ರಾಜ್ಯ ಸರ್ಕಾರವು ಮಾವಿಗೆ ಸೂಕ್ತ ಬೆಂಬಲ ಬೆಲೆ ಘೋಷಿಸುವಂತೆ ಒತ್ತಾಯಿಸಿ ಸೋಮವಾರ ಕೋಲಾರ ನಗರದ ಹೊಸ ಬಸ್ ನಿಲ್ದಾಣದ ವೃತ್ತದಲ್ಲಿ ಜೆಡಿಎಸ್ ಪಕ್ಷ ಮತ್ತು ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮಾವಿನ ಕಾಯಿಗಳನ್ನು ರಸ್ತೆಗೆ ಸುರಿದು ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಂಸದ ಎಂ. ಮಲ್ಲೇಶ್ ಬಾಬು, ರಾಜ್ಯ ಸರ್ಕಾರವು ಕೂಡಲೇ ಮಾವಿಗೆ ಬೆಂಬಲ ಬೆಲೆ ಘೋಷಿಸಬೇಕೆಂದು ಆಗ್ರಹಿಸಿದರು. ಸರ್ಕಾರದೊಂದಿಗೆ ಕೃಷಿ ಇಲಾಖೆಯಿಂದ ಬರಬೇಕಾದ ಅನುದಾನದ ಬಗ್ಗೆ ಈಗಾಗಲೇ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದ್ದು, ಎಪಿಎಂಸಿ ಮಾರುಕಟ್ಟೆ ನಿಯಮಗಳ ಪ್ರಕಾರ ಎಷ್ಟು ಬೆಂಬಲ ಬೆಲೆ ನೀಡಬೇಕೋ, ಅದರ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದರು. ಕಳೆದ ವರ್ಷ ಮಾವಿಗೆ 2 ರೂಪಾಯಿ ಬೆಂಬಲ ಬೆಲೆ ನೀಡಲಾಗಿದ್ದು, ಈ ಬಾರಿ ಕನಿಷ್ಠ 10 ರೂಪಾಯಿ ನೀಡಬೇಕೆಂದು ಒತ್ತಾಯಿಸಿದರು. ಕೋಲಾರ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಿ ಒತ್ತಡ ಹೇರಿದರೆ, ಕೇಂದ್ರ ಸರ್ಕಾರಕ್ಕೆ ಬೆಂಬಲ ಬೆಲೆ ಘೋಷಿಸಲು ಸುಲಭವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಕಳೆದ ವರ್ಷ ತಾನು, ಕುಮಾರಸ್ವಾಮಿ ಮತ್ತು ದೇವೇಗೌಡರು ಈ ವಿಷಯದ ಬಗ್ಗೆ ಮಾತನಾಡಿದ್ದಾಗ ಕೇಂದ್ರ ಸಚಿವರು ಸ್ಪಂದಿಸಿದ್ದರು ಎಂದು ನೆನಪಿಸಿಕೊಂಡ ಮಲ್ಲೇಶ್ ಬಾಬು, ಈಗ ರಾಜ್ಯದಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಲು ಕೃಷಿ ಸಚಿವರೇ ಇಲ್ಲ ಎಂದು ದೂರಿದರು. ಮುಖ್ಯಮಂತ್ರಿಗಳು ತಕ್ಷಣವೇ ಮಧ್ಯಪ್ರವೇಶಿಸಿ ಕೇಂದ್ರಕ್ಕೆ ಪತ್ರ ಬರೆಯುವ ಮೂಲಕ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ ಅವರು, ಕೇಂದ್ರ ಸಚಿವರು ದೆಹಲಿಗೆ ಮರಳಿದ ತಕ್ಷಣ ಈ ಬಗ್ಗೆ ಅವರೊಂದಿಗೆ ಮಾತನಾಡಿ ರೈತರಿಗೆ ನೆರವಾಗಲು ಜೆಡಿಎಸ್ ಪಕ್ಷ ಬದ್ಧವಾಗಿದೆ ಎಂದರು. 2006ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಟೊಮ್ಯಾಟೊ ಬೆಲೆ ಕುಸಿದಾಗ ಕೆಲವೇ ಗಂಟೆಗಳಲ್ಲಿ ಬೆಂಬಲ ಬೆಲೆ ಘೋಷಿಸಿದ್ದರು. ಆದರೆ, ಈಗಿನ ಕಾಂಗ್ರೆಸ್ ಸರ್ಕಾರ ಏಕೆ ವಿಳಂಬ ಮಾಡುತ್ತಿದೆ ಎಂದು ಅವರು ಪ್ರಶ್ನಿಸಿದರು. ಜೆಡಿಎಸ್ ಮುಖಂಡ ಸಿ.ಎಂ.ಆರ್. ಶ್ರೀನಾಥ್ ಮಾತನಾಡಿ, ಬೆಲೆ ಕುಸಿತದಿಂದ ಕಂಗೆಟ್ಟಿರುವ ಮಾವು ಬೆಳೆಗಾರರ ನೆರವಿಗೆ ಸರ್ಕಾರಗಳು ತಕ್ಷಣ ಧಾವಿಸಿ ಸೂಕ್ತ ಬೆಂಬಲ ಬೆಲೆ ಘೋಷಿಸಬೇಕು ಎಂದರು. ಕಳೆದ ವರ್ಷವೂ ಮಾವಿನ ಧಾರಣೆ ಕುಸಿದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾಗ ಬೆಂಬಲ ಬೆಲೆ ಲಭಿಸಿತ್ತು. ಆದರೆ, ಈಗ ಸ್ಥಳೀಯ ಜನಪ್ರತಿನಿಧಿಗಳಿಗೆ ಇಚ್ಛಾಶಕ್ತಿ ಇಲ್ಲವಾಗಿದೆ ಎಂದು ಟೀಕಿಸಿದ ಅವರು, ಬೆಂಬಲ ಬೆಲೆ ಘೋಷಣೆಯಾಗದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು. ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ ಮಾತನಾಡಿ, ಮಾವು ಬೆಲೆ ಕುಸಿತದಿಂದ ಮಾವು ಬೆಳೆಗಾರರು ಸಂಕಷ್ಟ ಎದುರಿಸುತ್ತಿದ್ದಾರೆ. ಕಳೆದ ಐದು ವರ್ಷಗಳಿಂದ ಮಾವು ಬೆಳೆಗಾರರು ನಷ್ಟ ಅನುಭವಿಸುತ್ತಿದ್ದರೂ, ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಂಬಂಧಿಸಿದ ಸಚಿವರು ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿದರೂ ಲಾಭ ಬರುತ್ತಿಲ್ಲ, ರೈತನಿಗೆ ಒಂದು ನಯಾಪೈಸೆಯೂ ಉಳಿಯುತ್ತಿಲ್ಲ. ಯುದ್ಧದ ಹಿನ್ನೆಲೆಯಲ್ಲಿ ರಫ್ತು ಸ್ಥಗಿತಗೊಂಡಿದ್ದು, ಹಾಕಿದ ಬಂಡವಾಳವೂ ವಾಪಸ್ ಬರುತ್ತಿಲ್ಲ. ಹಾಗಾಗಿ ಕೂಡಲೇ ಬೆಂಬಲ ಬೆಲೆ ಘೋಷಿಸಬೇಕೆಂದು ಒತ್ತಾಯಿಸಿದರು. ಈ ಪ್ರತಿಭಟನೆಯಲ್ಲಿ ಕೋಮುಲ್ ನಿರ್ದೇಶಕ ವಡಗೂರು ಡಿ.ವಿ. ಹರೀಶ್, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಣಕನಹಳ್ಳಿ ನಟರಾಜ್, ತಾಲೂಕು ಅಧ್ಯಕ್ಷ ಬಾಬು ಮೌನಿ, ರೈತ ಸಂಘದ ಜಿಲ್ಲಾ ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಮಹಿಳಾ ಅಧ್ಯಕ್ಷೆ ಎ. ನಳಿನಿಗೌಡ, ಮರಗಲ್ ಶ್ರೀನಿವಾಸ್, ಮತ್ತು ಲೋಕೇಶ್ ಮರಿಯಪ್ಪ, ಬಲಿಜ ಸಂಘದ ತೋಟಗಳ ಅಶೋಕ್, ಮೂರಂಡಹಳ್ಳಿ ಬಾಬು, ಎಪಿಎಂಸಿ ಪುಟ್ಟರಾಜು, ಸುರೇಶ್, ಪುತ್ತೇರಿ ರಾಜು, ಹನುಮಯ್ಯ, ಗಿರೀಶ್, ಶೈಲಜಾ, ರತ್ನಮ್ಮ, ಮುನಿಚೌಡಮ್ಮ ಮುಂತಾದ ಅನೇಕ ಮುಖಂಡರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.

- ಕೋಲಾರದಲ್ಲಿ ಇದೇ ತಿಂಗಳ 27ರ ಶನಿವಾರದಂದು ನಾಡಪ್ರಭು ಕೆಂಪೇಗೌಡರ 517ನೇ ಜಯಂತೋತ್ಸವವನ್ನು ಜಿಲ್ಲಾಡಳಿತದ ಸಹಯೋಗದಲ್ಲಿ ಕೋಲಾರ ಜಿಲ್ಲಾ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಹಾಗೂ ಹಿರಿಯ ವಕೀಲರಾದ ಕೆ.ವಿ.ಶಂಕರಪ್ಪ ತಿಳಿಸಿದ್ದಾರೆ. ನಗರದ ಪತ್ರಕರ್ತರ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಅದ್ದೂರಿ ಪಲ್ಲಕ್ಕಿಗಳ ಮೆರವಣಿಗೆಯು ನಗರದ ಪ್ರವಾಸಿ ಮಂದಿರದಿಂದ ಬೆಳಗ್ಗೆ 10 ಗಂಟೆಗೆ ಪ್ರಾರಂಭವಾಗಿ, ನಗರದ ಪ್ರಮುಖ ರಸ್ತೆಗಳ ಮೂಲಕ ರಂಗ ಮಂದಿರ ತಲುಪಲಿದೆ ಎಂದು ಅವರು ವಿವರಿಸಿದರು. ಇದೇ ದಿನ ಸಂಜೆ 4 ಗಂಟೆಗೆ ಟಿ. ಚನ್ನಯ್ಯ ರಂಗ ಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಪರಮಪೂಜ್ಯರಾದ ಡಾ. ಶ್ರೀ ನಿರ್ಮಲದನಾಥ ಮಹಾ ಸ್ವಾಮೀಜಿಗಳು ಬರುವ ನಿರೀಕ್ಷೆ ಇದ್ದು, ಶಿರ ತಾಲ್ಲೂಕಿನ ಪಟ್ಟನಾಯಕನಹಳ್ಳಿಯ ಸ್ಪಟಿಕಪುರ ಪೀಠಾಧ್ಯಕ್ಷರಾದ ಶ್ರೀ ನಂಜಾವದೂತ ಸ್ವಾಮೀಜಿಗಳು ಹಾಗೂ ಬೆಂಗಳೂರಿನ ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಶ್ರೀ ನಿಶ್ಚಲಾನಂದ ಸ್ವಾಮೀಜಿಗಳು ಆಗಮಿಸಿ ಆಶೀರ್ವಚನ ನೀಡಲಿದ್ದಾರೆ. ಸಮುದಾಯದ ಅನೇಕ ಮುಖಂಡರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವೇದಿಕೆ ಕಾರ್ಯಕ್ರಮದಲ್ಲಿ ಪ್ರತಿಭಾವಂತ, ಶೇಕಡ 95 ರಷ್ಟು ಅಂಕ ಗಳಿಸಿರುವ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ. ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಗುವುದು. ಅಲ್ಲದೆ, ಮೆರವಣಿಗೆಯಲ್ಲಿ ಭಾಗವಹಿಸಿದ ಎಲ್ಲಾ ಪಲ್ಲಕ್ಕಿಗಳಿಗೂ ನೆನಪಿನ ಕಾಣಿಕೆ ನೀಡಲು ತೀರ್ಮಾನಿಸಲಾಗಿದೆ. ತಾಲ್ಲೂಕಿನ ಪ್ರತಿ ಹಳ್ಳಿಯಿಂದ ಕೆಂಪೇಗೌಡರ ಅಭಿಮಾನಿಗಳು ಹಾಗೂ ಸಮುದಾಯದ ಎಲ್ಲಾ ಜನತೆ ಕೆಂಪೇಗೌಡರ ಭಾವಚಿತ್ರ, ಪುತ್ತಳಿಕೆ ಹೊತ್ತ ಪಲ್ಲಕ್ಕಿಗಳೊಂದಿಗೆ ಕಲಾ ತಂಡಗಳು ಸೇರಿದಂತೆ ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕೆ.ವಿ. ಶಂಕರಪ್ಪ ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ಗೌರವ ಅಧ್ಯಕ್ಷರಾದ ಹಾಗೂ ಹಿರಿಯ ವಕೀಲರಾದ ಬಿಸಪಪ್ಪ ಗೌಡರು, ಉಪಾಧ್ಯಕ್ಷರಾದ ಕೃಷ್ಣಾರೆಡ್ಡಿ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಡಾ. ರಮೇಶ್, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಪವನ್ ನಾರಾಯಣಸ್ವಾಮಿ, ನಿರ್ದೇಶಕರಾದ ಲಕ್ಷಣಗೌಡ, ಲೋಕೇಶ್, ಮತ್ತು ವೆಂಕಟರಾಮೇಗೌಡ ಉಪಸ್ಥಿತರಿದ್ದರು.3
- ಇದು ಕೋಲಾರದಿಂದ ಕಾರ್ಯನಿರ್ವಹಿಸುವ 'ಕೋಲಾರ ಕಿ. ಆವಾಜ್ ಕೌಸರ್ ನ್ಯೂಸ್' ಎಂಬ ಮಾಧ್ಯಮ ಸಂಸ್ಥೆಯಾಗಿದೆ.1
- ರಾಜಸ್ಥಾನದಲ್ಲಿ ನೀಟ್ ಪರೀಕ್ಷೆಗೆ ಬುರ್ಖಾ ಧರಿಸಿ ಬಂದಿದ್ದ ವಿದ್ಯಾರ್ಥಿನಿಯನ್ನು ಪರೀಕ್ಷಾ ಕೇಂದ್ರದ ಅಧಿಕಾರಿಗಳು ತಡೆದ ಘಟನೆ ನಡೆದಿದ್ದು, ಈ ವೇಳೆ ಗದ್ದಲ ಸೃಷ್ಟಿಯಾಗಿದೆ. ವಿದ್ಯಾರ್ಥಿನಿಯ ಆರೋಪದ ಪ್ರಕಾರ, ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡಲು ಅಧಿಕಾರಿಗಳು ಆಕೆಯ ಬುರ್ಖಾವನ್ನು ತೆಗೆಯುವಂತೆ ಒತ್ತಾಯಿಸಿದ್ದಾರೆ. ಆದರೆ, ಬುರ್ಖಾ ತನ್ನ ಗುರುತಿನ ಅವಿಭಾಜ್ಯ ಅಂಗವಾಗಿದ್ದು, ಅದನ್ನು ತೆಗೆಯುವ ಅಗತ್ಯವಿಲ್ಲ ಎಂದು ವಾದಿಸಿದ ವಿದ್ಯಾರ್ಥಿನಿ, ಹೊರಗೆ ನಿಂತುಕೊಂಡಿದ್ದಳು. ಬಳಿಕ, ಪೊಲೀಸ್ ಅಧಿಕಾರಿಗಳು ನಿಯಮಗಳನ್ನು ಪರಿಶೀಲಿಸಿದ ನಂತರ ಆ ವಿದ್ಯಾರ್ಥಿನಿಗೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಲು ಅವಕಾಶ ಮಾಡಿಕೊಟ್ಟರು.1
- ಕೋರ್ ಕಮಿಟಿ ಅಧ್ಯಕ್ಷರಾದ ಜೆ ಕೆ ಕೃಷ್ಣಾರೆಡ್ಡಿ ಅವರು 'ನಮ್ಮ ಭೂಮಿ - ನಮ್ಮ ಹಕ್ಕು' ಪಾದಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದರು.1
- ಬಿಕೆ ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭದ ಹಿನ್ನೆಲೆಯಲ್ಲಿ, ರಾಜೀವ್ ಗೌಡ ಅವರು ಶಿಡ್ಲಘಟ್ಟ ನಗರದಿಂದ ಹೊರಟು ಬೆಂಗಳೂರಿಗೆ ತೆರಳಿದ್ದಾರೆ. ಈ ಸಂದರ್ಭದಲ್ಲಿ, 7,000 ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀವ್ ಗೌಡರೊಂದಿಗೆ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.1
