ಅಕ್ಟೋಬರ್. 17 ರಂದು ಸಂಜೆ 7.50ಕ್ಕೆ ಕಾವೇರಿ ತೀರ್ಥೋದ್ಭವ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ–2026ರ ಜಾತ್ರೆಯ ಪ್ರಯುಕ್ತ ಶ್ರೀ ಭಗಂಡೇಶ್ವರ ಹಾಗೂ ಶ್ರೀ ತಲಕಾವೇರಿ ದೇವಾಲಯಗಳಲ್ಲಿ ನಡೆಯಲಿರುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ವೇಳಾಪಟ್ಟಿ ಪ್ರಕಟವಾಗಿದೆ. ದೇವಾಲಯದ ಪ್ರಕಟಣೆಯಂತೆ, ಸೆ.27ರಂದು ಬೆಳಗ್ಗೆ 8.45ಕ್ಕೆ ಭಾನುಸವಾರದಂದು ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಸಲ್ಲುವ ತುಲಾ ಲಗ್ನದಲ್ಲಿ ‘ಪ್ರತ್ಯೇಕ ಅಕ್ಷಿ’ ಕಾರ್ಯಕ್ರಮ ನಡೆಯಲಿದೆ. ಅ.5ರಂದು ಬೆಳಗ್ಗೆ 10.35ಕ್ಕೆ ಸೋಮವಾರದಂದು ಸಲ್ಲುವ ವೃಷಭ ಲಗ್ನದಲ್ಲಿ ‘ಆಜ್ಞಾ ಮುಹೂರ್ತ’ ನೆರವೇರಲಿದೆ. ಇನ್ನು ಅ.15ರಂದು ಮಧ್ಯಾಹ್ನ 12.35ಕ್ಕೆ ಗುರುವಾರದಂದು ಸಲ್ಲುವ ಧನು ಲಗ್ನದಲ್ಲಿ ‘ಅಕ್ಷಯ ಪಾತ್ರೆ’ ಕಾರ್ಯಕ್ರಮ ನಡೆಯಲಿದೆ. ಅದೇ ದಿನ ಸಂಜೆ 6.03ಕ್ಕೆ ಸಲ್ಲುವ ಮೀನ ಲಗ್ನದಲ್ಲಿ ‘ಕಾಣಿಕೆ ಡಬ್ಬಿ’ಗಳಿಗೆ ಪೂಜೆ ನೆರವೇರಿಸಲಾಗುತ್ತದೆ. ತಲಕಾವೇರಿಯಲ್ಲಿ ಅ.17ರಂದು ತೀರ್ಥೋದ್ಭವ ಕಾವೇರಿ ತುಲಾ ಸಂಕ್ರಮಣದ ಪ್ರಮುಖ ಧಾರ್ಮಿಕ ಕಾರ್ಯಕ್ರಮವಾದ ಪವಿತ್ರ ತೀರ್ಥೋದ್ಭವ ಅ.17ರಂದು ತಲಕಾವೇರಿಯಲ್ಲಿ ನಡೆಯಲಿದೆ. ಪ್ರಕಟಣೆಯ ಪ್ರಕಾರ, ಅಂದು ರಾತ್ರಿ 7.50ಕ್ಕೆ ಸಲ್ಲುವ ಮೇಷ ಲಗ್ನದಲ್ಲಿ ಶ್ರೀ ತಲಕಾವೇರಿ ದೇವಾಲಯದಲ್ಲಿ ಪವಿತ್ರ ತೀರ್ಥೋದ್ಭವದ ಕಾರ್ಯಕ್ರಮ ನಡೆಯಲಿದೆ. ಪ್ರತಿ ವರ್ಷ ತುಲಾ ಸಂಕ್ರಮಣದ ಸಂದರ್ಭದಲ್ಲಿ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ ನಡೆಯಲಿದ್ದು, ಈ ಸಂದರ್ಭದಲ್ಲಿ ತಲಕಾವೇರಿ ಹಾಗೂ ಭಾಗಮಂಡಲಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಾರೆ. ‘ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ’ ಜಾತ್ರೆಯ ಹಿನ್ನೆಲೆಯಲ್ಲಿ ಭಕ್ತರ ಅನುಕೂಲಕ್ಕಾಗಿ ಧಾರ್ಮಿಕ ಕಾರ್ಯಕ್ರಮಗಳನ್ನು ನಿಗದಿತ ಮುಹೂರ್ತಗಳಲ್ಲಿ ನಡೆಸಲು ದೇವಾಲಯದ ವತಿಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ.

