logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೋಲಾರ ತಾಲೂಕಿನ ವಕ್ಕಲೇರಿ ಹೋಬಳಿಯ ಚಿನ್ನಾಪುರ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದ ನಾಟಕೋತ್ಸವ ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡ ಸಿ.ಎಂ.ಆರ್. ಶ್ರೀನಾಥ್ ಭಾಗವಹಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಪ್ರದರ್ಶನಗೊಳ್ಳುವ ನಾಟಕಗಳು ಕೇವಲ ಮನರಂಜನೆಗೆ ಸೀಮಿತವಾಗದೆ, ಸಮಾಜವನ್ನು ತಿದ್ದುವ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವಂತಿದ್ದಾಗ ಮಾತ್ರ ಉತ್ತಮ ಸಮಾಜ ನಿರ್ಮಿಸಲು ಸಾಧ್ಯ ಎಂದು ಅವರು ಹೇಳಿದರು. ನಾಟಕದ ಉದ್ದೇಶ ಕೇವಲ ಉಪದೇಶ ನೀಡುವುದಲ್ಲ, ಪ್ರೇಕ್ಷಕರು ಅದರ ಸಂದೇಶವನ್ನು ಅರ್ಥೈಸಿಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದ ಅವರು, ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಉತ್ತೇಜನ ನೀಡಿದರೆ ಗ್ರಾಮಗಳಲ್ಲಿ ಶಾಂತಿ, ಸೌಹಾರ್ದತೆ ಹಾಗೂ ನೆಮ್ಮದಿ ನೆಲೆಸುತ್ತದೆ ಎಂದರು. ವೇದಿಕೆಯಲ್ಲಿ ಪ್ರದರ್ಶನಗೊಳ್ಳುವ ಪಾತ್ರಗಳು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳನ್ನು ಸಾರುವಂತಿರಬೇಕು ಎಂದು ಆಶಿಸಿದ ಅವರು, ಚುನಾವಣೆಗಳಲ್ಲಿ ಸೋಲು ಗೆಲುವು ಸಹಜವಾಗಿದ್ದು ಜನರ ಕಷ್ಟ-ಸುಖಗಳಲ್ಲಿ ತಾವು ನಿರಂತರವಾಗಿ ಜೊತೆಗಿರುವುದಾಗಿ ತಿಳಿಸಿದರು. ರಾಜ್ಯ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ವಕ್ಕಲೇರಿ ರಾಮು ಮಾತನಾಡಿ, ಸಮಾಜದಲ್ಲಿ ಎಲ್ಲಿ ಸತ್ಯ ಮತ್ತು ಧರ್ಮ ಇರುತ್ತದೆಯೋ ಅಂತಹ ಕಡೆಯಲ್ಲಿ ಶನಿಮಹಾತ್ಮನ ಅನುಗ್ರಹವೂ ಇರುತ್ತದೆ. ನಾವು ಯಾವತ್ತೂ ಧರ್ಮದ ಮಾರ್ಗದಲ್ಲಿ ನಡೆದರೆ ಜೀವನದಲ್ಲಿ ಒಳ್ಳೆಯ ಕಾಲ ಬಂದೇ ಬರುತ್ತದೆ ಎಂದು ಅಭಿಪ್ರಾಯಪಟ್ಟರು. ಎಲ್.ಜಿ ಫೌಂಡೇಶನ್ ಅಧ್ಯಕ್ಷ ದೊಡ್ಡವಲ್ಲಬ್ಬಿ ಲಕ್ಷ್ಮಣಗೌಡ ಮಾತನಾಡಿ, ನಾಟಕದಲ್ಲಿ ಸಣ್ಣದು ದೊಡ್ಡದು ಎಂಬ ಪಾತ್ರ ಇರುವುದಿಲ್ಲ, ಪ್ರತಿಯೊಬ್ಬ ಕಲಾವಿದನ ಪಾತ್ರವೂ ಮಹತ್ವದ್ದಾಗಿರುತ್ತದೆ. ಜನರು ಅಹಂಕಾರವನ್ನು ಬಿಟ್ಟು ಸಮಾಜಕ್ಕೆ ಒಳಿತು ಬಯಸಬೇಕು ಹಾಗೂ ಸಾಂಪ್ರದಾಯಿಕ ಕಲೆಗಳನ್ನು ಉಳಿಸುವ ಜವಾಬ್ದಾರಿಯನ್ನು ಹೊರಬೇಕು ಎಂದರು. ಈ ಕಾರ್ಯಕ್ರಮದಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಬಿಜೆಪಿ ಹಿರಿಯ ಮುಖಂಡ ಬೆಗ್ಲಿ ಸೂರ್ಯಪ್ರಕಾಶ್, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಮಂಜುನಾಥ್, ಮುಖಂಡರಾದ ಮುದವತ್ತಿ ಎಸ್.ಕೃಷ್ಣಪ್ಪ, ವಡಗೇರಿ ರಮೇಶ್, ಜಂಗಾಲಹಳ್ಳಿ ಶ್ರೀನಿವಾಸ್, ಶೆಟ್ಟಿಗಾನಹಳ್ಳಿ ಎಸ್ಎಂಎಸ್ ಸಂತೋಷ್, ನದೀಂ ಬೇಗ್, ಟೈಲರ್ ಶಿವಕುಮಾರ್, ವಕ್ಕಲೇರಿ ಚಿರು, ಚಿನ್ನಾಪುರ ನಾರಾಯಣಸ್ವಾಮಿ, ಉಮೇಶ್, ಪಿಳ್ಳಪ್ಪ ಸೇರಿದಂತೆ ಗ್ರಾಮಸ್ಥರು ಹಾಗೂ ಕಲಾವಿದರು ಉಪಸ್ಥಿತರಿದ್ದರು.

