Shuru
Apke Nagar Ki App…
ಶಿವಮೊಗ್ಗ-ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಯುವಕನಿಗಾದ ಶಿಕ್ಷೆ ಏನು.? ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಹಳ್ಳಿಯೊಂದರಲ್ಲಿ 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ 28 ವರ್ಷದ ಯುವಕನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ 10 ವರ್ಷ ಕಠಿಣ ಶಿಕ್ಷೆ ಹಾಗೂ 1.30 ರೂ ಲಕ್ಷ ದಂಡ ವಿಧಿಸಿದೆ. ಪ್ರಕರಣದ ತನಿಖೆ ನಡೆಸಿದ್ದ ಆಗಿನ ಇನ್ ಸ್ಪೆಕ್ಟರ್ ಜೆ.ಅಶ್ವತ್ಥಗೌಡ ನ್ಯಾಯಾಲಯಕ್ಕೆ ಆರೋಪಿಯ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಶಿಕ್ಷೆ ವಿಧಿಸಿ ಆದೇಶಿಸಿ ದ್ದಾರೆ. ನೊಂದ ಬಾಲಕಿಗೆ ಸರ್ಕಾರದ ವತಿಯಿಂದ 4 ರೂ ಲಕ್ಷ ಪರಿಹಾರ ನೀಡಲು ಆದೇಶಿಸಿದ್ದಾರೆ.
ಆರ್.ವಿ.ಕೃಷ್ಣ
ಶಿವಮೊಗ್ಗ-ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಯುವಕನಿಗಾದ ಶಿಕ್ಷೆ ಏನು.? ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಹಳ್ಳಿಯೊಂದರಲ್ಲಿ 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ 28 ವರ್ಷದ ಯುವಕನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ 10 ವರ್ಷ ಕಠಿಣ ಶಿಕ್ಷೆ ಹಾಗೂ 1.30 ರೂ ಲಕ್ಷ ದಂಡ ವಿಧಿಸಿದೆ. ಪ್ರಕರಣದ ತನಿಖೆ ನಡೆಸಿದ್ದ ಆಗಿನ ಇನ್ ಸ್ಪೆಕ್ಟರ್ ಜೆ.ಅಶ್ವತ್ಥಗೌಡ ನ್ಯಾಯಾಲಯಕ್ಕೆ ಆರೋಪಿಯ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಶಿಕ್ಷೆ ವಿಧಿಸಿ ಆದೇಶಿಸಿ ದ್ದಾರೆ. ನೊಂದ ಬಾಲಕಿಗೆ ಸರ್ಕಾರದ ವತಿಯಿಂದ 4 ರೂ ಲಕ್ಷ ಪರಿಹಾರ ನೀಡಲು ಆದೇಶಿಸಿದ್ದಾರೆ.
More news from ಕರ್ನಾಟಕ and nearby areas
