ಮಹಾಶಿವ ಧರ್ಮ ಪೀಠದ ವತಿಯಿಂದ ಆ.28 ರಂದು ಗುರುಪೂರ್ಣಿಮೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ. JUDI NEWS : ದೇವದುರ್ಗ : ತಾಲೂಕಿನ ಗಬ್ಬೂರದ ಮಹಾಶೈವ ಧರ್ಮಪೀಠದ ವತಿಯಿಂದ ಇದೇ 28 ರಂದು ಬೆಳಗ್ಗೆ 10 ಗಂಟೆಗೆ ಮಹಾತಪಸ್ವಿ ಶ್ರೀ ಕುಮಾರ ಸ್ವಾಮಿಗಳವರ 117 ನೇ ಹುಟ್ಟುಹಬ್ಬದ ಅಂಗವಾಗಿ ಮಹಾಶೈವ ಗುರುಪೂರ್ಣಿಮೆ ಹಾಗೂ ನಾಡಿನ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಪೀಠಾಧ್ಯಕ್ಷ ಮುಕ್ಕಣ್ಣ ಕರಿಗಾರ ಪ್ರಕಟಣೆಗೆ ತಿಳಿಸಿದ್ದಾರೆ. ಪೀಠಾಧ್ಯಕ್ಷರಾದ ಮುಕ್ಕಣ್ಣ ಕರಿಗಾರ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದು, ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಮತ್ತು ಖ್ಯಾತ ಸಾಹಿತಿಗಳಾದ ಡಾ.ಸಿದ್ದರಾಮ ಹೊನಕಲ್,ಕೊಪ್ಪಳದ ಜಿಲ್ಲಾ ನಿವೃತ್ತ ಶಿಕ್ಷಣಾಧಿಕಾರಿಗಳಾದ ಎಚ್.ಎಚ್.ಮೇಟಿ, ವಿಜಯಪುರದ ಪ್ರಗತಿಪರ ಚಿಂತಕರಾದ ಮಲ್ಲಿಕಾರ್ಜುನ ಶೆಂಡಗಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಹಿರಿಯ ಪತ್ರಕರ್ತರಾದ ಬಸವರಾಜ ಭೋಗಾವತಿ,ಮಹಾಶೈವ ಧರ್ಮಪೀಠದ ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ಡಾ.ಎನ್. ಹೆಚ್.ಪೂಜಾರಿ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸುವುರು. ಈ ಸಂದರ್ಭದಲ್ಲಿ ನಾಡಿನ ಸಾಧಕರು ಹಾಗೂ ಕರ್ನಾಟಕ ಸಂಗೀತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ, ಪ್ರೋ.ಮಲ್ಲೆಪುರಂ ಜಿ.ವೆಂಕಟೇಶ್ ಅವರಿಗೆ ಮಹಾ ತಪಸ್ವಿ ಶ್ರೀ ಕುಮಾರಸ್ವಾಮಿ ಸಾಹಿತ್ಯ ರತ್ನ ಪ್ರಶಸ್ತಿ,ಹಿರಿಯ ಪತ್ರಕರ್ತರು ಹಾಗೂ ಪ್ರಜಾ ಪ್ರಸಿದ್ಧಿ ಪತ್ರಿಕೆಯ ಉಪಸಂಪಾಧಕರಾದ ರಘುನಾಥರೆಡ್ಡಿ ಮನ್ಸಲಾಪುರ ಅವರಿಗೆ ಮಹಾತಪಸ್ವಿ ಶ್ರೀ ಕುಮಾರಸ್ವಾಮಿ ಪತ್ರಿಕಾಭೂಷಣ ಪ್ರಶಸ್ತಿ,ಹೆಸರಾಂತ ಕಲಾವಿದ ಗಮಕ ಕಲೆಯನ್ನು ಉಸಿರಾಗಿಸಿಕೊಂಡಿರುವ,ಖಾಸಿಂಸಾಬ್ ಮಲ್ಲಿಗೆಮಡುವು ಅವರಿಗೆ ಮಹಾತಪಸ್ವಿ ಶ್ರೀ ಕುಮಾರಸ್ವಾಮಿ ಸೇವಾ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಮಹಾಶೈವ ಧರ್ಮಪೀಠದ ಸಾಂಸ್ಕೃತಿಕ ಸಮಿತಿಯ ಸದಸ್ಯ ಬಸವರಾಜ ಶಿಣ್ಣೂರ ತಿಳಿಸಿದ್ದಾರೆ.

