logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ, ಕರಡು ಮತದಾರರ ಪಟ್ಟಿಯನ್ನು ಪ್ರಚುರಪಡಿಸಿ ಸೊರಬ: ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧಿಸಿದಂತೆ ಮತದಾರರ ನೋಂದಣಾಧಿಕಾರಿ ಕೆ.ಆರ್. ಸುಜಾತಾ ಅಧ್ಯಕ್ಷತೆಯಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಚುರಪಡಿಸಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಲಾಯಿತು. ತಹಶೀಲ್ದಾರ್ ಹಾಗೂ ಮತದಾರರ ಉಪ ನೋಂದಾಣಾಧಿಕಾರಿ ಕೆ. ಪುರಂದರ ಮಾತನಾಡಿ, ತಾಲೂಕಿನಲ್ಲಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್ ಐಆರ್) ಪ್ರಕ್ರಿಯೆಯ ನಂತರ ಕರಡು ಮತದಾರರ ಪಟ್ಟಿಯು ಬಿಡುಗಡೆಯಾಗಿದ್ದು, ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವುದನ್ನು ಸ್ಥಳೀಯ ಬಿಎಲ್‌ಒ ಅಥವಾ ಚುನಾವಣಾ ಆಯೋಗದ ಅಧಿಕೃತ ಜಾಲತಾಣದಲ್ಲಿ ಪರಿಶೀಲಿಸಿಕೊಳ್ಳಬಹುದು ಎಂದರು. ಪ್ರಸ್ತುತ ಪ್ರಕಟಿಸಲಾಗಿರುವ ಕರಡು ಮತದಾರರ ಪಟ್ಟಿಯಲ್ಲಿ ಸುಮಾರು 16.209 ಮತದಾರರ ಹೆಸರುಗಳನ್ನು ಪಟ್ಟಿಯಿಂದ ಹೊರಗಿ ಡಲಾಗಿದೆ. ಇದರಲ್ಲಿ ಈವರೆಗೆ ಮ್ಯಾಪಿಂಗ್ ಆಗದಿರುವ 1183 ಮತದಾರರಿಗೆ ಹಾಗೂ ತಂದೆ-ಮಗನ ವಯಸ್ಸಿನ ಗಣನೀಯ ಅಂತರ ಸೇರಿದಂತೆ ದೋಷಪೂರಿತ ಮಾಹಿತಿ ಇರುವ (ಅನೋಮಲಿಸ್) 2898 ಮತದಾರರು ಸೇರಿದಂತೆ ಒಟ್ಟು 4081 ಮತದಾರರಿಗೆ ನೋಟಿಸ್‌ ನೀಡಲಾಗುತ್ತದೆ ಎಂದು ತಿಳಿಸಿದರು. ಪಟ್ಟಿಯಲ್ಲಿ ಹೆಸರು ಇಲ್ಲದಿರುವವರು ಆಕ್ಷೇಪಣೆ ಸಲ್ಲಿಸಲು ಸೆಪ್ಟೆಂಬರ್ 23ರವರೆಗೆ ಅವಕಾಶವಿದ್ದು, ಮತದಾರರು ತಮ್ಮ ಹೆಸರು ಇದೆಯೇ ಎಂದು ಪರಿಶೀಲಿಸಿಕೊಳ್ಳುವ ಬಗ್ಗೆ ಚುನಾವಣಾ ಆಯೋಗ ಮಾಹಿತಿ ನೀಡಲಿದೆ ಎಂದು ಮಾಹಿತಿ ನೀಡಿದರು. ಕಳೆದ ಜೂನ್ 16ರ ಮತಪಟ್ಟಿಯಲ್ಲಿದ್ದಂತೆ ತಾಲೂಕಿನಲ್ಲಿ 1,98,955 ಮತದಾರರಿದ್ದು, ಅವರಲ್ಲಿ 1,82,746 ಮತದಾರರ ಹೆಸರನ್ನು ಅಧಿಕೃತಗೊಳಿಸಿ, ಗಣಕೀಕರಣ ಕಾರ್ಯ ಪೂರ್ಣಗೊಳಿಸಲಾಗಿದೆ. ಅಂದರೆ, ಶೇ.91.85 ರಷ್ಟು ಪರಿಷ್ಕರಣೆ ಕಾರ್ಯಪೂರ್ಣಗೊಂಡಂತಾಗಿದೆ. ಎಸ್‌ಐಆರ್ ಪ್ರಕ್ರಿಯೆ ವೇಳೆ 16,209ಮತದಾರರನ್ನು 'ಎಎಸ್‌ಡಿಡಿಒ' ವರ್ಗಕ್ಕೆ ಸೇರಿಸಲಾಗಿದೆ. ಈ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಬರುವುದಿಲ್ಲ. ಈ ಪೈಕಿ 5,759 ಮತದಾರರು ಮೃತರಾಗಿರುವುದನ್ನು, 1,093 ಮತದಾರರು ಗೈರಾಗಿರುವುದನ್ನು ಹಾಗೂ 7822 ಮತದಾರರು ಸ್ಥಳಾಂತರಗೊಂಡಿರುವುದನ್ನು ಗುರುತಿಸಲಾಗಿದೆ ಎಂದು ತಿಳಿಸಿದರು. ಕರಡು ಮತದಾರರ ಪಟ್ಟಿಯಿಂದ ಹೊರಗುಳಿ ದಿರುವ ಮತದಾರರ (ಎಎಸ್‌ಡಿಡಿಒ) ಪೈಕಿ ಗೈರು ಸ್ಥಳಾಂತರಗೊಂಡಿರುವ, ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಅಥವಾ ತಿದ್ದುಪಡಿ ಇದ್ದರೆ, ಹೊಸ ಸೇರ್ಪಡೆಗೆ ಮತದಾರರು ನಿಗದಿತ ದಾಖಲೆಗ ಳೊಂದಿಗೆ ಫಾರ್ಮ್ 6 ಸಲ್ಲಿಕೆ ಮಾಡಬೇಕು. ಇದರ ಜತೆಗೆ ಅ.1ಕ್ಕೆ 18 ವರ್ಷ ತುಂಬುವ ಯುವ ಮತ ದಾರರು ನಿಗದಿತ ದಾಖಲೆಗಳೊಂದಿಗೆ ಫಾರ್ಮ್ 6 ಸಲ್ಲಿಸಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಬಹುದು. ಹೆಸರು, ವಿಳಾಸ ಬದಲಾವಣೆಗೆ ನಮೂನೆ-8 ಬಳಸಿ ಅರ್ಜಿ ಹಾಕಬಹುದು. ಮತಗಟ್ಟೆ ಅಧಿಕಾರಿಗಳ ಪರಿಶೀಲನೆಯ ನಂತರ ಆ ಮತದಾರರ ಪಟ್ಟಿಯ ಪೌರತ್ವ ದೃಢಪಟ್ಟರಷ್ಟೇ, ಅವರ ಹೆಸರನ್ನು ಅಂತಿಮ ಮತದಾರರ ಪಟ್ಟಿಗೆ ಸೇರಿಸಲಾಗುತ್ತದೆ ಎಂದರು. ಸಭೆಯಲ್ಲಿ ಮತದಾರರ ನೋಂದಣಾಧಿಕಾರಿ ಕೆ.ಆರ್. ಸುಜಾತಾ, ಚುನಾವಣಾ ಶಿರಸ್ತೇದಾರ್ ವೈ.ಎಸ್. ದೀಪಕ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು‌ ಇದ್ದರು.

