ಶಿವಮೊಗ್ಗ-ಕೊಳೆತ ಹಣ್ಣು ಗಳಿಂದ ಜ್ಯೂಸ್ ತಯಾರಿ ಆರೋಪ:ಎಸಿ ಡಾ. ಮೈತ್ರಿ ನೇತೃತ್ವದಲ್ಲಿ ದಾಳಿ ಶಿವಮೊಗ್ಗ: ಬಿಸಿಲಿನ ತಾಪಕ್ಕೆ ತಂಪು ನೀಡುವ ಹೆಸರಿನಲ್ಲಿ ಸಾರ್ವಜನಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿದ್ದರೆಂಬಆರೋಪ ಕೇಳಿಬಂದಿರುವ ತಿಲಕನಗರದ ತನು ಜ್ಯೂಸ್ ಸೆಂಟರ್ ಮೇಲೆ ಉಪವಿಭಾಗಾಧಿಕಾರಿ ಡಾ.ಮೈತ್ರಿ ನೇತೃತ್ವ ದಲ್ಲಿ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿ ಖಡಕ್ ಕ್ರಮ ಕೈಗೊಂಡಿದೆ. ಸಾರ್ವಜನಿಕರಿಂದ ಬಂದ ದೂರು ಗಳ ಹಿನ್ನೆಲೆಯಲ್ಲಿ ಎಸಿ ಡಾ.ಮೈತ್ರಿ, ತಹಶೀಲ್ದಾರ್ ರಾಜೀವ್ ಹಾಗೂ ಆಹಾರ ಇಲಾಖೆಯ ಸಿಬ್ಬಂದಿ ಜಂಟಿಯಾಗಿ ತನು ಜ್ಯೂಸ್ ಸೆಂಟರ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ, ವಿವಿಧ ಬಗೆಯ ಹಣ್ಣುಗಳು ಕೊಳೆತ ಹಾಗೂ ಹಾಳಾದ ಸ್ಥಿತಿಯಲ್ಲಿ ಕಂಡು ಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗ್ರೇಪ್ಸ್, ಚಿಕ್ಕು, ಡ್ರ್ಯಾಗನ್ ಫ್ರೂಟ್, ಸೇಬು, ದಾಳಿಂಬೆ ಸೇರಿದಂತೆ ಹಲವು ಹಣ್ಣುಗಳ ಮೇಲೆ ಫಂಗಸ್ ಮತ್ತು ಬೂಷ್ಟಿನಂತಹ ಬೆಳವಣಿಗೆ ಕಂಡುಬಂದಿದ್ದು, ಅವುಗಳನ್ನು ಜ್ಯೂಸ್ ತಯಾರಿಕೆಗೆ ಬಳಸ ಲಾಗುತ್ತಿತ್ತೆಂಬುದು ಪರಿಶೀಲನೆಯ ವೇಳೆ ಗಮನಕ್ಕೆ ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಗ್ರಾಹಕರ ಕಣ್ಣಿಗೆ ತಂಪು.ಒಳಗೆ ಮಾತ್ರ ಕೊಳೆತ ಹಣ್ಣುಗಳ ದಾಸ್ತಾನು? ತನು ಜ್ಯೂಸ್ ಸೆಂಟರ್‌ನಲ್ಲಿ ಬಗೆಬಗೆಯ ಜ್ಯೂಸ್‌ಗಳು ಕಡಿಮೆ ದರದಲ್ಲಿ ದೊರೆಯು ತ್ತವೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಹಲವರು ಇಲ್ಲಿಗೆ ಬರುತ್ತಿದ್ದರು. ಹೊರಗಿನಿಂದ ನೋಡಿದಾಗ ಎಲ್ಲವೂ ಸ್ವಚ್ಛವಾಗಿಯೇ ಕಾಣುತ್ತಿದ್ದರೂ, ಅಧಿಕಾರಿಗಳ ಪರಿಶೀಲನೆಯ ವೇಳೆ ಒಳಭಾಗ ದಲ್ಲಿ ಕಂಡುಬಂದ ಪರಿಸ್ಥಿತಿ ಮಾತ್ರ ಆಘಾತಕಾರಿಯಾಗಿತ್ತು ಎಂದು ಎಸಿ ತಿಳಿಸಿದ್ದಾರೆ. ಜ್ಯೂಸ್‌ಗೆ ಬಳಸುವ ಹಣ್ಣುಗಳನ್ನು ತಾಜಾ ಸ್ಥಿತಿಯಲ್ಲಿ ಇಡುವ ಬದಲು, ದೀರ್ಘಕಾಲ ಸಂಗ್ರಹಿಸಿಟ್ಟಿರುವಂತೆ ಕಂಡುಬಂದಿದ್ದು, ಕೆಲವು ಹಣ್ಣು ಗಳು ಕೊಳೆತು ಹೋಗಿದ್ದವು. ಫ್ರೀಜರ್‌ನಲ್ಲಿಯೂ ಕಳಪೆ ಸ್ಥಿತಿಯ ಹಣ್ಣು ಗಳು ಕಂಡುಬಂದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಅಧಿಕಾರಿಗಳ ಪರಿಶೀಲನೆ ವೇಳೆ ಗ್ರೇಪ್ಸ್, ಚಿಕ್ಕು, ಡ್ರ್ಯಾಗನ್ ಫ್ರೂಟ್, ಸೇಬು, ದಾಳಿಂಬೆ ಸೇರಿದಂತೆ ವಿವಿಧ ಹಣ್ಣುಗಳು ಕೊಳೆತ ಸ್ಥಿತಿ ಯಲ್ಲಿ ಕಂಡುಬಂದಿವೆ ಎಂದು ತಿಳಿದುಬಂದಿದೆ. ಕೆಲವು ಹಣ್ಣುಗಳ ಮೇಲೆ ಫಂಗಸ್, ಬೂಷ್ಟಿನಂತಹ ಬೆಳವಣಿಗೆ ಕಂಡುಬಂದಿದ್ದು, ಇವುಗಳನ್ನು ಸಾರ್ವಜನಿಕರು ಸೇವಿಸುವುದು ಸೂಕ್ತವಲ್ಲ ಎಂಬ ಪ್ರಾಥಮಿಕ ಅಭಿಪ್ರಾಯ ವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಹಣ್ಣುಗಳು ಎಷ್ಟು ದಿನಗಳಿಂದ ಸಂಗ್ರಹಿಸ ಲಾಗಿತ್ತು ಎಂಬುದನ್ನು ಕೇವಲ ಮೇಲ್ನೋಟದ ಪರಿಶೀಲ ನೆಯ ಆಧಾರದ ಮೇಲೆ ನಿಖರ ವಾಗಿ ಹೇಳಲು ಸಾಧ್ಯವಿಲ್ಲ. ಮಾದರಿಗಳನ್ನು ವಿಶ್ಲೇಷಣೆಗೆ ಕಳುಹಿಸಿದ ನಂತರವೇ ಅದರ ಗುಣಮಟ್ಟ ಹಾಗೂ ಸ್ಥಿತಿಯ ಬಗ್ಗೆ ಹೆಚ್ಚಿನ ಸ್ಪಷ್ಟತೆ ದೊರೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಶಿವಮೊಗ್ಗ-ಕೊಳೆತ ಹಣ್ಣು ಗಳಿಂದ ಜ್ಯೂಸ್ ತಯಾರಿ ಆರೋಪ:ಎಸಿ ಡಾ. ಮೈತ್ರಿ ನೇತೃತ್ವದಲ್ಲಿ ದಾಳಿ ಶಿವಮೊಗ್ಗ: ಬಿಸಿಲಿನ ತಾಪಕ್ಕೆ ತಂಪು ನೀಡುವ ಹೆಸರಿನಲ್ಲಿ ಸಾರ್ವಜನಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿದ್ದರೆಂಬಆರೋಪ ಕೇಳಿಬಂದಿರುವ ತಿಲಕನಗರದ ತನು ಜ್ಯೂಸ್ ಸೆಂಟರ್ ಮೇಲೆ ಉಪವಿಭಾಗಾಧಿಕಾರಿ ಡಾ.ಮೈತ್ರಿ ನೇತೃತ್ವ ದಲ್ಲಿ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿ ಖಡಕ್ ಕ್ರಮ ಕೈಗೊಂಡಿದೆ. ಸಾರ್ವಜನಿಕರಿಂದ ಬಂದ ದೂರು ಗಳ ಹಿನ್ನೆಲೆಯಲ್ಲಿ ಎಸಿ ಡಾ.ಮೈತ್ರಿ, ತಹಶೀಲ್ದಾರ್ ರಾಜೀವ್ ಹಾಗೂ ಆಹಾರ ಇಲಾಖೆಯ ಸಿಬ್ಬಂದಿ ಜಂಟಿಯಾಗಿ ತನು ಜ್ಯೂಸ್ ಸೆಂಟರ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ, ವಿವಿಧ ಬಗೆಯ ಹಣ್ಣುಗಳು ಕೊಳೆತ ಹಾಗೂ ಹಾಳಾದ ಸ್ಥಿತಿಯಲ್ಲಿ ಕಂಡು ಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗ್ರೇಪ್ಸ್, ಚಿಕ್ಕು, ಡ್ರ್ಯಾಗನ್ ಫ್ರೂಟ್, ಸೇಬು, ದಾಳಿಂಬೆ ಸೇರಿದಂತೆ ಹಲವು ಹಣ್ಣುಗಳ ಮೇಲೆ ಫಂಗಸ್ ಮತ್ತು ಬೂಷ್ಟಿನಂತಹ ಬೆಳವಣಿಗೆ ಕಂಡುಬಂದಿದ್ದು, ಅವುಗಳನ್ನು ಜ್ಯೂಸ್ ತಯಾರಿಕೆಗೆ ಬಳಸ ಲಾಗುತ್ತಿತ್ತೆಂಬುದು ಪರಿಶೀಲನೆಯ ವೇಳೆ ಗಮನಕ್ಕೆ ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಗ್ರಾಹಕರ ಕಣ್ಣಿಗೆ ತಂಪು.ಒಳಗೆ ಮಾತ್ರ ಕೊಳೆತ ಹಣ್ಣುಗಳ ದಾಸ್ತಾನು? ತನು ಜ್ಯೂಸ್ ಸೆಂಟರ್‌ನಲ್ಲಿ ಬಗೆಬಗೆಯ ಜ್ಯೂಸ್‌ಗಳು ಕಡಿಮೆ ದರದಲ್ಲಿ ದೊರೆಯು ತ್ತವೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಹಲವರು ಇಲ್ಲಿಗೆ ಬರುತ್ತಿದ್ದರು. ಹೊರಗಿನಿಂದ ನೋಡಿದಾಗ ಎಲ್ಲವೂ ಸ್ವಚ್ಛವಾಗಿಯೇ ಕಾಣುತ್ತಿದ್ದರೂ, ಅಧಿಕಾರಿಗಳ ಪರಿಶೀಲನೆಯ ವೇಳೆ ಒಳಭಾಗ ದಲ್ಲಿ ಕಂಡುಬಂದ ಪರಿಸ್ಥಿತಿ ಮಾತ್ರ ಆಘಾತಕಾರಿಯಾಗಿತ್ತು ಎಂದು ಎಸಿ ತಿಳಿಸಿದ್ದಾರೆ. ಜ್ಯೂಸ್‌ಗೆ ಬಳಸುವ ಹಣ್ಣುಗಳನ್ನು ತಾಜಾ ಸ್ಥಿತಿಯಲ್ಲಿ ಇಡುವ ಬದಲು, ದೀರ್ಘಕಾಲ ಸಂಗ್ರಹಿಸಿಟ್ಟಿರುವಂತೆ ಕಂಡುಬಂದಿದ್ದು, ಕೆಲವು ಹಣ್ಣು ಗಳು ಕೊಳೆತು ಹೋಗಿದ್ದವು. ಫ್ರೀಜರ್‌ನಲ್ಲಿಯೂ ಕಳಪೆ ಸ್ಥಿತಿಯ ಹಣ್ಣು ಗಳು ಕಂಡುಬಂದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಅಧಿಕಾರಿಗಳ ಪರಿಶೀಲನೆ ವೇಳೆ ಗ್ರೇಪ್ಸ್, ಚಿಕ್ಕು, ಡ್ರ್ಯಾಗನ್ ಫ್ರೂಟ್, ಸೇಬು, ದಾಳಿಂಬೆ ಸೇರಿದಂತೆ ವಿವಿಧ ಹಣ್ಣುಗಳು ಕೊಳೆತ ಸ್ಥಿತಿ ಯಲ್ಲಿ ಕಂಡುಬಂದಿವೆ ಎಂದು ತಿಳಿದುಬಂದಿದೆ. ಕೆಲವು ಹಣ್ಣುಗಳ ಮೇಲೆ ಫಂಗಸ್, ಬೂಷ್ಟಿನಂತಹ ಬೆಳವಣಿಗೆ ಕಂಡುಬಂದಿದ್ದು, ಇವುಗಳನ್ನು ಸಾರ್ವಜನಿಕರು ಸೇವಿಸುವುದು ಸೂಕ್ತವಲ್ಲ ಎಂಬ ಪ್ರಾಥಮಿಕ ಅಭಿಪ್ರಾಯ ವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಹಣ್ಣುಗಳು ಎಷ್ಟು ದಿನಗಳಿಂದ ಸಂಗ್ರಹಿಸ ಲಾಗಿತ್ತು ಎಂಬುದನ್ನು ಕೇವಲ ಮೇಲ್ನೋಟದ ಪರಿಶೀಲ ನೆಯ ಆಧಾರದ ಮೇಲೆ ನಿಖರ ವಾಗಿ ಹೇಳಲು ಸಾಧ್ಯವಿಲ್ಲ. ಮಾದರಿಗಳನ್ನು ವಿಶ್ಲೇಷಣೆಗೆ ಕಳುಹಿಸಿದ ನಂತರವೇ ಅದರ ಗುಣಮಟ್ಟ ಹಾಗೂ ಸ್ಥಿತಿಯ ಬಗ್ಗೆ ಹೆಚ್ಚಿನ ಸ್ಪಷ್ಟತೆ ದೊರೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
- ಶಿವಮೊಗ್ಗ-ಭದ್ರಾ ನದಿಯ ನೀರು ಎಡ, ಬಲ ಹಾಗೂ ಗೋಂದಿ ನಾಲೆ ಹರಿಸಲು ಬದ್ದ ಶಿವಮೊಗ್ಗ: ಭದ್ರಾ ಎಡನಾಲೆ ಮತ್ತು ಬಲನಾಲೆ ಮತ್ತು ಗೋಂದಿ ನಾಲೆ ನೀರನ್ನು ಆದಷ್ಟು ಬೇಗನೆ ಡ್ಯಾಮ್ ನಿಂದ ನೀರನ್ನು ಬಿಡಲಾಗುವುದು ಈ ವಿಚಾರವಾಗಿ ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತುಕತೆ ನಡೆಸಿದ್ದು ರೈತರು ಆತಂಕ ಪಡುವುದು ಬೇಡ ಎಂದು ಭದ್ರಾವತಿ ಶಾಸಕ ಬಿಕೆ. ಸಂಗಮೇಶ್ವರ್ ತಿಳಿಸಿದ್ದಾರೆ. ಅವರಿಂದು ತಮ್ಮ ಗೃಹಕಚೇರಿಯಲ್ಲಿ ನೆರೆದಿದ್ದ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿದ್ದ ರೈತರ ಸಭೆಯಲ್ಲಿ ಮಾತನಾಡಿದರು. ಕುಡಿಯುವ ಹಾಗೂ ದನಕರುಗಳಿಗೆ ನೀರು ಅವಶ್ಯಕತೆ ಇದೆ ಎಂಬ ವಿಚಾರ ನನಗೂ ತಿಳಿದಿದೆ. ಆದ್ದರಿಂದ ರೈತರು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡವೆಂದು ತಿಳಿಯಪಡಿಸುತ್ತೇನೆ. ಈ ವಿಚಾರವಾಗಿ ಆದಷ್ಟು ಬೇಗನೆ ನಿರ್ಧಾರ ತೆಗೆದುಕೊಳ್ಳುತ್ತೇವೆಂದು ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿರುತ್ತಾರೆಂದರು.1
- ಶಿವಮೊಗ್ಗದಲ್ಲಿ ಐತಿಹಾಸಿಕ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ ಭಕ್ತರ ಸಂಭ್ರಮದ ನಡುವೆ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ1
- ಮುಖ್ಯಮಂತ್ರಿಗಳ ಬಂಗಾರದ ಪದಕ ಪುರಸ್ಕೃತ ವೀರ ಸೈನಿಕ ಶಬ್ಬೀರ್ ನಿಧನ ತರೀಕೆರೆ, ಸೆ.14: ಭಾರತೀಯ ಸೇನೆಯಲ್ಲಿ 22 ವರ್ಷಗಳ ಕಾಲ ಸೈನಿಕ, ಚಾಲಕ ಹಾಗೂ ಮೆಕಾನಿಕ್ ಆಗಿ ಸೇವೆ ಸಲ್ಲಿಸಿ, ಕಾರ್ಗಿಲ್ ಯುದ್ಧದಲ್ಲಿಯೂ ಭಾಗವಹಿಸಿದ್ದ ವೀರ ಸೈನಿಕ ಶಬ್ಬೀರ್ ಅವರು ನಿಧನರಾದರು. ಶಬ್ಬೀರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಮಿಲಿಟರಿ ಶ್ರೀನಿವಾಸ್ ಅವರು, ದೇಶ ಸೇವೆ ಸಲ್ಲಿಸಿದ ವೀರ ಯೋಧನ ಅಗಲಿಕೆಯಿಂದ ಅಪಾರ ನೋವುಂಟಾಗಿದೆ. ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಹಾಗೂ ಅಲ್ಲಾಹ ಕರುಣಿಸಲಿ ಎಂದು ಹೇಳಿದರು. ಅವರು ಪಟ್ಟಣದಲ್ಲಿರುವ ಶಬ್ಬೀರ್ ಅವರ ಸ್ವಗೃಹಕ್ಕೆ ತೆರಳಿ ಮಾತನಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ತರೀಕೆರೆ ಎನ್. ವೆಂಕಟೇಶ್ ಮಾತನಾಡಿ, ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ಶಬ್ಬೀರ್ ಅವರು ಭಾರತೀಯ ಸೇನೆಯಲ್ಲಿ ನಾಯಕ್ ಹುದ್ದೆಯವರೆಗೆ ಸೇವೆ ಸಲ್ಲಿಸಿದ್ದರು. 2026–27ನೇ ಸಾಲಿನ ಮುಖ್ಯಮಂತ್ರಿಗಳ ಬಂಗಾರದ ಪದಕ ಪುರಸ್ಕಾರಕ್ಕೂ ಅವರು ಭಾಜನರಾಗಿದ್ದರು ಎಂದು ತಿಳಿಸಿದರು. ದೇಶ ಸೇವೆಯ ಜೊತೆಗೆ ಸಮಾಜಮುಖಿ ಕಾರ್ಯಗಳಲ್ಲೂ ತೊಡಗಿಸಿಕೊಂಡಿದ್ದ ಶಬ್ಬೀರ್ ಅವರು, ಖಾಜಿ ಬೀದಿಯಲ್ಲಿರುವ ತಮ್ಮ ಸ್ವಂತ ಮನೆಯನ್ನು ಸರ್ಕಾರದ ‘ನಮ್ಮ ಕ್ಲಿನಿಕ್’ ಆಸ್ಪತ್ರೆ ತೆರೆಯಲು ನೀಡಿದ್ದರು. ನಂತರ ತರೀಕೆರೆ ಅಗ್ನಿಶಾಮಕ ದಳದಲ್ಲಿಯೂ ಕರ್ತವ್ಯ ನಿರ್ವಹಿಸಿದ್ದರು. ಅವರ ನಿಧನದಿಂದ ದೇಶ ಸೇವೆ ಸಲ್ಲಿಸಿದ ವೀರ ಸೈನಿಕನೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ವಿಷಾದಿಸಿದರು. ಶಬ್ಬೀರ್ ಅವರು ಪತ್ನಿ ಜೈದಾ ಬಾನು, ಪುತ್ರ ಫಿದಾ ಮೊಹಮ್ಮದ್ ಹಾಗೂ ಪುತ್ರಿ ನೌಶಾಧಿಕಾ ಅವರನ್ನು ಅಗಲಿದ್ದಾರೆ. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪ್ರವೀಣ್ ಕೆ.ವಿ., ಠಾಣಾಧಿಕಾರಿ ತಿಪ್ಪೇಸ್ವಾಮಿ ಆರ್., ಸಹಾಯಕ ಠಾಣಾಧಿಕಾರಿ ಡಿ.ಜಿ. ನಾಗೇಂದ್ರ ಹಾಗೂ ಅಗ್ನಿಶಾಮಕ ಸಿಬ್ಬಂದಿ ಪಾರ್ಥಿವ ಶರೀರಕ್ಕೆ ಗೌರವ ನಮನ ಸಲ್ಲಿಸಿ, ಸಂತಾಪ ಸೂಚಿಸಿದರು. ಮಾಜಿ ಸೈನಿಕರಾದ ಎಸ್.ಎಚ್. ಕುಮಾರ್, ದೇವೇಂದ್ರ, ಗೋವಿಂದಪ್ಪ, ಸೋಮಶೇಖರ್ ಸೇರಿದಂತೆ ಲಿಂಗದಹಳ್ಳಿ ಹಾಗೂ ಕಡೂರು ಭಾಗದ ಮಾಜಿ ಸೈನಿಕರು ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು. ವರದಿ: ಪ್ರದೀಪ್ ಹೆಚ್ ಈ. ತರೀಕೆರೆ4
- ಗೌರಸಮುದ್ರ ಜಾತ್ರೆಗೆ ಆಗಮಿಸಿ ದೇವಿಯ ದರ್ಶನ ಪಡೆದ ಜಿಲ್ಲಾ ಉಸ್ತುವಾರಿ ಸಚಿವ ಟಿ .ರಘುಮೂರ್ತಿ ಚಳ್ಳಕೆರೆ ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳ ಜನರನ್ನು ಒಂದೆಡೆ ಬೆಸೆಯುವ ಜಾತ್ರೆ ಎಂಬ ಖ್ಯಾತಿ ಹೊಂದಿರುವ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಗೌರಸಮುದ್ರ ಮಾರಮ್ಮದೇವಿ ಜಾತ್ರೆ ಇಂದು ಸಡಗರ ಸಂಭ್ರಮದಿಂದ ಜರುಗಿತು. ಪ್ರತಿವರ್ಷ ಶ್ರಾವಣಮಾಸ ಆರಂಭದ ಪ್ರಥಮ ಮಂಗಳವಾರ ಇಲ್ಲಿ ದೇವಿಯ ದೊಡ್ಡ ಪರಿಷೆ ನಡೆಸಿಕೊಂಡು ಬರಲಾಗುತ್ತಿದೆ.