8 hrs ago
user_ಎಸ್.ಎನ್.ಪ್ರಕಾಶ್
ಎಸ್.ಎನ್.ಪ್ರಕಾಶ್
ಕೋಲಾರ, ಕೋಲಾರ, ಕರ್ನಾಟಕ•
8 hrs ago
4f4db8c7-6c69-4744-95f4-d20ffba87d9f

ಕೋಲಾರ ತಾಲೂಕಿನ ವಕ್ಕಲೇರಿ ಹೋಬಳಿಯ ಚಿನ್ನಾಪುರ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದ ನಾಟಕೋತ್ಸವ ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡ ಸಿ.ಎಂ.ಆರ್. ಶ್ರೀನಾಥ್ ಭಾಗವಹಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಪ್ರದರ್ಶನಗೊಳ್ಳುವ ನಾಟಕಗಳು ಕೇವಲ ಮನರಂಜನೆಗೆ ಸೀಮಿತವಾಗದೆ, ಸಮಾಜವನ್ನು ತಿದ್ದುವ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವಂತಿದ್ದಾಗ ಮಾತ್ರ ಉತ್ತಮ ಸಮಾಜ ನಿರ್ಮಿಸಲು ಸಾಧ್ಯ ಎಂದು ಅವರು ಹೇಳಿದರು. ನಾಟಕದ ಉದ್ದೇಶ ಕೇವಲ ಉಪದೇಶ ನೀಡುವುದಲ್ಲ, ಪ್ರೇಕ್ಷಕರು ಅದರ ಸಂದೇಶವನ್ನು ಅರ್ಥೈಸಿಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದ ಅವರು, ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಉತ್ತೇಜನ ನೀಡಿದರೆ ಗ್ರಾಮಗಳಲ್ಲಿ ಶಾಂತಿ, ಸೌಹಾರ್ದತೆ ಹಾಗೂ ನೆಮ್ಮದಿ ನೆಲೆಸುತ್ತದೆ ಎಂದರು. ವೇದಿಕೆಯಲ್ಲಿ ಪ್ರದರ್ಶನಗೊಳ್ಳುವ ಪಾತ್ರಗಳು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಮೌಲ್ಯಗಳನ್ನು ಸಾರುವಂತಿರಬೇಕು ಎಂದು ಆಶಿಸಿದ ಅವರು, ಚುನಾವಣೆಗಳಲ್ಲಿ ಸೋಲು ಗೆಲುವು ಸಹಜವಾಗಿದ್ದು ಜನರ ಕಷ್ಟ-ಸುಖಗಳಲ್ಲಿ ತಾವು ನಿರಂತರವಾಗಿ ಜೊತೆಗಿರುವುದಾಗಿ ತಿಳಿಸಿದರು. ರಾಜ್ಯ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ವಕ್ಕಲೇರಿ ರಾಮು ಮಾತನಾಡಿ, ಸಮಾಜದಲ್ಲಿ ಎಲ್ಲಿ ಸತ್ಯ ಮತ್ತು ಧರ್ಮ ಇರುತ್ತದೆಯೋ ಅಂತಹ ಕಡೆಯಲ್ಲಿ ಶನಿಮಹಾತ್ಮನ ಅನುಗ್ರಹವೂ ಇರುತ್ತದೆ. ನಾವು ಯಾವತ್ತೂ ಧರ್ಮದ ಮಾರ್ಗದಲ್ಲಿ ನಡೆದರೆ ಜೀವನದಲ್ಲಿ ಒಳ್ಳೆಯ ಕಾಲ ಬಂದೇ ಬರುತ್ತದೆ ಎಂದು ಅಭಿಪ್ರಾಯಪಟ್ಟರು. ಎಲ್.ಜಿ ಫೌಂಡೇಶನ್ ಅಧ್ಯಕ್ಷ ದೊಡ್ಡವಲ್ಲಬ್ಬಿ ಲಕ್ಷ್ಮಣಗೌಡ ಮಾತನಾಡಿ, ನಾಟಕದಲ್ಲಿ ಸಣ್ಣದು ದೊಡ್ಡದು ಎಂಬ ಪಾತ್ರ ಇರುವುದಿಲ್ಲ, ಪ್ರತಿಯೊಬ್ಬ ಕಲಾವಿದನ ಪಾತ್ರವೂ ಮಹತ್ವದ್ದಾಗಿರುತ್ತದೆ. ಜನರು ಅಹಂಕಾರವನ್ನು ಬಿಟ್ಟು ಸಮಾಜಕ್ಕೆ ಒಳಿತು ಬಯಸಬೇಕು ಹಾಗೂ ಸಾಂಪ್ರದಾಯಿಕ ಕಲೆಗಳನ್ನು ಉಳಿಸುವ ಜವಾಬ್ದಾರಿಯನ್ನು ಹೊರಬೇಕು ಎಂದರು. ಈ ಕಾರ್ಯಕ್ರಮದಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಬಿಜೆಪಿ ಹಿರಿಯ ಮುಖಂಡ ಬೆಗ್ಲಿ ಸೂರ್ಯಪ್ರಕಾಶ್, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಮಂಜುನಾಥ್, ಮುಖಂಡರಾದ ಮುದವತ್ತಿ ಎಸ್.ಕೃಷ್ಣಪ್ಪ, ವಡಗೇರಿ ರಮೇಶ್, ಜಂಗಾಲಹಳ್ಳಿ ಶ್ರೀನಿವಾಸ್, ಶೆಟ್ಟಿಗಾನಹಳ್ಳಿ ಎಸ್ಎಂಎಸ್ ಸಂತೋಷ್, ನದೀಂ ಬೇಗ್, ಟೈಲರ್ ಶಿವಕುಮಾರ್, ವಕ್ಕಲೇರಿ ಚಿರು, ಚಿನ್ನಾಪುರ ನಾರಾಯಣಸ್ವಾಮಿ, ಉಮೇಶ್, ಪಿಳ್ಳಪ್ಪ ಸೇರಿದಂತೆ ಗ್ರಾಮಸ್ಥರು ಹಾಗೂ ಕಲಾವಿದರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಕೋಲಾರ ಜಿಲ್ಲೆಯ ಮುಳುಬಾಗಿಲಿನಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಮಾರಾಟ ಮಾಡುತ್ತಿದ್ದ ಖದೀಮರನ್ನು ಪೊಲೀಸರು ಭರ್ಜರಿ ಬೇಟೆಯಾಡಿ ಯಶಸ್ವಿಯಾಗಿ ಬಂಧಿಸಿದ್ದಾರೆ. ಪಡಿತರ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಈ ಭರ್ಜರಿ ಕಾರ್ಯಾಚರಣೆಯ ಮೂಲಕ ದಂಧೆಯಲ್ಲಿ ತೊಡಗಿದ್ದ ಖದೀಮರನ್ನು ಕಂಬಿ ಹಿಂದೆ ತಳ್ಳಲಾಗಿದೆ.
    1
    ಕೋಲಾರ ಜಿಲ್ಲೆಯ ಮುಳುಬಾಗಿಲಿನಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಮಾರಾಟ ಮಾಡುತ್ತಿದ್ದ ಖದೀಮರನ್ನು ಪೊಲೀಸರು ಭರ್ಜರಿ ಬೇಟೆಯಾಡಿ ಯಶಸ್ವಿಯಾಗಿ ಬಂಧಿಸಿದ್ದಾರೆ. ಪಡಿತರ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಈ ಭರ್ಜರಿ ಕಾರ್ಯಾಚರಣೆಯ ಮೂಲಕ ದಂಧೆಯಲ್ಲಿ ತೊಡಗಿದ್ದ ಖದೀಮರನ್ನು ಕಂಬಿ ಹಿಂದೆ ತಳ್ಳಲಾಗಿದೆ.
    user_Janasuddhi
    Janasuddhi
    ಮುಳಬಾಗಿಲು, ಕೋಲಾರ, ಕರ್ನಾಟಕ•
    7 hrs ago
  • ಗಾನಕೋಗಿಲೆ ಎಸ್. ಜಾನಕಿ ಅವರು ಅಮರರಾಗಿದ್ದಾರೆ. 48 ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದ ಅವರ ಕಂಠ ಈಗ ಮೌನವಾಗಿದೆ.
    1
    ಗಾನಕೋಗಿಲೆ ಎಸ್. ಜಾನಕಿ ಅವರು ಅಮರರಾಗಿದ್ದಾರೆ. 48 ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದ ಅವರ ಕಂಠ ಈಗ ಮೌನವಾಗಿದೆ.
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    1 hr ago
  • ಕರ್ನಾಟಕದಲ್ಲಿ ಐಎಂಎ (IMA) ಪ್ರಕರಣದಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಲ್ಲಿಕೆಯಾಗಿರುವ ಮನವಿ ಕುರಿತು ಕಾನೂನು ಪ್ರಕಾರವೇ ಕ್ರಮವಾಗಲಿ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಯಾರೂ ಕಾನೂನಿಗಿಂತ ಮೇಲಲ್ಲ ಹಾಗೂ ಮೊದಲೇ ಅಂತಿಮ ತೀರ್ಮಾನಕ್ಕೆ ಬರುವುದು ಸರಿಯಲ್ಲ ಎಂದು ಹೇಳಿದ ಅವರು, ರಾಜ್ಯಪಾಲರು ಅನುಮತಿ ನೀಡಿದ ಬಳಿಕ ಮುಂದಿನ ಬೆಳವಣಿಗೆಗಳನ್ನು ನೋಡೋಣ ಎಂದು ತಿಳಿಸಿದರು. ಇದೇ ವೇಳೆ ಪಿಆರ್‌ಸಿ (ನಿವಾಸ ಪ್ರಮಾಣಪತ್ರ) ವಿವಾದದ ಕುರಿತು ಮಾತನಾಡಿದ ಗೃಹ ಸಚಿವರು, ಪಿಆರ್‌ಸಿ ನೀಡುವುದು ಸರ್ಕಾರಿ ಅಧಿಕಾರಿಗಳ ಕೆಲಸವೇ ಹೊರತು ರಾಜಕೀಯ ಪಕ್ಷಗಳದ್ದಲ್ಲ ಎಂದು ಸ್ಪಷ್ಟಪಡಿಸಿದರು. ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸುವುದು ಸರ್ಕಾರದ ಆದ್ಯ ಕರ್ತವ್ಯ ಎಂದು ಹೇಳಿದ ಅವರು, ಅಕ್ರಮ ವಲಸಿಗರಿಗೆ ಪಿಆರ್‌ಸಿ ನೀಡಲಾಗುತ್ತಿದೆ ಎಂಬ ಬಿಜೆಪಿ ಆರೋಪವನ್ನು ತಳ್ಳಿಹಾಕಿ, ಅದನ್ನು ಸಾಬೀತುಪಡಿಸುವಂತೆ ಸವಾಲು ಹಾಕಿದರು. ರಾಜ್ಯ ಸರ್ಕಾರ ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಕೆಲಸ ಮಾಡುವುದಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಪೌರತ್ವ ಸಾಬೀತಿಗೆ ಯಾವ ದಾಖಲೆ ಬೇಕು ಎಂಬುದನ್ನು ಬಿಜೆಪಿ ಸ್ಪಷ್ಟಪಡಿಸಲಿ ಎಂದು ಪ್ರಶ್ನಿಸಿದರು. ಅಲ್ಲದೆ, ಎಸ್‌ಐಆರ್ (SIR) ಪ್ರಕ್ರಿಯೆಯಲ್ಲಿ ಸ್ಪಷ್ಟತೆ ಇಲ್ಲದ ಕಾರಣ ಮುಂಜಾಗ್ರತಾ ಕ್ರಮವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ ಎಂದರು. ಮತ್ತೊಂದೆಡೆ, ಕೆಪಿಎಸ್‌ಸಿ (KPSC) ವಿಚಾರಕ್ಕೆ ಸಂಬಂಧಿಸಿದ ಆರೋಪಗಳು ಸಾಂವಿಧಾನಿಕ ಸಂಸ್ಥೆಯ ವ್ಯಾಪ್ತಿಗೆ ಬರುವ ವಿಷಯ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು. ಸರ್ಕಾರ ಕೇವಲ ಸಾಕ್ಷ್ಯ ಒದಗಿಸಬಹುದೇ ಹೊರತು, ಅಂತಿಮ ಕ್ರಮ ಕೈಗೊಳ್ಳುವುದು ಆಯೋಗದ ಜವಾಬ್ದಾರಿಯಾಗಿದೆ ಎಂದ ಅವರು, ಆಯೋಗದಲ್ಲಿ ಸದ್ಯ ಸಮನ್ವಯ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯ ಕೊರತೆ ಕಂಡುಬರುತ್ತಿದೆ ಎಂದು ಅಭಿಪ್ರಾಯಪಟ್ಟರು. ಇದು ಯಾವುದೇ ರಾಜ್ಯಕ್ಕೂ ಒಳ್ಳೆಯ ಬೆಳವಣಿಗೆಯಲ್ಲ ಎಂದು ವಿಷಾದಿಸಿದ ಅವರು, ಸಾರ್ವಜನಿಕ ಸೇವಾ ಆಯೋಗದ ವಿಶ್ವಾಸಾರ್ಹತೆಯನ್ನು ಆಯೋಗವೇ ಪುನಃಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
    1
    ಕರ್ನಾಟಕದಲ್ಲಿ ಐಎಂಎ (IMA) ಪ್ರಕರಣದಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಲ್ಲಿಕೆಯಾಗಿರುವ ಮನವಿ ಕುರಿತು ಕಾನೂನು ಪ್ರಕಾರವೇ ಕ್ರಮವಾಗಲಿ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಯಾರೂ ಕಾನೂನಿಗಿಂತ ಮೇಲಲ್ಲ ಹಾಗೂ ಮೊದಲೇ ಅಂತಿಮ ತೀರ್ಮಾನಕ್ಕೆ ಬರುವುದು ಸರಿಯಲ್ಲ ಎಂದು ಹೇಳಿದ ಅವರು, ರಾಜ್ಯಪಾಲರು ಅನುಮತಿ ನೀಡಿದ ಬಳಿಕ ಮುಂದಿನ ಬೆಳವಣಿಗೆಗಳನ್ನು ನೋಡೋಣ ಎಂದು ತಿಳಿಸಿದರು.

ಇದೇ ವೇಳೆ ಪಿಆರ್‌ಸಿ (ನಿವಾಸ ಪ್ರಮಾಣಪತ್ರ) ವಿವಾದದ ಕುರಿತು ಮಾತನಾಡಿದ ಗೃಹ ಸಚಿವರು, ಪಿಆರ್‌ಸಿ ನೀಡುವುದು ಸರ್ಕಾರಿ ಅಧಿಕಾರಿಗಳ ಕೆಲಸವೇ ಹೊರತು ರಾಜಕೀಯ ಪಕ್ಷಗಳದ್ದಲ್ಲ ಎಂದು ಸ್ಪಷ್ಟಪಡಿಸಿದರು. ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸುವುದು ಸರ್ಕಾರದ ಆದ್ಯ ಕರ್ತವ್ಯ ಎಂದು ಹೇಳಿದ ಅವರು, ಅಕ್ರಮ ವಲಸಿಗರಿಗೆ ಪಿಆರ್‌ಸಿ ನೀಡಲಾಗುತ್ತಿದೆ ಎಂಬ ಬಿಜೆಪಿ ಆರೋಪವನ್ನು ತಳ್ಳಿಹಾಕಿ, ಅದನ್ನು ಸಾಬೀತುಪಡಿಸುವಂತೆ ಸವಾಲು ಹಾಕಿದರು. ರಾಜ್ಯ ಸರ್ಕಾರ ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಕೆಲಸ ಮಾಡುವುದಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಪೌರತ್ವ ಸಾಬೀತಿಗೆ ಯಾವ ದಾಖಲೆ ಬೇಕು ಎಂಬುದನ್ನು ಬಿಜೆಪಿ ಸ್ಪಷ್ಟಪಡಿಸಲಿ ಎಂದು ಪ್ರಶ್ನಿಸಿದರು. ಅಲ್ಲದೆ, ಎಸ್‌ಐಆರ್ (SIR) ಪ್ರಕ್ರಿಯೆಯಲ್ಲಿ ಸ್ಪಷ್ಟತೆ ಇಲ್ಲದ ಕಾರಣ ಮುಂಜಾಗ್ರತಾ ಕ್ರಮವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ ಎಂದರು.