2 hrs ago
user_SANDEEP U. L
SANDEEP U. L
Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
2 hrs ago
a860adbf-acde-4e64-9f0e-c7f53ec3dcda

ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ, ಕರಡು ಮತದಾರರ ಪಟ್ಟಿಯನ್ನು ಪ್ರಚುರಪಡಿಸಿ ಸೊರಬ: ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧಿಸಿದಂತೆ ಮತದಾರರ ನೋಂದಣಾಧಿಕಾರಿ ಕೆ.ಆರ್. ಸುಜಾತಾ ಅಧ್ಯಕ್ಷತೆಯಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಚುರಪಡಿಸಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಲಾಯಿತು. ತಹಶೀಲ್ದಾರ್ ಹಾಗೂ ಮತದಾರರ ಉಪ ನೋಂದಾಣಾಧಿಕಾರಿ ಕೆ. ಪುರಂದರ ಮಾತನಾಡಿ, ತಾಲೂಕಿನಲ್ಲಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್ ಐಆರ್) ಪ್ರಕ್ರಿಯೆಯ ನಂತರ ಕರಡು ಮತದಾರರ ಪಟ್ಟಿಯು ಬಿಡುಗಡೆಯಾಗಿದ್ದು, ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವುದನ್ನು ಸ್ಥಳೀಯ ಬಿಎಲ್‌ಒ ಅಥವಾ ಚುನಾವಣಾ ಆಯೋಗದ ಅಧಿಕೃತ ಜಾಲತಾಣದಲ್ಲಿ ಪರಿಶೀಲಿಸಿಕೊಳ್ಳಬಹುದು ಎಂದರು. ಪ್ರಸ್ತುತ ಪ್ರಕಟಿಸಲಾಗಿರುವ ಕರಡು ಮತದಾರರ ಪಟ್ಟಿಯಲ್ಲಿ ಸುಮಾರು 16.209 ಮತದಾರರ ಹೆಸರುಗಳನ್ನು ಪಟ್ಟಿಯಿಂದ ಹೊರಗಿ ಡಲಾಗಿದೆ. ಇದರಲ್ಲಿ ಈವರೆಗೆ ಮ್ಯಾಪಿಂಗ್ ಆಗದಿರುವ 1183 ಮತದಾರರಿಗೆ ಹಾಗೂ ತಂದೆ-ಮಗನ ವಯಸ್ಸಿನ ಗಣನೀಯ ಅಂತರ ಸೇರಿದಂತೆ ದೋಷಪೂರಿತ ಮಾಹಿತಿ ಇರುವ (ಅನೋಮಲಿಸ್) 2898 ಮತದಾರರು ಸೇರಿದಂತೆ ಒಟ್ಟು 4081 ಮತದಾರರಿಗೆ ನೋಟಿಸ್‌ ನೀಡಲಾಗುತ್ತದೆ ಎಂದು ತಿಳಿಸಿದರು. ಪಟ್ಟಿಯಲ್ಲಿ ಹೆಸರು ಇಲ್ಲದಿರುವವರು ಆಕ್ಷೇಪಣೆ ಸಲ್ಲಿಸಲು ಸೆಪ್ಟೆಂಬರ್ 23ರವರೆಗೆ ಅವಕಾಶವಿದ್ದು, ಮತದಾರರು ತಮ್ಮ ಹೆಸರು ಇದೆಯೇ ಎಂದು ಪರಿಶೀಲಿಸಿಕೊಳ್ಳುವ ಬಗ್ಗೆ ಚುನಾವಣಾ ಆಯೋಗ ಮಾಹಿತಿ ನೀಡಲಿದೆ ಎಂದು ಮಾಹಿತಿ ನೀಡಿದರು. ಕಳೆದ ಜೂನ್ 16ರ ಮತಪಟ್ಟಿಯಲ್ಲಿದ್ದಂತೆ ತಾಲೂಕಿನಲ್ಲಿ 1,98,955 ಮತದಾರರಿದ್ದು, ಅವರಲ್ಲಿ 1,82,746 ಮತದಾರರ ಹೆಸರನ್ನು ಅಧಿಕೃತಗೊಳಿಸಿ, ಗಣಕೀಕರಣ ಕಾರ್ಯ ಪೂರ್ಣಗೊಳಿಸಲಾಗಿದೆ. ಅಂದರೆ, ಶೇ.91.85 ರಷ್ಟು ಪರಿಷ್ಕರಣೆ ಕಾರ್ಯಪೂರ್ಣಗೊಂಡಂತಾಗಿದೆ. ಎಸ್‌ಐಆರ್ ಪ್ರಕ್ರಿಯೆ ವೇಳೆ 16,209ಮತದಾರರನ್ನು 'ಎಎಸ್‌ಡಿಡಿಒ' ವರ್ಗಕ್ಕೆ ಸೇರಿಸಲಾಗಿದೆ. ಈ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಬರುವುದಿಲ್ಲ. ಈ ಪೈಕಿ 5,759 ಮತದಾರರು ಮೃತರಾಗಿರುವುದನ್ನು, 1,093 ಮತದಾರರು ಗೈರಾಗಿರುವುದನ್ನು ಹಾಗೂ 7822 ಮತದಾರರು ಸ್ಥಳಾಂತರಗೊಂಡಿರುವುದನ್ನು ಗುರುತಿಸಲಾಗಿದೆ ಎಂದು ತಿಳಿಸಿದರು. ಕರಡು ಮತದಾರರ ಪಟ್ಟಿಯಿಂದ ಹೊರಗುಳಿ ದಿರುವ ಮತದಾರರ (ಎಎಸ್‌ಡಿಡಿಒ) ಪೈಕಿ ಗೈರು ಸ್ಥಳಾಂತರಗೊಂಡಿರುವ, ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಅಥವಾ ತಿದ್ದುಪಡಿ ಇದ್ದರೆ, ಹೊಸ ಸೇರ್ಪಡೆಗೆ ಮತದಾರರು ನಿಗದಿತ ದಾಖಲೆಗ ಳೊಂದಿಗೆ ಫಾರ್ಮ್ 6 ಸಲ್ಲಿಕೆ ಮಾಡಬೇಕು. ಇದರ ಜತೆಗೆ ಅ.1ಕ್ಕೆ 18 ವರ್ಷ ತುಂಬುವ ಯುವ ಮತ ದಾರರು ನಿಗದಿತ ದಾಖಲೆಗಳೊಂದಿಗೆ ಫಾರ್ಮ್ 6 ಸಲ್ಲಿಸಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಬಹುದು. ಹೆಸರು, ವಿಳಾಸ ಬದಲಾವಣೆಗೆ ನಮೂನೆ-8 ಬಳಸಿ ಅರ್ಜಿ ಹಾಕಬಹುದು. ಮತಗಟ್ಟೆ ಅಧಿಕಾರಿಗಳ ಪರಿಶೀಲನೆಯ ನಂತರ ಆ ಮತದಾರರ ಪಟ್ಟಿಯ ಪೌರತ್ವ ದೃಢಪಟ್ಟರಷ್ಟೇ, ಅವರ ಹೆಸರನ್ನು ಅಂತಿಮ ಮತದಾರರ ಪಟ್ಟಿಗೆ ಸೇರಿಸಲಾಗುತ್ತದೆ ಎಂದರು. ಸಭೆಯಲ್ಲಿ ಮತದಾರರ ನೋಂದಣಾಧಿಕಾರಿ ಕೆ.ಆರ್. ಸುಜಾತಾ, ಚುನಾವಣಾ ಶಿರಸ್ತೇದಾರ್ ವೈ.ಎಸ್. ದೀಪಕ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು‌ ಇದ್ದರು.

