ಪ್ರಜಾಪ್ರಭುತ್ವದ ಮೌಲ್ಯಗಳಿಂದ ಸಮಾಜದ ಸಮಸ್ಯೆ ಪರಿಹಾರ ಸಾಧ್ಯ: ಚಿಕ್ಕಬಳ್ಳಾಪುರದಲ್ಲಿ ಸಾರಿಗೆ ಸಚಿವ ಬೈರತಿ ಸುರೇಶ ಅಭಿಮತ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಸಮಾಜದಲ್ಲಿ ಅಸಮಾನತೆ ಇರುವವರೆಗೆ ಮೀಸಲಾತಿ ಅತ್ಯಗತ್ಯ ಪ್ರಜಾಪ್ರಭುತ್ವದ ಬಲವರ್ಧನೆಯಲ್ಲಿ ಯುವ ಸಮುದಾಯದ ಪಾತ್ರ ಹಿರಿದು ಚಿಕ್ಕಬಳ್ಳಾಪುರ : ಪ್ರಜಾಪ್ರಭುತ್ವದ ತತ್ವಗಳು, ಆಶಯಗಳು ಮತ್ತು ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಸಮಾಜದಲ್ಲಿನ ಬಹುತೇಕ ಸಮಸ್ಯೆಗಳು ಕಡಿಮೆಯಾಗುತ್ತವೆ ಎಂದು ಸಾರಿಗೆ ಸಚಿವ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಬೈರತಿ ಸುರೇಶ ಅವರು ಅಭಿಪ್ರಾಯಪಟ್ಟರು. ಚಿಕ್ಕಬಳ್ಳಾಪುರದ ಕನ್ನಡಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೆಲವರು ಮೀಸಲಾತಿ ತೆಗೆಯಬೇಕೆಂದು ಹೇಳುತ್ತಿದ್ದಾರೆ. ಆದರೆ, ಸಮಾಜದಲ್ಲಿ ಅಸಮಾನತೆ ಇರುವವರೆಗೆ ಮೀಸಲಾತಿ ಇರಲೇಬೇಕು ಎಂದು ಅವರು ಪ್ರತಿಪಾದಿಸಿದರು. ಹಿಂದುಳಿದ, ದೀನ ದಲಿತರ ಸಬಲೀಕರಣಕ್ಕೆ ಮೀಸಲಾತಿ ಅತ್ಯಗತ್ಯವಾಗಿದೆ. ಒಂದು ವೇಳೆ ಮೀಸಲಾತಿ ತೆಗೆದರೆ ಶ್ರೀಮಂತರು ಶ್ರೀಮಂತರಾಗಿ, ಬಡವರು ಬಡವರಾಗಿಯೇ ಮುಂದುವರಿಯುತ್ತಾರೆ. ಹೀಗಾಗಿ ಅಸಮಾನತೆಯ ಕಂದಕ ಮತ್ತಷ್ಟು ಹೆಚ್ಚಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು. ನಾವೆಲ್ಲಾ ಭಾರತೀಯರು ಮೊದಲು ನಾವೆಲ್ಲಾ ಭಾರತೀಯರು. ಭಾರತೀಯರಾಗಿಯೇ ಸಹಬಾಳ್ವೆಯಿಂದ ಜೀವನ ಸಾಗಿಸೋಣ. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ನಮಗೆ ಪರಮೋಚ್ಛವಾದ ಸಂವಿಧಾನ ನೀಡಿದ್ದಾರೆ. ಅದುವೇ ನಮಗೆ ಭಗವದ್ಗೀತೆ, ಅದುವೇ ಕುರಾನ್ ಮತ್ತು ಬೈಬಲ್ ಆಗಿದೆ. ಅಂಬೇಡ್ಕರ್ ಅವರು ಒಂದೇ ವರ್ಗಕ್ಕೆ ಸೀಮಿತವಾಗಿದ್ದ ಅಧಿಕಾರವನ್ನು ಎಲ್ಲಾ ವರ್ಗಗಳಿಗೂ ಸಿಗುವಂತೆ ಮಾಡಿದ ಧೀಮಂತ ನಾಯಕರಾಗಿದ್ದಾರೆ. ಅವರು ಕೊಟ್ಟಿರುವ ಸಂವಿಧಾನ ನಮ್ಮ ದೇಶದ ಬೆನ್ನೆಲುಬಾಗಿದ್ದರೆ, ಅದರ ಪೀಠಿಕೆ ಆತ್ಮವಾಗಿದೆ ಎಂದು ಬಣ್ಣಿಸಿದರು. ಜೀತ ಪದ್ಧತಿ, ಬಡತನ, ಅಸ್ಪೃಶ್ಯತೆ ನಿರ್ಮೂಲನೆ ಮಾಡಲು ಆರೋಗ್ಯ, ಉದ್ಯೋಗದಂತಹ ಶಾಸನಬದ್ಧ ಅವಕಾಶಗಳನ್ನು ಸಂವಿಧಾನದ ಮೂಲಕ ನೀಡುವುದರೊಂದಿಗೆ ಅಂಬೇಡ್ಕರ್ ಅದರ ಆತ್ಮ ಸಾಕ್ಷಿಯಾಗಿದ್ದಾರೆ. ಸ್ವಾತಂತ್ರ್ಯ, ಸಮಾನತೆ, ಸಹೋದರತೆ, ಸಹಬಾಳ್ವೆ, ಪ್ರಜಾಪ್ರಭುತ್ವ ವ್ಯವಸ್ಥೆ, ಸಾಮಾಜಿಕ ನ್ಯಾಯ, ಅಭಿವ್ಯಕ್ತಿ ಸ್ವಾತಂತ್ರ್ಯ ಸೇರಿದಂತೆ ಅನೇಕ ಅಂಶಗಳು ಸಂವಿಧಾನದ ಮೌಲ್ಯಗಳಲ್ಲಿ ಅಡಗಿವೆ ಎಂದು ತಿಳಿಸಿದರು. ಡಾ. ಬಿ. ಆರ್. ಅಂಬೇಡ್ಕರ್ ಅವರು ಪ್ರತಿಪಾದಿಸಿದಂತೆ we cannot treat equals unequally and unequals equally ಇದು ಅಸಮಾನತೆಯ ವ್ಯವಸ್ಥೆಯಲ್ಲಿ ಸಮಾನತೆಯನ್ನು ಹೇಗೆ ಸೃಷ್ಟಿಸಬಹುದೆಂಬ ತತ್ವವನ್ನು ಸಾರುತ್ತದೆ. ಈ ಆಶಯದ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ಸಮಾಜ ಕಲ್ಯಾಣ ಇಲಾಖೆ ಮೂಲಕ ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸುತ್ತಿರುವುದು ಹೆಮ್ಮೆಯ ವಿಷಯ ಎಂದರು. ಈ ವರ್ಷದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ವಿಷಯ ಯುವ ಸಂಸತ್ತು. ಈ ದಿನವನ್ನು ಅರ್ಥಪೂರ್ಣವಾಗಿಸುವ ನಿಟ್ಟಿನಲ್ಲಿ ನಾಡಿನೆಲ್ಲೆಡೆ ಯುವ ಸಂಸತ್ತು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಪ್ರಜಾಪ್ರಭುತ್ವದ ಪ್ರಕ್ರಿಯೆಗಳಲ್ಲಿ ಮತ್ತು ನಿರ್ಧಾರಗಳನ್ನು ಕೈಗೊಳ್ಳುವ ವಿಚಾರದಲ್ಲಿ ಯುವ ಜನರ ಪಾತ್ರ ಪ್ರಮುಖವಾಗಿರುತ್ತದೆ. ಈ ದಿಸೆಯಲ್ಲಿ ಯುವ ಸಮೂಹ ಅತ್ಯಂತ ಎಚ್ಚರಿಕೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕೆಂದು ಅವರು ಕರೆ ನೀಡಿದರು. ಪ್ರಜಾಪ್ರಭುತ್ವದ ಆಶಯಗಳು ಮತ್ತು ತತ್ವಗಳನ್ನು ಅಳವಡಿಸಿಕೊಳ್ಳಬೇಕು. ಹೀಗಾದಲ್ಲಿ ಮಾತ್ರ ದೇಶ, ಸಮಾಜದ ಬಹುತೇಕ ಸಮಸ್ಯೆಗಳು ಕಡಿಮೆಯಾಗುತ್ತವೆ ಎಂದು ಅಭಿಪ್ರಾಯಪಟ್ಟರು. ಪ್ರತಿಯೊಬ್ಬರಿಗೂ ತಮ್ಮದೇ ಆದ ಜಾತಿ, ಧರ್ಮ, ಭಾಷೆ, ಸಂಸ್ಕೃತಿ ಇವೆ. ಆದರೆ, ಅವೆಲ್ಲವನ್ನೂ ಮೀರಿ ನಾವೆಲ್ಲರೂ ಭಾರತೀಯರಾಗಿ ಮತ್ತು ವಿಶ್ವಮಾನವರಾಗಿ ಬಾಳಬೇಕಾಗುತ್ತದೆ. ಆಗ ನಮ್ಮ ದೇಶವು ಸರ್ವ ಜನಾಂಗದ ಶಾಂತಿ ತೋಟವಾಗುತ್ತದೆ. ಇಂತಹ ಸಮಾಜ ನಿರ್ಮಾಣಕ್ಕೆ ಇಂದಿನ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಯುವ ಸಂಸತ್ತು ಕಾರ್ಯಕ್ರಮ ಭದ್ರ ಬುನಾದಿಯಾಗಲಿದೆ ಎಂದು ಸಚಿವರು ತಿಳಿಸಿದರು. ಸರ್ ಎಂ.