ನಿಡಗುಂದಿಯಲ್ಲಿ ಮಹಿಳಾ ದಿನಾಚರಣೆ | ಮಹಿಳೆಯರ ಶಕ್ತಿ ಕೊಂಡಾಡಿದ ತಹಸೀಲ್ದಾರ್.. “ಮಹಿಳೆ ಪ್ರತಿಯೊಬ್ಬರ ಜೀವನದಲ್ಲಿ ಪ್ರಮುಖ ಸ್ಥಾನ ಹೊಂದಿದ್ದಾಳೆ… ಮಹಿಳೆಯರ ಅಭಿವೃದ್ಧಿಯೇ ಸಮಾಜದ ಅಭಿವೃದ್ಧಿ ಎಂದು ತಹಸೀಲ್ದಾರ್ ಎ.ಡಿ. ಅಮರಾವದಗಿ ಹೇಳಿದ್ದಾರೆ. ನಿಡಗುಂದಿಯಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಹಿಳೆಯರ ಶಕ್ತಿಯನ್ನು ಕೊಂಡಾಡಲಾಯಿತು. ಈ ಕಾರ್ಯಕ್ರಮದಲ್ಲಿ ಇನ್ನೇನು ಮಾತುಗಳು ಕೇಳಿಬಂದವು? ಸಂಪೂರ್ಣ ಮಾಹಿತಿ ಈ ವರದಿಯಲ್ಲಿ…” ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪಟ್ಟಣದ ತಾಪಂ ಸಭಾಭವನದಲ್ಲಿ ನಡೆದ ಈ ಕಾರ್ಯಕ್ರಮವನ್ನು ತಹಸೀಲ್ದಾರ್ ಎ.ಡಿ. ಅಮರಾವದಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಪ್ರಾಕೃತಿಕವಾಗಿ ದೊರೆತಿರುವ ದಿವ್ಯ ಶಕ್ತಿಯಿಂದ ಮಹಿಳೆ ಸಮಾಜದಲ್ಲಿ ಪ್ರಮುಖ ಸ್ಥಾನ ಪಡೆದಿದ್ದಾಳೆ. ಮಹಿಳೆಯರು ತಮ್ಮ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ಕೂಡ ಸಮರ್ಪಕವಾಗಿ ಪಾಲಿಸಬೇಕು” ಎಂದು ಹೇಳಿದರು. ಇನ್ನು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಮಹಿಳೆಯರ ಬದುಕಿಗೆ ಮಹತ್ತರ ಬದಲಾವಣೆ ತಂದಿವೆ ಎಂದು ಅವರು ಅಭಿಪ್ರಾಯಪಟ್ಟರು. ಮಹಿಳೆಯರು ಶಿಕ್ಷಣ, ಉದ್ಯೋಗ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮುನ್ನಡೆಯುತ್ತಿದ್ದು, ತಮ್ಮ ಕುಟುಂಬದ ಜೊತೆಗೆ ಸಮಾಜದ ಅಭಿವೃದ್ಧಿಗೂ ಮಹತ್ವದ ಕೊಡುಗೆ ನೀಡುತ್ತಿದ್ದಾರೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರಶೇಖರ ಹಳೇಮನಿ, ಸರಕಾರ ಬಡಜನರಿಗೆ ನೆರವಾಗಲು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಪ್ರತಿಯೊಬ್ಬರೂ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ತಾಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಶೇ. 99.48, ಗೃಹಜ್ಯೋತಿ ಯೋಜನೆಯಡಿ ಶೇ. 