2000 ಮೇಲ್ಪಟ್ಟು ಫೋನ್ ಪೇ ಗೂಗಲ್ ಫೆ ದಿಂದ ಸಾರ್ವಜನಿಕರಿಗೆ ಹೊರೆ ಬಾರಿ ಚರ್ಚೆ ಇಷ್ಟು ದಿನ ಉಚಿತವಾಗಿ ನಡೆಯುತ್ತಿದ್ದ ಯುಪಿಐ ಮೇಲೆ ಇದೀಗ ಶುಲ್ಕ ವಿಧಿಸಲಾಗುತ್ತದೆ ಎಂಬ ಚರ್ಚೆ ಜೋರಾಗಿದೆ. ಅಕ್ಟೋಬರ್ 15ರಿಂದ ಹೊಸ ನಿಯಮಗಳು ಜಾರಿಗೆ ಬರಲಿದ್ದು, ಆನ್‌ಲೈನ್‌ನಲ್ಲಿ ₹2,000ಕ್ಕಿಂತ ಹೆಚ್ಚಿನ ಪಾವತಿಗಳಿಗೆ ಶುಲ್ಕ ವಿಧಿಸಲಾಗುತ್ತದೆ ಎಂಬ ಸುದ್ದಿಗಳು ಹರಿದಾಡುತ್ತಿವೆ.ಕೆಲವು ರೀತಿಯ ವಹಿವಾಟುಗಳಿಗೆ ₹5, ಇನ್ನು ಕೆಲವು ವಹಿವಾಟುಗಳಿಗೆ ಅದಕ್ಕಿಂತ ಹೆಚ್ಚಿನ ಶುಲ್ಕ ಪಾವತಿಸಬೇಕಾಗುತ್ತದೆ ಎಂಬ ಪ್ರಚಾರವೂ ನಡೆಯುತ್ತಿದೆ. ಇದರಿಂದ ಇನ್ನು ಮುಂದೆ ಯುಪಿಐ ಮೂಲಕ ಹಣ ಕಳುಹಿಸಿದರೂ, ಅಂಗಡಿಯಲ್ಲಿ ಪಾವತಿ ಮಾಡಿದರೂ ನಮ್ಮ ಜೇಬಿಗೆ ಹೆಚ್ಚುವರಿ ಹೊರೆ ಬೀಳುತ್ತದೆಯೇ ಎಂಬ ಆತಂಕ ಜನರಲ್ಲಿ ಮೂಡಿದೆ. ಆದರೆ ಈ ಶುಲ್ಕ ಯಾರಿಗೆ ಅನ್ವಯಿಸುತ್ತದೆ? ಎಷ್ಟು ಪಾವತಿಸಬೇಕು? ಗ್ರಾಹಕರ ಜೇಬಿನಿಂದ ಹಣ ಹೋಗುತ್ತದೆಯೇ ಅಥವಾ ವ್ಯಾಪಾರಿಯೇ ಭರಿಸಬೇಕೇ? ಯುಪಿಐ ಬಳಸುವ ಪ್ರತಿಯೊಬ್ಬರ ಮೇಲೂ ಶುಲ್ಕದ ಹೊರೆ ಬೀಳುತ್ತದೆಯೇ ಎಂಬ ಪ್ರಶ್ನೆಗಳು ಸಹಜ. ಯುಪಿಐ ಮೂಲಕ ಹಣ ಕಳುಹಿಸಿದರೆ ಶುಲ್ಕ ಇದೆಯೇ? ನೀವು ಕಿರಾಣಿ ಅಂಗಡಿಯಲ್ಲಿ ಸಾಮಾನು ಖರೀದಿಸಿದ್ದೀರಿ ಅಥವಾ ಬೇರೆ ಅಂಗಡಿಯಲ್ಲಿ ಶಾಪಿಂಗ್ ಮಾಡಿದ್ದೀರಿ ಎಂದುಕೊಳ್ಳಿ. ಫೋನ್ ತೆಗೆದು ಯುಪಿಐ ಮೂಲಕ ಹಣ ಪಾವತಿಸಿದರೆ ಹೆಚ್ಚುವರಿಯಾಗಿ ಹಣ ನೀಡಬೇಕೇ? ಅಗತ್ಯವಿಲ್ಲ. ನಿಮ್ಮ ಸ್ನೇಹಿತರಿಗೆ ₹10,000 ಕಳುಹಿಸಿದರೆ ಶುಲ್ಕ ವಿಧಿಸಲಾಗುತ್ತದೆಯೇ? ಅದೂ ಇಲ್ಲ. ಹಾಗಾದರೆ ಯುಪಿಐ ಶುಲ್ಕದ ಬಗ್ಗೆ ಬರುತ್ತಿರುವ ಸುದ್ದಿಗಳೇನು ಎಂಬ ಗೊಂದಲ ಸಹಜ. ಹೊಸ ನಿಯಮಗಳ ಪ್ರಕಾರ ಎಲ್ಲರೂ ಯುಪಿಐಗೆ ಶುಲ್ಕ ಪಾವತಿಸಬೇಕಾಗಿಲ್ಲ. ಅಕ್ಟೋಬರ್ 15ರಿಂದ ಕೆಲವು ರೀತಿಯ ವ್ಯಾಪಾರಿ ಪಾವತಿಗಳಿಗೆ ಮಾತ್ರ ಎಂಡಿಆರ್ (MDR) ಎಂಬ ಶುಲ್ಕ ಅನ್ವಯಿಸುತ್ತದೆ. ಅದನ್ನು ಸಾಮಾನ್ಯ ಗ್ರಾಹಕರು ಪಾವತಿಸಬೇಕಾಗಿಲ್ಲ; ವ್ಯಾಪಾರಿಯೇ ಭರಿಸಬೇಕು. ವ್ಯಕ್ತಿಯಿಂದ ವ್ಯಕ್ತಿಗೆ ಹಣ ಕಳುಹಿಸಿದರೆ ಶುಲ್ಕವಿಲ್ಲ ಸರಳವಾಗಿ ಹೇಳುವುದಾದರೆ, ನೀವು ಒಬ್ಬ ವ್ಯಕ್ತಿಗೆ ಹಣ ಕಳುಹಿಸಿದರೆ ಯಾವುದೇ ಶುಲ್ಕ ಇರುವುದಿಲ್ಲ. ಎಷ್ಟು ಮೊತ್ತ ಕಳುಹಿಸಿದರೂ ಇದೇ ನಿಯಮ. ಉದಾಹರಣೆಗೆ, ಸ್ನೇಹಿತರಿಗೆ ₹10,000 ಅಥವಾ ಕುಟುಂಬದ ಸದಸ್ಯರಿಗೆ ₹50,000 ಕಳುಹಿಸಿದರೂ ಯುಪಿಐ ಶುಲ್ಕ ಇರುವುದಿಲ್ಲ. ಅದೇ ರೀತಿ ಅಂಗಡಿಯಲ್ಲಿ ₹2,000ವರೆಗೆ ಯುಪಿಐ ಮೂಲಕ ಪಾವತಿಸಿದರೂ ಯಾವುದೇ ಶುಲ್ಕವಿಲ್ಲ. ಅಂದರೆ ₹500, ₹1,000 ಅಥವಾ ₹2,000 ಬಿಲ್ ಪಾವತಿಸುವಾಗ ನೀವು ಹೆಚ್ಚುವರಿಯಾಗಿ ಒಂದು ರೂಪಾಯಿಯನ್ನೂ ನೀಡಬೇಕಾಗಿಲ್ಲ. ₹2,000ಕ್ಕಿಂತ ಹೆಚ್ಚಿನ ಪಾವತಿ ಮಾಡಿದರೆ? ಇಲ್ಲಿಯೇ ಹೊಸ ನಿಯಮ ಅನ್ವಯಿಸುತ್ತದೆ. ವ್ಯಾಪಾರಿಗೆ ₹2,000ಕ್ಕಿಂತ ಹೆಚ್ಚಿನ ಯುಪಿಐ ಪಾವತಿ ಮಾಡಿದಾಗ ಕೆಲವು ಸಂದರ್ಭಗಳಲ್ಲಿ 0.4% ಎಂಡಿಆರ್ ಅನ್ವಯಿಸುತ್ತದೆ.