- ಕನ್ನಡ ಸಾಹಿತ್ಯ ಸಮ್ಮೇಳನ ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ನಡೆದ ವಿಶೇಷ ಆಕರ್ಷಣೆ ಗದಗ ಜಿಲ್ಲಾ ಮುಂಡರಗಿ ತಾಲೂಕಿನ ಕಪ್ಪತ್ತಗುಡ್ಡದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಮಾತನಾಡಿದ ಮಂಜುನಾಥ್ ಮುಧೋಳ1
- ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರಲ್ಲಿ ಸಂಭ್ರಮಾಚರಣೆ ಮನೆ ಮಾಡಿದೆ1
- ಬಳ್ಳಾರಿ ನಗರದಲ್ಲಿ ಹಲವು ಪ್ರಕರಣದಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳನ ಬಂಧನ....! ಬಳ್ಳಾರಿ ಹಲವು ಪ್ರಕರಣದಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳನ ಬಂಧನ....! ಈ ಕುರಿತು ಬಳ್ಳಾರಿ ಎಸ್ಪಿ ಸುಮನ್ ಡಿ.ಪನ್ನೇಕರ್ ಅವರಿಂದ ಸುದ್ದಿಗೋಷ್ಠಿ ಕೌಲ್ಬಜಾರ್ ಕರಿಮಾರೆಮ್ಮ ದೇವಸ್ಥಾನದ ನಿವಾಸಿ ಹನುಮಂತಪ್ಪ ಎಂಬ (28) ಮನೆಗಳ್ಳನ ಬಂಧನ ಇವನು ಬಳ್ಳಾರಿ, ವಿಜಯನಗರ, ದಾವಣಗೇರಿ,ಕೊಪ್ಪಳ, ದೊಡ್ಡ ಬಳ್ಳಾಪುರ,ಬೆಂಗಳೂರು ಹಾಗೂ ಗದಗನಲ್ಲಿ ಕಳ್ಳತನ ರಾಡ್ ಬಳಸಿ ಮನೆಗಳ್ಳತ ಮಾಡುತ್ತಿದ್ದ ಆರೋಪಿ ಹನುಮಂತ.... ಕಳ್ಳತನ ಮಾಡಿದ ಮಾಲನ್ನು ವಿವಿಧ ಶಾಪ್ಗಳಿಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಆರೋಪಿಯನ್ನು ವಶಕ್ಕೆ ಪಡೆದು ಬಂಗಾರದ ಒಡವೆ ಹಾಗೂ ಹಣ ವಶಪಡಿಸಿಕೊಳ್ಳಲಾಗಿದೆ ಒಟ್ಟು ನಾಲ್ಕು ಕೇಸ್ಗಳಲ್ಲಿ ಆರೋಪಿಯಿಂದ 13,20,000 ಮೌಲ್ಯದ 110 ಗ್ರಾಂ ಬಂಗಾರ ಹಾಗೂ 10 ಲಕ್ಷ ನಗದು ವಶ ಆರೋಪಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನು ಪಡೆದು ಹೊರಗಿದ್ರು, ತನ್ನ ಹಳೆಯ ಚಾಳಿಯನ್ನು ಬಿಟ್ಟಿಲ್ಲ ಇವನ ವಿರುದ್ದ ರಾಜ್ಯದಾದ್ಯಂತ ಒಟ್ಟು 9 ಜಿಲ್ಲೆಗಳಲ್ಲಿ 40 ಪ್ರಕರಣಗಳು ಬೆಳಕಿಗೆ ಬಂದಿದೆ. -----------------1