96.34 ಸಾಧನೆ ಆಗಿದೆ. ಇನ್ನೂ ಯುವನಿಧಿ ಯೋಜನೆಯಡಿ 466 ಜನ ಫಲಾನುಭವಿಗಳು ಇದ್ದಾರೆ ಎಂದು ಮಾಹಿತಿ ನೀಡಿದರು. ಶಕ್ತಿ ಯೋಜನೆ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳಿಂದ ಬಡವರು ಮತ್ತು ಮಹಿಳೆಯರಿಗೆ ಹೆಚ್ಚಿನ ಅನುಕೂಲವಾಗುತ್ತಿದೆ ಎಂದು ಅವರು ಹೇಳಿದರು. ಈ ಕಾರ್ಯಕ್ರಮದಲ್ಲಿ ಎಸಿಡಿಪಿಒ ದುಂಡಮ್ಮ ಕಾಗಲ, ಪಪಂ ಅಧ್ಯಕ್ಷೆ ಜಂಬಕ್ಕ ವಿಭೂತಿ, ತಾಪಂ ಇಒ ವೆಂಕಟೇಶ ವಂದಾಲ, ತಾಪಂ ಸಹಾಯಕ ನಿರ್ದೇಶಕ ಶರಣಬಸವ ಬಿರಾದಾರ, ಆಹಾರ ನಿರೀಕ್ಷಕ ಎಂ.ಎಸ್. ಗುತ್ತಿರಗಿ, ಸಹಾಯಕ ಉದ್ಯೋಗಾಧಿಕಾರಿ ಎಸ್.ಎಸ್. ಆಲಮೇಲ, ಅಂಗನವಾಡಿ ಮೇಲ್ವಿಚಾರಕಿ ಬೋರಮ್ಮ ಬಿರಾದಾರ, ಸಾರಿಗೆ ನಿಯಂತ್ರಣಾಧಿಕಾರಿ ಎಸ್.ಎಸ್. ಕಟಬರ ಹಾಗೂ ಗ್ಯಾರಂಟಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಇದು ನಿಡಗುಂದಿಯಿಂದ ಭೀಮ ಹೆಜ್ಜೆ ನ್ಯೂಸ್ ವರದಿ.

- Post by Sharanugouda Patil1
- ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಾರೊಗೇರಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರೀ ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು ಬೆಳಗ್ಗೆ ಗಂಗೆ ಹೋಗುವುದರಿಂದ ಪ್ರಾರಂಭವಾಯಿತು ಮಧ್ಯಾಹ್ನ ಮುಳ್ಳು ಪವಾಡ ಸಾಯಂಕಾಲ ಅಗ್ನಿ ಮಹೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು1
- ಶಾಸಕರ ದೆಹಲಿ ಭೇಟಿ ಅವರ ಹಕ್ಕು - ಸಚಿವ ಎಚ್.ಕೆ. ಪಾಟೀಲ್ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಶಾಸಕರ ದೆಹಲಿ ಭೇಟಿ ಈಗ ಭಾರಿ ಚರ್ಚೆಗೆ ಪ್ರತಿಕ್ರಿಯಿಸಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರು, ಶಾಸಕರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. "ದೆಹಲಿಗೆ ಹೋಗುವುದು ಅವರ ಹಕ್ಕು" ಎಂದು ಹೇಳುವ ಮೂಲಕ ಪ್ರತಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದ್ದಾರೆ. ದೆಹಲಿಗೆ ಹೋಗುವುದು ಮತ್ತು ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದು ಪ್ರಜಾಪ್ರಭುತ್ವದಲ್ಲಿ ಶಾಸಕರಿಗಿರುವ ಮುಕ್ತ ಅವಕಾಶ. ಅಸಮಾಧಾನದ ಪ್ರಶ್ನೆಯಿಲ್ಲ: ಈ ಭೇಟಿಯನ್ನು ಕೇವಲ ಅಸಮಾಧಾನ ಅಥವಾ ಬಂಡಾಯ ಎಂದು ಬಿಂಬಿಸುವುದು ತಪ್ಪು. ಕ್ಷೇತ್ರದ ಅಭಿವೃದ್ಧಿ ಅಥವಾ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳಿರುತ್ತಾರೆ. ಗದಗ ಜಿಲ್ಲಾ ಪ್ರವಾಸದಲ್ಲಿರುವ ಸಚಿವ ಎಚ್.