More news from ಕರ್ನಾಟಕ and nearby areas
  • ಈದ್ ಮಿಲಾದ್‌ಗೆ ಶಿವಮೊಗ್ಗ ಸಜ್ಜು: ಹಸಿರು ಬಾವುಟಗಳಿಂದ ಕಂಗೊಳಿಸಿದ ನಗರ ಪ್ರವಾದಿ ಮೊಹಮ್ಮದ್ ಜನ್ಮದಿನಾಚರಣೆಗೆ ಶಿವಮೊಗ್ಗದಲ್ಲಿ ಭರ್ಜರಿ ಸಿದ್ಧತೆ
    1
    ಈದ್ ಮಿಲಾದ್‌ಗೆ ಶಿವಮೊಗ್ಗ ಸಜ್ಜು: ಹಸಿರು ಬಾವುಟಗಳಿಂದ ಕಂಗೊಳಿಸಿದ ನಗರ
ಪ್ರವಾದಿ ಮೊಹಮ್ಮದ್ ಜನ್ಮದಿನಾಚರಣೆಗೆ ಶಿವಮೊಗ್ಗದಲ್ಲಿ ಭರ್ಜರಿ ಸಿದ್ಧತೆ
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    20 hrs ago
  • ಈದ್ ಮಿಲಾದ್ ಸಂಭ್ರಮದ ಆಚರಣೆ : ರಕ್ತದಾನ, ಅನ್ನದಾನ ಸೇರಿದಂತೆ ವಿವಿಧ ಸೇವಾ ಕಾರ್ಯಗಳು. ಯುವ ಮುಖಂಡ ಬಿ.ಎಸ್ ಗಣೇಶ್ ಬಾಗಿ ಭದ್ರಾವತಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನಲೆಯಲ್ಲಿ ದೇಶಪ್ರೇಮಿ ಟಿಪ್ಪು ಸುಲ್ತಾನ್ ಯುವಕರ ಸಂಘದಿಂದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಮೀಪ ಸಾವಿರಾರು ಮಂದಿಗೆ ಮಜ್ಜಿಗೆ ವಿತರಿಸಲಾಯಿತು. ಯುವ ಮುಖಂಡ ಬಿ.ಎಸ್ ಗಣೇಶ್ ಸೇವಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ಸೇವಾ ಕಾರ್ಯವನ್ನು ಅಭಿನಂದಿಸಿದರು. ಇದೆ ಸಂದರ್ಭದಲ್ಲಿ ಬಡಮಹಿಳೆಯರಿಗೆ ಸೀರೆ ಮತ್ತು ರವಿಕೆ ವಿತರಿಸಲಾಯಿತು.  ಅನ್ನದಾನ, ತಂಪು ಪಾನೀಯ ವಿತರಣೆ ಸೇರಿದಂತೆ ಇನ್ನಿತರ ಸೇವಾ ಕಾರ್ಯಗಳು ಜರುಗಿದವು. ಮಧ್ಯಾಹ್ನ ಸುಮಾರು ೩.೩೦ ಸಮಯಕ್ಕೆ ಹೊಳೆಹೊನ್ನೂರು ವೃತ್ತದಿಂದ ಮರ್ಕಜೀ ಇದಾರ ಅಂಜುಮನ್-ಎ-ಇಸ್ಲಾಹುಲ್ ಮುಸ್ಲಿಮೀನ್ ಅಧ್ಯಕ್ಷ ಅಯೂಬ್ ಖಾನ್‌ರವರ ನೇತೃತ್ವದಲ್ಲಿ ಬೃಹತ್ ಮೆರವಣಿಗೆ ಆರಂಭಗೊಂಡಿತು. ಮೆರವಣಿಗೆಯಲ್ಲಿ ಮಹಮ್ಮದ್ ಫೈಗಂಬರರ ಜನ್ಮಸ್ಥಳ ಮೆಕ್ಕಾ-ಮದೀನಾ ಮಾದರಿಗಳು, ಹಸಿರು ದ್ವಜಗಳು ಎಲ್ಲೆಡೆ ರಾರಾಜಿಸುತ್ತಿದ್ದವು. ಮಕ್ಕಳು, ಯುವಕರು, ವಯಸ್ಕರು ಬೇಧಭಾವವಿಲ್ಲದೆ ಅಬ್ಬರದ ಹಾಡಿನ ಸದ್ದಿಗೆ ಕುಣಿದು ಸಂಭ್ರಮಿಸಿದರು.   ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಮಹಾತ್ಮಗಾಂಧಿ ವೃತ್ತ ಮೂಲಕ ಸಾದತ್ ದರ್ಗಾವರೆಗೂ ಮೆರವಣಿಗೆ ನಡೆಯಿತು. ನಗರದ ವಿವಿಧೆಡೆಗಳ ಮಸೀದಿಗಳ ಧರ್ಮಗುರುಗಳು, ಆಡಳಿತ ಮಂಡಳಿಯವರು, ಮುಸ್ಲಿಂ ಸಮುದಾಯದ ವಿವಿಧ ಸಂಘಟನೆಗಳು, ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಮುಖಂಡರು,  ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು. ಮೆರವಣಿಗೆ ಹಿನ್ನಲೆಯಲ್ಲಿ ನಗರದ ಆಯಾಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮುಸ್ಲಿಂ ಸಮುದಾಯದವರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಹಬ್ಬದ ಹಿನ್ನಲೆಯಲ್ಲಿ ಕಳೆದ ಕೆಲವು ದಿನಗಳಿಂದ ಹೆಚ್ಚಿನ ಅಲಂಕಾರ ಕೈಗೊಳ್ಳಲಾಗಿತ್ತು.  ಭದ್ರಾವತಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನಲೆಯಲ್ಲಿ ಮಕ್ಕಳು, ಯುವಕರು, ವಯಸ್ಕರು ಬೇಧಭಾವವಿಲ್ಲದೆ ಅಬ್ಬರದ ಹಾಡಿನ ಸದ್ದಿಗೆ ಕುಣಿದು ಸಂಭ್ರಮಿಸಿದರು
    3
    ಈದ್ ಮಿಲಾದ್ ಸಂಭ್ರಮದ ಆಚರಣೆ : ರಕ್ತದಾನ, ಅನ್ನದಾನ ಸೇರಿದಂತೆ ವಿವಿಧ ಸೇವಾ ಕಾರ್ಯಗಳು. ಯುವ ಮುಖಂಡ ಬಿ.ಎಸ್ ಗಣೇಶ್ ಬಾಗಿ 


ಭದ್ರಾವತಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನಲೆಯಲ್ಲಿ ದೇಶಪ್ರೇಮಿ ಟಿಪ್ಪು ಸುಲ್ತಾನ್ ಯುವಕರ ಸಂಘದಿಂದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಮೀಪ ಸಾವಿರಾರು ಮಂದಿಗೆ ಮಜ್ಜಿಗೆ ವಿತರಿಸಲಾಯಿತು. ಯುವ ಮುಖಂಡ ಬಿ.ಎಸ್ ಗಣೇಶ್ ಸೇವಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ಸೇವಾ ಕಾರ್ಯವನ್ನು ಅಭಿನಂದಿಸಿದರು.
ಇದೆ ಸಂದರ್ಭದಲ್ಲಿ ಬಡಮಹಿಳೆಯರಿಗೆ ಸೀರೆ ಮತ್ತು ರವಿಕೆ ವಿತರಿಸಲಾಯಿತು.  ಅನ್ನದಾನ, ತಂಪು ಪಾನೀಯ ವಿತರಣೆ ಸೇರಿದಂತೆ ಇನ್ನಿತರ ಸೇವಾ ಕಾರ್ಯಗಳು ಜರುಗಿದವು.
ಮಧ್ಯಾಹ್ನ ಸುಮಾರು ೩.೩೦ ಸಮಯಕ್ಕೆ ಹೊಳೆಹೊನ್ನೂರು ವೃತ್ತದಿಂದ ಮರ್ಕಜೀ ಇದಾರ ಅಂಜುಮನ್-ಎ-ಇಸ್ಲಾಹುಲ್ ಮುಸ್ಲಿಮೀನ್ ಅಧ್ಯಕ್ಷ ಅಯೂಬ್ ಖಾನ್‌ರವರ ನೇತೃತ್ವದಲ್ಲಿ ಬೃಹತ್ ಮೆರವಣಿಗೆ ಆರಂಭಗೊಂಡಿತು. ಮೆರವಣಿಗೆಯಲ್ಲಿ ಮಹಮ್ಮದ್ ಫೈಗಂಬರರ ಜನ್ಮಸ್ಥಳ ಮೆಕ್ಕಾ-ಮದೀನಾ ಮಾದರಿಗಳು, ಹಸಿರು ದ್ವಜಗಳು ಎಲ್ಲೆಡೆ ರಾರಾಜಿಸುತ್ತಿದ್ದವು. ಮಕ್ಕಳು, ಯುವಕರು, ವಯಸ್ಕರು ಬೇಧಭಾವವಿಲ್ಲದೆ ಅಬ್ಬರದ ಹಾಡಿನ ಸದ್ದಿಗೆ ಕುಣಿದು ಸಂಭ್ರಮಿಸಿದರು.  
ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಮಹಾತ್ಮಗಾಂಧಿ ವೃತ್ತ ಮೂಲಕ ಸಾದತ್ ದರ್ಗಾವರೆಗೂ ಮೆರವಣಿಗೆ ನಡೆಯಿತು. ನಗರದ ವಿವಿಧೆಡೆಗಳ ಮಸೀದಿಗಳ ಧರ್ಮಗುರುಗಳು, ಆಡಳಿತ ಮಂಡಳಿಯವರು, ಮುಸ್ಲಿಂ ಸಮುದಾಯದ ವಿವಿಧ ಸಂಘಟನೆಗಳು, ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಮುಖಂಡರು,  ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು. ಮೆರವಣಿಗೆ ಹಿನ್ನಲೆಯಲ್ಲಿ ನಗರದ ಆಯಾಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮುಸ್ಲಿಂ ಸಮುದಾಯದವರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಹಬ್ಬದ ಹಿನ್ನಲೆಯಲ್ಲಿ ಕಳೆದ ಕೆಲವು ದಿನಗಳಿಂದ ಹೆಚ್ಚಿನ ಅಲಂಕಾರ ಕೈಗೊಳ್ಳಲಾಗಿತ್ತು. 