- ಸರ್ವಸ್ವವನ್ನು ಮೆಟ್ಟಿ ನಿಲ್ಲುವಂತ ಶಕ್ತಿ ಮಹಿಳೆಗೆ ಇದೆ:- ಡಾ ಹೀರಾ ಕುಷ್ಟಗಿ:- ಹೆಣ್ಣನ್ನು ಹೆಣ್ಣಾಗಿ ನೋಡುವದಕ್ಕಿಂತ ಹೆಣ್ಣನ್ನು ಒಬ್ಬ ಸರಿ ಸಮಾನವಾದ ಮನುಷ್ಯರಂತೆ ನೋಡಬೇಕು ಹೆಣ್ಣಿಗೆ ಈ ಜಗತ್ತನ್ನು ಗೆಲ್ಲುವ ಶಕ್ತಿ ಒಬ್ಬ ಮಹಿಳೆಗೆ ಇದ್ದು ಹೆಣ್ಣು ಏನಾನ್ನಾದರು ಸಾಧಿಸಬಲ್ಲಳು ಅದಕ್ಕಾಗಿ ಬಿ.ಎ ಪದವಿಯಲ್ಲಿ ಓದುತ್ತಿರುವ ಮಹಿಳೆಯರು ಹೆಚ್ಚು ಅಂಕ ತೆಗೆಯುವ ಮೂಲಕ ಒಳ್ಳೆಯ ಅಭ್ಯಾಸವನ್ನು ಮಾಡಿ ತಂದೆ ತಾಯಿಗಳ ಕೀರ್ತಿ ಮತ್ತು ಕಾಲೇಜಿನ ಕೀರ್ತಿ ಗಳಿಸಬೇಕು ಎಂದು ಡಾ.ನಾಗರಾಜ ಹೀರಾ ಜಿಲ್ಲಾ ನೋಡಲ್ ಅಧಿಕಾರಿಗಳು, ರಾಷ್ಟ್ರೀಯ ಸೇವಾ ಯೋಜನೆ ಶಾಲಾ ಶಿಕ್ಷಣ ಇಲಾಖೆ ಕೊಪ್ಪಳ ಇವರು ಹೇಳಿದರು. ಇಲ್ಲಿನ ಮಾತೋಶ್ರೀ ಹೊಳಿಯಮ್ಮ ಮಹಿಳಾ ಪದವಿ ಕಲಾ ಮಹಾವಿದ್ಯಾಲಯ ಕುಷ್ಟಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬಿ.ಎ ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗೆ ಸ್ವಾಗತ ಸಮಾರಂಭ ಕಾರ್ಯಕ್ರಮ ಕುರಿತು ಮಾತನಾಡಿದ ಅವರು ಆನರ್ಸ್ ಎಂಬುವದು ಬಡವರು ಕಲಿಯುವ ವಿದ್ಯಯಲ್ಲ ಆನಸ್೯ ಎಂದರೆ ಬದುಕುವ ಕಲೆ ಈ ಒಂದು ಶಿಕ್ಷಣ ಇಡೀ ಜಗತ್ತಿನ ಪ್ರಕ್ರಿಯೆಯಲ್ಲಿ ಬಿ.ಎ ಪದವಿ ಆನರ್ಸ್ ಶಿಕ್ಷಣವಾಗಿದೆ. ಆದರೆ ಇವತ್ತಿನ ಶಿಕ್ಷಣ ತಂತ್ರಜ್ಞಾನದ ಮೂಲಕ ನಾವುಗಳು ಶಿಕ್ಷಣ ಪಡೆಯಬೇಕಾಗಿದೆ. ಅದಕ್ಕಾಗಿ ನಿತ್ಯ ನಿರಂತರ ಶಿಕ್ಷಣ ಪಡೆದಾಗ ಮಾತ್ರ ನಾವುಗಳು ಸಾಧನೆ ಮಾಡಲು ಸಾಧ್ಯವಾಗುತ್ತದೆ. ಜಗತ್ತಿನಲ್ಲಿ ಹೆಣ್ಣು ಮಕ್ಕಳು ಎಂದರೆ ಒಂದು ಮಾಹಿತಿ ಕೇಂದ್ರವಿದ್ದಂತೆ ಆದರೆ ಇತಿಹಾಸದ ಪುಟಗಳಲ್ಲಿ ನಾವುಗಳು ನೋಡಿದಾಗ ಎಲ್ಲಾ ಪುಟಗಳಲ್ಲಿ ಹೆಣ್ಣು ಮೊದಲನೆಯ ಸ್ಥಾನದಲ್ಲಿ ಇದ್ದಾಳೆ.