Shuru
Apke Nagar Ki App…
ಜನರ ಟೀಕೆಗಳಿಗೆ ತಲೆಬಾಗದೆ, ನಿನ್ನ ಗುರಿಯತ್ತ ಮುನ್ನಡೆ ಯರೀ......
Kashim Ibrahim
ಜನರ ಟೀಕೆಗಳಿಗೆ ತಲೆಬಾಗದೆ, ನಿನ್ನ ಗುರಿಯತ್ತ ಮುನ್ನಡೆ ಯರೀ......
More news from ಕರ್ನಾಟಕ and nearby areas
- ಸಿರವಾರ: ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸಿರವಾರದಲ್ಲಿ ಪ್ರತಿಭಟನೆ. ಸಿರವಾರ: ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸಿರವಾರದಲ್ಲಿ ಪ್ರತಿಭಟನೆ. ಅಕ್ರಮ ನೀರಾವರಿ ತಡೆಗಟ್ಟುವಲ್ಲಿ ಆಡಳಿತ ಯಂತ್ರ ಕುಸಿದಿದೆ: ಜೆ.ಶರಣಪ್ಪ ಗೌಡ. ಸಿರವಾರ: ಟಿಎಲ್ಬಿಸಿ ಎಡದಂಡೆ ನಾಲೆಯ ಕೆಳಭಾಗಕ್ಕೆ ಸಲಹಾ ಸಮಿತಿಯ ಸಭೆಯ ನಿರ್ಣಯದಂತೆ ಸಮರ್ಪಕವಾಗಿ ನೀರು ಹರಿಸುತ್ತಿಲ್ಲ. ನೀರು ನಿರ್ವಹಣೆ ಮಾಡದ ನೀರಾವರಿ ಇಲಾಖೆಯ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯವನ್ನು ಖಂಡಿಸಿ ರೈತರು ಮಂಗಳವಾರ ಪಟ್ಟಣದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಮೇಲ್ಬಾಗದಲ್ಲಿ ಅನಧಿಕೃತ ನೀರಾವರಿ ತಡೆಗೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಿಲ್ಲ. ಅಕ್ರಮ ನೀರು ಕಬಳಿಕೆ ಮಾಡುವವರ ಮೇಲೆ ಕಾನೂನು ಕ್ರಮ ಆಗುತ್ತಿಲ್ಲ. ಅಧಿಕಾರಿಗಳು ಅನಧಿಕೃತ ದಂಧೆ ತಡೆಗಟ್ಟಬೇಕು ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು. ವಾಡಿಕೆಗಿಂತ ಮಳೆಯಾಗದ ಹಿನ್ನೆಲೆಯಲ್ಲಿ ಬರಗಾಲ ಉಂಟಾಗಿದೆ. ಬೆಳೆಗಳನ್ನು ಉಳಿಸಿಕೊಳ್ಳಲು ರೈತರ ಹರಸಾಹಸ ಪಡುವಂತಾಗಿದೆ ಎಂದರು. ರಾಯಚೂರು, ಮಾನ್ವಿ ಮತ್ತು ಸಿರವಾರ ತಾಲೂಕಿನ ರೈತರ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಹೋರಾಟದಲ್ಲಿ ಮಾಜಿ ಶಾಸಕರುಗಳಾದ ರಾಜಾ ವೆಂಕಟಪ್ಪ ನಾಯಕ, ಬಸನಗೌಡ ಬ್ಯಾಗವಾಟ, ಗಂಗಾಧರ ನಾಯಕ, ರೈತ ಸಂಘದ ಮುಖಂಡ ಚಾಮರಸ ಮಾಲೀ ಪಾಟೀಲ್, ಹೋರಾಟಗಾರರಾದ ಶಂಕರಗೌಡ ಹರವಿ, ಎನ್. ಉದಯಕುಮಾರ್ ಸಾಹುಕಾರ, ಜೆ.ದೇವರಾಜ ಗೌಡ, ಅಮರೇಶ ಚಾಗಭಾವಿ, ನಾಗರಾಜ ಗೌಡ, ಸವಾರೆಪ್ಪ, ಬಡ್ಡ ಹನುಮಂತ, ರಾಜಪ್ಪ ಹೊನ್ನಟಗಿ, ಮಲ್ಲಪ್ಪ ದೊಡ್ಮನೆ, ದಾನಪ್ಪ ಸೇರಿದಂತೆ ತಾಲೂಕಿನ ಸುತ್ತಮುತ್ತಲಿನ ರೈತರು ಪಾಲ್ಗೊಂಡಿದ್ದರು.2
