logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಭದ್ರಾವತಿ-ಈಶ್ವರ್ ಮಲ್ಪೆ ಸಾಹಸ: ನಾಲೆಯಲ್ಲಿ ಕೊಚ್ಚಿ ಹೋದ ನಾಲ್ವರ ಶವ ಹೊರಕ್ಕೆ ಭದ್ರಾವತಿ: ತಾಲೂಕಿನ ಅರಬಿಳಚಿ ಕ್ಯಾಂಪ್​ನ ಭದ್ರಾ ನಾಲೆಯಲ್ಲಿ ಒಂದೇ ಕುಟುಂಬದ ನಾಲ್ವರು ನೀರು ಪಾಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕನೇ ದಿನದ ಕಾರ್ಯಾಚರಣೆ ವೇಳೆ ಮುಳುಗು ತಜ್ಞ ಈಶ್ವರ್ ಮಲ್ಪೆ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಲ್ವರ ಮೃತದೇಹಗಳು ಪತ್ತೆಯಾಗಿವೆ. ನೀರಿನ ರಭಸದಿಂದಾಗಿ ಶೋಧ ಕಾರ್ಯಚರಣೆಗೆ ಅಡ್ಡಿ ಉಂಟಾಗಿತ್ತು. ಅದರ ನಡುವೆಯೂ ಮೃತದೇಹಗಳನ್ನ ಪತ್ತೆ ಹಚ್ಚುವಲ್ಲಿ ಇಂದು ಯಶಸ್ವಿಯಾಗಿದ್ದಾರೆ. ಆ ಮೂಲಕ ಮೃತದೇಹಗಳನ್ನು ಹುಡುಕಿ ಕೊಡುತ್ತೇನೆ ಎಂಬ ತಮ್ಮ ಮಾತನ್ನು ಈಶ್ವರ್ ಮಲ್ಪೆ ಉಳಿಸಿಕೊಂಡಿದ್ದಾರೆ. ಸದ್ಯ ಅವರ ಕಾರ್ಯಕ್ಕೆ ಗ್ರಾಮಸ್ಥರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಈಶ್ವರ್ ಮಲ್ಪೆ ಮೃತದೇಹ ಶೋಧ ಕಾರ್ಯಾಚರಣೆ ನಡೆಸಿದ್ದರು. ಭದ್ರಾ ನಾಲೆಯಲ್ಲಿ ನೀರು ಹರಿವು ಜಾಸ್ತಿ ಹಿನ್ನೆಲೆ ಕಾರ್ಯಾಚರಣೆಗೆ ಸಾಕಷ್ಟು ತೊಡಕು ಉಂಟಾಗಿತ್ತು. ಈ ಹಿನ್ನಲೆ ಶವ ಶೋಧ ಕಾರ್ಯಾಚರಣೆ ವಿಳಂಬ ವಾಗಿತ್ತು. ಕಳೆದ ಮೂರು ದಿನದಲ್ಲಿ ತಾಯಿ ನೀಲಾಬಾಯಿ ಮತ್ತು ರವಿ ಶವ ಪತ್ತೆ ಆಗಿತ್ತು. ನಾಲ್ಕನೇ ದಿನವಾದ ಇಂದು ಕಾರ್ಯಾಚರಣೆ ವೇಳೆ ಮಗಳು ಶ್ವೇತಾ ಮತ್ತು ಅಳಿಯ ಪರಶುರಾಮ ಮೃತದೇಹಗಳು ಪತ್ತೆ ಆಗಿವೆ. ಕಾರ್ಯಾಚರಣೆ ಬಳಿಕ ಮಾತನಾಡಿದ ಈಶ್ವರ್ ಮಲ್ಪೆ, ನಾನು ಮೊದಲ ದಿನವೇ ಮಾತು ಕೊಟ್ಟಿದ್ದೆ. ನಾಲ್ಕು ಶವ ಪತ್ತೆ ಮಾಡಿ ಇಲ್ಲಿಂದ ಹೋಗುತ್ತೇನೆ ಅಂತ. ಅದೇ ರೀತಿ ಮತ್ತೆ ಎರಡು ಶವ ಪತ್ತೆ ಮಾಡಿದೆ. ಈಗ ನಾಲ್ಕು ಶವ ಪತ್ತೆ ಮಾಡಿರುವ ಸಮಾಧಾನ ನನಗಿದೆ. ಆದರೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಶ್ವೇತಾ ಮತ್ತು ಪರಶುರಾಮ ತಂದೆ-ತಾಯಿ ಮೃತಪಟ್ಟಿದ್ದಾರೆ. ಅವರ ಮಕ್ಕಳು ತಂದೆ-ತಾಯಿ ಇಲ್ಲದೇ ತಬ್ಬಲಿ ಆಗಿದ್ದಾರೆ. ನಿಜಕ್ಕೂ ಈ ದುರ್ಘಟನೆಯಿಂದ ನನಗೆ ಬೇಸರ ಆಗಿದೆ. ಕಾರ್ಯಾಚರಣೆಗೆ ಗ್ರಾಮಸ್ಥರು, ಪೋಲೀಸರು ಮತ್ತು ಎಸ್​ಡಿಆರ್​ಎಫ್ ತಂಡ ಸಹಾಯ ಮಾಡಿದೆ ಎಂದು ಹೇಳಿದ್ದಾರೆ.

on 22 January
user_ಆರ್.ವಿ.ಕೃಷ್ಣ
ಆರ್.ವಿ.ಕೃಷ್ಣ
Local News Reporter Bhadravati, Shivamogga•
on 22 January

ಭದ್ರಾವತಿ-ಈಶ್ವರ್ ಮಲ್ಪೆ ಸಾಹಸ: ನಾಲೆಯಲ್ಲಿ ಕೊಚ್ಚಿ ಹೋದ ನಾಲ್ವರ ಶವ ಹೊರಕ್ಕೆ ಭದ್ರಾವತಿ: ತಾಲೂಕಿನ ಅರಬಿಳಚಿ ಕ್ಯಾಂಪ್​ನ ಭದ್ರಾ ನಾಲೆಯಲ್ಲಿ ಒಂದೇ ಕುಟುಂಬದ ನಾಲ್ವರು ನೀರು ಪಾಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕನೇ ದಿನದ ಕಾರ್ಯಾಚರಣೆ ವೇಳೆ ಮುಳುಗು ತಜ್ಞ ಈಶ್ವರ್ ಮಲ್ಪೆ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಲ್ವರ ಮೃತದೇಹಗಳು ಪತ್ತೆಯಾಗಿವೆ. ನೀರಿನ ರಭಸದಿಂದಾಗಿ ಶೋಧ ಕಾರ್ಯಚರಣೆಗೆ ಅಡ್ಡಿ ಉಂಟಾಗಿತ್ತು. ಅದರ ನಡುವೆಯೂ ಮೃತದೇಹಗಳನ್ನ ಪತ್ತೆ ಹಚ್ಚುವಲ್ಲಿ ಇಂದು ಯಶಸ್ವಿಯಾಗಿದ್ದಾರೆ. ಆ ಮೂಲಕ ಮೃತದೇಹಗಳನ್ನು ಹುಡುಕಿ ಕೊಡುತ್ತೇನೆ ಎಂಬ ತಮ್ಮ ಮಾತನ್ನು ಈಶ್ವರ್ ಮಲ್ಪೆ ಉಳಿಸಿಕೊಂಡಿದ್ದಾರೆ. ಸದ್ಯ ಅವರ ಕಾರ್ಯಕ್ಕೆ ಗ್ರಾಮಸ್ಥರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಈಶ್ವರ್ ಮಲ್ಪೆ ಮೃತದೇಹ ಶೋಧ ಕಾರ್ಯಾಚರಣೆ ನಡೆಸಿದ್ದರು. ಭದ್ರಾ ನಾಲೆಯಲ್ಲಿ ನೀರು ಹರಿವು ಜಾಸ್ತಿ ಹಿನ್ನೆಲೆ ಕಾರ್ಯಾಚರಣೆಗೆ ಸಾಕಷ್ಟು ತೊಡಕು ಉಂಟಾಗಿತ್ತು. ಈ ಹಿನ್ನಲೆ ಶವ ಶೋಧ ಕಾರ್ಯಾಚರಣೆ ವಿಳಂಬ

631ebc94-3321-46e2-87e0-ba484d605b3b

ವಾಗಿತ್ತು. ಕಳೆದ ಮೂರು ದಿನದಲ್ಲಿ ತಾಯಿ ನೀಲಾಬಾಯಿ ಮತ್ತು ರವಿ ಶವ ಪತ್ತೆ ಆಗಿತ್ತು. ನಾಲ್ಕನೇ ದಿನವಾದ ಇಂದು ಕಾರ್ಯಾಚರಣೆ ವೇಳೆ ಮಗಳು ಶ್ವೇತಾ ಮತ್ತು ಅಳಿಯ ಪರಶುರಾಮ ಮೃತದೇಹಗಳು ಪತ್ತೆ ಆಗಿವೆ. ಕಾರ್ಯಾಚರಣೆ ಬಳಿಕ ಮಾತನಾಡಿದ ಈಶ್ವರ್ ಮಲ್ಪೆ, ನಾನು ಮೊದಲ ದಿನವೇ ಮಾತು ಕೊಟ್ಟಿದ್ದೆ. ನಾಲ್ಕು ಶವ ಪತ್ತೆ ಮಾಡಿ ಇಲ್ಲಿಂದ ಹೋಗುತ್ತೇನೆ ಅಂತ. ಅದೇ ರೀತಿ ಮತ್ತೆ ಎರಡು ಶವ ಪತ್ತೆ ಮಾಡಿದೆ. ಈಗ ನಾಲ್ಕು ಶವ ಪತ್ತೆ ಮಾಡಿರುವ ಸಮಾಧಾನ ನನಗಿದೆ. ಆದರೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಶ್ವೇತಾ ಮತ್ತು ಪರಶುರಾಮ ತಂದೆ-ತಾಯಿ ಮೃತಪಟ್ಟಿದ್ದಾರೆ. ಅವರ ಮಕ್ಕಳು ತಂದೆ-ತಾಯಿ ಇಲ್ಲದೇ ತಬ್ಬಲಿ ಆಗಿದ್ದಾರೆ. ನಿಜಕ್ಕೂ ಈ ದುರ್ಘಟನೆಯಿಂದ ನನಗೆ ಬೇಸರ ಆಗಿದೆ. ಕಾರ್ಯಾಚರಣೆಗೆ ಗ್ರಾಮಸ್ಥರು, ಪೋಲೀಸರು ಮತ್ತು ಎಸ್​ಡಿಆರ್​ಎಫ್ ತಂಡ ಸಹಾಯ ಮಾಡಿದೆ ಎಂದು ಹೇಳಿದ್ದಾರೆ.

More news from ಕರ್ನಾಟಕ and nearby areas
  • ಶಿವಮೊಗ್ಗ-ಜಿಲ್ಲೆಯ ಸಮೀಪದ ಕರಕುಚ್ಚಿಯಲ್ಲಿ ಶ್ರೀ ಗುಳ್ಳಮ್ಮ ದೇವಿಯ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನೆರವೇರಿತು. ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಪಾಲ್ಗೊಂಡು ಪುನೀತರಾದರು.
    1
    ಶಿವಮೊಗ್ಗ-ಜಿಲ್ಲೆಯ ಸಮೀಪದ ಕರಕುಚ್ಚಿಯಲ್ಲಿ ಶ್ರೀ ಗುಳ್ಳಮ್ಮ ದೇವಿಯ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನೆರವೇರಿತು. ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಪಾಲ್ಗೊಂಡು ಪುನೀತರಾದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    17 hrs ago
  • ದಾವಣಗೆರೆ : ಬಿಸಿಲಿನ ಝಳಕ್ಕೆ ಸೌತೆಕಾಯಿ ಸಾಕಷ್ಟು ಉಪಯೋಗವಾಗಿದ್ದು, ಹೊಸದೊಂದು ರೆಸಿಪಿ ವಿಡಿಯೋದಲ್ಲಿದೆ ತಪ್ಪದೇ ನೋಡಿ
    1
    ದಾವಣಗೆರೆ : ಬಿಸಿಲಿನ ಝಳಕ್ಕೆ ಸೌತೆಕಾಯಿ ಸಾಕಷ್ಟು ಉಪಯೋಗವಾಗಿದ್ದು, ಹೊಸದೊಂದು ರೆಸಿಪಿ ವಿಡಿಯೋದಲ್ಲಿದೆ ತಪ್ಪದೇ ನೋಡಿ
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    5 hrs ago
  • ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ 3 ಸಾವು ಇಬ್ಬರು ಗಂಭೀರ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಪೊಲೀಸ್ ಸಿಬ್ಬಂದಿ ಮೃತಪಟ್ಟ ಘಟನೆ ಭಾನುವಾರ ಬೆಳ್ಳಿಗ್ಗೆ ನಡೆದಿದೆ. ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಬೆಂಗಳೂರಿನಿಂದ ಬಳ್ಳಾರಿಗೆ ಸ್ನೇಹಿತನ ಮದುವೆಗೆ ತೆರಳುತ್ತಿದ್ದ ಕಾರು ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗ್ರಾಮದ ಸಮೀಪ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಘಟನೆಯಲ್ಲಿ ಮೂವರು ಪೊಲೀಸರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರನ್ನು ಬೆಂಗಳೂರು ಮೂಲದ ಪೊಲೀಸ್ ಸಿಬ್ಬಂದಿಗಳಾದ ಆರ್ ಎಸ್‌ಐ ಮಂಜುನಾಥ್ (32), ಆರ್ ಎಸ್‌ಐ ಅಮರೇಶ್ ಹಾಗೂ ಆರ್ ಎಸ್‌ಐ ಸಚಿನ್ ಎಂದು ಗುರುತಿಸಲಾಗಿದೆ. ಮೂವರೂ ರಿಸರ್ವ್ ಪೊಲೀಸ್ ಅಧಿಕಾರಿಗಳಾಗಿದ್ದರು. ಇದೇ ವೇಳೆ ಅಪಘಾತದಲ್ಲಿ ಆರ್ ಎಸ್‌ಐ ಮಹಂತೇಶ್ ಮತ್ತು ಪಿಎಸ್‌ಐ ಈಶ್ವರ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಜಿಲ್ಲಾ ಎಸ್ಪಿ ರಂಜೀತ್ ಕುಮಾರ ಬಂಡಾರು. ಚಳ್ಳಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.
    1
    ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ 3 ಸಾವು ಇಬ್ಬರು ಗಂಭೀರ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಪೊಲೀಸ್ ಸಿಬ್ಬಂದಿ ಮೃತಪಟ್ಟ ಘಟನೆ ಭಾನುವಾರ ಬೆಳ್ಳಿಗ್ಗೆ ನಡೆದಿದೆ. ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ಬೆಂಗಳೂರಿನಿಂದ ಬಳ್ಳಾರಿಗೆ ಸ್ನೇಹಿತನ ಮದುವೆಗೆ ತೆರಳುತ್ತಿದ್ದ ಕಾರು ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗ್ರಾಮದ ಸಮೀಪ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಘಟನೆಯಲ್ಲಿ ಮೂವರು ಪೊಲೀಸರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರನ್ನು ಬೆಂಗಳೂರು ಮೂಲದ ಪೊಲೀಸ್ ಸಿಬ್ಬಂದಿಗಳಾದ ಆರ್ ಎಸ್‌ಐ ಮಂಜುನಾಥ್ (32), ಆರ್ ಎಸ್‌ಐ ಅಮರೇಶ್ ಹಾಗೂ ಆರ್ ಎಸ್‌ಐ ಸಚಿನ್ ಎಂದು ಗುರುತಿಸಲಾಗಿದೆ. ಮೂವರೂ ರಿಸರ್ವ್ ಪೊಲೀಸ್ ಅಧಿಕಾರಿಗಳಾಗಿದ್ದರು.
ಇದೇ ವೇಳೆ ಅಪಘಾತದಲ್ಲಿ ಆರ್ ಎಸ್‌ಐ ಮಹಂತೇಶ್ ಮತ್ತು ಪಿಎಸ್‌ಐ ಈಶ್ವರ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಕುರಿತು ಜಿಲ್ಲಾ ಎಸ್ಪಿ ರಂಜೀತ್ ಕುಮಾರ ಬಂಡಾರು.
