ಮಠಗಳಿಂದ ಶಿಕ್ಷಣ, ಸಮಾಜ ಹಾಗೂ ಸಂಸ್ಕೃತಿ ಅಭಿವೃದ್ಧಿಗೆ ಕೊಡುಗೆ: ಸುತ್ತೂರು ಶ್ರೀ. ಕರ್ನಾಟಕದ ಮಠಮಾನ್ಯಗಳು ಶಿಕ್ಷಣ, ಸಮಾಜ ಹಾಗೂ ಸಂಸ್ಕೃತಿ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಮಹತ್ವದ ಸೇವೆ ಸಲ್ಲಿಸುತ್ತಿವೆ ಎಂದು ಸುತ್ತೂರು ಶ್ರೀಗಳು ಹೇಳಿದರು. ತಾಲೂಕಿನ ಮೂಡುಗೂರು ಗ್ರಾಮದ ಶ್ರೀ ಉದ್ದಾನೇಶ್ವರ ವಿರಕ್ತ ಮಠದಲ್ಲಿ ಚಿನ್ಮಯಜ್ಞಾನಿ ಚನ್ನಬಸವಣ್ಣನವರ ದಾಸೋಹ ಭವನ ಲೋಕಾರ್ಪಣೆ ಹಾಗೂ ಶಿವಾನುಭವ ಸಮ್ಮೇಳನದಲ್ಲಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ಜನರು ಶಿಕ್ಷಣ ಪಡೆಯುವಲ್ಲಿ ಮಠಗಳ ಪಾತ್ರ ದೊಡ್ಡದಾಗಿದೆ. ಮಠಗಳು ಕೇವಲ ಧಾರ್ಮಿಕ ಕಾರ್ಯಗಳಿಗೆ ಸೀಮಿತವಾಗದೆ, ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉತ್ತಮ ಸಂಸ್ಕಾರ ನೀಡುವ ಕೆಲಸ ಮಾಡುತ್ತಿವೆ. ಇದರಿಂದಾಗಿ ಮಠಗಳಲ್ಲಿ ವಿದ್ಯಾಭ್ಯಾಸ ಮಾಡಿದವರು ಸಮಾಜದಲ್ಲಿ ಉತ್ತಮವಾಗಿ ಬದುಕು ಕಟ್ಟಿಕೊಂಡಿದ್ದಾರೆ ಎಂದರು. ಮೂಡುಗೂರು ಶ್ರೀ ಮಠಕ್ಕೆ ಹಲವು ವರ್ಷಗಳ ಇತಿಹಾಸವಿದ್ದು, ಭಕ್ತರೊಂದಿಗೆ ಉತ್ತಮ ಸಂಬಂಧ ಹೊಂದಿದೆ. ಕಾರ್ಯಕ್ರಮಕ್ಕೆ ಸಾವಿರಾರು ಭಕ್ತರು ಆಗಮಿಸಿರುವುದು ಮಠದ ಮೇಲಿನ ಜನರ ನಂಬಿಕೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು. ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಮಾತನಾಡಿ, ಸ್ವಾಮೀಜಿಗಳು ಗ್ರಾಮೀಣ ಪ್ರದೇಶಗಳಲ್ಲಿ ಪ್ರವಚನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಭಕ್ತರು ಹಾಗೂ ಜನಪ್ರತಿನಿಧಿಗಳ ಸಹಕಾರದಿಂದ ದಾಸೋಹ ಭವನ ನಿರ್ಮಾಣಗೊಂಡಿದ್ದು, ಮಠದ ಅಭಿವೃದ್ಧಿಗೆ ಎಲ್ಲರೂ ಸಹಕರಿಸಬೇಕು ಎಂದರು. ಮಠಾಧ್ಯಕ್ಷ ಇಮ್ಮಡಿ ಉದ್ದಾನಸ್ವಾಮೀಜಿ ಮಾತನಾಡಿ, ಸುಮಾರು 500 ವರ್ಷಗಳ ಇತಿಹಾಸ ಹೊಂದಿರುವ ಮಠದಲ್ಲಿ ದಾಸೋಹ ಭವನ ನಿರ್ಮಾಣ ಹಲವು ವರ್ಷಗಳ ಕನಸಾಗಿತ್ತು. ಒಂಬತ್ತು ವರ್ಷಗಳ ಹಿಂದೆ ಆರಂಭವಾದ ಕಾಮಗಾರಿ ಇದೀಗ ಪೂರ್ಣಗೊಂಡಿದೆ. ಈ ಭವನ ಜ್ಞಾನ ಹಾಗೂ ಸೇವೆಯ ಕೇಂದ್ರವಾಗಬೇಕು ಎಂದರು. ಕಾರ್ಯಕ್ರಮದಲ್ಲಿ ವಿವಿಧ ಮಠಗಳ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು ಹಾಗೂ ಸಾವಿರಾರು ಭಕ್ತರು ಭಾಗವಹಿಸಿದ್ದರು. ಭಕ್ತರಿಗೆ ದಿನವಿಡೀ ಪ್ರಸಾದ ವಿತರಿಸಲಾಯಿತು.