- ಕೋಲಾರ ನಗರದಲ್ಲಿ ಸೋಮವಾರ ಪ್ರಗತಿಪರ ಸಂಘಟನೆಗಳು ವಿದ್ಯುತ್ ಖಾಸಗೀಕರಣವನ್ನು ವಿರೋಧಿಸಿ ತೀವ್ರ ಪ್ರತಿಭಟನೆ ನಡೆಸಿದವು. ಈ ಸಂದರ್ಭದಲ್ಲಿ ಮಾತನಾಡಿದ ಹೋರಾಟಗಾರರು, ಬೆಸ್ಕಾಂ ವ್ಯಾಪ್ತಿಯಲ್ಲಿ ಟಾಟಾ ಪವರ್ ಕಂಪನಿಗೆ ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ ನೀಡುವ ಪ್ರಸ್ತಾವನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ವಿದ್ಯುತ್ ಖಾಸಗೀಕರಣದಿಂದ ಸಾಮಾನ್ಯ ಸಾರ್ವಜನಿಕರಿಗೆ ಹಾಗೂ ರೈತರಿಗೆ ತೊಂದರೆಯಾಗಲಿದ್ದು, ರೈತರ ಹಿತಾಸಕ್ತಿ ಮತ್ತು ಸಾರ್ವಜನಿಕ ವಿದ್ಯುತ್ ಸೇವೆಗಳ ರಕ್ಷಣೆಯೇ ತಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ಅವರು ಒತ್ತಿ ಹೇಳಿದರು. ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಮತ್ತು ಬೆಸ್ಕಾಂ ನೌಕರರು ಭಾಗವಹಿಸಿದ್ದರು. ಜೆ.ಡಿ.ಎಸ್ ಮುಖಂಡ ಸಿ.ಎಂ.ಆರ್ ಶ್ರೀನಾಥ್, ಸಿಪಿಎಂನ ನಾರಾಯಣಸ್ವಾಮಿ, ಜನವಾದಿ ಸಂಘಟನೆಯ ಗೀತ, ದಲಿತ ಮುಖಂಡ ರಾಜಪ್ಪ, ಬೆಸ್ಕಾಂನ ವೆಂಕಟೇಶ್ಪ ಸೇರಿದಂತೆ ಹಲವಾರು ಸಂಘಟನೆಗಳ ಮುಖಂಡರುಗಳು ಈ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ತಹಶೀಲ್ದಾರ್ ಮುಖಾಂತರ ಸರ್ಕಾರಕ್ಕೆ ಸಲ್ಲಿಸಲಾಯಿತು.3
- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಒಂದು ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಚೊಕ್ಕನಹಳ್ಳಿ ಎನರ್ಜಿ ಇನ್‌ಸ್ಟಿಟ್ಯೂಟ್ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು, ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ತಕ್ಷಣವೇ ರಸ್ತೆ ಬದಿಗೆ ಲಾರಿಯನ್ನು ನಿಲ್ಲಿಸಿ ಕೆಳಗಿಳಿಯುತ್ತಿದ್ದಂತೆ ಲಾರಿಯು ಸಂಪೂರ್ಣವಾಗಿ ಹೊತ್ತಿ ಉರಿಯಿತು. ಲಾರಿಯಲ್ಲಿದ್ದ ಲಕ್ಷಾಂತರ ಬೆಲೆ ಬಾಳುವ ಎಲೆಕ್ಟ್ರಾನಿಕ್ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಟೋಲ್ ಸಿಬ್ಬಂದಿಗೆ ಮಾಹಿತಿ ರವಾನಿಸಲಾಗಿತ್ತು. ಆದರೆ, ಲಾರಿ ಹೊತ್ತಿ ಉರಿಯುತ್ತಿದ್ದರೂ ಘಟನಾ ಸ್ಥಳಕ್ಕೆ ಬಂದು ಬೆಂಕಿ ನಂದಿಸಲು ಸಹಾಯ ಮಾಡದ ಸಿಬ್ಬಂದಿ ವಿರುದ್ಧ ಸ್ಥಳೀಯ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.2