logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

​ಅಥಣಿಯಲ್ಲಿ ಬಸವ ಜಯಂತಿ ಸಂಭ್ರಮ: ಶಾಸಕ ಲಕ್ಷ್ಮಣ ಸವದಿಯವರಿಂದ ಮೆರವಣಿಗೆಗೆ ಚಾಲನೆ ​ಅಥಣಿ: ತಾಲೂಕು ಆಡಳಿತ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಪಟ್ಟಣದಲ್ಲಿ ಬಸವ ಜಯಂತಿಯನ್ನು ಅತ್ಯಂತ ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ​ ಅಥಣಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಶಾಸಕ ಲಕ್ಷ್ಮಣ ಸವದಿ ಅವರು ಹಾಗೂ ಸ್ವಾಮೀಜಿಗಳು ಬಸವೇಶ್ವರ ಪುತ್ಥಳಿಗೆ ವಿಶೇಷ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿದರು. ನಂತರ ಬಸವ ಧ್ವಜಕ್ಕೆ ಪೂಜೆ ಸಲ್ಲಿಸಿ, ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಪಲ್ಲಕ್ಕಿ ಉತ್ಸವ ಹಾಗೂ ಭವ್ಯ ಬಸವೇಶ್ವರ ಮೂರ್ತಿಯ ಮೆರವಣಿಗೆಗೆ ಬಸವ ಧ್ವಜ ತೋರಿಸುವ ಮೂಲಕ ಚಾಲನೆ ನೀಡಲಾಯಿತು. ​ಮಠಾಧೀಶರ ಸಾನ್ನಿಧ್ಯ: ಕಾರ್ಯಕ್ರಮದಲ್ಲಿ ಗಚ್ಚಿನ ಮಠದ ಶಿವಬಸವ ಸ್ವಾಮೀಜಿ ಹಾಗೂ ಮೋಟಗಿ ಮಠದ ಪ್ರಭು ಚನ್ನಬಸವ ಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಬಸವಣ್ಣನವರ ತತ್ತ್ವಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ ಎಂದು ಸ್ವಾಮೀಜಿಗಳು ಪ್ರತಿಪಾದಿಸಿದರು. ​ ಬಸವೇಶ್ವರ ವೃತ್ತದಿಂದ ಆರಂಭವಾದ ಮೆರವಣಿಗೆಯು ಶಿವಯೋಗಿ ವೃತ್ತ, ಅಂಬೇಡ್ಕರ್ ವೃತ್ತ ಸೇರಿದಂತೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯಲ್ಲಿ ಬಸವೇಶ್ವರ ಭಾವಚಿತ್ರ ಹಾಗೂ ಶಿವಯೋಗಿಗಳ ಪಲ್ಲಕ್ಕಿ ಉತ್ಸವ ನೋಡುಗರ ಕಣ್ಮನ ಸೆಳೆಯಿತು. ವಿಶೇಷವಾಗಿ ನೂರಾರು ಶೃಂಗಾರಗೊಂಡ ಎತ್ತುಗಳ ಮೆರವಣಿಗೆ ಜನಮನ ಸೂರೆಗೊಂಡಿತು. ​ ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ ಅವರು, "ಜಗಜ್ಯೋತಿ ಬಸವಣ್ಣನವರು ಹಾಕಿಕೊಟ್ಟ ಸಮಾನತೆಯ ಹಾದಿ ನಮಗೆಲ್ಲರಿಗೂ ದಾರಿದೀಪ. ಅವರ ವಿಚಾರಗಳನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು," ಎಂದು ಕರೆ ನೀಡಿದರು. ​ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಷಹಜಹಾನ್ ಡೊಂಗರಗಾಂವ, ಮುಖಂಡ ಸದಾಶಿವ ಬೂಟಾಳಿ, ಪುರಸಭೆ ಅಧ್ಯಕ್ಷೆ ಶಿವಲೀಲಾ ಬೂಟಾಳಿ, ಉಪಾಧ್ಯಕ್ಷೆ ಭುವನೇಶ್ವರಿ ಯಕ್ಕಂಚಿ, ದತ್ತಾ ವಾಷ್ಟರ ಉಪಸ್ಥಿತರಿದ್ದರು. ​ಅಲ್ಲದೆ ಅಧಿಕಾರಿಗಳಾದ ಇಒ ಶಿವಾನಂದ ಕಲ್ಲಾಪುರ, ತಾಲೂಕು ಆರೋಗ್ಯಾಧಿಕಾರಿ ಡಾ. ಬಸಗೌಡ ಕಾಗೆ, ಅಭಿಯಂತ ಪ್ರವೀಣ ಹುಣಸಿಕಟ್ಟಿ, ಬಿಇಒ ಎಂ.