Shuru
Apke Nagar Ki App…
ವಿಜೃಂಭಣೆಯಿಂದ ಗಡಿಭಾಗದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆ KODIGENAHALLI ಮಧುಗಿರಿ ತಾಲೂಕಿನ ಗಡಿಭಾಗವಾದ ಕೊಡಿಗೇನಹಳ್ಳಿ ಜಾಮೀಯ ಮಸ್ಜಿದ್ ಸುನ್ನತ್ ಹುಲ್ ಜಮಾತ ವತಿಯಿಂದ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಹುಟ್ಟುಹಬ್ಬ ಈದ್ ಮಿಲಾದ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
Madhugiri news
ವಿಜೃಂಭಣೆಯಿಂದ ಗಡಿಭಾಗದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆ KODIGENAHALLI ಮಧುಗಿರಿ ತಾಲೂಕಿನ ಗಡಿಭಾಗವಾದ ಕೊಡಿಗೇನಹಳ್ಳಿ ಜಾಮೀಯ ಮಸ್ಜಿದ್ ಸುನ್ನತ್ ಹುಲ್ ಜಮಾತ ವತಿಯಿಂದ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಹುಟ್ಟುಹಬ್ಬ ಈದ್ ಮಿಲಾದ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
More news from ಕರ್ನಾಟಕ and nearby areas
- ವಿಜೃಂಭಣೆಯಿಂದ ಗಡಿಭಾಗದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆ KODIGENAHALLI ಮಧುಗಿರಿ ತಾಲೂಕಿನ ಗಡಿಭಾಗವಾದ ಕೊಡಿಗೇನಹಳ್ಳಿ ಜಾಮೀಯ ಮಸ್ಜಿದ್ ಸುನ್ನತ್ ಹುಲ್ ಜಮಾತ ವತಿಯಿಂದ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಹುಟ್ಟುಹಬ್ಬ ಈದ್ ಮಿಲಾದ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.1
- ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿ ಪವಾಡ ಮತ್ತು ವೈವಿಧ್ಯತೆ ಇತಿಹಾಸದ ದಾಖಲೆ ಪುಟದಲ್ಲಿ ಸೇರಿದೆ. ಶಿರಾ : ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿ ಪವಾಡ ಮತ್ತು ವೈವಿಧ್ಯತೆ ಇತಿಹಾಸದ ದಾಖಲೆ ಪುಟದಲ್ಲಿ ಸೇರಿದೆ. ಭಾರತೀಯ ಸಂಸ್ಕೃತಿಯಲ್ಲಿ ಧಾರ್ಮಿಕ ದೇವತಾ ಕಾರ್ಯಗಳಿಗೆ ಅತ್ಯಂತ ಉನ್ನತವಾದ ಸ್ಥಾನವಿದೆ. ಅನಾದಿ ಕಾಲದಿಂದಲೂ ಮಾನವನು ತನ್ನ ದೈನಂದಿನ ಜೀವನದ ಭಾಗವಾಗಿ ದೇವರನ್ನು ಆರಾಧಿಸುತ್ತಾ ಬಂದಿದ್ದಾನೆ. ದೇವತಾ ಕಾರ್ಯಗಳು ಎಂದರೆ ಕೇವಲ ಆಚರಣೆಗಳಲ್ಲ, ಅವು ಮಾನವನ ಮನಸ್ಸನ್ನು ಶುದ್ಧೀಕರಿಸುವ ಮತ್ತು ಸಮಾಜವನ್ನು