ವಿ ಸ್ಮರಣೆ ದೇಶ ಕಂಡ ಮಹಾನ್ ವ್ಯಕ್ತಿತ್ವದ ಭಾರತರತ್ನ ಸರ್ ಎಂ ವಿಶ್ವೇರಯ್ಯ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಾಧನೆಯನ್ನು ಕೊಂಡಾಡಿದರು. ದೇಶ ನಿರ್ಮಾಣ ಮಾಡುವಲ್ಲಿ ಅವರ ಸೇವೆ ಅನನ್ಯ. ನಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿದರೆ ಜೀವನ ಸಾರ್ಥಕವಾಗುತ್ತದೆ ಎಂದು ವಿಶ್ವೇಶ್ವರಯ್ಯ ಅಂದು ಹೇಳಿದ್ದ ಮಾತನ್ನು ಎಲ್ಲರೂ ಅಳವಡಿಕೊಳ್ಳಬೇಕೆಂದು ಸಚಿವರು ಕರೆ ನೀಡಿದರು. ಜಿಲ್ಲಾಧಿಕಾರಿ ಜಿ.ಪ್ರಭು ಅವರು ಮಾತನಾಡಿ, ರಾಜ ಪ್ರಭುತ್ವ, ಕಮ್ಯುನಿಸ್ಟ್ ಆಡಳಿತ, ಮಿಲಿಟರಿ ಆಡಳಿತ ಹಾಗೂ ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಗಳು ಪ್ರಪಂಚದ ಬೇರೆ ಬೇರೆ ದೇಶಗಳಲ್ಲಿ ಇಂದಿಗೂ ಅಸ್ತಿತ್ವದಲ್ಲಿದೆ. ಆ ಎಲ್ಲಾ ಆಡಳಿತ ವ್ಯವಸ್ಥೆಗಳಿಗಿಂತ ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯು ಅತ್ಯುತ್ತಮವಾಗಿದೆ. ಅಂತಹ ಬೃಹತ್ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದೇಶಕ್ಕೆ ಸಂವಿಧಾನದ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ್ದಾರೆ ಎಂದು ತಿಳಿಸಿದರು. ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್ ಅವರು ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎನ್. ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್, ತಹಸೀಲ್ದಾರ್ ರಶ್ಮಿ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಗೂ ದಲಿತಪರ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಪ್ರಜಾಪ್ರಭುತ್ವದ ಮೌಲ್ಯಗಳಿಂದ ಸಮಾಜದ ಸಮಸ್ಯೆ ಪರಿಹಾರ ಸಾಧ್ಯ: ಚಿಕ್ಕಬಳ್ಳಾಪುರದಲ್ಲಿ ಸಾರಿಗೆ ಸಚಿವ ಬೈರತಿ ಸುರೇಶ ಅಭಿಮತ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಸಮಾಜದಲ್ಲಿ ಅಸಮಾನತೆ ಇರುವವರೆಗೆ ಮೀಸಲಾತಿ ಅತ್ಯಗತ್ಯ ಪ್ರಜಾಪ್ರಭುತ್ವದ ಬಲವರ್ಧನೆಯಲ್ಲಿ ಯುವ ಸಮುದಾಯದ ಪಾತ್ರ ಹಿರಿದು ಚಿಕ್ಕಬಳ್ಳಾಪುರ : ಪ್ರಜಾಪ್ರಭುತ್ವದ ತತ್ವಗಳು, ಆಶಯಗಳು ಮತ್ತು ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಸಮಾಜದಲ್ಲಿನ ಬಹುತೇಕ ಸಮಸ್ಯೆಗಳು ಕಡಿಮೆಯಾಗುತ್ತವೆ ಎಂದು ಸಾರಿಗೆ ಸಚಿವ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಬೈರತಿ ಸುರೇಶ ಅವರು ಅಭಿಪ್ರಾಯಪಟ್ಟರು. ಚಿಕ್ಕಬಳ್ಳಾಪುರದ ಕನ್ನಡಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೆಲವರು ಮೀಸಲಾತಿ ತೆಗೆಯಬೇಕೆಂದು ಹೇಳುತ್ತಿದ್ದಾರೆ. ಆದರೆ, ಸಮಾಜದಲ್ಲಿ ಅಸಮಾನತೆ ಇರುವವರೆಗೆ ಮೀಸಲಾತಿ ಇರಲೇಬೇಕು ಎಂದು ಅವರು ಪ್ರತಿಪಾದಿಸಿದರು. ಹಿಂದುಳಿದ, ದೀನ ದಲಿತರ ಸಬಲೀಕರಣಕ್ಕೆ ಮೀಸಲಾತಿ ಅತ್ಯಗತ್ಯವಾಗಿದೆ. ಒಂದು ವೇಳೆ ಮೀಸಲಾತಿ ತೆಗೆದರೆ ಶ್ರೀಮಂತರು ಶ್ರೀಮಂತರಾಗಿ, ಬಡವರು ಬಡವರಾಗಿಯೇ ಮುಂದುವರಿಯುತ್ತಾರೆ. ಹೀಗಾಗಿ ಅಸಮಾನತೆಯ ಕಂದಕ ಮತ್ತಷ್ಟು ಹೆಚ್ಚಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು. ನಾವೆಲ್ಲಾ ಭಾರತೀಯರು ಮೊದಲು ನಾವೆಲ್ಲಾ ಭಾರತೀಯರು. ಭಾರತೀಯರಾಗಿಯೇ ಸಹಬಾಳ್ವೆಯಿಂದ ಜೀವನ ಸಾಗಿಸೋಣ.
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ನಮಗೆ ಪರಮೋಚ್ಛವಾದ ಸಂವಿಧಾನ ನೀಡಿದ್ದಾರೆ. ಅದುವೇ ನಮಗೆ ಭಗವದ್ಗೀತೆ, ಅದುವೇ ಕುರಾನ್ ಮತ್ತು ಬೈಬಲ್ ಆಗಿದೆ. ಅಂಬೇಡ್ಕರ್ ಅವರು ಒಂದೇ ವರ್ಗಕ್ಕೆ ಸೀಮಿತವಾಗಿದ್ದ ಅಧಿಕಾರವನ್ನು ಎಲ್ಲಾ ವರ್ಗಗಳಿಗೂ ಸಿಗುವಂತೆ ಮಾಡಿದ ಧೀಮಂತ ನಾಯಕರಾಗಿದ್ದಾರೆ. ಅವರು ಕೊಟ್ಟಿರುವ ಸಂವಿಧಾನ ನಮ್ಮ ದೇಶದ ಬೆನ್ನೆಲುಬಾಗಿದ್ದರೆ, ಅದರ ಪೀಠಿಕೆ ಆತ್ಮವಾಗಿದೆ ಎಂದು ಬಣ್ಣಿಸಿದರು. ಜೀತ ಪದ್ಧತಿ, ಬಡತನ, ಅಸ್ಪೃಶ್ಯತೆ ನಿರ್ಮೂಲನೆ ಮಾಡಲು ಆರೋಗ್ಯ, ಉದ್ಯೋಗದಂತಹ ಶಾಸನಬದ್ಧ ಅವಕಾಶಗಳನ್ನು ಸಂವಿಧಾನದ ಮೂಲಕ ನೀಡುವುದರೊಂದಿಗೆ ಅಂಬೇಡ್ಕರ್ ಅದರ ಆತ್ಮ ಸಾಕ್ಷಿಯಾಗಿದ್ದಾರೆ. ಸ್ವಾತಂತ್ರ್ಯ, ಸಮಾನತೆ, ಸಹೋದರತೆ, ಸಹಬಾಳ್ವೆ, ಪ್ರಜಾಪ್ರಭುತ್ವ ವ್ಯವಸ್ಥೆ, ಸಾಮಾಜಿಕ ನ್ಯಾಯ, ಅಭಿವ್ಯಕ್ತಿ ಸ್ವಾತಂತ್ರ್ಯ ಸೇರಿದಂತೆ ಅನೇಕ ಅಂಶಗಳು ಸಂವಿಧಾನದ ಮೌಲ್ಯಗಳಲ್ಲಿ ಅಡಗಿವೆ ಎಂದು ತಿಳಿಸಿದರು. ಡಾ. ಬಿ. ಆರ್. ಅಂಬೇಡ್ಕರ್ ಅವರು ಪ್ರತಿಪಾದಿಸಿದಂತೆ we cannot treat equals unequally and unequals equally ಇದು ಅಸಮಾನತೆಯ ವ್ಯವಸ್ಥೆಯಲ್ಲಿ ಸಮಾನತೆಯನ್ನು ಹೇಗೆ ಸೃಷ್ಟಿಸಬಹುದೆಂಬ ತತ್ವವನ್ನು ಸಾರುತ್ತದೆ. ಈ ಆಶಯದ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ಸಮಾಜ ಕಲ್ಯಾಣ ಇಲಾಖೆ ಮೂಲಕ ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು
ಅತ್ಯಂತ ವಿಜೃಂಭಣೆಯಿಂದ ಆಚರಿಸುತ್ತಿರುವುದು ಹೆಮ್ಮೆಯ ವಿಷಯ ಎಂದರು. ಈ ವರ್ಷದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ವಿಷಯ ಯುವ ಸಂಸತ್ತು. ಈ ದಿನವನ್ನು ಅರ್ಥಪೂರ್ಣವಾಗಿಸುವ ನಿಟ್ಟಿನಲ್ಲಿ ನಾಡಿನೆಲ್ಲೆಡೆ ಯುವ ಸಂಸತ್ತು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಪ್ರಜಾಪ್ರಭುತ್ವದ ಪ್ರಕ್ರಿಯೆಗಳಲ್ಲಿ ಮತ್ತು ನಿರ್ಧಾರಗಳನ್ನು ಕೈಗೊಳ್ಳುವ ವಿಚಾರದಲ್ಲಿ ಯುವ ಜನರ ಪಾತ್ರ ಪ್ರಮುಖವಾಗಿರುತ್ತದೆ. ಈ ದಿಸೆಯಲ್ಲಿ ಯುವ ಸಮೂಹ ಅತ್ಯಂತ ಎಚ್ಚರಿಕೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕೆಂದು ಅವರು ಕರೆ ನೀಡಿದರು. ಪ್ರಜಾಪ್ರಭುತ್ವದ ಆಶಯಗಳು ಮತ್ತು ತತ್ವಗಳನ್ನು ಅಳವಡಿಸಿಕೊಳ್ಳಬೇಕು. ಹೀಗಾದಲ್ಲಿ ಮಾತ್ರ ದೇಶ, ಸಮಾಜದ ಬಹುತೇಕ ಸಮಸ್ಯೆಗಳು ಕಡಿಮೆಯಾಗುತ್ತವೆ ಎಂದು ಅಭಿಪ್ರಾಯಪಟ್ಟರು. ಪ್ರತಿಯೊಬ್ಬರಿಗೂ ತಮ್ಮದೇ ಆದ ಜಾತಿ, ಧರ್ಮ, ಭಾಷೆ, ಸಂಸ್ಕೃತಿ ಇವೆ. ಆದರೆ, ಅವೆಲ್ಲವನ್ನೂ ಮೀರಿ ನಾವೆಲ್ಲರೂ ಭಾರತೀಯರಾಗಿ ಮತ್ತು ವಿಶ್ವಮಾನವರಾಗಿ ಬಾಳಬೇಕಾಗುತ್ತದೆ. ಆಗ ನಮ್ಮ ದೇಶವು ಸರ್ವ ಜನಾಂಗದ ಶಾಂತಿ ತೋಟವಾಗುತ್ತದೆ. ಇಂತಹ ಸಮಾಜ ನಿರ್ಮಾಣಕ್ಕೆ ಇಂದಿನ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಯುವ ಸಂಸತ್ತು ಕಾರ್ಯಕ್ರಮ ಭದ್ರ ಬುನಾದಿಯಾಗಲಿದೆ ಎಂದು ಸಚಿವರು ತಿಳಿಸಿದರು. ಸರ್ ಎಂ.ವಿ ಸ್ಮರಣೆ ದೇಶ ಕಂಡ ಮಹಾನ್ ವ್ಯಕ್ತಿತ್ವದ ಭಾರತರತ್ನ ಸರ್ ಎಂ ವಿಶ್ವೇರಯ್ಯ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಾಧನೆಯನ್ನು ಕೊಂಡಾಡಿದರು. ದೇಶ ನಿರ್ಮಾಣ ಮಾಡುವಲ್ಲಿ ಅವರ ಸೇವೆ
ಅನನ್ಯ. ನಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿದರೆ ಜೀವನ ಸಾರ್ಥಕವಾಗುತ್ತದೆ ಎಂದು ವಿಶ್ವೇಶ್ವರಯ್ಯ ಅಂದು ಹೇಳಿದ್ದ ಮಾತನ್ನು ಎಲ್ಲರೂ ಅಳವಡಿಕೊಳ್ಳಬೇಕೆಂದು ಸಚಿವರು ಕರೆ ನೀಡಿದರು. ಜಿಲ್ಲಾಧಿಕಾರಿ ಜಿ.ಪ್ರಭು ಅವರು ಮಾತನಾಡಿ, ರಾಜ ಪ್ರಭುತ್ವ, ಕಮ್ಯುನಿಸ್ಟ್ ಆಡಳಿತ, ಮಿಲಿಟರಿ ಆಡಳಿತ ಹಾಗೂ ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಗಳು ಪ್ರಪಂಚದ ಬೇರೆ ಬೇರೆ ದೇಶಗಳಲ್ಲಿ ಇಂದಿಗೂ ಅಸ್ತಿತ್ವದಲ್ಲಿದೆ. ಆ ಎಲ್ಲಾ ಆಡಳಿತ ವ್ಯವಸ್ಥೆಗಳಿಗಿಂತ ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯು ಅತ್ಯುತ್ತಮವಾಗಿದೆ. ಅಂತಹ ಬೃಹತ್ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದೇಶಕ್ಕೆ ಸಂವಿಧಾನದ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ್ದಾರೆ ಎಂದು ತಿಳಿಸಿದರು. ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್ ಅವರು ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎನ್. ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್, ತಹಸೀಲ್ದಾರ್ ರಶ್ಮಿ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಗೂ ದಲಿತಪರ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
- ಸಿದ್ಧಾರ್ಥ ನಗರದಲ್ಲಿ ಜೈ ಭೀಮ್ ಗೆಳೆಯರ ಬಳಗದ 2ನೇ ವಾರ್ಷಿಕೋತ್ಸವ:ಸಿ.ಕೆ. ಮೌಲಾ ಶರೀಫ್ ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದರರು1
- ಸೆಪ್ಟೆಂಬರ್ 18 ಕ್ಕೆ ಚಿಂತಾಮಣಿ ನಗರದ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆ ಸೆಪ್ಟೆಂಬರ್ 18 ಕ್ಕೆ ಚಿಂತಾಮಣಿ ನಗರದ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆ. ಚಿಂತಾಮಣಿ ನಗರ ಹೊರವಲಯದ ಮಾಡಿಕೇರೆ ಕ್ರಾಸ್ ಬಳಿ ಇರುವ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಸೆಪ್ಟೆಂಬರ್ 18 ರಂದು ಬೆಳಿಗ್ಗೆ 10.30 ಕ್ಕೆ ಜೆಡಿಎಸ್ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆಯನ್ನು ಹಮ್ಮಿಕೊಂಡಿರುವುದಾಗಿ ಜೆಡಿಎಸ್ ಪಕ್ಷದ ಕೋರ್ ಕಮಿಟಿ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಶಾಸಕರೂ ಆದ ಜೆಕೆ ಕೃಷ್ಣಾರೆಡ್ಡಿ ಯವರು ತಿಳಿಸಿದ್ದಾರೆ. ಚಿಂತಾಮಣಿ ನಗರ ಹೊರವಲಯದ ಜೆಕೆ ಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಮೊದಲು ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಸಭೆ ಮಾಡಲು ಈ ಹಿಂದೆ ನಿರ್ಧರಿಸಲಾಗಿತ್ತು ಆದರೆ ಕಾರಣಾಂತರಗಳಿಂದ ಜೆಡಿಎಸ್ ಪಕ್ಷದ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆಯನ್ನು ಚಿಂತಾಮಣಿ ನಗರ ಹೊರವಲಯದ ಮಾಡಿಕೇರೆ ಕ್ರಾಸ್ ಬಳಿ ಇರುವ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸುವಂತೆ ಮಾಜಿ ಶಾಸಕ ಜೆಕೆ ಕೃಷ್ಣಾರೆಡ್ಡಿ ಯವರು ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎನ್ ರವಿಕುಮಾರ್ ಅವರು ಮಾತನಾಡಿ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕಿದ್ದು ಈ ಹಿನ್ನೆಲೆಯಲ್ಲಿ ಸಭೆಯನ್ನು ಹಮ್ಮಿಕೊಂಡಿದ್ದು 2028 ಕ್ಕೆ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವ ಸಂಕಲ್ಪವನ್ನು ಹೊಂದಿದ್ದು ಈ ನಿಟ್ಟಿನಲ್ಲಿ ಸೆಪ್ಟೆಂಬರ್ 18 ರಂದು ಚಿಂತಾಮಣಿ ನಗರದ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದು ಸದರಿ ಸಭೆಯಲ್ಲಿ ಕೋರ್ ಕಮಿಟಿ ಸದಸ್ಯರು ಆಗಮಿಸಲಿದ್ದು ಈ ಸಭೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಸೇರಿದಂತೆ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.4
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಸೆಪ್ಟೆಂಬರ್ 18 ಕ್ಕೆ ಚಿಂತಾಮಣಿ ನಗರದ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆ.1
- ಹಿಂದೂಗಳನ್ನ ಎರಡನೇ ದರ್ಜೆಯಲ್ಲಿ ನೋಡೋದು ಕಾಂಗ್ರೆಸ್ಸಿನ ರಕ್ತದಲ್ಲೇ ಬಂದಿದೆ ಹಿಂದೂಗಳನ್ನ ಎರಡನೇ ದರ್ಜೆಯಲ್ಲಿ ನೋಡೋದು ಕಾಂಗ್ರೆಸ್ಸಿನ ರಕ್ತದಲ್ಲೇ ಬಂದಿದೆ1