ಕೆ. ಪಾಟೀಲ್ ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯದ ಹಲವು ಕಾಂಗ್ರೆಸ್ ಶಾಸಕರು ತಂಡೋಪತಂಡವಾಗಿ ದೆಹಲಿಗೆ ತೆರಳುತ್ತಿರುವ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು ಸ್ಪಷ್ಟನೆ ನೀಡಿದರು.1
- Post by ABU NEWS CHANNEL ಸಂಪಾದಕರು1
- ಕುಂದಗೋಳ: ಗ್ರಾಮೀಣ ಭಾಗದ ಜನರಿಗೆ ವಿಶೇಷವಾಗಿ ಮಳೆಗಾಲದಲ್ಲಿ ಎದುರಾಗುವ ಸಂಚಾರದ ಸಂಕಷ್ಟಗಳನ್ನು ತಪ್ಪಿಸಲು, ಗ್ರಾಮದಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ನಿರ್ಮಾಣಕ್ಕೆ ನನ್ನ ಅಧಿಕಾರ ಅವಧಿಯಲ್ಲಿ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಎಂ.ಆರ್. ಪಾಟೀಲ್ ಅವರು ಪ್ರತಿಪಾದಿಸಿದರು. ಮಂಗಳವಾರದಂದು ತಾಲ್ಲೂಕಿನ ಕಳಸ-ಸಂಕ್ಲೀಪೂರ ರಸ್ತೆಯ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಭಾಗದ ರಸ್ತೆ ಅಭಿವೃದ್ಧಿಗಾಗಿ ಗ್ರಾಮಸ್ಥರು ಮನವಿ ಸಲ್ಲಿಸಿದಾಗ ಉತ್ತಮ ರಸ್ತೆ ನಿರ್ಮಿಸಿಕೊಡುವ ಭರವಸೆ ನೀಡಿದ್ದೆ. ಅದರಂತೆ ಇಂದು ರಾಜ್ಯ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಲೆಕ್ಕ ಶೀರ್ಷಿಕೆ 5054ರ ಅಡಿಯಲ್ಲಿ ಅಂದಾಜು 1 ಕೋಟಿ 50 ಲಕ್ಷ ರೂಪಾಯಿಗಳ ವೆಚ್ಚದ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು. ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ರಸ್ತೆ ಬೇಡಿಕೆ ಈಗ ಈಡೇರುತ್ತಿರುವುದು ಗ್ರಾಮಸ್ಥರಲ್ಲಿ ಸಂತಸ ತಂದಿದೆ. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಅಲಿ ಚಾಂದಖಾನವರ, ಮಲ್ಲಿಕಾರ್ಜುನ ಪ್ಯಾಟಿ, ಯಲ್ಲರೆಡ್ಡಿ ಯರಗುಪ್ಪಿ, ಅಖಂಡಪ್ಪ ಕಳಸೂರ, ಯಲ್ಲಪ್ಪ ಹೊಸಮನಿ, ಬಸವರಾಜ ಅಂಗಡಿ, ಅಶೋಕ ದೊಡ್ಡಮಲ್ಲಪ್ಪನವರ, ಸತೀಶ್ ಪಾಟೀಲ್ ಸೇರಿದಂತೆ ಪ್ರಮುಖರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು1
