logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಂಗಳೂರಿನ ವಾಮಂಜೂರು ಕೆತ್ತಿಕಲ್‌ನಲ್ಲಿ ಮತ್ತೆ ಭೂಕುಸಿತ; ರಸ್ತೆಗೆ ಉರುಳಿದ ಬೃಹತ್ ಬಂಡೆಗಳು ಮಂಗಳೂರು : ವಾಮಂಜೂರು ಕೆತ್ತಿಕಲ್‌ನಲ್ಲಿ ಮತ್ತೆ ಭೂಕುಸಿತ; ರಸ್ತೆಗೆ ಉರುಳಿದ ಬೃಹತ್ ಬಂಡೆಗಳು

2 hrs ago
user_Shamsheer Budoli
Shamsheer Budoli
Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
2 hrs ago

ಮಂಗಳೂರಿನ ವಾಮಂಜೂರು ಕೆತ್ತಿಕಲ್‌ನಲ್ಲಿ ಮತ್ತೆ ಭೂಕುಸಿತ; ರಸ್ತೆಗೆ ಉರುಳಿದ ಬೃಹತ್ ಬಂಡೆಗಳು ಮಂಗಳೂರು : ವಾಮಂಜೂರು ಕೆತ್ತಿಕಲ್‌ನಲ್ಲಿ ಮತ್ತೆ ಭೂಕುಸಿತ; ರಸ್ತೆಗೆ ಉರುಳಿದ ಬೃಹತ್ ಬಂಡೆಗಳು

More news from ಕರ್ನಾಟಕ and nearby areas
  • ಶಿವಮೊಗ್ಗ-ಸಿಎಂ ಮನವೊಲಿಕೆ: ಪಕ್ಷದ ಹಿತದೃಷ್ಟಿಯಿಂದ ಬೇಳೂರು ರಾಜೀನಾಮೆ ಹಿಂದಕ್ಕೆ ಶಿವಮೊಗ್ಗ: ಸಾಗರ:ಮಂತ್ರಿಸ್ಥಾನ ಸಿಗಲಿಲ್ಲವೆಂಬ ತೀವ್ರ ಅಸಮಾಧಾನದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಸಿಎಂ ಮನವೊಲಿಕೆ ಹಾಗೂ ಪಕ್ಷದ ಹಿತದೃಷ್ಟಿ ಯಿಂದ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ವೇಳೆ ತಮಗೆ ಅವಕಾಶ ಸಿಗದಿರುವುದು ತೀವ್ರ ನೋವುಂಟು ಮಾಡಿತ್ತು.ಈ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾಗಿ ತಿಳಿಸಿದರು.ತಮಗೆ ಮಂತ್ರಿಸ್ಥಾನ ತಪ್ಪಿದ್ದರಿಂದ ಕ್ಷೇತ್ರದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ತೀವ್ರ ನಿರಾಸೆಗೊಂಡು ಕಣ್ಣೀರಿಟ್ಟಿದ್ದಾರೆ. ರಾಜೀನಾಮೆ ನೀಡಲು ಸಜ್ಜಾಗಿದ್ದಾಗ ಸಿಎಂ ಡಿ.ಕೆ. ಶಿವಕುಮಾರ್ ಸ್ವತಃ ಕರೆ ಮಾಡಿ, ಬೆಳಿಗ್ಗೆ ತಮ್ಮನ್ನು ಭೇಟಿಯಾಗುವಂತೆ ಸೂಚಿಸಿದ್ದರು.ಸಿಎಂ ಅವರೊಂದಿಗಿನ ಭೇಟಿಯ ವೇಳೆ ಪಕ್ಷದಲ್ಲಿ ಗೊಂದಲ ಉಂಟಾಗಬಾರದು ಹಾಗೂ ಸರ್ಕಾರ ಮತ್ತು ಪಕ್ಷಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂಬ ಸಲಹೆಯ ಮೇರೆಗೆ, ತಾವು ರಾಜೀನಾಮೆ ನಿರ್ಧಾರವನ್ನು ಕೈಬಿಟ್ಟಿರುವುದಾಗಿ ಶಾಸಕರು ಸ್ಪಷ್ಟಪಡಿಸಿದರು.
    1
    ಶಿವಮೊಗ್ಗ-ಸಿಎಂ ಮನವೊಲಿಕೆ: ಪಕ್ಷದ ಹಿತದೃಷ್ಟಿಯಿಂದ ಬೇಳೂರು ರಾಜೀನಾಮೆ ಹಿಂದಕ್ಕೆ 
ಶಿವಮೊಗ್ಗ: ಸಾಗರ:ಮಂತ್ರಿಸ್ಥಾನ ಸಿಗಲಿಲ್ಲವೆಂಬ ತೀವ್ರ ಅಸಮಾಧಾನದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಸಿಎಂ ಮನವೊಲಿಕೆ ಹಾಗೂ ಪಕ್ಷದ ಹಿತದೃಷ್ಟಿ ಯಿಂದ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ವೇಳೆ ತಮಗೆ ಅವಕಾಶ ಸಿಗದಿರುವುದು ತೀವ್ರ ನೋವುಂಟು ಮಾಡಿತ್ತು.ಈ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾಗಿ ತಿಳಿಸಿದರು.ತಮಗೆ ಮಂತ್ರಿಸ್ಥಾನ ತಪ್ಪಿದ್ದರಿಂದ ಕ್ಷೇತ್ರದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ತೀವ್ರ ನಿರಾಸೆಗೊಂಡು ಕಣ್ಣೀರಿಟ್ಟಿದ್ದಾರೆ.
ರಾಜೀನಾಮೆ ನೀಡಲು ಸಜ್ಜಾಗಿದ್ದಾಗ ಸಿಎಂ ಡಿ.ಕೆ. ಶಿವಕುಮಾರ್ ಸ್ವತಃ ಕರೆ ಮಾಡಿ, ಬೆಳಿಗ್ಗೆ ತಮ್ಮನ್ನು ಭೇಟಿಯಾಗುವಂತೆ ಸೂಚಿಸಿದ್ದರು.ಸಿಎಂ ಅವರೊಂದಿಗಿನ ಭೇಟಿಯ ವೇಳೆ ಪಕ್ಷದಲ್ಲಿ ಗೊಂದಲ ಉಂಟಾಗಬಾರದು ಹಾಗೂ ಸರ್ಕಾರ ಮತ್ತು ಪಕ್ಷಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂಬ ಸಲಹೆಯ ಮೇರೆಗೆ, ತಾವು ರಾಜೀನಾಮೆ ನಿರ್ಧಾರವನ್ನು ಕೈಬಿಟ್ಟಿರುವುದಾಗಿ ಶಾಸಕರು ಸ್ಪಷ್ಟಪಡಿಸಿದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    1 hr ago
  • {ಯಕ್ಷಗಾನ ವೈಭವ} 04-08-2026. ಮನೆಯಲ್ಲಿ ಯಕ್ಷಗಾನ. ಯಕ್ಷಗಾನ ಕಲೆ ಉಳಿಸಿ,ಬೆಳೆಸಿ. ಶ್ರೀ ದುಗಾ೯ ಗಣಪತಿ ಯಕ್ಷಗಾನ ತಂಡ.ಸಂಡಳ್ಳಿ.ಕುಮಟಾ.
    1
    {ಯಕ್ಷಗಾನ ವೈಭವ} 04-08-2026. ಮನೆಯಲ್ಲಿ ಯಕ್ಷಗಾನ. ಯಕ್ಷಗಾನ ಕಲೆ ಉಳಿಸಿ,ಬೆಳೆಸಿ.
ಶ್ರೀ ದುಗಾ೯ ಗಣಪತಿ ಯಕ್ಷಗಾನ ತಂಡ.ಸಂಡಳ್ಳಿ.ಕುಮಟಾ.
    user_Narayan P.
    Narayan P.
    Kumta, Uttara Kannada, Karnataka•
    12 hrs ago
  • ಟಿಬಿ ಜಯಚಂದ್ರ ಅವರಿಗೆ ಸಚಿವ ಸ್ಥಾನ ಸಿಗದ ಅಸಮಾಧಾನ ಸ್ಫೋಟ? ನಾಮಿನಿ ಸದಸ್ಯ ಸ್ಥಾನಕ್ಕೆ ರಾಧಾಕೃಷ್ಣ ಗುಡ್‌ಬೈ!
    1
    ಟಿಬಿ ಜಯಚಂದ್ರ ಅವರಿಗೆ ಸಚಿವ ಸ್ಥಾನ ಸಿಗದ ಅಸಮಾಧಾನ ಸ್ಫೋಟ? ನಾಮಿನಿ ಸದಸ್ಯ ಸ್ಥಾನಕ್ಕೆ ರಾಧಾಕೃಷ್ಣ ಗುಡ್‌ಬೈ!
    user_BKP NEWS
    BKP NEWS
    Newspaper publisher ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    2 hrs ago
  • ಚಿಕ್ಕನಾಯಕನಹಳ್ಳಿಯ 7 ದಿನಗಳ ಹೇಮಾವತಿ ನೀರಾವರಿ ಹೋರಾಟ ತಾತ್ಕಾಲಿಕ ಅಂತ್ಯ – ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಹೋರಾಟಗಾರರ ನಿರ್ಧಾರ ಚಿಕ್ಕನಾಯಕನಹಳ್ಳಿಯ 7 ದಿನಗಳ ಹೇಮಾವತಿ ನೀರಾವರಿ ಹೋರಾಟ ತಾತ್ಕಾಲಿಕ ಅಂತ್ಯ – ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಹೋರಾಟಗಾರರ ನಿರ್ಧಾರ --------------------------- ​ಚಿಕ್ಕನಾಯಕನಹಳ್ಳಿ: ತಾಲೂಕಿಗೆ ಹೇಮಾವತಿ ನೀರು ಹರಿಸುವ ಕಾಮಗಾರಿ ವಿಳಂಬ ಖಂಡಿಸಿ ಹಾಗೂ ದಬ್ಬೇಘಟ್ಟದವರೆಗಿನ ಕಾಮಗಾರಿಯನ್ನು ತಕ್ಷಣವೇ ಪೂರ್ಣಗೊಳಿಸಬೇಕೆಂದು ಆಗ್ರಹಿಸಿ ಕಳೆದ 7 ದಿನಗಳಿಂದ ನಿರಂತರವಾಗಿ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ನೀರಾವರಿ ಹೋರಾಟ ಸಮಿತಿ ಇಂದು ತಾತ್ಕಾಲಿಕವಾಗಿ ಹಿಂಪಡೆದಿದೆ. ​ಕಳೆದ ಜುಲೈ 30 ರಿಂದ ಪ್ರಾರಂಭಗೊಂಡಿದ್ದ ಈ ಹೋರಾಟವು ಇಂದು (ಏಳನೇ ದಿನ) ಸುಖಾಂತ್ಯ ಕಂಡಿದೆ. ಗ್ಯಾರೇಹಳ್ಳಿಯಿಂದ ದಬ್ಬೇಘಟ್ಟದವರೆಗಿನ ನೀರಾವರಿ ಯೋಜನೆಯ ಕಾಮಗಾರಿಯು ಸಂಪೂರ್ಣವಾಗಿ (ಝೀರೋದಿಂದ ದಬ್ಬೇಘಟ್ಟದವರೆಗೆ) ಮುಕ್ತಾಯಗೊಂಡಿರುವುದನ್ನು ಖಾತರಿಪಡಿಸಿಕೊಂಡ ನಂತರ, ಹೋರಾಟಗಾರರು ತಮ್ಮ ಸತ್ಯಾಗ್ರಹವನ್ನು ಅಂತ್ಯಗೊಳಿಸುವುದಾಗಿ ಘೋಷಿಸಿದರು. ಪ್ರತಿಭಟನೆ ಆರಂಭವಾಗುವ ಮೊದಲು ಕಾಮಗಾರಿ ಅತ್ಯಂತ ಮಂದಗತಿಯಲ್ಲಿ ಸಾಗುತ್ತಿತ್ತು. ದಿನಕ್ಕೆ ಕೇವಲ 6 ರಿಂದ 7 ಗಂಟೆಗಳ ಕಾಲ ಕೆಲಸ ನಡೆಯುತ್ತಿದ್ದು, ಒಂದೇ ಒಂದು ಬ್ಲಾಸ್ಟಿಂಗ್ ಹಾಗೂ ಡಿಗ್ಗಿಂಗ್ ಮೆಷಿನ್ ಬಳಸಲಾಗುತ್ತಿತ್ತು. ಆದರೆ, 30 ನೇ ತಾರೀಖಿನಿಂದ ನೀರಾವರಿ ಹೋರಾಟ ಸಮಿತಿಯು ಧರಣಿ ಕುಳಿತ ತಕ್ಷಣವೇ ಆಡಳಿತ ಯಂತ್ರ ಎಚ್ಚೆತ್ತುಕೊಂಡಿತು. ​ಅಧಿಕಾರಿಗಳು ಯಂತ್ರೋಪಕರಣಗಳ ಸಂಖ್ಯೆಯನ್ನು ದ್ವಿಗುಣಗೊಳಿಸಿ, ಸತತ 24 ಗಂಟೆಗಳ ಕಾಲ ಹಗಲು-ರಾತ್ರಿ ಕೆಲಸ ಮಾಡಿಸುವ ಮೂಲಕ ಗ್ಯಾರೇಹಳ್ಳಿಯಿಂದ ದಬ್ಬೇಘಟ್ಟದವರೆಗಿನ ಕಾಮಗಾರಿಯನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಿದ್ದಾರೆ. "ನಾವು ಅಜೆಂಡಾ ಇಟ್ಟುಕೊಂಡು ಬಂದಿದ್ದೆವು; ಕಾಮಗಾರಿ ಮುಗಿಯುವವರೆಗೆ ಜಾಗದಿಂದ ಕದಲುವುದಿಲ್ಲ ಎಂದಿದ್ದೆವು. ಅದರಂತೆ ಇವತ್ತು ಕೆಲಸ ಮುಗಿದಿರುವುದರಿಂದ ಪ್ರತಿಭಟನೆ ಮುಕ್ತಾಯಗೊಳಿಸುತ್ತಿದ್ದೇವೆ" ಎಂದು