ಚಳ್ಳಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • ವಿದ್ಯಾರ್ಥಿನಿ ಹಾಲಿನಲ್ಲಿದ್ದ ಹಾವಿನ ವಿಷ ತೆಗೆದಿದ್ದಾಗಿ ಹುಣಸೆಕಟ್ಟೆ ಗ್ರಾಮದ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ಪ್ರತಿಕ್ರಿಯೆ ನೀಡಿದ್ದಾರೆ. ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯಲ್ಲಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ಅವರು ಪ್ರತಿಕ್ರಿಯೆ ನೀಡಿ ಮಾತನಾಡಿದ್ದು ಮಕ್ಕಳು ಊಟ ಮಾಡಿ ಕುಳಿತಿದ್ದು ಈ ವೇಳೆ ಅಲ್ಲಿದ್ದ ನಾಗರಹಾವು ಮಗುವಿಗೆ ಕಚ್ಚಿದೆ ತಕ್ಷಣ ತಡನಾಡದೆ ಹಾವು ಕಚ್ವಿದ ಜಾಗಕ್ಕೆ ಬಾಯಿಯಿಂದ ವಿಷ ತೆಗೆದು ಕೂಡಲೇ ಮಗುವನ್ನ ಆಸ್ಪತ್ರೆಗೆ ಕರೆತಂದಿದ್ದು ಚಿಕಿತ್ಸೆ ಪಡೆಯುತ್ತಿದ್ದು ವಿಧ್ಯಾರ್ಥಿನಿ ಕೂಡ ಚಿಕಿತ್ಸೆ ಪಡೆಯುತ್ತಿದ್ದಾಗಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ಮಾಹಿತಿ ನೀಡಿದ್ದಾರೆ.
    1
    ವಿದ್ಯಾರ್ಥಿನಿ ಹಾಲಿನಲ್ಲಿದ್ದ ಹಾವಿನ ವಿಷ ತೆಗೆದಿದ್ದಾಗಿ ಹುಣಸೆಕಟ್ಟೆ ಗ್ರಾಮದ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ಪ್ರತಿಕ್ರಿಯೆ ನೀಡಿದ್ದಾರೆ.
ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯಲ್ಲಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ಅವರು ಪ್ರತಿಕ್ರಿಯೆ ನೀಡಿ ಮಾತನಾಡಿದ್ದು ಮಕ್ಕಳು ಊಟ ಮಾಡಿ ಕುಳಿತಿದ್ದು ಈ ವೇಳೆ ಅಲ್ಲಿದ್ದ ನಾಗರಹಾವು ಮಗುವಿಗೆ ಕಚ್ಚಿದೆ ತಕ್ಷಣ ತಡನಾಡದೆ ಹಾವು ಕಚ್ವಿದ ಜಾಗಕ್ಕೆ ಬಾಯಿಯಿಂದ ವಿಷ ತೆಗೆದು ಕೂಡಲೇ ಮಗುವನ್ನ ಆಸ್ಪತ್ರೆಗೆ ಕರೆತಂದಿದ್ದು ಚಿಕಿತ್ಸೆ ಪಡೆಯುತ್ತಿದ್ದು ವಿಧ್ಯಾರ್ಥಿನಿ ಕೂಡ ಚಿಕಿತ್ಸೆ ಪಡೆಯುತ್ತಿದ್ದಾಗಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ಮಾಹಿತಿ ನೀಡಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    20 hrs ago
  • ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಸಮೀಪ ಪ್ರಕಾಶ್ ಸ್ಪಾಂಜ್ ಐರನ್ ಕಂಪನಿ ಹತ್ತಿರ ಇಂದು ಬೆಳಗ್ಗೆ ಸುಮಾರು 7:00 ಗಂಟೆ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರುದಿಂದ ಬಳ್ಳಾರಿಯಲ್ಲಿ ನಡೆಯುವ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐದು ಮಂದಿ ಪೊಲೀಸ್ ಸಿಬ್ಬದಿ ಕಾರು ಲಾರಿಯ ಹಿಂದಿನ ಭಾಗಕ್ಕೆ ಡಿಕ್ಕಿ ಹೊಡೆದಿದೆ. ಚಾಲಕ ನಿದ್ದೆಯ ಮಂಪರಿನಲ್ಲಿ ಇದ್ದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿ ಹೋಗಿದ್ದು, ಸ್ಥಳದಲ್ಲೇ ಮೂವರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ತನಿಖೆ ನಂತರ ತಿಳಿಯಲಿದೆ.