- ಪಣತ್ತೂರಿನಲ್ಲಿ 45 ಎಕರೆ ಅರಣ್ಯ ಭೂಮಿ ಉದ್ಘಾಟನೆಯಾಗಿದೆ,ಆದರೆ 145 ಎಕರೆ ಅರಣ್ಯ ಭೂಮಿಯು ಉದ್ಯಾನವನವಾಗಿ ಆಗಬೇಕು ಮಹದೇವಪುರ ಕ್ಷೇತ್ರದಲ್ಲಿ 6ರಿಂದ 7 ಲಕ್ಷ ಜನ ಮತದಾರರೇ ಇದ್ದಾರೆ.ಇನ್ನು ಹೆಚ್ಚುವರಿಯಾಗಿ ಇಲ್ಲಿಗೆ ಬಂದು ಕೆಲಸ ಮಾಡಿ ಹೋಗುವವರು ನೋಡಿದರೆ 10 ಲಕ್ಷ ಆಗುತ್ತೆ ಇವುಗಳ ಅಭಿವೃದ್ಧಿಗೆ ಎಂಪಿ ಅನುದಾನವನ್ನು ನೀಡಲು ತಯಾರಿದ್ದೇವೆ .145 ಎಕರೆಗಳನ್ನು ಮೂರು ಭಾಗವಾಗಿ ವಿಂಗಡಿಸಲಾಗಿದೆ .ಒಂದು ಭಾಗದಲ್ಲಿ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ.ಹಾಗೆ ಮಿಕ್ಕಿರುವ ನೂರು ಎಕರೆ ಜಾಗದಲ್ಲಿ ಒಂದು ಎಲಿವೇಟರ್ ಪ್ಲೇ ಓವರ್ ಮಾಡಿದರೆ ಸೂಕ್ತ ಎಂದರು1
- ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಸಭೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಭಾಗಿ ಬೆಂಗಳೂರು:ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಸಭೆಯಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಭಾಗವಹಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷರಾದ ಬಿ ಕೆ ಹರಿಪ್ರಸಾದ್, ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ್ ಭಂಡಾರಿ, ವಸಂತ್ ಕುಮಾರ್ ಅವರು ಉಪಸ್ಥಿತರಿದ್ದರು.1
- ವೈಟ್ ಫೀಲ್ಡ್ ದಲಿತ ಸಂಘಟನೆಯ ಮುಖಂಡ ಮತ್ತು ರಾಜ್ಯಧ್ಯಕ್ಷ ಮುರುಗೇಶ್ ರವರ ಮೇಲೆ ದೌರ್ಜನ್ಯ ರಾಜ್ಯಾದ್ಯಂತ ಪ್ರತಿಭಟನೆ ಎಚ್ಚರಿಕೆ ಡಿಎಸ್ಎಸ್ ರಾಜ್ಯಾಧ್ಯಕ್ಷ ಸುಲಿಕುಂಟೆ ಆನಂದ್ ವೈಟ್ ಫೀಲ್ಡ್ ದಲಿತ ಸಂಘಟನೆಯ ಮುಖಂಡ ಮತ್ತು ರಾಜ್ಯಧ್ಯಕ್ಷ ಮುರುಗೇಶ್ ರವರ ಮೇಲೆ ದೌರ್ಜನ್ಯ ರಾಜ್ಯಾದ್ಯಂತ ಪ್ರತಿಭಟನೆ ಎಚ್ಚರಿಕೆ ಡಿಎಸ್ಎಸ್ ರಾಜ್ಯಾಧ್ಯಕ್ಷ ಸುಲಿಕುಂಟೆ ಆನಂದ್1
- ಬೆಂಗಳೂರಿನಲ್ಲಿ 21% ಅರಣ್ಯ ಭೂಮಿ ಇದೆ 33% ಆಗಬೇಕು ,ಕಾಡು ಬೆಳೆಸುವ ಕೆಲಸ ರಾಜ್ಯದಲ್ಲೂ, ದೇಶದಲ್ಲೂ ನಡೆಯಬೇಕು ಸಚಿವ ರಾಮಲಿಂಗಾ ರೆಡ್ಡಿ ಹೇಳಿಕೆ ಪರಿಸರ ವೃದ್ಧಿಯ ಜೊತೆಗೆ ವನ್ಯಜೀವಿಗಳ ರಕ್ಷಣೆ , ವನ್ಯಜೀವಿಗಳಿಂದ ಮಾನವರ ರಕ್ಷಣೆಯು ಆಗಬೇಕು ಆನೆಗಳು ಹೆಚ್ಚಿರುವ ಭಾಗದಲ್ಲಿ ಹೆಚ್ಚಾದ ಸುರಕ್ಷಿತ ಕ್ರಮಗಳನ್ನು ಕೈಗೊಂಡಿದ್ದರು , ಕೆಲವೊಮ್ಮೆ ಅನಾಹುತಗಳು ನಡೀತಿದೆ ಈಗ ಪಣತ್ತೂರಿನಲ್ಲಿ ನಗರ ಉದ್ಯಾನವನ ಉದ್ಘಾಟನೆ ಆಗಿದೆ ಹಾಗೆ ರಸ್ತೆ ಹಾಗೂ ಸೇತುವೆ ಬೇಡಿಕೆ ಇದೆ ಇದರ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚೆ ನಡೆಸಿ ಕ್ರಮ ಕೈಗೊಳ್ಳುತ್ತವೆ ಎಂದಿದ್ದಾರೆ1