ಮಠಗಳಿಂದ ಶಿಕ್ಷಣ, ಸಮಾಜ ಹಾಗೂ ಸಂಸ್ಕೃತಿ ಅಭಿವೃದ್ಧಿಗೆ ಕೊಡುಗೆ: ಸುತ್ತೂರು ಶ್ರೀ. ಕರ್ನಾಟಕದ ಮಠಮಾನ್ಯಗಳು ಶಿಕ್ಷಣ, ಸಮಾಜ ಹಾಗೂ ಸಂಸ್ಕೃತಿ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಮಹತ್ವದ ಸೇವೆ ಸಲ್ಲಿಸುತ್ತಿವೆ ಎಂದು ಸುತ್ತೂರು ಶ್ರೀಗಳು ಹೇಳಿದರು. ತಾಲೂಕಿನ ಮೂಡುಗೂರು ಗ್ರಾಮದ ಶ್ರೀ ಉದ್ದಾನೇಶ್ವರ ವಿರಕ್ತ ಮಠದಲ್ಲಿ ಚಿನ್ಮಯಜ್ಞಾನಿ ಚನ್ನಬಸವಣ್ಣನವರ ದಾಸೋಹ ಭವನ ಲೋಕಾರ್ಪಣೆ ಹಾಗೂ ಶಿವಾನುಭವ ಸಮ್ಮೇಳನದಲ್ಲಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ಜನರು ಶಿಕ್ಷಣ ಪಡೆಯುವಲ್ಲಿ ಮಠಗಳ ಪಾತ್ರ ದೊಡ್ಡದಾಗಿದೆ. ಮಠಗಳು ಕೇವಲ ಧಾರ್ಮಿಕ ಕಾರ್ಯಗಳಿಗೆ ಸೀಮಿತವಾಗದೆ, ವಿದ್ಯಾರ್ಥಿಗಳಿಗೆ
ಶಿಕ್ಷಣ ಹಾಗೂ ಉತ್ತಮ ಸಂಸ್ಕಾರ ನೀಡುವ ಕೆಲಸ ಮಾಡುತ್ತಿವೆ. ಇದರಿಂದಾಗಿ ಮಠಗಳಲ್ಲಿ ವಿದ್ಯಾಭ್ಯಾಸ ಮಾಡಿದವರು ಸಮಾಜದಲ್ಲಿ ಉತ್ತಮವಾಗಿ ಬದುಕು ಕಟ್ಟಿಕೊಂಡಿದ್ದಾರೆ ಎಂದರು. ಮೂಡುಗೂರು ಶ್ರೀ ಮಠಕ್ಕೆ ಹಲವು ವರ್ಷಗಳ ಇತಿಹಾಸವಿದ್ದು, ಭಕ್ತರೊಂದಿಗೆ ಉತ್ತಮ ಸಂಬಂಧ ಹೊಂದಿದೆ. ಕಾರ್ಯಕ್ರಮಕ್ಕೆ ಸಾವಿರಾರು ಭಕ್ತರು ಆಗಮಿಸಿರುವುದು ಮಠದ ಮೇಲಿನ ಜನರ ನಂಬಿಕೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು. ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಮಾತನಾಡಿ, ಸ್ವಾಮೀಜಿಗಳು ಗ್ರಾಮೀಣ ಪ್ರದೇಶಗಳಲ್ಲಿ ಪ್ರವಚನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಭಕ್ತರು ಹಾಗೂ ಜನಪ್ರತಿನಿಧಿಗಳ ಸಹಕಾರದಿಂದ
ದಾಸೋಹ ಭವನ ನಿರ್ಮಾಣಗೊಂಡಿದ್ದು, ಮಠದ ಅಭಿವೃದ್ಧಿಗೆ ಎಲ್ಲರೂ ಸಹಕರಿಸಬೇಕು ಎಂದರು. ಮಠಾಧ್ಯಕ್ಷ ಇಮ್ಮಡಿ ಉದ್ದಾನಸ್ವಾಮೀಜಿ ಮಾತನಾಡಿ, ಸುಮಾರು 500 ವರ್ಷಗಳ ಇತಿಹಾಸ ಹೊಂದಿರುವ ಮಠದಲ್ಲಿ ದಾಸೋಹ ಭವನ ನಿರ್ಮಾಣ ಹಲವು ವರ್ಷಗಳ ಕನಸಾಗಿತ್ತು. ಒಂಬತ್ತು ವರ್ಷಗಳ ಹಿಂದೆ ಆರಂಭವಾದ ಕಾಮಗಾರಿ ಇದೀಗ ಪೂರ್ಣಗೊಂಡಿದೆ. ಈ ಭವನ ಜ್ಞಾನ ಹಾಗೂ ಸೇವೆಯ ಕೇಂದ್ರವಾಗಬೇಕು ಎಂದರು. ಕಾರ್ಯಕ್ರಮದಲ್ಲಿ ವಿವಿಧ ಮಠಗಳ ಸ್ವಾಮೀಜಿಗಳು, ಜನಪ್ರತಿನಿಧಿಗಳು, ಮುಖಂಡರು ಹಾಗೂ ಸಾವಿರಾರು ಭಕ್ತರು ಭಾಗವಹಿಸಿದ್ದರು. ಭಕ್ತರಿಗೆ ದಿನವಿಡೀ ಪ್ರಸಾದ ವಿತರಿಸಲಾಯಿತು.