ಮತ್ತೊಂದೆಡೆ, ಕೆಪಿಎಸ್‌ಸಿ (KPSC) ವಿಚಾರಕ್ಕೆ ಸಂಬಂಧಿಸಿದ ಆರೋಪಗಳು ಸಾಂವಿಧಾನಿಕ ಸಂಸ್ಥೆಯ ವ್ಯಾಪ್ತಿಗೆ ಬರುವ ವಿಷಯ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು. ಸರ್ಕಾರ ಕೇವಲ ಸಾಕ್ಷ್ಯ ಒದಗಿಸಬಹುದೇ ಹೊರತು, ಅಂತಿಮ ಕ್ರಮ ಕೈಗೊಳ್ಳುವುದು ಆಯೋಗದ ಜವಾಬ್ದಾರಿಯಾಗಿದೆ ಎಂದ ಅವರು, ಆಯೋಗದಲ್ಲಿ ಸದ್ಯ ಸಮನ್ವಯ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯ ಕೊರತೆ ಕಂಡುಬರುತ್ತಿದೆ ಎಂದು ಅಭಿಪ್ರಾಯಪಟ್ಟರು. ಇದು ಯಾವುದೇ ರಾಜ್ಯಕ್ಕೂ ಒಳ್ಳೆಯ ಬೆಳವಣಿಗೆಯಲ್ಲ ಎಂದು ವಿಷಾದಿಸಿದ ಅವರು, ಸಾರ್ವಜನಿಕ ಸೇವಾ ಆಯೋಗದ ವಿಶ್ವಾಸಾರ್ಹತೆಯನ್ನು ಆಯೋಗವೇ ಪುನಃಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
    user_Mohan
    Mohan
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    10 hrs ago
  • ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿ ರೆಡ್ಡಿಹಳ್ಳಿ ಗ್ರಾಮದ ಸರ್ವೆ ನಂಬರ್ 76 ಹಾಗೂ ಬೆಟ್ಟದ ಸುತ್ತಮುತ್ತಲಿನ ಸರ್ವೆ ನಂಬರ್‌ಗಳಲ್ಲಿ ಸ್ಪೋಟಕ ಸಾಮಗ್ರಿಗಳು ಹಾಗೂ ಜೆಸಿಪಿ, ಹಿಟಾಚಿ, ಕಂಪ್ರೆಸರ್, ಕ್ರೇನ್ ಬಳಸಿ ನಿರಂತರವಾಗಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಗಣಿಗಾರಿಕೆ ನಡೆಸುವ ಸಮಯದಲ್ಲಿ ಬೃಹತಾಕಾರದ ಬಂಡೆಯೊಂದು ಜಾರಿ ಜೆಸಿಪಿ ಮೇಲೆ ಕುಸಿದಿದ್ದು, ಅದರಲ್ಲಿದ್ದ ಕಾರ್ಮಿಕರು ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಲ್ಲಿನ ಸುತ್ತ ಮಣ್ಣು ತೆಗೆಯುವಾಗ ಈ ಬೃಹತ್ ಕಲ್ಲು ದಿಮ್ಮಿ ಕುಸಿದು ಬಿದ್ದಿದ್ದರಿಂದ ಜೆಸಿಪಿ ಯಂತ್ರ ತೀವ್ರವಾಗಿ ಜಖಂಗೊಂಡಿದೆ. ಕಂದಾಯ ಇಲಾಖೆಗೆ ಸೇರಿದ ಸರ್ಕಾರಿ ಜಮೀನಿನಲ್ಲಿ ತಮಿಳುನಾಡು ಮೂಲದ ವ್ಯಕ್ತಿಗಳು ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ಈ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದಾರೆ. ತಮಿಳುನಾಡು ಮೂಲದವರಾದ ಶ್ರೀಧರ್, ಕುಮಾರ್, ಈಶ್ವರ್ ಮತ್ತು ಮಂಜ ಎಂಬುವರು ಈ ಅಕ್ರಮ ದಂಧೆಯ ಕಿಂಗ್‌ಪಿನ್‌ಗಳು ಎಂದು ಗ್ರಾಮಸ್ಥರಿಂದ ತಿಳಿದುಬಂದಿದೆ. ಇವರು ಯಂತ್ರೋಪಕರಣ ಹಾಗೂ ಸಿಡಿಮದ್ದುಗಳನ್ನು ಬಳಸಿ ದಿಮ್ಮಿ ಕಲ್ಲುಗಳನ್ನು ತೆಗೆದು, ಕ್ರೇನ್ ಮೂಲಕ ಲಾರಿಗಳಿಗೆ ಲೋಡ್ ಮಾಡಿ ತಮಿಳುನಾಡಿಗೆ ಸಾಗಿಸುತ್ತಿದ್ದಾರೆ. ಅಲ್ಲದೆ, ವೇಸ್ಟೇಜ್ ಕಲ್ಲುಗಳಲ್ಲಿ ಸೈಜ್ ಕಲ್ಲು ಹಾಗೂ ಕಂಬದ ಕಲ್ಲುಗಳನ್ನು ಮಾಡಿ ಸಾಗಾಣಿಕೆ ಮಾಡುತ್ತಿದ್ದಾರೆ. ಈ ಜಾಗದಲ್ಲಿ ನಿರಂತರವಾಗಿ ಅಕ್ರಮ ದಂಧೆ ನಡೆಯುತ್ತಿದ್ದರೂ ಕಂದಾಯ ಇಲಾಖೆಯ ಆರ್‌ಐ ಹಾಗೂ ವಿಎ ಅಧಿಕಾರಿಗಳು ಕಂಡೂ ಕಾಣದಂತೆ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆ ಸೇರಿದಂತೆ ಯಾವುದೇ ಸರ್ಕಾರಿ ಇಲಾಖೆಗಳಿಂದ ಅನುಮತಿ ಪಡೆಯದೆ, ಕಾರ್ಮಿಕರ ಸುರಕ್ಷತೆಯನ್ನೂ ನಿರ್ಲಕ್ಷಿಸಿ ಅಕ್ರಮವಾಗಿ ಬ್ಲಾಸ್ಟಿಂಗ್ ನಡೆಸುತ್ತಿರುವ ಈ ಕಲ್ಲು ಕಳ್ಳರ ವಿರುದ್ಧ ಜಿಲ್ಲಾಧಿಕಾರಿಗಳು ಅಥವಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವರೇ ಎಂಬುದನ್ನು ಕಾದು ನೋಡಬೇಕಿದೆ.
    1
    ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿ ರೆಡ್ಡಿಹಳ್ಳಿ ಗ್ರಾಮದ ಸರ್ವೆ ನಂಬರ್ 76 ಹಾಗೂ ಬೆಟ್ಟದ ಸುತ್ತಮುತ್ತಲಿನ ಸರ್ವೆ ನಂಬರ್‌ಗಳಲ್ಲಿ ಸ್ಪೋಟಕ ಸಾಮಗ್ರಿಗಳು ಹಾಗೂ ಜೆಸಿಪಿ, ಹಿಟಾಚಿ, ಕಂಪ್ರೆಸರ್, ಕ್ರೇನ್ ಬಳಸಿ ನಿರಂತರವಾಗಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಗಣಿಗಾರಿಕೆ ನಡೆಸುವ ಸಮಯದಲ್ಲಿ ಬೃಹತಾಕಾರದ ಬಂಡೆಯೊಂದು ಜಾರಿ ಜೆಸಿಪಿ ಮೇಲೆ ಕುಸಿದಿದ್ದು, ಅದರಲ್ಲಿದ್ದ ಕಾರ್ಮಿಕರು ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಲ್ಲಿನ ಸುತ್ತ ಮಣ್ಣು ತೆಗೆಯುವಾಗ ಈ ಬೃಹತ್ ಕಲ್ಲು ದಿಮ್ಮಿ ಕುಸಿದು ಬಿದ್ದಿದ್ದರಿಂದ ಜೆಸಿಪಿ ಯಂತ್ರ ತೀವ್ರವಾಗಿ ಜಖಂಗೊಂಡಿದೆ.

ಕಂದಾಯ ಇಲಾಖೆಗೆ ಸೇರಿದ ಸರ್ಕಾರಿ ಜಮೀನಿನಲ್ಲಿ ತಮಿಳುನಾಡು ಮೂಲದ ವ್ಯಕ್ತಿಗಳು ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ಈ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದಾರೆ. ತಮಿಳುನಾಡು ಮೂಲದವರಾದ ಶ್ರೀಧರ್, ಕುಮಾರ್, ಈಶ್ವರ್ ಮತ್ತು ಮಂಜ ಎಂಬುವರು ಈ ಅಕ್ರಮ ದಂಧೆಯ ಕಿಂಗ್‌ಪಿನ್‌ಗಳು ಎಂದು ಗ್ರಾಮಸ್ಥರಿಂದ ತಿಳಿದುಬಂದಿದೆ. ಇವರು ಯಂತ್ರೋಪಕರಣ ಹಾಗೂ ಸಿಡಿಮದ್ದುಗಳನ್ನು ಬಳಸಿ ದಿಮ್ಮಿ ಕಲ್ಲುಗಳನ್ನು ತೆಗೆದು, ಕ್ರೇನ್ ಮೂಲಕ ಲಾರಿಗಳಿಗೆ ಲೋಡ್ ಮಾಡಿ ತಮಿಳುನಾಡಿಗೆ ಸಾಗಿಸುತ್ತಿದ್ದಾರೆ. ಅಲ್ಲದೆ, ವೇಸ್ಟೇಜ್ ಕಲ್ಲುಗಳಲ್ಲಿ ಸೈಜ್ ಕಲ್ಲು ಹಾಗೂ ಕಂಬದ ಕಲ್ಲುಗಳನ್ನು ಮಾಡಿ ಸಾಗಾಣಿಕೆ ಮಾಡುತ್ತಿದ್ದಾರೆ.

ಈ ಜಾಗದಲ್ಲಿ ನಿರಂತರವಾಗಿ ಅಕ್ರಮ ದಂಧೆ ನಡೆಯುತ್ತಿದ್ದರೂ ಕಂದಾಯ ಇಲಾಖೆಯ ಆರ್‌ಐ ಹಾಗೂ ವಿಎ ಅಧಿಕಾರಿಗಳು ಕಂಡೂ ಕಾಣದಂತೆ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆ ಸೇರಿದಂತೆ ಯಾವುದೇ ಸರ್ಕಾರಿ ಇಲಾಖೆಗಳಿಂದ ಅನುಮತಿ ಪಡೆಯದೆ, ಕಾರ್ಮಿಕರ ಸುರಕ್ಷತೆಯನ್ನೂ ನಿರ್ಲಕ್ಷಿಸಿ ಅಕ್ರಮವಾಗಿ ಬ್ಲಾಸ್ಟಿಂಗ್ ನಡೆಸುತ್ತಿರುವ ಈ ಕಲ್ಲು ಕಳ್ಳರ ವಿರುದ್ಧ ಜಿಲ್ಲಾಧಿಕಾರಿಗಳು ಅಥವಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವರೇ ಎಂಬುದನ್ನು ಕಾದು ನೋಡಬೇಕಿದೆ.
    user_Madhugiri news
    Madhugiri news
    Local News Reporter ಮಧುಗಿರಿ, ತುಮಕೂರು, ಕರ್ನಾಟಕ•
    46 min ago
  • ಹನೂರು ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು ಅನಿರೀಕ್ಷಿತವಾಗಿ ದಾಳಿ ನಡೆಸಿದ್ದು, ಹಲವರು ಗಾಯಗೊಂಡಿದ್ದಾರೆ. ಈ ನಾಯಿಯು ಹಿಂದಿನ ರಾತ್ರಿ ಇಬ್ಬರಿಗೆ ಕಚ್ಚಿದ್ದಲ್ಲದೆ, ಬೆಳಿಗ್ಗೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಮೂವರ ಮೇಲೆ ದಾಳಿ ಮಾಡಿ ಕೈ ಮತ್ತು ಕಾಲುಗಳಿಗೆ ಗಾಯಗೊಳಿಸಿದೆ. ಗಾಯಗೊಂಡ ವ್ಯಕ್ತಿಗಳನ್ನು ಚಿಕಿತ್ಸೆಗಾಗಿ ಹನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮನೆಮಾಡಿದ್ದು, ಹುಚ್ಚು ನಾಯಿಯನ್ನು ಕೂಡಲೇ ಸೆರೆಹಿಡಿಯುವಂತೆ ಮತ್ತು ಸಾರ್ವಜನಿಕರ ಸುರಕ್ಷತೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಸಂಬಂಧಪಟ್ಟ ಇಲಾಖೆಯನ್ನು ಒತ್ತಾಯಿಸಿದ್ದಾರೆ.
    1
    ಹನೂರು ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು ಅನಿರೀಕ್ಷಿತವಾಗಿ ದಾಳಿ ನಡೆಸಿದ್ದು, ಹಲವರು ಗಾಯಗೊಂಡಿದ್ದಾರೆ. ಈ ನಾಯಿಯು ಹಿಂದಿನ ರಾತ್ರಿ ಇಬ್ಬರಿಗೆ ಕಚ್ಚಿದ್ದಲ್ಲದೆ, ಬೆಳಿಗ್ಗೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಮೂವರ ಮೇಲೆ ದಾಳಿ ಮಾಡಿ ಕೈ ಮತ್ತು ಕಾಲುಗಳಿಗೆ ಗಾಯಗೊಳಿಸಿದೆ.

ಗಾಯಗೊಂಡ ವ್ಯಕ್ತಿಗಳನ್ನು ಚಿಕಿತ್ಸೆಗಾಗಿ ಹನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮನೆಮಾಡಿದ್ದು, ಹುಚ್ಚು ನಾಯಿಯನ್ನು ಕೂಡಲೇ ಸೆರೆಹಿಡಿಯುವಂತೆ ಮತ್ತು ಸಾರ್ವಜನಿಕರ ಸುರಕ್ಷತೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಸಂಬಂಧಪಟ್ಟ ಇಲಾಖೆಯನ್ನು ಒತ್ತಾಯಿಸಿದ್ದಾರೆ.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    11 hrs ago
  • ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಹೋಬಳಿಯ ದುಮ್ಮನಹಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ (ಪ್ರೊ|| ಎಮ್.ಡಿ. ನಂಜುಂಡಸ್ವಾಮಿಯವರ ಮೂಲ ಸಂಘಟನೆ) ನೂತನ ಗ್ರಾಮ ಶಾಖೆಯನ್ನು ಅಧಿಕೃತವಾಗಿ ಉದ್ಘಾಟಿಸಲಾಗಿದೆ. ರೈತ ಸಂಘದ ತಾಲ್ಲೂಕು ಅಧ್ಯಕ್ಷರಾದ ಕಣಕೂರು ಚಂದ್ರಶೇಖರ್ ಅವರು ಈ ಶಾಖೆಯ ಉದ್ಘಾಟನೆಯನ್ನು ನೆರವೇರಿಸಿದರು. ಈ ಕಾರ್ಯಕ್ರಮದ ಸಂದರ್ಭದಲ್ಲಿ ಕೆ.ಸಿ. ಚಂದ್ರಶೇಖರ್, ರಂಗಪ್ಪ, ಕೃಷ್ಣಪ್ಪ, ಶಿವಕುಮಾರ್, ಲಕ್ಕಣ್ಣಪ್ಪ, ಪುಟ್ಟಣ್ಣ ಹಾಗೂ ಮತ್ತೊಬ್ಬ ಶಿವಕುಮಾರ್ ಸೇರಿದಂತೆ ದುಮ್ಮನಹಳ್ಳಿ ಗ್ರಾಮದ ಹಲವಾರು ರೈತರುಗಳು ಉಪಸ್ಥಿತರಿದ್ದರು.
    2
    ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಹೋಬಳಿಯ ದುಮ್ಮನಹಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ (ಪ್ರೊ|| ಎಮ್.ಡಿ. ನಂಜುಂಡಸ್ವಾಮಿಯವರ ಮೂಲ ಸಂಘಟನೆ) ನೂತನ ಗ್ರಾಮ ಶಾಖೆಯನ್ನು ಅಧಿಕೃತವಾಗಿ ಉದ್ಘಾಟಿಸಲಾಗಿದೆ. ರೈತ ಸಂಘದ ತಾಲ್ಲೂಕು ಅಧ್ಯಕ್ಷರಾದ ಕಣಕೂರು ಚಂದ್ರಶೇಖರ್ ಅವರು ಈ ಶಾಖೆಯ ಉದ್ಘಾಟನೆಯನ್ನು ನೆರವೇರಿಸಿದರು. ಈ ಕಾರ್ಯಕ್ರಮದ ಸಂದರ್ಭದಲ್ಲಿ ಕೆ.ಸಿ. ಚಂದ್ರಶೇಖರ್, ರಂಗಪ್ಪ, ಕೃಷ್ಣಪ್ಪ, ಶಿವಕುಮಾರ್, ಲಕ್ಕಣ್ಣಪ್ಪ, ಪುಟ್ಟಣ್ಣ ಹಾಗೂ ಮತ್ತೊಬ್ಬ ಶಿವಕುಮಾರ್ ಸೇರಿದಂತೆ ದುಮ್ಮನಹಳ್ಳಿ ಗ್ರಾಮದ ಹಲವಾರು ರೈತರುಗಳು ಉಪಸ್ಥಿತರಿದ್ದರು.
    user_Manohara
    Manohara
    Local News Reporter ತುರುವೇಕೆರೆ, ತುಮಕೂರು, ಕರ್ನಾಟಕ•
    1 hr ago
  • ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಇದೇ ತಿಂಗಳ 14ರಂದು ಶ್ರೀ ಕಾವೇರಮ್ಮ ದೇವಿಯ ಅದ್ದೂರಿ ಬ್ರಹ್ಮ ರಥೋತ್ಸವ ಅತ್ಯಂತ ಸಡಗರದಿಂದ ಜರುಗಲಿದೆ.
