ಶ್ರೀದೇವಿ ಹಿರೇಮಠಗೆ ಬಣಗಾರ ಪೌಂಡೇಷನ್ ವತಿಯಿಂದ ಉತ್ತಮ ಸೇವಕಿ ಪ್ರಶಸ್ತಿ ಪ್ರತಿವರ್ಷದಂತೆ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬಣಗಾರ ಪೌಂಡೇಷನ್ ವತಿಯಿಂದ ನೀಡಲಾಗುವ ತಾಲೂಕ ಉತ್ತಮ ಸೇವಾ ಪ್ರಶಸ್ತಿಯನ್ನು ಸುರಪುರ ನಗರಸಭೆಯ ಡೇ-ನಲ್ಮ್ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಶ್ರೀದೇವಿ ಹಿರೇಮಠ ರವರಿಗೆ ನೀಡಲಾಗಿದೆ ಎಂದು ತಾಲೂಕ ಬಣಗಾರ ಪೌಂಡೇಷನ್ ಅಧ್ಯಕ್ಷರಾದ ವಸಂತಕುಮಾರ ಬಣಗಾರ ತಿಳಿಸಿದ್ದಾರೆ. ಸುರಪುರ ನಗರದ ಹಳೆ ಆರೋಗ್ಯ ಕೇಂದ್ರದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಸುಮಾರು 04 ವರ್ಷಗಳಿಂದ ನಗರಸಭೆ ವ್ಯಾಪ್ತಿಯಲ್ಲಿ ಮಹಿಳಾ ಸ್ವ-ಸಹಾಯ ಸಂಘಗಳ ರಚನೆ, ಮಹಿಳೆಯರಿಗೆ ಸಾಲ ಸೌಲಭ್ಯ ಹಾಗೂ ನಗರದ ಬೀದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ಕಲ್ಪಿಸುವಲ್ಲಿ ಅವಿರತವಾಗಿ ಶ್ರುಮಿಸುತ್ತಿರುವುದನ್ನು ಗುರುತಿಸಿ ಸದರಿಯವರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಹೇಳಿದರು. ಸುರಪುರ ನಗರಸಭೆಯ ಕಚೇರಿ ವ್ಯವಸ್ಥಾಪಕರಾದ ಯಲ್ಲಪ್ಪ ನಾಯಕ, ಸಮುದಾಯ ಸಂಘಟಕರಾದ ದುರುಗಪ್ಪ ನಾಯಕ, ಸಮುದಾಯ ಸಂಪನ್ಮೂಲ ವ್ಯಕ್ತಿ ಕುಮಾರಿಗೀತಾ, ಕಕ್ಕೇರಾ ಪುರಸಭೆಯ ಸಮುದಾಯ ಸಂಘಟಕರಾದ ಶ್ರೀಮತಿ ತಿಪ್ಪಮ್ಮ ಬಿರಾದಾರ ಹಾಗೂ ಕಮೂನಿಟಿ ಮೊಬಿಲೈಜರ್ ಶ್ರೀಮತಿ ವರ್ಷ ಯಾದವ ಅಬಿನಂದನೆಗಳು ತಿಳಿಸಿದರು.

- ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಡ್ಯಾಮ್ ಮೇಲೆ ಮೊಸಳೆ ವಾಕ್ ಮಾಡುತ್ತಿರುವುದು ಕಂಡು ಸಿಬ್ಬಂದಿಗಳು ಮೊಸಳೆಯ ವಿಡಿಯೋ ಮಾಡಿದ್ದಾರೆ1
- Post by ಸ್1
- ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ‘ಒಳಮೀಸಲಾತಿ ಐಕ್ಯ ಹೋರಾಟ ಸಮಿತಿ’ ವತಿಯಿಂದ ಮಾರ್ಚ್ 11ರಂದು ರಾಯಚೂರು ಬಂದ್‌ಗೆ ಕರೆ ನೀಡಲಾಗಿದೆ ಎಂದು ಸಮಿತಿಯ ಮುಖಂಡ ಎಂ. ವಿರುಪಾಕ್ಷಿ ತಿಳಿಸಿದರು. ನಗರದಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತದೆ ಎಂದರು. ಸರ್ಕಾರ ಹಳೆಯ ಮೀಸಲಾತಿಯಲ್ಲೇ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿರುವುದನ್ನು ಮಾದಿಗ ಸಮುದಾಯ ಖಂಡಿಸಿದೆ ಎಂದು ಹೇಳಿದರು. ಈ ಬಂದ್‌ನಲ್ಲಿ ಪ್ರಗತಿಪರ ಸಂಘಟನೆಗಳು, ವಿದ್ಯಾರ್ಥಿಗಳು, ಯುವಜನರು ಹಾಗೂ ಸಮುದಾಯದ ಮುಖಂಡರು ಭಾಗವಹಿಸಲಿದ್ದಾರೆ. ಸರ್ಕಾರ ತಕ್ಷಣ ಒಳಮೀಸಲಾತಿ ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.1