- ಗೌರಸಮುದ್ರ ಮಾರೆಮ್ಮ ಜಾತ್ರೆಯಲ್ಲಿ ಶಾಸಕರು ಎನ್. ವೈ. ಗೋಪಾಲಕೃಷ್ಣ ಭಾಗಿ .ಗೌರಸಮುದ್ರ ಜಾತ್ರೆಯಲ್ಲಿ ಶಾಸಕ ಎನ್. ವೈ. ಗೋಪಾಲಕೃಷ್ಣ ಭಾಗಿ ಮೊಳಕಾಲ್ಮುರು ಸುದ್ದಿ. ಗೌರಸಮುದ್ರ ಗ್ರಾಮದಲ್ಲಿ ನಡೆಯುತ್ತಿರುವ ಗೌರಸಮುದ್ರ ಜಾತ್ರೆ ಅದ್ದೂರಿಯಾಗಿ ನಡೆಯುತ್ತಿದ್ದು, ಮೊಳಕಾಲ್ಮುರು ಕ್ಷೇತ್ರದ ಶಾಸಕರಾದ ಎನ್. ವೈ. ಗೋಪಾಲಕೃಷ್ಣ ಅವರು ಜಾತ್ರೆಯಲ್ಲಿ ಭಾಗವಹಿಸಿ ದೇವಿಯ ದರ್ಶನ ಪಡೆದುಕೊಂಡರು. ಈ ಸಂದರ್ಭದಲ್ಲಿ ಜಾತ್ರೆಯ ಕಾರ್ಯಕ್ರಮಗಳ ಕುರಿತು ಅಧಿಕಾರಿಗಳು ಹಾಗೂ ಆಯೋಜಕರಿಂದ ಮಾಹಿತಿ ಪಡೆದ ಶಾಸಕರು, ಜಾತ್ರೆಗೆ ಆಗಮಿಸುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಕುರಿತು ಪರಿಶೀಲಿಸಿದರು. ವಿಶೇಷವಾಗಿ ಕುಡಿಯುವ ನೀರಿನ ವ್ಯವಸ್ಥೆ, ವೈದ್ಯಕೀಯ ನೆರವು ಹಾಗೂ ಮೆಡಿಕಲ್ ಕಿಟ್‌ಗಳ ಲಭ್ಯತೆ, ಪೊಲೀಸ್ ಭದ್ರತಾ ವ್ಯವಸ್ಥೆ ಮತ್ತು ಜಾತ್ರಾ ಸ್ಥಳದ ಶುಚಿತ್ವದ ಬಗ್ಗೆ ಮಾಹಿತಿ ಪಡೆದುಕೊಂಡರು. ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ಹಾಗೂ ಸ್ವಚ್ಛತೆ ಮತ್ತು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದರು. ಜಾತ್ರೆಯು ಶಾಂತಿಯುತವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಲು ಅಧಿಕಾರಿಗಳು ಮತ್ತು ಆಯೋಜಕರು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಶಾಸಕರು ತಿಳಿಸಿದರು. ಜಾತ್ರೆಯಲ್ಲಿ ತಳಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ನಾಗೇಶ್ ರೆಡ್ಡಿ, ಹಿರೇಹಳ್ಳಿ ವಕೀಲರು ಮಲ್ಲೇಶಿ ರಾಂಪುರ ಸಿದ್ದಬಸಪ್ಪ, ಶ್ರೀಕಾಂತ, ಪೊಲೀಸ್ ಇಲಾಖೆ ಸಾವಿರಾರು ಭಕ್ತರು ಜಾತ್ರೆಯಲ್ಲಿ ಭಾಗವಹಿಸಿ ದೇವಿಯ ಧರ್ಶನ ಪಡೆದರು.1
- ಬರದ ಬೇಗುದಿ: ಶೇಂಗಾ ಬೆಳೆ ಉಳಿಸಲು ಟ್ಯಾಂಕರ್ ನೀರಿನ ಮೊರೆ: ಸಾಲ ಮಾಡಿ ನೀರುಣಿಸುತ್ತಿರುವ ರೈತರು ಕೂಡ್ಲಿಗಿ: ಮಳೆ ಕೈಕೊಟ್ಟ ಪರಿಣಾಮ ಬಿತ್ತನೆ ಮಾಡಿರುವ ಶೇಂಗಾ ಬೆಳೆ ಒಣಗುವ ಹಂತಕ್ಕೆ ತಲುಪಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಪರದಾಡುವಂತಾಗಿದೆ. ಗುಡೇಕೋಟೆ ಗ್ರಾಮದ ರೈತ ಶಾಮ್ ರಾವ್ ಅವರು ಮಳೆಯ ನಿರೀಕ್ಷೆಯಲ್ಲಿದ್ದ ಶೇಂಗಾ ಬೆಳೆಗೆ ಟ್ಯಾಂಕರ್ ಮೂಲಕ ನೀರುಣಿಸುತ್ತಿರುವ ದೃಶ್ಯ ರೈತರ ಸಂಕಷ್ಟಕ್ಕೆ ಕನ್ನಡಿ ಹಿಡಿದಂತಾಗಿದೆ. ಶಾಮ್ ರಾವ್ ಅವರು ತಮ್ಮ ಮೂರುವರೆ ಎಕರೆ ಜಮೀನಿನಲ್ಲಿ ಶೇಂಗಾ ಬಿತ್ತನೆ ಮಾಡಿದ್ದು, ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದರು. ಆದರೆ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೆಳೆ ತೇವಾಂಶದ ಕೊರತೆಯಿಂದ ಒಣಗುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಬೆಳೆ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಟ್ರ್ಯಾಕ್ಟರ್ ಮೂಲಕ ಟ್ಯಾಂಕರ್ ನೀರನ್ನು ಹೊಲಕ್ಕೆ ಸಾಗಿಸಿ ಶೇಂಗಾ ಬೆಳೆಗೆ ನೀರು ಹಾಯಿಸುತ್ತಿದ್ದಾರೆ. ಈಗಾಗಲೇ ಒಂದು ಟ್ಯಾಂಕರ್ ನೀರಿಗೆ ₹500ರಂತೆ 10 ಟ್ಯಾಂಕರ್ ನೀರು ಹಾಕಲಾಗಿದ್ದು, ನೀರಿಗಾಗಿಯೇ ಸುಮಾರು ₹5,000 ವೆಚ್ಚವಾಗಿದೆ. ಮುಂದಿನ ದಿನಗಳಲ್ಲಿಯೂ ಮಳೆ ಬಾರದಿದ್ದರೆ ಇನ್ನಷ್ಟು ನೀರು ಹಾಕಬೇಕಾದ ಅನಿವಾರ್ಯತೆ ರೈತನ ಮುಂದಿದೆ.1
- *ಕೂಡ್ಲಿಗಿ : ನಾಗರೀಕ ಹಿತರಕ್ಷಣಾ ವೇದಿಕೆಯಿಂದ , ಅದ್ಧೂರಿ ಊರಗಣಪ ಪ್ರತಿಷ್ಠಾನೆ*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಸೆಪ್ಟೆಂಬರ್ 14ರಂದು ಪಟ್ಟಣದ ಮೇನ್ ಬಾಯ್ಸ್ ಶಾಲೆಯ ಆವರಣದಲ್ಲಿ , ಶ್ರೀಗಣೇಶ ಚತುರ್ಥಿ ಪ್ರಯುಕ್ತ ನಾಗರೀಕ ಹಿತರಕ್ಷಣೆ ವೇದಿಕೆ ವತಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಮನೆ ಅದ್ಧೂರಿಯಾಗಿ ಜರುಗಿತು. ನಾಗರೀಕ ಹಿತರಕ್ಷಣ ವೇದಿಕೆ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ ನೇತೃತ್ವದಲ್ಲಿ , ಪ್ರತಿ ವರ್ಷಗಳಂತೆಯೇ ಗಣೇಶ ಮೂರ್ತಿ ದಾನಿಗಳು. ಹಾಗೂ ಗೌಡ ಮನೆತನದ ಮುಖಂಡರಾದ , ಪಟ್ಟಣದ ಹೆಚ್.ವೀರನಗೌಡ ರವರ ಮನೆಯಿಂದ , ಗಣೇಶನ ಬೃಹತ್ ಗಾತ್ರದ ಗಣೇಶ ಮೂರ್ತಿಯನ್ನು. ಶಾಸ್ತ್ರೋಕ್ತವಾಗಿ ಪೂಜಿಸಿ ವಾಹನದಲ್ಲಿರಿಸಿಕೊಂಡು , ಪಟ್ಟಣದ ಪ್ರಮುಖ ರಸ್ತೆಯ ಮೂಲಕ ಬಹು ಅದ್ಧೂರಿಯಾಗಿ ಮೆರವಣಿಗೆ ಸಾಗಿ ವೇದಿಕೆಗೆ ಕರೆತರಲಾಯಿತು. ಪಟ್ಟಣದ ಶ್ರೀಚಂದ್ರಶೇಖರ ಆಜಾದ್ ರಂಗಮಂದಿರದ ವೇದಿಕೆ ಯಲ್ಲಿ , ಪುರೋಹಿತರಾದ ಎಮ್ ಎಮ್ ಉಮೇಶರವರ ನೇತೃತ್ವದಲ್ಲಿ. ಧಾರ್ಮಿಕ ವಿಧಿ ವಿಧಾನದೊಂದಿಗೆ ಪೂಜಿಸಿ ಪ್ರತಿಷ್ಠಾಪಿಸಲಾಯಿತು, ತದನಂತರ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪಿಸಲಾಯಿತು. ನಂತರ ವೇದಭ್ರಾಹ್ಮಣ ಆರಾಧಕರಾದ ಬ್ರಹ್ಮಲಿಂಗಾಚಾರಿಗಳ ಪುರೋಹಿತ್ವದಲ್ಲಿ , ಪೂಜಾ ಕೈಂ ಕರ್ಯಗಳಾದಿಗಳನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ನಾಗರೀಕರ ಹಿತರಕ್ಷಣಾ ಸಮಿತಿಯ ಎಲ್ಲಾ ಪದಾಧಿಕಾರಿಗಳು ಸದಸ್ಯರು , ಹಿರಿಯನಾಗರೀಕರು , ಹಿರಿಯರು , ಗಣ್ಯರು ಮುಖಂಡರು , ನೂರಾರು ಸಾರ್ವಜನಿಕರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ಬಳ್ಳಾರಿಯಲ್ಲಿ ಶಾಸಕ ಬಿ.