- ಮಂಗಳವಾರ ಬೆಂಡಗಳ್ಳಿ ಗೇಟ್ ಬಳಿ ಕಾರು–ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ತೀವ್ರ ಗಾಯ. ಗುಂಡ್ಲುಪೇಟೆ: ತಾಲೂಕಿನ ಬೆಂಡಗಳ್ಳಿ ಗೇಟ್ ಸಮೀಪದ ಎಂಆರ್‌ಪಿಎಲ್ ಪೆಟ್ರೋಲ್ ಬಂಕ್ ಬಳಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸೂರ್ಯಕಾಂತಿ ಹೂವಿನ ಫೋಟೋ ತೆಗೆಯುವ ಉದ್ದೇಶದಿಂದ ಕಾರು ಚಾಲಕ ರಸ್ತೆಯ ಎಡಭಾಗಕ್ಕೆ ಏಕಾಏಕಿ ವೇಗವಾಗಿ ಕಾರನ್ನು ತಿರುಗಿಸಿದ ಪರಿಣಾಮ, ಎದುರಿನಿಂದ ಬರುತ್ತಿದ್ದ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಬೈಕ್ ಸವಾರನಿಗೆ ತೀವ್ರ ಗಾಯಗಳಾಗಿದ್ದು, ಸ್ಥಳೀಯರು ಗಾಯಾಳುವನ್ನು ತಕ್ಷಣ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.2
- ಮೂಡಲಹೊಸಹಳ್ಳಿ ಗ್ರಾಮದಲ್ಲಿ ಮತ್ತೊಂದು ಬಾರ್ ಅಂಗಡಿಯನ್ನು ವಿರೋಧಿಸಿ ಪ್ರತಿಭಟನೆ ಮೂಡಲಹೊಸಹಳ್ಳಿ ಗ್ರಾಮದಲ್ಲಿ ಮತ್ತೊಂದು ಬಾರ್ ಅಂಗಡಿಯನ್ನು ವಿರೋಧಿಸಿ ಪ್ರತಿಭಟನೆ ವರದಿ: ಹೊಮ್ಮನಂಜುಂಡನಾಯಕ ಚಾಮರಾಜನಗರ: ತಾಲೂಕಿನ ಮೂಡಲಹೊಸಹಳ್ಳಿ ಗ್ರಾಮದಲ್ಲಿ ಮತ್ತೊಂದು ಬಾರ್ ಅಂಗಡಿಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಕುಮಾರ್‌ಶೆಟ್ಟಿ ಬಣದ ತಾಲೂಕು ಘಟಕದ ನೇತೃತ್ವದಲ್ಲಿ ಗ್ರಾಮಸ್ಥರು ನಗರದ ಜಿಲ್ಲಾಡಳಿತ ಭವನ ಎದುರು ಪ್ರತಿಭಟನೆ ನಡೆಸಿ, ಅಬ್ಕಾರಿ ಇಲಾಖೆಯ ಉಪ ಆಯುಕ್ತ ಚಂದ್ರ ಅವರಿಗೆ ಮನವಿ ಸಲ್ಲಿಸಿದರು. ಬೇಡ ಬೇಡ ಅನಧಿಕೃತ ಬಾರ್ ಅಂಗಡಿ ಬೇಡ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ ಪಡಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಕುಮಾರ್‌ಶೆಟ್ಟಿ ಬಣದ ತಾಲೂಕು ಅಧ್ಯಕ್ಷ ಕ್ವಾಲಿಟಿ ನವೀನ್ ಮಾತನಾಡಿ, ಗ್ರಾಮದಲ್ಲಿ ಈಗಾಗಲೇ ಒಂದು ಮದ್ಯಂಗಡಿವಿದ್ದು, ಅಬ್ಕಾರಿ ಇಲಾಖೆ ಮತ್ತೊಂದು ಮದ್ಯಂಗಡಿ ತೆರೆಯಲು ಹೊರಟಿದ್ದಾರೆ. ಈಗಾಗಲೇ ಸುತ್ತ ಮುತ್ತಲಿನ ಗ್ರಾಮಸ್ಥರು ತುಂಬಾ ತೊಂದರೆ ಎದುರಿಸುತ್ತಿದ್ದಾರೆ. ಈಗಾಗಲೇ ಇರುವ ಬಾರ್ ಅಂಗಡಿ ಸಾಕಾಗಿದೆ. ಮತ್ತೊಂದು ಮದ್ಯಂಗಡಿ ಏಕೆ ಬೇಕಿದೆ ? ಇದು ಒಂದು ದುರಂತವೇ ಸರಿ. ಅಧಿಕಾರಿಗಳು ಶಕ್ತಿ ಇದ್ದರೆ ಇನ್ನೊಂದು ಮದ್ಯಂಗಡಿ ತೆರೆಯಲಿ. ಜನರಿಗೆ ಆಸ್ಪತ್ರೆ, ಶಿಕ್ಷಣ ವ್ಯವಸ್ಥೆ, ಮೆಡಿಕಲ್ ವ್ಯವಸ್ಥೆ ಮಾಡಲಿ ಅದನ್ನು ಬಿಟ್ಟು ಒಂದೇ ಗ್ರಾಮದಲ್ಲಿ ಎರಡು ಬಾರ್‌ಗಳನ್ನು ತೆರೆಯಲು ಮುಂದಾಗಿರುವುದರಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂಬ ಅನುಮಾನ ಕಾಡುತ್ತಿದೆ. ಮತ್ತೊಂದು ಮತ್ತೊಂದು ಬಾರ್ ಅಂಗಡಿ ತೆರೆದರೆ ಜನರ ಗತಿಯೇನು ಆಗಬೇಕು. ನೂತನವಾಗಿ ಆರಂಭಿಸಲು ಹೊರಟಿರುವ ಬಾರ್ ಅಂಗಡಿ ದಾಖಲೆಗಳು ವ್ಯಾತ್ಯಾಸವಾಗಿರುತ್ತವೆ. ಅದನ್ನು ಪರಿಶೀಲಿಸಿ ನೂತನ ಬಾರ್ ಅಂಗಡಿಯನ್ನು ರದ್ದುಪಡಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಉಪಾಧ್ಯಕ್ಷ ರಾಮಸಮುದ್ರ ಬಾಬು, ಉಮೇಶ, ಪ್ರಧಾನ ಕಾರ್ಯದರ್ಶಿ ಅರ್ಜುನ, ಕಾರ್ಮಿಕ ಅಧ್ಯಕ್ಷ ಹರೀಶ್ ನಾಯಕ, ಟೌನ್ ಅಧ್ಯಕ್ಷ ಅಫ್ನನ್, ಮಹೇಂದ್ರ, ರಿಜ್ವಾನ್, ಚಾಂದು, ಸಿದ್ದರಾಜು, ಅಬ್ದುಲ್‌ಮನಸಿಫ್, ಮೋಸಿನ್, ಸುಹೇಲ್ ಪಾಷ, ಕೇಶವಮೂರ್ತಿ, ಮೂಡಹೊಸಳ್ಳಿ ಗ್ರಾಮಸ್ಥರು, ಸ್ತ್ರೀಶಕ್ತಿ ಸಂಘದ ಸದಸ್ಯರು ಭಾಗವಹಿಸಿದ್ದರು.4
- ಕೊಳ್ಳೇಗಾಲ. ಪಾಳ್ಯ ಕೆರೆಗಳಿಗೆ ನೀರು ಹರಿಸುವಂತೆ ಗ್ರಾಮದ ಕೆರೆ ಅಚ್ಚುಕಟ್ಟುದಾರರು ಮತ್ತು ಗ್ರಾಮಸ್ಥರು ಗುರುವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ನೀರಾವರಿ ಕಚೇರಿ ಮುಂದೆ ಪಾಳ್ಯ ಗ್ರಾಮದ ರೈತರು ಕುಳಿತು ಘೋಷಣೆಯ ಮೂಲಕ ಪ್ರತಿಭಟಿಸಿ, ನಂತರ ಕಚೇರಿಯ ಟೆಕ್ನಿಕಲ್ ಅಸಿಸ್ಟೆಂಟ್ ಪುಣ್ಯಶ್ರೀ ರವರಿಗೆ ಮನವಿಪತ್ರ ಸಲ್ಲಿಸಿದರು. ನಂತರ ಯುವ ರೈತ ಹರೀಶ್ ಮಾತನಾಡಿ, ನಮ್ಮ ಪಾಳ್ಯ ಗ್ರಾಮದ ಕೆರೆಗಳಿಗೆ ನೀರು ಬೀಡದೇ ಕಬಿನಿ ಜಲಾಶಯದ ನೀರು ಕಳೆದ 15 ದಿನಗಳಿಂದ ಚಾನಲ್ ಮೂಲಕ ಕಾವೇರಿ ನದಿಗೆ ಹರಿಸುತ್ತಿದ್ದಾರೆ. ಇದ್ದರಿಂದ ಪಾಳ್ಯ ಗ್ರಾಮದ ಸಾವಿರಾರು ಎಕರೆ ಜಮೀನುಗಳು ಸರಿಯಾದ ಸಮಯಕ್ಕೆ ಮಳೆಯಾಗದೇ ಹಾಗೂ ಜಲಾಶಯದಿಂದ ನೀರು ಬೀಡದೇ ಒಣಗುತ್ತಿದೆ ಎಂದು ಆರೋಪಿಸಿದರು. ರೈತರು ಐದಾರು ಬಾರಿ ಬಂದು ಮನವಿ ಸಲ್ಲಿಸಿದ್ದರೂ ಕೂಡ ಯಾವುದೇ ಅಧಿಕಾರಿಗಳು ಬಂದು ಪರಿಶೀಲನೆ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆದ್ದರಿಂದ ಕೂಡಲೇ ಪಾಳ್ಯ ಗ್ರಾಮದ ಚಿಕ್ಕ ಕೆರೆ ಹಾಗೂ ದೊಡ್ಡ ಕೆರೆಗೆ ನೀರು ತುಂಬಿ ಸುತ್ತಮುತ್ತಲಿನ ಜಮೀನುಗಳಿಗೆ ನೀರು ಹರಿಸುವಂತೆ ಒತ್ತಾಯ ಮಾಡಿದರು. ಪ್ರತಿಭಟನೆಯಲ್ಲಿ ಪಾಳ್ಯ ಗ್ರಾಮದ ಸಿದ್ದಪ್ಪನಾಯಕ, ಸೀಗನಾಯಕ, ದೊಡ್ಡರಾಜನಾಯಕ, ತಂಬಡಿ ಬಸವರಾಜಪ್ಪ, ನಂಜುಂಡಸ್ವಾಮಿ, ಪಕಾಲಿನಾಯಕ, ದೊಡ್ಡಸೀಗನಾಯಕ, ರಾಜಪ್ಪ, ಪಾರ್ಥ, ರೈತ ಮುಖಂಡರು ಇದ್ದರು.4
- All About,Who shud be held responsible/Accountable for all Kinds of Irregularities in #KSBA #Bengaluru *ಭಾರತ ನಲ್ಲಿ ವೈರಲ್*1
- ಹಲಗೂರಿನಲ್ಲಿ ಶ್ರೀ ಪಟ್ಟದರಾಣಿ ದೇವಸ್ಥಾನದ ನಾಲ್ಕನೇ ವರ್ಷದ ವಾರ್ಷಿಕೋತ್ಸವ ಮಳವಳ್ಳಿ :ತಾಲ್ಲೂಕಿನ ಹಲಗೂರು ಗ್ರಾಮದ ಗಾಣಿಗರ ಬೀದಿಯಲ್ಲಿರುವ ಶ್ರೀ ಪಟ್ಟದರಾಣಿ ದೇವಸ್ಥಾನದ ನಾಲ್ಕನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಭಕ್ತಿ ಭಾವ ಪೂರಕವಾಗಿ ಆಚರಿಸಲಾಯಿತು. ಗುರುವಾರ ಬೆಳಿಗ್ಗೆ ಪಟ್ಟದ ರಾಣಿ ಅಮ್ಮನವರ ಮೂರ್ತಿಯನ್ನು ಶುಚಿಗೊಳಿಸಿ ,ನಂತರ ದುರ್ಗಾ ಹೋಮ ಮಹಾಗಣಪತಿ ಹೋಮ ನವಗ್ರಹ ಶಾಂತಿ ಹೋಮ ಪಂಚಾಮೃತ ಅಭಿಷೇಕ ನಡೆಸಿ, ನಂತರ ವಿವಿಧ ಪುಷ್ಪಗಳಿಂದ ದೇವರ ಮೂರ್ತಿಯನ್ನು ಅಲಂಕರಿಸಿ ವಿಶೇಷವಾಗಿ ಪೂಜಾ ಪುನಸ್ಕಾರಗಳನ್ನು ನಡೆಸಲಾಯಿತು. ಗ್ರಾಮ ದೇವತೆಯಾದ ಪಟ್ಟಲದಮ್ಮ, ಶ್ರೀ ಸಿದ್ದೇಶ್ವರ ಸ್ವಾಮಿ ಸತ್ತಿಗೆ ಹಾಗೂ ಪಟ್ಟದ ರಾಣಿ ದೇವರಿಗೆ ನಡುಕೇರಿ ವೀರಭದ್ರ ದೇವಸ್ಥಾನದ ಆವರಣದಲ್ಲಿ ಹೂ -ಹೊಂಬಾಳೆ ಮಾಡಿಕೊಂಡು ವಿಶೇಷವಾಗಿ ಅಲಂಕರಿಸಿ ಪೂಜಾ ಕುಣಿತದೊಡನೆ ಮೆರವಣಿಗೆ ಮುಖಾಂತರ ದೇವಸ್ಥಾನಕ್ಕೆ ದೇವರ ಮೂರ್ತಿಗಳನ್ನು ತರಲಾಯಿತು.ನಂತರ ಮಹಾಮಂಗಳಾರತಿ ನಡೆಸಿ ಬಂದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಯನ್ನು ನಡೆಸಲಾಯಿತು. ದೇವಸ್ಥಾನದ ಆವರಣದಲ್ಲಿ ರವಿ ಮಾತನಾಡಿ, ನಾವು ಪ್ರತಿವರ್ಷ ಅಮ್ಮನವರಿಗೆ ಪೂಜೆ ಪುನಸ್ಕಾರವನ್ನು ನಡೆಸಿಕೊಂಡು ಬರುತ್ತಿದ್ದು ,ಇಂದು ನಾಲ್ಕನೇ ವರ್ಷದ ಪ್ರಯುಕ್ತ ವಿಶೇಷವಾಗಿ ಪೂಜಾ ಕಾರ್ಯಕ್ರಮವನ್ನು ನಡೆಸಿ ಬಂದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ಮಾಡಿದ್ದೇವೆ. ಅಪಾರ ಭಕ್ತಾದಿಗಳು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪಟ್ಟದ ರಾಣಿ ಅಮ್ಮನವರ ಸೇವಾ ಟ್ರಸ್ಟಿನ ಅಧ್ಯಕ್ಷರು ಮತ್ತು ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.1
- ಅಲುಗಾಡುತ್ತಿರುವ ರಾಷ್ಟ್ರೀಯ ಹೆದ್ದಾರಿ 948 ಸತ್ತಿಗಾಲ ಹೊಸ ಸೇತುವೆ ಸಾರ್ವಜನಿಕರಲ್ಲಿ ಆತಂಕ ಕೋಟಿಗಟ್ಟಲೆ ಯೋಜನೆ ಕಳಪೆ ಸಂಶಯ ಅಲಗಾಡುತ್ತಿದೆ ರಾಷ್ಟ್ರೀಯ ಹೆದ್ದಾರಿ 948 ಸತ್ತಿಗಾಲ ಹೊಸ ಸೇತುವೆ ಜನರಲ್ಲಿ ಆತಂಕ ಮಳವಳ್ಳಿಯಿಂದ ಕೊಳ್ಳೇಗಾಲಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿ 948 ರಸ್ತೆಗೆ ಸತ್ತಿಗಾಲ ಬಳಿ ನಿರ್ಮಿಸಿರುವ ಹೊಸ ಮೇಲ್ ಸೇತುವೆ ಅಲುಗಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತಪಡಿಸಿದೆ. ಈ ಬಗ್ಗೆ ಕಳೆದ ವಾರ ಸತಿಗಾಲ ಸೇತುವೆ ಬಳಿ ನಿಂತುಕೊಂಡು ಕಾವೇರಿ ನದಿಯ ನೀರು ಹರಿಯುವಿಕೆ ಹಾಗೂ ಸುತ್ತಮುತ್ತಲ ಸುಂದರ ವಾತಾವರಣವನ್ನು ನೋಡುತ್ತಿದ್ದ ಹಲವಾರು ಜನರು ಸತ್ತಿಗಾಲ ಹೊಸ ಸೇತುವೆಯ ಮೇಲೆ ನಿಂತಿದ್ದಾಗ ವಾಹನಗಳು ಹೋಗುವಾಗ ಬರುವಾಗ ಅದರಲ್ಲೂ ಅತಿ ಭಾರವಾದ ವಾಹನಗಳು ಸಂಚರಿಸುವಾಗ ಈ ಸೇತುವೆ ಅಲಗಾಡುತ್ತಿರುವ ರೋಮಾಂಚನ ಹಾಗೂ ಭಯದ ವಾತಾವರಣ ಸೃಷ್ಟಿಯಾಯಿತು ಇದು ಇತ್ತೀಚಿಗೆ ನಿರ್ಮಿಸಿರುವ ಸೇತುವೆಯಾಗಿದೆ ಹಳೆಯ ಸೇತುವೆ ಇದಕ್ಕಿಂತ ತುಂಬಾ ಉತ್ತಮ ವಿನ್ನಬಹುದಾಗಿದೆ. ಈ ಕಾಮಗಾರಿಗು ಮುನ್ನ ಹಳೆಯ ಸೇತುವೆಯ ಪುನರ್ ನಿರ್ಮಾಣ ಆಗಿತ್ತು ಅದಕ್ಕೆ ಮೂರು ಕೋಟಿಗೂ ಅಧಿಕ ಹಣವನ್ನು ಖರ್ಚು ಮಾಡಲಾಗಿತ್ತು 948 ನಂತರ ರಾಷ್ಟ್ರೀಯ ಹೆದ್ದಾರಿ ರಸ್ತೆ ಹೊಸದಾಗಿ ನಿರ್ಮಾಣ ಮಾಡುವ ಸಂದರ್ಭದಲ್ಲಿ ಇದಕ್ಕೆ ಹೊಸ ಮೇಲ್ ಸೇತುವೆ ನಿರ್ಮಾಣ ಮಾಡಲಾಗಿದೆ ಆದರೆ ಈ ಸೇತುವೆಯ ಕಾಮಗಾರಿ ಕಳಪೆ ಎನ್ನುವ ಆತಂಕ ಸಾರ್ವಜನಿಕ ವಲಯದಲ್ಲಿ ಹೆಚ್ಚಾಗಿದೆ ಏಕೆಂದರೆ ವಾಹನಗಳು ಸಂಚರಿಸುವಾಗ ಸೇತುವೆ ಭೂಕಂಪವಾದಾಗ ಯಾವ ರೀತಿ ಅಲುಗಾಡುತ್ತದೆ, ಶಬ್ದ ಅನುಭವ ಆಗುತ್ತದೋ ಆ ರೀತಿಯಲ್ಲಿ ಇಲ್ಲಿ ಶಬ್ದ ಬರುತ್ತದೆ ಇದು ಇದು ಕಳಪೆ ಕಾಮಗಾರಿಯೂ ಅಥವಾ ಆಧುನಿಕ ತಂತ್ರಜ್ಞಾನವು ಎಂಬ ಅನುಮಾನ ಮೂಡಿಸಿದೆ ಇನ್ನಾದರೂ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಇದರ ಗುಣಮಟ್ಟ ಪರಿಶೀಲನೆ ನಡೆಸಿ ಕ್ರಮ ವಹಿಸುವ ಮೂಲಕ ಸಾರ್ವಜನಿಕ ಸಂಚಾರಕ್ಕೆ ಯಾವುದೇ ಆತಂಕ ಅಡ್ಡಿ ಅನಾಹುತ ಸಂಭವಿಸಿದಂತೆ ಎಚ್ಚರಿಕೆ ವಹಿಸಬೇಕೆಂದು ಸಾರ್ವಜನಿಕರು ಅಗ್ರಹಿಸಿದ್ದಾರೆ1
- ಗುಂಡ್ಲುಪೇಟೆಯಲ್ಲಿ ಸಂಭ್ರಮದ ಈದ್ ಮಿಲಾದ್: ಸೌಹಾರ್ದತೆಯ ಸಂದೇಶ. ಗುಂಡ್ಲುಪೇಟೆ: ಪ್ರವಾದಿ ಮೊಹಮ್ಮದ್ ಅವರ ಜನ್ಮದಿನದ ಅಂಗವಾಗಿ ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬವನ್ನು ಮುಸ್ಲಿಂ ಸಮುದಾಯದವರು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಿದರು. ಈದ್ ಮಿಲಾದ್ ಅಂಗವಾಗಿ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಪ್ರವಚನಗಳು ನಡೆದವು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಲಂಕಾರ ಮಾಡಲಾಗಿದ್ದು, ಮುಸ್ಲಿಂ ಸಮುದಾಯದವರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಹಬ್ಬದ ಹಿನ್ನೆಲೆಯಲ್ಲಿ ವಿವಿಧೆಡೆ ಅನ್ನದಾನ ಹಾಗೂ ಸಿಹಿ ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಮಕ್ಕಳು, ಯುವಕರು ಹಾಗೂ ಹಿರಿಯರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು ಈದ್ ಮಿಲಾದ್ ಆಚರಣೆಯ ಸಂದರ್ಭದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಯ ಸಂದೇಶ ಸಾರಲಾಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಅಗತ್ಯ ಭದ್ರತಾ ವ್ಯವಸ್ಥೆ ಕೈಗೊಂಡಿತ್ತು.1
- ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ–ಕರಡಿಗುಡ್ಡ ಅರಣ್ಯ ಪ್ರದೇಶದಲ್ಲಿ ಆ.15ರಂದು ನಡೆದ ಶೂಟೌಟ್‌ನಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ ನ್ಯಾಯಾಂಗ ತನಿಖೆ ನಡೆಸಿ, ಮೃತರ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳು ಗುರುವಾರ ಹನೂರಿನಲ್ಲಿ ಪ್ರತಿಭಟನೆ ನಡೆಸಿದವು. ಕೆಂಪೇಗೌಡ ವೃತ್ತದಿಂದ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಬಳಿಕ ಧರಣಿ ನಡೆಸಿ, ಪ್ರಕರಣದ ನಿಷ್ಪಕ್ಷಪಾತ ತನಿಖೆ, ಆರೋಪಿತ ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ ಹಾಗೂ ಮೃತರ ಕುಟುಂಬಗಳಿಗೆ ತಲಾ ₹2 ಕೋಟಿ ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡುವಂತೆ ಒತ್ತಾಯಿಸಿದರು. ಸರ್ಕಾರ ಒಂದು ವಾರದೊಳಗೆ ಬೇಡಿಕೆಗಳನ್ನು ಈಡೇರಿಸದಿದ್ದರೆ ಅರಣ್ಯ ಭವನಕ್ಕೆ ಮುತ್ತಿಗೆ ಹಾಕುವುದಾಗಿ ಮುಖಂಡರು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ರೈತ ಸಂಘ, ಡಿಎಸ್ಎಸ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಮೃತರ ಕುಟುಂಬಸ್ಥರು ಭಾಗವಹಿಸಿದ್ದರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ–ಕರಡಿಗುಡ್ಡ ಅರಣ್ಯ ಪ್ರದೇಶದಲ್ಲಿ ಆ.15ರಂದು ನಡೆದ ಶೂಟೌಟ್‌ನಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ ನ್ಯಾಯಾಂಗ ತನಿಖೆ ನಡೆಸಿ, ಮೃತರ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳು ಗುರುವಾರ ಹನೂರಿನಲ್ಲಿ ಪ್ರತಿಭಟನೆ ನಡೆಸಿದವು. ಕೆಂಪೇಗೌಡ ವೃತ್ತದಿಂದ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಬಳಿಕ ಧರಣಿ ನಡೆಸಿ, ಪ್ರಕರಣದ ನಿಷ್ಪಕ್ಷಪಾತ ತನಿಖೆ, ಆರೋಪಿತ ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ ಹಾಗೂ ಮೃತರ ಕುಟುಂಬಗಳಿಗೆ ತಲಾ ₹2 ಕೋಟಿ ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡುವಂತೆ ಒತ್ತಾಯಿಸಿದರು. ಸರ್ಕಾರ ಒಂದು ವಾರದೊಳಗೆ ಬೇಡಿಕೆಗಳನ್ನು ಈಡೇರಿಸದಿದ್ದರೆ ಅರಣ್ಯ ಭವನಕ್ಕೆ ಮುತ್ತಿಗೆ ಹಾಕುವುದಾಗಿ ಮುಖಂಡರು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ರೈತ ಸಂಘ, ಡಿಎಸ್ಎಸ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಮೃತರ ಕುಟುಂಬಸ್ಥರು ಭಾಗವಹಿಸಿದ್ದರು4