ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಖಂಡಿಸಿ ಮಸ್ಕಿ ಪಟ್ಟಣದಲ್ಲಿ ಪ್ರತಿಭಟನೆ ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಖಂಡಿಸಿ ಪ್ರತಿಭಟನೆ ಮಸ್ಕಿ: ಪಟ್ಟಣದ ಸರ್ಕಿಟ್ ಹೌಸ್‌ನಲ್ಲಿ ವಾಲ್ಮೀಕಿ ಸಮಾಜದ ವತಿಯಿಂದ ಪೂರ್ವಭಾವಿ ಸಭೆ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ವಾಲ್ಮೀಕಿ ಸಮಾಜದ ಮುಖಂಡರು ಮಾತನಾಡಿದರು , ಸಚಿವ ಸತೀಶ್ ಜಾರಕಿಹೊಳಿ ಅವರ ವಿರುದ್ಧ ನಡೆದಿರುವ ED ದಾಳಿಯನ್ನು ಖಂಡಿಸಿ, ವಾಲ್ಮೀಕಿ ಸಮಾಜದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಶುಕ್ರವಾರ 18ರಂದು ಮಸ್ಕಿ ಪಟ್ಟಣದ ವಾಲ್ಮೀಕಿ ಸರ್ಕಲ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ಮಸ್ಕಿ ಹಳೆ ಬಸ್ ನಿಲ್ದಾಣದ ಅಂಬೇಡ್ಕರ್ ಸರ್ಕಲ್‌ವರೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು. ED ದಾಳಿ ರಾಜಕೀಯ ಉದ್ದೇಶದಿಂದ ನಡೆಯುತ್ತಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಈ ಹಿನ್ನೆಲೆಯಲ್ಲಿ ವಾಲ್ಮೀಕಿ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಬೇಕು ಭೀಮಣ್ಣ ನಾಯಕ ಕರೆ ನೀಡಿದರು. ಸಭೆಯಲ್ಲಿ ವಾಲ್ಮೀಕಿ ಸಮಾಜದ ಮುಖಂಡರು, ಪದಾಧಿಕಾರಿಗಳು ಹಾಗೂ ಸಮಾಜದ ಸದಸ್ಯರು ಉಪಸ್ಥಿತರಿದ್ದರು.
ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಖಂಡಿಸಿ ಮಸ್ಕಿ ಪಟ್ಟಣದಲ್ಲಿ ಪ್ರತಿಭಟನೆ ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಖಂಡಿಸಿ ಪ್ರತಿಭಟನೆ ಮಸ್ಕಿ: ಪಟ್ಟಣದ ಸರ್ಕಿಟ್ ಹೌಸ್‌ನಲ್ಲಿ ವಾಲ್ಮೀಕಿ ಸಮಾಜದ ವತಿಯಿಂದ ಪೂರ್ವಭಾವಿ ಸಭೆ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ವಾಲ್ಮೀಕಿ ಸಮಾಜದ ಮುಖಂಡರು ಮಾತನಾಡಿದರು , ಸಚಿವ ಸತೀಶ್ ಜಾರಕಿಹೊಳಿ ಅವರ ವಿರುದ್ಧ ನಡೆದಿರುವ ED ದಾಳಿಯನ್ನು ಖಂಡಿಸಿ, ವಾಲ್ಮೀಕಿ ಸಮಾಜದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಶುಕ್ರವಾರ 18ರಂದು ಮಸ್ಕಿ ಪಟ್ಟಣದ ವಾಲ್ಮೀಕಿ ಸರ್ಕಲ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ಮಸ್ಕಿ ಹಳೆ ಬಸ್ ನಿಲ್ದಾಣದ ಅಂಬೇಡ್ಕರ್ ಸರ್ಕಲ್‌ವರೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು. ED ದಾಳಿ ರಾಜಕೀಯ ಉದ್ದೇಶದಿಂದ ನಡೆಯುತ್ತಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಈ ಹಿನ್ನೆಲೆಯಲ್ಲಿ ವಾಲ್ಮೀಕಿ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಬೇಕು ಭೀಮಣ್ಣ ನಾಯಕ ಕರೆ ನೀಡಿದರು. ಸಭೆಯಲ್ಲಿ ವಾಲ್ಮೀಕಿ ಸಮಾಜದ ಮುಖಂಡರು, ಪದಾಧಿಕಾರಿಗಳು ಹಾಗೂ ಸಮಾಜದ ಸದಸ್ಯರು ಉಪಸ್ಥಿತರಿದ್ದರು.
