ಸಿದ್ದರಾಮಯ್ಯ ಅಭಿಮಾನಿಗಳ ಸಂಭ್ರಮಾಚರಣೆ.. ಚಳ್ಳಕೆರೆ ಮುಖ್ಯಮಂತ್ರಿಯಾಗಿ ದೇವರಾಜ ಅರಸು ದಾಖಲೆಯನ್ನು ಸಿದ್ದರಾಮಯ್ಯ ಮುರಿದಿದ್ದು, ಮುಖ್ಯಮಂತ್ರಿಯಾಗಿ ಹೆಚ್ಚು ಅವಧಿ ಸೇವೆ ಸಲ್ಲಿಸಿದ ಕೀರ್ತಿಗೆ ಭಾಜನರಾಗಿದ್ದಾರೆ. 7 ವರ್ಷ 7 ತಿಂಗಳು 20 ದಿನಗಳ ಕಾಲ ದೇವರಾಜ ಅರಸು ಸಿಎಂ ಆಗಿದ್ದರು. ಇದೀಗ ದೇವರಾಜ ಅರಸು ದಾಖಲೆಯನ್ನು ಸಿದ್ದರಾಮಯ್ಯ ಬ್ರೇಕ್ ಮಾಡಿದ್ದಾರೆ.. ಬರೋಬ್ಬರಿ 2,792 ದಿನಗಳ ಕಾಲ ಸಿಎಂ ಆಗಿ ಆಳ್ವಿಕೆ ನಡೆಸಿ ಸಿದ್ದರಾಮಯ್ಯ, ಸುದೀರ್ಘ ಅವಧಿಗೆ ಸಿಎಂ ಆಗಿದ್ದ ದೇವರಾಜ ಅರಸು ದಾಖಲೆ ಮುರಿದಿದ್ದಾರೆ. ಈ ದಿನವನ್ನು ಸಿದ್ದರಾಮಯ್ಯ ಅಭಿಮಾನಿಗಳು ನಾಡಿನ ಉದ್ದಗಲಕ್ಕೂ ಸಂಭ್ರಮಾಚರಣೆ ಮಾಡಿದ್ದಾರೆ. ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಹಾಗೂ ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಇವರ ವತಿಯಿಂದ ನಗರದ ಶಾಸಕರ ಭವನದಲ್ಲಿ ಕಾಂಗ್ರೆಸ್ನ ಮುಖಂಡರು ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿ ನಂತರ ವಾಲ್ಮೀಕಿ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.. ಸಂಭ್ರಮಾಚರಣೆಯಲ್ಲಿ ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ ವೀರಭದ್ರಯ್ಯ, ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಿ ಟಿ ಶಶಿಧರ್, ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಗದ್ದಿಗೆ ತಿಪ್ಪೆಸ್ವಾಮಿ, ಹಿರಿಯ ಮುಖಂಡರಾದ ಪ್ರಭುದೇವ್, ಕೆಪಿಸಿಸಿ ಕುಶಲಕರ್ಮಿ ವಿಭಾಗದ ರಾಜ್ಯಾಧ್ಯಕ್ಷ ಆರ್ ಪ್ರಸನ್ ಕುಮಾರ್,ಸೈಯದ್, ಪರಿಶಿಷ್ಟ ವರ್ಗಗಳ ಸಮಿತಿ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷರಾದ ಸಿಟಿ ಶ್ರೀನಿವಾಸ್. ಮುಖಂಡರಾದ ಕಂದಿಕೆರೆ ಸುರೇಶ್ ಬಾಬು. ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗೀತಾ ಬಾಯಿ, ಮುಖಂಡರಾದ ಕೃಷ್ಣಮೂರ್ತಿ ಚಳ್ಳಕೆರಪ್ಪ ಬಸವರಾಜ್ ಅನ್ವರ್ ಮಾಸ್ಟರ್, ಮಹಿಳಾ ಮುಖಂಡರಾದ ಬಿ.ಎಂ. ಭಾಗ್ಯಮ್ಮ ಭಾಗ್ಯಲಕ್ಷ್ಮಿ, ಕವಿತಾ, ಮಂಜುಳಾ, ಜಬಿನ, ಇಂದ್ರಮ್ಮ,ರಾಜೇಶ್ವರಿ,ಉಪಾ ಸೇರಿದಂತೆ ಕಾಂಗ್ರೆಸ್ನ ಮುಖಂಡರು ಹಾಗೂ ಪದಾಧಿಕಾರಿಗಳು ಇದ್ದರು..