ನಾಗೇಂದ್ರ ಹುಟ್ಟುಹಬ್ಬ ಸಂಭ್ರಮ: ಬಿಮ್ಸ್‌ನಲ್ಲಿ ಅನ್ನದಾನ! ಬಳ್ಳಾರಿಯಲ್ಲಿ ಶಾಸಕ ಬಿ.ನಾಗೇಂದ್ರ ಅವರ ಹುಟ್ಟುಹಬ್ಬದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಬಿಮ್ಸ್ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಹಾಗೂ ಸಮಾಜಸೇವಕ ಡಿ.ಅಯಾಜ್ ಅಹ್ಮದ್ ನೇತೃತ್ವದಲ್ಲಿ ರೋಗಿಗಳು ಹಾಗೂ ಸಾರ್ವಜನಿಕರಿಗೆ ಅನ್ನದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಾಸಕರ ಸಹೋದರ ಬಿ.ವೆಂಕಟೇಶ್ ಪ್ರಸಾದ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಪಾಲಿಕೆ ಮೇಯರ್, ಸದಸ್ಯರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನಾಗೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಜವಾಬ್ದಾರಿ ಹಾಗೂ ಉನ್ನತ ಸ್ಥಾನ ದೊರೆಯಲಿ ಎಂದು ಮುಖಂಡರು ಆಶಿಸಿದರು. 📍 ಬಳ್ಳಾರಿ | ASN News24 ಕನ್ನಡ #BNagendra #ಬಿನಾಗೇಂದ್ರ #Ballari #ಬಳ್ಳಾರಿ #BallariNews #ಬಳ್ಳಾರಿನ್ಯೂಸ್ #KarnatakaNews #KannadaNews #Congress #CongressKarnataka #BirthdayCelebration #Annadana #ಅನ್ನದಾನ #BIMS #BallariUpdates #ASNNews24Kannada #KannadaNewsToday #KarnatakaPolitics1
- ಗೌರಸಮುದ್ರ ಮಾರಮ್ಮ ಜಾತ್ರೆ ಕುರಿತು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಎಂ .ಓಬಣ್ಣ ಏನ್ ಹೇಳಿದ್ರು ಗೊತ್ತೇ.1
- ಗೌರಸಮುದ್ರ ಮಾರಮ್ಮ ದೇವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಸಾವಿರಾರು ಭಕ್ತರು ಐತಿಹಾಸಿಕ ಶ್ರೀ ಗೌರಸಮುದ್ರ ಮಾರಮ್ಮ ದೇವರ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರು ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿದೆ. ಗೌರಸಮುದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಬುಡಕಟ್ಟು ಸಂಸ್ಕೃತಿ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರವಾದ ಈ ದೇವಸ್ಥಾನ ಐತಿಹಾಸಿಕ ಪರಂಪರೆಗೆ ಸಾಕ್ಷಿಯಾಗಿದೆ. ಭಕ್ತರ ಕಠಿಣ ವ್ರತ ಮತ್ತು ಭಕ್ತಿಯ ನಂಬಿಕೆ ಮುಗಿಲು ಮುಟ್ಟಿದೆ ಇಂತಹ ಪವಿತ್ರ ದೇವಸ್ಥಾನಕ್ಕೆ ಇಲ್ಲಿ ಬರುವಂತ ಭಕ್ತಾದಿಗಳಿಗೆ ಜಿಲ್ಲಾಡಳಿತ ಮೂಲಭೂತ ಸೌಕರ್ಯವನ್ನು ಒದಗಿಸಬೇಕೆಂಬುದು ಭಕ್ತಾದಿಗಳ ಒತ್ತಾಸೆಯಾಗಿದೆ. ಸರಿ ಸುಮಾರು ನಾಲ್ಕರಿಂದ ಐದು ಲಕ್ಷ ಬಕ್ತಾದಿಗಳು ಬರುವಂತಹ ಈ ಶ್ರದ್ದಾ ಕೇಂದ್ರಕ್ಕೆ ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.1
- ಬ್ರೇಕಿಂಗ್ ನ್ಯೂಸ್ : ಪಾವಗಡ ಪೊಲೀಸರ ಭರ್ಜರಿ ಬೇಟೆ: ಬಲೆಗೆ ಬಿದ್ದ ನಕ್ಸಲ್ ವೆಂಕಟೇಶ್1
- ಬಳ್ಳಾರಿಯಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸಂಜೆ ತರಗತಿ! ಗಣೇಶೋತ್ಸವದಂದು ಊಟ–ಪ್ರಸಾದ ವಿತರಣೆ ಬಳ್ಳಾರಿ ಸಮೀಪದ ಸಂಗನಕಲ್ಲು ಗ್ರಾಮದ ಅಂಬೇಡ್ಕರ್ ನಗರದಲ್ಲಿ ವಿಶ್ವಚೇತನ ಸಮೃದ್ಧಿ ಸೇವಾ ಟ್ರಸ್ಟ್ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗಾಗಿ ಉಚಿತ ಸಂಜೆ ತರಗತಿ ಹಾಗೂ ಊಟ/ತಿಂಡಿ ವ್ಯವಸ್ಥೆ ಮಾಡಲಾಯಿತು. ಗಣೇಶ ಚತುರ್ಥಿ ಅಂಗವಾಗಿ ಟ್ಯೂಷನ್ ಕೇಂದ್ರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ಮಕ್ಕಳಿಂದ ಸಾಮೂಹಿಕ ಪ್ರಾರ್ಥನೆ ಹಾಗೂ ಶಾಂತಿ ಮಂತ್ರ ಪಠಣ ನಡೆಸಲಾಯಿತು. ಬಳಿಕ ಮಕ್ಕಳಿಗೆ ಸಿಹಿ ಪ್ರಸಾದ ವಿತರಿಸಲಾಯಿತು. ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಮತ್ತು ಸಾಮಾಜಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಈ ಸೇವಾ ಕಾರ್ಯ ನಡೆಯುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಷ ಟಿ.ನಾಗರಾಜ್ ತಿಳಿಸಿದ್ದಾರೆ. 📍 ಸಂಗನಕಲ್ಲು, ಬಳ್ಳಾರಿ 📅 15-09-2026 ASN NEWS24 ಕನ್ನಡ — ಸುತ್ತಮುತ್ತ ನಡೆಯುವ ಸುದ್ದಿ, ಸಾರ್ವಜನಿಕ ಸಮಸ್ಯೆಗಳು ಮತ್ತು ಜನರ ಧ್ವನಿ. #Ballari #Bellary #Karnataka #KannadaNews #BreakingNews #Education #GovernmentSchool #GovernmentSchoolStudents #FreeEducation #FreeTuition #GaneshChaturthi #GaneshFestival #Ganeshotsav #SocialService #StudentSupport #Sanganakallu #BallariNews #KarnatakaNews #ASNNews24 #ASNNews24Kannada #ಕರ್ನಾಟಕ #ಬಳ್ಳಾರಿ #ಕನ್ನಡಸುದ್ದಿ #ಗಣೇಶೋತ್ಸವ1