ಹೋರಾಟಗಾರರು ತಿಳಿಸಿದರು. ​ ​ಸ್ಥಳಕ್ಕೆ ಭೇಟಿ ನೀಡಿದ ಶಾಸಕರು, ತಹಶೀಲ್ದಾರ್, ನೀರಾವರಿ ಇಲಾಖೆಯ ಮುಖ್ಯ ಎಂಜಿನಿಯರ್‌ಗಳು ಹಾಗೂ ಜನಪ್ರತಿನಿಧಿಗಳು ಹೋರಾಟಗಾರರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು. ಮುಖ್ಯ ನಾಲಾ ಕಾಲುವೆಯಲ್ಲಿ ಗ್ಯಾರೇಹಳ್ಳಿಯವರೆಗೆ ಇರುವ ಹೂಳನ್ನು (ಸ್ಲಶ್) ಮುಂದಿನ 5 ರಿಂದ 6 ದಿನಗಳ ಒಳಗಾಗಿ ಸಂಪೂರ್ಣವಾಗಿ ತೆರವುಗೊಳಿಸಿ ನೀರು ಹರಿಯಲು ಅನುವು ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು. ​ಪ್ರತಿಯೊಂದು ಹಂತದ ಕಾಮಗಾರಿಯ ಪ್ರಗತಿಯನ್ನು ಮೇಲ್ವಿಚಾರಣೆ ಮಾಡಲು ಪ್ರತಿ ಸೋಮವಾರ ಸಂಬಂಧಪಟ್ಟ ಮೂರೂ ಯೋಜನೆಗಳ ಅಧಿಕಾರಿಗಳು ಸಭೆ ನಡೆಸಿ, ವರ್ಕ್ ಶೆಡ್ಯೂಲ್ ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ಸುಧಾರಣೆಗಳ ಹಿನ್ನೆಲೆಯಲ್ಲಿ ಹೋರಾಟಗಾರರು ತಾತ್ಕಾಲಿಕವಾಗಿ ತಮ್ಮ ಧರಣಿಯನ್ನು ವಾಪಸ್ ಪಡೆದುಕೊಂಡಿದ್ದಾರೆ. ​ "ಅಧಿಕಾರಿಗಳು ಹಾಗೂ ಶಾಸಕರ ಭರವಸೆಯನ್ನು ನಂಬಿ ತಾತ್ಕಾಲಿಕವಾಗಿ ಹೋರಾಟ ಹಿಂಪಡೆದಿದ್ದೇವೆ. ಒಂದು ವೇಳೆ ಕೊಟ್ಟ ಮಾತಿನಂತೆ ಕೆಲಸ ಮುಗಿಸದೆ ನಮಗೆ ಯಾಮಾರಿಸಿದರೆ, ಮುಂದಿನ ದಿನಗಳಲ್ಲಿ ಕುರಿ, ಮೇಕೆಗಳೊಂದಿಗೆ ಬೀದಿಗೆ ಇಳಿದು ಎರಡರಷ್ಟು ಉಗ್ರವಾದ ಹೋರಾಟ ರೂಪಿಸಲಾಗುವುದು" ಎಂದು ಎಚ್ಚರಿಸಿದ್ದಾರೆ. ​ವಿಜಯದ ಸಂಕೇತವಾಗಿ ಹೋರಾಟಗಾರರು ಮಹಾತ್ಮ ಗಾಂಧಿ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಪ್ರೊ. ಎಂ.ಡಿ. ನಂಜುಂಡಸ್ವಾಮಿ ಅವರಿಗೆ ಜೈಕಾರ ಕೂಗಿದರು. ಈ 7 ದಿನಗಳ ಅಹೋರಾತ್ರಿ ಹೋರಾಟಕ್ಕೆ ಸಾಥ್ ನೀಡಿದ ವಿವಿಧ ಸಂಘಟನೆಗಳು, ಪೋಲಿಸ್ ಇಲಾಖೆ ಹಾಗೂ ಮಾಧ್ಯಮ ಮಿತ್ರರಿಗೆ ಧನ್ಯವಾದಗಳನ್ನು ಅರ್ಪಿಸಿದರು.
    1
    ಚಿಕ್ಕನಾಯಕನಹಳ್ಳಿಯ 7 ದಿನಗಳ ಹೇಮಾವತಿ ನೀರಾವರಿ ಹೋರಾಟ ತಾತ್ಕಾಲಿಕ ಅಂತ್ಯ – ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಹೋರಾಟಗಾರರ ನಿರ್ಧಾರ
ಚಿಕ್ಕನಾಯಕನಹಳ್ಳಿಯ 7 ದಿನಗಳ ಹೇಮಾವತಿ ನೀರಾವರಿ ಹೋರಾಟ ತಾತ್ಕಾಲಿಕ ಅಂತ್ಯ – ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಹೋರಾಟಗಾರರ ನಿರ್ಧಾರ
---------------------------
​ಚಿಕ್ಕನಾಯಕನಹಳ್ಳಿ: ತಾಲೂಕಿಗೆ ಹೇಮಾವತಿ ನೀರು ಹರಿಸುವ ಕಾಮಗಾರಿ ವಿಳಂಬ ಖಂಡಿಸಿ ಹಾಗೂ ದಬ್ಬೇಘಟ್ಟದವರೆಗಿನ ಕಾಮಗಾರಿಯನ್ನು ತಕ್ಷಣವೇ ಪೂರ್ಣಗೊಳಿಸಬೇಕೆಂದು ಆಗ್ರಹಿಸಿ ಕಳೆದ 7 ದಿನಗಳಿಂದ ನಿರಂತರವಾಗಿ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ನೀರಾವರಿ ಹೋರಾಟ ಸಮಿತಿ ಇಂದು ತಾತ್ಕಾಲಿಕವಾಗಿ ಹಿಂಪಡೆದಿದೆ.
​ಕಳೆದ ಜುಲೈ 30 ರಿಂದ ಪ್ರಾರಂಭಗೊಂಡಿದ್ದ ಈ ಹೋರಾಟವು ಇಂದು (ಏಳನೇ ದಿನ) ಸುಖಾಂತ್ಯ ಕಂಡಿದೆ. ಗ್ಯಾರೇಹಳ್ಳಿಯಿಂದ ದಬ್ಬೇಘಟ್ಟದವರೆಗಿನ ನೀರಾವರಿ ಯೋಜನೆಯ ಕಾಮಗಾರಿಯು ಸಂಪೂರ್ಣವಾಗಿ (ಝೀರೋದಿಂದ ದಬ್ಬೇಘಟ್ಟದವರೆಗೆ) ಮುಕ್ತಾಯಗೊಂಡಿರುವುದನ್ನು ಖಾತರಿಪಡಿಸಿಕೊಂಡ ನಂತರ, ಹೋರಾಟಗಾರರು ತಮ್ಮ ಸತ್ಯಾಗ್ರಹವನ್ನು ಅಂತ್ಯಗೊಳಿಸುವುದಾಗಿ ಘೋಷಿಸಿದರು.