    1
    ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಸಮೀಪ   ಪ್ರಕಾಶ್ ಸ್ಪಾಂಜ್ ಐರನ್ ಕಂಪನಿ ಹತ್ತಿರ ಇಂದು ಬೆಳಗ್ಗೆ ಸುಮಾರು 7:00 ಗಂಟೆ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಬೆಂಗಳೂರುದಿಂದ ಬಳ್ಳಾರಿಯಲ್ಲಿ ನಡೆಯುವ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐದು ಮಂದಿ ಪೊಲೀಸ್  ಸಿಬ್ಬದಿ ಕಾರು ಲಾರಿಯ ಹಿಂದಿನ ಭಾಗಕ್ಕೆ  ಡಿಕ್ಕಿ ಹೊಡೆದಿದೆ. ಚಾಲಕ ನಿದ್ದೆಯ ಮಂಪರಿನಲ್ಲಿ ಇದ್ದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ.
ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿ ಹೋಗಿದ್ದು, ಸ್ಥಳದಲ್ಲೇ ಮೂವರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ತನಿಖೆ ನಂತರ ತಿಳಿಯಲಿದೆ.
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    5 hrs ago
  • Post by Mayur TV Hangal YouTube c
    1
    Post by Mayur TV   Hangal    YouTube c
    user_Mayur TV   Hangal    YouTube c
    Mayur TV Hangal YouTube c
    Psychologist ಹಾನಗಲ್, ಹಾವೇರಿ, ಕರ್ನಾಟಕ•
    21 hrs ago
  • ಹಾವೇರಿ ಜಿಲ್ಲೆ ಶಿಗ್ಗಾವ್ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಮಾನವ ಬಂಧುತ್ವ ವೇದಿಕೆ ಕಾರ್ಯಗಾರವನ್ನು ದಿನಾಂಕ. 15.03.2026ರ ರವಿವಾರ ರಂದು ಜರುಗಲಿದ್ದು ರಾಜ್ಯ ಸಂಚಾಲಕರಾದ ಪ್ರೊಫೆಸರ್ A B ರಾಮಚಂದ್ರಪ್ಪ ಪಾಲ್ಗೊಂಡು ಕಾರ್ಯಗಾರವನ್ನು ಉದ್ದೇಶಿಸಿ ಉಪನ್ಯಾಸ ನೀಡಲಿದ್ದಾರೆ ಎಂದು ಶಿಗ್ಗಾವ್ ತಾಲೂಕ ಘಟಕದ ಸಂಚಾಲಕರಾದ ನ್ಯಾಯವಾದಿ H I ಬೆಳಗಲಿ ಮಾಹಿತಿ ನೀಡಿದರು ಈ ಸಂದರ್ಭದಲ್ಲಿ ಶಿಗ್ಗಾವಿ ತಾಲೂಕಿನ ಗ್ರಾಮ ಘಟಕಗಳ ಪದಾಧಿಕಾರಿಗಳು ಈ ಕಾರ್ಯಗಾರದ ಶಿಬಿರದಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು,
    1
    ಹಾವೇರಿ ಜಿಲ್ಲೆ ಶಿಗ್ಗಾವ್ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಮಾನವ ಬಂಧುತ್ವ ವೇದಿಕೆ ಕಾರ್ಯಗಾರವನ್ನು ದಿನಾಂಕ. 15.03.2026ರ ರವಿವಾರ ರಂದು ಜರುಗಲಿದ್ದು ರಾಜ್ಯ ಸಂಚಾಲಕರಾದ ಪ್ರೊಫೆಸರ್ A B ರಾಮಚಂದ್ರಪ್ಪ ಪಾಲ್ಗೊಂಡು ಕಾರ್ಯಗಾರವನ್ನು ಉದ್ದೇಶಿಸಿ ಉಪನ್ಯಾಸ ನೀಡಲಿದ್ದಾರೆ ಎಂದು ಶಿಗ್ಗಾವ್ ತಾಲೂಕ ಘಟಕದ ಸಂಚಾಲಕರಾದ ನ್ಯಾಯವಾದಿ H I ಬೆಳಗಲಿ ಮಾಹಿತಿ ನೀಡಿದರು ಈ ಸಂದರ್ಭದಲ್ಲಿ ಶಿಗ್ಗಾವಿ ತಾಲೂಕಿನ ಗ್ರಾಮ ಘಟಕಗಳ ಪದಾಧಿಕಾರಿಗಳು ಈ ಕಾರ್ಯಗಾರದ ಶಿಬಿರದಲ್ಲಿ  ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು,
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    15 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    19 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.