- ಭೀಕರ ಅಪಘಾತ: ಬಾಲಕಿ ಸೇರಿ ನಾಲ್ವರು ಸ್ವಾಮಿ ಅಯ್ಯಪ್ಪ ಭಕ್ತರು ಸಾವು ತುಮಕೂರಿನ :ಜಿಲ್ಲೆಯ ಕೋರ ಬಳಿ ಶುಕ್ರವಾರ ಬೆಳಗಿನ ವೇಳೆ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾಗಿ ಬಾಲಕಿ ಸೇರಿ ನಾಲ್ವರು ಅಯ್ಯಪ್ಪ ಭಕ್ತರು ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಕೊಪ್ಪಳ ಜಿಲ್ಲೆ ಕುಕನೂರು ತಾಲ್ಲೂಕಿನ ಸಾಕ್ಷಿ (7), ಮಾರುತಪ್ಪ, (45), ವೆಂಕಟೇಶ (30), ಗವಿಸಿದ್ದಪ್ಪ (28)ಮೃತರು. ಅಯ್ಯಪ್ಪಸ್ವಾಮಿ ದರ್ಶನ ಮುಗಿಸಿಕೊಂಡು ವಾಪಸ್ ತೆರಳುವಾಗ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.1
- ಹೊಳಲ್ಕೆರೆ ಪಟ್ಟಣದಲ್ಲಿ ಇದೇ ಜನವರಿ 14 ರಂದು ಸಿದ್ದರಾಮೇಶ್ವರರ 853 ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾಗಿ ಶಾಸಕ ಎಂ ಚಂದ್ರಪ್ಪ ತಿಳಿಸಿದ್ದಾರೆ. ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಎಂ ಚಂದ್ರಪ್ಪ ಅವರು ಮಾತನಾಡಿದ್ದು ಇದೇ 14 ರಂದು ಹೊಳಲ್ಕೆರೆ ಪಟ್ಟಣದ ವಾಲ್ಮೀಕಿ ಮೈದಾನದಲ್ಲಿ ಶ್ರೀ ಗುರು ಸಿದ್ದರಾಮೇಶ್ವರರ 853 ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಎರಡು ದಿನಗಳ ಕಾಲ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದ್ದಾರೆ1
- ಆಶಾ ಕಾರ್ಯಕರ್ತರಿಗೂ ಸಹ ವೇತನ ಹೆಚ್ಚಳ ಮಾಡುವಂತೆ ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಅಧ್ಯಕ್ಷ. ಡಿ ನಾಗಲಕ್ಷ್ಮಿ ಒತ್ತಾಯ಼.1
- ಮೈಸೂರಿನ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ #onlinetv24x7 #Mysore2
- ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೋಲೀಸ್ ಠಾಣೆಯ ಪಿಎಸ್ಐ ಶ್ಯಾಮಲಾ ರವರಿಂದ ಪತ್ರಕರ್ತರಿಗೆ ಹೆಲ್ಮೆಟ್ ವಿತರಣೆ1
- ಇದು ನನ್ನ ಅನುಭವಕ್ಕೂ ಬಂದಿದೆ, ಕೆರಳದಲ್ಲಿ ಡ್ರೈವ್ ಮಾಡುವಾಗ ನನಗೆ ಪೋಲಿಸರು ಸ್ನೇಹಿತರಂತೆ ವರ್ತಿಸಿದ್ದು ನನ್ನ ಅನುಭವ.1
- ವಿಬಿ-ಜಿ ರಾಮ್ ಜಿ ಮಸೂದೆ ಕೇಂದ್ರ ಸರಕಾರ ಹಿಂದಕ್ಕೆ ಪಡೆಯದಿದ್ದರೆ ಪ್ರಬಲ ಹೋರಾಟ: ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ 'ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ' (ನರೇಗಾ) ಹೆಸರಿನಲ್ಲಿ ಗಾಂಧಿ ಹೆಸರನ್ನು ಕೈಬಿಟ್ಟು 'ವಿಕಸಿತ ಭಾರತ- ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಮಸೂದೆ, 2025'ಯನ್ನು ಮಂಡಿಸುವ ಮೊದಲು ಯಾವುದೇ ಚರ್ಚೆಯನ್ನು