ಪ್ರತಿಭಟನೆ ಆರಂಭವಾಗುವ ಮೊದಲು ಕಾಮಗಾರಿ ಅತ್ಯಂತ ಮಂದಗತಿಯಲ್ಲಿ ಸಾಗುತ್ತಿತ್ತು. ದಿನಕ್ಕೆ ಕೇವಲ 6 ರಿಂದ 7 ಗಂಟೆಗಳ ಕಾಲ ಕೆಲಸ ನಡೆಯುತ್ತಿದ್ದು, ಒಂದೇ ಒಂದು ಬ್ಲಾಸ್ಟಿಂಗ್ ಹಾಗೂ ಡಿಗ್ಗಿಂಗ್ ಮೆಷಿನ್ ಬಳಸಲಾಗುತ್ತಿತ್ತು. ಆದರೆ, 30 ನೇ ತಾರೀಖಿನಿಂದ ನೀರಾವರಿ ಹೋರಾಟ ಸಮಿತಿಯು ಧರಣಿ ಕುಳಿತ ತಕ್ಷಣವೇ ಆಡಳಿತ ಯಂತ್ರ ಎಚ್ಚೆತ್ತುಕೊಂಡಿತು.
​ಅಧಿಕಾರಿಗಳು ಯಂತ್ರೋಪಕರಣಗಳ ಸಂಖ್ಯೆಯನ್ನು ದ್ವಿಗುಣಗೊಳಿಸಿ, ಸತತ 24 ಗಂಟೆಗಳ ಕಾಲ ಹಗಲು-ರಾತ್ರಿ ಕೆಲಸ ಮಾಡಿಸುವ ಮೂಲಕ ಗ್ಯಾರೇಹಳ್ಳಿಯಿಂದ ದಬ್ಬೇಘಟ್ಟದವರೆಗಿನ ಕಾಮಗಾರಿಯನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಿದ್ದಾರೆ.
"ನಾವು ಅಜೆಂಡಾ ಇಟ್ಟುಕೊಂಡು ಬಂದಿದ್ದೆವು; ಕಾಮಗಾರಿ ಮುಗಿಯುವವರೆಗೆ ಜಾಗದಿಂದ ಕದಲುವುದಿಲ್ಲ ಎಂದಿದ್ದೆವು. ಅದರಂತೆ ಇವತ್ತು ಕೆಲಸ ಮುಗಿದಿರುವುದರಿಂದ ಪ್ರತಿಭಟನೆ ಮುಕ್ತಾಯಗೊಳಿಸುತ್ತಿದ್ದೇವೆ" ಎಂದು ಹೋರಾಟಗಾರರು ತಿಳಿಸಿದರು.
​            ​ಸ್ಥಳಕ್ಕೆ ಭೇಟಿ ನೀಡಿದ ಶಾಸಕರು, ತಹಶೀಲ್ದಾರ್, ನೀರಾವರಿ ಇಲಾಖೆಯ ಮುಖ್ಯ ಎಂಜಿನಿಯರ್‌ಗಳು ಹಾಗೂ ಜನಪ್ರತಿನಿಧಿಗಳು ಹೋರಾಟಗಾರರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು. ಮುಖ್ಯ ನಾಲಾ ಕಾಲುವೆಯಲ್ಲಿ  ಗ್ಯಾರೇಹಳ್ಳಿಯವರೆಗೆ ಇರುವ ಹೂಳನ್ನು (ಸ್ಲಶ್) ಮುಂದಿನ 5 ರಿಂದ 6 ದಿನಗಳ ಒಳಗಾಗಿ ಸಂಪೂರ್ಣವಾಗಿ ತೆರವುಗೊಳಿಸಿ ನೀರು ಹರಿಯಲು ಅನುವು ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.
​ಪ್ರತಿಯೊಂದು ಹಂತದ ಕಾಮಗಾರಿಯ ಪ್ರಗತಿಯನ್ನು ಮೇಲ್ವಿಚಾರಣೆ ಮಾಡಲು ಪ್ರತಿ ಸೋಮವಾರ ಸಂಬಂಧಪಟ್ಟ ಮೂರೂ ಯೋಜನೆಗಳ ಅಧಿಕಾರಿಗಳು ಸಭೆ ನಡೆಸಿ, ವರ್ಕ್ ಶೆಡ್ಯೂಲ್ ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ಸುಧಾರಣೆಗಳ ಹಿನ್ನೆಲೆಯಲ್ಲಿ ಹೋರಾಟಗಾರರು ತಾತ್ಕಾಲಿಕವಾಗಿ ತಮ್ಮ ಧರಣಿಯನ್ನು ವಾಪಸ್ ಪಡೆದುಕೊಂಡಿದ್ದಾರೆ.
​             "ಅಧಿಕಾರಿಗಳು ಹಾಗೂ ಶಾಸಕರ ಭರವಸೆಯನ್ನು ನಂಬಿ ತಾತ್ಕಾಲಿಕವಾಗಿ ಹೋರಾಟ ಹಿಂಪಡೆದಿದ್ದೇವೆ. ಒಂದು ವೇಳೆ ಕೊಟ್ಟ ಮಾತಿನಂತೆ ಕೆಲಸ ಮುಗಿಸದೆ ನಮಗೆ ಯಾಮಾರಿಸಿದರೆ, ಮುಂದಿನ ದಿನಗಳಲ್ಲಿ ಕುರಿ, ಮೇಕೆಗಳೊಂದಿಗೆ ಬೀದಿಗೆ ಇಳಿದು ಎರಡರಷ್ಟು ಉಗ್ರವಾದ ಹೋರಾಟ ರೂಪಿಸಲಾಗುವುದು" ಎಂದು ಎಚ್ಚರಿಸಿದ್ದಾರೆ.
​ವಿಜಯದ ಸಂಕೇತವಾಗಿ ಹೋರಾಟಗಾರರು ಮಹಾತ್ಮ ಗಾಂಧಿ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಪ್ರೊ. ಎಂ.ಡಿ. ನಂಜುಂಡಸ್ವಾಮಿ ಅವರಿಗೆ ಜೈಕಾರ ಕೂಗಿದರು. ಈ 7 ದಿನಗಳ ಅಹೋರಾತ್ರಿ ಹೋರಾಟಕ್ಕೆ ಸಾಥ್ ನೀಡಿದ ವಿವಿಧ ಸಂಘಟನೆಗಳು, ಪೋಲಿಸ್ ಇಲಾಖೆ ಹಾಗೂ ಮಾಧ್ಯಮ ಮಿತ್ರರಿಗೆ ಧನ್ಯವಾದಗಳನ್ನು ಅರ್ಪಿಸಿದರು.
