ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಎಂ.ಟಿ.ಸುಂದರ ಕುಲಾಲ್ ನಿಧನ ತೆಂಕುತಿಟ್ಟಿನ ಹಿರಿಯ ಹಾಗೂ ಸಮರ್ಥ ಯಕ್ಷಗಾನ ಕಲಾವಿದ ಎಂ.ಟಿ.ಸುಂದರ್ ಕುಲಾಲ್ (79) ಅವರು ಸೆ.15ರಂದು ನಿಧನರಾದರು. ಆರು ದಶಕಗಳಿಗೂ ಹೆಚ್ಚು ಕಾಲ ಯಕ್ಷಗಾನ ಕ್ಷೇತ್ರದಲ್ಲಿ ಕಲಾಸೇವೆ ಸಲ್ಲಿಸಿದ್ದ ಅವರು, ಪತ್ನಿ, ಪುತ್ರಿ ಹಾಗೂ ಇಬ್ಬರು ಪುತ್ರರು ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಸೋದರ ಮಾವ ಬೇತಕುಂಞ ಕುಲಾಲ್ ಅವರಿಂದ ಯಕ್ಷಗಾನ ಕಲೆಯನ್ನು ಅಭ್ಯಾಸ ಮಾಡಿದ ಅವರು ಧರ್ಮಸ್ಥಳ, ಮುಲ್ಕಿ, ಸುರತ್ಕಲ್, ಕುಂಬ್ಳೆ, ಬಪ್ಪನಾಡು ಹಾಗೂ ಕಟೀಲು ಮೇಳಗಳಲ್ಲಿ ಸತತ ಆರು ದಶಕಗಳ ಕಾಲ ಕಲಾಸೇವೆ ಸಲ್ಲಿಸಿದ್ದರು. ಬಹುಮುಖ ಪ್ರತಿಭೆಯಾಗಿದ್ದ ಅವರು ರಾಜವೇಷ, ಪೋಷಕ ವೇಷ, ಸ್ತ್ರೀವೇಷ ಹಾಗೂ ಹಾಸ್ಯ ಪಾತ್ರಗಳನ್ನು ಸಮರ್ಥವಾಗಿ ನಿರ್ವಹಿಸಿ ಯಕ್ಷಗಾನ ರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಅಲ್ಲದೆ ಭಾಗವತಿಕೆಯಲ್ಲೂ ವಿಶೇಷ ಪರಿಣತಿ ಹೊಂದಿದ್ದರು. ಇಳಿ ವಯಸ್ಸಿನಲ್ಲೂ ಯಕ್ಷಗಾನ ರಂಗದೊಂದಿಗಿನ ತಮ್ಮ ನಂಟನ್ನು ಮುಂದುವರಿಸಿದ್ದ ಕುಲಾಲ್ ಅವರು ಮೇಳದ ಪ್ರತಿನಿಧಿಯಾಗಿ ಕಲಾಕ್ಷೇತ್ರದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಪ್ರತಿವರ್ಷ ನಡೆಯುವ ಯಕ್ಷನಿಧಿ ಸಮಾವೇಶದಲ್ಲೂ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಕಳೆದ ತಿಂಗಳಷ್ಟೇ ಕಟೀಲು ಮೇಳದ ಅಭಿಮಾನಿಗಳು ಅವರ ನಿವಾಸಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದ್ದರು. ಪ್ರತಿಷ್ಠಿತ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಭಾಜನರಾಗಿದ್ದ ಅವರಿಗೆ ಕಳೆದ ವರ್ಷ ಸಂಸ್ಥೆಯ ವತಿಯಿಂದ ₹50 ಸಾವಿರ ನಿಧಿಯನ್ನೊಳಗೊಂಡ ಸುವರ್ಣ ಪುರಸ್ಕಾರ ನೀಡಿ ಗೌರವಿಸಲಾಗಿತ್ತು.

