logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಪಾವಗಡದಲ್ಲಿ ಶಾಸಕ ಹೆಚ್.ವಿ. ವೆಂಕಟೇಶ್ ಅವರಿಂದ ಶ್ರೀ ಗಣಪತಿಗೆ ವಿಶೇಷ ಪೂಜೆ ಪಾವಗಡ ಶಾಸಕ ಹೆಚ್.ವಿ. ವೆಂಕಟೇಶ್ ಅವರಿಂದ ಶ್ರೀ ಗಣಪತಿಗೆ ವಿಶೇಷ ಪೂಜೆ ​ಪಾವಗಡ: ಪಟ್ಟಣದ ರೈನ್ ಗೇಜ್ ಬಡಾವಣೆಯಲ್ಲಿ ಗಜಪಡೆ ಗೆಳೆಯರ ಬಳಗದ ವತಿಯಿಂದ ಭಕ್ತಿ-ಶ್ರದ್ಧೆಗಳಿಂದ ಪ್ರತಿಷ್ಠಾಪಿಸಲಾಗಿರುವ ಶ್ರೀ ಮಹಾಗಣಪತಿ ಪೆಂಡಾಲ್‌ಗೆ ಮಂಗಳವಾರ ಕ್ಷೇತ್ರದ ಶಾಸಕರಾದ ಹೆಚ್.ವಿ. ವೆಂಕಟೇಶ್ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ಸ್ವಾಮಿಯ ಕೃಪೆಗೆ ಪಾತ್ರರಾದರು. ​ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, "ನಾಡಿಗೆ ಹಾಗೂ ತಾಲೂಕಿನ ಜನತೆಗೆ ವಿಘ್ನನಿವಾರಕ ಶ್ರೀ ಗಣೇಶನು ಸುಖ, ಶಾಂತಿ, ಸಮೃದ್ಧಿ ಮತ್ತು ಉತ್ತಮ ಮಳೆ-ಬೆಳೆ ನೀಡಿ ಹಾರೈಸಲಿ" ಎಂದು ಪ್ರಾರ್ಥಿಸಿದರು. ಬಡಾವಣೆಯ ಯುವಕರು ಒಂದಾಗಿ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು. ​ಈ ಸಂದರ್ಭದಲ್ಲಿ ಪುರಸಭೆಯ ಮಾಜಿ ಅಧ್ಯಕ್ಷರಾದ ಮಾನಂ ವೆಂಕಟಸ್ವಾಮಿ, ಶಂಕರ್ ರೆಡ್ಡಿ, ತಿಮ್ಮಮ್ಮನಹಳ್ಳಿ ಹನುಮಂತರಾಯಪ್ಪ ಹಾಗೂ ಅವರ ಅಳಿಯ ನರೇಶ್ ಯಾದವ್, ರೈತ ಸಂಘದ ಅಧ್ಯಕ್ಷ ನರಸಿಂಹ ರೆಡ್ಡಿ, ಮುಖಂಡ ಲಕ್ಷ್ಮಿ ನರಸಪ್ಪ ಸೇರಿದಂತೆ ಹಲವು ಪ್ರಮುಖರು ಹಾಗೂ ಬಡಾವಣೆಯ ನಿವಾಸಿಗಳು ಉಪಸ್ಥಿತರಿದ್ದರು. ಪಾವಗಡ ವರದಿ

3 hrs ago
user_Ctv news
Ctv news
Voice of people ಪಾವಗಡ, ತುಮಕೂರು, ಕರ್ನಾಟಕ•
3 hrs ago
e8d96e52-3470-4f23-a49d-ba12a21a9588

ಪಾವಗಡದಲ್ಲಿ ಶಾಸಕ ಹೆಚ್.ವಿ. ವೆಂಕಟೇಶ್ ಅವರಿಂದ ಶ್ರೀ ಗಣಪತಿಗೆ ವಿಶೇಷ ಪೂಜೆ ಪಾವಗಡ ಶಾಸಕ ಹೆಚ್.ವಿ. ವೆಂಕಟೇಶ್ ಅವರಿಂದ ಶ್ರೀ ಗಣಪತಿಗೆ ವಿಶೇಷ ಪೂಜೆ ​ಪಾವಗಡ: ಪಟ್ಟಣದ ರೈನ್ ಗೇಜ್ ಬಡಾವಣೆಯಲ್ಲಿ ಗಜಪಡೆ ಗೆಳೆಯರ ಬಳಗದ ವತಿಯಿಂದ ಭಕ್ತಿ-ಶ್ರದ್ಧೆಗಳಿಂದ ಪ್ರತಿಷ್ಠಾಪಿಸಲಾಗಿರುವ ಶ್ರೀ ಮಹಾಗಣಪತಿ ಪೆಂಡಾಲ್‌ಗೆ ಮಂಗಳವಾರ ಕ್ಷೇತ್ರದ ಶಾಸಕರಾದ ಹೆಚ್.ವಿ. ವೆಂಕಟೇಶ್ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ಸ್ವಾಮಿಯ ಕೃಪೆಗೆ ಪಾತ್ರರಾದರು. ​ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, "ನಾಡಿಗೆ ಹಾಗೂ ತಾಲೂಕಿನ ಜನತೆಗೆ ವಿಘ್ನನಿವಾರಕ ಶ್ರೀ ಗಣೇಶನು ಸುಖ, ಶಾಂತಿ, ಸಮೃದ್ಧಿ ಮತ್ತು ಉತ್ತಮ ಮಳೆ-ಬೆಳೆ ನೀಡಿ ಹಾರೈಸಲಿ" ಎಂದು ಪ್ರಾರ್ಥಿಸಿದರು. ಬಡಾವಣೆಯ ಯುವಕರು ಒಂದಾಗಿ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು. ​ಈ ಸಂದರ್ಭದಲ್ಲಿ ಪುರಸಭೆಯ ಮಾಜಿ ಅಧ್ಯಕ್ಷರಾದ ಮಾನಂ ವೆಂಕಟಸ್ವಾಮಿ, ಶಂಕರ್ ರೆಡ್ಡಿ, ತಿಮ್ಮಮ್ಮನಹಳ್ಳಿ ಹನುಮಂತರಾಯಪ್ಪ ಹಾಗೂ ಅವರ ಅಳಿಯ ನರೇಶ್ ಯಾದವ್, ರೈತ ಸಂಘದ ಅಧ್ಯಕ್ಷ ನರಸಿಂಹ ರೆಡ್ಡಿ, ಮುಖಂಡ ಲಕ್ಷ್ಮಿ ನರಸಪ್ಪ ಸೇರಿದಂತೆ ಹಲವು ಪ್ರಮುಖರು ಹಾಗೂ ಬಡಾವಣೆಯ ನಿವಾಸಿಗಳು ಉಪಸ್ಥಿತರಿದ್ದರು. ಪಾವಗಡ ವರದಿ

More news from ಕರ್ನಾಟಕ and nearby areas
  • ಗೌರಿ-ಗಣೇಶ ಹಬ್ಬದ ಆಚರಣೆ ಸಮಯದಲ್ಲಿ ಎಲ್ಲಾ ತರಹದ ಕಲರ್ ಪೇಪರ್ ಬ್ಲಾಸ್ಟಿಂಗ್ ಗಳನ್ನ ನಿಷೇಧಿಸಿ ಪೊಲೀಸ್ ಇಲಾಖೆ ಪ್ರಕಟಣೆ ಗೌರಿ-ಗಣೇಶ ಹಬ್ಬದ ಆಚರಣೆ ಸಮಯದಲ್ಲಿ ಎಲ್ಲಾ ತರಹದ ಕಲರ್ ಪೇಪರ್ ಬ್ಲಾಸ್ಟಿಂಗ್ ಗಳನ್ನ ನಿಷೇಧಿಸಿ ಪೊಲೀಸ್ ಇಲಾಖೆ ಪ್ರಕಟಣೆ ನೀಡಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವಿವಿಧ ದಿನಾಂಕಗಳಂದು ವಿಸರ್ಜನೆ ಮಾಡಲಿದ್ದು, ಮೆರವಣಿಗೆ ಸಂದರ್ಭದಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್, ಪಟಾಕಿ /ಸಿಡಿಮದ್ದುಗಳನ್ನು ಸಿಡಿಸುವುದರಿಂದ, ಮೆರವಣಿಗೆ ಮಾರ್ಗದಲ್ಲಿರುವ ಪ್ರಾರ್ಥನಾ ಸ್ಥಳಗಳಿಗೆ ಹಾನಿಯಾಗುವ ಸಾಧ್ಯತೆ ಇದ್ದು, ಇದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯೋವೃದ್ಧರಿಗೆ. ಮಕ್ಕಳಿಗೆ ತೊಂದರೆಯಾಗುವ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ, ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳು, ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023ರ ಕಲಂ 163 ಹಾಗೂ ಕರ್ನಾಟಕ ಪೊಲೀಸ್ ಅಧಿನಿಯಮ ಕಲಂ 35. 36ರಡಿಯಲ್ಲಿ ಸಾರ್ವಜನಿಕ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಕಾಪಾಡುವ ಮುಂಜಾಗ್ರತಾ ಕ್ರಮದ ಸಲುವಾಗಿ ಅಕ್ಟೋಬರ್ 5 ರವರೆಗೆ ಚಿತ್ರದುರ್ಗ ಜಿಲ್ಲೆಯಾದ್ಯಾಂತ ಎಲ್ಲಾ ರೀತಿಯ ಕಲರ್ ಪೇಪರ್ బ్లాస్టింగా. ಪಟಾಕಿ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿರುತ್ತಾರೆ.
    1
    ಗೌರಿ-ಗಣೇಶ ಹಬ್ಬದ ಆಚರಣೆ ಸಮಯದಲ್ಲಿ ಎಲ್ಲಾ ತರಹದ ಕಲರ್ ಪೇಪರ್ ಬ್ಲಾಸ್ಟಿಂಗ್ ಗಳನ್ನ ನಿಷೇಧಿಸಿ ಪೊಲೀಸ್ ಇಲಾಖೆ ಪ್ರಕಟಣೆ
ಗೌರಿ-ಗಣೇಶ ಹಬ್ಬದ ಆಚರಣೆ ಸಮಯದಲ್ಲಿ ಎಲ್ಲಾ ತರಹದ ಕಲರ್ ಪೇಪರ್ ಬ್ಲಾಸ್ಟಿಂಗ್ ಗಳನ್ನ ನಿಷೇಧಿಸಿ ಪೊಲೀಸ್ ಇಲಾಖೆ ಪ್ರಕಟಣೆ ನೀಡಿದೆ. 