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    3 hrs ago
  • ತಾಲ್ಲೂಕಿನ  ಹೇಮಾವತಿ ನಾಲೆಗಳಲ್ಲಿ ನೀರು ಹರಿಸಲು ಒತ್ತಾಯಿಸಿ ಎನ್.ಡಿ.ಎ ಮೈತ್ರಿಕೂಟದ ಬೃಹತ್ ಪ್ರತಿಭಟನೆ  ತುರುವೇಕೆರೆ, ಆಗಸ್ಟ್ 4: ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕು ಈ ವರ್ಷ ತೀವ್ರ ಬರಗಾಲದ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಕ್ಷೇತ್ರದಲ್ಲಿ ಕೇವಲ ಶೇಕಡಾ 30ರಷ್ಟು ಮಾತ್ರ ಮಳೆಯಾಗಿದ್ದು, ರೈತರು ಬಿತ್ತನೆ ಮಾಡಲು ಸಾಧ್ಯವಾಗಿಲ್ಲ. ಬೋರ್‌ವೆಲ್‌ಗಳು ಒಣಗಿ ಹೋಗಿದ್ದು, ಅಡಿಕೆ ಹಾಗೂ ತೆಂಗಿನ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ. ಜಾನುವಾರುಗಳಿಗೆ ಮೇವು ಬೆಳೆಯಲು ಸಹ ನೀರಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಹೇಮಾವತಿ ನಾಲೆಯಿಂದ ನೀರನ್ನು ಹರಿಸಿ ಕ್ಷೇತ್ರದ ಕೆರೆಗಳನ್ನು ತುಂಬಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿ ಜೆ.ಡಿ.ಎಸ್.–ಬಿಜೆಪಿ ಎನ್.ಡಿ.ಎ ಮೈತ್ರಿಕೂಟವು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪನವರು ಕ್ಷೇತ್ರದಲ್ಲಿ ಕೇವಲ ಶೇಕಡಾ 30ರಷ್ಟು ಮಾತ್ರ ಮಳೆಯಾಗಿದ್ದು, ಯಾವುದೇ ರೈತರು ಬಿತ್ತನೆ ಮಾಡಿಲ್ಲ ಎಂದು ತಿಳಿಸಿದರು. ತುರುವೇಕೆರೆಯು ಬರಗಾಲ ಪೀಡಿತ ಪ್ರದೇಶವಾಗಿದೆ. ಕ್ಷೇತ್ರದ ಅನೇಕ ರೈತರ ಬೋರ್‌ವೆಲ್‌ಗಳು ಒಣಗಿ ಹೋಗಿದ್ದು, ಅಡಿಕೆ ಹಾಗೂ ತೆಂಗಿನ ಬೆಳೆಗಳು ಒಣಗುತ್ತಿವೆ. ಜಾನುವಾರುಗಳಿಗೆ ಮೇವು ಬೆಳೆಯಲು ಸಹ ನೀರಿಲ್ಲದಂತಾಗಿದೆ. ರೈತರು ತೀವ್ರ ಸಂಕಷ್ಟಕ್ಕೆ ಒಳಪಟ್ಟಿದ್ದಾರೆ ಎಂದರು.ಟಿ.ಬಿ.ಸಿ. ಚಾನೆಲ್‌ಗೆ ಲಿಂಕ್ ಕೆನಾಲ್ ಕಾಮಗಾರಿಯನ್ನು ಅನುಷ್ಠಾನಕ್ಕೆ ಹೊರಟಿರುವುದು ಖಂಡನೀಯ ಎಂದು ಹೇಳಿದ ಅವರು, ಯಾವುದೇ ಕಾರಣಕ್ಕೂ ಈ ಯೋಜನೆಯನ್ನು ಕೈಗೊಳ್ಳಬಾರದು ಎಂದು ಒತ್ತಾಯಿಸಿದರು. ಸರ್ಕಾರ ತಕ್ಷಣ ಬರಗಾಲ ಎಂದು ಘೋಷಣೆ ಮಾಡಬೇಕು. ತಾಲೂಕಿನ ರೈತರು ಅಡಿಕೆ ಹಾಗೂ ತೆಂಗನ್ನು ನೆಚ್ಚಿಕೊಂಡಿದ್ದಾರೆ. ಕ್ಷೇತ್ರದಲ್ಲಿರುವ ಕೆರೆಗಳನ್ನು ಕೂಡಲೇ ತುಂಬಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಲಿಂಕ್ ಕೆನಾಲ್ ಯೋಜನೆಯನ್ನು ಹಿಂದೆ ಯಡಿಯೂರಪ್ಪನವರು ಕ್ಯಾಬಿನೆಟ್‌ನಲ್ಲಿ ರದ್ದು ಮಾಡಿದ್ದರು. ಕುಣಿಗಲ್‌ಗೆ ನಾಲೆಯನ್ನು ಅಗಲೀಕರಣ ಮಾಡಿ ನೀರು ಹರಿಸುವ ಬದಲು, ಅದನ್ನು ಬಿಟ್ಟು ರಾಮನಗರಕ್ಕೆ ನೀರನ್ನು ಹರಿಸಲು ಲಿಂಕ್ ಯೋಜನೆಯನ್ನು ಕೈಗೆತ್ತಿಕೊಂಡಿದ್ದೀರಿ. ಈ ಯೋಜನೆಯನ್ನು ನಾವು ಮಾಡಲು ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಿಕಟಪೂರ್ವ ಶಾಸಕ ಮಸಾಲ ಜೈರಾಮ್ ಮಾತನಾಡಿ, ಕ್ಷೇತ್ರದ ಕೆರೆ, ಬಾವಿ, ಕಟ್ಟೆಗಳೆಲ್ಲವೂ ಬರಿದಾಗಿದ್ದು, ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗೂ ಸಹ ತೊಂದರೆಯಾಗಿದೆ ಎಂದರು. ಈ ಸರ್ಕಾರ ರೈತರಿಗೆ ಆತ್ಮಹತ್ಯೆಯ ಭಾಗ್ಯವನ್ನು ನೀಡಿದೆ ಎಂದು ಟೀಕಿಸಿದರು. ನಮ್ಮ ಸರ್ಕಾರದಲ್ಲಿ ಗೋಶಾಲೆಗಳನ್ನು ತೆರೆದಿದ್ದೆವು, ಅದನ್ನು ಈ ಸರ್ಕಾರ ಮುಚ್ಚಿದೆ. ಮುಂಗಾರು ಮಳೆ ಕೈಕೊಟ್ಟಿರುವುದರಿಂದ ಬರಗಾಲ ಬಂದಿರುವುದರಿಂದ ಕೂಡಲೇ ಗೋಶಾಲೆಗಳನ್ನು ತೆರೆಯಬೇಕು ಎಂದು ಒತ್ತಾಯಿಸಿದರು.ಹೇಮಾವತಿ ಡ್ಯಾಂನಲ್ಲಿ ಈಗಾಗಲೇ 25 ಟಿ.ಎಂ.ಸಿ. ನೀರು ಕ್ರೂಢೀಕರಣವಾಗಿದೆ. ಕೊನೆಪಕ್ಷ ಕ್ಷೇತ್ರದ ಕೆರೆಗಳಿಗೆ ನೀರು ಬಿಡಲು ಸರ್ಕಾರ ಕ್ರಮ ಕೈಗೊಳ್ಳದೇ ಇರುವುದರಿಂದ, ದಿನಾಂಕ 10-8-2026ರೇ ಸೋಮವಾರ ಬೆಳಿಗ್ಗೆ 11.30ಕ್ಕೆ ಹೇಮಾವತಿ ಸೂಪರಿಂಟೆಂಡಿಂಗ್ ಇಂಜಿನಿಯರ್ ಕಛೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಅಹೋರಾತ್ರಿ ಧರಣಿಯನ್ನು ಎನ್.