ಶಂಕೆ ಬಿಸಿಲಲ್ಲಿ ನಿಂತಲ್ಲಿಯೇ ಕುಸಿದು ಬಿದ್ದಿರುವ ವೃದ್ಧ ನೆಲಮಂಗಲ ಸನ್ ಸ್ಟ್ರೋಕ್ ಗೆ ಕುಸಿದು ಬಿದ್ದು ವೃದ್ಧ ಸಾವು ಶಂಕೆ ಬಿಸಿಲಲ್ಲಿ ನಿಂತಲ್ಲಿಯೇ ಕುಸಿದು ಬಿದ್ದಿರುವ ವೃದ್ಧ ಶೆಟ್ಟಿಹಳ್ಳಿ ಗ್ರಾಮದ ಚಿಕ್ಕಣ್ಣ(70) ಸಾವು ನೆಲಮಂಗಲ ತಾಲೂಕಿನ ಬರದಿ ಗ್ರಾಮದಲ್ಲಿ ಘಟನೆ ಕೋಳಿ ಫಾರಂ ಒಂದರಲ್ಲಿ ಕೆಲಸ ಮಾಡುತ್ತಿದ್ದ ಚಿಕ್ಕಣ್ಣ ಬೆಳಗ್ಗೆ ಅಂಗಡಿಗೆ ಹೋದಾಗ ನಡೆದಿರುವ ಘಟನೆ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.2
- *ನರೀಪುರ ಗ್ರಾಮದಲ್ಲಿ ಸಡಗರದ ಬಸವ ಜಯಂತಿ ಆಚರಣೆ: ಜನಧ್ವನಿ ವೆಂಕಟೇಶ್ ಭಾಗಿ* ಕೊಳ್ಳೇಗಾಲ : ತಾಲೂಕಿನ ಧನಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರೀಪುರ ಗ್ರಾಮದಲ್ಲಿ ಬಸವ ಜಯಂತಿಯನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ 'ಜನಧ್ವನಿ' ವೆಂಕಟೇಶ್ ಅವರು ಪಾಲ್ಗೊಂಡು ಜಗಜ್ಯೋತಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಗಣ್ಯರು, ಬಸವಣ್ಣನವರ ತತ್ವ ಆದರ್ಶಗಳು ಇಂದಿನ ಸಮಾಜಕ್ಕೆ ದಾರಿದೀಪವಾಗಿದ್ದು, ಸಮಾನತೆಯ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರು ಶ್ರಮಿಸಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಪ್ರಮುಖರಾದ ವೃಷಭೇಂದ್ರ ಸ್ವಾಮಿ, ಉಗನಿಯ ಮಹೇಶ್, ಲೋಕೇಶ್ ಜೆಟ್ಟಿ, ವಿಜಯೇಂದ್ರ ಕೂಡ್ಲೂರು, ಮಾದೇಶ್, ಲಿಂಗಾಚಾರಿ, ಚಿನ್ನರಾಜು ಹಾಗೂ ಗ್ರಾಮದ ಮುಖಂಡರುಗಳು, ಹಿರಿಯ ಯಜಮಾನರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಬಸವಣ್ಣನವರ ಭಾವಚಿತ್ರದ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು. ವರದಿ ಉಸ್ಮಾನ್ ಖಾನ್4
- *ಹೆಬ್ಬಾಳ ಕೆರೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಕೃಷ್ಣ ಬೈರೇಗೌಡರು.* *ಹೆಬ್ಬಾಳ ಕೆರೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಕೃಷ್ಣ ಬೈರೇಗೌಡರು.*1