Shuru
Apke Nagar Ki App…
ರಾಜ್ಯದಲ್ಲಿ ಮುಂಗಾರು ಮಳೆಯ ಪ್ರಭಾವ ಕ್ಷೀಣಿಸಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಇಳಿಕೆಯಾಗಿದ್ದು, ಇಂದು ಬಿಸಿಲು ಹೆಚ್ಚಾಗಿತ್ತು. ಆದರೆ, ಮಹಾರಾಷ್ಟ್ರ ಹಾಗೂ ಘಟ್ಟ ಪ್ರದೇಶಗಳಲ್ಲಿ ಸುರಿದ ಮಳೆಯ ಪರಿಣಾಮವಾಗಿ ಬೆಳಗಾವಿ ಜಿಲ್ಲೆಯ ಸೇತುವೆಗಳು ಮುಳುಗಡೆಯಾಗಿವೆ. ಇದೇ ನಡುವೆ, ಶುಕ್ರವಾರದಂದು ತುಂಗಭದ್ರಾ ಜಲಾಶಯಕ್ಕೆ 4 ಟಿಎಂಸಿಗಿಂತ ಅಧಿಕ ಪ್ರಮಾಣದ ನೀರು ಹರಿದು ಬಂದಿದೆ. ಸದ್ಯ ರಾಜ್ಯದಲ್ಲಿ ಮೋಡ ಕವಿದ ವಾತಾವರಣದ ಮಧ್ಯೆ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ.
Shamsheer Budoli
ರಾಜ್ಯದಲ್ಲಿ ಮುಂಗಾರು ಮಳೆಯ ಪ್ರಭಾವ ಕ್ಷೀಣಿಸಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಇಳಿಕೆಯಾಗಿದ್ದು, ಇಂದು ಬಿಸಿಲು ಹೆಚ್ಚಾಗಿತ್ತು. ಆದರೆ, ಮಹಾರಾಷ್ಟ್ರ ಹಾಗೂ ಘಟ್ಟ ಪ್ರದೇಶಗಳಲ್ಲಿ ಸುರಿದ ಮಳೆಯ ಪರಿಣಾಮವಾಗಿ ಬೆಳಗಾವಿ ಜಿಲ್ಲೆಯ ಸೇತುವೆಗಳು ಮುಳುಗಡೆಯಾಗಿವೆ. ಇದೇ ನಡುವೆ, ಶುಕ್ರವಾರದಂದು ತುಂಗಭದ್ರಾ ಜಲಾಶಯಕ್ಕೆ 4 ಟಿಎಂಸಿಗಿಂತ ಅಧಿಕ ಪ್ರಮಾಣದ ನೀರು ಹರಿದು ಬಂದಿದೆ. ಸದ್ಯ ರಾಜ್ಯದಲ್ಲಿ ಮೋಡ ಕವಿದ ವಾತಾವರಣದ ಮಧ್ಯೆ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ.
More news from ಕರ್ನಾಟಕ and nearby areas
- ರಾಜ್ಯದಲ್ಲಿ ಮುಂಗಾರು ಮಳೆಯ ಪ್ರಭಾವ ಕ್ಷೀಣಿಸಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಇಳಿಕೆಯಾಗಿದ್ದು, ಇಂದು ಬಿಸಿಲು ಹೆಚ್ಚಾಗಿತ್ತು. ಆದರೆ, ಮಹಾರಾಷ್ಟ್ರ ಹಾಗೂ ಘಟ್ಟ ಪ್ರದೇಶಗಳಲ್ಲಿ ಸುರಿದ ಮಳೆಯ ಪರಿಣಾಮವಾಗಿ ಬೆಳಗಾವಿ ಜಿಲ್ಲೆಯ ಸೇತುವೆಗಳು ಮುಳುಗಡೆಯಾಗಿವೆ. ಇದೇ ನಡುವೆ, ಶುಕ್ರವಾರದಂದು ತುಂಗಭದ್ರಾ ಜಲಾಶಯಕ್ಕೆ 4 ಟಿಎಂಸಿಗಿಂತ ಅಧಿಕ ಪ್ರಮಾಣದ ನೀರು ಹರಿದು ಬಂದಿದೆ. ಸದ್ಯ ರಾಜ್ಯದಲ್ಲಿ ಮೋಡ ಕವಿದ ವಾತಾವರಣದ ಮಧ್ಯೆ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ.1
- Available for Sale Item : ಅಕ್ಕಿ Quantity Available : 500 Price : 60 City / Locality : ಹೊಸನಗರ Farming Sector : Crops ಕೆಂಪಕ್ಕಿ ದೊರೆಯುತ್ತದೆ1
- ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನೆಲ್ಲಿಹುದಿಕೇರಿಯ ಎಂ.ಜಿ ಕಾಲೋನಿಯಲ್ಲಿ ತಡರಾತ್ರಿ 11 ಗಂಟೆ ಸುಮಾರಿಗೆ ಕಾಡಾನೆ ಪ್ರತ್ಯಕ್ಷವಾಗಿದೆ. ಜನನಿಬಿಡ ಪ್ರದೇಶವಾಗಿರುವ ಎಂ.ಜಿ ಕಾಲೋನಿಯ ಒಂಟಿಸಲಗ ರಸ್ತೆಯಲ್ಲಿ ಈ ಆನೆ ರಾಜಾರೋಷವಾಗಿ ಸಂಚರಿಸುತ್ತಾ ವಾಕಿಂಗ್ ಮಾಡಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕವನ್ನು ಮೂಡಿಸಿದೆ. ನಗರದ ಮಧ್ಯಭಾಗದಲ್ಲಿ ಕಾಡಾನೆ ಈ ರೀತಿ ಮುಕ್ತವಾಗಿ ಓಡಾಡುತ್ತಿರುವುದು ಸಾರ್ವಜನಿಕರ ನಿದ್ದೆಗೆಡಿಸಿದೆ. ರಾತ್ರೋರಾತ್ರಿ ಆನೆ ರಸ್ತೆಯಲ್ಲಿ ನಡೆದುಕೊಂಡು ಸಾಗಿದ ದೃಶ್ಯಗಳು ಭೀತಿಯನ್ನು ಹುಟ್ಟುಹಾಕಿದ್ದು, ಸ್ಥಳೀಯರು ಆತಂಕಿತರಾಗಿದ್ದಾರೆ.1
- ಶಿವಮೊಗ್ಗದಲ್ಲಿ ಪಾದಚಾರಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ನಗರಪಾಲಿಕೆಯು ಕಟ್ಟುನಿಟ್ಟಿನ ಕಾರ್ಯಾಚರಣೆಯನ್ನು ಆರಂಭಿಸಿದೆ. ಈ ಅಭಿಯಾನದ ಭಾಗವಾಗಿ ನಗರದ ಶಂಕರ ಮಠ ರಸ್ತೆಯಲ್ಲಿ ಸಾರ್ವಜನಿಕ ಸ್ಥಳ ಅಥವಾ ಫುಟ್‌ಪಾತ್‌ಗಳನ್ನು ಅತಿಕ್ರಮಿಸಿದ್ದ ಜಾಗಗಳನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು, ರಸ್ತೆಯ ಅತಿಕ್ರಮಣ ಮಾಡದಂತೆ ಕಟ್ಟುನಿಟ್ಟಿನ ಎಚ್ಚರಿಕೆಯನ್ನು ನೀಡಿದ್ದಾರೆ. ಫುಟ್‌ಪಾತ್‌ಗಳನ್ನು ಪಾದಚಾರಿಗಳ ಸುಗಮ ಸಂಚಾರಕ್ಕೆ ಮಾತ್ರ ಬಳಸುವಂತೆ ಸೂಚನೆ ನೀಡಲಾಗಿದೆ.1
- ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಹಳೇನಗರದಲ್ಲಿರುವ ವಾಸವಿ ಮಹಲ್‌ನಲ್ಲಿ ಕೃತಕ ರಾಮಮಂದಿರವನ್ನು ನಿರ್ಮಿಸಲಾಗಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ವಿನಯ್ ರಾಂ ಅವರು ಈ ಮಂದಿರವನ್ನು ನಿರ್ಮಿಸಿದ್ದು, ಅಯೋಧ್ಯೆಯ ರಾಮಮಂದಿರವನ್ನು ನೇರವಾಗಿ ವೀಕ್ಷಿಸಲು ಸಾಧ್ಯವಾಗದ ವಯೋವೃದ್ಧರು ಹಾಗೂ ಭಕ್ತಾದಿಗಳಿಗಾಗಿ ಈ ವ್ಯವಸ್ಥೆ ಮಾಡಲಾಗಿದೆ. ಈ ಕೃತಕ ರಾಮಮಂದಿರವನ್ನು 2022ರಿಂದಲೇ ರಾಷ್ಟ್ರದ ವಿವಿಧ ರಾಜ್ಯಗಳಲ್ಲಿ ಪ್ರದರ್ಶಿಸಲಾಗುತ್ತಿದ್ದು, ಇದುವರೆಗೆ ಒಟ್ಟು 108 