- ಶಿವಮೊಗ್ಗ: ನಗರದಲ್ಲಿ ಜೀವ ತೆಗೆಯುತ್ತಿರುವ ಹಂಪ್ ಗಳ ಹಿಂದೆ ಇದೀಗ ಪೊಲೀಸ್ ಇಲಾಖೆ ಮತ್ತು ಮಹಾನಗರ ಪಾಲಿಕೆ ಪ್ರತ್ಯೇಕ ಪ್ರತ್ಯೇಕವಾಗಿಯೇ ಬೆನ್ನು ಬಿದ್ದು ಹಂಪ್ ಗಳ ನಿರ್ಮಾಣಗಳಲ್ಲಿ ಆಗಿರುವ ತಪ್ಪು ಹುಡುಕಿ ಸರಿ ಮಾಡುತ್ತಿವೆ. ಒಂದು ಕಡೆ ಮಹಾನಗರ ಪಾಲಿಕೆಯ ಆಯುಕ್ತ ಮಾಯಣ್ಣ ಗೌಡರು ಶಿವಮೊಗ್ಗದ ಹಂಪ್ ಗಳನ್ನು ಹುಡುಕಿ ಪರಿಶೀಲಿಸುತ್ತಿ ದ್ದಾರೆ. ಮತ್ತೊಂದು ಕಡೆ ಪೊಲೀಸ್ ಇಲಾಖೆಯ ಎಸ್ ಪಿ ನಿಖಿಲ್ ಬಿ. ಮತ್ತು ಟ್ರಾಫಿಕ್ ಇನ್ಸ್ ಪೆಕ್ಟರ್ ದೇವರಾಜ್ ಸಿಬ್ಬಂದಿ ಗಳೊಂದಿಗೆ ಅವೈಜ್ಞಾನಿಕ ಹಂಪ್ ಗಳ ಹುಡುಕಾಟ ಆರಂಭಿಸಿ ಸ್ಥಳ ಪರಿಶೀಲಿಸಿ, ಸರಿ ಪಡಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಅಪಘಾತಗಳ ಸಂಖ್ಯೆ ಕಡಿಮೆಯಾಗಿಸುವ ಉದ್ದೇಶದಿಂದ ಹಾಕಲಾದ ಹಂಪ್ ಗಳೇ ಜನರ ಜೀವಗಳ ಜೊತೆ ಆಟವಾಡಲಾರಂಭಿಸಿದ್ದು ಜನಾಕ್ರೋಶಕ್ಕೆ ಕಾರಣವಾಗುತ್ತಿದೆ. ಒಂದೆರಡು ಕಡೆ ಪ್ರಮುಖ ಜಾಗಗಳಲ್ಲಿ ಹಂಪ್ ಗಳನ್ನು ಹಾಕಲು ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ ಜಂಟಿ ಕಾರ್ಯಾಚರಣೆ ಆರಂಭಿಸಿದಾಗ ಕೆಲವು ಕಡೆ ಜನರೇ ಒತ್ತಡ ಮಾಡಿ ಹಲವು ಕಡೆ ಹಂಪ್ ಗಳನ್ನು ಹಾಕಿಸಿಕೊಂಡಿದ್ದರು. ಅಪಘಾತ ಸಂಭವಿಸಿದ ರಸ್ತೆಗಳಲ್ಲಿರುವ ಹಂಪ್ ಗಳ ಬಳಿ ಎರಡೂ ಇಲಾಖೆಯ ಅಧಿಕಾರಿಗಳು ತೆರಳಿ ಪರಿಶೀಲಿಸಿ ಅವುಗಳನ್ನು ತೆಗೆಸುವ ಅಥವಾ ಸರಿ ಮಾಡುವ ಕೆಲಸ ತಕ್ಷಣದಿಂದ ಮಾಡುತ್ತಿರುವುದರಿಂದ ಬಹಳಷ್ಟು ಜೀವಗಳು ಉಳಿಯುವುದರಲ್ಲಿ ಸಂದೇಹವಿಲ್ಲ.1
- ಭದ್ರಾವತಿ ತಾಲ್ಲೂಕು ಬಂಜಾರ ಸಂಘ ಹಾಗೂ ಸಮಾಜದ ವತಿಯಿಂದ ಅದ್ದೂರಿಯಾಗಿ ಶ್ರೀ ಸಂತ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ1
- ತೀರ್ಥಹಳ್ಳಿ: ಪಟ್ಟಣದ ಹೃದಯ ಭಾಗದಲ್ಲಿ ಶ್ರೀ ಮಾರಿಕಾಂಬ ದೇವಿಯ ಜಾತ್ರೆಯು ನಿನ್ನೆಯಿಂದ ನಡೆಯುತ್ತಿದ್ದು ಎರಡನೇ ದಿನವಾದ ಇಂದು ಬುಧವಾರದ ಶ್ರೀ ದೇವಿಯ ಅಲಂಕಾರ ಮತ್ತು ಪೂಜೆ2