ಚಿತ್ರದುರ್ಗ ಜಿಲ್ಲೆಯಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವಿವಿಧ ದಿನಾಂಕಗಳಂದು ವಿಸರ್ಜನೆ ಮಾಡಲಿದ್ದು, ಮೆರವಣಿಗೆ ಸಂದರ್ಭದಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್, ಪಟಾಕಿ /ಸಿಡಿಮದ್ದುಗಳನ್ನು ಸಿಡಿಸುವುದರಿಂದ, ಮೆರವಣಿಗೆ ಮಾರ್ಗದಲ್ಲಿರುವ ಪ್ರಾರ್ಥನಾ ಸ್ಥಳಗಳಿಗೆ ಹಾನಿಯಾಗುವ ಸಾಧ್ಯತೆ ಇದ್ದು, ಇದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯೋವೃದ್ಧರಿಗೆ. ಮಕ್ಕಳಿಗೆ ತೊಂದರೆಯಾಗುವ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ, ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳು, ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023ರ ಕಲಂ 163 ಹಾಗೂ ಕರ್ನಾಟಕ ಪೊಲೀಸ್ ಅಧಿನಿಯಮ ಕಲಂ 35. 36ರಡಿಯಲ್ಲಿ ಸಾರ್ವಜನಿಕ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಕಾಪಾಡುವ ಮುಂಜಾಗ್ರತಾ ಕ್ರಮದ ಸಲುವಾಗಿ ಅಕ್ಟೋಬರ್ 5 ರವರೆಗೆ ಚಿತ್ರದುರ್ಗ ಜಿಲ್ಲೆಯಾದ್ಯಾಂತ ಎಲ್ಲಾ ರೀತಿಯ ಕಲರ್ ಪೇಪರ್ బ్లాస్టింగా. ಪಟಾಕಿ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿರುತ್ತಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • ಲಕ್ಷಾಂತರ ಭಕ್ತರ ನಡುವೆ ಸಡಗರ ಸಂಭ್ರಮದಿಂದ ಜರುಗಿದ ಎರಡು ರಾಜ್ಯಗಳನ್ನು ಬೆಸುವ ಗೌರಸಮುದ್ರ ಮಾರಮ್ಮ ಜಾತ್ರೆ
    1
    ಲಕ್ಷಾಂತರ ಭಕ್ತರ ನಡುವೆ ಸಡಗರ ಸಂಭ್ರಮದಿಂದ ಜರುಗಿದ ಎರಡು ರಾಜ್ಯಗಳನ್ನು ಬೆಸುವ ಗೌರಸಮುದ್ರ ಮಾರಮ್ಮ ಜಾತ್ರೆ
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    5 hrs ago
  • ಮಸೀದಿ ಮುಂದೆ ಯಾಕೆ ಪಟಾಕಿ ಹೊಡಿಬೇಕು ಧನಂಜಯ್ ಹೇಳಿಕೆಯನ್ನ ಸಮರ್ಥಮಾಡಿಕೊಂಡ ಶಾಸಕ ಹರೀಶ್ ಗೌಡ ಮಸೀದಿ ಮುಂದೆ ಯಾಕೆ ಪಟಾಕಿ ಹೊಡಿಬೇಕು ಧನಂಜಯ್ ಹೇಳಿಕೆಯನ್ನ ಸಮರ್ಥಮಾಡಿಕೊಂಡ ಶಾಸಕ ಹರೀಶ್ ಗೌಡ
    1
    ಮಸೀದಿ ಮುಂದೆ ಯಾಕೆ ಪಟಾಕಿ ಹೊಡಿಬೇಕು ಧನಂಜಯ್ 
ಹೇಳಿಕೆಯನ್ನ ಸಮರ್ಥಮಾಡಿಕೊಂಡ ಶಾಸಕ ಹರೀಶ್ ಗೌಡ 
ಮಸೀದಿ ಮುಂದೆ ಯಾಕೆ ಪಟಾಕಿ ಹೊಡಿಬೇಕು ಧನಂಜಯ್ 
ಹೇಳಿಕೆಯನ್ನ ಸಮರ್ಥಮಾಡಿಕೊಂಡ ಶಾಸಕ ಹರೀಶ್ ಗೌಡ
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
  • ಕೆಆರ್ ಪುರ : ಐಟಿಐ ಭೂಮಿ ಹರಾಜು ವಿರೋಧಿಸಿ ಸ್ಥಳೀಯರಿಂದ ಕಾಲ್ನಡಿಗೆ ಜಾಥಾ ಐಟಿಐ ಸಂಸ್ಥೆಗೆ ಸೇರಿದ 44 ಎಕರೆ ಭೂಮಿ ಹರಾಜಿಗೆ ಕೇಂದ್ರ ಸರ್ಕಾರದ ಪ್ರಕಟಣೆ . ಹರಾಜು ನಿರ್ಧಾರಕ್ಕೆ ಸ್ಥಳೀಯ ಸಂಘಟನೆಗಳು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ . 44 ಎಕರೆ ಭೂಮಿಯನ್ನು ಹರಾಜು ಮಾಡದೆ ಸಾರ್ವಜನಿಕ ಬಳಕೆಗೆ ಉಳಿಸುವಂತೆ ಆಗ್ರಹ ಖಾಸಗೀಕರಣದಿಂದ ಪರಿಸರಕ್ಕೆ ಹಾನಿಯಾಗುವ ಆತಂಕ .ಐಟಿಐ ಕೈಗಾರಿಕೆಯನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಪುನಶ್ಚೇತನಗೊಳಿಸುವಂತೆ ಒತ್ತಾಯ.