- ವಿವಿಧೆಡೆ ಅದ್ದೂರಿ ಗಣೇಶೋತ್ಸವ, ಭವ್ಯ ಶೋಭಾಯಾತ್ರೆ ಮೆರವಣಿಗೆ... ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಗಣೇಶೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ನಗರದ ಉಳ್ಳಾಲ ವಿದ್ಯಾವಿನಾಯಕ ಉತ್ಸವ ಸಮಿತಿ ವತಿಯಿಂದ 43 ನೇ ವರ್ಷದ ಗಣೇಶೋತ್ಸವ ಅಚರಣೆ ನಡೆದಿದೆ.ಹಾಗೂ ಬಗಂಬಿಲ ಸತ್ಯನಾರಾಯಣ ಮಂದಿರದಲ್ಲಿ 19 ವರ್ಷದ ಗಣೇಶೋತ್ಸವದ ಶೋಭಾಯಾತ್ರೆ ಮೆರವಣಿಗೆ ಅದ್ದೂರಿಯಾಗಿ ಜರುಗಿತು.ಇನ್ನೂ ಮೆರವಣಿಗೆಯಲ್ಲಿ ಕುಣಿತ ಭಜನಾ ತಂಡ, ಚೆಂಡೆ, ಸ್ತಬ್ಧ ಚಿತ್ರಗಳು ಭಾಗ ವಹಿಸಿದ್ದವು,1
- ನಟ ಅರವಿಂದ್ ಬೋಳಾರ್‌ಗೆ ಧರ್ಮ ಸಂಕಟ ; ಮುಸ್ಲಿಮರನ್ನು ಹೊಗ್ಗಳಿದ್ದಕ್ಕೆ ಆಕ್ರೋಶ1
- ಸುಂಟಿಕೊಪ್ಪದಲ್ಲಿ ಸಂಭ್ರಮದ ಶ್ರೀ ಗೌರಿ- ಗಣೇಶೋತ್ಸವ ಮೆರವಣಿಗೆ ಸುಂಟಿಕೊಪ್ಪ ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿಯ ವತಿಯಿಂದ 62ನೇ ವರ್ಷದ ಗೌರಿ ಮೆರವಣಿಗೆ ಮತ್ತು ಪ್ರತಿಷ್ಠಾಪನೆಯು ಶ್ರದ್ಧಾಭಕ್ತಿಯಿಂದ ಸೋಮವಾರ ನಡೆಯಿತು. ಕೋದಂಡ ರಾಮ ದೇವಾಲಯದಲ್ಲಿ ವಿಶೇಷ ಪೂಜೆಯ ನಂತರ ಬೆಳಿಗ್ಗೆ 9.30 ಗಂಟೆಗೆ ದೇವಾಲಯದಿಂದ ಹೊರಟು ಗದ್ದೆಹಳ್ಳ ಪಟ್ಟೆಮನೆ ಗೌರಮ್ಮನ ಬಾವಿಯಿಂದ ಗಂಗಾ ಜಲ ತಂದು ಗೌರಮ್ಮನಿಗೆ ಹೂವಿನ ಪೂಜೆ, ಗಂಗಾಪೂಜೆಯೊಂದಿಗೆ ಆಕರ್ಷಕ ಮಂಟಪದಲ್ಲಿ ಪಟ್ಟಣದ ಮುಖ್ಯ ಬೀದಿಗಳಲ್ಲಿ ನಾದಸ್ವರ, ಯುವತಿಯರು ಕಳಸ ಹೊತ್ತು, ಭಜನೆಯೊಂದಿಗೆ ನೂರಾರು ಭಕ್ತರೊಂದಿಗೆ ಮೆರವಣಿಗೆ ಮೂಲಕ ಸಾಗಿ ಬೆಳಿಗ್ಗೆ 11ರ ಸಲ್ಲುವ ತುಲಾ ಲಗ್ನದಲ್ಲಿ ಪ್ರತಿಷ್ಠಾಪಿಸಲಾಯಿತು. ನಂತರ ಬೆಳಿಗ್ಗೆ 11.45ಗಂಟೆಗೆ ತುಲಾ ಲಗ್ನದಲ್ಲಿ ಗಣಪತಿ ಮೂರ್ತಿಯ ಪ್ರತಿಷ್ಠಾಪನೆ ನಡೆಯಿತು. ಅರ್ಚಕರಾದ ಮಂಜುನಾಥ್ ಭಟ್, ಹಾ.ಮ.ಗಣೇಶ್ ಶರ್ಮ ಅವರ ನೇತೃತ್ವದಲ್ಲಿ ಮಹಾಪೂಜೆ,ಮಹಾಮಂಗಳಾತಿ, ಪ್ರಸಾದ ವಿನಿಯೋಗ ನೆರವೇರಿತು.1
- ಶಿವಮೊಗ್ಗದಲ್ಲಿ ಸಂಭ್ರಮದ ಗಣೇಶೋತ್ಸವ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ ಮತ್ತೂರು ರಸ್ತೆಯಲ್ಲಿ ಭಕ್ತಿ ಸಂಭ್ರಮ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ1