    1
    ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಇದೇ ತಿಂಗಳ 14ರಂದು ಶ್ರೀ ಕಾವೇರಮ್ಮ ದೇವಿಯ ಅದ್ದೂರಿ ಬ್ರಹ್ಮ ರಥೋತ್ಸವ ಅತ್ಯಂತ ಸಡಗರದಿಂದ ಜರುಗಲಿದೆ.
    user_Janasuddhi
    Janasuddhi
    ಮುಳಬಾಗಿಲು, ಕೋಲಾರ, ಕರ್ನಾಟಕ•
    7 hrs ago
  • ಅವರ ಅಂತ್ಯಕ್ರಿಯೆಯನ್ನು ಸರ್ಕಾರವೇ ನಿಗದಿಪಡಿಸಬೇಕು, ಇಲ್ಲದಿದ್ದರೆ ಬೆಂಗಳೂರಿನ ಆರ್‌ಟಿ ನಗರದಲ್ಲಿ ಅದನ್ನು ನೀಡಲು ನಮ್ಮ ಕುಟುಂಬ ಬದ್ಧವಾಗಿದೆ ಎಂದು ತಿಳಿಸಲಾಗಿದೆ.
    1
    ಅವರ ಅಂತ್ಯಕ್ರಿಯೆಯನ್ನು ಸರ್ಕಾರವೇ ನಿಗದಿಪಡಿಸಬೇಕು, ಇಲ್ಲದಿದ್ದರೆ ಬೆಂಗಳೂರಿನ ಆರ್‌ಟಿ ನಗರದಲ್ಲಿ ಅದನ್ನು ನೀಡಲು ನಮ್ಮ ಕುಟುಂಬ ಬದ್ಧವಾಗಿದೆ ಎಂದು ತಿಳಿಸಲಾಗಿದೆ.
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
  • ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಮಧುಗಿರಿ ರೈಲ್ವೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ತುಮಕೂರು-ರಾಯದುರ್ಗ ರೈಲು ಮಾರ್ಗದ ಮಧುಗಿರಿ ರೈಲ್ವೆ ನಿಲ್ದಾಣ ಕಾಮಗಾರಿಗೆ ವಿ. ಸೋಮಣ್ಣ ಮತ್ತು ಕೆ. ಎನ್. ರಾಜಣ್ಣ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ರೈಲ್ವೆ ಯೋಜನೆಯ ಶಂಕುಸ್ಥಾಪನೆ ಸಂದರ್ಭದಲ್ಲಿ ಕೆ. ಎನ್. ರಾಜಣ್ಣ ಅವರು ಮುಂಬರುವ 2028ರ ಚುನಾವಣಾ ಸ್ಪರ್ಧೆಯನ್ನು ಅಧಿಕೃತವಾಗಿ ಖಚಿತಪಡಿಸಿದ್ದಾರೆ. ಈ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕದ ಮುಖ್ಯಮಂತ್ರಿ ಕೆ. ಎನ್. ರಾಜಣ್ಣ, ಡಾ. ಜಿ. ಪರಮೇಶ್ವರ ಹಾಗೂ ವಿ. ಸೋಮಣ್ಣ ಅವರ ಹೆಸರುಗಳು ಪ್ರಮುಖವಾಗಿ ಉಲ್ಲೇಖಿಸಲ್ಪಟ್ಟಿವೆ.
    1
    ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಮಧುಗಿರಿ ರೈಲ್ವೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ತುಮಕೂರು-ರಾಯದುರ್ಗ ರೈಲು ಮಾರ್ಗದ ಮಧುಗಿರಿ ರೈಲ್ವೆ ನಿಲ್ದಾಣ ಕಾಮಗಾರಿಗೆ ವಿ. ಸೋಮಣ್ಣ ಮತ್ತು ಕೆ. ಎನ್. ರಾಜಣ್ಣ ಅವರು ಶಂಕುಸ್ಥಾಪನೆ ನೆರವೇರಿಸಿದರು.

ಈ ರೈಲ್ವೆ ಯೋಜನೆಯ ಶಂಕುಸ್ಥಾಪನೆ ಸಂದರ್ಭದಲ್ಲಿ ಕೆ. ಎನ್. ರಾಜಣ್ಣ ಅವರು ಮುಂಬರುವ 2028ರ ಚುನಾವಣಾ ಸ್ಪರ್ಧೆಯನ್ನು ಅಧಿಕೃತವಾಗಿ ಖಚಿತಪಡಿಸಿದ್ದಾರೆ. ಈ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕದ ಮುಖ್ಯಮಂತ್ರಿ ಕೆ. ಎನ್. ರಾಜಣ್ಣ, ಡಾ. ಜಿ. ಪರಮೇಶ್ವರ ಹಾಗೂ ವಿ. ಸೋಮಣ್ಣ ಅವರ ಹೆಸರುಗಳು ಪ್ರಮುಖವಾಗಿ ಉಲ್ಲೇಖಿಸಲ್ಪಟ್ಟಿವೆ.
    user_Madhugiri news
    Madhugiri news
    Local News Reporter ಮಧುಗಿರಿ, ತುಮಕೂರು, ಕರ್ನಾಟಕ•
    55 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.