ಮೊಬೈಲ್, ಲ್ಯಾಪ್‌ಟಾಪ್ ಸೇರಿದಂತೆ ಅಗತ್ಯ ಉತ್ಪನ್ನಗಳನ್ನು ಕೈಗೆಟುಕುವ ದರದಲ್ಲಿ ಉತ್ಪಾದಿಸಲು ಆಗ್ರಹ .ಐಟಿಐ ಪುನಶ್ಚೇತನದಿಂದ ಲಕ್ಷಾಂತರ ಉದ್ಯೋಗ ಸೃಷ್ಟಿಗೆ ಅವಕಾಶ ಎಂದು ಸ್ಥಳೀಯರ ಅಭಿಪ್ರಾಯ .ಸಾರ್ವಜನಿಕ ಆಸ್ತಿಯನ್ನು ಖಾಸಗೀಕರಣದ ಹೆಸರಿನಲ್ಲಿ ಮಾರಾಟ ಮಾಡದಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹ 44 ಎಕರೆ ಭೂಮಿ ಹರಾಜು ಪ್ರಕ್ರಿಯೆ ಕೂಡಲೇ ಕೈಬಿಡುವಂತೆ ಒತ್ತಾಯ .ಜಾಥಾ ಬಳಿಕ ಐಟಿಐ ಮುಖ್ಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲು ನಿರ್ಧಾರ
    1
    ಕೆಆರ್ ಪುರ : ಐಟಿಐ ಭೂಮಿ ಹರಾಜು ವಿರೋಧಿಸಿ ಸ್ಥಳೀಯರಿಂದ ಕಾಲ್ನಡಿಗೆ ಜಾಥಾ
ಐಟಿಐ ಸಂಸ್ಥೆಗೆ ಸೇರಿದ 44 ಎಕರೆ ಭೂಮಿ ಹರಾಜಿಗೆ ಕೇಂದ್ರ ಸರ್ಕಾರದ ಪ್ರಕಟಣೆ .
ಹರಾಜು ನಿರ್ಧಾರಕ್ಕೆ ಸ್ಥಳೀಯ ಸಂಘಟನೆಗಳು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ .
44 ಎಕರೆ ಭೂಮಿಯನ್ನು ಹರಾಜು ಮಾಡದೆ ಸಾರ್ವಜನಿಕ ಬಳಕೆಗೆ ಉಳಿಸುವಂತೆ ಆಗ್ರಹ 
ಖಾಸಗೀಕರಣದಿಂದ ಪರಿಸರಕ್ಕೆ ಹಾನಿಯಾಗುವ ಆತಂಕ .ಐಟಿಐ ಕೈಗಾರಿಕೆಯನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಪುನಶ್ಚೇತನಗೊಳಿಸುವಂತೆ ಒತ್ತಾಯ.ಮೊಬೈಲ್, ಲ್ಯಾಪ್‌ಟಾಪ್ ಸೇರಿದಂತೆ ಅಗತ್ಯ ಉತ್ಪನ್ನಗಳನ್ನು ಕೈಗೆಟುಕುವ ದರದಲ್ಲಿ ಉತ್ಪಾದಿಸಲು ಆಗ್ರಹ .ಐಟಿಐ ಪುನಶ್ಚೇತನದಿಂದ ಲಕ್ಷಾಂತರ ಉದ್ಯೋಗ ಸೃಷ್ಟಿಗೆ ಅವಕಾಶ ಎಂದು ಸ್ಥಳೀಯರ ಅಭಿಪ್ರಾಯ .ಸಾರ್ವಜನಿಕ ಆಸ್ತಿಯನ್ನು ಖಾಸಗೀಕರಣದ ಹೆಸರಿನಲ್ಲಿ ಮಾರಾಟ ಮಾಡದಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹ
44 ಎಕರೆ ಭೂಮಿ ಹರಾಜು ಪ್ರಕ್ರಿಯೆ ಕೂಡಲೇ ಕೈಬಿಡುವಂತೆ ಒತ್ತಾಯ .ಜಾಥಾ ಬಳಿಕ ಐಟಿಐ ಮುಖ್ಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲು ನಿರ್ಧಾರ
    user_Darshan
    Darshan
    Local News Reporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    6 hrs ago
  • ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ:ಒರ್ವ ಸಾವು ,ಮೂವರಿಗೆ ಗಾಯ ಬೆಂಗಳೂರು:ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ.ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ ಹೊಡೆದಿದೆ.ಬರ್ತಿದ್ದ ರಸ್ತೆಯಿಂದ ಡಿವೈಡರ್ ದಾಟಿ ಮತ್ತೊಂದು ರಸ್ತೆಯಲ್ಲಿ ಬರ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒರ್ವ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮದ ಬಳಿ ನಡೆದಿದೆ.ಶಿಡ್ಲಘಟ್ಟ ಮೂಲಕ ವೆಂಕಟೇಶಪ್ಪ ( 75 ) ಮೃತ ವ್ಯಕ್ತಿ.ಮುನಿಅಕ್ಕಯಮ್ಮ, ಮಾಲಾ ಮತ್ತು ಪವನ್ ಕುಮಾರ್ ಗೆ ಗಂಭೀರ ಗಾಯವಾಗಿದೆ.ಗಾಯಾಳುಗಳಿಗೆ ದೊಡ್ಡಬಳ್ಳಾಪುರದ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ .
    1
    ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ:ಒರ್ವ ಸಾವು ,ಮೂವರಿಗೆ ಗಾಯ

ಬೆಂಗಳೂರು:ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ.ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ ಹೊಡೆದಿದೆ.ಬರ್ತಿದ್ದ ರಸ್ತೆಯಿಂದ ಡಿವೈಡರ್ ದಾಟಿ  ಮತ್ತೊಂದು ರಸ್ತೆಯಲ್ಲಿ ಬರ್ತಿದ್ದ ಕಾರಿಗೆ ಡಿಕ್ಕಿ ಹೊಡೆದ  ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒರ್ವ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮದ ಬಳಿ ನಡೆದಿದೆ.ಶಿಡ್ಲಘಟ್ಟ ಮೂಲಕ ವೆಂಕಟೇಶಪ್ಪ ( 75 ) ಮೃತ ವ್ಯಕ್ತಿ.ಮುನಿಅಕ್ಕಯಮ್ಮ, ಮಾಲಾ ಮತ್ತು ಪವನ್ ಕುಮಾರ್ ಗೆ ಗಂಭೀರ ಗಾಯವಾಗಿದೆ.ಗಾಯಾಳುಗಳಿಗೆ ದೊಡ್ಡಬಳ್ಳಾಪುರದ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ .
    user_ಶಿವನಿ
    ಶಿವನಿ
    Fruit & Vegetable Exporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    15 hrs ago
  • ಪಕ್ಕ ಲವರ್’ ಸಿನಿಮಾ ಶುರು! 🎬 ಸ್ಥಳೀಯ ಪ್ರತಿಭೆಗಳಿಗೆ ದೊಡ್ಡ ಅವಕಾಶ! ಸಿನಿಮಾ ನಿರ್ಮಾಣಕ್ಕಿಂತ ಪ್ರಮೋಷನ್ ಮುಖ್ಯ! ಬಳ್ಳಾರಿಯ ಸ್ಥಳೀಯ ಪ್ರತಿಭೆಗಳನ್ನೇ ಒಳಗೊಂಡು ನಿರ್ಮಾಣವಾಗುತ್ತಿರುವ ‘ಪಕ್ಕ ಲವರ್’ ಕನ್ನಡ ಚಲನಚಿತ್ರದ ಟೈಟಲ್ ಹಾಗೂ ಹಾಡು ಬಿಡುಗಡೆಗೊಂಡಿದೆ. 🎬 ಸ್ಥಳೀಯ ಕಲಾವಿದರು ಹಾಗೂ ಪ್ರತಿಭೆಗಳಿಗೆ ಅವಕಾಶ ನೀಡಿ ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಚಿತ್ರದ ನಿರ್ದೇಶಕ ಕೋಳೂರು ಶೇಖರ್ ಹೇಳಿದ್ದಾರೆ. ಚಿತ್ರದ ಶೇ.30ರಷ್ಟು ಚಿತ್ರೀಕರಣ ಈಗಾಗಲೇ ಪೂರ್ಣಗೊಂಡಿದ್ದು, ಉಳಿದ ಚಿತ್ರೀಕರಣವನ್ನು ಬಳ್ಳಾರಿ ಮತ್ತು ಬೆಂಗಳೂರಿನಲ್ಲಿ ನಡೆಸಲಾಗಲಿದೆ. ಚಿತ್ರದ ನಾಯಕ ನಟ ಅವಿನಾಶ್, ‘ಪಕ್ಕ ಲವರ್’ ಸಿನಿಮಾ ಯಶಸ್ವಿಯಾಗುವ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಉದ್ಯಮಿ ಹಾಗೂ ನಿರ್ಮಾಪಕ ಪೋಲಾ ಪ್ರವೀಣ್ ಕುಮಾರ್, ಸಿನಿಮಾ ನಿರ್ಮಾಣದಷ್ಟೇ ಪ್ರಮೋಷನ್‌ಗೂ ಆದ್ಯತೆ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. 👉 ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ಸಿಗಬೇಕು ಎನ್ನುವ ನಿಮ್ಮ ಅಭಿಪ್ರಾಯವೇನು? ಕಾಮೆಂಟ್ ಮಾಡಿ. ASN NEWS24 ಕನ್ನಡ – ಸುತ್ತಮುತ್ತ ನಡೆಯುವ ಸುದ್ದಿ ನಿಮ್ಮ ಮುಂದೆ. #PakkaLover #PakkaLoverMovie #KannadaMovie #KannadaCinema #KannadaFilm #Ballari #BallariNews #Bellary #KannadaNews #KannadaFilmIndustry #LocalTalent #LocalArtists #Avinash #KannadaActor #FilmPromotion #Sandalwood #SandalwoodNews #KarnatakaNews #ASNNews24 #ASNNews24Kannada
    1
    ಪಕ್ಕ ಲವರ್’ ಸಿನಿಮಾ ಶುರು! 🎬
ಸ್ಥಳೀಯ ಪ್ರತಿಭೆಗಳಿಗೆ ದೊಡ್ಡ ಅವಕಾಶ!