- ಮಸ್ಕಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಯುವ ಸಂಪತ್ತು ಸಭೆಗೆ ಚಾಲನೆ ಮಸ್ಕಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಯುವ ಸಂಪತ್ತು ಸಭೆಗೆ ಚಾಲನೆ ಮಸ್ಕಿ: ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಯುವ ಸಂಪತ್ತು ಸಭೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮಸ್ಕಿ ಶಾಸಕ **ಆರ್. ಬಸನಗೌಡ ತುರುವಿಹಾಳ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಂವಿಧಾನದ ಆಶಯಗಳನ್ನು ಯುವಜನರಿಗೆ ಪರಿಚಯಿಸುವುದು ಅಗತ್ಯವಾಗಿದ್ದು, ಯುವಕರು ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು. ಯುವಜನರಲ್ಲಿ ನಾಯಕತ್ವ ಗುಣ, ಸಾಮಾಜಿಕ ಜವಾಬ್ದಾರಿ ಹಾಗೂ ಪ್ರಜಾಪ್ರಭುತ್ವದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಯುವಕರು ಹಾಗೂ ಸಾರ್ವಜನಿಕರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.1
- ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7ರ ಏಕದಂತ ಗಜಾನನ ಮಂಡಳಿ ವತಿಯಿಂದ 8ನೇ ವರ್ಷದ ಮಹೋತ್ಸವ: ಅದ್ಧೂರಿ ಗಣೇಶೋತ್ಸವಕ್ಕೆ ಚಾಲನೆ ಲಿಂಗಸುಗೂರು: ಪಟ್ಟಣದ ವಾಡಿ–7ರ ಏಕದಂತ ಗಣೇಶನ ಮಂಟಪದಲ್ಲಿ 8ನೇ ವರ್ಷದ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಲಿಂಗಸುಗೂರು ಪಟ್ಟಣದ ವಾಡಿ–7ರ ಏಕದಂತ ಗಜಾನನ ಮಂಡಳಿ ವತಿಯಿಂದ 8ನೇ ವರ್ಷದ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸಂಭ್ರಮದಿಂದ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ ಗಳು ಹಾಗೂ ಮೂರು ದಿನಗಳ ಕಾಲ ವಿವಿಧ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳು ನಡೆಸಲಾಯಿತು. ನಂತರ ವಿಜೇತರಾದ ಕ್ರೀಡಾಪಟುಗಳಿಗೆ ಏಕದಂತ ಗಜಾನನ ಮಂಡಳಿ ವತಿಯಿಂದ ಬಹುಮಾನ ವಿತರಣೆ ಮಾಡಲಾಯಿತು. ಹಾಗೂ ಮೂರನೆ ದಿನ ಸಂಜೆ ಬಾಜಾ ಬಜಂತ್ರಿ ಯೊಂದಿಗೆ ನೃತ್ಯದೊಂದಿಗೆ ಅದ್ದೂರಿಯಾಗಿ ವಿಸರ್ಜನೆ ಕೈಗೊಳ್ಳಲಾಯಿತು.4
- ಕಾಗಿನೆಲೆ ಶ್ರೀ ಕನಕ ಗಿರುಪೀಠ ಹೊಸಕೋಟೆಯ ಶ್ರೀ ಈಶ್ವರನಂದಪುರಿ ಸ್ವಾಮಿಜಿಗಳು ಗಣೇಶ ವಿಗ್ರಹಕ್ಕೆ ಆರತಿ ಮಾಡಿದರು. ಲಿಂಗಸುಗೂರು : ಕಾಗಿನೆಲೆ ಶ್ರೀ ಕನಕ ಗಿರುಪೀಠ ಹೊಸಕೋಟೆಯ ಪರಮ ಪೂಜ್ಯ ಶ್ರೀ ಈಶ್ವರನಂದಪುರಿ ಸ್ವಾಮಿಜಿಗಳು ಗಣೇಶ ಚತುರ್ಥಿ ದಿನದ ಹಂಗವಾಗಿ ವಿಘ್ನವಿನಾಶಕ ಶ್ರೀ ವಿನಾಯಕನ ವಿಗ್ರಹಕ್ಕೆ ಸಾಂಪ್ರದಾಯಕ ಪೂಜೆ ಸಲ್ಲಿಸಿ ಮಂಗಳಾರತಿ ಮಾಡಿದರು.1