- ಭದ್ರಾ ನಾಲೆಗಳಲ್ಲಿ ತಕ್ಷಣ ನೀರು ಹರಿಸಲು ಆಗ್ರಹಿಸಿ ರೈತರಿಂದ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ಭದ್ರಾವತಿ ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಆಗ್ರಹಿಸಿದರು. ಭದ್ರಾವತಿ: ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಶಾಸಕರಿಗೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಕಲ್ಲಹಳ್ಳಿ ಶೇಖರ್ ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಾಯೋಗಿಕವಾಗಿ ನೀರು ಹರಿಸುವುದನ್ನು ಸರ್ಕಾರ ತಕ್ಷಣ ನಿಲ್ಲಿಸಬೇಕು. ಪ್ರಸ್ತುತ ಮಳೆ ಕೊರೆತೆಯಿಂದಾಗಿ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇದ್ದು, ಅಲ್ಲದೆ ಇದೀಗ ತಾಲೂಕಿನ ರೈತರ ಬೆಳೆಗಳಿಗೆ ನೀರಿನ ಅಗತ್ಯವಿದೆ. ತಕ್ಷಣ ಕಾಲುವೆಗಳಲ್ಲಿ ನೀರು ಹರಿಸುವ ಮೂಲಕ ರೈತರ ಹಿತಕಾಪಾಡುವಂತೆ ಆಗ್ರಹಿಸಿದರು. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ತಾಲೂಕಿನಲ್ಲಿ ಈ ಬಾರಿ ಮಳೆ ಕೊರತೆಯಾಗಿದೆ. ಇದರಿಂದಾಗಿ ನೀರಿನ ಸಮಸ್ಯೆ ಎದುರಾಗಿದೆ. ಗ್ರಾಮಗಳಲ್ಲಿ ಜನರಿಗೆ ಹಾಗು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಈ ಹಿನ್ನಲೆಯಲ್ಲಿ ಜಲಸಂಪನ್ಮೂಲ ಖಾತೆ ಸಚಿವರಾದ ಚಲುವರಾಯಸ್ವಾಮಿಯವರಿಗೆ ಪತ್ರ ಬರೆಯಲಾಗಿದ್ದು, ತಕ್ಷಣ ಎಡ ಮತ್ತು ಬಲದಂಡೆ ನಾಲೆ ಹಾಗು ಗೊಂದಿ ಜಲಾಶಯದ ನಾಲೆಗಳಿಗೆ ನೀರು ಹರಿಸುವಂತೆ ಕೋರಲಾಗಿದೆ. ಇದಕ್ಕೆ ಸಚಿವರು ಪೂರಕವಾಗಿ ಸ್ಪಂದಿಸುವ ವಿಶ್ವಾಸವಿದೆ. ಸಚಿವರು ಕೈಗೊಳ್ಳುವ ತೀರ್ಮಾನದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಅಲ್ಲದೆ ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ(ಕಾಡಾ)ದ ಅಧ್ಯಕ್ಷರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಈ ಸಂಬಂಧ ೨-೩ ದಿನಗಳಲ್ಲಿ ಸಭೆ ನಡೆಯಲಿದ್ದು, ನೀರು ಬಿಡುವ ತೀರ್ಮಾನ ಕೈಗೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ರೈತರು, ಗ್ರಾಮಸ್ಥರು ಆತಂಕಕ್ಕೆ ಒಳಗಾಗದಂತೆ ಮನವಿ ಮಾಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಮಾಜಿ ಸದಸ್ಯರಾದ ಎಸ್. ಕುಮಾರ್, ಎಚ್.ಎಲ್ ಷಡಾಕ್ಷರಿ, ಕಣ್ಣಪ್ಪ, ಶಾಂತಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.1
- ಶಿವಮೊಗ್ಗ-ಭದ್ರಾ ನದಿಯ ನೀರು ಎಡ, ಬಲ ಹಾಗೂ ಗೋಂದಿ ನಾಲೆ ಹರಿಸಲು ಬದ್ದ ಶಿವಮೊಗ್ಗ: ಭದ್ರಾ ಎಡನಾಲೆ ಮತ್ತು ಬಲನಾಲೆ ಮತ್ತು ಗೋಂದಿ ನಾಲೆ ನೀರನ್ನು ಆದಷ್ಟು ಬೇಗನೆ ಡ್ಯಾಮ್ ನಿಂದ ನೀರನ್ನು ಬಿಡಲಾಗುವುದು ಈ ವಿಚಾರವಾಗಿ ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತುಕತೆ ನಡೆಸಿದ್ದು ರೈತರು ಆತಂಕ ಪಡುವುದು ಬೇಡ ಎಂದು ಭದ್ರಾವತಿ ಶಾಸಕ ಬಿಕೆ. ಸಂಗಮೇಶ್ವರ್ ತಿಳಿಸಿದ್ದಾರೆ. ಅವರಿಂದು ತಮ್ಮ ಗೃಹಕಚೇರಿಯಲ್ಲಿ ನೆರೆದಿದ್ದ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿದ್ದ ರೈತರ ಸಭೆಯಲ್ಲಿ ಮಾತನಾಡಿದರು. ಕುಡಿಯುವ ಹಾಗೂ ದನಕರುಗಳಿಗೆ ನೀರು ಅವಶ್ಯಕತೆ ಇದೆ ಎಂಬ ವಿಚಾರ ನನಗೂ ತಿಳಿದಿದೆ. ಆದ್ದರಿಂದ ರೈತರು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡವೆಂದು ತಿಳಿಯಪಡಿಸುತ್ತೇನೆ. ಈ ವಿಚಾರವಾಗಿ ಆದಷ್ಟು ಬೇಗನೆ ನಿರ್ಧಾರ ತೆಗೆದುಕೊಳ್ಳುತ್ತೇವೆಂದು ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿರುತ್ತಾರೆಂದರು.1
- All About,Locals defending Encroachment of #WaqfProperties under #Telangana #WaqfBoard *ಭಾರತ ನಲ್ಲಿ ವೈರಲ್*1
- ₹3,383 ಕೋಟಿ ಆಸ್ತಿ ಒಡೆಯ ಶಾಸಕ ಬೀದಿಯಲ್ಲಿ ಭಿಕ್ಷೆ ಬೇಡಿದ್ದೇಕೆ? ಕಾರಣ ವೈರಲ್! ಮುಂಬೈ ಬೀದಿಯಲ್ಲಿ ಭಿಕ್ಷುಕನಾದ ಕೋಟ್ಯಾಧೀಶ ಬಿಜೆಪಿ ಶಾಸಕ ಪರಾಗ್ ಶಾ!1