ಭದ್ರಾವತಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನಲೆಯಲ್ಲಿ ಮಕ್ಕಳು, ಯುವಕರು, ವಯಸ್ಕರು ಬೇಧಭಾವವಿಲ್ಲದೆ ಅಬ್ಬರದ ಹಾಡಿನ ಸದ್ದಿಗೆ ಕುಣಿದು ಸಂಭ್ರಮಿಸಿದರು
    user_ಪ್ರವೀಣ್ ಅಧ್ಯಕ್ಷ NAYAKA
    ಪ್ರವೀಣ್ ಅಧ್ಯಕ್ಷ NAYAKA
    Local News Reporter Bhadravati, Shivamogga•
    3 hrs ago
  • ಶಿಕಾರಿಪುರ. 'ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್(ಸ)' ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ಅಧ್ಯಕ್ಷರಾದ ಮೊಹಮ್ಮದ್ ಹುಸೇನ್ ಶಿರಾಳಕೊಪ್ಪ. ಶಿಕಾರಿಪುರ. ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ದಿನಾಂಕ 26-08-2026ರಿಂದ 06-09-20265 ತನಕ ಪ್ರವಾದಿ ಮುಹಮ್ಮದ್(ಸ)ರವರ ಜನ್ಮ ದಿನದ ಪ್ರಯುಕ್ತ ರಾಜ್ಯಾದ್ಯಂತ ಸೀರತ್ ಅಭಿಯಾನ ನಡೆಯಲಿದೆ. ಶಿಕಾರಿಪುರ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮೊಹಮ್ಮದ್ ಹುಸೇನ್ ಅಧ್ಯಕ್ಷ ಶಿರಾಳಕೊಪ್ಪ ಮಾತನಾಡಿ, ಪ್ರವಾದಿಮುಹಮ್ಮದ್(ಸ)ರವರು ಜಗತ್ತಿನಲ್ಲಿ ತಂದ ಸಮಗ್ರ ಕ್ರಾಂತಿಯು ಸತ್ಯ, ನ್ಯಾಯ, ಕರುಣೆ, ಮಾನವ ಸಮಾನತೆ, ಮಾನವ ಘನತೆ ಹಾಗೂ ಮಾನವ ಕುಲದ ಏಕತೆಯ ಮೇಲೆ ಸ್ಥಾಪಿತವಾಗಿದೆ. ಅವರು ಜನದ ಮನಸ್ಸನ್ನು ಸಂಸ್ಕರಿಸಿ, ಅವರ ನೈತಿಕತೆ ಮತ್ತು ಚಾರಿತ್ಯವನ್ನು ಶುದ್ದೀಕರಿಸುವ ಮೂಲಕ ವ್ಯಕ್ತಿಗಳನ್ನು ಸಮಾಜವನ್ನು ಪರಿವರ್ತಿಸಿದರು. ಅವರ ಕ್ರಾಂತಿಯು ಅಪ್ಪಟ ಮಾನವೀಯ ಕ್ರಾಂತಿಯಾಗಿತ್ತು ಹಾಗೂ ಮಾನವ ಜೀವನದ ಆಧ್ಯಾತ್ಮಿಕ, ಸಾಮಾಜಿಕ, ಕೌಟುಂಬಿಕ, ಆರ್ಥಿಕ, ಶೈಕ್ಷಣಿಕ, ಆಡಳಿತ ಹೀಗೆ ಎಲ್ಲ ಕ್ಷೇತ್ರಗಳನ್ನು ಬೆಳಗಿಸಿದ ಕ್ರಾಂತಿಯಾಗಿತ್ತು. ಸುಭಿಕ್ಷೆ ಮತ್ತು ನಿರ್ಭಯತ್ವದ ಸಮಾಜ ನಿರ್ಮಾಣ ಅವರ ಗುರಿಯಾಗಿತ್ತು. ಪ್ರವಾದಿಮುಹಮ್ಮದ್(ಸ)ರವರು ಈ ಸಂದೇಶಗಳನ್ನು ಕನ್ನಡ ಜನತೆಗೆ ಪರಿಚಯಿಸುವುದು, ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು, ಪರಸ್ಪರ ಬಾಂಧವ್ಯಗಳನ್ನು ಬಲಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ. ಅಭಿಯಾನದ ಪ್ರಯುಕ್ತ, ಖ್ಯಾತ ಸಾಹಿತಿ ಹಾಗೂ ಗ್ರಂಥಕರ್ತ ಶ್ರೀ ಯೋಗೇಶ್ ಮಾಸ್ಟರ್ ಅವರು ಬರೆದ 'ಮಾನವ ಮನಸ್ಸಿನ ಕೃಷಿಕ ಮನದೊಡೆಯ ಪ್ರವಾದಿ ಮುಹಮ್ಮದ್(ಸ)' ಹಾಗೂ ವಾರ್ತಾ ಭಾರತಿ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಅಬ್ದುಸ್ಸಲಾಮ್ ಪುತ್ತಿಗೆಯವರು ಬರೆದ 'ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್(ಸ)' ಎಂಬ ಎರಡು ಕೃತಿಗಳನ್ನು ರಾಜ್ಯಾದ್ಯಂತ ಬಿಡುಗಡೆಗೊಳಿಸಲಾಗುವುದು. ಅಭಿಯಾನದ ಪ್ರಯುಕ್ತ ರಾಜ್ಯಾದ್ಯಂತ ವೈಯಕ್ತಿಕ ಭೇಟಿ, 'ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ)' ಎಂಬ ವಿಚಾರಗೋಷ್ಠಿಗಳು, ಸಾರ್ವಜನಿಕ ಸಮಾವೇಶಗಳು, ಸಂವಾದ ಕಾರ್ಯಕ್ರಮ. ಚರ್ಚಾಗೋಷ್ಠಿಗಳು, ಸೀರತ್ ಪ್ರವಚನ. ಪ್ರವಚನ, ಸೀರತ್ ಎಕ್ಸಿಬಿಶನ್, ಸಮಾಜಸೇವಾ ಚಟುವಟಿಕೆಗಳು, ಸೌಹಾರ್ದ ಸಂದೇಶ ರ್ಕ್ಯಾಲಿಗಳು ಹೀಗೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿರುವುದು ಎಂದರು. ಜಕೀ ಅಹ್ಮದ್ ಆಫ್ರಿದಿ ಕಾರ್ಯದರ್ಶಿ ಶಿರಾಳಕೊಪ್ಪ ಮಾತನಾಡಿ, ರೋಗಿಗಳ ಭೇಟಿ ಮತ್ತು ಹಣ್ಣು ವಿತರಣೆ ಬಡ ವಿದ್ಯಾರ್ಥಿಗಳಿಗೆ ನೋಟ್‌ಬುಕ್, ಪೆನ್ ವಿತರಣೆ ಬಡ ಮತ್ತು ಅಗತ್ಯವಿರುವ ಕುಟುಂಬಗಳನ್ನು ಭೇಟಿ ಮಾಡಿ ಸಮಸ್ಯೆ ಪರಿಹರಿಸಲು ಪ್ರಯತ್ನ ಮನೆ ನಿರ್ಮಾಣಕ್ಕೆ ಸಹಾಯ - ಇತ್ತೀಚೆಗೆ ಮೇಲ್ಚಾವಣಿಯ ಸ್ಲಾಬ್ ಹಾಕಿಸಿದ ಸೇವಾ ಕಾರ್ಯಹಾಗೂ ಮುಸ್ಲಿಮರು ಮತ್ತು ಮುಸ್ಲಿಮೇತರರಿಗಾಗಿ ರಕ್ತದಾನ ಶಿಬಿರ ಮತ್ತು ರೇಷನ್ ಕಿಟ್ ವಿತರಣೆ, ಪರಿಸರ ಮತ್ತು ಸ್ವಚ್ಛತಾ ಕಾರ್ಯ ಶಾಲೆ ಆಸ್ಪತ್ರೆ ಗ್ರಂಥಾಲಯ ಮುಂತಾದ ಸ್ಥಳಗಳಲ್ಲಿ ಸೀರತ್ ಪುಸ್ತಕಗಳ ವಿತರಣೆ, ಉಲಾಮ ಗಣ್ಯರು ಮತ್ತು ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ ಭೇಟಿ,ಮೊಹ್ಸಿನೇ ಇನ್ಸಾನಿಯತ್ ಪುಸ್ತಕವನ್ನು ಕಾರ್ಯಕರ್ತರು ಅಧ್ಯಯನ ಮಾಡುವಂತೆ ಪ್ರೋತ್ಸಾಹಿಸುವುದು, ಕನ್ನಡ ಮತ್ತು ಉರ್ದು ಭಾಷೆಗಳಲ್ಲಿ ಸ್ಪರ್ಧೆಗಳು ಸಂದೇಶಗಳನ್ನು ಸೇವಾ ಕಾರ್ಯಗಳ ಮೂಲಕ ಸಮಾಜದ ಎಲ್ಲಾ ವರ್ಗಗಳಿಗೂ ತಲುಪಿಸುವುದು ಎಂದರು. ಇದೇ ಸಂದರ್ಭದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಸಿಬ್ ಗತ್ ಉಲ್ಲಾ ಕಾರ್ಯಕರ್ತರು,ಅಬ್ದುಲ್ ಗಪೂರ್ ಸ್ಥಾನೀಯ ಅಧ್ಯಕ್ಷರು,ಶಿಕಾರಿಪುರ, ಜಾಕಿರ್ ಹುಸೇನ್ ಸ್ಥಾನೀಯ ಅಧ್ಯಕ್ಷರು, ಚಿಕ್ಕ ಜಂಬೂರು ಅಬ್ದುಲ್ ಕಬೀರ್ ಕಾರ್ಯಕರ್ತರು, ಅಬ್ದುಲ್ ರೆಹಮಾನ್ ಸ್ಥಾಯಿ ಕಾರ್ಯದರ್ಶಿ ಎಸ್.ಐ.ಒ. ಸಂಘಟನೆ ಶಿರಾಳಕೊಪ್ಪ ಉಪಸ್ಥಿತರಿದ್ದರು.
    1
    ಶಿಕಾರಿಪುರ. 'ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್(ಸ)' ಜಮಾಅತೆ ಇಸ್ಲಾಮೀ 
ಹಿಂದ್ ಕರ್ನಾಟಕ ಅಧ್ಯಕ್ಷರಾದ ಮೊಹಮ್ಮದ್ ಹುಸೇನ್ ಶಿರಾಳಕೊಪ್ಪ.
ಶಿಕಾರಿಪುರ.
ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ದಿನಾಂಕ 26-08-2026ರಿಂದ 06-09-20265 ತನಕ ಪ್ರವಾದಿ ಮುಹಮ್ಮದ್(ಸ)ರವರ ಜನ್ಮ ದಿನದ ಪ್ರಯುಕ್ತ ರಾಜ್ಯಾದ್ಯಂತ ಸೀರತ್ ಅಭಿಯಾನ ನಡೆಯಲಿದೆ. ಶಿಕಾರಿಪುರ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ  
ಮೊಹಮ್ಮದ್ ಹುಸೇನ್ 
ಅಧ್ಯಕ್ಷ ಶಿರಾಳಕೊಪ್ಪ  ಮಾತನಾಡಿ,
ಪ್ರವಾದಿಮುಹಮ್ಮದ್(ಸ)ರವರು ಜಗತ್ತಿನಲ್ಲಿ ತಂದ ಸಮಗ್ರ ಕ್ರಾಂತಿಯು ಸತ್ಯ, ನ್ಯಾಯ, ಕರುಣೆ, ಮಾನವ ಸಮಾನತೆ, ಮಾನವ ಘನತೆ ಹಾಗೂ ಮಾನವ ಕುಲದ ಏಕತೆಯ ಮೇಲೆ ಸ್ಥಾಪಿತವಾಗಿದೆ. ಅವರು ಜನದ ಮನಸ್ಸನ್ನು ಸಂಸ್ಕರಿಸಿ, ಅವರ ನೈತಿಕತೆ ಮತ್ತು ಚಾರಿತ್ಯವನ್ನು ಶುದ್ದೀಕರಿಸುವ ಮೂಲಕ ವ್ಯಕ್ತಿಗಳನ್ನು ಸಮಾಜವನ್ನು ಪರಿವರ್ತಿಸಿದರು. ಅವರ ಕ್ರಾಂತಿಯು ಅಪ್ಪಟ ಮಾನವೀಯ ಕ್ರಾಂತಿಯಾಗಿತ್ತು ಹಾಗೂ ಮಾನವ ಜೀವನದ ಆಧ್ಯಾತ್ಮಿಕ, ಸಾಮಾಜಿಕ, ಕೌಟುಂಬಿಕ, ಆರ್ಥಿಕ, ಶೈಕ್ಷಣಿಕ, ಆಡಳಿತ ಹೀಗೆ ಎಲ್ಲ ಕ್ಷೇತ್ರಗಳನ್ನು ಬೆಳಗಿಸಿದ ಕ್ರಾಂತಿಯಾಗಿತ್ತು. ಸುಭಿಕ್ಷೆ ಮತ್ತು ನಿರ್ಭಯತ್ವದ ಸಮಾಜ ನಿರ್ಮಾಣ ಅವರ ಗುರಿಯಾಗಿತ್ತು.
ಪ್ರವಾದಿಮುಹಮ್ಮದ್(ಸ)ರವರು ಈ ಸಂದೇಶಗಳನ್ನು ಕನ್ನಡ ಜನತೆಗೆ ಪರಿಚಯಿಸುವುದು, ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು, ಪರಸ್ಪರ ಬಾಂಧವ್ಯಗಳನ್ನು ಬಲಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ.
ಅಭಿಯಾನದ ಪ್ರಯುಕ್ತ, ಖ್ಯಾತ ಸಾಹಿತಿ ಹಾಗೂ ಗ್ರಂಥಕರ್ತ ಶ್ರೀ ಯೋಗೇಶ್ ಮಾಸ್ಟರ್ ಅವರು ಬರೆದ 'ಮಾನವ ಮನಸ್ಸಿನ ಕೃಷಿಕ ಮನದೊಡೆಯ ಪ್ರವಾದಿ ಮುಹಮ್ಮದ್(ಸ)' ಹಾಗೂ ವಾರ್ತಾ ಭಾರತಿ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಅಬ್ದುಸ್ಸಲಾಮ್ ಪುತ್ತಿಗೆಯವರು ಬರೆದ 'ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್(ಸ)' ಎಂಬ ಎರಡು ಕೃತಿಗಳನ್ನು ರಾಜ್ಯಾದ್ಯಂತ ಬಿಡುಗಡೆಗೊಳಿಸಲಾಗುವುದು.
ಅಭಿಯಾನದ ಪ್ರಯುಕ್ತ ರಾಜ್ಯಾದ್ಯಂತ ವೈಯಕ್ತಿಕ ಭೇಟಿ, 'ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ)' ಎಂಬ ವಿಚಾರಗೋಷ್ಠಿಗಳು, ಸಾರ್ವಜನಿಕ ಸಮಾವೇಶಗಳು, ಸಂವಾದ ಕಾರ್ಯಕ್ರಮ. ಚರ್ಚಾಗೋಷ್ಠಿಗಳು, ಸೀರತ್ ಪ್ರವಚನ. ಪ್ರವಚನ, ಸೀರತ್ ಎಕ್ಸಿಬಿಶನ್, ಸಮಾಜಸೇವಾ ಚಟುವಟಿಕೆಗಳು, ಸೌಹಾರ್ದ ಸಂದೇಶ ರ್ಕ್ಯಾಲಿಗಳು ಹೀಗೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿರುವುದು ಎಂದರು.
ಜಕೀ ಅಹ್ಮದ್ ಆಫ್ರಿದಿ  ಕಾರ್ಯದರ್ಶಿ ಶಿರಾಳಕೊಪ್ಪ ಮಾತನಾಡಿ,
ರೋಗಿಗಳ ಭೇಟಿ ಮತ್ತು ಹಣ್ಣು ವಿತರಣೆ
ಬಡ ವಿದ್ಯಾರ್ಥಿಗಳಿಗೆ ನೋಟ್‌ಬುಕ್, ಪೆನ್ ವಿತರಣೆ
ಬಡ ಮತ್ತು ಅಗತ್ಯವಿರುವ ಕುಟುಂಬಗಳನ್ನು ಭೇಟಿ ಮಾಡಿ ಸಮಸ್ಯೆ ಪರಿಹರಿಸಲು ಪ್ರಯತ್ನ
ಮನೆ ನಿರ್ಮಾಣಕ್ಕೆ ಸಹಾಯ - ಇತ್ತೀಚೆಗೆ ಮೇಲ್ಚಾವಣಿಯ ಸ್ಲಾಬ್ ಹಾಕಿಸಿದ ಸೇವಾ ಕಾರ್ಯಹಾಗೂ ಮುಸ್ಲಿಮರು ಮತ್ತು ಮುಸ್ಲಿಮೇತರರಿಗಾಗಿ ರಕ್ತದಾನ ಶಿಬಿರ ಮತ್ತು ರೇಷನ್ ಕಿಟ್ ವಿತರಣೆ,
ಪರಿಸರ ಮತ್ತು ಸ್ವಚ್ಛತಾ ಕಾರ್ಯ ಶಾಲೆ ಆಸ್ಪತ್ರೆ ಗ್ರಂಥಾಲಯ ಮುಂತಾದ ಸ್ಥಳಗಳಲ್ಲಿ 
ಸೀರತ್ ಪುಸ್ತಕಗಳ ವಿತರಣೆ, ಉಲಾಮ ಗಣ್ಯರು ಮತ್ತು ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ ಭೇಟಿ,ಮೊಹ್ಸಿನೇ ಇನ್ಸಾನಿಯತ್ ಪುಸ್ತಕವನ್ನು ಕಾರ್ಯಕರ್ತರು ಅಧ್ಯಯನ ಮಾಡುವಂತೆ ಪ್ರೋತ್ಸಾಹಿಸುವುದು,
ಕನ್ನಡ ಮತ್ತು ಉರ್ದು ಭಾಷೆಗಳಲ್ಲಿ ಸ್ಪರ್ಧೆಗಳು ಸಂದೇಶಗಳನ್ನು ಸೇವಾ ಕಾರ್ಯಗಳ ಮೂಲಕ ಸಮಾಜದ ಎಲ್ಲಾ ವರ್ಗಗಳಿಗೂ ತಲುಪಿಸುವುದು ಎಂದರು.