- ಕರ್ನಾಟಕದಲ್ಲಿ ಗಣಪತಿಗೆ ಮೆರವಣಿಗೆಗೆ ಡಿಜೆ ಅನುಮತಿ ಇಲ್ಲಾ ಎಂದ ಗೃಹ ಮಂತ್ರಿ ಪಿಯಾಂಕ :ಖರ್ಗೆ ವಿರುದ್ಧ ಬಿ ಜೆ ಪಿ ಮುಖಂಡರು ಗಣಪತಿಗೆ ಯಾಕೆ ಡಿಜಿ ಇಲ್ಲಾ ಗೃಹ ಮಂತ್ರಿಯ ರೆ ಮುಸಾಲ್ಮಾನರಿಗೆ ನಾಲಕ್ಕು ಐದು ಸಲಾ ಮೈಕ್ ಹಚ್ಚಿ ನಮಾಜ್ ಮಾಡುತ್ತಾರೆ ನಮಗ ಏಕೆ ಇಲ್ಲ ಹೇಳಿ ಗೃಹ ಮಂತ್ರಿ ಯರೆ ನಮಗೂ ಡಿಜಿ ಪರ್ಮಿಷನ್ ಕೊಡಬೇಕು ಇಲ್ಲಾಂದ್ರೆ ನಾವು ಬಿಡುವುದಿಲ್ಲ ಬಿಜೆಪಿ ಮುಖಂಡ ರಾಜ ಹೇಳಿಕೆ1
- ಆ.26 ರಂದು ಅಖಿಲಭಾರತ ಕ್ರೈಸ್ತ ಮಹಾಸಭಾ ಉದ್ಘಾಟನೆ, ಪದಾಧಿಕಾರಿಗಳ ಪದಗ್ರಹಣ- ರಾಮಕೃಷ್ಣ ಪ್ರಸಾದ ರಾಯಚೂರು : ಅಖಿಲ ಭಾರತ ಕ್ರೈಸ್ತ ಮಹಾಸಭಾದ ಜಿಲ್ಲಾಘಟಕದ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಆ.26 ರಂದು ನಗರದ ಪಂಡಿತ ಸಿದ್ದರಾಮ ರಂಗಮಂದಿರದಲ್ಲಿ ಬೆಳಿಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ರಾಮಕೃಷ್ಣ ಪ್ರಸಾದ.ಎಂ ಹೇಳಿದರು. ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ ಅಂದು ಬೆಳಿಗ್ಗೆ ಆರ್‌ಟಿಓ ವೃತ್ತದಿಂದ ರಂಗಮಂದಿರದವರೆಗೆ ಬೈಕ್ ರ್ಯಾಲಿ ನಡೆಸಲಾಗುತ್ತದೆ. ನಂತರ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಮಹಾಸಭಾ ರಾಜ್ಯಾಧ್ಯಕ್ಷ ಪ್ರಜ್ವಲ್ ಸ್ವಾಮಿ ಆಗಮಿಸಲಿದ್ದಾರೆ. ಶಾಸಕರುಗಳಾದ ಡಾ.ಶಿವರಾಜ ಪಾಟೀಲ್, ಗ್ರಾಮೀಣ ಶಾಸಕ ದದ್ದಲ್ ಬಸನಗೌಡ, ಎ.ವಸಂತಕುಮಾರ, ಮಾಜಿ ಸಚಿವ ಎನ್.ಎಸ್.ಭೋಸರಾಜ, ಕೆ.ಶಿವನಗೌಡ ನಾಯಕ ಸೇರಿದಂತೆ ಅನೇಕ ರಾಜಕೀಯ ಗಣ್ಯರು, ವಿವಿಧ ಸಭಾಪಾಲಕರು, ಸಮಾಜಬಾಂಧವರು ಭಾಗವಹಿಸಲಿದ್ದಾರೆ ಎಂದರು. ಸಭಾಪಾಲಕ ಜಾನ್‌ವೆಸ್ಲಿ ಮಾತನಾಡಿ ಕ್ರೈಸ್ತ ಮಹಾಸಭಾದ ಕಾರ್ಯಕ್ರಮ ದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ರಾಜ್ಯ ಹಾಗೂ ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸುತ್ತಾರೆ ಎಂದರು.1
- ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ. ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ.1