ಕಡೆಗಳಲ್ಲಿ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಇದೀಗ ಭದ್ರಾವತಿಯ ವಾಸವಿ ಮಹಲ್‌ನಲ್ಲಿ ಸಾರ್ವಜನಿಕರಿಗಾಗಿ 9 ದಿನಗಳ ಕಾಲ ಇದನ್ನು ಪ್ರದರ್ಶಿಸಲಾಗುತ್ತಿದೆ. ರಾಮನ ಭಕ್ತಾದಿಗಳು ಮತ್ತು ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿನಯ್ ರಾಂ ಕೋರಿದ್ದಾರೆ. ಈಗಾಗಲೇ ಸಹಸ್ರಾರು ಭಕ್ತರು ಈ ಕೃತಕ ರಾಮಮಂದಿರವನ್ನು ವೀಕ್ಷಿಸಿದ್ದಾರೆ.1
- ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ಕಂಬಳ ಆಯೋಜಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಮ್ಮ ಅಸಮ್ಮತಿಯನ್ನು ವ್ಯಕ್ತಪಡಿಸಿದ್ದಾರೆ. ಮೈಸೂರು ದಸರಾವನ್ನು ಬೇರೆ ಕಡೆ ಆಯೋಜಿಸಿದರೆ ಹೇಗೋ, ಹಾಗೆಯೇ ದಸರಾ ಸಮಯದಲ್ಲಿ ಮೈಸೂರಿನಲ್ಲಿ ಕಂಬಳ ಮಾಡುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟ ಅವರು, ಈ ವಿಚಾರದಲ್ಲಿ ಕಂಬಳ ಬೇಡ ಎಂಬ ಯದುವೀರ್ ಒಡೆಯರ್ ಅವರ ನಿಲುವಿಗೆ ತಾವು ಸಹಮತ ವ್ಯಕ್ತಪಡಿಸುವುದಾಗಿ ತಿಳಿಸಿದ್ದಾರೆ. ಈ ವಿಷಯದಲ್ಲಿ ಹಠಮಾರಿತನ ಬಿಟ್ಟು ಜನರ ಮಾತಿಗೆ ಮನ್ನಣೆ ನೀಡುವಂತೆ ಡಿಕೆ ಶಿವಕುಮಾರ್ ಅವರಿಗೆ ವಿಜಯೇಂದ್ರ ಸಲಹೆ ನೀಡಿದ್ದಾರೆ. ತಮಗೆ ಕಂಬಳದ ಮೇಲೆ ಯಾವುದೇ ವಿರೋಧವಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ರಾಜ್ಯ ಸರ್ಕಾರವು ದಕ್ಷಿಣ ಕನ್ನಡದಲ್ಲಿ ಅದ್ದೂರಿಯಾಗಿ ಕಂಬಳ ಆಯೋಜಿಸಲಿ, ಅದಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಕಂಬಳಕ್ಕೆ ಅನುದಾನ ನೀಡಿದ್ದನ್ನು ಸ್ಮರಿಸಿದ ಅವರು, ಮೈಸೂರಿನಲ್ಲಿ ದಸರಾ ಸಂಭ್ರಮದ ವೇಳೆ ಕಂಬಳ ಬೇಡ ಎಂಬುದು ಸ್ಥಳೀಯರ ಆಗ್ರಹವಾಗಿದೆ ಎಂದು ಹೇಳಿದ್ದಾರೆ.1
- ತುರುವೇಕೆರೆ ಪಟ್ಟಣದ ತಾಲೂಕು ಕಚೇರಿಯ ಹಿಂಭಾಗದಲ್ಲಿರುವ ಇಂದಿರಾ ಕ್ಯಾಂಟೀನ್ ಹಲವು ದಿನಗಳಿಂದ ಅನಿಶ್ಚಿತವಾಗಿ ಬಾಗಿಲು ಮುಚ್ಚುತ್ತಿದ್ದು, ಇದರಿಂದ ಬಡ ಕೂಲಿ ಕಾರ್ಮಿಕರು, ಆಶಕ್ತರು, ವಯೋವೃದ್ಧರು ಮತ್ತು ಬೀದಿ ವ್ಯಾಪಾರಿಗಳು ತೀವ್ರ ತೊಂದರೆಗೆ ಸಿಲುಕಿದ್ದಾರೆ. ನಗರ ಹಾಗೂ ಗ್ರಾಮೀಣ ಭಾಗದಿಂದ ಹಸಿವು ನೀಗಿಸಿಕೊಳ್ಳಲು ಬರುವವರಿಗೆ ಗೇಟಿಗೆ ಬೀಗ ಹಾಕಿರುವುದು