ಇದೇ ಸಂದರ್ಭದಲ್ಲಿ 
ಪತ್ರಿಕಾ ಗೋಷ್ಠಿಯಲ್ಲಿ
ಸಿಬ್ ಗತ್ ಉಲ್ಲಾ 
ಕಾರ್ಯಕರ್ತರು,ಅಬ್ದುಲ್ ಗಪೂರ್ ಸ್ಥಾನೀಯ ಅಧ್ಯಕ್ಷರು,ಶಿಕಾರಿಪುರ, ಜಾಕಿರ್ ಹುಸೇನ್ ಸ್ಥಾನೀಯ ಅಧ್ಯಕ್ಷರು, ಚಿಕ್ಕ ಜಂಬೂರು ಅಬ್ದುಲ್ ಕಬೀರ್ ಕಾರ್ಯಕರ್ತರು,
ಅಬ್ದುಲ್ ರೆಹಮಾನ್ ಸ್ಥಾಯಿ ಕಾರ್ಯದರ್ಶಿ ಎಸ್.ಐ.ಒ. ಸಂಘಟನೆ ಶಿರಾಳಕೊಪ್ಪ 
ಉಪಸ್ಥಿತರಿದ್ದರು.
    user_Press Narashimha swamy SN
    Press Narashimha swamy SN
    Cultural landmark ಶಿಕಾರಿಪುರ, ಶಿವಮೊಗ್ಗ, ಕರ್ನಾಟಕ•
    7 hrs ago
  • ಮುಹಮ್ಮದ್ ಪೈಗಂಬರರ ಜನ್ಮದಿನದ ನೆನಪಾಗಿ ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಈದ್ ಮಿಲಾದ್ ಹಬ್ಬ ಆಚರಣೆ.
    1
    ಮುಹಮ್ಮದ್ ಪೈಗಂಬರರ ಜನ್ಮದಿನದ ನೆನಪಾಗಿ ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಈದ್ ಮಿಲಾದ್ ಹಬ್ಬ ಆಚರಣೆ.
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ ಶಿಗ್ಗಾವಿ: ಪಟ್ಟಣದ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಅನ್ಯ ಕೋಮಿನ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿ, ಅಪವಿತ್ರಗೊಳಿಸಿದ ಘಟನೆಯನ್ನು ಖಂಡಿಸಿ ಪ್ರಮೋದ್ ಮುತಾಲಿಕ್ ಹಾಗೂ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರು ನೀಡಿದ್ದ ಬಂದ ಕರೆಗೆ ಸಾರ್ವಜನಿಕರು ಹಾಗೂ ವರ್ತಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಬಿಜೆಪಿ ತಾಲೂಕಾ ಅಧ್ಯಕ್ಷ ವಿಶ್ವನಾಥ ಹರವಿ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದಲ್ಲಿ ನಡೆದ ಘಟನೆಯಿಂದ ಭಕ್ತಾದಿಗಳ ಮನಸ್ಸಿನಲ್ಲಿ ಆತಂಕ ಉಂಟಾಗಿದ್ದು, ಶಾಂತಿಯುತವಾಗಿ ಬಂದ್ ಆಚರಿಸುವ ಮೂಲಕ, ಆರೋಪಿಗೆ ಕಠಿಣಾತಿ ಕಠೀಣ ಶಿಕ್ಷೆ ಯಾಗಲೇಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಅಪರಾಧಿಗೆ ರಕ್ಷಣೆ ನೀಡುವ ಹುನ್ನಾರ ನಡೆದರೆ ಮತ್ತು ತಾಲೂಕಿನಲ್ಲಿ ಅವನಿಗೆ ನೀಡಿರುವ ಸೌಲತ್ತುಗಳನ್ನು ಹಿಂಪಡೆದು ಗಡಿಪಾರು ಮಾಡದಿದ್ದರೆ ಉಗ್ರ ಹೋರಾಟ ರೂಪಿಸಲಾಗುತ್ತದೆ ಎಂದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನರಹರಿ ಕಟ್ಟಿ ಮಾತನಾಡಿ, ಘಟನೆಗೆ ಸಂಬಂಧವಿಲ್ಲದ ಸಣ್ಣ ಹುಡುಗರು, ಬಿಜೆಪಿ ನಾಯಕರು ಸೇರಿದಂತೆ ಇತರರಿಗೆ ಪೊಲೀಸ್ ನೋಟಿಸ್ ಜಾರಿ ಮಾಡಿ ನಮ್ಮ ಪ್ರತಿಭಟನೆಯ ಹಕ್ಕನ್ನು ಹತ್ತಿಕ್ಕಲು ಪೊಲೀಸರ ಮೂಲ ಪ್ರಯತ್ನಿಸಲಾಗಿದ್ದು ತೀವ್ರ ಖಂಡನೀಯ. ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಆದರೆ ಪೊಲೀಸ್ ಇಲಾಖೆಯು ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಸಾರ್ವಜನಿಕರಿಗೆ ಹಾಗೂ ಭಕ್ತರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು. ಇಲ್ಲವಾದಲ್ಲಿ ರಾಜ್ಯ ನಾಯಕರ ನೇತೃತ್ವದಲ್ಲಿ ಬೀದಿಗಿಳಿದು ಹೋರಾಟ ಮಾಡಲಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳಾದ ರೇಣಕನಗೌಡ ಪಾಟೀಲ, ಅನೀಲ ಸಾತಣ್ಣನವರ ಸೇರಿದಂತೆ ಇತರರಿದ್ದರು.
    4
    ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ
ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ
ಶಿಗ್ಗಾವಿ: ಪಟ್ಟಣದ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಅನ್ಯ ಕೋಮಿನ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿ, ಅಪವಿತ್ರಗೊಳಿಸಿದ ಘಟನೆಯನ್ನು ಖಂಡಿಸಿ ಪ್ರಮೋದ್ ಮುತಾಲಿಕ್ ಹಾಗೂ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರು ನೀಡಿದ್ದ ಬಂದ ಕರೆಗೆ ಸಾರ್ವಜನಿಕರು ಹಾಗೂ ವರ್ತಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಬಿಜೆಪಿ ತಾಲೂಕಾ ಅಧ್ಯಕ್ಷ ವಿಶ್ವನಾಥ ಹರವಿ ಹೇಳಿದರು.
ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದಲ್ಲಿ ನಡೆದ ಘಟನೆಯಿಂದ ಭಕ್ತಾದಿಗಳ ಮನಸ್ಸಿನಲ್ಲಿ ಆತಂಕ ಉಂಟಾಗಿದ್ದು, ಶಾಂತಿಯುತವಾಗಿ ಬಂದ್ ಆಚರಿಸುವ ಮೂಲಕ, ಆರೋಪಿಗೆ ಕಠಿಣಾತಿ ಕಠೀಣ ಶಿಕ್ಷೆ ಯಾಗಲೇಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಅಪರಾಧಿಗೆ ರಕ್ಷಣೆ ನೀಡುವ ಹುನ್ನಾರ ನಡೆದರೆ ಮತ್ತು ತಾಲೂಕಿನಲ್ಲಿ ಅವನಿಗೆ ನೀಡಿರುವ ಸೌಲತ್ತುಗಳನ್ನು ಹಿಂಪಡೆದು ಗಡಿಪಾರು ಮಾಡದಿದ್ದರೆ ಉಗ್ರ ಹೋರಾಟ ರೂಪಿಸಲಾಗುತ್ತದೆ ಎಂದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನರಹರಿ ಕಟ್ಟಿ ಮಾತನಾಡಿ, ಘಟನೆಗೆ ಸಂಬಂಧವಿಲ್ಲದ ಸಣ್ಣ ಹುಡುಗರು, ಬಿಜೆಪಿ ನಾಯಕರು ಸೇರಿದಂತೆ ಇತರರಿಗೆ ಪೊಲೀಸ್ ನೋಟಿಸ್ ಜಾರಿ ಮಾಡಿ ನಮ್ಮ ಪ್ರತಿಭಟನೆಯ ಹಕ್ಕನ್ನು ಹತ್ತಿಕ್ಕಲು ಪೊಲೀಸರ ಮೂಲ ಪ್ರಯತ್ನಿಸಲಾಗಿದ್ದು ತೀವ್ರ ಖಂಡನೀಯ. 
ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಆದರೆ ಪೊಲೀಸ್ ಇಲಾಖೆಯು ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಸಾರ್ವಜನಿಕರಿಗೆ ಹಾಗೂ ಭಕ್ತರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು. ಇಲ್ಲವಾದಲ್ಲಿ ರಾಜ್ಯ ನಾಯಕರ ನೇತೃತ್ವದಲ್ಲಿ ಬೀದಿಗಿಳಿದು ಹೋರಾಟ ಮಾಡಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳಾದ ರೇಣಕನಗೌಡ ಪಾಟೀಲ, ಅನೀಲ ಸಾತಣ್ಣನವರ ಸೇರಿದಂತೆ ಇತರರಿದ್ದರು.
    user_ವಿಶ್ವನಾಥ ಬಂಡಿವಡ್ಡರ
    ವಿಶ್ವನಾಥ ಬಂಡಿವಡ್ಡರ
    Local News Reporter ಹಾವೇರಿ, ಹಾವೇರಿ, ಕರ್ನಾಟಕ•
    3 hrs ago
  • ಚಿತ್ರದುರ್ಗದಲ್ಲಿ ‘ಸೀರತ್ ಅಭಿಯಾನ’! 🔥 ಪ್ರವಾದಿ ಮುಹಮ್ಮದ್ ﷺ ಸಂದೇಶ ಸಾರಲು ಸಜ್ಜು! #SeeratUnNabi #ಸೀರತ್_ಅಭಿಯಾನ #ಕ್ರಾಂತಿಯಜ್ಯೋತಿ #ಪ್ರವಾದಿಮುಹಮ್ಮದ್ﷺ #Muhammadﷺ #ProphetMuhammad #SeeratCampaign #JamaatEIslamiHind #ಚಿತ್ರದುರ್ಗ #Chitradurga #ChitradurgaNews #KarnatakaNews #KannadaNews #BreakingNews #ViralNews #LocalNews #CTownNews #CtownNews #NewsUpdate #ಸುದ್ದಿ #ಸುದ್ದಿವಾಹಿನಿ
    1
    ಚಿತ್ರದುರ್ಗದಲ್ಲಿ ‘ಸೀರತ್ ಅಭಿಯಾನ’! 🔥
ಪ್ರವಾದಿ ಮುಹಮ್ಮದ್ ﷺ ಸಂದೇಶ ಸಾರಲು ಸಜ್ಜು!
#SeeratUnNabi
#ಸೀರತ್_ಅಭಿಯಾನ
#ಕ್ರಾಂತಿಯಜ್ಯೋತಿ
#ಪ್ರವಾದಿಮುಹಮ್ಮದ್ﷺ
#Muhammadﷺ
#ProphetMuhammad
#SeeratCampaign
#JamaatEIslamiHind
#ಚಿತ್ರದುರ್ಗ
#Chitradurga
#ChitradurgaNews
#KarnatakaNews
#KannadaNews
#BreakingNews
#ViralNews
#LocalNews
#CTownNews
#CtownNews
#NewsUpdate
#ಸುದ್ದಿ
#ಸುದ್ದಿವಾಹಿನಿ
    user_Ctownnews16
    Ctownnews16
    Local News Reporter ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    4 hrs ago
  • ಚಳ್ಳಕೆರೆ ನಗರದಲ್ಲಿಂದು ಈದುಮಿಲಾದ್ ಅಂಗವಾಗಿ ಚಳ್ಳಕೆರೆ ನಗರದಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಯಿತು. ಚಳ್ಳಕೆರೆ ನಗರದಲ್ಲಿಂದು ಈದುಮಿಲಾದ್ ಅಂಗವಾಗಿ ಚಳ್ಳಕೆರೆ ನಗರದಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಯಿತು. ನಗರದ ಗಾಂಧಿನಗರದ ಮಸೀದಿ ಬಳಿ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ. ರಘುಮೂರ್ತಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಈದುಮಿಲಾದ್ ಹಬ್ಬವು ಪ್ರೀತಿ, ಸಹೋದರತೆ, ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರುವ ಪವಿತ್ರ ದಿನವಾಗಿದೆ. ಸಮಾಜದಲ್ಲಿ ಎಲ್ಲರೂ ಶಾಂತಿ ಮತ್ತು ಸೌಹಾರ್ದತೆಯಿಂದ ಬದುಕಬೇಕು ಎಂದು ಕರೆ ನೀಡಿದರು. ಮೆರವಣಿಗೆಯಲ್ಲಿ ಮುಸ್ಲಿಂ ಸಮುದಾಯ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು. ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮೆರವಣಿಗೆಯ ಮೆರುಗು ಹೆಚ್ಚಿಸಿದರು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿತು. ಈ ವೇಳೆ ಪೊಲೀಸ್ ಇಲಾಖೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಬಂದೋಬಸ್ತ್ ಕೈಗೊಂಡಿತ್ತು. ಈದುಮಿಲಾದ್ ಮೂಲಕ ಶಾಂತಿ, ಸಹೋದರತೆ ಮತ್ತು ಸೌಹಾರ್ದತೆಯ ಸಂದೇಶ ಸಾರುವ ಮೂಲಕ ಚಳ್ಳಕೆರೆ ನಗರ ಗಮನ ಸೆಳೆಯಿತು.
    1
    ಚಳ್ಳಕೆರೆ ನಗರದಲ್ಲಿಂದು ಈದುಮಿಲಾದ್ ಅಂಗವಾಗಿ ಚಳ್ಳಕೆರೆ ನಗರದಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಯಿತು.
ಚಳ್ಳಕೆರೆ ನಗರದಲ್ಲಿಂದು ಈದುಮಿಲಾದ್ ಅಂಗವಾಗಿ ಚಳ್ಳಕೆರೆ ನಗರದಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಯಿತು. ನಗರದ ಗಾಂಧಿನಗರದ ಮಸೀದಿ ಬಳಿ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ. ರಘುಮೂರ್ತಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಈದುಮಿಲಾದ್ ಹಬ್ಬವು ಪ್ರೀತಿ, ಸಹೋದರತೆ, ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರುವ ಪವಿತ್ರ ದಿನವಾಗಿದೆ. ಸಮಾಜದಲ್ಲಿ ಎಲ್ಲರೂ ಶಾಂತಿ ಮತ್ತು ಸೌಹಾರ್ದತೆಯಿಂದ ಬದುಕಬೇಕು ಎಂದು ಕರೆ ನೀಡಿದರು.
ಮೆರವಣಿಗೆಯಲ್ಲಿ ಮುಸ್ಲಿಂ ಸಮುದಾಯ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು. ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮೆರವಣಿಗೆಯ ಮೆರುಗು ಹೆಚ್ಚಿಸಿದರು.
ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿತು. ಈ ವೇಳೆ ಪೊಲೀಸ್ ಇಲಾಖೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಬಂದೋಬಸ್ತ್ ಕೈಗೊಂಡಿತ್ತು.