- ಗಣೇಶ ಚತುರ್ಥಿ ಅಂಗವಾಗಿ ಕಾರಟಗಿಯಲ್ಲಿ ಸ್ಥಳೀಯ ಕಲಾವಿದರಿಂದ ತತ್ವಪದಗಳು2
- ನಾಳೆ ದೇಶದ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರ ಜನ್ಮದಿನ. ಕುಷ್ಟಗಿ : ದೇಶದ ಅಭಿವೃದ್ಧಿ, ಜನಸೇವೆ ಹಾಗೂ ರಾಷ್ಟ್ರ ನಿರ್ಮಾಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ದೇಶದ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರಿಗೆ ನಾಳೆ ಜನ್ಮದಿನವಾಗಿರುವುದರಿಂದ ಅವರಿಗೆ ಇಂದು ಮುಂಚಿತವಾಗಿ ಹೃತ್ಪೂರ್ವಕವಾದ ಹುಟ್ಟುಹಬ್ಬದ ಶುಭಾಶಯಗಳನ್ನು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಹಾಗೂ ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಅವರು ತಿಳಿಸಿದ್ದಾರೆ. ನಾಳೆ ಸೆಪ್ಟೆಂಬರ್ 17ರಂದು ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ದೀಪ ಬೆಳಗಿಸಿ, ಮೋದಿಜಿ ಅವರಿಗೆ ಇನ್ನಷ್ಟು ಹೆಚ್ಚು ದೇಶ ಸೇವೆ ಮಾಡುವ ಶಕ್ತಿ, ಆರೋಗ್ಯ, ಆಯುಷ್ಯ ಹಾಗೂ ಯಶಸ್ಸನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸೋಣ ಹಾಗೂ ಸೇವೆಯ ಸಂಕಲ್ಪದೊಂದಿಗೆ, ರಾಷ್ಟ್ರ ನಿರ್ಮಾಣದ ಪಯಣಕ್ಕೆ ನಮ್ಮ ನಿಮ್ಮೆಲ್ಲರ ಬೆಂಬಲ ಇರಲಿ ಎಂದು ಶಾಸಕರು ಹೇಳಿದ್ದಾರೆ.2
- ಹಿರೇಓತಗೇರಿ ಗ್ರಾಮದಲ್ಲಿ ಭಕ್ತಿಭಾವದಿಂದ ವಿಘ್ನನಿವಾರಕನ ವಿಸಜ೯ನೆ ಇಳಕಲ್ ; ತಾಲೂಕಿನ ಹಿರೇಓತಗೇರಿ ಗ್ರಾಮದಲ್ಲಿಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಬಳಗದ ವತಿಯಿಂದ ಪ್ರತಿಷ್ಠಾಪನೆ ಮಾಡುದ್ದ ಗಣೇಶನನ್ನ ಇಂದು ಭಕ್ತಿ ಭಾವದಿಂದ ಪೂಜಿಸಿ ವಿಸಜ೯ನೆ ಮಾಡಿದರು.3
- ಕುಷ್ಟಗಿ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡುವಂತೆ ಬಿಜೆಪಿ ಪಕ್ಷದ ವತಿಯಿಂದ ನೂರಾರು ಎತ್ತಿನ ಬಂಡಿಯ ಮೂಲಕ ಬೃಹತ್ ಪ್ರತಿಭಟನೆ. ಕುಷ್ಟಗಿ:- ಕುಷ್ಟಗಿ ತಾಲೂಕಿನ ಬಂದ ಬಿಜೆಪಿ ಮಂಡಲ ಹಾಗೂ ರೈತ ಮೋರ್ಚಾ, ಯುವ ಮೋರ್ಚಾ ಸೇರಿದಂತೆ ತಾಲೂಕು ಬಿಜೆಪಿ ಕ್ಷೇತ್ರದ ವತಿಯಿಂದ ಹಾಗೂ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಇವರ ನೇತೃತ್ವದಲ್ಲಿ ನೂರಾರು ಎತ್ತಿನ ಬಂಡಿಯ ಮೂಲಕ ಕುಷ್ಟಗಿ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡಬೇಕು ಎಂದು ಬೃಹತ್ ಪ್ರತಿಭಟನೆ ಬುಧವಾರ ನಡೆಸಲಾಯಿತು. ಈ ಸಂದರ್ಭದಲ್ಲಿ ಪಟ್ಟಣದ ಮಲ್ಲಯ್ಯ ವೃತ್ತದಿಂದ ಬಸ್ ನಿಲ್ದಾಣ, ಮಾರುತಿ ವೃತ್ತ, ಶ್ರೀ ಭಕ್ತ ಶ್ರೇಷ್ಠ ಕನಕದಾಸ ಸರ್ಕಲ್, ಪುರಸಭೆ ಮಾರ್ಗವಾಗಿ ವಾಲ್ಮೀಕಿ ವೃತ್ತದಿಂದ ಬಸವೇಶ್ವರ ಸರ್ಕಲ್ ತಲುಪಿ ಮಾನವ ಸರಪಳಿ ಮಾಡುವ ಮೂಲಕ ಬಹಿರಂಗ ವೇದಿಕೆ ಏರ್ಪಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆ ಕೂಗಿ ಅತ್ಯಂತ ಸಿಗ್ರದಲ್ಲಿ ಕುಷ್ಟಗಿ ತಾಲೂಕನ್ನು ಬರ ಎಂದು ಘೋಷಣೆ ಮಾಡದಿದ್ದರೆ ಮುಂದೆ ಉಗ್ರ ಪ್ರತಿಭಟನೆ ಮಾಡುವುದಾಗಿ ಹೆಚ್ಚರಿಸಿದರು. ಈ ಸಂದರ್ಭದಲ್ಲಿ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ, ಸುರಪುರ ಮಾಜಿ ಶಾಸಕ ಹಾಗೂ ಮಾಜಿ ಸಚಿವ ರಾಜುಗೌಡ ನಾಯಕ, ಬಿಜೆಪಿ ಪಕ್ಷದ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಿರೇಗೌಡ ಗೌಡ್ರು, ತಾಲೂಕು ಬಿಜೆಪಿ ಮಂಡಲದ ಅಧ್ಯಕ್ಷ ಮಾಹಾಂತೇಶ ಬಾದಾಮಿ, ಮಲ್ಲಪ್ಪ ಪಲ್ಲೇದ್, ಫಕೀರಪ್ಪ ಚಳಗೇರಿ ವಕೀಲರು ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು ಹಾಗೂ ರೈತರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.1
- ಬಸವೇಶ್ವರನಗರದಲ್ಲಿ ಗೌರಿ ಗಣೇಶ ಹಬ್ಬ: ಶಾಸಕ ಆರ್. ಬಸನಗೌಡ ತುರುವಿಹಾಳರಿಂದ ಗಣೇಶ ದರ್ಶನ ಬಸವೇಶ್ವರನಗರದಲ್ಲಿ ಗೌರಿ ಗಣೇಶ ಹಬ್ಬ: ಶಾಸಕ ಆರ್. ಬಸನಗೌಡ ತುರುವಿಹಾಳರಿಂದ ಗಣೇಶ ದರ್ಶನ ಮಸ್ಕಿ: ಪಟ್ಟಣದ ಬಸವೇಶ್ವರನಗರದಲ್ಲಿ ಗೌರಿ ಗಣೇಶ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಸ್ಕಿ ಶಾಸಕ ಆರ್. ಬಸನಗೌಡ ತುರುವಿಹಾಳ ಅವರು ಗಣೇಶ ಮೂರ್ತಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಶಾಸಕ ಆರ್. ಬಸನಗೌಡ ತುರುವಿಹಾಳ ಅವರು, ಗೌರಿ ಗಣೇಶ ಹಬ್ಬವು ಜನರಲ್ಲಿ ಭಕ್ತಿ, ಸೌಹಾರ್ದತೆ ಹಾಗೂ ಒಗ್ಗಟ್ಟಿನ ಭಾವನೆ ಮೂಡಿಸುವ ಪ್ರಮುಖ ಹಬ್ಬವಾಗಿದೆ. ಎಲ್ಲರೂ ಶಾಂತಿ ಮತ್ತು ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸಬೇಕು ಎಂದು ಹೇಳಿದರು. ಬಸವೇಶ್ವರನಗರದ ಗಣೇಶೋತ್ಸವ ಸಮಿತಿ ವತಿಯಿಂದ ಹಬ್ಬದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗಣೇಶನ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು, ಸ್ಥಳೀಯ ಮುಖಂಡರು, ಸಾರ್ವಜನಿಕರು ಹಾಗೂ ಭಕ್ತರು ಉಪಸ್ಥಿತರಿದ್ದರು.1