ದೇವಿಯ ಮೂಲ ಆಂಧ್ರಪ್ರದೇಶದ ನಿಡಗಲ್ಲು ಆಗಿರುವ ಕಾರಣ ರಾಜ್ಯ ಮತ್ತು ಆಂಧ್ರದ ಸಾವಿರಾರು ಭಕ್ತರು ಜಂಟಿಯಾಗಿ ಜಾತ್ರೆಯಲ್ಲಿ ಭಾಗಿಯಾಗಿ ತಾಯಿ ಮಾರಮ್ಮಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ ಕನ್ನಡ, ತೆಲುಗು ಭಾಷೆಗಳ ಜುಗಲ್ ಬಂದಿಯನ್ನು ಜಾತ್ರೆಯಲ್ಲಿ ನಾವು ಕಾಣಬಹುದಾಗಿದಿ 15 ದಿನ ಮುಂಚಿತವಾಗಿ ದೇವಿಯ ಒಪ್ಪಿಗೆ ಪಡೆದು ಜಾತ್ರೆಗೆ ಚಾಲನೆ ನೀಡಲಾಗುತ್ತಿ. ಅನುಮತಿ ಕೋರುವ ದಿನ ಊರಿನಲ್ಲಿ ಸಾರು ಚೆಲ್ಲಲಾಗುತ್ತು ಇದಾದ ನಂತರ ಜಾತ್ರೆ ತನಕ ಗ್ರಾಮಸ್ಥರು ಸ್ನಾನ, ಅಡುಗೆ, ಉಡುಗೆ ತೊಡಿಗೆ ವಿಚಾರದಲ್ಲಿ ಹಲವು ಕಟ್ಟುಪಾಡುಗಳನ್ನು ಕಡ್ಡಾಯಪಾಲಿಸಿಕೊಂಡು ಬಂದಿದ್ದರು.. ಗೌರಸಮುದ್ರ ಮಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ನಂತರ ದೊಡ್ಡ ಜಾತ್ರೆಗೆ ದೇವಿಯ ಉತ್ಸವ ಮೂರ್ತಿಯನ್ನು ಮೆರವಣಿಗೆಯಲ್ಲಿ ತುಂಬಲಿನ ಪ್ರದೇಶಕ್ಕೆ ವಾದ್ಯಗಳೊಂದಿಗೆ ದೇವಿಯಆಭರಣ, ವಸ್ತ್ರಗಳನ್ನು ಬುಡಕಟ್ಟು ಸಂಸ್ಕೃತಿಯ ವಾದ್ಯಗಳೊಂದಿಗೆ ತುಂಬಲಿಗೆ ದೇವಿಯನ್ನು ಕರೆತರಲಾಯಿತು . ಮಾರಮ್ಮ ದೇವಿ ತುಮುಲಗಿ ಬರುವ ದೃಶ್ಯವನ್ನು ನೋಡುವುದು ಜಾತ್ರೆಯ ಪ್ರಮುಖ ಘಟ್ಟ. ದೇವಿ ತುಮುಲು ತುಂಬಿಲಿನ ಲ್ಲಿ ಜಾತ್ರೆ ನಡೆಯುವ ಸ್ಥಳಕ್ಕೆ ಬರುತ್ತಿದ್ದಂತೆ ಭಕ್ತರು ಬೆಳೆದಂತಹ ಈರುಳ್ಳಿ ಕೋಳಿ ಕುರಿಮರಿ ಸೂರಮೆಣಸು ತಾಯಿಯ ಮೇಲೆ ತೂರುವುದು ಮೂಲಕ ತಮ್ಮ ಹರಕೆಯನ್ನಿ ತೀರಿಸಿದರು. ಮಾರಿದೇವತೆಯ ತವರ ಮನೆ ಎಂದು ಕರೆಯಲಾಗುವ ನೀಡಗಲ್ಲಿನಿಂದ ತಂದ ಮೀಸಲು ಹಸಿ ಹಾಲು, ಬೆಳ್ಳಿ ಕಣ್ಣು ಹಾಗೂ ಕೋರೆ ಮಿಸ್ಸೆಯನ್ನು ದೇವಿಗೆ ಭಕ್ತಿಯಿಂದ ಅರ್ಪಿಸಲಾಯಿತು . ನಂತರ ತುಂಬಲಿನ ಮುಂದೆ ಇರುವ ಬೊಮ್ಮಲಿಂಗ ದೇವರ ದೀಪದ ಕಂಬದ ಮೇಲೆ ಏರಿ ದೀಪ ಹಚ್ಚಿದ ಕಷ್ಟ ಕಾರ್ಪಣ್ಯಗಳು ದೂರವಾಗಲಿ, ಮಳೆ ಬೆಳೆ ಚೆನ್ನಾಗಿ ಬರಲಿ ಹಾಗೂ ಜಾನುವಾರುಗಳಿಗೆ ಯಾವುದೇ ರೋಗರುಚಿನ ಬಾರ್ದಿರಲಿ ಎಂದು ಪ್ರಾರ್ಥಿಸಿದರು ಲಕ್ಷಾಂತರ ಭಕ್ತರು ದೇವಿಯ ದರ್ಶನವನ್ನು ಪಡೆದರು. ದೇವಿಯ ದರ್ಶನಕ್ಕೆ ಬಂದಂತಹ ಲಕ್ಷಾಂತರ ಭಕ್ತರ ಯಾವುದೇ ತೊಂದರೆ ಆಗದಂತೆ ಪೊಲೀಸ್ ಇಲಾಖೆ ತಾಲೂಕು ಆಡಳಿತ ಮುಂಜಾಗ್ರತ ಕ್ರಮಗಳನ್ನು ಕೈಗೊಂಡು ಕುಡಿಯುವ ನೀರು ದೇವಯ ದರ್ಶನಕ್ಕೆ ಅನುಕೂಲ ಮಾಡಿಕೊಟ್ಟರು.. ಜಾತ್ರೆಗೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ ರಘುಮೂರ್ತಿ ಮೊಳಕಾಲ್ಮೂರು ಶಾಸಕ ಎನ್ ವೈ ಗೋಪಾಲಕೃಷ್ಣ ಜಿಲ್ಲಾಧಿಕಾರಿ ರಮ್ಯ ಜಿಲ್ಲಾ ಎಸ್ ಪಿ ರಂಜಿತ್ ಕುಮಾರ್ ಬಂಡವರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಜನಪ್ರತಿನಿಧಿಗಳು ಭಕ್ತರು ಜಾತ್ರೆಯಲ್ಲಿ ಭಾಗವಹಿಸಿದರು. ತಕ್ಷಣವೇ ತುಮಲು ಪ್ರದೇಶ ಬಿಟ್ಟು ಖಾಲಿ ಖಾಲಿ ಮಾಡಿದರು. ಪ್ರತಿವರ್ಷದಂತೆ ಈ ವರ್ಷವೂ ಸಹ ಲಕ್ಷಾಂತರ ಭಕ್ತರು ಈ ಜಾತ್ರೆಯಲ್ಲಿ ಭಾಗಿಯಾದರು..2