- ಭಂದುಗಳೇ. 🙏 ದಿನಾಂಕ 18-2-26ರಂದು 5:30 ಸಮಯ ದಂದು ಹೊಳಲ್ಕೆರೆ -ದಾವಣಗೆರೆ ಮುಖ್ಯ ರಸ್ತೆ ಚಿಕ್ಕಜಾಜೂರು ರೈಲ್ವೆ ಗೇಟ್ ಹತ್ತಿರ ಪೊಲೀಸ್ ರವರು ವಾಹನ ನಿಲ್ಲಿಸಿ ಫೈನ್ ಹಾಕುತ್ತಿದ್ದಾರೆ ಆದರೆ ಇಲ್ಲಿ ಗಮನಿಸಬಹುದು ಎಷ್ಟು ಬೈಕ್ ಸವಾರರು ಹೆಲ್ಮೆಟ್ ಇಲ್ಲದೆ ಪ್ರಯಾಣ ಮಾಡುತ್ತಿದ್ದಾರೆ ಹಾಗೂ ಎಷ್ಟು ಇತರೆ ವಾಹನ ಹೋಗುತ್ತಿದವೇ ಪೋಲೀಸ್ ಅಧಿಕಾರಿಗಳು ಕೇವಲ ಹೊರ ಜಿಲ್ಲೆಯ ವಾಹನ ನಿಲ್ಲಿಸಿ ಫೈನ್ ಹಾಕುವುದು ಎಷ್ಟು ಸರಿ. ಜೈ ಕೆ ಆರ್ ಎಸ್4
- ದಾವಣಗೆರೆ : ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಹಿನ್ನೆಲೆಯಲ್ಲಿ ಕಾನೂನು & ಸುವ್ಯವಸ್ಥೆ ಕಾಪಾಡುವ ಹಾಗೂ ಜನರಲ್ಲಿ ಸುರಕ್ಷತೆ ಭಾವನೆ ಕಾಪಾಡುವ ನಿಟ್ಟಿನಲ್ಲಿ ಇಂದು ಬೆಳಗ್ಗೆ ದಾವಣಗೆರೆ ನಗರದಲ್ಲಿ ಎಸ್ಪಿ ಶೇಖರ್ ಹೆಚ್ ಟಿ ಐಪಿಎಸ್ ರವರ ನೇತೃತ್ವದಲ್ಲಿ ಪೊಲೀಸ್ ಪಥ ಸಂಚಲನ ಹಮ್ಮಿಕೊಳ್ಳಲಾಗಿತ್ತು. ಪೊಲೀಸ್ ಫಥ ಸಂಚಲನವು ನಗರದ ಹೊಂಡದ ವೃತ್ತದಿಂದ ಆರಂಭವಾಗಿ ಅಂಬೇಡ್ಕರ್ ವೃತ್ತ, ಹಗೆದಿಬ್ಬ ವೃತ್ತ, ಕಾಳಿಕ ದೇವಿ ರಸ್ತೆ, ಗ್ಯಾಸ್ ಕಟ್ಟೆ ವೃತ್ತ, ಎಸ್ ಕೆ ಪಿ ರಸ್ತೆ ಮೂಲಕ ದರ್ಗಾಂಬಿಕಾ ದೇವಾಸ್ಥಾನ ಮೂಲಕ ನೇರವಾಗಿ ಹೊಂಡದ ವೃತ್ತಕ್ಕೆ ಮುಕ್ತಾಯವಾಗಿತು. ಹಗೆದಿಬ್ಬ ವೃತ್ತ, ಕಾಳಿಕ ದೇವಿ ರಸ್ತೆ, ಗ್ಯಾಸ್ ಕಟ್ಟೆ ವೃತ್ತ, ಎಸ್ ಕೆ ಪಿ ರಸ್ತೆ ಮೂಲಕ ದರ್ಗಾಂಬಿಕಾ ದೇವಾಸ್ಥಾನ ಮೂಲಕ ನೇರವಾಗಿ ಹೊಂಡದ ವೃತ್ತದಲ್ಲಿ ಸಮಾಪ್ತಿಯಾಯಿತು. ಪೊಲೀಸ್ ಪಥ ಸಂಚಲನದಲ್ಲಿ ನಗರ ಡಿವೈಎಸ್ಪಿ ಶರಣಬಸವೇಶ್ವರ ಬಿ ರವರು, ಪೊಲೀಸ್ ನಿರೀಕ್ಷಕರಾದ ಶ್ರೀ ವಸಂತ್, ಶ್ರೀ ಸುನೀಲ್ ಕುಮಾರ್, ಶ್ರೀಮತಿ ಶಿಲ್ಪಾ, ಶ್ರೀ ನಂಜುಂಡಸ್ವಾಮಿ, ಶ್ರೀ ಮಂಜುನಾಥ ಕುಪ್ಪೇಲೂರು, ಪಿ ಎಸ್ ಐ ರವರಾದ ಶ್ರೀ ರವಿನಾಯ್ಕ, ಶ್ರೀ ಸಚಿನ್, ಶ್ರೀ ಮತಿ ಶಕುಂತಲಾ ಇತರರು, ಆರ್ ಎ ಎಫ್ ತಂಡದ ಪೊಲೀಸ್ ನಿರೀಕ್ಷಕರಾದ ಶ್ರೀ ರಾಜು ಹಾಗೂ ಸಿಬ್ಬಂದಿಗಳು, ನಗರ ಪೊಲೀಸ್ ಹಾಗೂ ಡಿ ಎ ಆರ್ ಅಧಿಕಾರಿ ಸಿಬ್ಬಂದಿಗಳು ಭಾಗವಹಿಸಿದ್ದರು. ರಾಜು4