ಆರ್. ಮುಂಜೆ, ಪಿಎಸ್ಐ ಜಿ.ಎಸ್. ಉಪ್ಪಾರ ಹಾಗೂ ಪುರಸಭಾ ಸದಸ್ಯರು, ಬಸವ ಭಕ್ತರು ಮತ್ತು ಅಥಣಿಯ ಸಮಸ್ತ ನಾಗರಿಕರು ಈ ಅದ್ಧೂರಿ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

14 hrs ago
user_Dr RAMANNA.S.D
Dr RAMANNA.S.D
Journalist ಅಥಣಿ, ಬೆಳಗಾವಿ, ಕರ್ನಾಟಕ•
14 hrs ago
526fb04e-28aa-4a85-8802-8441dae93e32

​ಅಥಣಿಯಲ್ಲಿ ಬಸವ ಜಯಂತಿ ಸಂಭ್ರಮ: ಶಾಸಕ ಲಕ್ಷ್ಮಣ ಸವದಿಯವರಿಂದ ಮೆರವಣಿಗೆಗೆ ಚಾಲನೆ ​ಅಥಣಿ: ತಾಲೂಕು ಆಡಳಿತ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಪಟ್ಟಣದಲ್ಲಿ ಬಸವ ಜಯಂತಿಯನ್ನು ಅತ್ಯಂತ ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ​ ಅಥಣಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಶಾಸಕ ಲಕ್ಷ್ಮಣ ಸವದಿ ಅವರು ಹಾಗೂ ಸ್ವಾಮೀಜಿಗಳು ಬಸವೇಶ್ವರ ಪುತ್ಥಳಿಗೆ ವಿಶೇಷ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿದರು. ನಂತರ ಬಸವ ಧ್ವಜಕ್ಕೆ ಪೂಜೆ ಸಲ್ಲಿಸಿ, ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ

b42d8f03-e363-4785-acd4-73831d7cdfe4

ಅಧಿಕೃತ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಪಲ್ಲಕ್ಕಿ ಉತ್ಸವ ಹಾಗೂ ಭವ್ಯ ಬಸವೇಶ್ವರ ಮೂರ್ತಿಯ ಮೆರವಣಿಗೆಗೆ ಬಸವ ಧ್ವಜ ತೋರಿಸುವ ಮೂಲಕ ಚಾಲನೆ ನೀಡಲಾಯಿತು. ​ಮಠಾಧೀಶರ ಸಾನ್ನಿಧ್ಯ: ಕಾರ್ಯಕ್ರಮದಲ್ಲಿ ಗಚ್ಚಿನ ಮಠದ ಶಿವಬಸವ ಸ್ವಾಮೀಜಿ ಹಾಗೂ ಮೋಟಗಿ ಮಠದ ಪ್ರಭು ಚನ್ನಬಸವ ಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಬಸವಣ್ಣನವರ ತತ್ತ್ವಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ ಎಂದು ಸ್ವಾಮೀಜಿಗಳು ಪ್ರತಿಪಾದಿಸಿದರು. ​ ಬಸವೇಶ್ವರ ವೃತ್ತದಿಂದ ಆರಂಭವಾದ ಮೆರವಣಿಗೆಯು ಶಿವಯೋಗಿ ವೃತ್ತ,

65770c52-3d04-4f00-b462-8eaf5e18a888