ಈದುಮಿಲಾದ್ ಮೂಲಕ ಶಾಂತಿ, ಸಹೋದರತೆ ಮತ್ತು ಸೌಹಾರ್ದತೆಯ ಸಂದೇಶ ಸಾರುವ ಮೂಲಕ ಚಳ್ಳಕೆರೆ ನಗರ ಗಮನ ಸೆಳೆಯಿತು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    4 hrs ago
  • ಶಿಕಾರಿಪುರ .ನಗರದ ಮನೆ ಮನಗಳಲ್ಲಿ ನಡೆಯುವ 16ನೇ ವರ್ಷದ ಶ್ರಾವಣದಲ್ಲಿ ಶ್ರಾವಣನುಭಾವ ಕಾರ್ಯಕ್ರಮ ಶ್ರೀ ಮ. ನಿ. ಪ್ರ. ಚನ್ನಬಸವ ಸ್ವಾಮಿಗಳು. ಶಿಕಾರಿಪುರ ನಗರದ ಮನೆ ಮನಗಳಲ್ಲಿ ನಡೆಯುವ 16ನೇ ವರ್ಷದ ಶ್ರಾವಣದಲ್ಲಿ ಶ್ರಾವಣ ಭಾವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ನಡೆಯಲಿದ್ದು. ಸಾನಿಧ್ಯ. ಶ್ರೀ ಮ. ನಿ. ಪ್ರ. ಗುರುಬಸವ ಮಹಾಸ್ವಾಮಿಗಳು ವಿರಕ್ತಮಠ ಪಾಂಡೋಮಟ್ಟಿ . ನೇತೃತ್ವ.. ಶ್ರೀ ಮ.ನಿ.ಪ್ರ ಚನ್ನಬಸವ ಸ್ವಾಮಿಗಳು ವಿರಕ್ತಮಠ ಶಿಕಾರಿಪುರ. ಸಮ್ಮುಖ. ಶ್ರೀ ಮ. ನಿ .ಪ್ರ. ಮಹಾಂತ ಮಹಾಸ್ವಾಮಿಗಳು ತಿಪ್ಪಾಯಿ ಕೊಪ್ಪ . ಮಾತೆ ಶರಣಾಂಭಿಕೆಯವರು, ಬಸವಾಶ್ರಮ ಶಿಕಾರಿಪುರ, ಉದ್ಘಾಟನೆ. ಶ್ರೀಯುತ ಬಿ ವೈ ರಾಘವೇಂದ್ರ ಲೋಕಸಭಾ ಸದಸ್ಯರು ಶಿವಮೊಗ್ಗ . ಅಧ್ಯಕ್ಷತೆ . ಶ್ರೀಮತಿ ಕಮಲಾಬಾಯಿ ಕೃಷ್ಣ ಸಿಂಗ್ ಶಿಕಾರಿಪುರ , ಪ್ರಾಸ್ತಾವಿಕ ನುಡಿ, ಶ್ರೀ ಸುಭಾಷ್ ಚಂದ್ರ ಸ್ಥಾನಿಕ್ ರಾಷ್ಟ್ರ ಪ್ರಶಸ್ತಿ ವಿಜೇತ ನಿವೃತ್ತ ಮುಖ್ಯೋಪಾಧ್ಯಾಯರು ಶಿವಮೊಗ್ಗ , ಮುಖ್ಯ ಅತಿಥಿಗಳು. ಶ್ರೀ ಡಿ.ಜಿ. ಶಾಂತನಗೌಡ್ರು ಮಾನ್ಯ ಶಾಸಕರು ಹೊನ್ನಾಳಿ ಶ್ರೀ ನಗರದ ಮಹದೇವಪ್ಪನವರು ಅಧ್ಯಕ್ಷರು ಕರ್ನಾಟಕ ಪ್ರದೇಶ ಕೃಷಿ ಸಮಾಜ ಬೆಂಗಳೂರು, ಶ್ರೀ ಕೆ.ಎಸ್ ಗುರುಮೂರ್ತಿ ಅವರು ಮಾಜಿ ಅಧ್ಯಕ್ಷರು ಎ0. ಎ. ಡಿ. ಬಿ . ಶಿವಮೊಗ್ಗ , ಶ್ರೀ ಬಿ.ಡಿ. ಭೂಕಾಂತ್ , ಸಹಕಾರ ರತ್ನ ಪುರಸ್ಕೃತರು, ನಿರ್ದೇಶಕರು ರಾಜ್ಯ ಪತ್ತಿನ ಸಹಕಾರ ಮಹಾಮಂಡಳ ನಿ.,ಬೆಂಗಳೂರು, ಹಾಗೂ ಹಲವಾರು ಗಣ್ಯರು ಭಕ್ತಾದಿಗಳು ಉಪಸ್ಥಿತರಿರುವರು.
    1
    ಶಿಕಾರಿಪುರ .ನಗರದ ಮನೆ ಮನಗಳಲ್ಲಿ ನಡೆಯುವ 16ನೇ ವರ್ಷದ ಶ್ರಾವಣದಲ್ಲಿ  ಶ್ರಾವಣನುಭಾವ ಕಾರ್ಯಕ್ರಮ
 ಶ್ರೀ ಮ. ನಿ. ಪ್ರ. ಚನ್ನಬಸವ ಸ್ವಾಮಿಗಳು.
ಶಿಕಾರಿಪುರ ನಗರದ ಮನೆ ಮನಗಳಲ್ಲಿ ನಡೆಯುವ 16ನೇ ವರ್ಷದ ಶ್ರಾವಣದಲ್ಲಿ ಶ್ರಾವಣ ಭಾವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ನಡೆಯಲಿದ್ದು. 
ಸಾನಿಧ್ಯ.
ಶ್ರೀ ಮ. ನಿ. ಪ್ರ. ಗುರುಬಸವ ಮಹಾಸ್ವಾಮಿಗಳು ವಿರಕ್ತಮಠ ಪಾಂಡೋಮಟ್ಟಿ .
ನೇತೃತ್ವ..
ಶ್ರೀ ಮ.ನಿ.ಪ್ರ  ಚನ್ನಬಸವ ಸ್ವಾಮಿಗಳು ವಿರಕ್ತಮಠ ಶಿಕಾರಿಪುರ.
ಸಮ್ಮುಖ.
ಶ್ರೀ ಮ. ನಿ .ಪ್ರ. ಮಹಾಂತ ಮಹಾಸ್ವಾಮಿಗಳು ತಿಪ್ಪಾಯಿ ಕೊಪ್ಪ .
ಮಾತೆ ಶರಣಾಂಭಿಕೆಯವರು, ಬಸವಾಶ್ರಮ  ಶಿಕಾರಿಪುರ,
ಉದ್ಘಾಟನೆ. 
ಶ್ರೀಯುತ ಬಿ ವೈ ರಾಘವೇಂದ್ರ ಲೋಕಸಭಾ ಸದಸ್ಯರು ಶಿವಮೊಗ್ಗ .
ಅಧ್ಯಕ್ಷತೆ .
ಶ್ರೀಮತಿ ಕಮಲಾಬಾಯಿ ಕೃಷ್ಣ ಸಿಂಗ್ ಶಿಕಾರಿಪುರ ,
ಪ್ರಾಸ್ತಾವಿಕ ನುಡಿ, ಶ್ರೀ ಸುಭಾಷ್ ಚಂದ್ರ ಸ್ಥಾನಿಕ್ ರಾಷ್ಟ್ರ ಪ್ರಶಸ್ತಿ ವಿಜೇತ ನಿವೃತ್ತ ಮುಖ್ಯೋಪಾಧ್ಯಾಯರು ಶಿವಮೊಗ್ಗ ,
ಮುಖ್ಯ ಅತಿಥಿಗಳು.
ಶ್ರೀ ಡಿ.ಜಿ. ಶಾಂತನಗೌಡ್ರು 
ಮಾನ್ಯ ಶಾಸಕರು ಹೊನ್ನಾಳಿ 
ಶ್ರೀ ನಗರದ ಮಹದೇವಪ್ಪನವರು 
ಅಧ್ಯಕ್ಷರು ಕರ್ನಾಟಕ ಪ್ರದೇಶ ಕೃಷಿ ಸಮಾಜ ಬೆಂಗಳೂರು,
ಶ್ರೀ ಕೆ.ಎಸ್ ಗುರುಮೂರ್ತಿ ಅವರು 
ಮಾಜಿ ಅಧ್ಯಕ್ಷರು ಎ0. ಎ. ಡಿ. ಬಿ . ಶಿವಮೊಗ್ಗ ,
ಶ್ರೀ ಬಿ.ಡಿ. ಭೂಕಾಂತ್ ,
ಸಹಕಾರ ರತ್ನ ಪುರಸ್ಕೃತರು,
ನಿರ್ದೇಶಕರು ರಾಜ್ಯ ಪತ್ತಿನ ಸಹಕಾರ ಮಹಾಮಂಡಳ ನಿ.,ಬೆಂಗಳೂರು, ಹಾಗೂ ಹಲವಾರು ಗಣ್ಯರು ಭಕ್ತಾದಿಗಳು ಉಪಸ್ಥಿತರಿರುವರು.
    user_Press Narashimha swamy SN
    Press Narashimha swamy SN
    Cultural landmark ಶಿಕಾರಿಪುರ, ಶಿವಮೊಗ್ಗ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.