ಒಟ್ಟಾಗಿ ಜೋಡಿಸುವ ಪವಿತ್ರ ವಿಧಿ ವಿಧಾನಗಳಾಗಿವೆ,ಧಾರ್ಮಿಕ ದೇವತಾ ಕಾರ್ಯಗಳು ಮನುಷ್ಯನಲ್ಲಿ ಭಕ್ತಿ, ಶ್ರದ್ಧೆ ಮತ್ತು ಸಂಸ್ಕೃತಿಯನ್ನು ಬೆಳೆಸುತ್ತವೆ. ಇವುಗಳನ್ನು ಕೇವಲ ಮೂಢನಂಬಿಕೆಯಾಗಿ ನೋಡದೆ, ಅವುಗಳ ಹಿಂದಿರುವ ವೈಜ್ಞಾನಿಕ ಮತ್ತು ಸಾಮಾಜಿಕ ಮಹತ್ವವನ್ನು ಅರಿತು ಆಚರಿಸಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ ಮತ್ತು ಸುಖ-ಸಮೃದ್ಧಿ ನೆಲೆಸಲು ಸಾಧ್ಯವಾಗುತ್ತದೆ ಎಂದು ಎಲೆರಾಂಪುರ ಕುಂಚಿಟಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಹನುಮಂತನಾಥ ಸ್ವಾಮೀಜಿ ಹೇಳಿದರು. ಶಿರಾ ತಾಲೂಕಿನ ಗೌಡಗೆರೆ ಹೋಬಳಿ ಕಳವರಹಳ್ಳಿ ಗ್ರಾಮದಲ್ಲಿ ಬುಧವಾರ ಶ್ರೀಜುಂಜಪ್ಪ ಸ್ವಾಮಿ ನೂತನ ದೇವಸ್ಥಾನ ನಿರ್ಮಾಣದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಐತಿಹಾಸಿಕ ಪ್ರಸಿದ್ಧ ಶ್ರೀ ಜುಂಜಪ್ಪ ಸ್ವಾಮಿಗೆ ಎಲ್ಲರೂ ಒಗ್ಗೂಡಿ ಭವ್ಯ ದೇಗುಲ ನಿರ್ಮಾಣ ಮಾಡುತ್ತಿರುವುದು, ಕಳವರಹಳ್ಳಿಗೆ ದೊಡ್ಡ ಕಳಸವಿದ್ದಂತೆ. ನಾವು ಎಲ್ಲರೂ ಒಗ್ಗಟ್ಟಾಗಿ ದೇಗುಲ ನಿರ್ಮಾಣ ಮಾಡುವಂತ ಸಂಕಲ್ಪ ಮಾಡಬೇಕು. ರಾಜ್ಯದಲ್ಲಿ ಹಾಗೂ ಸಿರಾ ತಾಲೂಕಿನಲ್ಲಿ ಇನ್ನು ಮುಂದೆ ಯಾದರು ಉತ್ತಮ ಮಳೆಯಾಗಿ ಎಲ್ಲ ರೈತರ ಬದುಕು ಸುಂದರವಾಗಿರಲಿ ಎಂದು ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿಯಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು. ಶ್ರೀ ಮದ್ದಮ್ಮ ದೇವಿ ದೇವಸ್ಥಾನದ ಪಟ್ಟದ ಪೂಜಾರ್ ದೊಡ್ಡರಾಜಪ್ಪ, ಹುಣಸೆಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹುಣಸೆಹಳ್ಳಿ ಶಶಿಧರ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಮದ್ದೇವಳ್ಳಿ ರಾಮಕೃಷ್ಣ, ಸಂಕಾಪುರ ಚಿದಾನಂದ, ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಮುದ್ದು ಕೃಷ್ಣೆಗೌಡ, ಕಾರ್ಯದರ್ಶಿ ನರಸಿಂಹಮೂರ್ತಿ, ಭೂಕಾಂತೇ ಗೌಡ, ಕೃಷ್ಣಪ್ಪ, ಹೊಸೂರು ಮಂಜೇಗೌಡ, ಸಿದ್ದಣ್ಣ, ದೊಡ್ಡಯ್ಯ, ಸಿದ್ದಾಪುರ ಮಂಜುನಾಥ್, ನಾಗೇಂದ್ರ ಗೌಡ, ಭೂತಣ್ಣ ಸೇರಿದಂತೆ ಅಕ್ಕ ಪಕ್ಕದ ಗ್ರಾಮಸ್ಥರು, 12 ಜನ ಕೈವಾಡಸ್ತರು ಸೇರಿದಂತೆ ನೂರಾರು ಭಕ್ತರು ಉಪಸ್ಥಿತರಿದ್ದರು.1