ಅಂಬೇಡ್ಕರ್ ವೃತ್ತ ಸೇರಿದಂತೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯಲ್ಲಿ ಬಸವೇಶ್ವರ ಭಾವಚಿತ್ರ ಹಾಗೂ ಶಿವಯೋಗಿಗಳ ಪಲ್ಲಕ್ಕಿ ಉತ್ಸವ ನೋಡುಗರ ಕಣ್ಮನ ಸೆಳೆಯಿತು. ವಿಶೇಷವಾಗಿ ನೂರಾರು ಶೃಂಗಾರಗೊಂಡ ಎತ್ತುಗಳ ಮೆರವಣಿಗೆ ಜನಮನ ಸೂರೆಗೊಂಡಿತು. ​ ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ ಅವರು, "ಜಗಜ್ಯೋತಿ ಬಸವಣ್ಣನವರು ಹಾಕಿಕೊಟ್ಟ ಸಮಾನತೆಯ ಹಾದಿ ನಮಗೆಲ್ಲರಿಗೂ ದಾರಿದೀಪ. ಅವರ ವಿಚಾರಗಳನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು," ಎಂದು ಕರೆ ನೀಡಿದರು. ​ ಕಾರ್ಯಕ್ರಮದಲ್ಲಿ ಮಾಜಿ

6d38aaf1-0995-4313-8fbf-4dcf99b68aeb

ಶಾಸಕ ಷಹಜಹಾನ್ ಡೊಂಗರಗಾಂವ, ಮುಖಂಡ ಸದಾಶಿವ ಬೂಟಾಳಿ, ಪುರಸಭೆ ಅಧ್ಯಕ್ಷೆ ಶಿವಲೀಲಾ ಬೂಟಾಳಿ, ಉಪಾಧ್ಯಕ್ಷೆ ಭುವನೇಶ್ವರಿ ಯಕ್ಕಂಚಿ, ದತ್ತಾ ವಾಷ್ಟರ ಉಪಸ್ಥಿತರಿದ್ದರು. ​ಅಲ್ಲದೆ ಅಧಿಕಾರಿಗಳಾದ ಇಒ ಶಿವಾನಂದ ಕಲ್ಲಾಪುರ, ತಾಲೂಕು ಆರೋಗ್ಯಾಧಿಕಾರಿ ಡಾ. ಬಸಗೌಡ ಕಾಗೆ, ಅಭಿಯಂತ ಪ್ರವೀಣ ಹುಣಸಿಕಟ್ಟಿ, ಬಿಇಒ ಎಂ.ಆರ್. ಮುಂಜೆ, ಪಿಎಸ್ಐ ಜಿ.ಎಸ್. ಉಪ್ಪಾರ ಹಾಗೂ ಪುರಸಭಾ ಸದಸ್ಯರು, ಬಸವ ಭಕ್ತರು ಮತ್ತು ಅಥಣಿಯ ಸಮಸ್ತ ನಾಗರಿಕರು ಈ ಅದ್ಧೂರಿ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

More news from ಕರ್ನಾಟಕ and nearby areas
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    4 hrs ago
  • ವಿಜಯಪುರ: ಸಿಎಂ ಗಾದಿಗೆ ಹೈಕಮಾಂಡ್‌ನಲ್ಲಿ ಟೆಂಡರ್‌ ನಡೆದಿದೆ: ಶಾಸಕ ಯತ್ನಾಳ್ ಸ್ಫೋಟಕ ಹೇಳಿಕೆ! ವಿಜಯಪುರದಲ್ಲಿ ಸೋಮವಾರ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ರಾಜ್ಯ ಸರ್ಕಾರದ ನಾಯಕತ್ವದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌ನಲ್ಲಿ 'ಟೆಂಡರ್‌ ಬಿಡ್‌' ನಡೆಯುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. "ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ ಎಂಬ ಸಚಿವ ರಾಜಣ್ಣ ಅವರ ಮಾತು ನೂರಕ್ಕೆ ನೂರು ಸತ್ಯ" ಎಂದ ಅವರು, ಸಿಎಂ ಈಗ ಮೊದಲಿನಂತಿಲ್ಲ ಎಂದು ಟೀಕಿಸಿದರು. ಇದೇ ವೇಳೆ ರಾಜ್ಯ ಬಿಜೆಪಿ ನಾಯಕತ್ವ ವಿಫಲವಾಗಿದೆ ಎಂದು ಸ್ವಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕಿದ ಯತ್ನಾಳ್‌, ಲೋಕಸಭೆ ಚುನಾವಣೆಯಲ್ಲಿ ಮಹಿಳೆಯರು ಕಾಂಗ್ರೆಸ್‌ಗೆ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.
    1
    ವಿಜಯಪುರ: ಸಿಎಂ ಗಾದಿಗೆ ಹೈಕಮಾಂಡ್‌ನಲ್ಲಿ ಟೆಂಡರ್‌ ನಡೆದಿದೆ: ಶಾಸಕ ಯತ್ನಾಳ್ ಸ್ಫೋಟಕ ಹೇಳಿಕೆ!