ಈ ಜಗತ್ತು ಸೃಷ್ಟಿಯಾಗಿದ್ದು ಹೆಣ್ಣಿನಿಂದ ಹೆಣ್ಣಿನಿಂದ ಮಾಹಾ ಭಾರತ, ಹೆಣ್ಣಿನಿಂದ ರಾಮಾಯಣ ಅದಕ್ಕಾಗಿ ಪ್ರತಿಯೊಬ್ಬರು ಯಾರು ಕೂಡ ಹೆದರದೆ ಉತ್ತಮ ಶಿಕ್ಷಣವಂತರಾಗಿ ಬಡವರಾದರೆ ಸರಿ ಶ್ರೀಮಂತರಾದರೆ ಸರಿ ಯಾರು ಯಾವ ಪದವಿ ಆಯ್ಕೆ ಮಾಡಿಕೊಳ್ಳುತ್ತಾರೆ ಅವರ ಮೇಲೆ ಆಲಂಬನೆ ಆಗಿರುತ್ತದೆ. ಇವತ್ತಿನ ದಿನಮಾನದಲ್ಲಿ ಚಲವದಿದ್ದರೆ ಈ ಜಗತ್ತಿನಲ್ಲಿ ಏನಾದರೂ ಸಾಧಿಸಬಹುದು ಸಾಧನೆ ಸಾಲಿನಲ್ಲಿ ನಿಂತು ಈ ಕಾಲೇಜಿನ ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣದ ಮೂಲಕ ಅಂಕವನ್ನು ಪಡೆದು ಕಾಲೇಜಿನ ಕೀರ್ತಿ ತರುವ ಮೂಲಕ ತಂದೆ ತಾಯಿಗೆ ಒಳ್ಳೆಯ ಮಕ್ಕಳಾಗಿ ಬಾಳಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸ.ಪ.ಪೂ.ಕಾಲೇಜು ದೋಟಿಹಾಳ ಉಪನ್ಯಾಸಕಿ ಶ್ರೀಮತಿ ಪ್ರಿಯದರ್ಶಿನಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು. ಪ್ರಥಮ ದರ್ಜೆಯ ಗುತ್ತಿಗೆದಾರ ರಮೇಶ ಕಾಪ್ಸೆ ಕಾರ್ಯಕ್ರಮ ಉದ್ಘಾಟಿಸಿದರು. ಮಾತೋಶ್ರೀ ಹೊಳಿಯಮ್ಮ ಮಹಿಳಾ ಪದವಿ ಕಲಾ ಮಹಾವಿದ್ಯಾಲಯ ಕಾಲೇಜು ಅಧ್ಯಕ್ಷರಾದ ಹನಮಂತಪ್ಪ ಚೌಡ್ಕಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ನಿವೃತ್ತ ಪೋಲಿಸ್ ಅಧಿಕಾರಿ ಸಿದ್ರಾಮಪ್ಪ ವಂದಾಲಿ, ಮಾಜಿ ಪಿ ಕಾಡ್೯ ಬ್ಯಾಂಕ್ ಅಧ್ಯಕ್ಷ ಮಹಾಲಿಂಗಪ್ಪ ದೋಟಿಹಾಳ, ಸೂರ್ಯಕಾಂತ ದೇಸಾಯಿ, ಮಾ.ಹೊ.ಮ.ಪ.ಕಲಾ ಕಾಲೇಜು ಪ್ರಾಂಶುಪಾಲರಾದ ತಿಪ್ಪಣ್ಣ ಬಿಜಕಲ್, ದ್ಯಾಮಣ್ಣ ಕಟ್ಟಿಹೊಲ, ಸತ್ಯಪ್ಪ ರಾಜೂರು, ಎ.ವಾಯ್.ಲೋಕರೆ, ಕ.ಕಾ.ನಿ.ಪತ್ರಕರ್ತರ ಸಂಘದ ಅಧ್ಯಕ್ಷರಾದ ಪವಾಡೆಪ್ಪ ಚೌಡ್ಕಿ, ಮಂಜುನಾಥ ಮಾಹಾಲಿಂಗಪೂರ, ಮುಖೇಶ ನಿಲೋಗಲ್, ಶಶಿಧರ ಕುಂಬಾರ, ಸಂಗಮೇಶ ಬಿಳಿಯಪ್ಪನವರ್, ಸುಂದರಕುಮಾರ ಚೌಡ್ಕಿ ಸೇರಿದಂತೆ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಹಲವರು ಉಪಸ್ಥಿತರಿದ್ದರು.2
- ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಜನ್ಮದಿನ: ಅಭಿಮಾನಿ ಬಳಗದಿಂದ ಅನ್ನ ಸಂತರ್ಪಣೆ ಕೂಡ್ಲಿಗಿ ಪಟ್ಟಣದ ಡಾ ಪುನೀತ್ ರಾಜಕುಮಾರ್ ವೃತ್ತದ ಬಳಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರ ಜನ್ಮದಿನದ ಪ್ರಯುಕ್ತ ಅಭಿಮಾನಿ ಬಳಗದ ವತಿಯಿಂದ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನೆರವೇರಿಸಿ, ಶಾಸಕರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು. ಕಾರ್ಯಕ್ರಮದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.1
- ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ1
- ಮುಂಡರಗಿ ತಾಲೂಕಿನ ಸರ್ಕಾರಿ ತಾಲೂಕು ಆಸ್ಪತ್ರೆ ಕುರಿತು ಡಿ ಎಚ್ಚ ಒ ಅವರನ್ನು ಪ್ರಶ್ನೆ ಗದಗ್ ಜಿಲ್ಲಾ ಮುಂಡರಗಿ ತಾಲೂಕಿನ ತರಕಾರಿ ತಾಲೂಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾದ ಪ್ಯಾನ ವ್ಯವಸ್ಥೆ ಇಲ್ಲದೆ ಜಳದಿಂದ ರೋಗಿಗಳ ಪರದಾಟ ಬಟ್ಟೆಯಿಂದ ಗಾಳಿ ಪಡೆದುಕೊಳ್ಳುವ ರೋಗಿಗಳ ಕುರಿತು ಸಿಗರೆ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ1
- ಬ್ರೇಕಿಂಗ್ ನ್ಯೂಸ್ ಸೂರ್ಯಪೇಟೆ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಖಾಸಗಿ ಟ್ರಾವೆಲ್ಸ್ ಬಸ್ (ತಾಜಾ ಬಸ್) ಸ್ಟೇಷನರಿ ಲಾರಿಗೆ ಡಿಕ್ಕಿ.. ಆರು ಸಾವು, 20 ಜನರಿಗೆ ಗಾಯ ಹೈದರಾಬಾದ್ ನಿಂದ ಏಲೂರಿಗೆ ಪ್ರಯಾಣಿಸುತ್ತಿದ್ದಾಗ ಕೊಡಡ ಮಂಡಲದ ದ್ವಾರಕುಂಟ್ ಬಳಿ ಅಪಘಾತ ಸಂಭವಿಸಿದೆ ಅಪಘಾತದ ಸಮಯದಲ್ಲಿ 42 ಪ್ರಯಾಣಿಕರು ಬಸ್ಸಿನಲ್ಲಿದ್ದರು ಎಂದು ಗುರುತಿಸಲಾಗಿದೆ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಪೊಲೀಸ್ ಪ್ರಕರಣ ದಾಖಲಿಸಿ, ಸ್ಥಳದಿಂದ ಪರಾರಿಯಾಗಿದ್ದ ಚಾಲಕ ಮತ್ತು ಕ್ಲೀನರ್‌ಗಾಗಿ ಹುಡುಕಾಟ1