- ಈದ್ ಮಿಲಾದ ಹಬ್ಬ ; ನಾವೆಲ್ಲರೂ ಒಂದೇ ಎಂದು ಹೇಳಿದ ಸವಿತಾ ಅಶೋಕ ಚಲವಾದಿ ಇಳಕಲ್ ನಗರದಲ್ಲಿ ಈದ್ ಮಿಲಾದ್ ಹಬ್ಬದ ನಿಮಿತ್ಯವಾಗಿ ಮುಸ್ಲಿಂ ಬಾಂಧವರು ಮೆರವಣಿಗೆ ನಡೆಸಿದರು. ದಾರಿಯಲ್ಲಿ ತಂಪು ಪಾನೀಯವನ್ನು ವಿತರಿಸಿ ಮಾತನಾಡಿದ ಸಮಾಜ ಸೇವಕಿ ಸವಿತಾ ಅಶೋಕ್ ಚಲವಾದಿ ಮಾತನಾಡಿ ಹಿಂದೂ ಮುಸ್ಲಿಂ ಎಂಬ ಬೇಧ ಮಾಡದೆ ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ಇದ್ದೇವೆ. ಮುಂದು ಇರುತ್ತೇವೆ ಎಂಬ ಸಂದೇಶವನ್ನು ನೀಡಿದರು.1
- ಮಹಿಬೂಬ್ ಸಾಬ್ ಹೆಗ್ಗಡದಿನ್ನಿ ಈದ್ ಮಿಲಾದ್ ಹಬ್ಬದ ಶುಭಾಶಯಗಳು.1
- ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಕೆಪಿಟಿಸಿಎಲ್ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ ರಾಯಚೂರು : ಪರಿಷ್ಕೃತ ಕನಿಷ್ಠ ವೇತನ ಜಾರಿ, ಶಾಸನಬದ್ದ ಸೌಲಭ್ಯಗಳನ್ನು ಒದಗಿಸುವುದು ವಜಾಗೊಳಿಸಿರುವುದನ್ನು ಹಾಗೂ ಕಾನೂನುಬಾಹಿರವಾಗಿ ಕಾರ್ಮಿಕರನ್ನು ಕೆಪಿಟಿಸಿಎಲ್ ವಿದ್ಯುತ್ ವಿತರಣಾ ಗುತ್ತಿಗೆ ಕಾರ್ಮಿಕರ ಸಂಘ (ಎಐಯುಟಿಯು ಸಿಎಐಪಿಎಫ್) ಜಿಲ್ಲಾ ಘಟಕದ ವತಿಯಿಂದ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲಾಯಿತು. ಕೆಪಿಟಿಸಿಎಲ್ ವ್ಯಾಪ್ತಿಯ 110 ಕೆವಿ ಹಾಗೂ 220 ಕೆವಿ ವಿದ್ಯುತ್ ಉಪಕೇಂದ್ರಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಪಾಳಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ 22-05-2026ರಿಂದ ಜಾರಿಗೆ ಬಂದಿರುವ ಪರಿಷ್ಕೃತ ಕನಿಷ್ಠ ವೇತನವನ್ನು ಪಾವತಿಸುವಂತೆ ಗುತ್ತಿಗೆದಾರರಿಗೆ ಸೂಚಿಸಬೇಕು ಎಂದು ಆಗ್ರಹಿಸಿದರು. ಈ ಕುರಿತು ಈಗಾಗಲೇ ಸಂಬಂಧಿಸಿದ ಕಚೇರಿಗೆ ಮನವಿ ಸಲ್ಲಿಸಿದ್ದರೂ ಗುತ್ತಿಗೆದಾರರು ಪರಿಷ್ಕೃತ ವೇತನವನ್ನು ಪಾವತಿಸದೆ, ಹೊಸ ವೇತನ ರದ್ದಾಗಿದೆ ಎಂಬ ನೆಪ ಹೇಳಿ ಹಳೆಯ ವೇತನ ವನ್ನೇ ಪಾವತಿಸುತ್ತಿದ್ದಾರೆ ಎಂದು ಆರೋಪಿಸಿದರು. ರಾಜ್ಯದ ಇತರೆ ಜಿಲ್ಲೆಗಳಲ್ಲಿ ಪರಿಷ್ಕೃತ ವೇತನದ ಆಧಾರದ ಮೇಲೆ ಬಿಲ್ ಪಾವತಿಯಾಗುತ್ತಿರು ವುದು ಗಮನಕ್ಕೆ ಬಂದಿದ್ದು, ಕೆಪಿಟಿಸಿಎಲ್ ಅಧಿಕಾರಿಗಳು ಈ ಕುರಿತು ಸೂಕ್ತ ನಿರ್ದೇಶನ ನೀಡದಿರುವುದು ವಿಷಾದನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಿ, ಬಾಕಿ ಇರುವ ವೇತನದ ಮೊತ್ತವನ್ನು ಕೂಡಲೇ ಪಾವತಿಸಬೇಕು. ಎಲ್ಲ ಕಾರ್ಮಿಕರಿಗೆ ಇಎಸ್‌ಐ, ಪಿಎಫ್ ಸೇರಿದಂತೆ ಶಾಸನಬದ್ಧ ಸೌಲಭ್ಯಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.1