- ಗೋನೂರಿನಲ್ಲಿ ಗಂಗಾಪೂಜೆ: ಭದ್ರೆಯನ್ನು ಸ್ವಾಗತಿಸಿದ ಹೋರಾಟಗಾರರು" 🚩 #ಭದ್ರಾನೀರು #ಚಿತ್ರದುರ್ಗ #ನೀರಾವರಿಹೋರಾಟ #ಗೋನೂರು #ಗಂಗಾಪೂಜೆ #ಭದ್ರಾಮೇಲ್ದಂಡೆ #ಸಮಗ್ರನೀರಾವರಿ #ಬರಡುನೆಲಹಸಿರು #ಕೋದಂಡರಾಮಯ್ಯ #ಎಂಜಯಣ್ಣ #ಮುರುಘರಾಜೇಂದ್ರಒಡೆಯರ್ #ಚಿತ್ರದುರ್ಗಜಿಲ್ಲೆ #ಮೊಳಕಾಲ್ಮೂರು #ಚಳ್ಳಕೆರೆ #ಈಚಘಟ್ಟ #ಬೇಡರರೆಡ್ಡಿಹಳ್ಳಿ #ಕಬೀರಾನಂದಮಠ #ಗೋನೂರುಭದ್ರಾ #ನೀರಾವರಿ #ರೈತಹೋರಾಟ #ಕೆರೆಕಟ್ಟೆ #ಅಣೆಕಟ್ಟು #ನೀರುಸ್ವಾಗತ #ಎರಡನೇಹಂತದಹೋರಾಟ #ಅರ್ಧಗೆಲುವು #ದಶಕಗಳಕನಸು #ರೋಮಾಂಚನದಕ್ಷ #ಪಿಕೋದಂಡರಾಮಯ್ಯ #ಬೇಡರರೆಡ್ಡಿಹಳ್ಳಿಬಸವರೆಡ್ಡಿ #ಕೆಎಸ್ನವೀನ್ #ಚಳ್ಳಕೆರೆಬಸವರಾಜ್ #ನರೇನಹಳ್ಳಿಅರುಣಕುಮಾರ್ #ಜೋಗಿಮಟ್ಟಿಮಹೇಶ್ಬಾಬು #ಗೌನಹಳ್ಳಿಗೋವಿಂದಪ್ಪ #ಶಿವಾಲಿಂಗಾನಂದಸ್ವಾಮೀಜಿ #ಹೋರಾಟಗಾರರಿಗೆನಮನ #ನೀರಿಗಾಗಿಬದುಕು #ಬರಡುನೆಲಕ್ಕೆಜೀವ #ಹಸಿರುಕ್ರಾಂತಿ #ನ್ಯಾಯಕ್ಕಾಗಿಹೋರಾಟ #ಸಂಕಲ್ಪ #BhadraWater #Chitradurga #IrrigationStruggle #Karnataka #BhadraUpperBank #WaterForAll #FarmersFight #GangaPooja #Gonuru #Molakalmuru #SaveFarmers #WaterRevolution #ಭದ್ರಾನೀರು #ಚಿತ್ರದುರ್ಗ #ನೀರಾವರಿಹೋರಾಟ #ಗೋನೂರು #ಗಂಗಾಪೂಜೆ #ಬರಡುನೆಲಹಸಿರು #ಕೋದಂಡರಾಮಯ್ಯ #ಎರಡನೇಹಂತದಹೋರಾಟ #BhadraWater #Chitradurga #Karnataka #IrrigationStruggle1
- ಲಕ್ಷ್ಮಮ್ಮ ಬಡಾವಣೆಯಲ್ಲಿ ಶ್ರೀ ವಿದ್ಯಾ ಗಣಪತಿ ಯೂತ್ ಟ್ರಸ್ಟ್ ವತಿಯಿಂದ ಭರತ ನಾಟ್ಯ ಕಾರ್ಯಕ್ರಮ... ಹಿರಿಯೂರಿನ ಶ್ರೀ ಲಕ್ಷ್ಮಮ್ಮ ಬಡಾವಣೆಯಲ್ಲಿ ಶ್ರೀ ವಿದ್ಯಾ ಗಣಪತಿ ಯೂತ್ ಸೇವಾ ಟ್ರಸ್ಟ್ (ರಿ ) ವತಿಯಿಂದ ಸಾದ್ವಿ ನೃತ್ಯ ಶಾಲೆಯವರು ಭರತ ನಾಟ್ಯ ಕಾರ್ಯಕ್ರಮವನ್ನು ನಡೆಸಿಕೊಡಲಾಯಿತು.. ಸುಮಾರು 10 ಕ್ಕೂ ಹೆಚ್ಚು ನೃತ್ಯಗಳನ್ನು ವಿದ್ಯಾರ್ಥಿ ಗಳು ನಡೆಸಿಕೊಟ್ಟರು.. ಕಾರ್ಯಕ್ರಮವನ್ನು ರೂಪ ಶಿಕ್ಷಕಿಯವರು ನಡೆಸಿಕೊಟ್ಟರು2
- ಶಿಗ್ಗಾಂವಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಬೇಕು ಎಂದು ಬೃಹತ್ ಪ್ರತಿಭಟನೆ. ಶಿಗ್ಗಾಂವಿ. ರೈತಪರ ಒಕ್ಕೂಟ ಹಾಗೂ ಕನ್ನಡ ಪರ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಪ್ರಮುಖ ಮೂರು ಬೇಡಿಕೆಗಳ ಈಡೇರಿಕೆಗಾಗಿ ಬೃಹತ್ ಪ್ರತಿಭಟನೆಯನ್ನು ದಿನಾಂಕ್ 16. 9. 2026. ಬುಧವಾರ ರಂದು, ಪೋಸ್ಟ್ ಆಫೀಸ್ ನಿಂದ ಕಿತ್ತೂರು ರಾಣಿ ಚೆನ್ನಮ್ಮರ ಸರ್ಕಲ್ ವರೆಗೂ ಬೃಹತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಆದ ಕಾರಣ ಕನ್ನಡಪರ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳು ನಮ್ಮ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ತಾಲೂಕ ರೈತ ಸಂಘದ ಅಧ್ಯಕ್ಷರಾದ ಶ್ರೀ ಬಸಲಿಂಗಪ್ಪ ನರಗುಂದ ಮನವಿ ಮಾಡಿದರು.2