- Post by Kalyan karanataka news channel1
- ಹೌದು ಹೋಳಿ ಹಬ್ಬದ ವೇಳೆ ನಡೆದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬಾಗಲಕೋಟ ಜಿಲ್ಲೆಯ ತೇರದಾಳ ಪಟ್ಟಣದಲ್ಲಿ ನಡೆದಿದೆ. ರಾಹುಲ್ ಬಾಹುಬಲಿ ಕೊಲೆಯಾದ ದುರ್ದೈವಿ, ಹೋಳಿ ಹಬ್ಬದಂದು ರಾಹುಲ ಹಾಗೂ ಆತನ ಸ್ನೇಹಿತನ ಕ್ಷುಲ್ಲಕ ಕಾರಣಕ್ಕೆ ಜಗಳವುಂಟಾಗಿತ್ತು. ಇದೇ ವಿಷಯವಾಗಿ ಮಾತನಾಡಲು ಸ್ನೇಹಿತರೆಲ್ಲ ದೇವಸ್ಥಾನ ಒಂದರ ಬಳಿ ಸೇರಿದ್ದ ವೇಳೆಯಲ್ಲಿ ಮಾತಿಗೆ ಮಾತು ಬೆಳೆದು ರಾಹುಲ್ ನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.1
- ಅಫಜಲಪುರ: ಸಾಮೂಹಿಕ ವಿವಾಹಗಳು ಬಡವರಿಗೆ ವರದಾನ: ಡಾ.ಮುರುಘರಾಜೇಂದ್ರ ಶ್ರೀಗಳು. ಕುಬೇರ ಕರಜಗಿಯ ಶ್ರೀ ಯಲ್ಲಾಲಿಂಗ ಮಹಾರಾಜರ ಜಾತ್ರೆ.1
- ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಸಂಗನಾಳ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಮಹಿಳೆಯರು ತೀವ್ರ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಗ್ರಾಮದಲ್ಲಿ ಹಲವಾರು ದಿನಗಳಿಂದ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿರುವ ಗ್ರಾಮಸ್ಥರು, ವಿಶೇಷವಾಗಿ ಮಹಿಳೆಯರು, ಇದರಿಂದ ಯುವಕರು ಮತ್ತು ಕುಟುಂಬಗಳು ಹಾನಿಯಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಗ್ರಾಮದಲ್ಲಿನ ಇಬ್ಬರು ವ್ಯಕ್ತಿಗಳು ಮದ್ಯದ ನಿಷೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ಬೇಸತ್ತ ಮಹಿಳೆಯರು ಸಂಗನಾಳ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಸೇರಿ ಅಕ್ರಮ ಮದ್ಯ ಮಾರಾಟವನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಮದ್ಯ ಮಾರಾಟದಿಂದ ಗ್ರಾಮದಲ್ಲಿ ಶಾಂತಿ ಭಂಗವಾಗುತ್ತಿದೆ ಮತ್ತು ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿವೆ ಎಂದು ಮಹಿಳೆಯರು ಆರೋಪಿಸಿದರು. ಪ್ರತಿಭಟನೆ ವೇಳೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಕೂಡಲೇ ಕ್ರಮ ಕೈಗೊಂಡು ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.1
- ಬಾಗಲಕೋಟ ಜಿಲ್ಲೆಯ ಬದಾಮಿ ತಾಲೂಕಿನ ಶಿವಯೋಗಮಂದಿರದ ಗೋವು ಶಾಲೆಗೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬಾಗಲವಾಡ ಗ್ರಾಮದ ಶ್ರೀಅಮರೇಗೌಡ್ರ ಬಿಳಿ ಜೋಳದ ಮೇವು ಪೆಂಡಿಗಳನ್ನು ಶಿವಯೋಗಮಂದಿರಕ್ಕೆ ನೀಡಿದ್ದಾರೆ. ಅಮರೇಗೌಡ್ರ ಅವರನ್ನು ಶಿವಯೋಗಮಂದಿರದ ಮ್ಯಾನೇಜರ್ ಅವರು ಸತ್ಕರಿಸಿ ಗೌರವಿಸಿದರು.1