- ಒಬ್ಬ ವ್ಯಕ್ತಿಯ ದಾರಿಗೆ ಯಾವತ್ತಿಗೂ ಹೂವಾಗಬೇಕು ವಿನಹ ಮುಳ್ಳಾಗಬಾರದು: ಶ್ರೀ ಷ. ಬ್ರ. ವಿಶ್ವರಾಧ್ಯ ಮಳೆಂದ್ರ ಶಿವಾಚಾರ್ಯರು. ಒಬ್ಬ ವ್ಯಕ್ತಿಯ ದಾರಿಗೆ ಯಾವತ್ತಿಗೂ ಹೂವಾಗಬೇಕು ವಿನಹ ಮುಳ್ಳಾಗಬಾರದು: ಶ್ರೀ ಷ. ಬ್ರ. ವಿಶ್ವರಾಧ್ಯ ಮಳೆಂದ್ರ ಶಿವಾಚಾರ್ಯರು.1
- ವಿದ್ಯುತ್ ಅವಘಡಕ್ಕೆ:- ಮೂರು ಎಮ್ಮೆ ಹಾಗೂ ಒಂದು ಆಕಳು ಬಲಿ...... ವಿದ್ಯುತ್ ಅವಘಡಕ್ಕೆ:- ಮೂರು ಎಮ್ಮೆ ಹಾಗೂ ಒಂದು ಆಕಳು ಬಲಿ. ತುರ್ವಿಹಾಳ: ಪಟ್ಟಣದ ಸರ್ವೆ ನಂ.14ರ ಶರಣಪ್ಪ ಮೆಗಳಡಕ್ಕಿ ಅವರ ಹೊಲದಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಮೂರು ಎಮ್ಮೆ ಹಾಗೂ ಒಂದು ಆಕಳು ಮೃತಪಟ್ಟಿದ್ದು, ಎರಡು ಎಮ್ಮೆ ಮತ್ತು ನಾಲ್ಕು ಮೇಕೆರಗಳು ಗಾಯಗೊಂಡಿವೆ. ಘಟನೆಯಿಂದ ಸುಮಾರು 15 ಲಕ್ಷ ನಷ್ಟ ಸಂಭವಿಸಿದೆ ಎಂದು ಸಂತ್ರಸ್ತ ಶರಣಪ್ಪ ಮೆಗಳಡಕ್ಕಿ ತಿಳಿಸಿದ್ದಾರೆ. ವಿದ್ಯುತ್ ಅವಘಡದ ಪರಿಣಾಮ ಜಾನುವಾರುಗಳ ಸಾವಿನ ಜತೆಗೆ ಒಂದು ತೊಲೆ ಬಂಗಾರ ಹಾಗೂ 1.60 ಲಕ್ಷ ನಗದು ಹಣವೂ ನಷ್ಟವಾಗಿದೆ. ಜಾನುವಾರುಗಳ ಸಾವಿನಿಂದ ಹಾಗೂ ಇತರೆ ವಸ್ತುಗಳ ಹಾನಿಯಿಂದ ಕುಟುಂಬಕ್ಕೆ ಭಾರಿ ಆರ್ಥಿಕ ನಷ್ಟ ಉಂಟಾಗಿದೆ. ಆದ್ದರಿಂದ ಸರ್ಕಾರ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಘಟನೆ ಕುರಿತು ಸೂಕ್ತವಾಗಿ ಪರಿಶೀಲಿಸಿ, ನಿಯಮಾನುಸಾರ ಪರಿಹಾರ ನೀಡಬೇಕು ಎಂದು ಶರಣಪ್ಪ ಮೆಗಳಡಕ್ಕಿ ಮನವಿ ಮಾಡಿದ್ದಾರೆ. ಸ್ಥಳ ಪರಿಶೀಲನೆ: ಘಟನೆ ಕುರಿತು ಮಾಹಿತಿ ಪಡೆದ ತುರ್ವಿಹಾಳ ಪಟ್ಟಣ ಪಂಚಾಯಿತಿ ಅಧ್ಯಕ್ಷ ಶರಣಪ್ಪ ಹೋಸಗೌಡರ್ ಸ್ಥಳಕ್ಕೆ ಭೇಟಿ ನೀಡಿ ಮೃತಪಟ್ಟ ಜಾನುವಾರುಗಳು ಹಾಗೂ ಸ್ಥಳವನ್ನು ಪರಿಶೀಲಿಸಿದರು. ಸಂತ್ರಸ್ತ ಕುಟುಂಬಕ್ಕೆ ಧೈರ್ಯ ತುಂಬಿದ ಅವರು, ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕ (ಆರ್‌ಐ) ಉಮಾಪತಿ ಕೂಡ ಸ್ಥಳಕ್ಕೆ ಭೇಟಿ ನೀಡಿ ಘಟನೆಯ ಕುರಿತು ಪರಿಶೀಲನೆ ನಡೆಸಿ, ಹಾನಿಯ ವಿವರಗಳನ್ನು ದಾಖಲಿಸಿಕೊಂಡರು.2