ಸಿನಿಮಾ ನಿರ್ಮಾಣಕ್ಕಿಂತ ಪ್ರಮೋಷನ್ ಮುಖ್ಯ!
ಬಳ್ಳಾರಿಯ ಸ್ಥಳೀಯ ಪ್ರತಿಭೆಗಳನ್ನೇ ಒಳಗೊಂಡು ನಿರ್ಮಾಣವಾಗುತ್ತಿರುವ ‘ಪಕ್ಕ ಲವರ್’ ಕನ್ನಡ ಚಲನಚಿತ್ರದ ಟೈಟಲ್ ಹಾಗೂ ಹಾಡು ಬಿಡುಗಡೆಗೊಂಡಿದೆ. 🎬
ಸ್ಥಳೀಯ ಕಲಾವಿದರು ಹಾಗೂ ಪ್ರತಿಭೆಗಳಿಗೆ ಅವಕಾಶ ನೀಡಿ ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಚಿತ್ರದ ನಿರ್ದೇಶಕ ಕೋಳೂರು ಶೇಖರ್ ಹೇಳಿದ್ದಾರೆ.
ಚಿತ್ರದ ಶೇ.30ರಷ್ಟು ಚಿತ್ರೀಕರಣ ಈಗಾಗಲೇ ಪೂರ್ಣಗೊಂಡಿದ್ದು, ಉಳಿದ ಚಿತ್ರೀಕರಣವನ್ನು ಬಳ್ಳಾರಿ ಮತ್ತು ಬೆಂಗಳೂರಿನಲ್ಲಿ ನಡೆಸಲಾಗಲಿದೆ.
ಚಿತ್ರದ ನಾಯಕ ನಟ ಅವಿನಾಶ್, ‘ಪಕ್ಕ ಲವರ್’ ಸಿನಿಮಾ ಯಶಸ್ವಿಯಾಗುವ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಉದ್ಯಮಿ ಹಾಗೂ ನಿರ್ಮಾಪಕ ಪೋಲಾ ಪ್ರವೀಣ್ ಕುಮಾರ್, ಸಿನಿಮಾ ನಿರ್ಮಾಣದಷ್ಟೇ ಪ್ರಮೋಷನ್‌ಗೂ ಆದ್ಯತೆ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
👉 ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ಸಿಗಬೇಕು ಎನ್ನುವ ನಿಮ್ಮ ಅಭಿಪ್ರಾಯವೇನು? ಕಾಮೆಂಟ್ ಮಾಡಿ.
ASN NEWS24 ಕನ್ನಡ – ಸುತ್ತಮುತ್ತ ನಡೆಯುವ ಸುದ್ದಿ ನಿಮ್ಮ ಮುಂದೆ.
#PakkaLover #PakkaLoverMovie #KannadaMovie #KannadaCinema #KannadaFilm #Ballari #BallariNews #Bellary #KannadaNews #KannadaFilmIndustry #LocalTalent #LocalArtists #Avinash #KannadaActor #FilmPromotion #Sandalwood #SandalwoodNews #KarnatakaNews #ASNNews24 #ASNNews24Kannada
    user_AsnNews24Kannada
    AsnNews24Kannada
    Local News Reporter Ballari, Karnataka•
    17 hrs ago
  • ₹2,000 ಮೇಲ್ಪಟ್ಟ UPI ಪಾವತಿಗೆ ಹೊಸ ಶುಲ್ಕ? ಅಕ್ಟೋಬರ್ 5ರಿಂದ MDR ನಿಯಮ; NPCI ಸ್ಪಷ್ಟನೆ ₹2,000 ಮೇಲ್ಪಟ್ಟ UPI ಪಾವತಿಗೆ ಹೊಸ ಶುಲ್ಕ? ಅಕ್ಟೋಬರ್ 5ರಿಂದ MDR ನಿಯಮ; NPCI ಸ್ಪಷ್ಟನೆ
    1
    ₹2,000 ಮೇಲ್ಪಟ್ಟ UPI ಪಾವತಿಗೆ ಹೊಸ ಶುಲ್ಕ?
ಅಕ್ಟೋಬರ್ 5ರಿಂದ MDR ನಿಯಮ; NPCI ಸ್ಪಷ್ಟನೆ
₹2,000 ಮೇಲ್ಪಟ್ಟ UPI ಪಾವತಿಗೆ ಹೊಸ ಶುಲ್ಕ?