ನಡೆಸದೇ ತನ್ನ ಬುಲ್ಡೋಜರ್ ಸರ್ವಾಧಿಕಾರ ನೀತಿಯಿಂದ ಮಸೂದೆಯನ್ನು ಪಾಸ್ ಮಾಡಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. ಅವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಮಸೂದೆಯಿಂದ ಗಾಂಧಿ ಹೆಸರನ್ನು ತೆಗೆದು ಹಾಕುವ ಹುನ್ನಾರವನ್ನು ಸರಕಾರ ಮಾಡುತ್ತಾ ಇದೆ. ಜನರು ಇದನ್ನು ಒಪ್ಪುವುದಿಲ್ಲ ಎಂದು ಗೊತ್ತಿದ್ದರೂ ಸಹ ಈ ಮಸೂದೆಯನ್ನು ಜಾರಿಗೆ ತರಲಾಗುತ್ತಿದೆ. ಈ ಮೊದಲಿದ್ದ ಉದ್ಯೋಗ ಖಾತರಿ ಯೋಜನೆಯನ್ನು ಹೊಸ ಕಾನೂನಿನ ಮೂಲಕ ದುರ್ಬಲ ಮಾಡಲಾಗಿದೆ . ಆರ್ ಎಸ್ ಎಸ್, ಬಿಜೆಪಿಗರಿಗೆ ದೇಶದ ಅಭಿವೃದ್ಧಿಗೆ ಮಹತ್ವವನ್ನು ನೀಡುವ ಬದಲು ಈ ಮೊದಲು ಜನರ ಕಲ್ಯಾಣವನ್ನು ಮಾಡುತ್ತಿದ್ದ ಯೋಜನೆಯನ್ನು ನಿಷ್ತ್ರೀಯ ಮಾಡುವ ಉದ್ದೇಶವನ್ನು ಹೊಂದಿದ್ದಾರೆ. ಈ ಕ್ರಮಕ್ಕೆ ಕಾಂಗ್ರೆಸ್ ತೀವ್ರವಾಗಿ ಖಂಡನೆಯನ್ನು ವ್ಯಕ್ತಪಡಿಸುತ್ತಿದೆ. ನರೇಗಾ ಹೋಗಿ ವಿಬಿ-ಜಿ ರಾಮ್ ಜಿ ಎಂದು ಮಾಡಲಾಗಿದ್ದು ಇದರಲ್ಲಿ ರಾಮನ ಹೆಸರನ್ನು ಯಾಕೆ ಸೇರಿಸಲಾಗಿದೆಯೋ ತಿಳಿಯದು ಎಂದು ಪ್ರಶ್ನೆ ಮಾಡಿದರು. ವಿಬಿ-ಜಿ ರಾಮ್ ಜಿ ಯೋಜನೆ ಕೇಂದ್ರ ಸರಕಾರದ್ದು ಆದರೆ ಅದರಲ್ಲಿ ರಾಜ್ಯ ಸರಕಾರದ ಪಾಲು ಹೆಚ್ಚಿಗೆ ಇದೆ. ಆರ್ಥಿಕವಾಗಿ ಬಡವಾದ ದೇಶಗಳಿಗೆ ಅವುಗಳನ್ನು ಭರಿಸುವ ಶಕ್ತಿ ಇದೆಯೇ? ಇದು ಉದ್ಯೋಗ ಗ್ಯಾರಂಟಿ ಯೋಜನೆಯಲ್ಲ ಇದು ಉದ್ಯೋಗ ಬೋಗಸ್ ಯೋಜನೆ ಎಂದು ಅವರು ಕಿಡಿಕಾರಿದರು. ಉತ್ತಮ ಕಾನೂನನ್ನು ಯಾಕೆ ವಿಸರ್ಜನೆ ಮಾಡಲಾಗಿದೆ ಎಂಬುದೇ ತಿಳಿತಾ ಇಲ್ಲ. ಇದು ಪಂಚಾಯತ್ ರಾಜ್ ವ್ಯವಸ್ಥೆಯ ಮೇಲೆ ಚಪ್ಪಡಿ ಕಲ್ಲುಹಾಕಿದ ಹಾಗೆ ಆಗಿದೆ. ಇದರಿಂದ ವಿಕೇಂದ್ರೀಕರಣ ಆಡಳಿತ ಸಂಪೂರ್ಣವಾಗಿ ಹದಗೆಟ್ಟು ಕೇಂದ್ರೀಕರಣ ನೀತಿಗೆ ಅಡಿಪಾಯ ಹಾಕಲಿದೆ ಎಂದರು. ಈ ಮಸೂದೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು ಇಲ್ಲದಿದ್ದರೆ ಕಾಂಗ್ರೆಸ್ ಸರಕಾರ ದೊಡ್ಡ ಮಟ್ಟದ ಹೋರಾಟವನ್ನು ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು . ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜಾ, ಪಕ್ಷದ ಮುಖಂಡರಾದ ಪದ್ಮರಾಜ್ ಪೂಜಾರಿ, ವಿಶ್ವಾಸ್ ಕುಮಾರ್, ವಿನಯ್ ರಾಜ್, ಶುಭೋದಯ ಆಳ್ವ , ಲಾವಣ್ಯ ಬಲ್ಲಾಳ್ ಸಹಿತ ಮುಂತಾದವರು ಉಪಸ್ಥಿತರಿದ್ದರು. ವರದಿ: ಶಂಶೀರ್ ಬುಡೋಳಿ1
- ಸರಕಾರಿ ನೌಕರರ ವತಿಯಿಂದ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ. ರಾಜ್ಯ ಸರ್ಕಾರಿ ನೌಕರ ಸಂಘದ ತಾಲೂಕು ಅಧ್ಯಕ್ಷ ಸಿಟಿ ವೀರೇಶ್ ಮಾಹಿತಿ ನೀಡಿದ್ದಾರೆ..1