ನಿತ್ಯದ ಗೋಳಾಗಿದೆ. ಯಾವುದೇ ನಾಮಫಲಕವಿಲ್ಲದ ಈ ಕ್ಯಾಂಟೀನ್ ಮುಂದೆ ಬರುವ ಜನರು, ಗೇಟ್ ಬಂದ್ ಆಗಿರುವುದನ್ನು ಕಂಡು ಹತಾಶರಾಗಿ ಹಿಂತಿರುಗುತ್ತಿದ್ದಾರೆ. ಕ್ಯಾಂಟೀನ್ ಸಿಬ್ಬಂದಿಯನ್ನು ವಿಚಾರಿಸಿದಾಗ ಅವರು ಉಡಾಫೆಯ ಉತ್ತರ ನೀಡುತ್ತಿದ್ದು, ನಾನಾ ನೆಪಗಳನ್ನು ಒಡ್ಡಿ ಆಹಾರ ತಯಾರಿಸದೇ ಸಾರ್ವಜನಿಕರನ್ನು ಕಣ್ಣುಮುಚ್ಚಾಲೆ ಆಟವಾಡಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಹಸಿದು ಬರುವ ಜನರು ಬಾಗಿಲು ತೆಗೆಯುವಂತೆ ಅಂಗಲಾಚಿದರೂ ಅಧಿಕಾರಿಗಳಿಗೆ ಆ ಆರ್ತನಾದ ಕೇಳಿಸುತ್ತಿಲ್ಲ. ನಿರ್ವಹಣೆಗಾರರ ನಿರ್ಲಕ್ಷ್ಯ ಮತ್ತು ಮನಸೋ ಇಚ್ಛೆಯ ವರ್ತನೆಯಿಂದಾಗಿ ಸರ್ಕಾರ ಹಾಗೂ ವ್ಯವಸ್ಥಾಪಕರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಡವರ ಹೊಟ್ಟೆ ತುಂಬಿಸುವ ಇಂದಿರಾ ಕ್ಯಾಂಟೀನ್ ಮತ್ತೆ ಎಂದಿಗೂ ಕಾರ್ಯನಿರ್ವಹಿಸುತ್ತದೆ ಮತ್ತು ಈ ಸಮಸ್ಯೆಗಳಿಗೆ ಯಾವಾಗ ಶಾಶ್ವತ ಪರಿಹಾರ ಸಿಗುತ್ತದೆ ಎಂಬುದೇ ಈಗ ಸಾರ್ವಜನಿಕರ ಪ್ರಶ್ನೆಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ವ್ಯವಸ್ಥಾಪಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.2
- ಪುತ್ತೂರಿನ ನರಿಮೊಗರಿನ ಪುರುಷರಕಟ್ಟೆಯಲ್ಲಿ ನಡೆದಿರುವ ಘಟನೆಯ ಸತ್ಯಾಸತ್ಯತೆ ತಿಳಿಯದೆ, ಕೇವಲ ರಾಜಕೀಯ ಉದ್ದೇಶಕ್ಕಾಗಿ ಹೆಣದ ಮೇಲೆ ಹೊಲಸು ರಾಜಕೀಯ ಮಾಡಲು ಹೊರಟಿರುವವರ ವಿರುದ್ಧ ಶಾಸಕ ಅಶೋಕ್ ಕುಮಾರ್ ರೈ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಈ ನಡವಳಿಕೆಯನ್ನು ಕಟುವಾಗಿ ಖಂಡಿಸಿದ್ದಾರೆ. ಸಮಾಜದ ಸೌಹಾರ್ದಯುತ ವಾತಾವರಣವನ್ನು ಹಾಳು ಮಾಡಲು ಹಾಗೂ ಅಭಿವೃದ್ಧಿ ಹೊಂದುತ್ತಿರುವ ಪುತ್ತೂರಿಗೆ ಕಳಂಕ ತರಲು ಹೊರಟಿರುವ ಇವರಿಗೆ ಮುಂದಿನ ದಿನಗಳಲ್ಲಿ ಜನರೇ ತಕ್ಕ ಬುದ್ಧಿ ಕಲಿಸಲಿದ್ದಾರೆ ಎಂದು ಶಾಸಕರು ಎಚ್ಚರಿಸಿದ್ದಾರೆ. ನಿಮ್ಮ ರಾಜಕೀಯ ಏನಿದ್ದರೂ ಅಭಿವೃದ್ಧಿ ವಿಚಾರದಲ್ಲಿ ತೋರಿಸಿ ಹಾಗೂ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುವ ಇಂತಹ ಪ್ರವೃತ್ತಿಯನ್ನು ಕೈಬಿಡಿ ಎಂದು ಅವರು ತೀವ್ರವಾಗಿ ಕಿಡಿಕಾರಿದ್ದಾರೆ.1