- ಹೇಮಾವತಿ ನೀರಿಗಾಗಿ ಆ. 29 ಕ್ಕೆ ಸೋಮಲಾಪುರದ ಕಟ್ಟಿ ರಂಗನಾಥಸ್ವಾಮಿ ದೇವಾಲಯದ ಆವರಣದಲ್ಲಿ ರೈತರ ಬೃಹತ್ ಸಭೆ ಹೇಮಾವತಿ ನೀರಿಗಾಗಿ ಆ. 29 ಕ್ಕೆ ಸೋಮಲಾಪುರದ ಕಟ್ಟಿ ರಂಗನಾಥಸ್ವಾಮಿ ದೇವಾಲಯದ ಆವರಣದಲ್ಲಿ ರೈತರ ಬೃಹತ್ ಸಭೆ --------------------- ಚಿಕ್ಕನಾಯಕನಹಳ್ಳಿ: ತಾಲೂಕಿನ 26 ಕೆರೆಗಳಿಗೆ ಹೇಮಾವತಿ ಕುಡಿಯುವ ನೀರು ಹರಿಸುವ ಯೋಜನೆ ಮಂಜೂರಾಗಿ ದಶಕ ಕಳೆದರೂ, ಕಾಮಗಾರಿ ಪೂರ್ಣಗೊಳ್ಳದೆ ಇರುವುದನ್ನು ಖಂಡಿಸಿ ಹಾಗೂ ಬಾಕಿ ಉಳಿದ ಕೆರೆಗಳಿಗೆ ತಕ್ಷಣ ನೀರು ಹರಿಸಲು ಆಗ್ರಹಿಸಿ ಬೃಹತ್ ರೈತರ ಸಭೆಯು ಆಗಸ್ಟ್ 29 ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಸೋಮಲಾಪುರದ ಕಟ್ಟಿ ಶ್ರೀ ರಂಗನಾಥಸ್ವಾಮಿ ದೇವಾಲಯದ ಆವರಣದಲ್ಲಿ ನಡೆಯಲಿದೆ. ಸರ್ಕಾರವು 2013 ರಲ್ಲೇ ತಾಲೂಕಿನ 26 ಕೆರೆಗಳಿಗೆ ನೀರು ಹರಿಸುವ ಯೋಜನೆಗೆ ಮಂಜೂರಾತಿ ನೀಡಿದ್ದರೂ, ಇದುವರೆಗೆ ಶೆಟ್ಟೀಕೆರೆ, ಸಾಸಲು, ದಬ್ಬೇಘಟ್ಟ, ಮೇಲನಹಳ್ಳಿ ಮತ್ತು ನವಿಲೆ ಕೆರೆಗಳಿಗೆ ಮಾತ್ರ ನೀರು ತಲುಪಿಸಲಾಗಿದೆ. ಆದರೆ, ಸಾಸಲು ಪೆಮ್ಮಲದೇವರಹಳ್ಳಿ ಕೆರೆಯಿಂದ ಗೋಪಾಲನಹಳ್ಳಿ, ಪಟ್ಟದದೇವರಕೆರೆ, ಹಾಲ್ಯುರಿಕೆರೆ, ಮಾದಿಹಳ್ಳಿ, ನೆಲಕೆರೆ, ಮಂಚಸಂದ್ರ, ಬೆನಕನಕಟ್ಟೆ ಹಾಗೂ ಕುಮೂರು ಕೆರೆಗಳಿಗೆ ನೀರು ಹರಿಸುವ ಕಾಮಗಾರಿಯನ್ನು ಮಾಡದೆ ನಿರ್ಲಕ್ಷಿಸಲಾಗಿದೆ ಎಂದು ಸಮಗ್ರ ನೀರಾವರಿ ಅಭಿವೃದ್ಧಿ ಸಮಿತಿ ಆರೋಪಿಸಿದೆ. ಬರದಿಂದ ತತ್ತರಿಸಿದ ಗ್ರಾಮಗಳು: ಈ ಭಾಗದಲ್ಲಿ ಅಂತರ್ಜಲ ಮಟ್ಟ ತೀವ್ರ ಕುಸಿತಗೊಂಡಿದ್ದು, ಕುಡಿಯುವ ನೀರಿಗೂ ತೊಂದರೆಯಾಗಿದೆ. ಸರಿಯಾದ ನೀರಿಲ್ಲದೆ ಜನ ಮತ್ತು ಜಾನುವಾರುಗಳು ಕಷ್ಟಪಡುತ್ತಿದ್ದು, ಸತತ ಹಲವು ವರ್ಷಗಳಿಂದ ಈ ಭಾಗದ ಜನರು ಭೀಕರ ಬರಗಾಲದ ಪರಿಸ್ಥಿತಿಯನ್ನು ಅನುಭವಿಸುತ್ತಿದ್ದಾರೆ. ಸಭೆಯಲ್ಲಿ ಅಧಿಕಾರಿ ಭಾಗಿ: ರೈತರ ಸಂಕಟವನ್ನು ಹೋಗಲಾಡಿಸಲು ನೀರಾವರಿ ಇಲಾಖೆ ಹಾಗೂ ಕಾಲುವೆ ಕಾಮಗಾರಿ ಇಲಾಖೆಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯ ದಿನದಂದೇ ಅಧಿಕಾರಿಗಳೊಂದಿಗೆ ಸ್ಥಳ ತಪಾಸಣೆ ನಡೆಸಿ, ಉಳಿದಿರುವ ಕಾಮಗಾರಿಯನ್ನು ಶೀಘ್ರದಲ್ಲಿ ಮುಗಿಸಿ ನಾಲೆಯಲ್ಲಿ ನೀರು ಹರಿಸುವಂತೆ ಒತ್ತಾಯಿಸಲು ನಿರ್ಧರಿಸಲಾಗಿದೆ. ಈ ರೈತ ಹೋರಾಟದ ಸಭೆಗೆ ತಾಲೂಕಿನ ರೈತರು, ಪ್ರಗತಿಪರ ಸಂಘಟನೆಗಳು, ಮಹಿಳಾ ಸಂಘಟನೆಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಬೆಂಬಲಿಸಬೇಕಾಗಿ ಸಮಗ್ರ ನೀರಾವರಿ ಅಭಿವೃದ್ಧಿ ಸಮಿತಿಯು ವಿನಂತಿಸಿದೆ. ಸಭೆಯ ವಿವರ: ದಿನಾಂಕ: 29-08-2026, ಶನಿವಾರ ಸಮಯ: ಬೆಳಿಗ್ಗೆ 11:00 ಗಂಟೆಗೆ ಸ್ಥಳ: ಸೋಮಲಾಪುರ ಶ್ರೀ ಕಟ್ಟಿ ರಂಗನಾಥಸ್ವಾಮಿ ದೇವಾಲಯ (ಶೆಟ್ಟೀಕೆರೆ, ತಿಪಟೂರು ರಸ್ತೆ)1
- ಸಿಂಪಲ್ ಮ್ಯಾಚ್..1
- ಶಿಡ್ಲಘಟ್ಟ ನಗರದಲ್ಲಿ ಅದ್ದೂರಿಯಾಗಿ ನಡೆದ ಈದ್ ಮಿಲಾದ್ ಸಂಭ್ರಮ...!1
- ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬಿದ್ದ ಮೊಟ್ಟೆ ಟೆಂಪೊ ಟೆಂಪೊ ಜಖಂ.. ಚಾಲಕನಿಗೆ ಗಂಭೀರ ಗಾಯ ಚಾಲಕ ಆನಂದ್ ಆಸ್ಪತ್ರೆಗೆ ದಾಖಲು ನೆಲಮಂಗಲ ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬಿದ್ದ ಮೊಟ್ಟೆ ಟೆಂಪೊ ಟೆಂಪೊ ಜಖಂ.. ಚಾಲಕನಿಗೆ ಗಂಭೀರ ಗಾಯ ನೆಲಮಂಗಲ ಬಳಿಯ ಸೊಂಡೆಕೊಪ್ಪ ಬಳಿ ಘಟನೆ ಸ್ಥಳೀಯರ ನೆರವಿನಿಂದ ಚಾಲಕ ಆನಂದ್ ಆಸ್ಪತ್ರೆಗೆ ದಾಖಲು ನೆಲಮಂಗಲದಲ್ಲಿ ಮೊಟ್ಟೆ ಡಿಲೆವರಿ ಮಾಡಿ ಬರ್ತಿದ್ದ ವೇಳೆ ಅವಘಡ ರಾಜಕಾಲುವೆ3 ಬಿದ್ದ ರಭಸಕ್ಕೆ ಟೆಂಪೋ ಸಂಪೂರ್ಣ ಜಖಂ ಕ್ರೇನ್ ಬಳಸಿ ಟೆಂಪೋ ಮೇಲಕ್ಕೆತ್ತಿದ ಪೊಲೀಸರು2
- ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗನಿಗೆ ಧೈರ್ಯ ತುಂಬಿದ ಸಿಎಂ ಬೆಂಗಳೂರು: ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗ ಮಲ್ಲಿನಾಥ್ ಅವರೊಂದಿಗೆ ಸಿಎಂ ಡಿಕೆ ಶಿವಕುಮಾರ್ ಅವರು ವಿಡಿಯೋ ಕಾಲ್ ಮೂಲಕ ಮಾತನಾಡಿ ಧೈರ್ಯ ತುಂಬಿದ್ದಾರೆ. ಸಂಕಷ್ಟದ ಸಮಯದಲ್ಲಿ ಕನ್ನಡಿಗರ ರಕ್ಷಣೆಗೆನಮ್ಮ ಸರ್ಕಾರವು ಅತ್ಯಂತ ಸಕ್ರಿಯವಾಗಿ ಕಾರ್ಯಪ್ರವೃತ್ತವಾಗಿದ್ದು, ಸಂಕಷ್ಟದಲ್ಲಿರುವ ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿ ಕರೆತರಲು ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದರು.1
- ನೇಪಾಳದಲ್ಲಿ ಭೀಕರ ಪ್ರವಾಹ: ಕ್ಷಣಾರ್ಧದಲ್ಲೇ ಕೊಚ್ಚಿಹೋದ ಮನೆ, ವಾಹನಗಳು1