- ಅಧಿಕಾರಿ ಇದ್ದರೆ ಮಾತ್ರ ಸಮಾಜಸೇವೆ ಮಾಡಬಹುದು ಅಂದುಕೊಳ್ಳಬಾರದು ಸಮಾಜಸೇವೆ ಮಾಡಲು ಯಾವ ರೂಪದಲ್ಲಾದರೂ ಮಾಡಬಹುದು ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಾಜು ಹೇಳಿದರು. ನಗರದ ಸೋಮುಗುದ್ದು ರಸ್ತೆಯ ಸರ್ಕರಿ ಪದವಿ ಪೂರ್ವ ಕಾಲೇಜಿನಲ್ಲಿ ಸರ್ಕಾರಿ ನೌಕರರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಕಾಲೇಜಿನ ಆವರಣಕ್ಕೆ ಬೆಂಚ್ ಗಳ ಕೊಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ. ಮುಂದಿನ ದಿನಗಳಲ್ಲಿ ನಮ್ಮ ಕಾಲೇಜ್ ನ್ನ ಯಾವ ಖಾಸಗಿ ಕಾಲೇಜುಗೂ ಕಮ್ಮಿಯನು ಎನ್ನುವಂತೆ ಮಾಡಲಾಗುವುದು ಇದಕ್ಕೆ ವಿದ್ಯಾರ್ಥಿಗಳು ಸಹ ಉತ್ತಮ ಫಲಿತಾಂಶಕ್ಕೆ ಎಲ್ಲರೂ ಹೆಚ್ಚಿನ ಶ್ರಮವಹಿಸಬೇಕು ಎಂದರು. ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷರಾದ ಸಿಟಿ.ವಿರೇಶ ಮಾತನಾಡಿ. ಕಾಲೇಜು ಆವರಣದಲ್ಲಿ ಸಾಕಷ್ಟು ಗಿಡಗಳನ್ನು ಹಾಕಲಾಗಿದ್ದು ಗಿಡಗಳ ಮಧ್ಯೆ ವಿದ್ಯಾರ್ಥಿಗಳು ಕುಳಿತುಕೊಳ್ಳಲು ಅಥವಾ ಮಧ್ಯಾಹ್ನದ ಸಮಯದಲ್ಲಿ ಊಟ ಮಾಡಲು ಬೆಂಚ್ ಗಳ ಅವಶ್ಯಕತೆ ಇತ್ತು ಶಾಸಕರ ಮಾರ್ಗದರ್ಶನದಂತೆ ಮರಗಳ ಕೆಳಗೆ ಕುಳಿತುಕೊಳ್ಳುವ ಬೆಂಚ್ ಗಳನ್ನು ಹಾಕಿಸಲಾಗಿದೆ ಅಷ್ಟೇ ಅಲ್ಲದೆ ನಗರದ ತಾಲ್ಲೂಕು ಸಮನ್ವಯಾಧಿಕಾರಿ ಕಚೇರಿ ,ತಾಲೂಕು ಕಚೇರಿ ಬಿಇಒ ಕಚೇರಿ ಖಾಲಿ ಇರುವ ಜಾಗಗಳಲ್ಲಿ ಸಾರ್ವಜನಿಕರ ಕುಳಿತುಕೊಳ್ಳಲು ಬೆಂಚ್ ಗಳ ವ್ಯವಸ್ಥೆಯನ್ನು ಮಾಡಲು ನಮ್ಮ ಸರ್ಕಾರ ನೌಕರ ಸಂಘ ಮುಂದೆ ಬಂದಿದೆ. ಇಷ್ಟೇ ಅಲ್ಲದೆ ಇನ್ನೂ ಹಲವು ಸಾಮಾಜಿಕ ಕಾರ್ಯಗಳನ್ನು ಮಾಡಲು ನಮ್ಮ ಸಂಘ ಯಾವಾಗಲೂ ಬದ್ಧವಾಗಿದೆ ಎಂದು ಹೇಳಿದರು.. ಈ ಸಂದರ್ಭದಲ್ಲಿ ನೌಕರ ಸಂಘದ ರಾಜ್ಯ ಪರಿಷತ್ತು ಸದಸ್ಯೆ ವೆಂಕಟಲಕ್ಷ್ಮಿ ನೌಕರರ ಸಂಘದ ತಾಲೂಕು ಗೌರವ ಅಧ್ಯಕ್ಷರಾದ ತಿಪ್ಪೇಸ್ವಾಮಿ, ಬಸವರಾಜ್ ಉಪಾಧ್ಯಕ್ಷರಾದ ಅಶೋಕ್ ಕುಮಾರ್ ಶ್ರೀನಿವಾಸ್. ಕಾರ್ಯದರ್ಶಿ ರಾಜಣ್ಣ. ಪವನ್ ಕುಮಾರ್ ಉಪನ್ಯಾಸಕರದ ಕುಮಾರಸ್ವಾಮಿ ಸೇರಿದಂತೆ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು1
- ಬೆಳೆ ವಿಮೆಗೆ ಆಗ್ರಹಿಸಿ ಚಿತ್ರದುರ್ಗದ ತೋಟಗಾರಿಕೆ ಇಲಾಖೆ ಕಚೇರಿ ಬಳಿ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಇನ್ನೂ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದಾರೆ. ಈ ವೇಳೆ ರೈತ ಸಂಘದ ಜಿಲ್ಲಾ ಅಧ್ಯಕ್ಷರಾದ ಕೆ ಟಿ ತಿಪ್ಪೇಸ್ವಾಮಿ ಅವರು ಮಾತನಾಡಿದ್ದಾರೆ1
- ಬೀಡಾಡಿ ದನಗಳ ಕಾಟಕ್ಕೆ ಬೆಸತ್ತ ಸಾರ್ವಜನಿಕರು. ಬೀಡಾಡಿ ದನಗಳನ್ನ ಹಿಡಿದು ಗೋಶಾಲೆಗೆ ಬಿಡಲು ಮುಂದಾದ ನಗರಸಭೆ.. ಚಳ್ಳಕೆರೆ ನಗರದ ತರಕಾರಿ ಮಾರುಕಟ್ಟೆ ಮುಖ್ಯರಸ್ತೆ ಸೇರಿದಂತೆ ನಗರದ ತುಂಬೆಲ್ಲಾ ಸಾರ್ವಜನಿಕರಿಗೆ ಉಪಟಲ ನೀಡುತ್ತಿದ್ದ ಬೀಡಾಡಿದನಗಳನ್ನ ಹಿಡಿದು ಗೋಶಾಲೆಗೆ ಬೀಡಲು ನಗರಸಭೆ ಮುಂದಾಗಿದೆ. ನಗರಸಭೆ ಪ್ರಭಾರ ಪೌರಯಯಕರಾದ ಡಾ.ನಾಗವೇಣಿ (ಕೆಎಎಸ್) ಇವರ ಸೂಚನೆ ಮೇರೆಗೆ ನಗರಸಭೆ ಇಂಜಿನಿಯರ್ ನರೇಂದ್ರಬಾಬು ಆರೋಗ್ಯ ನಿರೀಕ್ಷಕರಾದ ಗೀತಾ, ಗಣೇಶ್ ಹಾಗೂ ಸಾಗರ್ ಇವರ ನೇತೃತ್ವದಲ್ಲಿ ಚಳ್ಳಕೆರೆ ಪಶು ಸಂಗೋಪನ ಇಲಾಖೆ ಹಾಗೂ ಪೋಲಿಸ್ ಇಲಾಖೆ ಸಹಯೋಗದೊಂದಿಗೆ ಇಂದು ಬೀದಿ ದನಗಳನ್ನು ಹಿಡಿದು ಗೋಶಾಲೆಗೆ ಸಾಗಿಸಲು ಮುಂದಾಗಿದ್ದಾರೆ.. ಇದೆ ತಿಂಗಳು 24 ನೇ ತಾರೀಖಿನ ವರೆಗೆ ಬೀಡಾಡಿದನಗಳನ್ನ ಹಿಡಿದು ಗೋಶಾಲೆಗೆ ಬಿಡಲಾಗುವುದು ಬೀಡಾಡಿದನಗಳ ಮಾಲೀಕರು ಹೆಚ್ಚೆತ್ತುಕೊಂಡು ತಮ್ಮ ಜಾನುವಾರುಗಳನ್ನ ಬೀದಿಗೆ ಬೀಡದಂತೆ ನೋಡಿಕೊಳ್ಳಬೇಕು ಇಲ್ಲವಾದರೆ ಬೀದಿದನಗಳನ್ನ ಮಾಲೀಕರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಪ್ರಬಾರಿ ಪೌರಯುಕ್ತೆ ಡಾ.ನಾಗವೇಣಿ ಎಚ್ಚರಿಕೆ ನೀಡಿದ್ದಾರೆ..1