ವಿಜಯಪುರದಲ್ಲಿ ಸೋಮವಾರ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ರಾಜ್ಯ ಸರ್ಕಾರದ ನಾಯಕತ್ವದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌ನಲ್ಲಿ 'ಟೆಂಡರ್‌ ಬಿಡ್‌' ನಡೆಯುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. "ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ ಎಂಬ ಸಚಿವ ರಾಜಣ್ಣ ಅವರ ಮಾತು ನೂರಕ್ಕೆ ನೂರು ಸತ್ಯ" ಎಂದ ಅವರು, ಸಿಎಂ ಈಗ ಮೊದಲಿನಂತಿಲ್ಲ ಎಂದು ಟೀಕಿಸಿದರು. ಇದೇ ವೇಳೆ ರಾಜ್ಯ ಬಿಜೆಪಿ ನಾಯಕತ್ವ ವಿಫಲವಾಗಿದೆ ಎಂದು ಸ್ವಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕಿದ ಯತ್ನಾಳ್‌, ಲೋಕಸಭೆ ಚುನಾವಣೆಯಲ್ಲಿ ಮಹಿಳೆಯರು ಕಾಂಗ್ರೆಸ್‌ಗೆ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    8 hrs ago
  • ಗುಳೇದಗುಡ್ಡ: ಬಿಸಿಲಿನ ತಾಪಮಾನದಿಂದ ಕಂಗೆಟ್ಟಿದ್ದ ಪಟ್ಟಣದ ಜನರಿಗೆ ಸೋಮವಾರ ಸಂಜೆ ಸುರಿದ ಆನೆಕಲ್ಲು ಮಳೆ ತಂಪೆರೆಯಿತು. ಚಿಕ್ಕ ಚಿಕ್ಕ ಮಕ್ಕಳು ಆನೆಕಲ್ಲು ಹಿಡಿದು ಸವಿದರು.
    1
    ಗುಳೇದಗುಡ್ಡ: ಬಿಸಿಲಿನ ತಾಪಮಾನದಿಂದ ಕಂಗೆಟ್ಟಿದ್ದ ಪಟ್ಟಣದ  ಜನರಿಗೆ ಸೋಮವಾರ ಸಂಜೆ  ಸುರಿದ ಆನೆಕಲ್ಲು ಮಳೆ ತಂಪೆರೆಯಿತು. ಚಿಕ್ಕ ಚಿಕ್ಕ ಮಕ್ಕಳು ಆನೆಕಲ್ಲು ಹಿಡಿದು ಸವಿದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    8 hrs ago
  • ..... ಪೊಲೀಸ್‌ ಅಧಿಕಾರಿ ಮೇಲೆ ..... ಅಧಿಕಾರಿಗಳಿಂದ ಕಿರುಕುಳ ವಿಡಿಯೋ ಮಾಡಿ ನ್ಯಾಯಕ್ಕಾಗಿ ಅಂಗಲಾಚಿದ ಇನ್ಸ್‌ಪೆಕ್ಟರ್ ಶ್ರೀನಿವಾಸ್ . . . #suddipoint #enrisamasse #policeofficer
    1
    ..... ಪೊಲೀಸ್‌ ಅಧಿಕಾರಿ ಮೇಲೆ 
..... ಅಧಿಕಾರಿಗಳಿಂದ ಕಿರುಕುಳ
ವಿಡಿಯೋ ಮಾಡಿ ನ್ಯಾಯಕ್ಕಾಗಿ
ಅಂಗಲಾಚಿದ ಇನ್ಸ್‌ಪೆಕ್ಟರ್ ಶ್ರೀನಿವಾಸ್
.
.
.