ಅಕ್ಟೋಬರ್ 5ರಿಂದ MDR ನಿಯಮ; NPCI ಸ್ಪಷ್ಟನೆ
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    3 hrs ago
  • ಹಲಸೂರು ಕೆರೆ ಕಲ್ಯಾಣಿಯಲ್ಲಿ ದೊಡ್ಡ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವ ಕಾರ್ಯಕ್ಕೆ ಚಾಲನೆ ಬೆಂಗಳೂರು:ಕೇಂದ್ರ ನಗರ ಪಾಲಿಕೆಯ ಹಲಸೂರು ಕೆರೆ ಕಲ್ಯಾಣಿಯಲ್ಲಿ ಆಹಾರ ಖಾತೆ ಸಚಿವರು ಹಾಗು ಶಿವಾಜಿನಗರ ಶಾಸಕರಾದ ರಿಜ್ವಾನ್ ಹರ್ಷದ್ ರವರು ಹಲಸೂರು ಕೆರೆ ಕಲ್ಯಾಣಿಯಲ್ಲಿ ದೊಡ್ಡ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವ ಕಾರ್ಯಕ್ಕೆ ಚಾಲನೆ ಇಂದು ಸಂಜೆ ನೀಡಿದರು. ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಶ್ರೀ ಜಗದೀಶ್ ಜಿ ರವರು ಹಾಗು ಅಭಿವೃದ್ಧಿ ಅಪರ ಆಯುಕ್ತರಾದ ಶ್ರೀ ವೆಂಕಟಾಚಲಪತಿ ಆರ್ ರವರು ಉಪಸ್ಥಿತರಿದ್ದಾರೆ. ಆಯುಕ್ತರು ಅಪರ ಆಯುಕ್ತರೊಂದಿಗೆ, ಜಂಟಿ ಆಯುಕ್ತರೊಂದಿಗೆ ಹಾಗು ಮುಖ್ಯ ಇಂಜಿನಿಯರ್ ಕಾರ್ಯಪಾಲಕ ಇಂಜಿನಿಯರ್ ಪೊಲೀಸ್ ಅಧಿಕಾರಿಗಳು, ಬೆಸ್ಕಾಂ ಅಧಿಕಾರಿಗಳೊಂದಿಗೆ ನಿರಂತರವಾಗಿ ಗಣೇಶ ಮೂರ್ತಿಗಳ ವಿಸರ್ಜನೆ ಕಾರ್ಯದ ಸಿದ್ಧತೆ ಬಗ್ಗೆ ಅಧಿಕಾರಿಗಳೊಂದಿಗೆ ನಿರಂತರ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
    1
    ಹಲಸೂರು ಕೆರೆ ಕಲ್ಯಾಣಿಯಲ್ಲಿ  ದೊಡ್ಡ ಗಣೇಶ ಮೂರ್ತಿಗಳನ್ನು  ವಿಸರ್ಜನೆ ಮಾಡುವ ಕಾರ್ಯಕ್ಕೆ ಚಾಲನೆ

ಬೆಂಗಳೂರು:ಕೇಂದ್ರ ನಗರ ಪಾಲಿಕೆಯ ಹಲಸೂರು ಕೆರೆ ಕಲ್ಯಾಣಿಯಲ್ಲಿ  ಆಹಾರ ಖಾತೆ ಸಚಿವರು ಹಾಗು ಶಿವಾಜಿನಗರ ಶಾಸಕರಾದ  ರಿಜ್ವಾನ್ ಹರ್ಷದ್ ರವರು ಹಲಸೂರು ಕೆರೆ ಕಲ್ಯಾಣಿಯಲ್ಲಿ  ದೊಡ್ಡ ಗಣೇಶ ಮೂರ್ತಿಗಳನ್ನು  ವಿಸರ್ಜನೆ ಮಾಡುವ ಕಾರ್ಯಕ್ಕೆ ಚಾಲನೆ ಇಂದು ಸಂಜೆ ನೀಡಿದರು. 
ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಶ್ರೀ ಜಗದೀಶ್ ಜಿ ರವರು ಹಾಗು ಅಭಿವೃದ್ಧಿ ಅಪರ ಆಯುಕ್ತರಾದ ಶ್ರೀ ವೆಂಕಟಾಚಲಪತಿ ಆರ್ ರವರು ಉಪಸ್ಥಿತರಿದ್ದಾರೆ.  
ಆಯುಕ್ತರು ಅಪರ ಆಯುಕ್ತರೊಂದಿಗೆ, ಜಂಟಿ ಆಯುಕ್ತರೊಂದಿಗೆ ಹಾಗು  ಮುಖ್ಯ ಇಂಜಿನಿಯರ್ ಕಾರ್ಯಪಾಲಕ ಇಂಜಿನಿಯರ್ ಪೊಲೀಸ್ ಅಧಿಕಾರಿಗಳು,  ಬೆಸ್ಕಾಂ ಅಧಿಕಾರಿಗಳೊಂದಿಗೆ ನಿರಂತರವಾಗಿ ಗಣೇಶ ಮೂರ್ತಿಗಳ ವಿಸರ್ಜನೆ ಕಾರ್ಯದ ಸಿದ್ಧತೆ ಬಗ್ಗೆ ಅಧಿಕಾರಿಗಳೊಂದಿಗೆ  ನಿರಂತರ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
    user_ಶಿವನಿ
    ಶಿವನಿ
    Fruit & Vegetable Exporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    15 hrs ago