ಡಿ.ಎ ಮೈತ್ರಿಕೂಟದಿಂದ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಪಾದಯಾತ್ರೆಯನ್ನು ಮಾಡಿಯಾದರೂ ನೀರನ್ನು ಬಿಡಿಸಿಕೊಳ್ಳುತ್ತೇವೆ. ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ರೈತರು ಪಕ್ಷಾತೀತವಾಗಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಿ ಎಂದು ಮನವಿ ಮಾಡಿದರು. ಮಾಜಿ ಶಾಸಕ ಎಂ.ಡಿ. ಲಕ್ಷ್ಮಿನಾರಾಯಣ್ ಮಾತನಾಡಿ, ಬರಗಾಲದಂತಹ ಕಷ್ಟದ ಸಂದರ್ಭದಲ್ಲಿ ಈ ಕಾಂಗ್ರೆಸ್ ಸರ್ಕಾರ ರೈತರ ತೋಟಗಳಿಗೆ ಸಮರ್ಪಕವಾಗಿ ತ್ರಿಫೇಸ್ ವಿದ್ಯುತ್ ಅನ್ನು ನೀಡುತ್ತಿಲ್ಲ. ಇದರಿಂದ ರೈತರು ಕಂಗಾಲಾಗಿದ್ದಾರೆ. ಹೇಮಾವತಿ ಡ್ಯಾಂನಿಂದ ನಮ್ಮ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸಬೇಕೆಂದು ಒತ್ತಾಯಿಸುತ್ತೇವೆ. ಆದ್ದರಿಂದ ಈ ಕ್ಷೇತ್ರದ ಸಮಸ್ತ ರೈತ ಬಾಂಧವರು ಈ ಬೃಹತ್ ಪ್ರತಿಭಟನೆಗೆ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಿ ನಿಮ್ಮ ಪರವಾದ ಹೋರಾಟಕ್ಕೆ ಶಕ್ತಿ ತುಂಬಿಸಬೇಕಾಗಿ ಮನವಿ ಮಾಡಿದರು. ತಾಲೂಕಿನ ಎನ್.ಡಿ.ಎ ಮೈತ್ರಿಕೂಟದ ಸಮಸ್ತ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಜಿ.ವಿ. ಪ್ರಕಾಶ್, ಜೆ.ಡಿ.ಎಸ್ ತಾಲೂಕು ಅಧ್ಯಕ್ಷ ದೊಡ್ಡೇಗೌಡ, ಹೆಡಗಿಹಳ್ಳಿ ವಿಶ್ವನಾಥ್, ವೆಂಕಟಾಪುರ ಯೋಗೀಶ್, ಎನ್.ಆರ್ ಸುರೇಶ್, ಗುಂಡ ಸುರೇಶ್, ಚಿದಾನಂದ, ಸಂತೋಷ್ ಡಿ, ಕೊಂಡಜ್ಜಿ ವಿಶ್ವನಾಥ್, ಹರಿಕಾರನಹಳ್ಳಿ ಪ್ರಸಾದ್, ಸಿದ್ದಪ್ಪಾಜಿ, ಮುತ್ತಣ್ಣ, ಮುನಿಯೂರು ರಂಗಸ್ವಾಮಿ, ಗೊಟ್ಟಿಕೆರೆ ಕಾಂತರಾಜು ಸೇರಿದಂತೆ ಎನ್.ಡಿ.ಎ ಮೈತ್ರಿಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
    4
    ತಾಲ್ಲೂಕಿನ  ಹೇಮಾವತಿ ನಾಲೆಗಳಲ್ಲಿ ನೀರು ಹರಿಸಲು ಒತ್ತಾಯಿಸಿ ಎನ್.ಡಿ.ಎ ಮೈತ್ರಿಕೂಟದ ಬೃಹತ್ ಪ್ರತಿಭಟನೆ 
ತುರುವೇಕೆರೆ, ಆಗಸ್ಟ್ 4: ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕು ಈ ವರ್ಷ ತೀವ್ರ ಬರಗಾಲದ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಕ್ಷೇತ್ರದಲ್ಲಿ ಕೇವಲ ಶೇಕಡಾ 30ರಷ್ಟು ಮಾತ್ರ ಮಳೆಯಾಗಿದ್ದು, ರೈತರು ಬಿತ್ತನೆ ಮಾಡಲು ಸಾಧ್ಯವಾಗಿಲ್ಲ. ಬೋರ್‌ವೆಲ್‌ಗಳು ಒಣಗಿ ಹೋಗಿದ್ದು, ಅಡಿಕೆ ಹಾಗೂ ತೆಂಗಿನ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ. ಜಾನುವಾರುಗಳಿಗೆ ಮೇವು ಬೆಳೆಯಲು ಸಹ ನೀರಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಹೇಮಾವತಿ ನಾಲೆಯಿಂದ ನೀರನ್ನು ಹರಿಸಿ ಕ್ಷೇತ್ರದ ಕೆರೆಗಳನ್ನು ತುಂಬಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿ ಜೆ.ಡಿ.ಎಸ್.–ಬಿಜೆಪಿ ಎನ್.ಡಿ.ಎ ಮೈತ್ರಿಕೂಟವು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪನವರು ಕ್ಷೇತ್ರದಲ್ಲಿ ಕೇವಲ ಶೇಕಡಾ 30ರಷ್ಟು ಮಾತ್ರ ಮಳೆಯಾಗಿದ್ದು, ಯಾವುದೇ ರೈತರು ಬಿತ್ತನೆ ಮಾಡಿಲ್ಲ ಎಂದು ತಿಳಿಸಿದರು. ತುರುವೇಕೆರೆಯು ಬರಗಾಲ ಪೀಡಿತ ಪ್ರದೇಶವಾಗಿದೆ. ಕ್ಷೇತ್ರದ ಅನೇಕ ರೈತರ ಬೋರ್‌ವೆಲ್‌ಗಳು ಒಣಗಿ ಹೋಗಿದ್ದು, ಅಡಿಕೆ ಹಾಗೂ ತೆಂಗಿನ ಬೆಳೆಗಳು ಒಣಗುತ್ತಿವೆ. ಜಾನುವಾರುಗಳಿಗೆ ಮೇವು ಬೆಳೆಯಲು ಸಹ ನೀರಿಲ್ಲದಂತಾಗಿದೆ. ರೈತರು ತೀವ್ರ ಸಂಕಷ್ಟಕ್ಕೆ ಒಳಪಟ್ಟಿದ್ದಾರೆ ಎಂದರು.ಟಿ.ಬಿ.ಸಿ. ಚಾನೆಲ್‌ಗೆ ಲಿಂಕ್ ಕೆನಾಲ್ ಕಾಮಗಾರಿಯನ್ನು ಅನುಷ್ಠಾನಕ್ಕೆ ಹೊರಟಿರುವುದು ಖಂಡನೀಯ ಎಂದು ಹೇಳಿದ ಅವರು, ಯಾವುದೇ ಕಾರಣಕ್ಕೂ ಈ ಯೋಜನೆಯನ್ನು ಕೈಗೊಳ್ಳಬಾರದು ಎಂದು ಒತ್ತಾಯಿಸಿದರು. ಸರ್ಕಾರ ತಕ್ಷಣ ಬರಗಾಲ ಎಂದು ಘೋಷಣೆ ಮಾಡಬೇಕು. ತಾಲೂಕಿನ ರೈತರು ಅಡಿಕೆ ಹಾಗೂ ತೆಂಗನ್ನು ನೆಚ್ಚಿಕೊಂಡಿದ್ದಾರೆ. ಕ್ಷೇತ್ರದಲ್ಲಿರುವ ಕೆರೆಗಳನ್ನು ಕೂಡಲೇ ತುಂಬಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಲಿಂಕ್ ಕೆನಾಲ್ ಯೋಜನೆಯನ್ನು ಹಿಂದೆ ಯಡಿಯೂರಪ್ಪನವರು ಕ್ಯಾಬಿನೆಟ್‌ನಲ್ಲಿ ರದ್ದು ಮಾಡಿದ್ದರು. ಕುಣಿಗಲ್‌ಗೆ ನಾಲೆಯನ್ನು ಅಗಲೀಕರಣ ಮಾಡಿ ನೀರು ಹರಿಸುವ ಬದಲು, ಅದನ್ನು ಬಿಟ್ಟು ರಾಮನಗರಕ್ಕೆ ನೀರನ್ನು ಹರಿಸಲು ಲಿಂಕ್ ಯೋಜನೆಯನ್ನು ಕೈಗೆತ್ತಿಕೊಂಡಿದ್ದೀರಿ. ಈ ಯೋಜನೆಯನ್ನು ನಾವು ಮಾಡಲು ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಿಕಟಪೂರ್ವ ಶಾಸಕ ಮಸಾಲ ಜೈರಾಮ್ ಮಾತನಾಡಿ, ಕ್ಷೇತ್ರದ ಕೆರೆ, ಬಾವಿ, ಕಟ್ಟೆಗಳೆಲ್ಲವೂ ಬರಿದಾಗಿದ್ದು, ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗೂ ಸಹ ತೊಂದರೆಯಾಗಿದೆ ಎಂದರು. ಈ ಸರ್ಕಾರ ರೈತರಿಗೆ ಆತ್ಮಹತ್ಯೆಯ ಭಾಗ್ಯವನ್ನು ನೀಡಿದೆ ಎಂದು ಟೀಕಿಸಿದರು. ನಮ್ಮ ಸರ್ಕಾರದಲ್ಲಿ ಗೋಶಾಲೆಗಳನ್ನು ತೆರೆದಿದ್ದೆವು, ಅದನ್ನು ಈ ಸರ್ಕಾರ ಮುಚ್ಚಿದೆ. ಮುಂಗಾರು ಮಳೆ ಕೈಕೊಟ್ಟಿರುವುದರಿಂದ ಬರಗಾಲ ಬಂದಿರುವುದರಿಂದ ಕೂಡಲೇ ಗೋಶಾಲೆಗಳನ್ನು ತೆರೆಯಬೇಕು ಎಂದು ಒತ್ತಾಯಿಸಿದರು.ಹೇಮಾವತಿ ಡ್ಯಾಂನಲ್ಲಿ ಈಗಾಗಲೇ 25 ಟಿ.ಎಂ.ಸಿ. ನೀರು ಕ್ರೂಢೀಕರಣವಾಗಿದೆ. ಕೊನೆಪಕ್ಷ ಕ್ಷೇತ್ರದ ಕೆರೆಗಳಿಗೆ ನೀರು ಬಿಡಲು ಸರ್ಕಾರ ಕ್ರಮ ಕೈಗೊಳ್ಳದೇ ಇರುವುದರಿಂದ, ದಿನಾಂಕ 10-8-2026ರೇ ಸೋಮವಾರ ಬೆಳಿಗ್ಗೆ 11.30ಕ್ಕೆ ಹೇಮಾವತಿ ಸೂಪರಿಂಟೆಂಡಿಂಗ್ ಇಂಜಿನಿಯರ್ ಕಛೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಅಹೋರಾತ್ರಿ ಧರಣಿಯನ್ನು ಎನ್.ಡಿ.ಎ ಮೈತ್ರಿಕೂಟದಿಂದ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಪಾದಯಾತ್ರೆಯನ್ನು ಮಾಡಿಯಾದರೂ ನೀರನ್ನು ಬಿಡಿಸಿಕೊಳ್ಳುತ್ತೇವೆ. ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ರೈತರು ಪಕ್ಷಾತೀತವಾಗಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಿ ಎಂದು ಮನವಿ ಮಾಡಿದರು.
ಮಾಜಿ ಶಾಸಕ ಎಂ.ಡಿ. ಲಕ್ಷ್ಮಿನಾರಾಯಣ್ ಮಾತನಾಡಿ, ಬರಗಾಲದಂತಹ ಕಷ್ಟದ ಸಂದರ್ಭದಲ್ಲಿ ಈ ಕಾಂಗ್ರೆಸ್ ಸರ್ಕಾರ ರೈತರ ತೋಟಗಳಿಗೆ ಸಮರ್ಪಕವಾಗಿ ತ್ರಿಫೇಸ್ ವಿದ್ಯುತ್ ಅನ್ನು ನೀಡುತ್ತಿಲ್ಲ. ಇದರಿಂದ ರೈತರು ಕಂಗಾಲಾಗಿದ್ದಾರೆ. ಹೇಮಾವತಿ ಡ್ಯಾಂನಿಂದ ನಮ್ಮ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸಬೇಕೆಂದು ಒತ್ತಾಯಿಸುತ್ತೇವೆ. ಆದ್ದರಿಂದ ಈ ಕ್ಷೇತ್ರದ ಸಮಸ್ತ ರೈತ ಬಾಂಧವರು ಈ ಬೃಹತ್ ಪ್ರತಿಭಟನೆಗೆ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಿ ನಿಮ್ಮ ಪರವಾದ ಹೋರಾಟಕ್ಕೆ ಶಕ್ತಿ ತುಂಬಿಸಬೇಕಾಗಿ ಮನವಿ ಮಾಡಿದರು. ತಾಲೂಕಿನ ಎನ್.ಡಿ.ಎ ಮೈತ್ರಿಕೂಟದ ಸಮಸ್ತ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಜಿ.ವಿ. ಪ್ರಕಾಶ್, ಜೆ.ಡಿ.ಎಸ್ ತಾಲೂಕು ಅಧ್ಯಕ್ಷ ದೊಡ್ಡೇಗೌಡ, ಹೆಡಗಿಹಳ್ಳಿ ವಿಶ್ವನಾಥ್, ವೆಂಕಟಾಪುರ ಯೋಗೀಶ್, ಎನ್.ಆರ್ ಸುರೇಶ್, ಗುಂಡ ಸುರೇಶ್, ಚಿದಾನಂದ, ಸಂತೋಷ್ ಡಿ, ಕೊಂಡಜ್ಜಿ ವಿಶ್ವನಾಥ್, ಹರಿಕಾರನಹಳ್ಳಿ ಪ್ರಸಾದ್, ಸಿದ್ದಪ್ಪಾಜಿ, ಮುತ್ತಣ್ಣ, ಮುನಿಯೂರು ರಂಗಸ್ವಾಮಿ, ಗೊಟ್ಟಿಕೆರೆ ಕಾಂತರಾಜು ಸೇರಿದಂತೆ ಎನ್.ಡಿ.ಎ ಮೈತ್ರಿಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
    user_Manohara
    Manohara
    Local News Reporter ತುರುವೇಕೆರೆ, ತುಮಕೂರು, ಕರ್ನಾಟಕ•
    23 hrs ago
  • ಬೆಳ್ತಂಗಡಿ ತಾಲೂಕಿನ ಸುತ್ತ ಕಾಡಾನೆಗಳ ಹಾವಳಿ ನಿರಂತರವಾಗಿ ಮುಂದುವರಿಕೆ ಬೆಳ್ತಂಗಡಿ ತಾಲೂಕಿನ ಸುತ್ತ ಕಾಡಾನೆಗಳ ಹಾವಳಿ ನಿರಂತರವಾಗಿ ಮುಂದುವರಿದಿದ್ದು ನರ ಹಂತಕ ಕಾಡಾನೆ ಇನ್ನೂ ಕೊಕ್ಕಡ ಪರಿಸರದಲ್ಲಿಯೇ ಓಡಾಟ ನಡೆಸುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ. ಮಂಗಳವಾರ ರಾತ್ರಿಯ ವೇಳೆ ಹತ್ಯಡ್ಕ ಗ್ರಾಮದ ದರ್ಭೇತಡ್ಕ ದಿನಕರ ಗೋಖಲೆ ಯವರಲ್ಲಿ ಮನೆಯಿಂದ 40-50ಫೀಟು ಸಮೀಪ ಕಾಡಾನೆ ಬಂದಿದ್ದು ತೋಟದಲ್ಲಿ ವ್ಯಾಪಕವಾಗಿ ಕೃಷಿಗೆ ಹಾನಿಯುಂಟು ಮಾಡಿದೆ. ತೋಟದಲ್ಲಿನ ತೆಂಗಿನ ಗಿಡಗಳನ್ನು ಹಾಗೂ ಬಾಳೆ ಅಡಿಕೆ ಗಿಡಗಳನ್ನು ನಾಶಗೊಳಿಸಲಾಗಿದೆ ಕಾಡಾನೆಗಳು ಪ್ರತಿನಿತ್ಯ ಈ ಪರಿಸರದಲಲ್ಲಿ ಓಡಾಟ ನಡೆಸುತ್ತಿದ್ದು ಜನರು ಮನೆಗಳಿಂದ ಹೊರ ಬರಲೂ ಭಯ ಪಡುವಂತಹ ವಾತಾವರಣವಿದೆ ಕೊಕ್ಕಡ ಪರಿಸರದಲ್ಲಿ ಈಗಾಗಲೇ ಇಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದು ಆನೆಗಳನ್ನು ಓಡಿಸಲು ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸುತ್ತಿದ್ದಾರೆ  ಆದರೆ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳಲಾಗುತ್ತಿಲ್ಲ. ಇಲಾಖೆಯ ನಿರ್ಲಕ್ಷ್ಯದ ವಿರುದ್ದ ಹೋರಾಟ ನಡೆಸಲು ಸ್ಥಳೀಯ ನಾಗರಿಕರು ಸಿದ್ದತೆ ನಡೆಸುತ್ತಿದ್ದಾರೆ.
    1
    ಬೆಳ್ತಂಗಡಿ ತಾಲೂಕಿನ ಸುತ್ತ ಕಾಡಾನೆಗಳ ಹಾವಳಿ ನಿರಂತರವಾಗಿ ಮುಂದುವರಿಕೆ
ಬೆಳ್ತಂಗಡಿ ತಾಲೂಕಿನ ಸುತ್ತ ಕಾಡಾನೆಗಳ ಹಾವಳಿ ನಿರಂತರವಾಗಿ ಮುಂದುವರಿದಿದ್ದು ನರ ಹಂತಕ ಕಾಡಾನೆ ಇನ್ನೂ ಕೊಕ್ಕಡ ಪರಿಸರದಲ್ಲಿಯೇ ಓಡಾಟ ನಡೆಸುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ. ಮಂಗಳವಾರ ರಾತ್ರಿಯ ವೇಳೆ ಹತ್ಯಡ್ಕ ಗ್ರಾಮದ ದರ್ಭೇತಡ್ಕ ದಿನಕರ ಗೋಖಲೆ ಯವರಲ್ಲಿ ಮನೆಯಿಂದ 40-50ಫೀಟು ಸಮೀಪ ಕಾಡಾನೆ ಬಂದಿದ್ದು ತೋಟದಲ್ಲಿ ವ್ಯಾಪಕವಾಗಿ ಕೃಷಿಗೆ ಹಾನಿಯುಂಟು ಮಾಡಿದೆ. ತೋಟದಲ್ಲಿನ ತೆಂಗಿನ ಗಿಡಗಳನ್ನು ಹಾಗೂ ಬಾಳೆ ಅಡಿಕೆ ಗಿಡಗಳನ್ನು ನಾಶಗೊಳಿಸಲಾಗಿದೆ ಕಾಡಾನೆಗಳು ಪ್ರತಿನಿತ್ಯ ಈ ಪರಿಸರದಲಲ್ಲಿ ಓಡಾಟ ನಡೆಸುತ್ತಿದ್ದು ಜನರು ಮನೆಗಳಿಂದ ಹೊರ ಬರಲೂ ಭಯ ಪಡುವಂತಹ ವಾತಾವರಣವಿದೆ
ಕೊಕ್ಕಡ ಪರಿಸರದಲ್ಲಿ ಈಗಾಗಲೇ ಇಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದು ಆನೆಗಳನ್ನು ಓಡಿಸಲು ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸುತ್ತಿದ್ದಾರೆ  ಆದರೆ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳಲಾಗುತ್ತಿಲ್ಲ. ಇಲಾಖೆಯ ನಿರ್ಲಕ್ಷ್ಯದ ವಿರುದ್ದ ಹೋರಾಟ ನಡೆಸಲು ಸ್ಥಳೀಯ ನಾಗರಿಕರು ಸಿದ್ದತೆ ನಡೆಸುತ್ತಿದ್ದಾರೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    2 hrs ago
  • ಮಂಗಳೂರಿನ ವಾಮಂಜೂರು ಕೆತ್ತಿಕಲ್‌ನಲ್ಲಿ ಮತ್ತೆ ಭೂಕುಸಿತ; ರಸ್ತೆಗೆ ಉರುಳಿದ ಬೃಹತ್ ಬಂಡೆಗಳು ಮಂಗಳೂರು : ವಾಮಂಜೂರು ಕೆತ್ತಿಕಲ್‌ನಲ್ಲಿ ಮತ್ತೆ ಭೂಕುಸಿತ; ರಸ್ತೆಗೆ ಉರುಳಿದ ಬೃಹತ್ ಬಂಡೆಗಳು
    1
    ಮಂಗಳೂರಿನ ವಾಮಂಜೂರು ಕೆತ್ತಿಕಲ್‌ನಲ್ಲಿ ಮತ್ತೆ ಭೂಕುಸಿತ; ರಸ್ತೆಗೆ ಉರುಳಿದ ಬೃಹತ್ ಬಂಡೆಗಳು
ಮಂಗಳೂರು : ವಾಮಂಜೂರು ಕೆತ್ತಿಕಲ್‌ನಲ್ಲಿ ಮತ್ತೆ ಭೂಕುಸಿತ; ರಸ್ತೆಗೆ ಉರುಳಿದ ಬೃಹತ್ ಬಂಡೆಗಳು
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.