#suddipoint #enrisamasse #policeofficer
    user_Suddi Point
    Suddi Point
    Newsstand ಬೆಳಗಾವಿ, ಬೆಳಗಾವಿ, ಕರ್ನಾಟಕ•
    6 hrs ago
  • Post by Uday Chougale
    1
    Post by Uday Chougale
    user_Uday Chougale
    Uday Chougale
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    7 hrs ago
  • ದುರಂತ: ಕಾವೇರಿ ನದಿಯಲ್ಲಿ ಈಜಲು ಹೋದ ಆರು ಮಂದಿ ಜಲಸಮಾಧಿ ​ಮೈಸೂರು: ಜಿಲ್ಲೆಯ ಕೆ.ಆರ್. ನಗರದ ಪ್ರಸಿದ್ಧ ಅರ್ಕೇಶ್ವರ ದೇಗುಲದ ಬಳಿ ಹರಿಯುವ ಕಾವೇರಿ ನದಿಯಲ್ಲಿ ಈಜಲು ಹೋದ ಆರು ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಅತ್ಯಂತ ಘೋರ ಘಟನೆ ನಡೆದಿದೆ. ​
    1
    ದುರಂತ: ಕಾವೇರಿ ನದಿಯಲ್ಲಿ ಈಜಲು ಹೋದ ಆರು ಮಂದಿ ಜಲಸಮಾಧಿ
​ಮೈಸೂರು: ಜಿಲ್ಲೆಯ ಕೆ.ಆರ್. ನಗರದ ಪ್ರಸಿದ್ಧ ಅರ್ಕೇಶ್ವರ ದೇಗುಲದ ಬಳಿ ಹರಿಯುವ ಕಾವೇರಿ ನದಿಯಲ್ಲಿ ಈಜಲು ಹೋದ ಆರು ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಅತ್ಯಂತ ಘೋರ ಘಟನೆ ನಡೆದಿದೆ.
​
    user_JB NEWS ಕನ್ನಡ
    JB NEWS ಕನ್ನಡ
    NEWS REPORTER BIDAR Belagavi, Karnataka•
    10 hrs ago
  • *ರಾಯಬಾಗದಲ್ಲಿ ಬಸವ ಜಯಂತಿಯ ಹಳ್ಳಿ ಸೊಬಗು: ಶಿಕ್ಷಣ ಪ್ರೇಮಿ ಪಾಟೀಲ ಪರಿವಾರದ ಜನಸೇವೆಗೆ ಸಾಕ್ಷಿಯಾದ ಶೋಭಾಯಾತ್ರೆ* ಕಾಯಕವೇ ಕೈಲಾಸ ಎಂದು ಸಾರಿದ ಜಗಜ್ಯೋತಿ ಬಸವಣ್ಣನವರ ಜಯಂತಿಯ ನಿಮಿತ್ತ ಇಂದು ರಾಯಬಾಗ ಪಟ್ಟಣ ಭಕ್ತಿ ಮತ್ತು ಸಂಭ್ರಮದ ಕಡಲಲ್ಲಿ ತೇಲಿತು. ಪಟ್ಟಣದಾದ್ಯಂತ ಹಮ್ಮಿಕೊಳ್ಳಲಾಗಿದ್ದ ಭವ್ಯ ಶೋಭಾಯಾತ್ರೆಯು ಹಳ್ಳಿಯ ಸೊಬಗನ್ನು ಮರುಸೃಷ್ಟಿಸಿ ನೋಡುಗರ ಕಣ್ಮನ ಸೆಳೆಯಿತು. ​ಹಿಂದೂ ಧರ್ಮದಲ್ಲಿ ಬಸವಣ್ಣ ಅಥವಾ ನಂದಿ ಎಂದು ಪೂಜಿಸಲ್ಪಡುವ ಸುಮಾರು 170ಕ್ಕೂ ಹೆಚ್ಚು ಎತ್ತುಗಳನ್ನು ಅತ್ಯಂತ ಸುಂದರವಾಗಿ ಅಲಂಕರಿಸಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಮಾಡಲಾಗಿತ್ತು. ಸಾಲು ಸಾಲಾಗಿ ಸಾಗುತ್ತಿದ್ದ ಈ ಎತ್ತುಗಳ ಗಾಂಭೀರ್ಯವು ಗ್ರಾಮೀಣ ಸೊಬಗನ್ನು ಎತ್ತಿ ತೋರಿಸುವಂತಿತ್ತು. ಮೆರವಣಿಗೆಯ ಮುಂಚೂಣಿಯಲ್ಲಿ ಕಂಗೊಳಿಸುತ್ತಿದ್ದ ಬಸವಣ್ಣನವರ ಬೃಹತ್ ಪುತ್ಥಳಿಯು ಭಕ್ತರ ಪಾಲಿಗೆ ದರ್ಶನ ಭಾಗ್ಯವನ್ನೇ ನೀಡಿತು. ರಾಯಬಾಗದ ಇತಿಹಾಸದಲ್ಲಿ ವಸಂತರಾವ್ ಪಾಟೀಲ್ ಅವರ ಕುಟುಂಬದ ಹೆಸರು ಅಚ್ಚಳಿಯದಂತದ್ದು. ಅಜ್ಜನ ಕಾಲದಿಂದಲೂ ಬಡವರಿಗೆ ಅಕ್ಷರ ದಾಸೋಹ ಮಾಡುತ್ತಾ ಬಂದಿರುವ ಈ ಕುಟುಂಬ, ಸಾವಿರಾರು ಜನ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಲು ಕಾರಣವಾಗಿದೆ. ಇಂದಿಗೂ ಶಿಕ್ಷಣ ಪ್ರೇಮಿಯಾಗಿ ಬಡ ಮಕ್ಕಳ ಪಾಲಿನ ಆಶಾಕಿರಣವಾಗಿರುವ ವಸಂತರಾವ್ ಪಾಟೀಲ್ ಅವರ ಸರಳತೆ ಎಲ್ಲರಿಗೂ ಮಾದರಿ. ಈ ಮೆರವಣಿಗೆಯ ವಿಶೇಷ ಆಕರ್ಷಣೆಯೆಂದರೆ, ಹಿರಿಯರು ಮತ್ತು ಯುವಕರ ಹೃದಯದಲ್ಲಿ ಸ್ಥಾನ ಪಡೆದಿರುವ ಯುವ ನಾಯಕ ಪ್ರಣಯ್ ಅಣ್ಣ ಪಾಟೀಲ್ ಅವರ ಮೇಲಿನ ಅಭಿಮಾನ. ಸಮಾಜ ಸೇವೆಯಲ್ಲಿ ಸದಾ ಮುಂಚೂಣಿಯಲ್ಲಿರುವ ಅವರ ಭಾವಚಿತ್ರವನ್ನು ಎತ್ತುಗಳ ಮೇಲೆ ಕಲಾತ್ಮಕವಾಗಿ ಬಿಡಿಸಿದ್ದು, ಜನರ ವಿಶೇಷ ಗಮನ ಸೆಳೆಯಿತು. ​"ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ಹಿರಿಯರು ಒಂದೆಡೆಯಾದರೆ, ಸಮಾಜ ಸೇವೆಯ ಮೂಲಕ ಯುವ ಶಕ್ತಿಯನ್ನು ಸಂಘಟಿಸುತ್ತಿರುವ ಪ್ರಣಯ್ ಅಣ್ಣ ಪಾಟೀಲ್ ಅವರ ನಾಯಕತ್ವ ರಾಯಬಾಗಕ್ಕೆ ಹೆಮ್ಮೆ."
    1
    *ರಾಯಬಾಗದಲ್ಲಿ ಬಸವ ಜಯಂತಿಯ ಹಳ್ಳಿ ಸೊಬಗು: ಶಿಕ್ಷಣ ಪ್ರೇಮಿ ಪಾಟೀಲ ಪರಿವಾರದ ಜನಸೇವೆಗೆ ಸಾಕ್ಷಿಯಾದ ಶೋಭಾಯಾತ್ರೆ*
ಕಾಯಕವೇ ಕೈಲಾಸ ಎಂದು ಸಾರಿದ ಜಗಜ್ಯೋತಿ ಬಸವಣ್ಣನವರ ಜಯಂತಿಯ ನಿಮಿತ್ತ ಇಂದು ರಾಯಬಾಗ ಪಟ್ಟಣ ಭಕ್ತಿ ಮತ್ತು ಸಂಭ್ರಮದ ಕಡಲಲ್ಲಿ ತೇಲಿತು. ಪಟ್ಟಣದಾದ್ಯಂತ ಹಮ್ಮಿಕೊಳ್ಳಲಾಗಿದ್ದ ಭವ್ಯ ಶೋಭಾಯಾತ್ರೆಯು ಹಳ್ಳಿಯ ಸೊಬಗನ್ನು ಮರುಸೃಷ್ಟಿಸಿ ನೋಡುಗರ ಕಣ್ಮನ ಸೆಳೆಯಿತು.
​ಹಿಂದೂ ಧರ್ಮದಲ್ಲಿ ಬಸವಣ್ಣ ಅಥವಾ ನಂದಿ ಎಂದು ಪೂಜಿಸಲ್ಪಡುವ ಸುಮಾರು 170ಕ್ಕೂ ಹೆಚ್ಚು ಎತ್ತುಗಳನ್ನು ಅತ್ಯಂತ ಸುಂದರವಾಗಿ ಅಲಂಕರಿಸಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಮಾಡಲಾಗಿತ್ತು. ಸಾಲು ಸಾಲಾಗಿ ಸಾಗುತ್ತಿದ್ದ ಈ ಎತ್ತುಗಳ ಗಾಂಭೀರ್ಯವು ಗ್ರಾಮೀಣ ಸೊಬಗನ್ನು ಎತ್ತಿ ತೋರಿಸುವಂತಿತ್ತು. ಮೆರವಣಿಗೆಯ ಮುಂಚೂಣಿಯಲ್ಲಿ ಕಂಗೊಳಿಸುತ್ತಿದ್ದ ಬಸವಣ್ಣನವರ ಬೃಹತ್ ಪುತ್ಥಳಿಯು ಭಕ್ತರ ಪಾಲಿಗೆ ದರ್ಶನ ಭಾಗ್ಯವನ್ನೇ ನೀಡಿತು.
ರಾಯಬಾಗದ ಇತಿಹಾಸದಲ್ಲಿ ವಸಂತರಾವ್ ಪಾಟೀಲ್ ಅವರ ಕುಟುಂಬದ ಹೆಸರು ಅಚ್ಚಳಿಯದಂತದ್ದು. ಅಜ್ಜನ ಕಾಲದಿಂದಲೂ ಬಡವರಿಗೆ ಅಕ್ಷರ ದಾಸೋಹ ಮಾಡುತ್ತಾ ಬಂದಿರುವ ಈ ಕುಟುಂಬ, ಸಾವಿರಾರು ಜನ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಲು ಕಾರಣವಾಗಿದೆ. ಇಂದಿಗೂ ಶಿಕ್ಷಣ ಪ್ರೇಮಿಯಾಗಿ ಬಡ ಮಕ್ಕಳ ಪಾಲಿನ ಆಶಾಕಿರಣವಾಗಿರುವ ವಸಂತರಾವ್ ಪಾಟೀಲ್ ಅವರ ಸರಳತೆ ಎಲ್ಲರಿಗೂ ಮಾದರಿ.
ಈ ಮೆರವಣಿಗೆಯ ವಿಶೇಷ ಆಕರ್ಷಣೆಯೆಂದರೆ, ಹಿರಿಯರು ಮತ್ತು ಯುವಕರ ಹೃದಯದಲ್ಲಿ ಸ್ಥಾನ ಪಡೆದಿರುವ ಯುವ ನಾಯಕ ಪ್ರಣಯ್ ಅಣ್ಣ ಪಾಟೀಲ್ ಅವರ ಮೇಲಿನ ಅಭಿಮಾನ. ಸಮಾಜ ಸೇವೆಯಲ್ಲಿ ಸದಾ ಮುಂಚೂಣಿಯಲ್ಲಿರುವ ಅವರ ಭಾವಚಿತ್ರವನ್ನು ಎತ್ತುಗಳ ಮೇಲೆ ಕಲಾತ್ಮಕವಾಗಿ ಬಿಡಿಸಿದ್ದು, ಜನರ ವಿಶೇಷ ಗಮನ ಸೆಳೆಯಿತು.
​"ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ಹಿರಿಯರು ಒಂದೆಡೆಯಾದರೆ, ಸಮಾಜ ಸೇವೆಯ ಮೂಲಕ ಯುವ ಶಕ್ತಿಯನ್ನು ಸಂಘಟಿಸುತ್ತಿರುವ ಪ್ರಣಯ್ ಅಣ್ಣ ಪಾಟೀಲ್ ಅವರ ನಾಯಕತ್ವ ರಾಯಬಾಗಕ್ಕೆ ಹೆಮ್ಮೆ."
    user_Vajramani nasalapure
    Vajramani nasalapure
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    13 hrs ago
  • ಬಸವ ಜಯಂತಿ ನಿಮಿತ್ತ ಈ ದಿನ ವಿಜಯಪುರ ನಗರದಲ್ಲಿನ ಬಸವಣ್ಣನವರ ಪುತ್ಥಳಿಗೆ ವಿವಿಧ ಗಣ್ಯರು ಭಕ್ತಿಯಿಂದ ಮಾಲಾರ್ಪಣೆ ಮಾಡಿದರು. ಆ ಮೇರು ಪುರುಷನ ಆದರ್ಶಗಳು ಹಾಗೂ ವಚನ ಸಂದೇಶಗಳನ್ನು ಸ್ಮರಿಸುತ್ತಾ ನಮಸ್ಕರಿಸಿದರು. ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಹಾನಗರ ಪಾಲಿಕೆ ಮೇಯ‌ರ್ ಎಂ.ಎಸ್.ಕರಡಿ ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದರು. ವಿಶ್ವಗುರು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ ಬಸವ ಜ್ಯೋತಿಯನ್ನು ಹಿಡಿದು, ವಿಜಯಪುರ ಬಸವೇಶ್ವರ ವೃತ್ತದವರೆಗೆ ಪಾದಯಾತ್ರೆ ಕೈಗೊಂಡಿದ್ದ ವಿಜಯಪುರ ಸೈಕ್ಲಿಂಗ್ ಗ್ರೂಪ್ ಸದಸ್ಯರನ್ನು, ವಿವಿಧ ಸಂಘಟನೆಗಳ ಕಾರ್ಯಕರ್ತರನ್ನು ಹಾಗೂ ನೂರಾರು ಬಸವಭಕ್ತರನ್ನು ಈ ಸಂದರ್ಭದಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು ಈ ಐತಿಹಾಸಿಕ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಉತ್ಸಾಹಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಗೌರವಿಸಿದರು. ಭಕ್ತಿಪೂರ್ವಕ ಪಾದಯಾತ್ರೆಯು ನಮ್ಮ ನಾಡಿನಲ್ಲಿ ಬಸವ ತತ್ವದ ಜಾಗೃತಿಯನ್ನು ಮತ್ತಷ್ಟು ಹೆಚ್ಚಿಸಲಿ ಎಂಬ ಆಶಯ ವ್ಯಕ್ತವಾಯಿತು.
    1
    ಬಸವ ಜಯಂತಿ ನಿಮಿತ್ತ ಈ ದಿನ ವಿಜಯಪುರ ನಗರದಲ್ಲಿನ ಬಸವಣ್ಣನವರ ಪುತ್ಥಳಿಗೆ ವಿವಿಧ ಗಣ್ಯರು ಭಕ್ತಿಯಿಂದ ಮಾಲಾರ್ಪಣೆ ಮಾಡಿದರು. ಆ ಮೇರು ಪುರುಷನ ಆದರ್ಶಗಳು ಹಾಗೂ ವಚನ ಸಂದೇಶಗಳನ್ನು ಸ್ಮರಿಸುತ್ತಾ ನಮಸ್ಕರಿಸಿದರು.
ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಹಾನಗರ ಪಾಲಿಕೆ ಮೇಯ‌ರ್ ಎಂ.ಎಸ್.ಕರಡಿ ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದರು. ವಿಶ್ವಗುರು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ ಬಸವ ಜ್ಯೋತಿಯನ್ನು ಹಿಡಿದು, ವಿಜಯಪುರ ಬಸವೇಶ್ವರ ವೃತ್ತದವರೆಗೆ ಪಾದಯಾತ್ರೆ ಕೈಗೊಂಡಿದ್ದ ವಿಜಯಪುರ ಸೈಕ್ಲಿಂಗ್ ಗ್ರೂಪ್ ಸದಸ್ಯರನ್ನು, ವಿವಿಧ ಸಂಘಟನೆಗಳ ಕಾರ್ಯಕರ್ತರನ್ನು ಹಾಗೂ ನೂರಾರು ಬಸವಭಕ್ತರನ್ನು ಈ ಸಂದರ್ಭದಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು ಈ ಐತಿಹಾಸಿಕ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಉತ್ಸಾಹಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಗೌರವಿಸಿದರು. ಭಕ್ತಿಪೂರ್ವಕ ಪಾದಯಾತ್ರೆಯು ನಮ್ಮ ನಾಡಿನಲ್ಲಿ ಬಸವ ತತ್ವದ ಜಾಗೃತಿಯನ್ನು ಮತ್ತಷ್ಟು ಹೆಚ್ಚಿಸಲಿ ಎಂಬ ಆಶಯ ವ್ಯಕ್ತವಾಯಿತು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    14 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.