  • ಬರದ ಬೇಗುದಿ: ಶೇಂಗಾ ಬೆಳೆ ಉಳಿಸಲು ಟ್ಯಾಂಕರ್ ನೀರಿನ ಮೊರೆ: ಸಾಲ ಮಾಡಿ ನೀರುಣಿಸುತ್ತಿರುವ ರೈತರು ಕೂಡ್ಲಿಗಿ: ಮಳೆ ಕೈಕೊಟ್ಟ ಪರಿಣಾಮ ಬಿತ್ತನೆ ಮಾಡಿರುವ ಶೇಂಗಾ ಬೆಳೆ ಒಣಗುವ ಹಂತಕ್ಕೆ ತಲುಪಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಪರದಾಡುವಂತಾಗಿದೆ. ಗುಡೇಕೋಟೆ ಗ್ರಾಮದ ರೈತ ಶಾಮ್ ರಾವ್ ಅವರು ಮಳೆಯ ನಿರೀಕ್ಷೆಯಲ್ಲಿದ್ದ ಶೇಂಗಾ ಬೆಳೆಗೆ ಟ್ಯಾಂಕರ್ ಮೂಲಕ ನೀರುಣಿಸುತ್ತಿರುವ ದೃಶ್ಯ ರೈತರ ಸಂಕಷ್ಟಕ್ಕೆ ಕನ್ನಡಿ ಹಿಡಿದಂತಾಗಿದೆ. ಶಾಮ್ ರಾವ್ ಅವರು ತಮ್ಮ ಮೂರುವರೆ ಎಕರೆ ಜಮೀನಿನಲ್ಲಿ ಶೇಂಗಾ ಬಿತ್ತನೆ ಮಾಡಿದ್ದು, ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದರು. ಆದರೆ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೆಳೆ ತೇವಾಂಶದ ಕೊರತೆಯಿಂದ ಒಣಗುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಬೆಳೆ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಟ್ರ್ಯಾಕ್ಟರ್ ಮೂಲಕ ಟ್ಯಾಂಕರ್ ನೀರನ್ನು ಹೊಲಕ್ಕೆ ಸಾಗಿಸಿ ಶೇಂಗಾ ಬೆಳೆಗೆ ನೀರು ಹಾಯಿಸುತ್ತಿದ್ದಾರೆ. ಈಗಾಗಲೇ ಒಂದು ಟ್ಯಾಂಕರ್ ನೀರಿಗೆ ₹500ರಂತೆ 10 ಟ್ಯಾಂಕರ್ ನೀರು ಹಾಕಲಾಗಿದ್ದು, ನೀರಿಗಾಗಿಯೇ ಸುಮಾರು ₹5,000 ವೆಚ್ಚವಾಗಿದೆ. ಮುಂದಿನ ದಿನಗಳಲ್ಲಿಯೂ ಮಳೆ ಬಾರದಿದ್ದರೆ ಇನ್ನಷ್ಟು ನೀರು ಹಾಕಬೇಕಾದ ಅನಿವಾರ್ಯತೆ ರೈತನ ಮುಂದಿದೆ.
    1
    ಬರದ ಬೇಗುದಿ: ಶೇಂಗಾ ಬೆಳೆ ಉಳಿಸಲು ಟ್ಯಾಂಕರ್ ನೀರಿನ ಮೊರೆ: ಸಾಲ ಮಾಡಿ ನೀರುಣಿಸುತ್ತಿರುವ ರೈತರು 
ಕೂಡ್ಲಿಗಿ: ಮಳೆ ಕೈಕೊಟ್ಟ ಪರಿಣಾಮ ಬಿತ್ತನೆ ಮಾಡಿರುವ ಶೇಂಗಾ ಬೆಳೆ ಒಣಗುವ ಹಂತಕ್ಕೆ ತಲುಪಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಪರದಾಡುವಂತಾಗಿದೆ. ಗುಡೇಕೋಟೆ ಗ್ರಾಮದ ರೈತ ಶಾಮ್ ರಾವ್ ಅವರು ಮಳೆಯ ನಿರೀಕ್ಷೆಯಲ್ಲಿದ್ದ ಶೇಂಗಾ ಬೆಳೆಗೆ ಟ್ಯಾಂಕರ್ ಮೂಲಕ ನೀರುಣಿಸುತ್ತಿರುವ ದೃಶ್ಯ ರೈತರ ಸಂಕಷ್ಟಕ್ಕೆ ಕನ್ನಡಿ ಹಿಡಿದಂತಾಗಿದೆ.
ಶಾಮ್ ರಾವ್ ಅವರು ತಮ್ಮ ಮೂರುವರೆ ಎಕರೆ ಜಮೀನಿನಲ್ಲಿ ಶೇಂಗಾ ಬಿತ್ತನೆ ಮಾಡಿದ್ದು, ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದರು. ಆದರೆ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೆಳೆ ತೇವಾಂಶದ ಕೊರತೆಯಿಂದ ಒಣಗುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಬೆಳೆ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಟ್ರ್ಯಾಕ್ಟರ್ ಮೂಲಕ ಟ್ಯಾಂಕರ್ ನೀರನ್ನು ಹೊಲಕ್ಕೆ ಸಾಗಿಸಿ ಶೇಂಗಾ ಬೆಳೆಗೆ ನೀರು ಹಾಯಿಸುತ್ತಿದ್ದಾರೆ. ಈಗಾಗಲೇ ಒಂದು ಟ್ಯಾಂಕರ್ ನೀರಿಗೆ ₹500ರಂತೆ 10 ಟ್ಯಾಂಕರ್ ನೀರು ಹಾಕಲಾಗಿದ್ದು, ನೀರಿಗಾಗಿಯೇ ಸುಮಾರು ₹5,000 ವೆಚ್ಚವಾಗಿದೆ. ಮುಂದಿನ ದಿನಗಳಲ್ಲಿಯೂ ಮಳೆ ಬಾರದಿದ್ದರೆ ಇನ್ನಷ್ಟು ನೀರು ಹಾಕಬೇಕಾದ ಅನಿವಾರ್ಯತೆ ರೈತನ ಮುಂದಿದೆ.
    user_ಹೂಡೇಂ ಮಂಜುನಾಥ
    ಹೂಡೇಂ ಮಂಜುನಾಥ
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.