- ಶಿವಮೊಗ್ಗ-ವಂದೇ ಮಾತರಂ ಗೀತೆ ಎರಡೇ ಚರಣ: ಕಾರ್ಯಕ್ರಮ ದಿಂದ ಹೊರನಡೆದ ಶಾಸಕ ಶಿವಮೊಗ್ಗ: ವಂದೇ ಮಾತರಂ ಗೀತೆಯಲ್ಲಿ ಕೇವಲ ಎರಡು ಚರಣವನ್ನು ಹಾಡಿದ್ದಕ್ಕೆ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯ ಕ್ರಮದಿಂದ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಹೊರ ನಡೆದಿರುವ ಘಟನೆ ನಡೆದಿದೆ. ನಗರದ ಅಂಬೇಡ್ಕರ್ ಭವನದಲ್ಲಿ ಮಂಗಳ ವಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಕಾರ್ಯಕ್ರಮವನ್ನು ಜಿಲ್ಲಾಡಳಿತ ಆಯೋಜಿಸಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಚನ್ನಬಸಪ್ಪ ಕಾರ್ಯಕ್ರಮ ದಲ್ಲಿ ವಂದೇ ಮಾತರಂ ಗೀತೆಯ ಎರಡು ಚರಣ ಮಾತ್ರ ಹಾಡಿದ್ದಕ್ಕೆ ವೇದಿಕೆಯಲ್ಲಿಯೇ ಅಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಅವರು ಇದ್ದ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆಯನ್ನು ಕೇವಲ ಎರಡು ಚರಣ ಹಾಡಿ ಅಪಮಾನ ಮಾಡಲಾಗಿದೆ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು. ಕಾರ್ಯಕ್ರಮದಲ್ಲಿ ಎರಡು ಚರಣ ಹಾಡಬೇಕೆಂದು ಎಲ್ಲಿ ಇದೆ, ಆದೇಶ ತೋರಿಸಿ ಎಂದು ಆಗ್ರಹಿಸಿದರು. ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಮಲ್ಲೇಶಪ್ಪ ರಾಜ್ಯ ಸರ್ಕಾರದ ಆದೇಶವನ್ನು ತೋರಿಸಿದರು. ಇದಕ್ಕೆ ಗರಂ ಆದ ಶಾಸಕರು ಹಾಗಾದ್ರೆ ಕೇಂದ್ರ ಸರ್ಕಾರದ ಆದೇಶವನ್ನು ಮೊಟಕುಗೊಳಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ವಂದೇ ಮಾತರಂ ಗೀತೆಗೆ ಅಪಮಾನ ಮಾಡಿದ ವೇದಿಕೆಯಲ್ಲಿ ನಾನು ಇರಲ್ಲ ಎಂದು ಭವನದಿಂದ ಹೊರ ನಡೆದರು. ನಂತರ ತಮ್ಮ ಕಚೇರಿಯಲ್ಲಿ ಮಾಧ್ಯಮ ಗೋಷ್ಟಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಇಡೀ ದೇಶಕ್ಕೆ ಸೇರಿ ಒಂದು ಕಾನೂನು ಮಾಡುತ್ತದೆ. ಆದರೆ ರಾಜ್ಯ ಸರ್ಕಾರವು ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನ ಮಂತ್ರಿಗಳು ಇರುವ ಕಾರ್ಯಕ್ರಮ ದಲ್ಲಿ ಮಾತ್ರ ಪೂರ್ಣ ಗೀತೆ ಹಾಡಬೇಕು, ರಾಜ್ಯ ಸರ್ಕಾರದ ಕಾರ್ಯಕ್ರಮದಲ್ಲಿ ಕೇವಲ ಎರಡು ಚರಣ ಹಾಡಬೇಕೆಂದು ಆದೇಶ ಮಾಡಿದೆ. ಇದು ಸರಿ ಅಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಣಯ ವನ್ನು ತೆಗೆದುಕೊಂಡು ವಂದೇ ಮಾತರಂ ಗೀತೆಗೆ 150 ವರ್ಷವಾದ ಕಾರಣ ಗೀತೆಯನ್ನು ಗಾಯನ ಮಾಡಬೇಕೆಂದು ಸಂಸತ್ತಿನಲ್ಲಿ ತಿದ್ದುಪಡಿ ಮಾಡಲಾಗಿದೆ. ಇದಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಆದರೆ ಇದನ್ನು ರಾಜ್ಯ ಸರ್ಕಾರ ತನ್ನ ಕ್ಯಾಬಿನೆಟ್ನಲ್ಲಿ ತೀರ್ಮಾನ ಮಾಡಲಾಗಿದೆ ಎಂದು ವಂದೇ ಮಾತರಂನ ಎರಡು ಚರಣ ಮಾತ್ರ ಹಾಡಲಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಇಂದು ಅಂಬೇಡ್ಕರ್ ಭವನದಲ್ಲಿ ನಡೆದ ಪ್ರಜಾಪ್ರಭುತ್ವ ದಿನಾಚರಣೆಯಂದು ವಂದೇ ಮಾತರಂ ಗೀತೆಯನ್ನು ಕೇವಲ ಎರಡು ಚರಣವನ್ನು ಹಾಡಲಾಯಿತು. ಇದನ್ನು ಪ್ರಶ್ನಿಸಿದರೆ, ರಾಜ್ಯ ಸರ್ಕಾರದ ಆದೇಶ ಎಂದು ಜಿಲ್ಲಾಧಿಕಾರಿ ಗಳು ತಿಳಿಸಿದ್ದಾರೆ. ಇದರಿಂದ ನಾನು ಕಾರ್ಯಕ್ರಮದಿಂದ ಹೊರಗೆ ಬಂದಿದ್ದೇನೆ ಎಂದು ಶಾಸಕ ಚನ್ನಬಸಪ್ಪ ತಿಳಿಸಿದರು. ರಾಷ್ಟ್ರಪತಿ, ಉಪ ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿಗಳು, ಕೇಂದ್ರ ಸಚಿವರು ಇರುವ ಕಾರ್ಯಕ್ರಮ ಹೊರತುಪಡಿಸಿ ಉಳಿದ ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಹಾಡಿನ ಎರಡು ಚರಣ ಮಾತ್ರ ಹಾಡಬೇಕೆಂದು ರಾಜ್ಯ ಸರ್ಕಾರ ಇತ್ತೀಚಿಗೆ ಆದೇಶ ಮಾಡಿದೆ. ಹಾಗಾದ್ರೆ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪಿಎಂ ಅವರಿಗೆ ಒಂದು ಕಾನೂನು, ಸಾಮಾನ್ಯ ಜನರಿಗೆ ಒಂದು ಕಾನೂನು ಇದೆಯೇ ಎಂದು ಪ್ರಶ್ನಿಸಿದರು. ಕಾನೂನು ಅನ್ನು ಗಾಳಿಗೆ ತೂರುವ ಕೆಲಸ ಮಾಡುತ್ತಿದ್ದಿರಾ, ನೀವು ಈ ದೇಶದ ಪ್ರಜೆಗಳು ಅಲ್ವಾ ಎಂದು ಅವರು ಪ್ರಶ್ನಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಬೇರೆ ಬೇರೆ ಕಾನೂನು ಇದೆಯೇ ಎಂದರು. ಜನಗಣಮನ ಗೀತೆಯಲ್ಲಿ ಎಲ್ಲ ರಾಜ್ಯಗಳ ಹೆಸರು ಇದೆಯೇ ಎಂದು ಪ್ರಶ್ನಿಸಿದರು. ಇದು ಅಕ್ಷಮ್ಯ ಅಪರಾಧವಾಗಿದೆ. ನ್ಯಾಯಾಧೀಶರ ಮುಂದೆ ಇಟ್ಟುಕೊಂಡು ನ್ಯಾಯಾಂಗಕ್ಕೆ ಕೊಡಲಿ ಪೆಟ್ಟು ಕೊಡುವ ಕೆಲಸ ಮಾಡಲಾ ಗುತ್ತಿದೆ. ಸಂವಿಧಾನಕ್ಕೆ ಅಪಪ್ರಚಾರ ಮಾಡಲು ಶಾಸಕ ಚನ್ನಿ ಬಿಡಲ್ಲ ಎಂದು ಹೇಳಿದರು. ಸರ್ಕಾರಿ ಕಾರ್ಯಕ್ರಮದಲ್ಲೂ ಗೀತೆಯನ್ನು ಪೂರ್ಣ ಹಾಡಬೇಕಿತ್ತು. ನೀವು ನಿರ್ಣಯ ಮಾಡಿದಂತೆ ನಡೆಯಲ್ಲ. ಕಾಂಗ್ರೆಸ್ ಪಕ್ಷ ವನ್ನು ಅಲ್ಪಸಂಖ್ಯಾಂತರಿಗೆ ಅಡ ಇಡಲಾಗಿದೆ ಎಂದು ಶಾಸಕ ಚನ್ನಬಸಪ್ಪ ಕಿಡಿಕಾರಿದ್ದಾರೆ. ಇದನ್ನು ಗಂಭೀರವಾಗಿ ತೆಗೆದುಕೊಂಡು ಹೋಗಬೇಕಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. 136 ಜನ ಇದ್ದೇವೆಂದು ಕಾಂಗ್ರೆಸ್ ಏನು ಮಾಡಿದ್ರು ನಡೆಯುತ್ತದೆ ಎಂದು ತಿಳಿದುಕೊಂಡರೆ ತಪ್ಪು. ಇಕ್ಕಟ್ಟಿಗೆ ಸಿಲುಕಿಕೊಂಡಿದ್ದಾರೆ. ಬಂಕಿಮಚಂದ್ರ ಚಟರ್ಜಿ ಆರಾಧ್ಯ ದೈವ ಎಂದರು. ಸ್ವಾತಂತ್ರ್ಯ ಹೋರಾಟಕ್ಕೆ ವಂದೇ ಮಾತರಂ ಬೇಕಿತ್ತು. ಆದರೆ ಈಗ ಬೇಡವೇ ಎಂದು ಪ್ರಶ್ನಿಸಿದರು. ಸಂವಿಧಾನಕ್ಕೆ ಬಿಕ್ಕಟ್ಟಿನ ಸಂದರ್ಭ ಬಂದಿದೆ. ಇದನ್ನು ರಾಜ್ಯ ಸರ್ಕಾರ ಹುಟ್ಟುಹಾಕಿದೆ. ನಮ್ಮಲ್ಲಿ ಭಾರತೀಯ ನೀತಿ ಸಂಹಿತೆ ಇದೆಯೇ ಹೊರತು ಕರ್ನಾಟಕ ನೀತಿ ಸಂಹಿತೆ ಅಂತ ಇಲ್ಲ. ಮುಂದಿನ ವಾರ ನಡೆಯುವ ಅಧಿವೇಶನದಲ್ಲಿ ಇದನ್ನು ಪ್ರಶ್ನೆ ಮಾಡಲಾಗುವುದು ಎಂದರು.1