- ಪೊಲೀಸ್ ಇಲಾಖೆಯ ಭ್ರಷ್ಟ, ದುರಹಂಕಾರಿ, ಶತಮೂರ್ಖ ಪೊಲೀಸರೇ... ನೀವು ನಮ್ಮನ್ನು ಒಂದು ಹೆಜ್ಜೆ ಹಿಂದಕ್ಕೆ ತಳ್ಳಿದರೆ ನಾವು ಎರಡು ಹೆಜ್ಜೆ ಮುಂದಕ್ಕೆ ಬರುತ್ತೇವೆ. ರಾಜ್ಯದ ಪ್ರಾಮಾಣಿಕ ಪೊಲೀಸರಿಗೆ ಈ ವಿಚಾರ ಮತ್ತು KRS ಪಕ್ಷದ ನಿರ್ಭಯ, ಪ್ರಾಮಾಣಿಕ, ಜನಪರ, ಅಹಿಂಸಾತ್ಮಕ ಹೋರಾಟದ ಬಗ್ಗೆ ಗೊತ್ತಿದೆ. ಹಾಗಾಗಿಯೇ ಅವರು ನಮ್ಮನ್ನು ಗೌರವದಿಂದ ಕಾಣುತ್ತಾರೆ, ಊಟತಿಂಡಿ ಕೊಡಿಸುತ್ತಾರೆ, ಪಕ್ಷಕ್ಕೆ ಪರೋಕ್ಷವಾಗಿ ದೇಣಿಗೆಯನ್ನೂ ನೀಡುತ್ತಾರೆ. ಆದರೆ ಭ್ರಷ್ಟ ಪೊಲೀಸರಿಗೆ ಮಾತ್ರ ಕೆಆರ್‌ಎಸ್ ಪಕ್ಷವನ್ನು ಕಂಡರೆ ಮೈಯೆಲ್ಲಾ ಉರಿ, ತುರಿಕೆ. ನಿಮ್ಮ ಈ ಅಪಾಯಕಾರಿ ರೋಗಕ್ಕೆ ಆದಷ್ಟು ಬೇಗ ಚಿಕಿತ್ಸೆ ಪಡೆದುಕೊಳ್ಳಿ. ಇಲ್ಲವಾದಲ್ಲಿ ನೀವೇ ಸ್ವತಃ ತುರಿಸಿಕೊಂಡು ತರಿಸಿಕೊಂಡ ರೋಗಕ್ಕೆ ನೀವೇ ಬಲಿಯಾಗುವಿರಿ. ಎಚ್ಚರ. ಏನೇ ಆಗಲಿ, ಒಳ್ಳೆಯದನ್ನೇ ಮಾಡಿ; ಮಾಡುತ್ತಲೇ ಇರಿ. 10-04-2026.1
- ಕರ್ನಾಟಕದ ಸಾರ್ವನಿಕರಿಗೆ ಒಂದು ಪ್ರಕಟಣಿ ಯಾರೆ ಬಂದು ಕೇಳಿದರೆ ಏನೆ ಹೇಳಿದರು ದೂರ ನಿಂತ್ತು ಮಾತನಾಡಿಸಿ ಕರ್ನಾಟಕದಲ್ಲಿ ಹೊಸ ಅಡ್ವಡಿಜ್ ಮೆಂಟ ತರುತಾಇರತಾರೆ ಹುಶಾರ ಆಗಿ ಇರಿ.1
- ಬಿಸಿಲಿನ ತೀವ್ರತೆ ಹೆಚ್ಚಿರುವ ಕಾರಣ, ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ಅವಧಿಯನ್ನು ಹೊಸ ಸಮಯ: ಇನ್ಮುಂದೆ ಬೆಳಿಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ನಿಗದಿ ಮಾಡಿ ಯಂದು ಕೇಳಿಕೊಳ್ಳುತ್ತಿದ್ದಾರೆ ಮಧ್ಯಾಹ್ನದ ಸುಡುವ ಬಿಸಿಲಿನಿಂದ ನೌಕರರನ್ನು ಮತ್ತು ದೂರದ ಊರುಗಳಿಂದ ಬರುವ ಜನರನ್ನು ರಕ್ಷಿಸುವುದು ಈ ಬದಲಾವಣೆಯ ಹಿಂದಿನ ಮುಖ್ಯ ಉದ್ದೇಶವಾಗಿದೆ. "ಜನಸಾಮಾನ್ಯರ ಆರೋಗ್ಯ ಮತ್ತು ಕೆಲಸದ ದಕ್ಷತೆಯನ್ನು ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಸಿಲು ಕಡಿಮೆಯಾಗುವವರೆಗೆ ಈ ಹೊಸ ವೇಳಾಪಟ್ಟಿ ಜಾರಿಗೆ ತರಬಹುದು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸಬೇಕು ಮತ್ತು ಅನಗತ್ಯವಾಗಿ ಮಧ್ಯಾಹ್ನ ಹೊರಬರಬಾರದು ಎಂದು ಆರೋಗ್ಯ ಇಲಾಖೆ ಕೂಡ ಸೂಚಿಸಿದೆ. ಈ ಸಮಯದ ಬದಲಾವಣೆಯನ್ನ ಮಾಡುವಂತೆ ಸರ್ಕಾರಕ್ಕೆ ಬಸವರಾಜ ಬಳ್ಳಾರಿ ಗದಗ ಜಿಲ್ಲಾ ನೌಕರರ ಸಂಘದ ಅಧ್ಯಕ್ಷೆರು ಸರ್ಕಾರ ಕ್ಕೆ ಮನವಿ ಮಾಡಿದ್ದಾರೆ ಸರ್ಕಾರ ಸಮಯ ಬದಲಾವಣೆ ಮಾಡುತ್ತಾ ಕಾದು ನೋಡಬೇಕಿದೆ ಮತ್ತು ಸರ್ಕಾರಿ ಕೆಲಸಗಳಿಗೆ ಬರುವ ಜನರಿಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.1