- ಮಡಿಕೇರಿ ನಗರದಲ್ಲಿ ಅದ್ದೂರಿಯಾಗಿ ನಡೆದ ಸಾಮೂಹಿಕ ಗಣೇಶ ಮೆರವಣಿಗೆ ಮಡಿಕೇರಿ ನಗರದಲ್ಲಿ ಪ್ರತಿಷ್ಟಾಪಿಸಲಾಗಿದ್ದ ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ ಇಂದು ನಡೆಯಿತು. ಸಂಜೆ ಅಲಂಕೃತ ವಾಹನಗಳಲ್ಲಿ ಗಣೇಶ ಮೂರ್ತಿಯನ್ನು ಇರಿಸಿ ವಾದ್ಯದೊಂದಿಗೆ ಮೆರವಣಿಗೆ ಮಾಡಿ ನಂತರ ವಿಸರ್ಜಿಸಲಾಯಿತು.1
- All About,Irregularities/Misuse of #WaqfProperties related with #JamiaNizamia *ಭಾರತ ನಲ್ಲಿ ವೈರಲ್*1
- ಸಂಗಮೇಶ್ವರ ಪೇಟೆಯಿಂದ ಬಾಳೆಹೊನ್ನೂರುವರೆಗೂ ಬೃಹತ್ ಪಾದಯಾತ್ರೆ ಮೂಲಕ ತೆರಳಿ ಮನವಿ ಸಲ್ಲಿಸಲು ನಿರ್ಧಾರ. ಚಿಕ್ಕಮಗಳೂರು : ಮಲೆನಾಡಿಗೆ ಮಾರಕವಾಗಿರುವ ಕಸ್ತೂರಿರಂಗನ್ ವರದಿ ಜಾರಿಯನ್ನ ವಿರೋಧಿಸಿ ಮಲೆನಾಡಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಇದೇ 19 ರಂದು ಸಿಎಂ ಡಿ.ಕೆ ಶಿವಕುಮಾರ್ ಬಾಳೆಹೊನ್ನೂರು ಪಟ್ಟಣದಲ್ಲಿ ರೈತರು ಹಾಗೂ ವಿವಿಧ ಸಂಘಟನೆಗಳೊಂದಿಗೆ ಸಭೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಿರುವ ರೈತರು ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹಾಗೂ ಜಾಗರ ಹೋಬಳಿಯ ಎಲ್ಲ ನಾಗರೀಕರು ಹಾಗೂ ರೈತರು ಸಂಗಮೇಶ್ವರ ಪೇಟೆಯಿಂದ ಬೃಹತ್ ಪಾದಯಾತ್ರೆ ಮೂಲಕ ತೆರಳಿ ಸಿಎಂಗೆ ಮನವಿ ಸಲ್ಲಿಸಲು ಸಿರ್ಧರಿಸಿದ್ದಾರೆ. ಈ ಪಾದಯಾತ್ರೆಯಲ್ಲಿ ಸರ್ವ ಪಕ್ಷ ಹಾಗೂ ಎಲ್ಲ ಸಂಘಟನೆಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆ.1
- ನಂಜನಗೂಡಿನ ಸರಕಾರಿ ಹಿರಿಯ ದಳವಾಯಿ ಪ್ರಾಥಮಿಕ ಶಾಲೆಯಲ್ಲಿ ಎಲ್ಕೆಜಿ ಮಕ್ಕಳಿಂದ ಚದ್ಮವೇಷ ಸ್ಪರ್ಧೆ. ನಂಜನಗೂಡು ತಾಲೂಕಿನ : ಪಟ್ಟಣದ ಅತಿ ದೊಡ್ಡ ದಳವಾಯಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಗಿನ ಪ್ರಾರ್ಥನಾ ಸಮಯದಲ್ಲಿ ಎಲ್ಕೆಜಿ ಮಕ್ಕಳಿಂದ ಚದ್ಮ ವೇಷ ಸ್ಪರ್ಧೆ ನಡೆಯಿತು . ಮಕ್ಕಳು ಹಣ್ಣಿನ ಹಾಗೂ ತರಕಾರಿ ವಿವಿಧ ವೇಷಗಳನ್ನು ಧರಿಸಿ ಪ್ರದರ್ಶನ ನೀಡಿದರು. ಈಸ್ಪರ್ಧೆಯನ್ನು ಉದ್ದೇಶಿಸಿ ಸಹ ಶಿಕ್ಷಕಿಯಾದ ಮಮತಾ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ನಾಗೇಶ್ ಸಿಬ್ಬಂದಿ ವರ್ಗ ಹಾಜರಿದ್ದರು. ಎಲ್ಲಾ ಶಿಕ್ಷಕರು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಈ ಪ್ರದರ್ಶನದಲ್ಲಿ ಮಾರ್ಗದರ್ಶಿ ಶಿಕ್ಷಕಿಯಾಗಿ ಶಿಲ್ಪಾ ಅವರು ಭಾಗವಹಿಸಿದ್ದರು. ಶಿಲ್ಪ ಅವರು ಎಲ್ಲ ಶಿಕ್ಷಕರಿಗೆ ಅಭಿನಂದನೆಯನ್ನು ಸಲ್ಲಿಸಿದರು.4
- ಬಂಡಿಪುರ ಸಫಾರಿ ಹಣ ಎಲ್ಲಿಗೆ ಹೋಗುತ್ತಿದೆ? ಕಾಡಂಚಿನ ಜನರ ಸಮಸ್ಯೆಗಳಿಗೆ ಆದ್ಯತೆ ನೀಡಲು ರೈತ ಸಂಘ ಒತ್ತಾಯ. ಗುಂಡ್ಲುಪೇಟೆ: ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪ್ರತಿನಿತ್ಯ ಸಫಾರಿ ನಡೆಯುತ್ತಿದ್ದು, ಇದರಿಂದ ಸರ್ಕಾರಕ್ಕೆ ಹೆಚ್ಚಿನ ಆದಾಯ ಬರುತ್ತಿದೆ. ಆದರೆ ಕಾಡಂಚಿನ ಗ್ರಾಮಗಳ ಜನರು ಮಾನವ–ವನ್ಯಜೀವಿ ಸಂಘರ್ಷ, ಬೆಳೆ ಹಾನಿ, ಜಾನುವಾರುಗಳ ಮೇಲೆ ದಾಳಿ ಹಾಗೂ ಜೀವಭಯ ಎದುರಿಸುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಿಳಿಸಿದೆ. ವನ್ಯಜೀವಿ ದಾಳಿ ಸಂದರ್ಭದಲ್ಲಿ ತ್ವರಿತವಾಗಿ ಕಾರ್ಯಾಚರಣೆ ನಡೆಸಲು ಅಗತ್ಯ ಸಿಬ್ಬಂದಿ, ಕ್ಯಾಮೆರಾ, ಡ್ರೋನ್ ಹಾಗೂ ಇತರೆ ಸುರಕ್ಷತಾ ಸೌಲಭ್ಯಗಳು ಸಮರ್ಪಕವಾಗಿಲ್ಲ ಎಂಬುದು ರೈತರ ಆರೋಪವಾಗಿದೆ. ಸಫಾರಿಯಿಂದ ಬರುವ ಆದಾಯದಲ್ಲಿ ಕಾಡಂಚಿನ ಗ್ರಾಮಗಳ ಸುರಕ್ಷತೆ, ಮೂಲಸೌಕರ್ಯ ಹಾಗೂ ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ ಆದ್ಯತೆ ನೀಡಬೇಕು ಎಂದು ಸಂಘಟನೆ ಒತ್ತಾಯಿಸಿದೆ. ಈ ಕುರಿತು ಸಫಾರಿ ಆದಾಯ ಎಷ್ಟು, ಅದನ್ನು ಎಲ್ಲಿ ಮತ್ತು ಹೇಗೆ ಬಳಸಲಾಗಿದೆ, ಕಾಡಂಚಿನ ಗ್ರಾಮಗಳ ಅಭಿವೃದ್ಧಿಗೆ ಹಾಗೂ ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ ಎಷ್ಟು ಹಣ ಖರ್ಚಾಗಿದೆ ಎಂಬ ಮಾಹಿತಿಯನ್ನು ಪಡೆಯಲು ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಲಾಗಿದೆ. ಸಫಾರಿ ವಿರೋಧಿಸುವುದಿಲ್ಲ. ಆದರೆ ಸಫಾರಿ ಆದಾಯ ಪಾರದರ್ಶಕವಾಗಿ ಬಳಕೆಯಾಗಬೇಕು. ಕಾಡು ಮತ್ತು ಕಾಡಂಚಿನ ಜನರ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಸಂಘಟನೆಯ ಅಧ್ಯಕ್ಷೀಯ ಮಂಡಳಿ ಸದಸ್ಯ ಹೊನ್ನೂರು ಪ್ರಕಾಶ್ ಒತ್ತಾಯಿಸಿದ್ದಾರೆ.4
- ಜೆಸ್ಕಾಂ ಕಚೇರಿ ಮುಂದೆ ಕೃಷಿಕಂಸೆಟ್ಗಳಿಗೆ ಸಮರ್ಪಕ ವಿದ್ಯುತ್ ನೀಡುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ ಟಿ. ನರಸೀಪುರ ಅಸಮರ್ಪಕ ವಿದ್ಯುತ್ ಪೂರೈಕೆ: ರೈತರು ಸಂಕಷ್ಟದಲ್ಲಿ. ಟಿ. ನರಸೀಪುರ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿದ್ಯುತ್ ಪೂರೈಕೆಯಲ್ಲಿ ಪದೇಪದೇ ವ್ಯತ್ಯಯ ಉಂಟಾಗುತ್ತಿರುವುದರಿಂದ ನೀರಾವರಿ ವ್ಯವಸ್ಥೆಗೆ ತೊಂದರೆಯಾಗಿದ್ದು, ಹೊಲಗಳಲ್ಲಿ ಬೆಳೆದಿರುವ ಬೆಳೆಗಳು ನೀರಿನ ಕೊರತೆಯಿಂದ ಒಣಗುವ ಆತಂಕ ಎದುರಾಗಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ನಿಗದಿತ ಸಮಯದಲ್ಲಿ ಸಮರ್ಪಕ ವೋಲ್ಟೇಜ್‌ನೊಂದಿಗೆ ವಿದ್ಯುತ್ ಪೂರೈಕೆ ಮಾಡದಿರುವುದರಿಂದ ಮೋಟಾರ್‌ಗಳನ್ನು ಚಾಲನೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ಈಗಾಗಲೇ ಬೆಳೆಗಳಿಗೆ ಸಾಕಷ್ಟು ಖರ್ಚು ಮಾಡಿರುವ ರೈತರಿಗೆ ವಿದ್ಯುತ್ ಸಮಸ್ಯೆ ಮತ್ತಷ್ಟು ಆರ್ಥಿಕ ಹೊರೆ ತಂದಿದೆ. ವಿದ್ಯುತ್ ಸಮಸ್ಯೆಯಿಂದ ಬೆಳೆ ಹಾನಿಯಾದರೆ ರೈತರ ಪರಿಸ್ಥಿತಿ ಮತ್ತಷ್ಟು ದುಸ್ತರವಾಗಲಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ನಿಗದಿತ ಸಮಯದಲ್ಲಿ ನಿರಂತರ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು. ವಿದ್ಯುತ್ ಲೈನ್‌ಗಳು, ಟ್ರಾನ್ಸ್‌ಫಾರ್ಮರ್‌ಗಳು ಹಾಗೂ ಇತರೆ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣವೇ ಸರಿಪಡಿಸಿ ರೈತರ ಬೆಳೆಗಳನ್ನು ರಕ್ಷಿಸಲು ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಸಂಬಂಧಪಟ್ಟ ವಿದ್ಯುತ್ ಇಲಾಖೆ ಅಧಿಕಾರಿಗಳು ತುರ್ತಾಗಿ ಸಮಸ್ಯೆ ಪರಿಹರಿಸಿ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂಬುದು ರೈತರ ಆಗ್ರಹವಾಗಿದೆ. ರೈತರ ಬೆಳೆ ಉಳಿಸಲು ವಿದ್ಯುತ್ ಪೂರೈಕೆ ಸಮರ್ಪಕವಾಗಲಿಯಂದು ರೈತರ ಒತ್ತಾಯ . ಈ ಪ್ರತಿಭಟನೆಯಲ್ಲಿ ಕಿರಗುಸೂರು ಶಂಕರ್ ಕೆಜಿ ಗುರುಸ್ವಾಮಿ ಕುರುಬುರ್ ಗೌರಿಶಂಕರ್ ವಾಚ್ ಕುಮಾರ್ ಆದಿ ಬೆಟ್ಟಳ್ಳಿ ನಂಜುಂಡಸ್ವಾಮಿ ಅಪ್ಪಣ್ಣ ಕುರುಬೂರು ಸಿದ್ದೇಶ್, ಬಿಪಿ ಪರಶಿವಮೂರ್ತಿ, ಕರುವಟಿ ಉಮೇಶ್ ಕುರುಬೂರ ಪ್ರದೀಪ್ ಸೋಮಶೇಖರ್ ಬನ್ನಳ್ಳಿ ಹುಂಡಿ ರಾಜೇಂದ್ರ ನಿಲ್ಸೋಗೆ ಉಮೇಶ್ ಪ್ರತಾಪ್, ಕುಮಾರ್ ಕೆ ಎಂ, ವಾಟಾಳ್ ಪುರ ಸತೀಶ್ ಕುಮಾರ್ ಹೊಸಪುರ ನಾಗರಾಜು ಮಾದೇಶ್ ಮಾದೇವಮೂರ್ತಿ ಬಸವರಾಜು ಎಸ್ ಕೆಬ್ಬೆ ಹುಂಡಿ, ಮಾದೇವಸ್ವಾಮಿ ಮಾವ್ನಹಳ್ಳಿ, ತರಕಾರಿ ನಿಂಗರಾಜು ಬನ್ನಳ್ಳಿ ಶಾಂತರಾಜು ಆದಿ ಬೆಟ್ಟಳ್ಳಿ ಮಹೇಶ ಕನ್ನಳ್ಳಿ ಮೊಳೆ ಮಣಿಕಂಠ ಲೋಕೇಶ್ ರವೀಂದ್ರ ಮಾದೇಶ್ ನಿಲ್ಸೋಗೆ ನಾಗರಾಜು ಚಿನ್ನಸ್ವಾಮಿ ಕುರುಬೂರು ಶಿವಪ್ರಸಾದ್ ವೀರೇಶ್ ಎಲ್ ಐ ಸಿ ಪ್ರದೀಪ್ ಎಬಿ ಮಂಜುನಾಥ್ ನವೀನ ತೊಟ್ಟುವಾಡಿ ಇನ್ನು ಮುಂತಾದ ರೈತರು ಭಾಗವಹಿಸಿದ್ದರು1
- ಹುಳಿಯಾರು ಪಟ್ಟಣ ಪಂಚಾಯಿತಿಯ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ಕೆರೆ ಸೂರಗೊಂಡನಹಳ್ಳಿ ಸರ್ವೆ ನಂಬರ್ 32 ರ ಹೊಸಹಳ್ಳಿ ಕೈಮರದ ಬಳಿ ಐದು ಎಕರೆ ಜಾಗ ಮಂಜೂರು1
- All About,How the political Influencial are misuing #WaqfProperties #WaqfFunds to their advantage *ಭಾರತ ನಲ್ಲಿ ವೈರಲ್*1